Tag: Indian soldiers

  • Kargil Vijay Diwas: ಹುತಾತ್ಮ ಯೋಧರಿಗೆ ರಾಜನಾಥ್‌ ಸಿಂಗ್‌ ನಮನ

    Kargil Vijay Diwas: ಹುತಾತ್ಮ ಯೋಧರಿಗೆ ರಾಜನಾಥ್‌ ಸಿಂಗ್‌ ನಮನ

    ನವದೆಹಲಿ: ಪಾಕ್‌ ವಿರುದ್ಧ 1999ರ ಕಾರ್ಗಿಲ್‌ ಯುದ್ಧದಲ್ಲಿ ಭಾರತದ ವಿಜಯಕ್ಕಾಗಿ ಬಲಿದಾನಗೈದ ಹುತಾತ್ಮ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ನಮನ ಸಲ್ಲಿಸಿದ್ದಾರೆ.

    1999ರ ಜುಲೈ 26 ರಂದು ಲಡಾಖ್‌ನ ಕಾರ್ಗಿಲ್‌ನ ಹಿಮಾವೃತ ಶಿಖರಗಳ ಮೇಲೆ ಸುಮಾರು ಮೂರು ತಿಂಗಳ ಕಾಲ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆಯಿತು. ಕೊನೆಗೆ ಭಾರತ ಜಯ ಸಾಧಿಸಿತು. ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯದ ನೆನಪಿಗಾಗಿ ಈ ದಿನವನ್ನು ‘ಕಾರ್ಗಿಲ್ ವಿಜಯ್ ದಿವಸ್’ (Kargil Vijay Diwas) ಎಂದು ಆಚರಿಸಲಾಗುತ್ತದೆ.

    ಕಾರ್ಗಿಲ್ ವಿಜಯ್ ದಿವಸದಂದು, ನಮ್ಮ ರಾಷ್ಟ್ರದ ಗೌರವವನ್ನು ರಕ್ಷಿಸುವಲ್ಲಿ ಅಸಾಧಾರಣ ಧೈರ್ಯ, ದೃಢನಿಶ್ಚಯ ಪ್ರದರ್ಶಿಸಿದ ನಮ್ಮ ಧೈರ್ಯಶಾಲಿಗಳಿಗೆ ಹೃತ್ಪೂರ್ವಕ ಗೌರವಗಳನ್ನು ಸಲ್ಲಿಸುತ್ತೇನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರ ಅತ್ಯುನ್ನತ ತ್ಯಾಗವು ನಮ್ಮ ಸಶಸ್ತ್ರ ಪಡೆಗಳ ಅಚಲವಾದ ದೃಢಸಂಕಲ್ಪದ ಶಾಶ್ವತ ಜ್ಞಾಪನೆಯಾಗಿದೆ. ಭಾರತವು ಅವರ ಸೇವೆಗೆ ಸದಾ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

  • ದೇಶದ ಸೈನಿಕರ ರಕ್ಷಣೆಗಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆ

    ದೇಶದ ಸೈನಿಕರ ರಕ್ಷಣೆಗಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆ

    ರಾಯಚೂರು: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ (Indian Army) ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನ ನೆರವೇರಿಸಲಾಯಿತು.

    ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ನೇತೃತ್ವದಲ್ಲಿ ಹೋಮ, ಪೂಜೆಗಳು ನಡೆದವು. ಮೃತ್ಯುಂಜಯ ಹೋಮ, ಆಯುಷ್ಯ ಹೋಮ, ಮಾರ್ಕಂಡೇಯ ಹೋಮ ಹಾಗೂ ಇತರೆ ಹೋಮ ಹವನಗಳನ್ನು ಮಾಡಲಾಯಿತು. ಈ ವೇಳೆ ರಾಷ್ಟ್ರೀಯ ಬಿಕ್ಕಟ್ಟು ಹಿನ್ನೆಲೆ ಮಠದಲ್ಲಿ ಯಾವುದೇ ಸಂಭ್ರಮಾಚರಣೆಗಳು ನಡೆಸುವುದಿಲ್ಲ. ಸಾಂಪ್ರದಾಯಿಕ ಮತ್ತು ಅಗತ್ಯ ಧಾರ್ಮಿಕ ಆಚರಣೆಗಳನ್ನು ಮಾತ್ರ ಆಚರಿಸುವುದಾಗಿ ಶ್ರೀಗಳು ಘೋಷಣೆ ಮಾಡಿದರು. ಇದನ್ನೂ ಓದಿ: ಪಾಕ್ ಮೇಲೆ ಪ್ರಕೃತಿಗೂ ಮುನಿಸು – ಮತ್ತೆ ಭೂಕಂಪ

