ಚಂಡೀಗಢ: ರೈಲಿನಿಂದ ಇಳಿಯುವ ಮುನ್ನ ಲೋಕೋಪೈಲೆಟ್ ಹ್ಯಾಂಡ್ ಬ್ರೇಕ್ ಹಾಕಲು ಮರೆತ ಪರಿಣಾಮ ಗೂಡ್ಸ್ ರೈಲೊಂದು ಸುಮಾರು 70 ಕಿಲೋಮೀಟರ್‌ಗಳವರೆಗೂ ವೇಗವಾಗಿ ಚಲಿಸಿದ ಘಟನೆ ಪಂಜಾಬ್‍ನಲ್ಲಿ (Punjab) ನಡೆದಿದೆ.
ಕಲ್ಲುಗಳನ್ನು ತುಂಬಿದ್ದ ಗೂಡ್ಸ್ ರೈಲನ್ನು ಪಠಾಣ್‍ಕೋಟ್ (Pathankot) ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಚಾಲಕ ರೈಲಿನಿಂದ ಇಳಿದಿದ್ದರು. ಈ ವೇಳೆ ರೈಲು ಇದ್ದಕ್ಕಿದ್ದಂತೆ ಚಲಿಸಲು ಆರಂಭಿಸಿದೆ. ಸ್ವಲ್ಪ ಸಮಯದ ಬಳಿಕ ರೈಲು ಸುಮಾರು 100 ಕಿ.ಮೀ ವೇಗವನ್ನು ಪಡೆದುಕೊಂಡು, ಐದು ರೈಲ್ವೇ ನಿಲ್ದಾಣಗಳನ್ನು ದಾಟಿ 70 ಕಿಲೋಮೀಟರ್ ವರೆಗೂ ಸಂಚರಿಸಿದೆ. ಇದನ್ನೂ ಓದಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
ಬಳಿಕ ರೈಲ್ವೇ ಅಧಿಕಾರಿಗಳು ರೈಲನ್ನು ತಡೆಯಲು ಸಿದ್ಧತೆ ಮಾಡಿಕೊಂಡು ರೈಲ್ವೇ ಹಳಿಗಳ ಮೇಲೆ ಮರದ ದಿಮ್ಮಿಗಳನ್ನು ಹಾಕಿದ ನಂತರ ರೈಲು ನಿಂತಿದೆ. ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ನಡೆಯದಂತೆ ಎಚ್ಚರವಹಿಸುತ್ತೇವೆ. ಇಂದಿನ ಘಟನೆಯಲ್ಲಿ ಸುರಕ್ಷತಾ ಲೋಪಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಈ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, ಎಲ್ಲಾ ವಲಯಗಳಲ್ಲೂ ಪ್ರಗತಿ ಸಾಧಿಸುತ್ತಿದೆ. ಅದರಲ್ಲೂ ರೈಲ್ವೆ ವಿಭಾಗದಲ್ಲಿ ಹೈಸ್ಪೀಡ್ ರೈಲುಗಳಿಗೆ ಪ್ರಾಮುಖ್ಯತೆ ನೀಡಿದೆ. ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು. ಬಜೆಟ್‌ನಲ್ಲಿ ಸಾರಿಗೆಗೆ ಮಹತ್ವದ ಘೋಷಣೆಗಳನ್ನು ಹೊರಡಿಸುತ್ತಿದ್ದ ವೇಳೆ ಸರಿಸುಮಾರು 40,000 ರೈಲು ಬೋಗಿಗಳನ್ನು (Railways Coaches) ವಂದೇ ಭಾರತ್ (Vande Bharat Express) ಮೇಲ್ದರ್ಜೆಗೇರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದಲ್ಲದೇ ಮೆಟ್ರೋ ರೈಲನ್ನು ಇತರ ನಗರಗಳಿಗೂ ವಿಸ್ತರಿಸಲಿದೆ ಎಂದು ಘೋಷಿಸಿದ್ದರು.
ಈಗಾಗಲೇ ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಸಂಚಾರ ಮಾಡುತ್ತಿದೆ. ವಂದೇ ಭಾರತ್‌ಗೆ ಹೆಚ್ಚಿನ ಮಹತ್ವ ಸಿಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ವಿಸ್ತರಣೆಗೆ ಕ್ರಮ ಕೈಗೊಂಡಿದೆ. ಇಷ್ಟಕ್ಕೂ ಸಾಮಾನ್ಯ ಬೋಗಿಗಳನ್ನು ವಂದೇ ಭಾರತ್ ದರ್ಜೆಗೇರಿಸಲು ಇರುವ ಮಾನದಂಡಗಳು ಏನು? ಏನೆಲ್ಲಾ ವಿಶೇಷತೆಗಳು ಇರಲಿವೆ ಎಂಬುದನ್ನಿಲ್ಲಿ ಕಾಣಬಹುದು.
