ಬೆಂಗಳೂರು: ಮಹಾನಗರದ ಬಡಜನತೆಯ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್‍ಗೆ ಅನುದಾನದ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರದ ನಡುವೆ ಅನುದಾನಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ.
ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ನಕಾರ ಎಂದಿದೆ. ಕೇವಲ ಶೇ. 25ರಷ್ಟು ಅನುದಾನ ಕೊಡುವುದಕ್ಕೆ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಶೇ. 100ರ ಬದಲು ಐವತ್ತು ಪರ್ಸೆಂಟ್ ಆದರೂ ಅನುದಾನ ಕೊಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಅವಧಿಯು ಆಗಸ್ಟ್ ತಿಂಗಳಿಗೆ ಮುಗಿದಿದ್ದು, ಹೊಸ ಟೆಂಡರ್ ಕರೆಯುವವರೆಗೂ ಹಳೆಯ ಗುತ್ತಿಗೆದಾರರನ್ನೇ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ಇಂದಿರಾ ಕ್ಯಾಂಟೀನ್‍ನ ಅವ್ಯವಹಾರ ಆರೋಪದ ಹಿನ್ನಲೆ ಸರ್ಕಾರ ತನಿಖೆಗೂ ಆದೇಶ ನೀಡಿದೆ. ಆದರೆ 150 ಕೋಟಿ ರೂ. ಇಂದಿರಾ ಕ್ಯಾಂಟೀನ್ ನಿರ್ವಹಣಾ ವೆಚ್ಚ ಬಿಬಿಎಂಪಿಗೆ ಹೊರೆಯಾಗಿದೆ ಎಂದು ಹೇಳಿದರು.
ಸರ್ಕಾರದ ಆರ್ಥಿಕ ಇಲಾಖೆಯ ತೀರ್ಮಾನದ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು. ಬಳಿಕ ಅವರ ತೀರ್ಮಾನದ ಮೇಲೆ ಇಂದಿರಾ ಕ್ಯಾಂಟೀನ್ ಅನುದಾನದ ಬಗ್ಗೆ ಅಂತಿಮ ಕೈಗೊಳ್ಳಲಾಗುವುದು ಎಂದು ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದರು.
ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರು, ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ ಎಂದು ಹೇಳಿದ್ದರು.
ಆಗಸ್ಟ್ 28ರಂದು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಉತ್ತರಿಸಿದ್ದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್, 18 ಮೊಬೈಲ್ ಕ್ಯಾಂಟೀನ್‍ಗಳಿವೆ. 14.40 ಕೋಟಿ ಜನ ಈವರೆಗೆ ಊಟ ಮಾಡಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿ ಹಣ ಬಿಡುಗಡೆ ಮಾಡಿತ್ತು. ವಿವಿಧ ಕಾಮಗಾರಿಗೆ ಹೆಚ್ಚುವರಿಯಾಗಿ 24.37 ಕೋಟಿ ರೂ. ಖರ್ಚಾಗಿದೆ. ರಾಜ್ಯ ಸರ್ಕಾರ 15 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿತು ಎಂದು ಮಾಹಿತಿ ನೀಡಿದ್ದರು.
2019-20ರ ಸಾಲಿನ ಬಜೆಟ್‍ನಲ್ಲಿ 210 ಕೋಟಿ ರೂ. ಅನುದಾನ ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಆದರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‍ಗೆ ಯಾವುದೇ ಹಣ ಮೀಸಲಿಡಲಿಲ್ಲ. ಎರಡು ಮತ್ತು ಮೂರನೇ ಪತ್ರವನ್ನು ಕೂಡ ಬರೆದಿದ್ದೆ. ಇವತ್ತಿಗೂ ಸರ್ಕಾರವಾಗಲಿ, ಪಾಲಿಕೆಯಲ್ಲಾಗಲಿ ಹಣ ಮೀಸಲಿಟ್ಟಿಲ್ಲ. ಇದೀಗ ಮುಚ್ಚುವ ಪರಿಸ್ಥಿತಿ ಬಂದಿದ್ದು, ನೀವು ಚರ್ಚಿಸಿ ನಿರ್ಧಾರ ಮಾಡಿ ಎಂದು ಬಿಬಿಎಂಪಿ ಸದಸ್ಯರ ಮುಂದೆ ವಿವರಿಸಿದ್ದರು.