    ಈ ವಿಶೇಷ ಪೂಜಾ ಹವನ ಕಾರ್ಯಕ್ರಮದ ವೇಳೆ ನಟ, ನಿರ್ದೇಶಕ ಉಪೇಂದ್ರ ಹಾಗೂ ಹಿರಿಯ ನಟಿ ತಾರಾ ಕುಟುಂಬಗಳು ಭಾಗಿಯಾಗಿದ್ದವು. ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಆಗಮಿಸಿದ್ದ ಉಪೇಂದ್ರ ಹಾಗೂ ನಟಿ ತಾರಾ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ: ನೆಹರು, ಇಂದಿರಾ ಗಾಂಧಿ ಮಾಡಿದ ತಪ್ಪನ್ನ ಮೋದಿ ಮಾಡಬಾರದು: ಯತ್ನಾಳ್

  • ಫ್ರಾನ್ಸ್‌ನ ಮಾರ್ಸಿಲ್ಲೆಸ್‌ಗೆ ಪ್ರಧಾನಿ ಮೋದಿ ಭೇಟಿ – ಬಲಿದಾನಗೈದ ಭಾರತೀಯ ಯೋಧರಿಗೆ ಗೌರವ ನಮನ

    ಫ್ರಾನ್ಸ್‌ನ ಮಾರ್ಸಿಲ್ಲೆಸ್‌ಗೆ ಪ್ರಧಾನಿ ಮೋದಿ ಭೇಟಿ – ಬಲಿದಾನಗೈದ ಭಾರತೀಯ ಯೋಧರಿಗೆ ಗೌರವ ನಮನ

    ಪ್ಯಾರಿಸ್: ಪ್ರಧಾನಿ ನರೇಂದ್ರ ಮೋದಿ ಬುಧವಾರ ಫೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾರ್ಸಿಲ್ಲೆಸ್‌ನಲ್ಲಿರುವ ಮಜಾರ್ಗ್ಸ್ ಯುದ್ಧ ಸ್ಮಶಾನಕ್ಕೆ ಭೇಟಿ ನೀಡಿ ವಿಶ್ವ ಯುದ್ಧಗಳಲ್ಲಿ ಬಲಿದಾನಗೈದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದರು. ಮೋದಿ ಅವರು ಸ್ಮಾರಕದಲ್ಲಿ ಪುಷ್ಪಗುಚ್ಛ ಇಟ್ಟು ನಮಿಸಿದರು.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಪ್ರಧಾನಿ ಮೋದಿ, ‘ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್‌ ಮ್ಯಾಕ್ರನ್‌ ಅವರೊಂದಿಗೆ ಮಾರ್ಸಿಲ್ಲೆಗೆ ಬಂದಿದ್ದೇನೆ. ಭಾರತದ ಸ್ವಾತಂತ್ರ್ಯದ ಅನ್ವೇಷಣೆಯಲ್ಲಿ ಈ ನಗರವು ವಿಶೇಷ ಮಹತ್ವ ಹೊಂದಿದೆ. ಮಹಾನ್‌ ವೀರ್‌ ಸಾವರ್ಕರ್‌ ಧೈರ್ಯದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಇಲ್ಲಿಯೇ. ಅವರನ್ನು ಬ್ರಿಟಿಷ್‌ ಕಸ್ಟಡಿಗೆ ಹಸ್ತಾಂತರಿಸಬಾರದು ಎಂದು ಒತ್ತಾಯಿಸಿದ್ದ ಮಾರ್ಸೆಲ್ಲೆಯ ಜನರು ಮತ್ತು ಆ ಕಾಲದ ಫ್ರೆಂಚ್‌ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವೀರ್‌ ಸಾವರ್ಕರ್‌ ಅವರ ಶೌರ್ಯವು ಪೀಳಿಗೆಗೆ ಸ್ಫೂರ್ತಿಯಾಗಿದೆ’ ಎಂದು ತಿಳಿಸಿದ್ದಾರೆ.

