Tag: Indigo Airlines

  • ವಿಮಾನ ನಿಲ್ದಾಣದಲ್ಲಿ ಲಗೇಜ್ ನಾಪತ್ತೆ: ಇಂಡಿಗೋ ವಿರುದ್ಧ ರಾಣಾ ದಗ್ಗುಭಾಟಿ ರಾಂಗ್

    ವಿಮಾನ ನಿಲ್ದಾಣದಲ್ಲಿ ಲಗೇಜ್ ನಾಪತ್ತೆ: ಇಂಡಿಗೋ ವಿರುದ್ಧ ರಾಣಾ ದಗ್ಗುಭಾಟಿ ರಾಂಗ್

    ಟ ರಾಣಾ ದಗ್ಗುಭಾಟಿ (Rana Daggubati) ಟಾಲಿವುಡ್‌ನ (Tollywood) ಪ್ರತಿಭಾನ್ವಿತ ನಟ, ಇದೀಗ ತಮ್ಮ ಲಗೇಜ್ ನಾಪತ್ತೆ ಆಗಿರುವ ವಿಚಾರಕ್ಕೆ ರೊಚ್ಚಿಗೆದ್ದಿದ್ದಾರೆ. ಅವರ ಲಗೇಜ್ ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿರುವ ರಾಣಾ ಏರ್‌ಲೈನ್ಸ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಆಗಾಗ ವಿಮಾನದಲ್ಲಿ ಪಯಣ ಮಾಡುವ ರಾಣಾ, ಇದು ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ಇತ್ತೀಚೆಗೆ ಇಂಡಿಗೋ (Indigo Airlines) ವಿಮಾನದಲ್ಲಿ ಪ್ರಯಾಣ ಮಾಡಿದ ರಾಣಾಗೆ ಕಹಿ ಅನುಭವ ಆಗಿದೆ. ಪ್ರಯಾಣಿಸುವಾಗ ರಾಣಾ ಅವರ ಲಗೇಜ್ ಕಳೆದು ಹೋಗಿದೆ. ಈವರೆಗೂ ಅವರ ಲಗೇಜ್ ಪತ್ತೆ ಆಗಿಲ್ಲ. ಇದೀಗ ಅವರು ನೇರವಾಗಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ತನ್ನ ಅನಿಕೆಯನ್ನ ಟ್ವೀಟ್ ಮಾಡುವ ಮೂಲಕ ಇಂಡಿಗೋ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಇದರಿಂದ ಇಂಡಿಗೋ ಕಂಪನಿಗೆ ಮುಜುಗರ ಆಗಿದೆ. ಈ ಬಗ್ಗೆ ಇಂಡಿಗೋ ಸಂಸ್ಥೆ ಕ್ಷಮೆ ಕೇಳಿದೆ. ಇಂಡಿಗೋ ವಿರುದ್ಧ ಗರಂ ಆಗಿರುವುದು ರಾಣಾ ಮಾತ್ರವಲ್ಲ, ಈ ಹಿಂದೆ ನಟಿ ಪೂಜಾ ಹೆಗ್ಡೆ (Pooja Hegde) ಕೂಡ ಈ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗಳ ವರ್ತನೆ ವಿರುದ್ಧ ಬೇಸರ ಹೊರಹಾಕಿದ್ದರು. ಇದೀಗ ರಾಣಾ ಕೂಡ ಇಂಡಿಯೋ ವಿರುದ್ಧ ರಾಂಗ್ ಆಗಿದ್ದಾರೆ.