ತುಮಕೂರು: ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಬಡವರಿಗೆ ನೀಡಬೇಕೆಂಬ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದರು. ಮೊದಮೊದಲು ಚೆನ್ನಾಗಿ ನಡೆಯುತ್ತಿದ್ದ ಇಂದಿರಾ ಕ್ಯಾಂಟೀನ್‍ಗಳು ಇದೀಗ ಹಳ್ಳ ಹಿಡಿಯುವ ಸ್ಥಿತಿಗೆ ಬಂದಿದೆ.
ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯರ ಕನಸಿನ ಕೂಸು. ಅದೆಷ್ಟೋ ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಅಂಥವರಿಗಾಗಿಯೇ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದರು. ನಂತರ ಜಿಲ್ಲೆಗಳಿಗೂ ವಿಸ್ತರಿಸಿದರು. ಸಾವಿರಾರು ಜನ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಊಟ ಮಾಡಿ ತಮ್ಮ ಹಸಿವನ್ನು ನೀಗಿಸಿಕೊಂಡರು. ಆದರೆ ಅತ್ತ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಕೂಡ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ.
ತುಮಕೂರು ನಗರದ ಪಾಲಿಕೆ ಆವರಣ, ಕ್ಯಾತಸಂದ್ರ, ಶಿರಾ ಗೇಟ್ ಹಾಗೂ ಮಂಡಿಪೇಟೆ ಹೀಗೆ ನಗರದ ಒಟ್ಟು ನಾಲ್ಕು ದಿಕ್ಕುಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಮೊದ ಮೊದಲು ಜನ ಕೂಡ ಊಟ, ತಿಂಡಿಗಾಗಿ ಮುಗಿಬೀಳುತ್ತಿದ್ದರು. ಅದೆಷ್ಟೋ ಸಲ ಜನ ಊಟ ಸಿಗದೇ ಕ್ಯಾಂಟೀನ್ ಸಿಬ್ಬಂದಿ ಜೊತೆಗೆ ಜಗಳವಾಡಿರುವ ಪ್ರಸಂಗಗಳೂ ನಡೆದಿದೆ. ಆದರೆ ಇತ್ತೀಚೆಗೆ ಯಾಕೋ ಜನ ಇಂದಿರಾ ಕ್ಯಾಂಟೀನ್‍ನತ್ತ ಸುಳಿಯುತ್ತಿಲ್ಲ.
ಗ್ರಾಹಕರಿಗೆ ಕೊರತೆ ಆಗಬಾರದೆಂಬ ಕಾರಣಕ್ಕೆ ಗುತ್ತಿಗೆದಾರರು ಪ್ರತಿದಿನ 1500 ಜನರಿಗಾಗಿ ಊಟ-ತಿಂಡಿ ತಯಾರಿಸುತ್ತಿದ್ದಾರೆ. ಆದರೆ ಗ್ರಾಹಕರು ಬಾರದಿದ್ದಾಗ ಅನಿವಾರ್ಯವಾಗಿ ಆಹಾರಗಳನ್ನು ಮೋರಿಗೆ ಎಸೆಯುವ ಸ್ಥಿತಿ ಬಂದಿದೆ. ಗುತ್ತಿಗೆದಾರರು ಮಾತ್ರ ದಿನವೊಂದಕ್ಕೆ 1500 ಟೋಕನ್ ಸೇಲ್ ಆದ ಲೆಕ್ಕ ತೋರಿಸುತ್ತಿದ್ದಾರೆ.
ಬೆಂಗಳೂರು: ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ ಎಂದು ಸ್ವತಃ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್, 18 ಮೊಬೈಲ್ ಕ್ಯಾಂಟಿನ್ ಇವೆ. 14.40 ಕೋಟಿ ಜನ ಈವರೆಗೆ ಊಟ ಮಾಡಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿ ಹಣ ಬಿಡುಗಡೆ ಮಾಡಿತ್ತು. ವಿವಿಧ ಕಾಮಗಾರಿಗೆ ಹೆಚ್ಚುವರಿಯಾಗಿ 24.37 ಕೋಟಿ ರೂ. ಖರ್ಚಾಗಿದೆ. ರಾಜ್ಯ ಸರ್ಕಾರ 15 ಕೋಟಿ ಮಾತ್ರ ಬಿಡುಗಡೆ ಮಾಡಿತು ಎಂದು ತಿಳಿಸಿದ್ದಾರೆ.