    ಕಳೆದ ನಾಲ್ಕು ವರ್ಷಗಳಿಂದ ಮಾರ್ಸಿಲ್ಲೆಯಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯದ ಸದಸ್ಯ ಅನುಪ್ ಗುಪ್ತಾ ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತೀಯರನ್ನು ಪ್ರತಿನಿಧಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಪ್ಯಾರಿಸ್‌ನಲ್ಲಿರುವ ರಾಯಭಾರ ಕಚೇರಿಯ ನಂತರ ಫ್ರಾನ್ಸ್‌ನಲ್ಲಿರುವ ಮೊದಲ ಕಾನ್ಸುಲೇಟ್ ಇದಾಗಿದೆ. ಇದು ಭಾರತೀಯ ಸಮುದಾಯ ಬೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    ಪ್ರಧಾನಿ ಮೋದಿ ಫೆ.10 ರಿಂದ 12 ರ ವರೆಗೆ ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ. ಮಂಗಳವಾರ ಪ್ಯಾರಿಸ್‌ನಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ AI ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿದ್ದರು. ಇದರ ನಂತರ, ಪ್ರಧಾನಿ ಮೋದಿ ಫೆ.12-13 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕ ಆಡಳಿತದ ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

  • ಕಿಡ್ನ್ಯಾಪ್ ಆಗಿದ್ದ ಇಬ್ಬರಲ್ಲಿ ಓರ್ವ ಯೋಧ ಶವವಾಗಿ ಪತ್ತೆ – ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ

    ಕಿಡ್ನ್ಯಾಪ್ ಆಗಿದ್ದ ಇಬ್ಬರಲ್ಲಿ ಓರ್ವ ಯೋಧ ಶವವಾಗಿ ಪತ್ತೆ – ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್ (Anantnag) ಜಿಲ್ಲೆಯಲ್ಲಿ ಉಗ್ರರು (Terrorists) ಅಪಹರಿಸಿದ್ದ ಭಾರತೀಯ ಸೇನೆಯ ಇಬ್ಬರು ಯೋಧರಲ್ಲಿ (Indian Soldiers) ಓರ್ವ ಯೋಧ ಶವವಾಗಿ ಪತ್ತೆಯಾಗಿದ್ದಾರೆ. ಯೋಧನ ಮೈಮೇಲೆ ಗುಂಡು ಹಾರಿಸಿರುವ ಗಾಯದ ಗುರುತುಗಳು ಕಂಡುಬಂದಿದ್ದು, ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

    ಮಂಗಳವಾರ ನಾಪತ್ತೆಯಾಗಿದ್ದ ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹದಲ್ಲಿ ಗುಂಡು ಮತ್ತು ಚಾಕುವಿನಿಂದ ಚುಚ್ಚಿರುವ ಗುರುತುಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ

    ಇನ್ನು ಉಗ್ರರಿಂದ ಅಪಹರಣಕ್ಕೆ ಒಳಗಾದ ಇಬ್ಬರು ಸೈನಿಕರ ಪೈಕಿ ಓರ್ವ ಸೈನಿಕ ಉಗ್ರರ ಹಿಡಿತದಿಂದ ಪಾರಾಗಿ ತಪ್ಪಿಸಿಕೊಂಡು ಬಂದಿದ್ದಾರೆ. ಭದ್ರತಾ ಪಡೆಗಳು ಈ ಭಾಗದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭ ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಆತ್ಮೀಯ ಸ್ವಾಗತ