    `ಭಾರತದ ಅತ್ಯಂತ ಕೆಟ್ಟ ಏರ್‌ಲೈನ್ ಅನುಭವ ಇಂಡಿಗೋ. ವಿಮಾನದ ಸಮಯದ ಬಗ್ಗೆಯೂ ಯಾವುದೇ ಸುಳಿವು ಇಲ್ಲ. ಲಗೇಜ್‌ಗಳು ಕಾಣೆಯಾಗಿವೆ’ ಎಂದು ರಾಣಾ ದಗ್ಗುಬಾಟಿ ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಇದಾದ ಬಳಿಕ ಇಂಡಿಗೋ ಸಂಸ್ಥೆ ಅನಾನುಕುಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ನಿಮ್ಮ ಲಗೇಜ್ ಅನ್ನು ಆದಷ್ಟು ಬೇಗ ನಿಮಗೆ ತಲುಪಿಸಲು ನಮ್ಮ ತಂಡ ಸಕ್ರಿಯವಾಗಿದೆ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಕ್ರಿಯೆ ನೀಡಿದರು. ಇಂಡಿಯೋ ಪ್ರತಿಕ್ರಿಯೆ ಬಳಿಕ ರಾಣಾ ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿದರು. ಆದರೆ ರಾಣಾ ಟ್ವೀಟ್ ಆಗಲೇ ಸುದ್ದಿ ಆಗಿತ್ತು. ಕೆಲ ನೆಟ್ಟಿಗರು ಸೆಲೆಬ್ರಿಟಿ ಎನ್ನುವ ಕಾರಣಕ್ಕೆ ಇಂಡಿಯೋ ತಕ್ಷಣ ಪ್ರತಿಕ್ರಿಯೆ ನೀಡಿದೆ ಜನ ಸಾಮಾನ್ಯರ ಕಥೆ ಏನು ಪ್ರಶ್ನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ – ದೆಹಲಿಗೆ ನಿತ್ಯ ವಿಮಾನ

    ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ – ದೆಹಲಿಗೆ ನಿತ್ಯ ವಿಮಾನ

    ನವದೆಹಲಿ: ಹುಬ್ಬಳ್ಳಿಯಿಂದ (Hubballi) ದೆಹಲಿಗೆ (Delhi) ಪ್ರತಿನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಇಂಡಿಗೋ ಏರ್‌ಲೈನ್ಸ್ (Indigo Airlines), ಇದೇ ನವೆಂಬರ್ 14ರಿಂದ ಪ್ರತಿನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಟಿಕೆಟ್ ಬುಕ್ಕಿಂಗ್ ಕೂಡ ಈಗಾಗಲೇ ಪ್ರಾರಂಭವಾಗಿದೆ.

    ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi) ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ-ಧಾರವಾಡದ ಪ್ರಯಾಣಿಕರ ಮನವಿಯನ್ನು ಪುರಸ್ಕರಿಸಿ ಇಂಡಿಗೋ ಆಡಳಿತ ಮಂಡಳಿ ಸೇವೆ ಆರಂಭಿಸಿದೆ. ಇದನ್ನೂ ಓದಿ: ಹೆಚ್‍ಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ದೆಹಲಿಯಿಂದ ಹುಬ್ಬಳ್ಳಿಗೆ ಬೆಳಗ್ಗೆ 10:00 ಗಂಟೆಗೆ ಹೊರಡಲಿದ್ದು ಮಧ್ಯಾಹ್ನ 12:45ಕ್ಕೆ ತಲುಪಲಿದೆ. ಹುಬ್ಬಳ್ಳಿಗೆ ದೆಹಲಿಯಿಂದ 13:15 ಗಂಟೆಗೆ ಹೊರಡಲಿದ್ದು ಸಂಜೆ 15:45ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ಬಗ್ಗೆ ಪ್ರಹ್ಲಾದ್ ಜೋಶಿ ಕೂಡಾ ಟ್ವೀಟ್ ಮಾಡಿದ್ದು ಮಾಹಿತಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿನ್ನ ಕಳ್ಳಸಾಗಣೆ – ಇಂಡಿಗೋ ಏರ್‌ಲೈನ್ಸ್‌ನ ಇಬ್ಬರು ಉದ್ಯೋಗಿಗಳು ಅರೆಸ್ಟ್

    ಚಿನ್ನ ಕಳ್ಳಸಾಗಣೆ – ಇಂಡಿಗೋ ಏರ್‌ಲೈನ್ಸ್‌ನ ಇಬ್ಬರು ಉದ್ಯೋಗಿಗಳು ಅರೆಸ್ಟ್

    ನವದೆಹಲಿ: ಚಿನ್ನ ಕಳ್ಳಸಾಗಣೆ (Gold Smuggling) ಮಾಡಲು ಸಹಕರಿಸುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ (IndiGo Airlines) ಇಬ್ಬರು ಉದ್ಯೋಗಿಗಳನ್ನು ಕಸ್ಟಮ್ಸ್ ಅಧಿಕಾರಿಗಳು (Customs Officials) ಬಂಧಿಸಿದ್ದಾರೆ.

