Tag: Indira Canteen

  • ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್

    ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್

    – ಆನಂದ್ ಸಿಂಗ್ ಭಿನ್ನಮತಕ್ಕೆ ತ್ಯಾಪೆ ಹಾಕಲಾಗಿದೆ

    ಯಾದಗಿರಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಯವರ ಚಿಲ್ಲರೆ ವಿಚಾರ. ಇಂದಿರಾ ಗಾಂಧಿಯವರನ್ನು ಸ್ವತಃ ಅಟಲ್ ಬಿಹಾರಿ ವಾಜಪೇಯಿಯವರೇ ಸಾಕ್ಷಾತ್ ದುರ್ಗೆ ಎಂದು ಕರೆದಿದ್ದರು. ಇಂತಹ ಸಣ್ಣ ಕೆಲಸಕ್ಕೆ ಬಿಜೆಪಿಯವರು ಇಳಿಯಬಾರದು ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿಯವರ ಹೆಸರಿನಲ್ಲಿ ಕ್ರೀಡಾಂಗಣ, ಮೇಲ್ಸೇತುವೆಗಳಿವೆ ಅವರ ಹೆಸರನ್ನು ತೆಗೆಯಿರಿ ಎಂದು ನಾವು ಹೇಳಲ್ಲ. ಸಚಿವ ಈಶ್ವರಪ್ಪನವರ ಮಾತು ಅವರ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ, ಅವರ ನಾಲಿಗೆಗೆ ಮತ್ತು ಮೆದುಳಗೆ ಕನೆಕ್ಷನ್ ಕಟ್ ಆಗಿದೆ. ಸಚಿವ ಆನಂದ್ ಸಿಂಗ್ ಗೆ ತ್ಯಾಪೆ ಹಚ್ಚಿದ್ದಾರೆ. ನನ್ನ 24 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಲೋ ಎಲ್ಲಿದ್ದೀಯಾ? ನಿನ್ನ ಮೇಲೆ ಡೌಟ್ ಇಲ್ಲ, ಬಾ ಮನೆಗೆ ಮಾತಾಡೋಣ: ಜಮೀರ್​​​ಗೆ ಸಿದ್ದರಾಮಯ್ಯ ಬುಲಾವ್

    ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ:
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ನಾನು ಮೊದಲು ಕನ್ನಡಿಗ, ಅಮೇಲೆ ಭಾರತೀಯ: ಸಿ.ಟಿ.ರವಿಗೆ ಹೆಚ್‍ಡಿಕೆ ಟಾಂಗ್

  • ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

    ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

    ಬೆಂಗಳೂರು: ಇಂದು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

    ದೇಶಭಕ್ತ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ಸಿಗರಿಗೆ ನಾನು ಇಂದಿರಾಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಭಾರೀ ಕೋಪ ಬಂದಿದೆ. ಒಂದು ಕುಟುಂಬದ ಓಲೈಕೆಯೇ ನಿಮ್ಮ ಸಂಸ್ಕೃತಿಯೇ? ಇಂದಿರಾ ಕ್ಯಾಂಟೀನ್ ಬದಲು ನಾಡಿನ ಅನ್ನದ ದೇವತೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಯಾಕಾಗಬಾರದು? ಇಲ್ಲಿನ ಮಣ್ಣಿನ ಮಗನ ಹೆಸರಿಡಬಹುದಿತ್ತಲ್ಲವೇ? ರಾಷ್ಟ್ರವಾದಿ ವೀರ್ ಸವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ. ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ “ಇಂದಿರಾ ಕ್ಯಾಂಟೀನ್” ಸ್ಥಾಪಿಸುವ ಅವಶ್ಯಕತೆ ಏನಿತ್ತು?