    ಈ ಕುರಿತು ಭದ್ರತಾ ಪಡೆಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಹರಣವಾಗಿದ್ದ ಇಬ್ಬರು ಸೈನಿಕರು ಟೆರಿಟೋರಿಯಲ್ ಆರ್ಮಿಗೆ ಸೇರಿದ ಯೋಧರು ಎಂದು ಖಚಿತಪಡಿಸಿದೆ. ಈ ಪೈಕಿ ಓರ್ವ ಯೋಧ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ ಎಂದೂ ಭದ್ರತಾ ಪಡೆಗಳು ಮಾಹಿತಿ ನೀಡಿದೆ. ಈ ಭಾಗದಲ್ಲಿ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ನಾಪತ್ತೆಯಾಗಿದ್ದ ಮತ್ತೋರ್ವ ಯೋಧನಿಗಾಗಿ ಶೋಧಕಾರ್ಯ ನಡೆಸಿತ್ತು. ಇದನ್ನೂ ಓದಿ: ಆಯುಧ ಪೂಜೆಗೂ ದುಡ್ಡಿಲ್ಲದೆ ದಿವಾಳಿ ಆಯ್ತಾ KSRTC – ಒಂದು ಬಸ್ಸಿಗೆ ತಲಾ 100 ರೂ. ಖರ್ಚು ಮಾಡುವಂತೆ ಸೂಚನೆ

    ಇನ್ನು ಉಗ್ರರ ಗುಂಡಿನ ದಾಳಿಗೆ ಬಲಿಯಾದ ಯೋಧನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: RBI ಬಡ್ಡಿ ದರ ಇಳಿಕೆ ಇಲ್ಲ – ಸತತ 10ನೇ ಬಾರಿಗೆ ಯಥಾಸ್ಥಿತಿ ಮುಂದುವರಿಕೆ

  • ಆಸ್ಪತ್ರೆಗೆ ತಲುಪಲು ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಭಾರತೀಯ ಸೈನಿಕರು

    ಆಸ್ಪತ್ರೆಗೆ ತಲುಪಲು ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಭಾರತೀಯ ಸೈನಿಕರು

    ಶ್ರೀನಗರ: ಜಮ್ಮು-ಕಾಶ್ಮೀರದ ಭಾರೀ ಹಿಮಪಾತದ ನಡುವೆ ತುಂಬು ಗರ್ಭಿಣಿಯನ್ನು ಸ್ಟ್ರೇಚರ್ ಮೂಲಕ ಆಸ್ಪತ್ರೆಗೆ ಸೇರಿಸಲು ಭಾರತೀಯ ಸೈನಿಕರು ಸಹಾಯ ಮಾಡಿದ್ದಾರೆ.

    ಭಾರೀ ಹಿಮಪಾತದಿಂದ ಜಮ್ಮುಕಾಶ್ಮೀರ ತತ್ತರಿಸಿಹೋಗಿದೆ. ಈ ನಡುವೆ ಜಮ್ಮು-ಕಾಶ್ಮೀರದ ಘಗ್ಗರ್ ಬೆಟ್ಟದ ಗ್ರಾಮದಿಂದ ಗರ್ಭಿಣಿಯನ್ನು ಬೋನಿಯಾರ್ ತಹಸಿಲ್‍ನ ಗಡಿ ನಿಯಂತ್ರಣ ರೇಖೆಯ ಸಮೀಪದಲ್ಲಿರುವ ಬೋನಿಯಾರ್‍ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭಾರೀ ಹಿಮಾಪಾತದ ನಡುವೆಯೂ ಆಕೆಯನ್ನು ಸ್ಟ್ರೇಚರ್ ಮೂಲಕ ಸಾಗಿಸಿದ್ದಾರೆ.

    ಬೋನಿಯಾರ್ ತೆಹಸಿಲ್‍ನ ಗಡಿ ನಿಯಂತ್ರಣ ರೇಖೆಯ ಸಮೀಪದಲ್ಲಿರುವ ಘಗ್ಗರ್ ಹಿಲ್‍ನಲ್ಲಿರುವ ಭಾರತೀಯ ಸೇನಾ ಪೋಸ್ಟ್‌ಗೆ ಜನವರಿ 8 ರಂದು ಬೆಳಿಗ್ಗೆ 10.30ರ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿರುವ ಗರ್ಭಿಣಿ ಮಹಿಳೆಯನ್ನು ತುರ್ತು ವೈದ್ಯಕೀಯ ನೆರವು ಕೋರಿ ಸ್ಥಳೀಯರಿಂದ ಕರೆ ಬಂದಿದೆ. ಇದನ್ನೂ ಓದಿ: ಅಧಿಕಾರಿಯನ್ನು ಕೊಲ್ಲಲು ಸಂಚು ಮಾಡಿದ ಆಡಿಯೋ ಕ್ಲಿಪ್ ರಿಲೀಸ್ – ನಟ ದಿಲೀಪ್ ವಿರುದ್ಧ FIR