ಕರ್ನಾಟಕದ (Karnataka) ಹಾಗೂ ದಕ್ಷಿಣ ಭಾರತದ ಭಾಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಅವರು 2022ರ ನವೆಂಬರ್ 11 ರಂದು ಚಾಲನೆ ನೀಡಿದ್ದರು. ಮೊದಲ ರೈಲು ಮೈಸೂರಿನಿಂದ ಚೆನ್ನೈಗೆ ಮತ್ತು ಚೆನ್ನೈನಿಂದ ಮೈಸೂರಿಗೆ ಸಂಚಾರ ಅರಂಭಿಸಿತು. ಇದೀಗ ಮೈಸೂರು-ಚೆನ್ನೈ ಮಾತ್ರವಲ್ಲದೇ ಬೆಂಗಳೂರು-ಧಾರವಾಡ, ಯಶವಂತಪುರ-ಕಾಚಿಗುಡ, ಬೆಂಗಳೂರು-ಕೊಯಮತ್ತೂರು ಮತ್ತು ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ನಡೆಸುತ್ತಿವೆ. ಅಷ್ಟೇ ಅಲ್ಲದೇ ‘ತಿರುವನಂತಪುರಂ-ಕಾಸರಗೋಡು’ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಮಂಗಳೂರಿಗೂ ವಿಸ್ತರಣೆ ಮಾಡಿದೆ. ಪ್ರಸಕ್ತ ವರ್ಷದಿಂದಲೇ ಸ್ಲೀಪರ್ ಕೋಚ್ ರೈಲು ವ್ಯವಸ್ಥೆಯನ್ನು ಮಾರ್ಚ್ ತಿಂಗಳ ವೇಳೆಗೆ ಆರಂಭಿಸಲು ಇಲಾಖೆ ಸಕಲ ತಯಾರಿ ಮಾಡಿಕೊಂಡಿದೆ.
ಪ್ರಸ್ತುತ ವಂದೇ ಭಾರತ್ ಒಳಗೊಂಡಿರುವ ಸೌಲಭ್ಯಗಳೇನು?
ವಂದೇ ಭಾರತ್ ಎಕ್ಸ್‌ಪ್ರೆಸ್, ಭಾರತದ ಮೊದಲ ಅರೆ ವೇಗದ ರೈಲು. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಪ್ರಯಾಣದ ಸಮಯವನ್ನು ಶೇ.25ರಿಂದ 45 ರಷ್ಟು ಕಡಿಮೆ ಮಾಡುತ್ತದೆ. ರೈಲು 0-100 ಕಿಮೀ ವೇಗವನ್ನು 52 ಸೆಕೆಂಡುಗಳಲ್ಲಿ ತಲುಪುತ್ತದೆ. ಎಲ್ಲಾ ವಂದೇ ಭಾರತ್ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿವೆ. ಜಿಪಿಎಸ್ ಆಧಾರಿತ ಆಡಿಯೋ-ದೃಶ್ಯ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್-ಬೋರ್ಡ್ ಹಾಟ್‌ಸ್ಪಾಟ್ ವೈಫೈ ಮತ್ತು ಅತ್ಯಂತ ಆರಾಮದಾಯಕ ಹಾಸನ ಈ ರೈಲಿನ ವಿಶೇಷತೆ. ಕಾರ್ಯನಿರ್ವಾಹಕ ವರ್ಗವು ತಿರುಗುವ ಕುರ್ಚಿಗಳನ್ನು ಸಹ ಹೊಂದಿದ್ದಾರೆ.
ಟಚ್ ಫ್ರೀ ಬಾತ್‌ರೂಮ್ ಫಿಟ್ಟಿಂಗ್:
ನಮ್ಮ ಭಾರತದ ಬಹಳಷ್ಟು ರೈಲುಗಳು ನೈರ್ಮಲೀಕರಣದ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಮಸ್ಯೆಯಿಂದ ಹೊರಬರಲು ಈ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಜೈವಿಕ ನಿರ್ವಾತ ಶೌಚಾಲಯ ಅಳವಡಿಸಿಕೊಳ್ಳಲಾಗಿದೆ. ಮುಖ್ಯವಾಗಿ ಶುಚಿತ್ವವನ್ನು ಗಮನಕ್ಕೆ ತೆಗೆದುಕೊಳ್ಳುವ ಮೂಲಕ ಟಚ್ ಫ್ರೀ ಬಾತ್‌ರೂಮ್ ಶೌಚಾಲಯ ಸೌಲಭ್ಯವನ್ನು ರೈಲು ಹೊಂದಿದೆ. ಅಲ್ಲದೇ, ಪ್ರಸ್ತುತ ಇರುವ ರೈಲುಗಳಲ್ಲಿ ವೈಫೈ ಸೌಲಭ್ಯವಿದೆ. ಇದರೊಂದಿಗೆ ಪ್ರಯಾಣಿಕರು ತಮ್ಮ ಮೊಬೈಲ್ ಅಥವಾ ಟ್ಯಾಬ್‌ನಲ್ಲಿಯೂ ವೈ ಫೈ ಪಡೆಯಬಹುದು. ರೈಲಿನಲ್ಲಿ ಕುಳಿತು ಸಾಕಷ್ಟು ಮನರಂಜನೆಯನ್ನು ಆನಂದಿಸಬಹುದು.
ನವೀಕರಿಸಿದ ವಂದೇ ಭಾರತ್ ಬೋಗಿಗಳು ಹೇಗಿರುತ್ತವೆ?
