Tag: Indian Womens Team

  • Kho Kho World Cup | ಭಾರತಕ್ಕೆ ಡಬಲ್‌ ಧಮಾಕ – ಮಹಿಳೆಯರು, ಪುರುಷರ ತಂಡಕ್ಕೆ ಖೋ ಖೋ ವಿಶ್ವಕಪ್‌ ಕಿರೀಟ

    Kho Kho World Cup | ಭಾರತಕ್ಕೆ ಡಬಲ್‌ ಧಮಾಕ – ಮಹಿಳೆಯರು, ಪುರುಷರ ತಂಡಕ್ಕೆ ಖೋ ಖೋ ವಿಶ್ವಕಪ್‌ ಕಿರೀಟ

    ನವದೆಹಲಿ: ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ದೇಸಿ ಕ್ರೀಡೆಯ ಚೊಚ್ಚಲ ವಿಶ್ವಕಿರೀಟ ಮುಡಿಗೇರಿಸಿಕೊಂಡಿದೆ.

    ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್‌ ಹಣಾಹಣಿಯಲ್ಲಿ ತವರಿನ ಪ್ರೇಕ್ಷಕರ ಮುಂದೆ ಪ್ರಿಯಾಂಕಾ ಇಂಗೈ ಮತ್ತು ಪ್ರತೀಕ್ ವೈಕರ್‌ ಬಳಗವು ಗೆದ್ದು ಬೀಗಿತು.

    ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್‌ಅಪ್‌ ಪ್ರಶಸ್ತಿಗೆ ಪಾತ್ರವಾಯಿತು. ಆತಿಥೇಯ ತಂಡಗಳು ಜಯ ಸಾಧಿಸುತ್ತಿದ್ದಂತೆ ಕಿಕ್ಕಿರಿದು ಸೇರಿದ್ದ ಕ್ರೀಡಾಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟಿ, ರಾಷ್ಟ್ರಧ್ವಜದೊಂದಿಗೆ ಕುಣಿದು ಕುಪ್ಪಳಿಸಿದರು.

    19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತಾದರೂ, ಅಂತಿಮವಾಗಿ 78-40ರಿಂದ ಆತಿಥೇಯ ಬಳಗವು ಪಾರಮ್ಯ ಮೆರೆಯಿತು.

  • Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    ಹ್ಯಾಂಗ್‌ಝೌ: ಇದೇ ಮೊದಲ ಬಾರಿಗೆ ಏಷ್ಯನ್‌ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಂಡಿರುವ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (Indian Women’s Team) ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

    ಝೆಜಿಯಾಂಗ್ ಟೆಕ್‌ ವಿವಿ ಕ್ರೀಡಾಂಗಣದಲ್ಲಿಂದು ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಭಾರತೀಯ ಮಹಿಳಾ ತಂಡ 20 ಓವರ್‌ಗಳಲ್ಲಿ 116 ರನ್‌ ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ (SriLanka) ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 97 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಇದರಿಂದ ಭಾರತ 19 ರನ್‌ಗಳ ಜಯ ಸಾಧಿಸಿ ಚಿನ್ನದ ಪದಕ್ಕೆ ಕೊರಳೊಡ್ಡಿತು. ಇದನ್ನೂ ಓದಿ: Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

    2010ರ ಏಷ್ಯನ್‌ ಗೇಮ್ಸ್‌ ಟೂರ್ನಿಯಲ್ಲಿ ಪಾಕಿಸ್ತಾನ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಜಪಾನ್‌ ಕಂಚಿನ ಪದಕ ಗೆದ್ದುಕೊಂಡಿತ್ತು. 2014ರಲ್ಲಿ ಪಾಕಿಸ್ತಾನ ಸತತ 2ನೇ ಬಾರಿ ಚಿನ್ನ ಗೆದ್ದರೆ, ಬಾಂಗ್ಲಾದೇಶ ತಂಡ ಬೆಳ್ಳಿ ಹಾಗೂ ಶ್ರೀಲಂಕಾ ತಂಡ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆದ್ರೆ ಇದೇ ಮೊದಲ ಬಾರಿಗೆ ಏಷ್ಯನ್‌ ಗೇಮ್ಸ್‌ಗೆ ತೆರಳಿದ ಭಾರತ ತಂಡ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಹಾಸಿನಿ ಪೆರೆರಾ, ನೀಲಾಕ್ಷಿ ಡಿ ಸಿಲ್ವಾ ಹಾಗೂ ಓಷದಿ ರಣಸಿಂಗ್ ಅವರಿಂದ ಸಣ್ಣ ಪ್ರಮಾಣದ ಜೊತೆಯಾಟ ಬಂದರೂ ತಂಡ ನಿಗದಿತ ರನ್‌ ಕಲೆಹಾಕುವಲ್ಲಿ ವಿಫಲವಾಯಿತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿ ಮಂಡಿಯೂರಿತು.

