Tag: Indian Student

  • ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ – ವ್ಯಕ್ತಿ ಬಂಧನ

    ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ – ವ್ಯಕ್ತಿ ಬಂಧನ

    ಒಟ್ಟಾವಾ: ಕೆನಡಾದಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಥಮ ದರ್ಜೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಒಂಟಾರಿಯೊದ ನಯಾಗರಾ ಜಲಪಾತದಲ್ಲಿ ಜೆರ್ಡೈನ್ ಫೋಸ್ಟರ್ (32) ಎಂಬಾತನನ್ನು ಬಂಧಿಸಿದ ಹ್ಯಾಮಿಲ್ಟನ್ ಪೊಲೀಸರು, ಆತನ ಮೇಲೆ ಮೂರು ಕೊಲೆ ಯತ್ನದ ಆರೋಪ ಹೊರಿಸಿದ್ದಾರೆ ಎಂದು ಆಕ್ಟಿಂಗ್ ಡೆಟೆಕ್ಟಿವ್-ಸಾರ್ಜೆಂಟ್ ಡ್ಯಾರಿಲ್ ರೀಡ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

    ಮೊಹಾಕ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ರಾಂಧವಾ, ಏಪ್ರಿಲ್ 17 ರಂದು ಅಪ್ಪರ್ ಜೇಮ್ಸ್ ಸ್ಟ್ರೀಟ್ ಮತ್ತು ಸೌತ್ ಬೆಂಡ್ ರಸ್ತೆಯ ಡಿವೈಡರ್‌ನಲ್ಲಿ ಬಸ್ ನಿಲ್ದಾಣದ ಬಳಿ ನಿಂತಿದ್ದಳು. ಈ ವೇಳೆ, ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.

    ನಾಲ್ಕು ಕಾರುಗಳಲ್ಲಿದ್ದ ಏಳು ಮಂದಿ ಪರಸ್ಪರ ಜಗಳಕ್ಕಿಳಿದಿದ್ದರು. ಈ ವೇಳೆ ಪರಸ್ಪರರ ನಡುವೆ ಗುಂಡಿನ ದಾಳಿ ನಡೆಯಿತು. ಆಗ ತಪ್ಪಿ ಬಂದ ಗುಂಡೊಂದು ವಿದ್ಯಾರ್ಥಿನಿಗೆ ತಗುಲಿತ್ತು. ತನಿಖೆ ಮುಂದುವರೆದಿದ್ದು, ಈ ಸಾವಿಗೆ ಕಾರಣರಾದ ಎಲ್ಲಾ ಆರೋಪಿಗಳನ್ನೂ ಗುರುತಿಸಲಾಗಿದೆ.

  • ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

    ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

    ಹ್ಯಾಮಿಲ್ಟನ್: ಕೆನಡಾದ (Canada) ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ (Hamilton) ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ (Indian Student) ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ (Harsimrat Randhawa) ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಜನಿವಾರ ಕತ್ತರಿಸಿದ್ದು ಬಹಳ ದೊಡ್ಡ ತಪ್ಪು: ಪರಮೇಶ್ವರ್

    ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ತಂಡವೊಂದು ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ಟೆಂಟ್‌ ಸಾಮಗ್ರಿ ಪೂರೈಸುತ್ತಿದ್ದ ಕಂಪನಿಯ ಗೊಡೋನ್​ನಲ್ಲಿ ಅಗ್ನಿ ದುರಂತ

    ಕೆನಡಾದ ಭಾರತೀಯ ದೂತಾವಾಸವು ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸಂಪರ್ಕ ಸಾಧಿಸಿ ಸೂಕ್ತ ಸಹಾಯವನ್ನು ಒದಗಿಸುವುದಾಗಿ ತಿಳಿಸಿದೆ. ಈ ಘಟನೆಯಿಂದಾಗಿ ಕೆನಡಾದ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಮೂಡಿದ್ದು, ಸ್ಥಳೀಯ ಆಡಳಿತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸುವ ಭರವಸೆ ನೀಡಿದೆ. ಇದನ್ನೂ ಓದಿ: ಬಿರುಗಾಳಿ ಸಹಿತ ಮಳೆ – ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತ ಸಾವು

  • ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    ಕೆನಡಾ: 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು (Indian Origin Student) ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೆನಡಾದ  (Canada) ಎಡ್ಮಂಟನ್‌ನ (Edmonton) ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