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿರುವಂತೆ, 40 ಸಾವಿರ ಬೋಗಿಗಳು ವಂದೇ ಭಾರತ್ ಹಾಗೂ ಅಮೃತ್ ಭಾರತ್ ಕೋಚ್‌ಗಳ ಸೌಲಭ್ಯಗಳನ್ನು ಆಧರಿಸಿರುತ್ತವೆ. 40 ಸಾವಿರ ಬೋಗಿಗಳಲ್ಲಿಯೂ ಮೊಬೈಲ್, ಲ್ಯಾಪ್‌ಟಾಪ್ ಗಳಿಗೆ ಪ್ರತ್ಯೇಕ ಚಾರ್ಜಿಂಗ್ ಪಾಯಿಂಟ್‌ಗಳನ್ನು ಅಳವಡಿಸಲಾಗಿರುತ್ತದೆ. ಪ್ರತ್ಯೇಕ ಜಿಪಿಎಸ್, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿರುತ್ತದೆ. ಬೋಗಿಗಳು ನಾನ್ ಎಸಿ ಕೋಚ್‌ಗಳಾಗಿದ್ದರೂ ಗುಣಮಟ್ಟದ ಸೌಲಭ್ಯ ಒಳಗೊಂಡಿರುತ್ತದೆ. ಈಗ ವಂದೇ ಭಾರತ್‌ಗೆ ಇರುವಂತೆ ಜೈವಿಕ ನಿರ್ವಾತ ಶೌಚಾಲಯ ಅಳವಡಿಸಿಕೊಳ್ಳಲಾಗಿದೆ. ಈಗ ಒಂದೇ ಭಾರತ್‌ಗೆ ಇರುವಂತೆ ನೈರ್ಮಲೀಕರಣ ಸಮಸ್ಯೆ ಉಂಟುಮಾಡದ ಶೌಚಾಲಯ ವ್ಯವಸ್ಥೆ ಮಾಡಲಾಗಿರುತ್ತದೆ. ಆಸನಗಳ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ.
ಮೈಸೂರು: ರೈಲ್ವೇ ಹಳಿ ಮೇಲೆ ಮರದ ದಿಮ್ಮಿ ಹಾಗೂ ಕಬ್ಬಿಣದ ರಾಡ್‍ಗಳನ್ನು ಇಟ್ಟು ಜನರ ಜೀವದ ಜೊತೆ ಕಿಡಿಗೇಡಿಗಳು ಆಟವಾಡಿದ ಘಟನೆ ಚಾಮರಾಜನಗರ – ಮೈಸೂರು ಮಾರ್ಗದಲ್ಲಿ ನಡೆದಿದೆ. ಲೋಕೋಪೈಲಟ್ ಇದನ್ನು ಗಮನಿಸಿ ರೈಲನ್ನು (Train) ನಿಲ್ಲಿಸಿದ್ದು, ಭಾರೀ ಅಪಘಾತವೊಂದು ತಪ್ಪಿದೆ.
ಹಳಿ ಮೇಲೆ ಮರದ ದಿಮ್ಮಿ ಹಾಗೂ ಕಬ್ಬಿಣದ ರಾಡ್ ಇಡುವ ಮುನ್ನ ಕಿರಾತಕರು ಅದನ್ನು ವೀಡಿಯೋ ಕೂಡ ಮಾಡಿಕೊಂಡಿದ್ದಾರೆ. ಬಳಿಕ ಬೇರೊಂದು ರೈಲ್ವೇ ಹಳಿ ಮೇಲೆ ಮೊಬೈಲ್ ಇರಿಸಿ ರೈಲು ಹೋಗುವುದನ್ನು ವೀಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಕಿಡಿಗೇಡಿಗಳು ರೈಲು ಅಪಘಾತ ಮಾಡಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: 10 ಕೋಟಿ ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿ ಸಿಕ್ಕಿಬಿದ್ದ ಪತಿ
ಚಾಮರಾಜನಗರದಿಂದ (Chamarajanagar) ಮೈಸೂರಿಗೆ (Mysuru) ಬರುತ್ತಿದ್ದ ರೈಲಿನಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಹಳಿ ಮೇಲೆ ಮರದ ದಿಮ್ಮಿ ಹಾಗೂ ಕಬ್ಬಿಣದ ಸಲಾಕೆ ಇಟ್ಟಿರುವುದನ್ನ ಲೋಕೋಪೈಲಟ್ ಗಮನಿಸಿ ರೈಲನ್ನು ನಿಲ್ಲಿಸಿದ್ದಾನೆ.
ಈ ಸಂಬಂಧ ಮೂವರನ್ನು ರೈಲ್ವೇ ಪೊಲೀಸರು (Police) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಯುವಕರನ್ನು ಒಡಿಶಾ ಮೂಲದ ಸೋಮಯ್ ಮರಾಂಡಿ, ಭಜನು ಮುರ್ಮು ಹಾಗೂ ದಸಮತ್ ಮರಾಂಡಿ ಎಂದು ಗುರುತಿಸಲಾಗಿದೆ. ಯುವಕರು ವಿಚಾರಣೆ ವೇಳೆ ತಮಾಷೆಗಾಗಿ ಈ ರೀತಿ ಮಾಡಿದ್ದೇವೆ ಎಂದಿದ್ದಾರೆ. ಅಲ್ಲದೇ ಹಲವು ಗಂಟೆಗಳ ಕಾಲ ಆರೋಪಿಗಳು ಆ ಜಾಗದಲ್ಲಿ ಮದ್ಯಪಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾವೇರಿ ತವರು ಕೊಡಗಿನಲ್ಲೇ ಕುಸಿಯುತ್ತಿದೆ ಅಂತರ್ಜಲ ಮಟ್ಟ
ರಾಂಚಿ: ವೇಗವಾಗಿ ಚಲಿಸುತ್ತಿದ್ದ ರೈಲೊಂದು (Train) ಹಠಾತ್ ಆಗಿ ನಿಂತ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾದ ಘಟನೆ ಜಾರ್ಖಂಡ್ (Jharkhand) ಪರ್ಸಾಬಾದ್ ಎಂಬಲ್ಲಿ ನಡೆದಿದೆ.