    ಇಂಡಿಗೋ ಏರ್‌ಲೈನ್ಸ್‌ನ ಸಾಜಿದ್ ರೆಹಮಾನ್ ಮತ್ತು ಮೊಹಮ್ಮದ್ ಸಾಮಿಲ್‌ನನ್ನು ಅಂತಾರಾಷ್ಟ್ರೀಯ ವಿಮಾನ (International Airport) ನಿಲ್ದಾಣದಲ್ಲಿಂದು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    ಈ ಇಬ್ಬರು ಅಧಿಕಾರಿಗಳು ಸುಮಾರು 4.9 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕರಿಗೆ ಸಹಕರಿಸಲು ಪ್ರಯತ್ನಿಸುತ್ತಿದ್ದರು. ತಪಾಸಣೆ ವೇಳೆ ವಿಮಾನ ನಿಲ್ದಾಣದಲ್ಲಿ ಲಗೇಜ್ ಬಿಟ್ಟು ಪರಾರಿಯಾದ ಪ್ರಯಾಣಿಕನ ಲಗೇಜ್‌ನಲ್ಲಿ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 2.5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಸಿದ್ಧಾರ್ಥ್‌ ಜೊತೆ ಡ್ಯುಯೆಟ್‌ ಹಾಡಲು ಕಾಲಿವುಡ್‌ಗೆ ಹೊರಟ ಆಶಿಕಾ ರಂಗನಾಥ್

    ಇತ್ತೀಚೆಗೆ ದೇಶದ ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಳ್ಳಸಾಗಣೆಯ ಪ್ರಕರಣಗಳು ವರದಿಯಾಗಿದ್ದು, ನಿರಂತರವಾಗಿ ಅವುಗಳನ್ನು ಭೇದಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ನವದೆಹಲಿ: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

    ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

    ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

    ಸಾಂದರ್ಭಿಕ ಚಿತ್ರ

    ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್‌ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.

  • ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್

    ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್

    ರಾಂಚಿ: ಇಂಡಿಗೋ ಏರ್‌ಲೈನ್ಸ್‌ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಲಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

    ಶನಿವಾರದಂದು ರಾಂಚಿ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ತೆರಳುವ ವಿಮಾನಕ್ಕೆ ಹೋಗಲು ಅಂಗವಿಕಲ ಮಗು ಮತ್ತು ಪೋಷಕರು ಬಂದಿದ್ದಾರೆ. ಆದರೆ ವಿಮಾನ ನಿಲ್ದಾಣದ ಸಿಬ್ಬಂದಿ ಆ ಮಗುವನ್ನು ಬೋರ್ಡಿಂಗ್ ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಇಂಡಿಗೋ ಏರ್‌ಲೈನ್ಸ್‌ ಬಗ್ಗೆ ವ್ಯಾಪಕ ನಿಂದನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್ 

    ಸಹ ಪ್ರಯಾಣಿಕ ಮನಿಷಾ ಗುಪ್ತಾ ಅವರು ಟ್ವೀಟ್‌ ಮಾಡುವ ಮೂಲಕ ಘಟನೆಯ ಪೂರ್ಣ ವಿವರವನ್ನು ತಿಳಿಸಿದ್ದಾರೆ. ಈ ವೀಡಿಯೋದಲ್ಲಿ, ಮಗು ಬೋರ್ಡಿಂಗ್ ಮಾಡಿಕೊಳ್ಳುತ್ತಿರುವ ವೇಳೆ ಸಿಬ್ಬಂದಿ, ಈ ಮಗು ಬೋರ್ಡಿಂಗ್ ಮಾಡಿಸಿಕೊಳ್ಳಲು ಸಾಧ್ಯವಿಲ್ಲ. ಇದರಿಂದ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತೆ ಎಂದು ತಡೆದಿದ್ದಾನೆ.