    ಸೆಕ್ಯೂರಿಟಿ ಗಾರ್ಡ್ ಆಗಿಯೂ ಕೆಲಸ ಮಾಡುತ್ತಿದ್ದ ಹರ್ಷನದೀಪ್ ಸಿಂಗ್‌ನನ್ನು ಶುಕ್ರವಾರ ಮಧ್ಯರಾತ್ರಿ 12:30ರ ಸುಮಾರಿಗೆ ಶೂಟೌಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ಮು ಇವಾನ್ ರೈನ್ ಮತ್ತು ಜುಡಿತ್ ಸಾಲ್ಟ್ಯಾಕ್ಸ್ ಎಂದು ಗುರುತಿಸಲಾಗಿದೆ. ಮೂವರು ಸದಸ್ಯರ ಗ್ಯಾಂಗ್ ಹರ್ಷನದೀಪ್‌ಗೆ ಗುಂಡಿಕ್ಕಿ ಹತ್ಯೆಗೈಯ್ಯುವ ದೃಶ್ಯ ಸಿಸಿಟಿವಿ ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು – ಭಯಕ್ಕೆ ತೋಟದ ಕಡೆ ತೆರಳದ ಕಾರ್ಮಿಕರು

    ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹರ್ಷನದೀಪ್ ಸಿಂಗ್‌ನನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಹರ್ಷನದೀಪ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ಸೋಮವಾರ ನಿಗದಿಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್‌ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ

  • ಬ್ಲೂ ವೇಲ್‌ ಚಾಲೆಂಜ್‌ಗೆ ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಬಲಿ

    ಬ್ಲೂ ವೇಲ್‌ ಚಾಲೆಂಜ್‌ಗೆ ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಬಲಿ

    ವಾಷಿಂಗ್ಟನ್: ಬ್ಲೂ ವೇಲ್‌ ಚಾಲೆಂಜ್‌ (Blue Whale) ಎಂಬ ಆನ್‌ಲೈನ್‌ ಆಟಕ್ಕೆ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಬಲಿಯಾಗಿದ್ದಾನೆ.

    ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಓದುತ್ತಿದ್ದ. ಮಾರ್ಚ್ 8 ರಂದು ಶವವಾಗಿ ಪತ್ತೆಯಾಗಿದ್ದಾನೆ. ಬ್ರಿಸ್ಟಲ್ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿಯ ವಕ್ತಾರ ಗ್ರೆಗ್ ಮಿಲಿಯೊಟ್, ಇದು ಆತ್ಮಹತ್ಯೆ ಎಂದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

    ವಿದ್ಯಾರ್ಥಿ ಸಾವು ಕೊಲೆ ಎಂದು ವರದಿಯಾಗಿದೆ. ವರದಿಯಲ್ಲಿ ಆತ ಬೋಸ್ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದ ಎಂದು ತಪ್ಪಾಗಿ ಗುರುತಿಸಲಾಗಿದೆ. ವಿದ್ಯಾರ್ಥಿ ದರೋಡೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಕಾಡಿನಲ್ಲಿ ಕಾರಿನಲ್ಲಿ ಆತನ ಶವ ಪತ್ತೆಯಾಗಿದೆ.

    ವಿದ್ಯಾರ್ಥಿ ಆನ್‌ಲೈನ್‌ ಆಟ ಬ್ಲೂವೇಲ್‌ಗೆ ದಾಸನಾಗಿದ್ದ ಎನ್ನಲಾಗಿದೆ. ಆಟದ ಭಾಗವಾಗಿ ವಿದ್ಯಾರ್ಥಿ 2 ನಿಮಿಷಗಳ ಕಾಲ ಉಸಿರನ್ನು ಬಿಗಿಹಿಡಿದುಕೊಂಡಿದ್ದ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಗೇಮ್‌ನ್ನು ನಿಷೇಧಿಸಲು ಭಾರತ ಸರ್ಕಾರ ಮುಂದಾಗಿತ್ತು. ಇದನ್ನೂ ಓದಿ: ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ

    ಬ್ಲೂ ವೇಲ್ ಗೇಮ್ (ಆತ್ಮಹತ್ಯೆ ಆಟ) ಆತ್ಮಹತ್ಯೆಗೆ ಪ್ರಚೋದನೆಯಾಗಿದೆ ಎಂದು ಐಟಿ ಸಚಿವಾಲಯವು 2017 ರಲ್ಲಿ ನೀಡಿದ ಸಲಹೆಯಲ್ಲಿ ಹೇಳಿದೆ.

  • ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು – ಈ ವರ್ಷದಲ್ಲಿ 10ನೇ ಪ್ರಕರಣ

    ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು – ಈ ವರ್ಷದಲ್ಲಿ 10ನೇ ಪ್ರಕರಣ

    ವಾಷಿಂಗ್ಟನ್: ಅಮೆರಿಕದಲ್ಲಿ (America) ಭಾರತೀಯ ವಿದ್ಯಾರ್ಥಿಗಳ (Indian Student) ಅನುಮಾನಾಸ್ಪದ ಸಾವಿನ ಸರಣಿ ಮುಂದುವರೆದಿದ್ದು, ಓಹಿಯೋದ ಕ್ಲೀವ್‍ಲ್ಯಾಂಡ್ ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‍ನಲ್ಲಿರುವ (New York) ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

    ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಆಕೆ ಓಹಿಯೋದ ಕ್ಲೀವ್‍ಲ್ಯಾಂಡ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯ ಸಾವಿನ ಬಗ್ಗೆ ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ. ಅಲ್ಲದೇ ಮೃತದೇಹವನ್ನು ಭಾರತಕ್ಕೆ ಸಾಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್‌ ಸಿಂಗ್‌

    ಈ ಘಟನೆಯು ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲಿನ ದಾಳಿಯ ಸರಣಿಯ ಮತ್ತೊಂದು ಹೆಜ್ಜೆಯಾಗಿದೆ. ಅಲ್ಲದೇ ಮಾರ್ಚ್‍ನಲ್ಲಿ ಮೊಹಮ್ಮದ್ ಅಬ್ದುಲ್ ಅರಾಫತ್, ನಿಗೂಢವಾಗಿ ಕ್ಲೀವ್‍ಲ್ಯಾಂಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ನಂತರ ಆತನ ಕುಟುಂಬಕ್ಕೆ ಆತನ ಬಿಡುಗಡೆಗೆ ಹಣ ನೀಡುವಂತೆ ಸುಲಿಗೆ ಕರೆ ಬಂದಿತ್ತು.

    ಈ ವರ್ಷದ ಆರಂಭದಲ್ಲಿ, ಹೈದರಾಬಾದ್‍ನ ವಿದ್ಯಾರ್ಥಿ ಸೈಯದ್ ಮಜಾಹಿರ್ ಅಲಿ ಮೇಲೆ ಚಿಕಾಗೋದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಲಾಗಿತ್ತು. ಬಳಿಕ ಚಿಕಾಗೋದಲ್ಲಿರುವ ಭಾರತೀಯ ದೂತಾವಾಸವು ತಕ್ಷಣವೇ ಮಧ್ಯಪ್ರವೇಶಿಸಿ ಅಲಿ ಮತ್ತು ಅವರ ಕುಟುಂಬಕ್ಕೆ ನೆರವು ನೀಡಿತ್ತು. ಇದರೊಂದಿಗೆ ಇಂಡಿಯಾನಾದ ಪಡ್ರ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಸಾವು ಮತ್ತು ಜಾರ್ಜಿಯಾದಲ್ಲಿ ವಿವೇಕ್ ಸೈನಿಯ ಕ್ರೂರ ಹತ್ಯೆ ಸಹ ನಡೆದಿತ್ತು.

    2024ರ ಆರಂಭದಿಂದ, ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ 10 ಸಾವುಗಳು ಸಂಭವಿಸಿವೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಮಪತ್ರ ತಿರಸ್ಕೃತ – ನ್ಯಾಯಾಂಗ ತನಿಖೆಗೆ ಒತ್ತಾಯ

  • ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಯುಎಸ್ ನಿರಾಶ್ರಿತ ವ್ಯಕ್ತಿ!

    ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಯುಎಸ್ ನಿರಾಶ್ರಿತ ವ್ಯಕ್ತಿ!