ಪುರಿ-ನವದೆಹಲಿ ನಡುವೆ ಸಂಚರಿಸುವ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿಗೆ ವಿದ್ಯುತ್ ಸರಬರಾಜಾಗುವುದು ತಕ್ಷಣ ನಿಂತಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿರುವುದು ಗಮನಕ್ಕೆ ಬಂದಿದ್ದು ಚಾಲಕ ಎಮರ್ಜನ್ಸಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಸುಮಾರು 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ತಕ್ಷಣ ನಿಂತ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ
ಅಪಘಾತದ (Accident) ನಂತರ ನಾಲ್ಕು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲನ್ನು ಅಪಘಾತ ಸ್ಥಳದಿಂದ ಡೀಸೆಲ್ ಎಂಜಿನ್ ಮೂಲಕ ಗೋಮೊಹ್‍ಗೆ ತರಲಾಯಿತು. ನಂತರ ಎಲೆಕ್ಟ್ರಿಕ್ ಎಂಜಿನ್ ಮೂಲಕ ದೆಹಲಿಗೆ ಕಳುಹಿಸಲಾಯಿತು ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ತಂತಿ ತುಂಡಾಗಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಐಸಿಸ್ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್
ಶಿವಮೊಗ್ಗ: ರೈಲ್ವೆ (Indian Railway) ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕೋಟೆಗಂಗೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಮಂಗಳವಾರ ಸಂಜೆ ಮನೆಗೆ ಬಂದಿದ್ದಳು. ಈ ವೇಳೆ ಪೋಷಕರು ಮನೆಗೆ ಬೀಗ ಹಾಕಿಕೊಂಡು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಹೊಲಕ್ಕೆ ಹೋಗಿ ಬೀಗ ಪಡೆದುಕೊಂಡು ವಾಪಾಸ್ ಬರುವಾಗ ಬಾಲಕಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ; ವೈರಲ್ ಆಯ್ತು ಸರ್ಕಾರಿ ಅಧಿಕಾರಿಯ ಟೇಬಲ್ ಬೋರ್ಡ್
ಮಳೆಯಿಂದ ಗುಂಡಿಯಲ್ಲಿ ನೀರು ನಿಂತಿದ್ದರಿಂದ ಬಾಲಕಿಗೆ ಮೇಲೆ ಬರಲು ಸಾಧ್ಯವಾಗಿಲ್ಲ. ಇದರಿಂದ ಆಕೆ ಅಲ್ಲಿಯೇ ಮೃತಪಟ್ಟಿದ್ದಾಳೆ. ಬಳಿಕ ಕೆಲಸ ಮುಗಿಸಿಕೊಂಡು ಬಂದ ಬಾಲಕಿಯ ತಂದೆ-ತಾಯಿ ಮಗಳಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಚೈತ್ರಾ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ರಸ್ತೆ ನಡುವೆ ಗುಂಡಿ ತೆಗೆದು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಕಾರಣನಾದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೃತ ಚೈತ್ರಾ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ನವದೆಹಲಿ: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ (Union Budget 2023) ಕರ್ನಾಟಕದ ರೈಲ್ವೆ ಇಲಾಖೆಗೆ (Karnataka Railway Department) ಬಂಪರ್ ಕೊಡುಗೆ ಸಿಕ್ಕಿದೆ. ಈ ಬಾರಿ ರಾಜ್ಯದ ರೈಲ್ವೇ ಯೋಜನೆಗಳಿಗೆ (Railway Projects) ಒಟ್ಟು 7,561 ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಿಸಲಾಗಿದೆ.
2009 ರಿಂದ 2014ರ ಅವಧಿಯಲ್ಲಿ ನೀಡಿದಕ್ಕೆ ಹೋಲಿಸಿದರೆ, ಈ ಬಾರಿ ಶೇ.9 ರಷ್ಟು ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಅಲ್ಲದೇ ನೈರುತ್ಯ ರೈಲ್ವೆ ವಲಯಕ್ಕೆ 9,200 ಕೋಟಿ ರೂ. ನೆರವು ನೀಡಿದ್ದು, ಅದರಲ್ಲಿ ಕರ್ನಾಟಕ ರಾಜ್ಯವೊಂದಕ್ಕೆ 7,561 ಕೋಟಿ ರೂ. ದೊರೆತಿದೆ. ಇನ್ನುಳಿದ ಮೊತ್ತ ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಸಿಕ್ಕಿದೆ.
ಬಹುಬೇಡಿಕೆಯ 10 ಮಾರ್ಗಗಳ ಕಾಮಗಾರಿ, ವಿದ್ಯುದೀಕರಣ, ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಜೋಡಿ ಮಾರ್ಗ (ಡಬ್ಲಿಂಗ್) ಯೋಜನೆಗಳ ನಿರ್ಮಾಣಕ್ಕೆ ಅನುದಾನ ಬಳಸಿಕೊಳ್ಳಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ:
ಹೊಸ ರೈಲ್ವೆ ಮಾರ್ಗ: ನೈರುತ್ಯ ರೈಲ್ವೆ ವಲಯಕ್ಕೆ ಈಗಾಗಲೇ ಘೋಷಣೆಯಾದ ಹೊಸ ಮಾರ್ಗಗಳಿಗೆ ಒಟ್ಟಾರೆ 2,423 ಕೋಟಿ ಅನುದಾನ ಮಂಜೂರಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ 1,408 ಕೋಟಿ ರೂ. ದೊರೆತಿದೆ. 865 ಕೋಟಿ ರೂ.ಗಳನ್ನು ಮುಂದೆ ಘೋಷಣೆಯಾಗುವ ಹೊಸ ಮಾರ್ಗಕ್ಕೆ ಮೀಸಲಿಡಲಾಗಿದೆ ಎಂದು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ (Sanjeev Kishore) ತಿಳಿಸಿದ್ದಾರೆ.
