Tag: Indian Postal Service

  • Budget 2025: ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳ ಕಾರ್ಯನಿರ್ವಹಣೆ

    Budget 2025: ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳ ಕಾರ್ಯನಿರ್ವಹಣೆ

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿದ ಬಜೆಟ್‌ನಲ್ಲಿ, ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳು (Indian Postal Service) ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

    ಗ್ರಾಮೀಣಾಭಿವೃದ್ಧಿಗಾಗಿ ಭಾರತೀಯ ಅಂಚೆ ಸೇವೆಗಳನ್ನು ವಿಸ್ತರಿಸಲಾಗುವುದು. ಇದರಿಂದ ಸೂಕ್ಷ್ಮ ಉದ್ಯಮಗಳಿಗೆ ಡಿಬಿಟಿ, ಕ್ರೆಡಿಟ್ ಸೇವೆಗಳು, ವಿಮೆ ಸೇರಿದಂತೆ ಇತರ ಸೇವೆಗಳು ಲಭ್ಯವಾಗುತ್ತವೆ. ವಿಶ್ವಕರ್ಮರು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಭಾರತೀಯ ಅಂಚೆ ಸೇವೆ ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಇದು ಜನಸಾಮಾನ್ಯರ ಬಜೆಟ್‌.. ಉಳಿತಾಯ, ಹೂಡಿಕೆಗೆ ಉತ್ತೇಜನ: ಮೋದಿ ಬಣ್ಣನೆ

    ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.01 ರಂದು ಸಂಸತ್ತಿನಲ್ಲಿ 2025-26ರ ಬಜೆಟ್ ಅನ್ನು ಮಂಡಿಸುತ್ತಾ, 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳನ್ನು ಹೊಂದಿರುವ ಭಾರತೀಯ ಅಂಚೆಯನ್ನು ಇಂಡಿಯಾ ಪೋಸ್ಟ್ ಪಾವತಿ ಬ್ಯಾಂಕ್ ಮತ್ತು 2.4 ಲಕ್ಷ ಅಂಚೆ ಸೇವಕರ ವಿಶಾಲ ಪೂರಕ ಸಂಪರ್ಕ ಜಾಲವನ್ನು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲು ಮರುಸ್ಥಾಪಿಸಲಾಗುವುದು ಎಂದರು.

    ಭಾರತ ಅಂಚೆಯ ನೂತನ ವಿಸ್ತೃತ ಸೇವೆಗಳ ವ್ಯಾಪ್ತಿಯು ಈ ಕೆಳಗಿನವುಗಳನ್ನು ಒಳಗೊಂಡಿರುತ್ತದೆ ಎಂದು ಬಜೆಟ್‌ನಲ್ಲಿ ಪ್ರಸ್ತಾಪಿಸಿದರು.
    1) ಗ್ರಾಮೀಣ ಸಮುದಾಯ ಕೇಂದ್ರ ಸಹ-ಸ್ಥಳ
    2) ಸಾಂಸ್ಥಿಕ ಖಾತೆ ಸೇವೆಗಳು
    3) ಡಿ.ಬಿ.ಟಿ., ನಗದು ಪಾವತಿ ಮತ್ತು ಇ.ಎಂ.ಐ ಸ್ವೀಕಾರ
    4) ಸೂಕ್ಷ್ಮ ಉದ್ಯಮಗಳಿಗೆ ಕ್ರೆಡಿಟ್ ಸೇವೆಗಳು
    5) ವಿಮೆ
    6) ನೆರವಿನ ಡಿಜಿಟಲ್ ಸೇವೆಗಳು.