    ವಾಷಿಂಗ್ಟನ್: ಯುಎಸ್ (US) ಮೂಲದ ನಿರಾಶ್ರಿತ ವ್ಯಕ್ತಿಗೆ ಆಶ್ರಯ (Shelter) ನೀಡಿದ ಭಾರತದ ವಿದ್ಯಾರ್ಥಿಯನ್ನು (Indian Student) ಕೊಲೆ ಮಾಡಿರುವ ಘಟನೆ ಯುಎಸ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ವಿವೇಕ್ ಸೈನಿ (25) ಮೃತ ಭಾರತೀಯ ವಿದ್ಯಾರ್ಥಿ. ತಾನು ಮನೆಗೆ ಹೋಗುವ ಹಿನ್ನೆಲೆ ಬೇರೆ ಕಡೆ ಹೋಗು ಎಂದಿದ್ದಕ್ಕೆ ನಿರಾಶ್ರಿತ ವ್ಯಕ್ತಿ ಅಮೆರಿಕದ ಜಾರ್ಜಿಯಾದಲ್ಲಿನ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಸುತ್ತಿಗೆಯಿಂದ ಹೊಡೆದು ದಾರುಣವಾಗಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    ನಡೆದಿದ್ದೇನು?: ವಿವೇಕ್ ಯುಎಸ್‌ನಲ್ಲಿ ವಿದ್ಯಾರ್ಥಿಯಾಗಿದ್ದು, ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದರು. ಈ ವೇಳೆ ಸೈನಿ ಸೇರಿದಂತೆ ಫುಡ್ ಮಾರ್ಟ್ನಲ್ಲಿನ ಉದ್ಯೋಗಿಗಳು ಜೂಲಿಯನ್ ಫಾಕ್ನರ್ ಎಂಬ ನಿರಾಶ್ರಿತ ವ್ಯಕ್ತಿಗೆ ಆಹಾರ ಮತ್ತು ಅಶ್ರಯ ನೀಡುತ್ತಿದ್ದರು. ಇದನ್ನೂ ಓದಿ: ಸೆಕ್ಸ್‌ಗೆ ಒತ್ತಾಯಿಸಿದ ಪತಿಯ ಮರ್ಮಾಂಗವನ್ನೇ ಕಚ್ಚಿ ಗಾಯಗೊಳಿಸಿದಳು!

    ಆರೋಪಿ ಮೊದಲು ಚಿಪ್ಸ್ ಮತ್ತು ಕೋಕ್‌ನ್ನು ಕೇಳಿದ್ದು, ಅದನ್ನು ನೀಡಿದ್ದಾರೆ. ನಂತರ ಹೊದಿಕೆ ಕೇಳಿದ್ದಾನೆ. ಅವರ ಬಳಿ ಹೊದಿಕೆ ಇಲ್ಲ ಎಂದು ಹೇಳಿ ಜಾಕೆಟ್ ನೀಡಿದ್ದರು. ಹಾಗೆಯೇ ಸಿಗರೇಟ್, ನೀರು ಮತ್ತು ಎಲ್ಲವನ್ನು ಕೇಳುತ್ತಾ ಒಳಗೆ, ಹೊರಗೆ ನಡೆಯುತ್ತಿದ್ದನು. ನಿತ್ಯವೂ ಅಲ್ಲಿಯೇ ಕುಳಿತಿರುತ್ತಿದ್ದನು. ಚಳಿ ಇದ್ದ ಪರಿಣಾಮ ಆರೋಪಿಯನ್ನು ಹೊರಗೆ ಹೋಗುವಂತೆ ಹೇಳಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ʻJEE ಮಾಡೋಕಾಗಲ್ಲ, ನಾನು ಕೆಟ್ಟ ಮಗಳು, ಇದೇ ನನ್ನ ಕೊನೇ ಆಯ್ಕೆʼ – ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ!

    ರಾತ್ರಿ ಸೈನಿ ಮನೆಗೆ ಹೋಗುವ ಹಿನ್ನೆಲೆಯಲ್ಲಿ ಆರೋಪಿಗೆ ಅಲ್ಲಿಂದ ಹೋಗುವಂತೆ ಹೇಳಿದ್ದಾನೆ. ಅವನ್ನು ಹೋಗದೆ ಇದಲ್ಲಿ ಪೊಲೀಸರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಕೋಪಗೊಂಡ ಆರೋಪಿ, ಸೈನಿ ಅವರಿಗೆ ಸುತ್ತಿಗೆಯಿಂದ ಸುಮಾರು 5ಂ ಬಾರಿ ತಲೆ ಹಾಗೂ ಮುಖದ ಮೇಲೆ ಹೊಡೆದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