    ಕೂಡಲೇ ಸ್ಥಳಕ್ಕೆ ಆಗಮಿಸಿದ ಸೇನಾ ವೈದ್ಯಕೀಯ ತಂಡ ಗರ್ಭಿಣಿಯ ಆರೋಗ್ಯವನ್ನು ಪರಿಶೀಲಿಸಿದ ಬಳಿಕ ಸಂಕಷ್ಟದ ಸಮಯದಲ್ಲಿಯೂ ಗರ್ಭಿಣಿಯನ್ನು ಸ್ಥಳಾಂತರಿಸಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಇದನ್ನೂ ಓದಿ: 735 ಕೋಟಿ ರೂ. ಗೆ ನ್ಯೂಯಾರ್ಕ್‍ನಲ್ಲಿ ಐಷಾರಾಮಿ ಹೋಟೆಲ್ ಖರೀದಿಸಿದ ರಿಲಯನ್ಸ್

  • ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರ ಗುಂಡಿನ ದಾಳಿ – ಓರ್ವ ಸೈನಿಕ ಹುತಾತ್ಮ

    ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರ ಗುಂಡಿನ ದಾಳಿ – ಓರ್ವ ಸೈನಿಕ ಹುತಾತ್ಮ

    – ಮೂವರು ಸೈನಿಕರು ಗಂಭೀರ, ಓರ್ವ ನಾಗರಿಕ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಸ್ತು ತೀರುಗುತ್ತಿದ್ದ ಯೋಧರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಕೇಂದ್ರ ರಿಸರ್ವ್ ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಜವಾನ್ ಮತ್ತು ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರು ಸಿ.ಆರ್.ಪಿ.ಎಫ್ ಸೈನಿಕರು ಗಾಯಗೊಂಡಿದ್ದಾರೆ.

    ಶ್ರೀನಗರದಿಂದ 50 ಕಿ.ಮೀ ದೂರದಲ್ಲಿರುವ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ಸಿ.ಆರ್.ಪಿ.ಎಫ್ ಯೋಧರು ಗಸ್ತಿನಲ್ಲಿದ್ದರು. ಈ ವೇಳೆ ಯೋಧರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಯೋಧರು ಪ್ರತಿ ದಾಳಿ ಮಾಡಿದ್ದಾರೆ. ಆದರೆ ಉಗ್ರರು ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಈ ದಾಳಿಯಲ್ಲಿ ನಾಲ್ಕು ಸಿ.ಆರ್.ಪಿ.ಎಫ್ ಸೈನಿಕರು ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಆದರೆ ಅವರಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ಈ ವೇಳೆ ಸ್ಥಳದಲ್ಲಿ ಕಾರಿನಲ್ಲಿ ಕುಳಿತ್ತಿದ್ದ ಓರ್ವ ಹಿರಿಯ ನಾಗರಿಕ ಸಾವನ್ನಪ್ಪಿದ್ದಾರೆ. ಇವರ ಜೊತೆ ಕಾರಿನಲ್ಲಿ ಅವರ ಮೊಮ್ಮಗನು ಇದ್ದು ಆತನಿಗೆ ಚಿಕ್ಕಪುಟ್ಟ ಗಾಯಗಳಾಗಿ ಬದುಕುಳಿದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಕಾಶ್ಮೀರದ ಡಿಜಿಪಿ ದಿಲ್ಭಾಗ್ ಸಿಂಗ್ ಇಂದು ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೂರು ವರ್ಷದ ಓರ್ವ ಬಾಲಕನನ್ನು ಕಾಪಾಡಲಾಗಿದೆ. ಆದರೆ ನಮ್ಮ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಈಗ ಸ್ಥಳಕ್ಕೆ ಹೆಚ್ಚಿನ ಸೈನಿಕರು ಮತ್ತು ಪೊಲೀಸರನ್ನು ಕಳುಹಿಸಲಾಗಿದೆ. ಭಯೋತ್ಪಾದಕರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