ಮುಖ್ಯವಾಗಿ ಈ ಬಾರಿ ಅಮೃತ್ ಭಾರತ ಯೋಜನೆ ಅಡಿಯಲ್ಲಿ ರಾಜ್ಯದ ಹುಬ್ಬಳ್ಳಿ, ಧಾರವಾಡ, ಚಾಮರಾಜನಗರ, ಹರಿಹರ, ಹಾಸನ, ಶಿವಮೊಗ್ಗ ಸೇರಿ 52 ರೈಲ್ವೆ ನಿಲಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ರೈಲ್ವೇ ಮಾರ್ಗಗಳ ವಿದ್ಯುದೀಕರಣ: ಈ ಬಾರಿ ಅನುದಾನದಲ್ಲಿ ಗದಗ – ಹೊಟಗಿ, ಚಿಕ್ಕಬಾಣಾವರ – ಹುಬ್ಬಳ್ಳಿ, ಬಿರೂರು – ತಾಳಗುಪ್ಪ, ಹಾಸನ – ಮಂಗಳೂರು, ಮೀರಜ್ – ಲೋಂಡ, ಹೊಸಪೇಟೆ – ಹುಬ್ಬಳ್ಳಿ – ವಾಸ್ಕೋಡಗಾಮ, ಚಿಕ್ಕಬಾಣಾವರ – ಹಾಸನ ಜಿಲ್ಲೆಗಳ ನಡುವೆ ರೈಲ್ವೆ ಮಾರ್ಗಗಳ ವಿದ್ಯುದೀಕರಣ ಯೋಜನೆ ಕೈಗೊಳ್ಳಲಾಗುತ್ತದೆ.
ರಾಜ್ಯಕ್ಕೆ 10 ಹೊಸ ರೈಲ್ವೇ ಮಾರ್ಗ: ಈ ಬಾರಿ 10 ಹೊಸ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. 350 ಕೋಟಿ ರೂ.ಗಳಲ್ಲಿ ಗದಗ (ತಳಕಲ್) – ವಾಡಿ, 300 ಕೋಟಿ ರೂ.ಗಳಲ್ಲಿ ಗಿಣಿಗೇರಾ – ರಾಯಚೂರು, 420.85 ಕೋಟಿ ರೂ.ಗಳಲ್ಲಿ ತುಮಕೂರು – ದಾವಣಗೆರೆ (ಚಿತ್ರದುರ್ಗ ಮಾರ್ಗ), 350 ಕೋಟಿ ರೂ.ಗಳಲ್ಲಿ ತುಮಕೂರು – ರಾಯದುರ್ಗ (ಕಲ್ಯಾಣ ದುರ್ಗ ಮಾರ್ಗ), 360 ಕೋಟಿ ರೂ.ಗಳಲ್ಲಿ ಬಾಗಲಕೋಟೆ – ಕುಡಚಿ, 150 ಕೋಟಿ ರೂ.ಗಳಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು, 10 ಕೋಟಿ ರೂ.ಗಳಲ್ಲಿ ಬೆಳಗಾವಿ – ಧಾರವಾಡ, 200 ಕೋಟಿ ರೂ.ಗಳಲ್ಲಿ ಮಾರಿಕುಪ್ಪಂ – ಕುಪ್ಪಂ, 145 ಕೋಟಿ ರೂ.ಗಳಲ್ಲಿ ಕಡೂರು – ಚಿಕ್ಕಮಗಳೂರು – ಹಾಸನ ಹಾಗೂ 20 ಕೋಟಿ ರೂ.ಗಳಲ್ಲಿ ಮಲಗೂರು – ಪಾಲಸಮುದ್ರಂ ಹೊಸ ಮಾರ್ಗಗಳನ್ನು ನಿರ್ಮಿಸಲಾಗುತ್ತದೆ.
7 ಮಾರ್ಗಗಳಲ್ಲಿ ಡಬ್ಲಿಂಗ್: ಇನ್ನುಳಿದಂತೆ ಗದಗ – ಹೊಟಗಿ ಬಯ್ಯಪ್ಪನಹಳ್ಳಿ – ಹೊಸೂರು, ಯಶವಂತಪುರ – ಚನ್ನಸಂದ್ರ, ಲೋಂಡಾ – ಮೀರಜ್, ಹುಬ್ಬಳ್ಳಿ – ಚಿಕ್ಕಜಾಜೂರು, ಬೆಂಗಳೂರು ದಂಡು – ವೈಟ್‌ಫೀಲ್ಡ್, ಹೊಸಪೇಟೆ – ತಿನೈಘಾಟ್ – ವಾಸ್ಕೋಡಗಾಮ ನಡುವೆ ಜೋಡಿ ಮಾರ್ಗಗಳನ್ನು ನಿರ್ಮಿಸಲಾಗುತ್ತದೆ ಎಂದು ಸಂಜೀವ್ ಕಿಶೋರ್ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಹಾಗೂ ಶತಾಬ್ದಿ ಸೂಪರ್ ಫಾಸ್ಟ್ ರೈಲುಗಳ (Shatabdi Express) ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿ.ಸೋಮಣ್ಣ (V Somanna) ತಿಳಿಸಿದರು.