2019-20 ರ ಸಾಲಿನ ಬಜೆಟ್ ನಲ್ಲಿ 210 ಕೋಟಿ ರೂ. ಅನುದಾನ ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಆದರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನಿಗೆ ಯಾವುದೇ ಹಣ ಮೀಸಲಿಡಲಿಲ್ಲ. ಎರಡು ಮತ್ತು ಮೂರನೇ ಪತ್ರವನ್ನು ಕೂಡ ಬರೆದಿದ್ದೆ. ಇವತ್ತಿಗೂ ಸರ್ಕಾರವಾಗಲಿ, ಪಾಲಿಕೆಯಲ್ಲಾಗಲಿ ಹಣ ಮೀಸಲಿಟ್ಟಿಲ್ಲ. ಇದೀಗ ಮುಚ್ಚುವ ಪರಿಸ್ಥಿತಿ ಬಂದಿದ್ದು, ನೀವು ಚರ್ಚಿಸಿ ನಿರ್ಧಾರ ಮಾಡಿ ಎಂದು ಬಿಬಿಎಂಪಿ ಸದಸ್ಯರ ಮುಂದೆ ವಿವರಿಸಿದರು.
ಆಯುಕ್ತರ ಈ ಹೇಳಿಕೆಯಿಂದ ಇಂದಿರಾ ಕ್ಯಾಟೀನ್ ಭವಿಷ್ಯ ಮುಂದಿನ 15 ದಿನಗಳಲ್ಲಿ ನಿರ್ಧಾರವಾಗಲಿದೆ. ಈ ಸುದ್ದಿ ಹೊರ ಬೀಳುತ್ತಲೇ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದು, ಬಿಜೆಪಿ ಇಂದಿರಾ ಮುಚ್ಚಲು ಮುಂದಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಎಚ್ಚರಿಕೆ ನೀಡಿದ್ದಾರೆ.
ಇಂದಿರಾ ಕ್ಯಾಂಟೀನ್ ಕಟ್ಟಡ ಹಾಗೂ ಗ್ರಾಹಕರ ಸಂಖ್ಯೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಪಬ್ಲಿಕ್ ಟಿವಿ ವರದಿ ಮೂಲಕ ಬೆಳಕು ಚೆಲ್ಲಿತ್ತು. ಅಕ್ರಮದ ವಾಸನೆ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡಿದೆ.
ಬೆಂಗಳೂರು: ಹಗರಣ, ಅಕ್ರಮದ ಹೆಸರಿನಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಾರೆ. ಇದೀಗ ಅದನ್ನೇ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಇಂದಿರಾ ಕ್ಯಾಂಟೀನ್‍ನಲ್ಲಿ ನಡೆದ ಅಕ್ರಮವನ್ನು ತನಿಖೆಗೆ ವಹಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕೆಟ್ಟ ವಿಚಾರಗಳನ್ನು ಇಟ್ಟುಕೊಂಡು ಈ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಇಂದಿರಾ ಕ್ಯಾಂಟೀನ್‍ನಲ್ಲಿ ಇಂದಿರಾ ಹೆಸರುವ ಇರುವ ಕಾರಣಕ್ಕಾಗಿ ಬಿಜೆಪಿಯವರಿಗೆ ಅದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸುವ ಸಂಚು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಡಿಕೆಶಿಗೆ ಟಾಂಗ್