  • ನಾವು ಪಾತ್ರಧಾರಿಗಳಷ್ಟೇ, ನಿಜವಾದ ಹೀರೋಗಳು ನೀವು: ಸೈನಿಕರಿಗೆ ಶ್ವೇತಾ ನಮನ

    ನಾವು ಪಾತ್ರಧಾರಿಗಳಷ್ಟೇ, ನಿಜವಾದ ಹೀರೋಗಳು ನೀವು: ಸೈನಿಕರಿಗೆ ಶ್ವೇತಾ ನಮನ

    ಬೆಂಗಳೂರು: ಪ್ರಾಣಕ್ಕೆ ಅಂಜದೇ ನಮ್ಮೆಲ್ಲರಿಗೋಸ್ಕರ ಹೋರಾಡುತ್ತಿರುವ ಯೋಧರೇ ನಿಜವಾದ ಹೀರೋಗಳು ಎಂದು ನಟಿ ಮತ್ತು ನಿರೂಪಕಿ ಶ್ವೇತಾ ಚಂಗಪ್ಪ ಅವರು ಹೇಳಿದ್ದಾರೆ.

    ಭಾರತ ಮತ್ತು ಚೀನಾ ಗಡಿ ಭಾಗದಲ್ಲಿ ಕುತಂತ್ರಿ ಚೀನಾ ತನ್ನ ನರಿ ಬುದ್ಧಿಯನ್ನು ತೋರುತ್ತಿದೆ. ಕಳೆದ ಸೋಮವಾರ ರಾತ್ರಿ ಚೀನಾ ಹಾಗೂ ಭಾರತೀಯ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಚೀನಾದ ಸೈನಿಕರ ಜೊತೆ ಕೆಚ್ಚೆದೆಯಿಂದ ಹೋರಾಡಿದ ನಮ್ಮ ಭಾರತೀಯ ಸೇನೆಯ 20 ಜನರ ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಹುತಾತ್ಮರಾಗಿದ್ದಕ್ಕೆ ಇಡೀ ದೇಶವವೇ ಕಂಬನಿ ಮಿಡಿದಿದೆ.

    https://www.instagram.com/p/CBkRRKEjoUU/

    ಈಗ ಈ ವಿಚಾರವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಶ್ವೇತಾ ಚಂಗಪ್ಪ. ದೇಶ ಕಾಯುವ ಯೋಧರೇ, ನೀವು ನಮ್ಮೆಲ್ಲರ ಜೀವನದ ನಿಜವಾದ ಹೀರೋಗಳು. ನಿಮ್ಮನ್ನು ಬಣ್ಣಿಸಲು ಪದಗಳು ಸಿಗುವುದಿಲ್ಲ. ಪರದೆಯ ಮೇಲೆ ಪಾತ್ರ ಮಾಡುವ ನಾವು ನಟ ನಟಿಯರು ಹಾಗೂ ಕೇವಲ ಪಾತ್ರಧಾರಿಗಳು ಅಷ್ಟೇ. ಆದರೆ ನೀವು ನಿಜವಾದ ಹೀರೋಗಳು ಎಂದು ಯೋಧರನ್ನು ಹಾಡಿಹೊಗಳಿದ್ದಾರೆ.

    ಜೊತೆಗೆ ನಿಮ್ಮ ಪ್ರಾಣಕ್ಕೆ ಅಂಜದೆ ನಮ್ಮ ದೇಶಕ್ಕಾಗಿ, ನಮ್ಮೆಲ್ಲರಿಗೋಸ್ಕರ ಹೋರಾಟ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಪ್ರತಿಯೊಬ್ಬ ಭಾರತೀಯ ಸೈನಿಕನಿಗೂ ನನ್ನ ಕೋಟಿ ಕೋಟಿ ನಮನ. ನಿಮ್ಮ ಬಲಿದಾನಕ್ಕೆ ನಾನು ಚಿರಋಣಿ. ಯುದ್ಧದಲ್ಲಿ ಅಮರರಾಗಿರುವ ಎಲ್ಲಾ ಯೋಧರ ಕುಟುಬದವರಿಗೆ ಆ ಭಗವಂತ ಹೆಚ್ಚಿನ ಶಕ್ತಿಯನ್ನೂ ಕೊಡಲಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಡಿರುವ ಶ್ವೇತಾ ಭಾರತೀಯ ಸೇನೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

    ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ 17 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 40ಕ್ಕೂ ಹೆಚ್ಚು ಮಂದಿ ಯೋಧರನ್ನು ಸೆದೆಬಡಿದಿದೆ. ಇದರಲ್ಲಿ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿತ್ತು.

  • ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ  – ಚೀನಾ ಪೈಶಾಚಿಕ ಕೃತ್ಯ ಬಯಲು

    ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

    ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ.

    ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ ತಂದಿದ್ದು, ಅದರ ಫೋಟೋ ಈಗ ವೈರಲ್‌ ಆಗಿದೆ.

    ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಪಡೆ ಸಹ ಈ ತಂತ್ರವನ್ನೇ ಅನುಸರಿಸುತ್ತದೆ. ವೀರ ಯೋಧರ ಮರಣೋತ್ತರ ಪರೀಕ್ಷೆಯಲ್ಲೂ ದೇಹದ ಮೇಲೆ ಗಂಭೀರ ಗಾಯ ಇರುವುದು ದೃಢಪಟ್ಟಿದೆ.

    ಘಟನೆ ಹೇಗಾಯ್ತು?
    ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್‌ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

    ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

    ಗನ್‌ ಫೈರ್‌ ಮಾಡುವಂತಿಲ್ಲ:
    ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

    1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

    ಭಾರತ ಹೇಳಿದ್ದು ಏನು?
    ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

    ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

    ಚೀನಾ ಹೇಳಿದ್ದು ಏನು?
    ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

  • ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಿ ಕೃಷಿ ಚಟುವಟಿಕೆ

    ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಿ ಕೃಷಿ ಚಟುವಟಿಕೆ

    ಶ್ರೀನಗರ: ಪಾಕಿಸ್ತಾನದ ಗಡಿ ಭಾಗದ ಭಾರತೀಯ ರೈತರು ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಿ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ.

    ನೆರೆಯ ಪಾಕಿಸ್ತಾನ ಪದೇ ಪದೇ ಕದಲ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಗಡಿಗೆ ಹೊಂದಿಕೊಂಡಂತೆ ಜಮೀನಿಗೆ ತೆರಳಲು ರೈತರು ಭಯಪಡುವಂತಾಗಿತ್ತು. ಹಾಗಾಗಿ ಸಾಂಬಾ ಸೆಕ್ಟರ್ ವ್ಯಾಪ್ತಿಯಲ್ಲಿ ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಲಾಗುತ್ತಿದೆ.

    ರೈತರು ಕೃಷಿ ಚಟುವಟಿಕೆ ನಡೆಸುವ ವೇಳೆ ಬಿಎಸ್‍ಎಫ್ ಯೋಧರು ಸಹ ರಕ್ಷಣೆ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಫೋಟೋಗಳು ಹರಿದಾಡುತ್ತಿವೆ. ರಕ್ಷಣೆ ನೀಡಿರುವ ಯೋಧರಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