    ಸೈನಿಗೆ ತೀವ್ರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂತರ ಘಟನೆ ಕುರಿತು ಪೊಲೀಸರಿಗೆ ರಾತ್ರಿ 12:30 ಡೆಕಾಲ್ಬ್ ಕೌಂಟಿ ಪೊಲೀಸರಿಗೆ ಮಾಹಿತಿ ತಿಳಿದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪಕ್ಕದ ಸ್ಟೋರ್ ಗುಮಾಸ್ತನಿಂದ ಘಟನೆ ಬಗ್ಗೆ ತಿಳಿದು ಅಲ್ಲೇ ಸುತ್ತಿಗೆ ಹಿಡಿದು ನಿಂತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುತ್ತಿಗೆ ಮತ್ತು ಎರಡು ಚಾಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

  • MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    ರೋಮ್:‌ ಭಾರತೀಯ ವಿದ್ಯಾರ್ಥಿಯೊಬ್ಬ (Indian Student) ಇಟಲಿಯಲ್ಲಿ (Italy) ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಇದೀಗ ಆತನ ಕುಟುಂಬದವರು ಸರ್ಕಾರದ ನೆರವು ಬಯಸಿದ್ದಾರೆ.

    ಮೃತನನ್ನು ರಾಮ್‌ ರಾವತ್‌ ಎಂದು ಗುರುತಿಸಲಾಗಿದ್ದು, ಈತ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ನಿವಾಸಿ. ಪೊಲೀಸರ ಪ್ರಕಾರ, ರಾವುತ್ ಎಂಬಿಎ (MBA) ಓದಲು ಇಟಲಿಗೆ ಹೋಗಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ರಾವುತ್ ಅವರ ಪೋಷಕರು ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.

    ಪೋಷಕರು ಮಾಡಿದ ಕರೆಯನ್ನು ರಾವತ್‌ ಸ್ವೀಕರಿಸಲಿಲ್ಲ. ಹೀಗಾಗಿ ಸಂಶಯಗೊಂಡ ಅವರು ವಸತಿಗೃಹದ ಮಾಲೀಕರನ್ನು ಸಂಪರ್ಕಿಸಿದರು. ಈ ವೇಳೆ ಅವರು ಮತ್ತೊಂದು ಮನೆಯ ವಾಶ್ ರೂಂನಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

    ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಪೋಷಕರು ಕಂಗಾಲಾಗಿದ್ದಾರೆ. ಅಲ್ಲದೇ ಆತನ ಮೃತದೇಹವನ್ನು ಭಾರತಕ್ಕೆ (India) ಕರೆತರಲು ಜಾರ್ಖಂಡ್‌ನ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಸಂಪರ್ಕಿಸಿ ಮನವಿ ಮಾಡಿಕೊಂಡಿದ್ದಾರೆ.

    ಘಟನೆಯ ಕುರಿತು ಮಾತನಾಡಿದ ಪಶ್ಚಿಮ ಸಿಂಗ್‌ಭೂಮ್‌ನ ಡೆಪ್ಯೂಟಿ ಕಮಿಷನರ್ ಅನನ್ಯ ಮಿತ್ತಲ್, ರಾಮ್ ರಾವತ್ ಸಾವಿನ ಬಗ್ಗೆ ನನಗೆ ಮಾಹಿತಿ ಬಂದಿದೆ. ಅಗತ್ಯ ಕ್ರಮಕ್ಕಾಗಿ ಗೃಹ ಇಲಾಖೆ ಮತ್ತು ಜಾರ್ಖಂಡ್‌ನ ವಲಸೆ ಸೆಲ್‌ಗೆ ತಿಳಿಸಲಾಗಿದೆ ಎಂದು ಹೇಳಿದರು.

    ಪ್ರಕರಣದ ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ಇಡುತ್ತಿದ್ದೇನೆ. ರಾಮ್‌ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮಿತ್ತಲ್ ಹೇಳಿದ್ದಾರೆ.

  • ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

    ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

    ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಮಿತ್‌ಕುಮಾರ್ ಪಟೇಲ್ ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ಆಗಮಿಸಿದ್ದು, ನವೆಂಬರ್ 17 ರಂದು ನಾಪತ್ತೆಯಾಗಿದ್ದ. ಮೆಟ್ರೋಪಾಲಿಟನ್ ಪೊಲೀಸರು ನವೆಂಬರ್ 21 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಈತನ ದೇಹವನ್ನು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: 2028 ರಲ್ಲಿ ಭಾರತದಲ್ಲಿ COP33 ಶೃಂಗಸಭೆ ಆಯೋಜನೆ – ಪ್ರಧಾನಿ ಮೋದಿ ಪ್ರಸ್ತಾಪ

