ಚೆನ್ನೈ: ದೆಹಲಿ-ಚೆನ್ನೈ ನಡುವಿನ (Delhi-Chennai) ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ (IndiGo Flight) ಮಹಿಳೆಯೊಬ್ಬರಿಗೆ (Woman) ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ರಾಜೇಶ್ ಶರ್ಮಾ (45) ಎಂದು ಗುರುತಿಸಲಾಗಿದೆ. ಆರೋಪಿ ಮಾರ್ಬಲ್ ಟೈಲ್ಸ್ ಲೇಯರ್ ಆಗಿದ್ದಾನೆ. ಅಕ್ಟೋಬರ್ 9 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಆತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಮಹಿಳೆ ಜೈಪುರ ಮತ್ತು ದೆಹಲಿ ಪ್ರವಾಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಆಕೆಯ ಹಿಂದೆ ಕುಳಿತಿದ್ದ ಆರೋಪಿಯು ಹಾರಾಟದ ಸಮಯದಲ್ಲಿ ಅವಳನ್ನು ಅಸಭ್ಯವಾಗಿ ಮುಟ್ಟಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಮಹಿಳೆ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ಬಗ್ಗೆ ಇಂಡಿಗೋ ಏರ್‌ಲೈನ್ಸ್ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
ಭೊಪಾಲ್: ಮಧ್ಯಪ್ರದೇಶದ ಜಬಲ್‍ಪುರದಿಂದ ತೆಲಂಗಾಣದ ಹೈದರಾಬಾದ್‍ಗೆ (Hyderabad) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್ ಬೆದರಿಕೆ ಹಾಕಲಾಗಿದ್ದು, ನಾಗ್ಪುರದಲ್ಲಿ (Nagpur) ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇಂಡಿಗೋ ವಿಮಾನ ಸಂಸ್ಥೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, 6ಇ-7308 ವಿಮಾನ ಜಬಲ್‍ಪುರದಿಂದ ಹೈದರಾಬಾದ್‍ಗೆ ತೆರಳುತ್ತಿತ್ತು. ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಸಿಕ್ಕಿದ್ದು, ನಾಗ್ಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ತಿಳಿಸಿದೆ.
ಬಾಂಬ್ ಬೆದರಿಕೆ ಸಂದೇಶವನ್ನು ಕಾಗದದಲ್ಲಿ ಬರೆದು ವಿಮಾನದ ಶೌಚಾಲಯದಲ್ಲಿ ಇಡಲಾಗಿತ್ತು. ತುರ್ತು ಭೂಸ್ಪರ್ಶದ ಬಳಿಕ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಪೂರ್ಣ ಪರಿಶೀಲನೆಯ ನಂತರ ಅನುಮಾನಾಸ್ಪದ ವಸ್ತುಗಳು ಏನೂ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪರಿಶೀಲನೆ ಮುಗಿದಿದ್ದು, ವಿಮಾನ ಹೈದರಾಬಾದ್‍ಗೆ ತೆರಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ: ಹವಾಮಾನ ವೈಪರಿತ್ಯದಿಂದ ವಿಮಾನ ಲ್ಯಾಂಡ್ ಆಗದ ಕಾರಣ ಜಿಲ್ಲೆಯ ಪ್ರವಾಸದಲ್ಲಿದ್ದ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಅವರು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ್ದ ಇಂಡಿಗೋ ವಿಮಾನ (IndiGo Flight) ಮೋಡ ಕವಿದ ವಾತಾವರಣದಿಂದ ರನ್ ವೇ ವಿಸಿಬಲಿಟಿ ಇರದೇ ಶಿವಮೊಗ್ಗ (Shivamogga) ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೆ ಹಿಂತಿರುಗಿದೆ. ಇದೇ ವಿಮಾನದಲ್ಲಿ ಆಗಮಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿಗೆ ವಾಪಸ್ ಮರಳುವಂತಾಗಿದೆ. ಇದರಿಂದ ಸಚಿವರ ಜಿಲ್ಲಾ ಪ್ರವಾಸ ರದ್ದಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರವಾಹ – ಅಯೋಧ್ಯೆಯ ಪ್ರಮುಖ ಪ್ರದೇಶಗಳಿಗೆ ನುಗ್ಗಿದ ನೀರು
ನವದೆಹಲಿ: ಚೆನ್ನೈನಿಂದ (Chennai) ಮುಂಬೈಗೆ (Mumbai) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo Flight) ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಬೆದರಿಕೆ ಬೆನ್ನಲ್ಲೇ ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಮುಂಬೈನಲ್ಲಿ ಇಳಿದ ನಂತರ ವಿಮಾನ ಸಿಬ್ಬಂದಿ ಪ್ರೊಟೋಕಾಲ್ ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕಗೊಳಿಸಲಾಯಿತು.
ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನವು ಪ್ರಸ್ತುತ ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಎರಡನೇ ಘಟನೆಯಾಗಿದೆ. ಈ ಹಿಂದೆ ಮೇ 28 ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನಕ್ಕೆ ಇದೇ ರೀತಿಯ ಬೆದರಿಕೆ ಬಂದಿತ್ತು. ಬೆದರಿಕೆಯ ನಂತರ ವಿಮಾನದಲ್ಲಿದ್ದ ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ನಿರ್ಗಮನದ ಮೂಲಕ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್‌ಐಟಿ ತನಿಖೆಗೆ – ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ತನಿಖಾ ತಂಡ
ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ಸ್ಥಳಾಂತರಿಸುವಿಕೆಯನ್ನು 90 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತಮ್ಮ ಯಾವುದೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬಾರದು. ದೆಹಲಿ ಘಟನೆಯಲ್ಲಿ ಸುರಕ್ಷತಾ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಇಂಡಿಗೋ ಇಬ್ಬರು ಪೈಲಟ್‌ಗಳು ಮತ್ತು ನಾಲ್ವರು ಕ್ಯಾಬಿನ್ ಸದಸ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು
ನವದೆಹಲಿ: ವಾರಣಾಸಿಗೆ (Varanasi) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ.
ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್‌ಲೈನ್, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮ್ಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.
ಬೆಂಗಳೂರು: ವ್ಯಕ್ತಿಯೊಬ್ಬ ವಿಮಾನದಲ್ಲಿ (Flifht) ತುರ್ತು ಬಾಗಿಲನ್ನು (Emergency Door) ತೆರೆದಿರುವ ಘಟನೆ ಭಾನುವಾರ ಇಂಡಿಗೋ (Indigo) ವಿಮಾನವೊಂದರಲ್ಲಿ ನಡೆದಿದೆ. ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬಂಧಿಸಲಾಗಿದೆ.
ಶನಿವಾರ ರಾತ್ರಿ ನಾಗ್ಪುರದಿಂದ ಬ್ಯಾಂಕಾಕ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಬೆಂಗಳೂರು (Bengaluru) ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸ್ವಪ್ನಿಲ್ ಹೊಲೆ (36) ತನ್ನ ಸೀಟಿನ ಪಕ್ಕದಲ್ಲಿದ್ದ ತುರ್ತು ಬಾಗಿಲನ್ನು ಎಳೆದಿದ್ದಾನೆ.
ನಾಗ್ಪುರದಲ್ಲಿ ಸ್ವಪ್ನಿಲ್ ವಿಮಾನ ಹತ್ತಿದ್ದು, ಆ ವಿಮಾನ 10:15 ಗಂಟೆಗೆ ಟೇಕ್ ಆಫ್ ಆಗಬೇಕಿತ್ತು. ಈ ವೇಳೆ ಆತ ತುರ್ತು ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದಾನೆ. ನಂತರ ವಿಮಾನ 11:55ಕ್ಕೆ ಬೆಂಗಳೂರು ತಲುಪಿದೆ. ತಕ್ಷಣ ಆತನನ್ನು ಬಂಧಿಸಿದ ವಿಮಾನಯಾನ ಸಿಬ್ಬಂದಿ ಕೆಐಎ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023 – ರಿಲೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತ
ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ನಿಯಮದ ಪ್ರಕಾರ, ಮಾನವನ ಜೀವ ಅಥವಾ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕಾರ್ಯವನ್ನು ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಮಾಡಿದರೆ ಆತನಿಗೆ ಜೈಲು ಶಿಕ್ಷೆಯನ್ನು 3 ತಿಂಗಳ ವರೆಗೆ ವಿಸ್ತರಿಸಬಹುದು. ಜೊತೆಗೆ 250 ರೂ. ದಂಡ ವಿಧಿಸಬಹುದು. ಇದೀಗ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 10 ರಂದು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈನಿಂದ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೋರ್ಡಿಂಗ್ ಸಮಯದಲ್ಲಿ ಆಕಸ್ಮಿಕವಾಗಿ ತುರ್ತು ಬಾಗಿಲನ್ನು ತೆರೆದಿದ್ದರು. ಈ ವಿಚಾರ ತೀವ್ರ ವಿವಾದಕ್ಕೆ ಕಾರಣವಾಯಿತು. ಆ ನಂತರ ಇಂತಹುದೇ ಹಲವು ಘಟನೆಗಳು ವರದಿಯಾಗಿವೆ. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೇವಾನಂದ್ ತಿವಾರಿ ರಕ್ತ ವಾಂತಿ ಮಾಡಿಕೊಂಡರು. ವಿಮಾನ ತುರ್ತು ಭೂಸ್ಪರ್ಶದ ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ನಾಗ್ಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
62 ವಯಸ್ಸಿನ ಈ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದರು. ಅಗತ್ಯ ವೈದ್ಯಕೀಯ ವಿಧಾನಗಳು ಮತ್ತು ಕ್ಲಿಯರೆನ್ಸ್ ನಂತರ ವಿಮಾನವು ನಾಗ್ಪುರ ಮತ್ತು ರಾಂಚಿಗೆ ತನ್ನ ಪ್ರಯಾಣವನ್ನು ಯಶಸ್ವಿಯಾಗಿ ಪುನರಾರಂಭಿಸಿತು. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್
ಚೆನ್ನೈ: ಚಂದ್ರಯಾನ-3 (Chandrayaan-3) ಉಡಾವಣೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿತ್ತು. ಅಂತೆಯೇ ಈ ಉಪಗ್ರಹ ಹೊತ್ತ ಬಾಹ್ಯಾಕಾಶ ನೌಕೆ ಚಂದ್ರನತ್ತ ಸಾಗುತ್ತಿರುವ ಅದ್ಭುತ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ.