  • ಪಾಕ್ ಮಹಿಳಾ ಅಧಿಕಾರಿಯಿಂದ ಹನಿಟ್ರ್ಯಾಪ್ – ಇಬ್ಬರು ಯೋಧರು ಅರೆಸ್ಟ್

    ಪಾಕ್ ಮಹಿಳಾ ಅಧಿಕಾರಿಯಿಂದ ಹನಿಟ್ರ್ಯಾಪ್ – ಇಬ್ಬರು ಯೋಧರು ಅರೆಸ್ಟ್

    ಜೈಪುರ: ಪಾಕಿಸ್ತಾನದ ಐಎಸ್‌ಐ ಮಹಿಳಾ ಅಧಿಕಾರಿಯೊಬ್ಬಳ ಹನಿಟ್ರ್ಯಾಪ್ ಗೆ ಒಳಗಾಗಿ ಭಾರತೀಯ ಸೇನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಇಬ್ಬರು ಸೈನಿಕರನ್ನು ರಾಜಸ್ಥಾನದಲ್ಲಿ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಈ ಇಬ್ಬರು ಸೈನಿಕರನ್ನು ಮಧ್ಯಪ್ರದೇಶದ ಲ್ಯಾನ್ಸ್ ನಾಯಕ್ ರವಿವರ್ಮಾ ಮತ್ತು ಇನ್ನೊಬ್ಬರನ್ನು ಅಸ್ಸಾಂ ಮೂಲದ ವಿಚಿತಾ ಬೊಹ್ರಾ ಎಂದು ಗುರುತಿಸಲಾಗಿದೆ. ಈ ಇಬ್ಬರು ಸೈನಿಕರು ಪಾಕಿಸ್ತಾನಿ ಐಎಸ್‌ಐ ಅಧಿಕಾರಿಯನ್ನು ಭಾರತೀಯ ಮಹಿಳೆ ಎಂದು ತಿಳಿದು ಭಾರತೀಯ ಸೇನೆಯ ಪ್ರಮುಖ ಮಾಹಿತಿ ಮತ್ತು ಫೋಟೋಗಳನ್ನು ಕಳುಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಪಾಕ್‌ನ ಐಎಸ್‌ಐ ಅಧಿಕಾರಿಯೊಬ್ಬಳು ನಾನು ಪಂಜಾಬ್ ಮೂಲದ ಮಹಿಳೆ ಎಂದು ಹೇಳಿಕೊಂಡು ಪಾಕ್ ನಂಬರಿನಿಂದ ವಾಯ್ಸ್ ಓವರ್ ಇಂಟರ್ನೆಟ್ ಪ್ರೋಟೋಕಾಲ್ ಮೂಲಕ ಈ ಇಬ್ಬರು ಸೈನಿಕರಿಗೆ ಕರೆ ಮಾಡಿದ್ದಾಳೆ. ಪ್ರೋಟೋಕಾಲ್ ಮೂಲಕ ಕರೆ ಮಾಡಿದ ಕಾರಣ ಅದು ಇಂಡಿಯಾ ನಂಬರ್ ರೀತಿ ಕಾಣಿಸಿದೆ. ಇದನ್ನು ನಂಬಿದ ಸೈನಿಕರು ನಮ್ಮ ದೇಶದ ಸೇನೆಯ ಕೆಲ ಪ್ರಮುಖ ಮಾಹಿತಿ ಮತ್ತು ಕೆಲ ಗನ್‌ಗಳ ಫೋಟೋ ಗಳನ್ನು ವಾಟ್ಸಪ್ ಮತ್ತು ಫೇಸ್‌ಬುಕ್ ಮೂಲಕ ಕಳುಹಿಸಿದ್ದಾರೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

    ಸೈನಿಕರು ರಾಜಸ್ಥಾನದ ಪೋಖ್ರಾನ್ ಅಲ್ಲಿ ಕೆಲಸ ಮಾಡುತ್ತಿದ್ದು, ಈ ಜಾಗದಿಂದ ಸೇನಾ ಮಾಹಿತಿಗಳು ಸೋರಿಕೆ ಆಗುತ್ತಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿಯನ್ನು ಬೆನ್ನತ್ತಿದ ಸಿಬಿಐ ಮತ್ತು ಐಬಿ ತಂಡದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮಾಡಿ ಜೋಧಪುರದ ರೈಲು ನಿಲ್ದಾಣದಲ್ಲಿ ಈ ಇಬ್ಬರು ಸೈನಿಕರನ್ನು ಬಂಧಿಸಿದ್ದಾರೆ.

    ಈ ಇಬ್ಬರು ಅಧಿಕಾರಿಗಳು ಹನಿಟ್ರ್ಯಾಪ್ ಗೆ ಒಳಗಾಗಿದ್ದು, ಪಾಕ್ ಅಧಿಕಾರಿಯನ್ನು ಭಾರತೀಯ ಮಹಿಳೆ ಎಂದು ತಿಳಿದು ಮಾಹಿತಿಯನ್ನು ಶೇರ್ ಮಾಡಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೋಧಪುರದ ರೈಲ್ವೇ ನಿಲ್ದಾಣದಲ್ಲಿ ಊರಿಗೆ ಹೋಗುತ್ತಿದ್ದ ಸೈನಿಕರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಜೈಪುರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.