    ಪಟೇಲ್‌ ರೈತ ಕುಟುಂಬಕ್ಕೆ ಸೇರಿದಾತ. ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದ. ನವೆಂಬರ್ 17, 2023 ರಿಂದ ನಾಪತ್ತೆಯಾಗಿದ್ದ. ಈಗ ನವೆಂಬರ್ 21 ರಂದು ಪೊಲೀಸರು ಕ್ಯಾನರಿ ವಾರ್ಫ್‌ನಿಂದ ನೀರಿನಲ್ಲಿ ಆತನ ಮೃತದೇಹ ಹೊರತೆಗೆದಿದ್ದಾರೆ. ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು ಆತನ ದೇಹವನ್ನು ಭಾರತಕ್ಕೆ ಕಳುಹಿಸಲು ನಿಧಿ ಸಂಗ್ರಹಿಸಲು ನಿರ್ಧರಿಸಿದ್ದೇವೆ ಎಂದು ಸಂಬಂಧಿ ಪಾರ್ಥ್‌ ಪಟೇಲ್‌ ತಿಳಿಸಿದ್ದಾರೆ.

    ಈವ್ನಿಂಗ್ ಸ್ಟ್ಯಾಂಡರ್ಡ್ ಪತ್ರಿಕೆಯ ಪ್ರಕಾರ, ವಿದ್ಯಾರ್ಥಿಯು ನವೆಂಬರ್ 20 ರಂದು ಶೆಫೀಲ್ಡ್ ಹಾಲಮ್ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾಭ್ಯಾಸ ಆರಂಭಿಸಿದ್ದ. ಜೊತೆಗೆ ಅಮೆಜಾನ್‌ನಲ್ಲಿ ಅರೆಕಾಲಿಕ ಉದ್ಯೋಗ ಪ್ರಾರಂಭಿಸುವ ಯೋಜಿಸಿದ್ದ. ಇದನ್ನೂ ಓದಿ: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್‌ ಕರೆ

  • ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

    ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

    ವಾಷಿಂಗ್ಟನ್‌: ಕಾರಿನಲ್ಲಿದ್ದ ಭಾರತೀಯ ಮೂಲದ ಡಾಕ್ಟರೇಟ್‌ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.

    ಆದಿತ್ಯ ಅದ್ಲಾಖಾ (26) ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದರು. ಅವರನ್ನು ಯುಎಸ್ ರಾಜ್ಯದ ಓಹಿಯೋದಲ್ಲಿ ಕೊಲೆ ಮಾಡಲಾಗಿದೆ.

    ಈ ತಿಂಗಳ ಆರಂಭದಲ್ಲೇ ಆದಿತ್ಯನ ಹತ್ಯೆಯಾಗಿದೆ. ನವೆಂಬರ್ 9 ರಂದು ಸಿನ್ಸಿನಾಟಿ ಪೊಲೀಸ್ ಲೆಫ್ಟಿನೆಂಟ್ ಜೊನಾಥನ್ ಕನ್ನಿಂಗ್ಹ್ಯಾಮ್ ವೆಸ್ಟರ್ನ್ ಹಿಲ್ಸ್ ವಯಾಡಕ್ಟ್‌ನ ಮೇಲಿನ ಡೆಕ್‌ನಲ್ಲಿ ಗೋಡೆಗೆ ಅಪ್ಪಳಿಸಿದ ವಾಹನದೊಳಗೆ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಅಧಿಕಾರಿಗಳು ಗುರುತಿಸಿದ್ದರು.

    ಅಂದು ಬೆಳಗ್ಗೆ 6:20 ರ ಸುಮಾರಿಗೆ ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆದಿತ್ಯ ಅದ್ಲಾಖಾ ಅವರನ್ನು ಯುಸಿ ಮೆಡಿಕಲ್ ಸೆಂಟರ್‌ಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಎರಡು ದಿನಗಳ ನಂತರ ಆದಿತ್ಯ ಮೃತಪಟ್ಟಿದ್ದಾನೆ.