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಎಐಸಿಸಿ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಪತ್ರಿಕೆಗಳಲ್ಲಿ ಬಂದ ತಕ್ಷಣ ಎಲ್ಲವೂ ನಿಜ ಎನ್ನಲು ಸಾಧ್ಯವಿಲ್ಲ. ಪತ್ರಿಕೆಗಳಲ್ಲಿ ಪ್ರಚಾರ ತೆಗೆದುಕೊಂಡು ಕೆಪಿಸಿಸಿ ಅಧ್ಯಕ್ಷರಾಗಲು ಸಾಧ್ಯವಿಲ್ಲ. ಪ್ರಚಾರದ ಮೂಲಕ ಆ ಸ್ಥಾನಕ್ಕೆ ಬರಲು ಆಗುವುದಿಲ್ಲ. ಕೇವಲ ಒಬ್ಬರಿಂದ ಪಕ್ಷ ಸಂಘಟನೆ ಮಾಡುತ್ತೇವೆ ಎನ್ನುವುದು ಸುಳ್ಳು. ಬಿಜೆಪಿಯಲ್ಲಿರುವ ಗೊಂದಲಗಳನ್ನು ಡೈವರ್ಟ್ ಮಾಡಲು ಉದ್ದೇಶಪೂರ್ವಕವಾಗಿ ಕಾಂಗ್ರೆಸ್‍ನಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿರಬಹುದು ಎಂದು ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ನಮ್ಮ ನಾಯಕರು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕೇವಲ ಒಬ್ಬಿಬ್ಬರು ಹೇಳಿದ ಮಾತ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ. ಕೆಪಿಸಿಸಿ ಪುನರಚನೆ ಮಾಡುತ್ತೇವೆ. ಅಧ್ಯಕ್ಷರ ಬದಲಾವಣೆಯನ್ನು ಎಐಸಿಸಿ ನಾಯಕರು ನೋಡಿಕೊಳ್ಳುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ‘ಪಬ್ಲಿಕ್ ಟಿವಿ’ ವಿಶೇಷ ವರದಿ ಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಕಾರ್ಯದರ್ಶಿಗೆ ಸಿಎಂ ಸೂಚಿಸಿದ್ದಾರೆ.
ಗುತ್ತಿಗೆ ನೀಡಿರುವ ಸಂಸ್ಥೆಗಳ ಹಾಗೂ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರುವ ಸಂಸ್ಥೆಗಳ ವಿರುದ್ಧ ತನಿಖೆಗೆ ಆದೇಶಿಸಿದೆ. ಇದರ ಜೊತೆಯಲ್ಲೇ ಚೆಫ್ ಟಾಕ್ ಹಾಸ್ಪಿಟಾಲಿಟಿ ಸರ್ವೀಸ್ ಹಾಗೂ ರಿವಾಡ್ರ್ಸ್ ಸಂಸ್ಥೆಗಳ ವಿರುದ್ಧ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.
ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಹಾಗೂ ಗ್ರಾಹಕರ ಸಂಖ್ಯೆಯಲ್ಲಿ ಅವ್ಯವಹಾರ ನಡೆದಿರುವ ಕುರಿತು ‘ಪಬ್ಲಿಕ್ ಟಿವಿ’ ವಿಸ್ತøತ ವರದಿ ಮಾಡಿತ್ತು. 174 ಇಂದಿರಾ ಕ್ಯಾಂಟೀನ್, 15 ಮೊಬೈಲ್ ಕ್ಯಾಂಟಿನ್‍ಗಳಲ್ಲಿ ಪ್ರತಿ ತಿಂಗಳು ಸುಮಾರು 62.70 ಲಕ್ಷ ಜನರು ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ಮಾಡುತ್ತಿದ್ದಾರೆ ಎಂಬ ಮಹಿತಿಯನ್ನು ನೀಡಿ ಅಪಾರ ಮೊತ್ತದ ಸಬ್ಸಿಡಿಯನ್ನು ಪಡೆಯುತ್ತಿರುವ ಮಾಹಿತಿ ಲಭ್ಯವಾಗಿದೆ.