    ಭಾರತ ಅಂಚೆಯನ್ನು ದೊಡ್ಡ ಸಾರ್ವಜನಿಕ ಸಾಗಣೆ (ಲಾಜಿಸ್ಟಿಕ್ಸ್) ಸಂಸ್ಥೆಯಾಗಿ ಪರಿವರ್ತಿಸಲಾಗುವುದು. ಇದು ವಿಶ್ವಕರ್ಮರು, ನವೋದ್ಯಮಿಗಳು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳು ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಭಾರತ ಅಂಚೆ ಪಾವತಿ ಬ್ಯಾಂಕ್‌ನ ಸೇವೆಗಳನ್ನು ಇನ್ನೂ ಉತ್ತಮಗೊಳಿಸಲಾಗುವುದು ಹಾಗೂ ಆಳಗೊಳಿಸಲಾಗುವುದು ಮತ್ತು ವಿಸ್ತರಿಸಲಾಗುವುದು ಎಂದರು.ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?

  • ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ, ಭಾರತೀಯ ಅಂಚೆ ಸೇವೆಯು ರಾಷ್ಟ್ರಧ್ವಜವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುತ್ತಿದೆ.

    ತ್ರಿವರ್ಣ ಧ್ವಜವನ್ನು 25 ರೂ. ದರದಲ್ಲಿ ಇಂಡಿಯಾ ಪೋಸ್ಟ್‌ನ ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಖರೀದಿಸಬಹುದು. ಇದರಲ್ಲಿ ಯಾವುದೇ ಜಿಎಸ್‍ಟಿ ಅನ್ವಯಿಸುವುದಿಲ್ಲ. ಧ್ವಜವನ್ನು ಖರೀದಿಸಲು ಆಸಕ್ತಿಯುಳ್ಳವರು ePostoffice ಪೋರ್ಟಲ್‍ನಿಂದ ಆರ್ಡರ್ ಮಾಡಬಹುದು. ಪರ್ಯಾಯವಾಗಿ, ರಾಷ್ಟ್ರಧ್ವಜವನ್ನು ಖರೀದಿಸಲು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. ಇದನ್ನೂ ಓದಿ: ನಿರಂತರ ಜಿಟಿ ಜಿಟಿ ಮಳೆ – ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು 

    ಇಂಡಿಯಾ ಪೋಸ್ಟ್ ಈ ಕುರಿತು ಟ್ವಿಟ್ಟರ್‌ನಲ್ಲಿ, ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತಿರಂಗಾ ಮಾರಾಟ ಮತ್ತು ವಿತರಣೆಯನ್ನು ಸುಲಭಗೊಳಿಸಲಾಗುವುದು. 2022ರ ಸ್ವಾತಂತ್ರ್ಯ ದಿನಾಚರಣೆಯ ಮೊದಲ ರಜಾದಿನಗಳಲ್ಲಿ ಎಲ್ಲ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತವೆ ಎಂದು ಬರೆದು ಪೋಸ್ಟ್ ಮಾಡಿದೆ.

    ಸಾರ್ವಜನಿಕ ರಜಾದಿನಗಳಲ್ಲಿ ರಾಷ್ಟ್ರಧ್ವಜಗಳನ್ನು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ಮಾರಾಟ ಮಾಡಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವೆಬ್‍ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಹೆಂಗಳೆಯರ ಮನಗೆದ್ದ ʼಗೋಬಿ ಮಂಚೂರಿʼ ಮಾಡುವ ಸಿಂಪಲ್ ವಿಧಾನ

    ಕೇಂದ್ರ ಸರ್ಕಾರದ ಬಜೆಟ್ ಡಾಕ್ಯುಮೆಂಟ್ ಪ್ರಕಾರ, ಭಾರತವು 1,55,000 ಅಂಚೆ ಕಛೇರಿಗಳೊಂದಿಗೆ ವಿಶ್ವದ ಅತಿದೊಡ್ಡ ಅಂಚೆ ಜಾಲವನ್ನು ಹೊಂದಿದೆ. 89 ಪ್ರತಿಶತ ಗ್ರಾಮೀಣ ಪ್ರದೇಶಗಳಲ್ಲಿ ಅಂಚೆ ಕಚೇರಿಗಳು ಸ್ಥಾಪನೆಯಾಗಿವೆ.

    Live Tv
    [brid partner=56869869 player=32851 video=960834 autoplay=true]