ಹೌದು. ಚಂದ್ರಯಾನ-3 ಗಗನಕ್ಕೇರುತ್ತಿದ್ದಂತೆಯೇ ಚೆನ್ನೈ- ಢಾಕಾ (Chennai – Dhaka Plane) ಮಾರ್ಗದಲ್ಲಿ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ಕಿಟಕಿ ಬದಿಯ ಸಿಟ್‍ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‍ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಆಗ ಚಂದ್ರಯಾನ-3 ರಾಕೆಟ್ ಅತ್ಯಂತ ವೇಗವಾಗಿ ಹೋದ ದೃಶ್ಯ ಕೂಡ ಸೆರೆಯಾಯಿತು. ಇದನ್ನೂ ಓದಿ: Chandrayaan-3 ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ: ಇಸ್ರೋ
ಈ ವೀಡಿಯೋವನ್ನು ಇಸ್ರೋ ಮೆಟೀರಿಯಲ್ಸ್ ನಿವೃತ್ತ ನಿರ್ದೇಶಕ ಮತ್ತು ರಾಕೆಟ್ ತಯಾರಿಕಾ ತಜ್ಞ ಡಾ ಪಿ.ವಿ ವೆಂಕಟಕೃಷ್ಣನ್ (Dr P V Venkitakrishnan) ಅವರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ವೀಡಿಯೋಗೆ “ವಿಮಾನದಿಂದ ಚಂದ್ರಯಾನ 3 ಉಡಾವಣೆ” ಎಂಬ ಶೀರ್ಷಿಕೆ ನೀಡಿದ್ದಾರೆ. ಚೆನ್ನೈನಿಂದ ಢಾಕಾಗೆ ಟೇಕಾಫ್ ಆದ ಸ್ವಲ್ಪ ಸಮಯದ ನಂತರ, ಪೈಲಟ್ ಈ ಐತಿಹಾಸಿಕ ಘಟನೆಯನ್ನು ವೀಕ್ಷಿಸಿ ಎಂದು ಘೋಷಿಸಿರುವುದಾಗಿ ಅವರು ಬರೆದುಕೊಂಡಿದ್ದಾರೆ.
ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಅಪ್ಲೋಡ್ ಮಾಡಿದಾಗಿನಿಂದ ಲಕ್ಷಗಟ್ಟಲೆ ಮಂದಿ ವೀಕ್ಷಿಸಿದ್ದಾರೆ. ಅಲ್ಲದೆ ಲೆಕ್ಕವಿಲ್ಲದಷ್ಟು ಲೈಕ್‍ಗಳನ್ನು ಪಡೆದುಕೊಂಡಿದೆ. ಪ್ರಯಾಣಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಹಿದಿರುವ ದೃಶ್ಯ ಕಂಡು ಜಾಲತಾಣಿಗರು ಮೂಕವಿಸ್ಮಿತರಾಗಿದ್ದಾರೆ.
ಮಂಗಳೂರು: ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru International Airport) ನಡೆದಿದೆ.
ಬೆಳಗ್ಗೆ 8:30ಕ್ಕೆ ದುಬೈಗೆ (Dubai) ತೆರಳಲು ಇಂಡಿಗೋ ವಿಮಾನ (IndiGo Flight) ಸಿದ್ಧವಾಗಿತ್ತು. ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ವಿಮಾನದ ರೆಕ್ಕೆಗೆ ಹಕ್ಕಿಯೊಂದು ಬಡಿದಿದೆ. ತಕ್ಷಣ ಎಚ್ಚೆತ್ತ ಪೈಲೆಟ್ ನಿಯಂತ್ರಣ ಕೊಠಡಿಗೆ (Air Traffic Control) ಮಾಹಿತಿ ನೀಡಿದ್ದಾರೆ. ಟೇಕಾಫ್ ಮಾಡದೇ ಮರಳಿ ನಿಲ್ದಾಣಕ್ಕೆ ತಂದಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ
ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಹಕ್ಕಿಯ ಡಿಕ್ಕಿಯಿಂದಾಗಿ ಉಂಟಾಗಿರಬಹುದಾದ ಹಾನಿಯ ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ ಪ್ರಯಾಣಿಕರನ್ನು ಕರೆದೊಯ್ಯಲು ಬೆಂಗಳೂರಿನಿಂದ (Bengaluru) ಮತ್ತೊಂದು ವಿಮಾನವನ್ನು ತರಿಸಲಾಯಿತು. ಘಟನೆಯಿಂದ ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಹಾಪ್‌ಕಾಮ್ಸ್‌ನಲ್ಲಿ ಮೇ 26 ರಿಂದ ಮಾವು, ಹಲಸು ಮೇಳ