ರೈಲುಗಳ ವೇಳಾಪಟ್ಟಿಯ (Train Schedules) ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ರೈಲ್ವೆ ಮಂತ್ರಾಲಯವನ್ನು ಪತ್ರ ಮುಖೇನ ಕೋರಲಾಗಿದೆ. ರೈಲ್ವೆ ಅಧಿಕಾರಿಗಳು ಇದು ಕಷ್ಟ ಅನ್ನುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ರೈಲ್ವೆ ಸಚಿವರೊಂದಿಗೆ ಚರ್ಚಿಸಿ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಮದ್ಯಕ್ಕೆ ದಾಸರಾದ ದಂಪತಿ – ಮಗು ಸಾಕಲಾಗದೇ ಬಾಲಮಂದಿರದಲ್ಲಿ ಬಿಟ್ಟುಹೋದ್ರು
ವಿಧಾನ ಪರಿಷತ್ತಿನಲ್ಲಿ (Legislative Council) ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡ್ಯದಲ್ಲಿ ಈ ಎರಡೂ ರೈಲುಗಳಿಗೂ ಸಹ ನಿಲುಗಡೆ ಒದಗಿಸಬೇಕೆಂಬ ಸದಸ್ಯರ ಕೋರಿಕೆಯ ಬಗ್ಗೆಯೂ ಅಗತ್ಯ ಕ್ರಮಕೈಗೊಳ್ಳುವಂತೆ ಮಂತ್ರಾಲಯಕ್ಕೆ ಪತ್ರದ ಮುಖೇನ ತಿಳಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನನಗೆ, ನೇಹಾಗೆ ಕಾಂಪಿಟೇಶನ್ ಇತ್ತು: ಅನುಪಮಾ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯು ಆರಂಭವಾದ ನಂತರ ಶತಾಬ್ದಿ ಹಾಗೂ ವಂದೇ ಭಾರತ್ ಎರಡು ರೈಲುಗಳಲ್ಲೂ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಯಾಣಿಕರು ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಆರ್ಥಿಕ ನಷ್ಟ ಉಂಟಾಗಿಲ್ಲ ಎಂದು ನೈರುತ್ಯ ರೈಲ್ವೆ ತಿಳಿಸಿರುವುದಾಗಿ ಸಚಿವರು ಸ್ಪಷ್ಟಪಡಿಸಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ನಿತ್ಯ ಸಾಮಾನ್ಯ ರೈಲುಗಳಲ್ಲಿ (Railway) ಪ್ರಯಾಣಿಸುವಾಗ ಹಳಿಗಳ ಮೇಲಿನ ಶಬ್ಧ, ನೂಕಾಟದ ಗದ್ದಲ, ದೀರ್ಘ ಸಮಯದವರೆಗೆ ದಣಿದ ಪ್ರಯಾಣ ಎಲ್ಲ ರೀತಿಯ ಅನುಭವವೂ ಆಗುತ್ತದೆ. ಹಾಗಾಗಿಯೇ ಭಾರತೀಯ ರೈಲ್ವೆ ಇಲಾಖೆಯೂ (Indian Railway) ಪ್ರಯಾಣಿಕರ ಅನುಕೂಲಗಳಿಗೆ ತಕ್ಕಂತೆ ವಿಶೇಷ ರೈಲುಗಳ (Speical Train) ಕಡೆಗೆ ಹೆಚ್ಚಿನ ಒಲವು ತೋರುತ್ತಿದೆ.
ಈಗಾಗಲೇ ಎಸಿ ಕೋಚ್‌ಗಳಿಗೆ ಹಾಸಿಗೆ ವ್ಯವಸ್ಥೆಗಳ ಸೌಲಭ್ಯ ಕಲ್ಪಿಸಿದೆ. ಜೊತೆಗೆ ಪ್ರಯಾಣ ಸುಲಭವಾಗಿಸಲು ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನೂ ಅನುಷ್ಠಾನಕ್ಕೆ ತಂದಿದೆ. ಇದೀಗ ಲಕ್ಷ-ಲಕ್ಷ ಹಣ ಕೊಟ್ಟು ಮಹಾರಾಜನಂತೆ ಪ್ರಯಾಣಿಕರು ಪ್ರವಾಸ ಕೈಗೊಳ್ಳುವ ಅವಕಾಶ ರೈಲ್ವೆ ಇಲಾಖೆ ಕಲ್ಪಿಸಿದೆ. ಅದಕ್ಕಾಗಿ ಮಹಾರಾಜ ಎಕ್ಸ್‌ಪ್ರೆಸ್ ವಿಶೇಷ ರೈಲು (Maharajas Express) ಸೇವೆಯನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ಇನ್ಮುಂದೆ ಎಸಿ ರೈಲು ಕೋಚ್‌ಗಳಿಗೆ ವಿಶೇಷ ಸೌಲಭ್ಯ – ಸೆ.20ರಿಂದಲೇ ಜಾರಿ