    ಕಾಂಗ್ರೆಸ್ಸಿಗರು ಉತ್ತರಿಸುವರೇ? ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿ, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು. ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ. ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?:
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

     

  • ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

    ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ.ರವಿ ಸಂಸ್ಕೃತಿ: ರಾಮಲಿಂಗಾರೆಡ್ಡಿ ಕಿಡಿ

    ಬೆಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಬಡವರಿಗಾಗಿ ಹಸಿವು ನೀಗಿಸಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಆದರೆ ಸಿ.ಟಿ. ರವಿ ಅವರು ಇಂದಿರಾಗಾಂಧಿ ಅವರ ಹೆಸರಲ್ಲಿ ಹುಕ್ಕಾ ಬಾರ್ ಬೇಕಾದರೆ ಮಾಡಿಕೊಳ್ಳಲಿ ಎಂದು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಆಚಾರವಿಲ್ಲದ ನಾಲಿಗೆ ಏನುಬೇಕಾದರೂ ಮಾತನಾಡುತ್ತದೆ. ಇಂದಿರಾ ಗಾಂಧಿ ಅವರ ಹೆಸರನ್ನು ಹೇಳುವ ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ ಎಂದರು.

    ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಮಾತನಾಡಿ, ಸಿ.ಟಿ ರವಿ ಅವರ ಮಾತುಗಳನ್ನು ಕೇಳಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವಂತೆ ಕಾಣುತ್ತಿದೆ. ಅವರ ಭಾಷೆ ಬಳಕೆ ಇದಕ್ಕೆ ಸಾಕ್ಷಿ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಅವರ ಮಾತುಗಳು ಅವರ ಆಚಾರ ವಿಚಾರವನ್ನು ತಿಳಿಸುತ್ತದೆ ಎಂದರು. ಇದನ್ನೂ ಓದಿ: ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ಸಿ.ಟಿ.ರವಿ ಹೇಳಿದ್ದೇನು?: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಮೂತ್ರ ವಿಸರ್ಜನೆ ಮಾಡ್ತಿದ್ದವರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ

  • ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಬೆಂಗಳೂರು: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿರುಗೇಟು ನೀಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.  ಇದನ್ನೂ ಓದಿ: ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

    ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸುತ್ತಲೇ ಇರುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಒಬ್ಬರು. ಸಿದ್ದರಾಮಯ್ಯನವರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿಗಳಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

    ಸಂಸತ್ತಿನಲ್ಲಿ ಕಾಂಗ್ರೆಸ್ ವಿಪಕ್ಷಗಳ ಅಸಹಾಕಾರದ ನಡುವೆಯೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ, ಸಾಮಾಜಿಕ ನ್ಯಾಯ ಬಿಜೆಪಿಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ.  ಸಂಸತ್ತನ್ನು ಖಾನ್ ಮಾರ್ಕೆಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್‍ನವರು ಎಂದು ದೂರಿದರು.

  • ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ಬೆಂಗಳೂರು: ಸುಲಭ್ ಶೌಚಾಲಯ ಮೋದಿ ಯೋಜನೆ. ಅದಕ್ಕೆ ಪ್ರಧಾನಿ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ಮುಖಂಡ, ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗ ನರೇಂದ್ರ ಮೋದಿ ಗೇಮ್ ಚೇಂಜರ್ ಅಲ್ಲ. ನೇಮ್ ಚೇಂಜರ್ ಆಗಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರನ್ನು ಇವರು ಬದಲಾಯಿಸಬಹುದು. ಆದರೆ ಈ ನೆಲದ ಮೇಲೆ ಬಿದ್ದ ಇವರ ರಕ್ತ ಅಳಿಸಲು ಯಾರಿಗೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

    ಇಂದಿರಾ ಗಾಂಧಿ ಹೆಸರು ಬದಲಾಯಿಸುವುದು ಹೀನ ಕುತಂತ್ರ ಕೆಟ್ಟ ರಾಜಕಾರಣ. ಅವರ ಬೋರ್ಡ್ ಎಲ್ಲೆಲ್ಲಿ ಇರುತ್ತದೋ ಅಲ್ಲೆಲ್ಲ ನಾವು ಮಸಿ ಬಳಿದು ಹೋರಾಟ ಮಾಡಬೇಕಾಗುತ್ತದೆ. ಮೊದಲು ಇವರು ಗೇಮ್ ಚೇಂಜರ್ ಅಂತ ಬಂದರು. ನೇಮ್ ಚೇಂಜರ್ ಆಗಿದ್ದಾರೆ ಎಂದು ಕಿಡಿಕಾರಿದರು.

    ಇವರೆನಾದರೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿದರೆ ನಾವು ಇವರ ಬೋರ್ಡ್‍ಗೆ ಮಸಿ ಬಳಿಯುತ್ತೇವೆ. ಗಾಂಧಿಯನ್ನು ಕೊಂದು ದೇಶ ದ್ರೋಹದ ಆಪಾದನೆ ಹೊತ್ತಿರುವ ಸಾವರ್ಕರ್ ಬೋರ್ಡ್ ಗೆ ನಾವು ಮಸಿ ಬಳಿಯುತ್ತೇವೆ. ಅವರು ಎಷ್ಟು ದೂರ ಹೋಗ್ತಾರೋ ಹೋಗಲಿ ನೋಡೋಣ ಎಂದರು. ಇದನ್ನೂ ಓದಿ : ಕ್ರೀಡೆಯಲ್ಲಿ ಅಲ್ಲ, ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ‘ಚಿನ್ನ’

    ಈಶ್ವರಪ್ಪ ಹೇಳಿಕೆ ರಾಜ್ಯಕ್ಕೆ ಹೊಸತಲ್ಲ. ಸಿಎಂ ಆಗೋಕೆ ಸತತ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈಶ್ವರಪ್ಪನವರಿಗೆ ಹುಚ್ಚು ಹಿಡಿದಿದೆ. ಸುಧಾಕರ್ ಅವರು ಈಶ್ವರಪ್ಪನವರನ್ನು ನಿಮಾನ್ಸ್ ಗೆ ಸೇರಿಸಿ ಒಳ್ಳೆಯ ಚಿಕಿತ್ಸೆ ನೀಡಬೇಕು ಎಂದು ವ್ಯಂಗ್ಯವಾಡಿದರು.

    ಮನೆಯಲ್ಲಿ ನೋಟ್ ಎಣಿಸಿ ಹೈಕಮಾಂಡ್‍ಗೆ ಕೊಟ್ಟು ಸಿಎಂ ಆಗಲು ಹೋದವರಿಂದ ಏನು ನಿರೀಕ್ಷೆ ಸಾಧ್ಯ? ಕೂಡಲೇ ಈಶ್ವರಪ್ಪನವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.

  • ಸರ್ಕಾರಕ್ಕೆ ಸೆಡ್ಡು ಹೊಡೆದು ಇಂದಿರಾ ಕ್ಯಾಂಟೀನ್ ಆರಂಭಿಸಿದ್ರು ಕಿಮ್ಮನೆ ರತ್ನಾಕರ್

    ಸರ್ಕಾರಕ್ಕೆ ಸೆಡ್ಡು ಹೊಡೆದು ಇಂದಿರಾ ಕ್ಯಾಂಟೀನ್ ಆರಂಭಿಸಿದ್ರು ಕಿಮ್ಮನೆ ರತ್ನಾಕರ್

    ಶಿವಮೊಗ್ಗ: ಕೊರೊನಾ ಸಂದರ್ಭದಲ್ಲಿ ಬಡವರಿಗೆ, ನಿರ್ಗತಿಕರಿಗೆ ಅನುಕೂಲ ಆಗಲಿ ಎಂದು ರಾಜ್ಯ ಸರ್ಕಾರ ಲಾಕ್ ಡೌನ್ ಸಮಯದಲ್ಲಿಯೂ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಆದರೆ ಜಿಲ್ಲೆಯ ತೀರ್ಥಹಳ್ಳಿ ಇದುವರೆಗೂ ಇಂದಿಗೂ ಕ್ಯಾಂಟೀನ್ ಆರಂಭವಾಗಿಲ್ಲ. ಹೀಗಾಗಿಯೇ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದ್ದಾರೆ.

    ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯ ಮುಂಭಾಗದಲ್ಲಿ ಇಂದಿರಾ ಕ್ಯಾಂಟೀನ್ ಗೆ ಕಿಮ್ಮನೆ ರತ್ನಾಕರ್ ಚಾಲನೆ ನೀಡಿದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಬಡವರ, ಕೂಲಿ ಕಾರ್ಮಿಕರ ಅನುಕೂಲಕ್ಕೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಕೊರೊನಾ ಲಾಕ್‍ಡೌನ್‍ನಲ್ಲಿ ಕೂಲಿ ಕಾರ್ಮಿಕರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರವೇ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದೆ. ಆದರೆ ತೀರ್ಥಹಳ್ಳಿಯಲ್ಲಿ ಇನ್ನೂ ಇಂದಿರಾ ಕ್ಯಾಂಟೀನ್‍ಗೆ ಜಾಗ ಗುರುತಿಸದೇ ನಿರ್ಮಾಣ ಮಾಡದ ಕಾರಣ ಇಂದಿರಾ ಕ್ಯಾಂಟೀನ್ ತೆರೆದಿರಲಿಲ್ಲ.

    ತೀರ್ಥಹಳ್ಳಿ ಶಾಸಕರು ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ತೆರೆಯದೇ ಇರುವುದನ್ನು ಖಂಡಿಸಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಸಮಾನ ಮನಸ್ಕರನ್ನು ಸೇರಿಸಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿದ್ದಾರೆ. ಬೆಳಗ್ಗೆ 50 ಜನ ಹಾಗೂ ಮಧ್ಯಾಹ್ನ 100 ಕ್ಕೂ ಅಧಿಕ ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಸರ್ಕಾರ ಇಂದಿರಾ ಕ್ಯಾಂಟೀನ್ ತೆರೆಯುವವರೆಗೂ ನಾವೇ ಇಂದಿರಾ ಕ್ಯಾಂಟೀನ್ ನಡೆಸುವುದಾಗಿ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

  • ಇಂದಿರಾ ಕ್ಯಾಂಟೀನ್ ಮುಂದೆ ಜನವೋ ಜನ- ಊಟಕ್ಕಾಗಿ ಸಾಲು

    ಇಂದಿರಾ ಕ್ಯಾಂಟೀನ್ ಮುಂದೆ ಜನವೋ ಜನ- ಊಟಕ್ಕಾಗಿ ಸಾಲು

    ಬೆಂಗಳೂರು: ಕಾರ್ಮಿಕರು, ವಲಸಿಗರು ಹಾಗೂ ನಿರ್ಗತಿಕರಿಗಾಗಿ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉಚಿತ ಊಟ ನೀಡುವ ನಿರ್ಧಾರ ಮಾಡಲಾಗಿದ್ದು, ಇಂದಿನಿಂದ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉಪಹಾರ, ಊಟ ನೀಡಲಾಗುತ್ತಿದೆ. ಹೀಗಾಗಿ ಜನ ಸಾಲುಗಟ್ಟಿ ನಿಂತು ತಿಂಡಿ ಪಡೆದಿದ್ದಾರೆ.

    ಕಾರ್ಪೋರೇಷನ್ ಸರ್ಕಲ್ ಮುಂದೆ ನೂರಾರು ಜನ ಕ್ಯೂ ನಿಂತಿದ್ದಾರೆ. ಕಾರ್ಪೊರೇಷನ್ ಸರ್ಕಲ್ ಬಳಿ ಫೋಟಿಂಗ್ ಜನ, ಸುತ್ತ ಸರ್ಕಾರಿ ಕಚೇರಿಗಳು, ವ್ಯಾಪಾರಿಗಳೇ ಹೆಚ್ಚು ಜನ ಊಟಕ್ಕಾಗಿ ಆಗಮಿಸಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಊಟ ಸಿಗದ್ದಕ್ಕೆ ನಿರ್ಗತಿಕರು, ಬಡವರು ಹಾಗೂ ವಲಸಿಗರಿಗಾಗಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ.