    ಟೀಂ ಇಂಡಿಯಾ ಪರ ಟಿಟಾಸ್‌ ಸಾಧು 4 ಓವರ್‌ನಲ್ಲಿ 3 ವಿಕೆಟ್‌ ಕಿತ್ತರೆ, ರಾಜೇಶ್ವರಿ ಗಾಯಕ್ವಾಡ್‌ 2 ವಿಕೆಟ್‌ ಹಾಗೂ ದೀಪ್ತಿ ಶರ್ಮಾ, ಪೂಜಾ ವಸ್ತ್ರಕಾರ್‌, ದೇವಿಕಾ ವೈದ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: Asian Games Women’s Cricket: ಬಾಂಗ್ಲಾ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ

    ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕಾರ ಶಫಾಲಿ ವರ್ಮಾ 9 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದರು. 2ನೇ ವಿಕೆಟ್‌ಗೆ ಜೊತೆಯಾದ ಸ್ಮೃತಿ ಮಂಧಾನ (Smriti Mandhana) ಹಾಗೂ ಜೆಮಿಮಾ ರೊಡ್ರಿಗಸ್‌ 67 ಎಸೆತಗಳಲ್ಲಿ 73 ರನ್‌ಗಳ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು. ಇದರಿಂದ 100 ರನ್‌ಗಳ ಗಡಿ ದಾಟುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಆದರೆ ರಿಚಾ ಘೋಷ್ 9, ನಾಯಕಿ ಹರ್ಮನ್ ಪ್ರೀತ್ ಕೌರ್ (Harmanpreet Kaur) 2 ರನ್‌, ಪೂಜಾ ವಸ್ತ್ರಾಕರ್ 2 ರನ್ ಗಳನ್ನು ಮಾತ್ರಗಳಿಸಿ ನಿರಾಸೆ ಮೂಡಿಸಿದರು.

    ಶ್ರೀಲಂಕಾ ಪರ ಉದೇಶಿಕ ಪ್ರಬೋಧನಿ, ಸೌಗಂದಿಕಾ ಕುಮಾರಿ ಮತ್ತು ಇನೋಕಾ ರಣವೀರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • India Women’s Squad: ಭಾರತ Vs ಬಾಂಗ್ಲಾದೇಶ ಟಿ20, ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟ

    India Women’s Squad: ಭಾರತ Vs ಬಾಂಗ್ಲಾದೇಶ ಟಿ20, ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟ

    ಮುಂಬೈ: ಏಷ್ಯನ್‌ ಗೇಮ್ಸ್‌ಗೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (India Womens Cricket Team) ಬಾಂಗ್ಲಾದೇಶ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಮೂರು ಪಂದ್ಯಗಳ T20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಅದಕ್ಕಾಗಿ ಬಿಸಿಸಿಐ (BCCI) ಮುಂಬರುವ ಸರಣಿಗೆ ಬಲಿಷ್ಠ ತಂಡವನ್ನ ಪ್ರಕಟಿಸಿದೆ.

    ಎಲ್ಲಾ 6 ಪಂದ್ಯಗಳೂ ಮೀರ್ಪುರದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹರ್ಮನ್‌ಪ್ರೀತ್‌ ಕೌರ್‌ (Harmanpreet Kaur) ಏಕದಿನ ಹಾಗೂ ಟಿ20 ಎರಡೂ ಸ್ವರೂಪದಲ್ಲೂ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ (Smriti Mandhana) ಉಪನಾಯಕಿಯಾಗಿ ಇರಲಿದ್ದಾರೆ. ಹಿರಿಯ ವೇಗಿ ಶಿಖಾ ಪಾಂಡೆ, ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ರೇಣುಕಾ ಸಿಂಗ್‌ ಠಾಕೂರ್‌ ಹಾಗೂ ಬ್ಯಾಟರ್‌ ರಿಚಾ ಘೋಷ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದನ್ನೂ ಓದಿ: ಕ್ಯಾಚ್ ವಿವಾದ; ಮತ್ತೆ ಮೋಸದಾಟ ಆಡಲು ಪ್ರಯತ್ನಿಸಿತಾ ಆಸೀಸ್? – ಅಭಿಮಾನಿಗಳು ಕೆಂಡ

    ಜೊತೆಗೆ ರಾಧಾ ಯಾದವ್‌ ಹಾಗೂ ರಾಜೇಶ್ವರಿ ಗಾಯಕ್ವಾಡ್‌ ಅವರಿಗೂ ಸರಣಿಯಿಂದ ಕೊಕ್‌ ನೀಡಲಾಗಿದ್ದು, ಅನುಭವಿ ಸ್ಪಿನ್ನರ್‌ಗಳನ್ನ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಜುಲೈ 9, 11 ಮತ್ತು ಜು.13 ರಂದು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಜುಲೈ 16, 19 ಮತ್ತು 22 ರಂದು ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದನ್ನೂ ಓದಿ: ಕೊಹ್ಲಿ ಮತ್ತು ಬಾಬರ್‌ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್‌ ಉತ್ತರ ಕೊಟ್ಟ ಅಖ್ತರ್‌

    ಭಾರತದ ಟಿ20 ತಂಡ:
    ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಯಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್‌), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಚೆಟ್ರಿ (ವಿಕೆಟ್‌ ಕೀಪರ್‌), ಅಮನ್ಜೋತ್ ಕೌರ್, ಎಸ್‌ ಮೇಘನಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾನಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಮಿನ್ನು ಮಣಿ.

    ಭಾರತ ಏಕದಿನ ತಂಡ:
    ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್‌, ಯಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್‌), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಚೆಟ್ರಿ (ವಿಕೆಟ್‌ ಕೀಪರ್‌), ಅಮಾನ್ಜೋತ್ ಕೌರ್, ಪ್ರಿಯಾ ಪುನಿಯಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾನಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಸ್ನೇಹ ರಾಣಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]