ಹೌದು.. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ನಿರ್ವಹಿಸುವ ಮಹಾರಾe ಎಕ್ಸ್‌ಪ್ರೆಸ್ ರೈಲು ಅತ್ಯಂತ ಐಷಾರಾಮಿ ಅನುಭವವನ್ನು ನೀಡುತ್ತದೆ. ಬರುವ ಅತಿಥಿಗಳಿಗೆ ಸ್ವರ್ಗ ಲೋಕವನ್ನೇ ತೆರೆದಿರುತ್ತದೆ. ದಿ ಇಂಡಿಯನ್ ಪನೋರೋಮಾ, ಟ್ರೆಷರ್ಸ್ ಆಫ್ ಇಂಡಿಯಾ, ದಿ ಇಂಡಿಯನ್ ಸ್ಪ್ಲೆಂಡರ್ ಮತ್ತು ದಿ ಹೆರಿಟೇಜ್ ಆಫ್ ಇಂಡಿಯಾ ನಾಲ್ಕು ವಿಭಾಗಗಳಲ್ಲಿ ಈ ಐಷಾರಾಮಿ ರೈಲು ಸಂಚರಿಸಲಿದ್ದು, ಪ್ರಯಾಣಿಕರು ಯಾವುದಾರೂ ಒಂದನ್ನು ಆಯ್ಕೆ ಮಾಡಿಕೊಂಡು 7 ದಿನಗಳ ಪ್ರವಾಸ ಮಾಡಬಹುದಾಗಿದೆ. ಅತ್ಯಾಧುನಿಕ ಸೇವೆಗಳೂ ಇದರಲ್ಲಿ ಲಭ್ಯವಿರಲಿದೆ. ಆದ್ರೆ ಒಬ್ಬರಿಗೆ ಟಿಕೆಟ್ ದರ 19 ಲಕ್ಷ ರೂ. ಇರಲಿದೆ (GST ಸೇರಿ 19,90,800 ರೂ.) ಎಂದು ಐಆರ್‌ಸಿಟಿಸಿ ಹೇಳಿದೆ.
ವಿಶೇಷತೆ ಏನಿದೆ?
ಒಂದು ಕೋಚ್‌ನಲ್ಲಿ ಡೈನಿಂಗ್ ಹಾಲ್, ಸ್ನಾನಗೃಹ ಹಾಗೂ ಎರಡು ಐಷಾರಾಮಿ ಬೆಡ್‌ರೂಮ್‌ಗಳು, ಎರಡು ದೊಡ್ಡ ಕಿಟಕಿಗಳು ಇರಲಿವೆ. ಪ್ರತಿ ಪ್ಯಾಸೆಂಜರ್‌ಗೂ ಪ್ರತ್ಯೇಕ ಬಟ್ಲರ್‌ಗಳ ಸೇವೆಗೆ ಮೀಸಲಾಗಿರುತ್ತದೆ. ಮಿನಿ ಬಾರ್, ಎಸಿ ಹಾಗೂ ವೈ-ಫೈ ಸೌಲಭ್ಯ, ಇಂಟರ್‌ನೆಟ್, ಟಿವಿ ಹಾಗೂ ತಮ್ಮಿಷ್ಟದ ಸಿನಿಮಾಗಳನ್ನು ನೋಡಲು ಡಿವಿಡಿ ಪ್ಲೇಯರ್‌ಗಳ ಅತ್ಯಾಧುನಿಕ ಸೌಲಭ್ಯಗಳು ಇರುತ್ತವೆ. ಇದು ಭಾರತೀಯ ರೈಲ್ವೆಯಲ್ಲೇ ಅತ್ಯಂತ ದುಬಾರಿ ಟಿಕೆಟ್ ಕೋಚ್ ಆಗಿದೆ. ಇದನ್ನೂ ಓದಿ: ಜೂನ್ 30ರವರೆಗೆ ರೈಲ್ವೇ ಟಿಕೆಟ್ ಬುಕ್ಕಿಂಗ್ ರದ್ದು – ವಿಶೇಷ ರೈಲುಗಳು ಓಡುತ್ತೆ
ಜಾಲತಾಣದಲ್ಲಿ ಬಳಕೆದಾರರೊಬ್ಬರು ಮಹಾರಾಜ ಎಕ್ಸ್‌ಪ್ರೆಸ್ ರೈಲಿನ ವಿಶೇಷತೆಯ ವೀಡಿಯೋ ಹಂಚಿಕೊಂಡಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಗೆಯೇ ಟೀಕೆಗಳೂ ಕೇಳಿಬಂದಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ನಾನು ಆ ದರದಲ್ಲಿ ಆಸ್ತಿಯನ್ನೇ ಖರೀದಿಸುತ್ತೇನೆ ಅಂದಿದ್ದಾರೆ. ಮತ್ತೊಬ್ಬರು ಈ ಮೊತ್ತದಲ್ಲಿ ನಾನು ನ್ಯೂಯಾರ್ಕ್ ನಗರ ಅಥವಾ ವಿದೇಶದಲ್ಲಿ ಯಾವುದೇ ದೇಶಕ್ಕೆ ಭೇಟಿ ನೀಡಬಹುದು. ಅದರ ಹೊರತಾಗಿಯೂ ಹಣ ಉಳಿಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದಲ್ಲಿ ಈಗಗಾಲೇ 5 ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಚಾಲನೆ ನೀಡಲಾಗಿದೆ. 2025-26ಕ್ಕೆ ಭಾರತಕ್ಕೆ ತಿರುವುಗಳಲ್ಲಿ ಮೋಟಾರ್ ಬೈಕ್‌ನಂತೆ ವಾಲುವ ಲಿಟ್ಟಿಂಗ್ ರೈಲು ಬರಲಿದೆ. ಲಿಟ್ಟಿಂಗ್ ರೈಲು ಬಂದ ನಂತರ 100 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಈ ತಂತ್ರಜ್ಞಾನ ಅಳವಡಿಸುವ ಯೋಜನೆಯನ್ನು ರೈಲ್ವೆ ಇಲಾಖೆ ಹಾಕಿಕೊಂಡಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw), 2024ರ ಮೊದಲ ತ್ರೈಮಾಸಿಕದಲ್ಲಿ ಸ್ಲೀಪರ್ ಕೋಚ್‌ಗಳೊಂದಿಗೆ ಮೊದಲ ವಂದೇ ಭಾರತ್ ರೈಲನ್ನು ಹೊರತರಲಾಗುವುದು ಎಂದು ತಿಳಿಸಿದ್ದಾರೆ.