    ಗುಂಡಿನ ದಾಳಿ ವರದಿಯಾದಾಗಿನಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಆದಿತ್ಯ ಅದ್ಲಾಖಾ ತನ್ನ ವೈದ್ಯಕೀಯ ಶಿಕ್ಷಣಕ್ಕಾಗಿ ಉತ್ತರ ಭಾರತದಿಂದ ಅಮೆರಿಕದ ಸಿನ್ಸಿನಾಟಿಗೆ ಹೋಗಿದ್ದರು. ಇದಕ್ಕೂ ಮೊದಲು ನವದೆಹಲಿಯ ರಾಮಜಾಸ್ ಕಾಲೇಜಿನಲ್ಲಿ 2018 ರಲ್ಲಿ ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 2020 ರಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಶರೀರಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು.

  • ಭಾರತೀಯ ಮೂಲದ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣದಿಂದ ವಿಚಲಿತರಾಗಿದ್ದೇವೆ: ಯುಎಸ್

    ಭಾರತೀಯ ಮೂಲದ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣದಿಂದ ವಿಚಲಿತರಾಗಿದ್ದೇವೆ: ಯುಎಸ್

    ವಾಷಿಂಗ್ಟನ್: ಇಂಡಿಯಾನಾ ರಾಜ್ಯದ ಜಿಮ್‍ನಲ್ಲಿ (Gym) 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಚೂರಿ ಇರಿದ ಘಟನೆ ವಿಚಲಿತರಾಗುವಂತೆ ಮಾಡಿದೆ. ಅಲ್ಲದೆ ಪ್ರಸ್ತುತ ಸ್ಥಿತಿ ಗಂಭೀರವಾಗಿದೆ ಎಂದು ಯುಎಸ್  ಹೇಳಿದೆ.

    ವರುಣ್ ರಾಜ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅಮೆರಿಕ (America) ಹಾರೈಸಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಘಟನೆಯ ಬಳಿಕ ದಾಳಿಕೋರ ಆಂಡ್ರೇಡ್ ಅನ್ನು ಬಂಧಿಸಲಾಗಿದೆ. ಜೊತೆಗೆ ದಾಳಿಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ.

    ಘಟನೆ ಸಂಬಂಧ ಸ್ಟೇಟ್ ಡಿಪಾರ್ಟ್‌ ಮೆಂಟ್ ವಕ್ತಾರರು ಪ್ರತಿಕ್ರಿಯಿಸಿ, ಭಾರತೀಯ ಪದವೀಧರ ವಿದ್ಯಾರ್ಥಿ ವರುಣ್ ರಾಜ್ (Varun Raj) ವಿರುದ್ಧದ ಕ್ರೂರ ದಾಳಿಯ ವರದಿಗಳಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ಅವರು ಆದಷ್ಟು ಬೇಗ ಸಂಪೂರ್ಣ ಚೇತರಿಸಿಕೊಳ್ಳುವಂತಾಗಲಿ ಎಂದು ನಾವು ಬಯಸುತ್ತೇವೆ ತಿಳಿಸಿದ್ದಾರೆ. ಇದನ್ನೂ ಓದಿ: World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    ಅಕ್ಟೋಬರ್ 29ರಂದು ಜಿಮ್‍ನಲ್ಲಿ ಪಿ. ವರುಣ್ ರಾಜ್ ಎಂಬ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯನ್ನು ಜೋರ್ಡಾನ್ ಆಂಡ್ರೇಡ್ (24) ಎಂಬಾತ ಚಾಕುವಿನಿಂದ ಇರಿದಿದ್ದನು. ಈ ದಾಳಿ ಯಾಕೆ ನಡೆಯಿತು?, ಇದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

    ಗಂಭೀರ ಸ್ವರೂಪದ ಗಾಯಗಳಾಗಿರುವ ಕಾರಣ ವರುಣ್ ರಾಜ್ ಅವರನ್ನು ಫೋರ್ಟ್ ವೇನ್‍ನಲ್ಲಿರುವ ಲುಥೆರನ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಮೂರು ದಿನಗಳ ಚಿಕಿತ್ಸೆಯ ನಂತರ, ವರುಣ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಶಾಶ್ವತ ಅಂಗವೈಕಲ್ಯವನ್ನು ಹೊಂದುವ ಸಾಧ್ಯತೆಯಿದೆ ಮತ್ತು ಭಾಗಶಃ, ಪೂರ್ಣವಾಗಿಲ್ಲದಿದ್ದರೆ, ದೃಷ್ಟಿ ನಷ್ಟ ಮತ್ತು ಎಡಭಾಗದ ದೌರ್ಬಲ್ಯವನ್ನು ಹೊಂದಿರುತ್ತಾರೆ ಎಂಬುದಾಗಿ ವರದಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]