    ನೂರಾರು ಜನ ಉಚಿತ ಊಟಕ್ಕಾಗಿ ಇಂದಿರಾ ಕ್ಯಾಂಟೀನ್ ಮುಂದೆ ಕ್ಯೂ ನಿಂತಿದ್ದಾರೆ. ಬೆಂಗಳೂರಿನ ಎಲ್ಲ ಇಂದಿರಾ ಕ್ಯಾಂಟೀನ್ ಗಳ ಮುಂದೆ ಜನ ತುಂಬಿದ್ದಾರೆ. ಬೆಳಗ್ಗೆ 7.30ರಿಂದ ಉಚಿತವಾಗಿ ತಿಂಡಿ ನೀಡಲಾಗುತ್ತಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟ ದಿನಕ್ಕೆ ಮೂರು ಹೊತ್ತು ಆಹಾರ ನೀಡಲು ಸರ್ಕಾರ ಅದೇಶಿಸಿದೆ. ಹೀಗಾಗಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‍ಗಳಿಗೆ ಫುಲ್ ಡಿಮ್ಯಾಂಡ್ ಬಂದಿದೆ. ತಮ್ಮ ಹೆಸರು, ವಿಳಾಸದ ಮಾಹಿತಿ ನೀಡಿ ಜನ ತಿಂಡಿ ಪಡೆಯುತ್ತಿದ್ದಾರೆ.

  • ಬೆಂಗಳೂರು ಹೊರತುಪಡಿಸಿ ಉಳಿದೆಡೆ ಇಂದಿರಾ ಕ್ಯಾಂಟೀನ್ ಆರಂಭ- ಸರ್ಕಾರದಿಂದ ಆದೇಶ

    ಬೆಂಗಳೂರು ಹೊರತುಪಡಿಸಿ ಉಳಿದೆಡೆ ಇಂದಿರಾ ಕ್ಯಾಂಟೀನ್ ಆರಂಭ- ಸರ್ಕಾರದಿಂದ ಆದೇಶ

    – ಮೂರು ಹೊತ್ತು ಉಚಿತ ಆಹಾರ

    ಬೆಂಗಳೂರು: ಲಾಕ್‍ಡೌನ್ ವೇಳೆ ಕೂಲಿ ಕಾರ್ಮಿಕರು, ಬಡವರು ಅನುಭವಿಸುತ್ತಿರುವ ಕಷ್ಟದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸರ್ಕಾರ ಎಚ್ಚೆತ್ತುಕೊಂಡು ಮಹತ್ವದ ಆದೇಶ ಹೊರಡಿಸಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಆದೇಶಿಸಿದೆ. ಅಲ್ಲದೆ ಉಚಿತವಾಗಿ ಉಪಹಾರ, ಊಟ ಹಾಗೂ ರಾತ್ರಿ ನೀಡಲು ಸೂಚಿಸಿದೆ.

    ಮೇ 10ರಿಂದ 24ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದೆ. ಹೀಗಾಗಿ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಉಚಿತ ಉಪಹಾರ ಊಟವನ್ನು ನೀಡಲು ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ಆದೇಶಿಸಿದೆ. ಬೆಂಗಳೂರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಇಂದಿರಾ ಕ್ಯಾಂಟೀನ್ ಆರಂಭಿಸಲು ತಿಳಿಸಲಾಗಿದೆ. ಮಾರ್ಗಸೂಚಿಗಳ ಅನ್ವಯ ಇಂದಿರಾ ಕ್ಯಾಂಟೀನ್‍ಗಳಲ್ಲಿ ಊಟ ನೀಡಲು ತಿಳಿಸಿದೆ.

    ನಗರಗಳ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಪಹಾರ, ಮಧ್ಯಾಹ್ನ ಊಟ, ರಾತ್ರಿ ಊಟವನ್ನು ಉಚಿತವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ ಆಹಾರ ಸೇವಿಸಿದ ಜನಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಅಲ್ಲದೆ ಯೋಜನಾ ನಿರ್ದೇಶಕರು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಪರಿವೀಕ್ಷಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವುಂತೆ ಸರ್ಕಾರ ಆದೇಶ ಹೊರಡಿಸಿದೆ.

    ಲಾಕ್‍ಡೌನ್‍ನಿಂದಾಗಿ ಹಲವು ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಊಟಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ತಿಳಿಸಿದೆ. ಜನ ಸ್ವಲ್ಪ ಮಟ್ಟಿಗೆ ಸಮಾಧಾನಗೊಂಡಿದ್ದಾರೆ.

  • ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್

    ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್

    ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದ ದಿನದಿಂದ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್‍ಗಳು ಈಗ ಪಾರ್ಸಲ್ ಸೌಲಭ್ಯ ಆರಂಭಿಸಿದೆ.

    ಹುಬ್ಬಳ್ಳಿಯಲ್ಲಿ ಮೂರು ಹಾಗೂ ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟಿನ್‍ಗೆ ಪಾರ್ಸಲ್ ಸೌಲಭ್ಯ ಆರಂಭಿಸಲು ಅನುಮತಿ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಏಳು ಮತ್ತು ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟೀನ್‍ಗಳಿದ್ದು, ಮೊದಲ ಹಂತದಲ್ಲಿ ಐದು ಕ್ಯಾಂಟೀನ್‍ಗಳನ್ನು ಆರಂಭಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕಿಮ್ಸ್, ಉಣಕಲ್ ಮತ್ತು ಹೊಸ ಬಸ್ ನಿಲ್ದಾಣ, ಧಾರವಾಡದಲ್ಲಿ ಬಸ್ ನಿಲ್ದಾಣ ಹಾಗೂ ಮಿನಿ ವಿಧಾನಸೌಧದ ಆವರಣದಲ್ಲಿರುವ ಕ್ಯಾಂಟೀನ್‍ಗಳನ್ನು ಆರಂಭಿಸಲಾಗಿದೆ.

    ಲಾಕ್‍ಡೌನ್‍ನಲ್ಲೂ ನಗರಗಳ ಸ್ವಚ್ಛತೆಗೆ ಶ್ರಮಿಸುತ್ತಿರುವ ಮಹಾನಗರ ಪಾಲಿಕೆಯ 2,800 ಪೌರ ಕಾರ್ಮಿಕರಿಗೆ ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಕ್ಯಾಂಟೀನ್‍ನಲ್ಲಿ ನಿತ್ಯ ಆಹಾರ ತಯಾರಿಸಲಾಗುತ್ತಿತ್ತು. ಈ ಕಾರ್ಯ ಕೂಡ ಮುಂದುವರಿಯಲಿದೆ.

    ಕ್ಯಾಂಟೀನ್ ಆರಂಭವಾಗುವುದು ಬಹಳಷ್ಟು ಜನಕ್ಕೆ ಗೊತ್ತಿರದೇ ಇದ್ದರೂ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಕಿಮ್ಸ್ ನಲ್ಲಿರುವ ಜನರಿಗೆ ಸಾಕಷ್ಟು ಅನುಕೂಲವಾಯಿತು. ಬೆಳಿಗ್ಗೆ 7 ಗಂಟೆಯಿಂದ 9ರ ತನಕ ಮತ್ತು ಮಧ್ಯಾಹ್ನ 12ರಿಂದ 2:30 ಗಂಟೆ ತನಕ ಪಾರ್ಸಲ್ ಕೊಡುತ್ತೇವೆ ಎಂದು ಕ್ಯಾಂಟೀನ್‍ಗಳ ಗುತ್ತಿಗೆದಾರ ಮನೋಹರ ಮೋರೆ ತಿಳಿಸಿದರು.

    ಹಳೇ ಹುಬ್ಬಳ್ಳಿ ಮತ್ತು ಬೆಂಗೇರಿ ಭಾಗ ಕಂಟೈನ್‍ಮೆಂಟ್ ಪ್ರದೇಶವಾಗಿರುವ ಕಾರಣ ಅಲ್ಲಿ ಕ್ಯಾಂಟೀನ್‍ಗಳನ್ನು ತೆರೆಯಲು ಅವಕಾಶವಿಲ್ಲ. ಸರ್ಕಾರದ ನಿರ್ದೇಶನದ ಮೇರೆಗೆ ಹಂತಹಂತವಾಗಿ ಉಳಿದ ಕಡೆಯೂ ಆರಂಭಿಸಲಾಗುವುದು. ಬೇಡಿಕೆಗೆ ಅನುಗುಣವಾಗಿ ಆಹಾರ ತಯಾರಿಸಲಾಗುವುದು. ಅಂತರ ಕಾಯ್ದುಕೊಂಡು ಗ್ರಾಹಕರಿಗೆ ಆಹಾರ ನೀಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ ಗುತ್ತಿಗೆದಾರರು ಹೇಳಿದರು.

    ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಶ್ರಮಿಸುತ್ತಿರುವವರಿಗೆ ಇಂದಿರಾ ಕ್ಯಾಂಟೀನ್‍ನಲ್ಲಿ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಲಾಕ್‍ಡೌನ್ ಆರಂಭದ ದಿನಗಳಲ್ಲಿ ಹೇಳಿತ್ತು. ಜನಸಂದಣಿ ಹೆಚ್ಚಿದ ಕಾರಣ ಸರ್ಕಾರ ಈ ನಿರ್ಧಾರವನ್ನು ವಾಪಸ್ ಪಡೆದುಕೊಂಡಿತ್ತು. ಬಳಿಕ ಈಗ ಕ್ಯಾಂಟೀನ್‍ಗಳು ಪುನರಾರಂಭವಾಗಿವೆ.

  • ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್‍ಗೂ ತಟ್ಟಿದ ಕೊರೊನಾ ಬಿಸಿ

    ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್‍ಗೂ ತಟ್ಟಿದ ಕೊರೊನಾ ಬಿಸಿ

    ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ಇಂದಿರಾ ಕ್ಯಾಂಟೀನಿಗೂ ತಟ್ಟಿದ್ದು, ಪ್ರತಿ ದಿನ ನೂರಾರು ಜನರಿಂದ ತುಂಬಿರುತ್ತಿದ್ದ ಕ್ಯಾಂಟೀನ್ ಗಳು ಇಂದು ಜನರಿಲ್ಲದೆ ಬಣಗುಡುತ್ತಿವೆ.

    ಕೂಲಿ ಕಾರ್ಮಿಕರು, ಪ್ರಯಾಣಿಕರು, ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವುದರಿಂದ ಕ್ಯಾಂಟೀನಿಗೆ ಬರುವವರ ಸಂಖ್ಯೆ ಕೂಡ ಕಡಿಮೆಯಾಗಿದೆ. ರಾಜ್ಯಾದ್ಯಂತ ಬಂದ್ ಇರುವುದರಿಂದ ಜನ ಹೋಟೆಲ್ ಗಳಿಗೆ ಬರುವುದನ್ನು ಕಡಿಮೆ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ 9 ಗಂಟೆಗೆ 500 ಟೋಕನ್ ಗಳು ಖಾಲಿಯಾಗುತ್ತಿದ್ದವು ಆದರೆ ಇದೀಗ 50 ರಿಂದ 100 ಟೋಕನ್ ಮಾತ್ರ ಹೋಗಿವೆ ಎಂದು ಕ್ಯಾಂಟೀನ್ ಸಿಬ್ಬಂದಿ ಹೇಳಿದ್ದಾರೆ.

    ರಾಯಚೂರಿನಲ್ಲಿ ಆಯೋಜನೆಗೊಂಡಿದ್ದ ಬಹುತೇಕ ಕಾರ್ಯಕ್ರಮಗಳೂ ರದ್ದಾಗಿದ್ದು, ಜನರಿಲ್ಲದೆ ರೈಲು ನಿಲ್ದಾಣ ಬಣಗುಡುತ್ತಿದೆ. ಕಲಬುರಗಿಯಿಂದ ಹಾಗೂ ರಾಯಚೂರಿಗೆ ಓಡಾಡುವ ಜನರ ಸಂಖ್ಯೆ ಅಧಿಕವಾಗಿತ್ತು. ಆದರೆ ಕೊರೊನಾ ವೈರಸ್ ನಿಂದಾಗಿ ವೃದ್ಧ ಸಾವನ್ನಪ್ಪಿದ ನಂತರ ಕಲಬುರಗಿಗೆ ಪ್ರಯಾಣ ಬೆಳೆಸುವವರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ರಾಯಚೂರು ಬಣಗುಡುತ್ತಿದೆ.