ಭಾರತವು ಮುಂದಿನ 3 ವರ್ಷಗಳಲ್ಲಿ 475 ವಂದೇ ಭಾರತ್ ರೈಲುಗಳನ್ನು ಉತ್ಪಾದಿಸುವ ಯೋಜನೆಯ ಹಾದಿಯಲ್ಲಿದೆ. ಕಳೆದ ಬಜೆಟ್‌ನಲ್ಲಿ 400 ರೈಲುಗಳನ್ನು ಮಂಜೂರು ಮಾಡಲಾಗಿತ್ತು. ಅದಕ್ಕೂ ಮೊದಲು 75 ರೈಲುಗಳನ್ನು ಮಂಜೂರು ಮಾಡಲಾಗಿತ್ತು. ಮುಂದಿನ 3 ವರ್ಷಗಳಲ್ಲಿ ಇದರ ಸಂಪೂರ್ಣ ಗುರಿ ಸಾಧಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: GPS ಟ್ರ್ಯಾಕರ್ ಬಳಸಿ ಉದ್ಯಮಿಯಿಂದ 50 ಲಕ್ಷ ದರೋಡೆ ಮಾಡಿದ್ದ ಖತರ್ನಾಕ್ ಕಳ್ಳರ ಬಂಧನ
ಇದರೊಂದಿಗೆ ದೆಹಲಿ-ಮುಂಬೈ, ದೆಹಲಿ-ಹೌರಾ ಮತ್ತು ಇತರ ಪ್ರಮುಖ ಮಾರ್ಗಗಳಲ್ಲಿ ಅಸ್ತಿತ್ವದಲ್ಲಿರುವ ರಾಜಧಾನಿ ಮತ್ತು ಡುರೊಂಟೊ (Duronto Trains) ರೈಲುಗಳನ್ನು ಬದಲಿಸುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಮುಖ್ಯವಾಗಿ 2025-26ರ ವೇಳೆಗೆ ಭಾರತೀಯ ರೈಲ್ವೆಯು ಯೂರೋಪ್, ದಕ್ಷಿಣ ಅಮೆರಿಕ ಮತ್ತು ಪೂರ್ವ ಏಷ್ಯಾದ ಮಾರುಕಟ್ಟೆಗಳಿಗೆ (International Market) ವಂದೇ ಭಾರತ್ ರೈಲುಗಳ ಪ್ರಮುಖ ರಫ್ತುದಾರನಾಗಲು ಯೋಜಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಇಂದಿನಿಂದ ನವರಾತ್ರಿ (Navratri) ಹಬ್ಬ ಪ್ರಾರಂಭವಾಗಿದೆ. ದೇಶದ್ಯಾಂತ ಅದ್ದೂರಿಯಾಗಿ, ಸಂಭ್ರಮದಿಂದ ದಸರಾ (Dasara) ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಭಾರತೀಯ ರೈಲ್ವೆ (Indian Railway) ಕೂಡಾ ಈ ಅವಧಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶೇಷ ಊಟ (Meal) ನೀಡಲು ನಿರ್ಧರಿಸಿದೆ.
ನವರಾತ್ರಿ ಹಿನ್ನೆಲೆ 9 ದಿನಗಳ ಕಾಲ ಭಾರತೀಯ ರೈಲ್ವೆಯಲ್ಲಿ ವಿಶೇಷ ಊಟದ ಮೆನು ಇರಲಿದ್ದು, ರೈಲಿನಲ್ಲೂ ಹಬ್ಬದ ಊಟ ಸವಿಯಬಹುದು ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ಮಾತ್ರ ಈ ಸ್ಪೆಷಲ್ ಮೆನು ಇರಲಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಶೀಘ್ರವೇ 5G ಸೇವೆ ಆರಂಭ – ನಿಮ್ಮ ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
During the auspicious festival of Navratri, IR brings to you a special menu to satiate your Vrat cravings, being served from 26.09.22 – 05.10.22.
ಫುಡ್ ಆನ್ ಟ್ರ‍್ಯಾಕ್ ಅಪ್ಲಿಕೇಶನ್, irctc.co.in ಅಥವಾ 1323 ಗೆ ಕರೆ ಮಾಡಿ ವಿಶೇಷ ಮೆನುವನ್ನು ಆರ್ಡರ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಈ ಪ್ರಕಟಣೆಯಲ್ಲಿ ರೈಲ್ವೆ ಇಲಾಖೆ ವಿಶೇಷ ಥಾಲಿಯ ಫೋಟೋವನ್ನೂ ಲಗತ್ತಿಸಿದೆ. ಇದನ್ನೂ ಓದಿ: ಹೊಸ ರಾಜಕೀಯ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಅಜಾದ್
Live Tv
[brid partner=56869869 player=32851 video=960834 autoplay=true]