    ಈ ವೇಳೆ ಸಹ-ಪ್ರಯಾಣಿಕರು ಮಗು ಮತ್ತು ಅವನ ಪೋಷಕರಿಗೆ ಬೆಂಬಲವಾಗಿ ಬಂದು ಸಿಬ್ಬಂದಿಗೆ ಭರವಸೆ ನೀಡಿದರು. ಈ ವೇಳೆ ಪ್ರಯಾಣಿಕರು, ಮಗು ಮತ್ತು ಅವನ ಪೋಷಕರು ವಿಮಾನವನ್ನು ಹತ್ತಲು ನಮಗೆ ಯಾವುದೇ ಅಭ್ಯಂತರವಿಲ್ಲ. ಪ್ರಯಾಣಿಕರಲ್ಲಿ ವೈದ್ಯರ ನಿಯೋಗವು ಮಗುವಿಗೆ ಪ್ರಯಾಣಿಸಲು ಅವಕಾಶ ನೀಡುವಂತೆ ಅಧಿಕಾರಿಗೆ ಮನವಿ ಮಾಡಿದೆ. ಆದರೆ, ಇವರೆಲ್ಲ ವಿನಂತಿಗಳು ಮತ್ತು ಮನವಿಗಳು ವ್ಯರ್ಥವಾಗಿ ಮಗು ಮತ್ತು ಅವನ ಹೆತ್ತವರು ಸೇರಿದಂತೆ ಮೂವರು ಪ್ರಯಾಣಿಕರನ್ನು ಬಿಟ್ಟು ವಿಮಾನವು ಹೈದರಾಬಾದ್‍ಗೆ ಹಾರಿತು.

    ಈ ವೀಡಿಯೋ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದ ಮೇಲೆ ಸಖತ್ ವೈರಲ್ ಆಗಿದೆ. ಅಲ್ಲದೇ ಈ ವೀಡಿಯೋಗೆ ವ್ಯಾಪಾಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಈ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಜ್ಯೋತಿರಾದಿತ್ಯ ಪ್ರತಿಕ್ರಿಯೆ
    ಈ ಬಗ್ಗೆ ಸ್ವತಃ ತನಿಖೆ ನಡೆಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಶೂನ್ಯ ಸಹಿಷ್ಣುತೆ ಇರುವುದು ಒಳ್ಳೆಯದಲ್ಲ. ಯಾವ ಮನುಷ್ಯನೂ ಈ ರೀತಿ ಇರುವುದು ಸರಿಯಲ್ಲ. ಈ ಬಗ್ಗೆ ನಾನೇ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

  • ವಿಜಯಪುರದ ಯುವತಿ ಈಗ ಉತ್ತರ ಕರ್ನಾಟಕದ ಮೊದಲ ಮಹಿಳಾ ಪೈಲಟ್

    ವಿಜಯಪುರದ ಯುವತಿ ಈಗ ಉತ್ತರ ಕರ್ನಾಟಕದ ಮೊದಲ ಮಹಿಳಾ ಪೈಲಟ್

    ವಿಜಯಪುರ: ಬರದ ಜಿಲ್ಲೆ ವಿಜಯಪುರದಲ್ಲಿ ಪ್ರತಿಭೆಗಳಿಗೆ ಬರವಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ವಿಜಯಪುರದ ಯುವತಿ ಪ್ರೀತಿ ಬಿರಾದಾರ ಇಂಡಿಗೋ ಏರ್‍ಲೈನ್ಸ್ ಕಂಪೆನಿಯಲ್ಲಿ ಪೈಲಟ್ ಆಗಿ ನೇಮಕಗೊಂಡಿದ್ದಾರೆ.

    ಇದರಿಂದ ಉತ್ತರ ಕರ್ನಾಟಕದ ಪ್ರಥಮ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪ್ರೀತಿ ಪಾತ್ರರಾಗಿದ್ದಾರೆ. ಪ್ರೀತಿಯ ತಂದೆ ಸುಧೀರ್ ಬಿರಾದಾರ ಔಷಧಿ ವ್ಯಾಪಾರಸ್ಥರಾಗಿದ್ದು, ಮಗಳ ಈ ಸಾಧನೆಯಿಂದ ಪ್ರೀತಿ ಕುಟುಂಬಸ್ಥರು ಫುಲ್ ಖುಷಿ ಆಗಿದ್ದಾರೆ.

    ಪ್ರೀತಿ ತನ್ನ ಮೊದಲ ಸಂಬಳವನ್ನು ಗೋ ಶಾಲೆಗೆ ಕೊಡುವುದಾಗಿ ನಿರ್ಧರಿಸಿದ್ದರು. ಅದರಂತೆ ವಿಜಯಪುರದ ಕಗ್ಗೋಡ ಗೋ ಶಾಲೆಗೆ ತನ್ನ ಮೊದಲ ಸಂಬಳ ನೀಡುವುದಾಗಿ ಪ್ರೀತಿ ಘೋಷಿಸಿ ಗೋ ಪ್ರೇಮ ತೋರಿದ್ದಾರೆ.