174 ಇಂದಿರಾ ಕ್ಯಾಂಟೀನ್, 15 ಮೊಬೈಲ್ ಕ್ಯಾಂಟೀನ್‍ಗಳಲ್ಲಿ ಪ್ರತಿ ತಿಂಗಳು 6.82 ಕೋಟಿ ರೂ. ಸಬ್ಸಿಡಿ ಹಣ ಪಡೆಯುತ್ತಿವೆ. ವಾಸ್ತವವಾಗಿ ಈ ಅಂಕಿಅಂಶಗಳು ತಪ್ಪು ಮಾಹಿತಿಯಿಂದ ಕೂಡಿದ್ದು, ಅಪಾರ ಪ್ರಮಾಣದ ಸಬ್ಸಿಡಿಯನ್ನು ವಂಚಿಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ಈ ಬಗ್ಗೆ ಕೂಡಲೇ ಪರಿಶೀಲಿಸಿ ತನಿಖಾ ವರದಿ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.
ಮೊದಲಿನಿಂದಲೂ ಇಂದಿರಾ ಕ್ಯಾಂಟೀನ್ ಕುರಿತು ಯಡಿಯೂರಪ್ಪನವರಿಗೆ ಅಸಮಾಧಾನವಿತ್ತು. ಅಲ್ಲದೆ, ಅಧಿಕಾರಕ್ಕೆ ಬಂದ ನಂತರವೂ ಸಹ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಬೇಕು ಎಂಬ ಚಿಂತನೆ ನಡೆಸಿದ್ದರು. ಇದೀಗ ಅಕ್ರಮದ ಕುರಿತು ತನಿಖೆಗೆ ಆದೇಶಿಸಿದ್ದು, ಈ ಮೂಲಕ ಇಂದಿರಾ ಕ್ಯಾಂಟೀನ್ ಮುಚ್ಚುವ ಚಿಂತನೆ ನಡೆಸಿದ್ದಾರಾ ಎಂಬ ಅನುಮಾನ ಎದ್ದಿದೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ತಡ ಬಿಬಿಎಂಪಿ ಬಜೆಟ್, ವೈಟ್ ಟ್ಯಾಪಿಂಗ್ ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳ ತನಿಖೆಗೆ ಒಪ್ಪಿಸಲಾಗಿದೆ. ಈಗ ಇಂದಿರಾ ಕ್ಯಾಂಟೀನ್ ಸರದಿ ಎಂಬ ಮಾತು ಹರಿದಾಡುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಗರಣ ಆರೋಪವಿರುವ ಎಲ್ಲ ಯೋಜನೆಗಳನ್ನ ತನಿಖೆಗೆ ಒಪ್ಪಿಸುತ್ತಿದ್ದಾರೆ. ಈ ಸಾಲಿಗೆ ಇಂದಿರಾ ಕ್ಯಾಂಟೀನ್ ಸಹ ಶೀಘ್ರವೇ ಸೇರ್ಪಡೆಯಾಗುವ ಸಾಧ್ಯತೆ ಇದೆ. ಇಂದಿರಾ ಕ್ಯಾಂಟೀನ್ ಬಡವರ ಹೊಟ್ಟೆ ತುಂಬಿಸುವುದರ ಬದಲು ಉಳ್ಳವರ ಖಜಾನೆ ತುಂಬಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಚಿವ ಕೆ.ಜೆ ಜಾರ್ಜ್ ಯೋಜನೆ ಹೆಸರಲ್ಲಿ ಕೋಟಿ ಲೂಟಿ ಹೊಡೆದಿದ್ದಾರೆ ಎಂಬ ಆರೋಪವಿದೆ.
ವಿಪಕ್ಷ ಕಾಂಗ್ರೆಸ್ ನಾಯಕರು ಅವರ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಅಕ್ರಮವನ್ನು ತನಿಖೆಗೆ ಒಳಪಡಿಸುವ ಮೂಲಕ ರಾಜಕೀಯವಾಗಿ ಕಟ್ಟಿಹಾಕುವ ಪ್ಲ್ಯಾನ್ ನಡೆಯುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 189 ಇಂದಿರಾ ಕ್ಯಾಂಟೀನ್‍ನಲ್ಲಿ ಒಂದಕ್ಕೆ ಹತ್ತು ಪಟ್ಟು ಅಂಕಿ ಅಂಶ ತೋರಿಸಿ ಕೋಟ್ಯಂತರ ರೂಪಾಯಿಯ ಸಬ್ಸಿಡಿ ಹಣದ ಹಗಲು ದರೋಡೆ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಚರ್ಚಿಸುತ್ತಿದೆ. ಉನ್ನತ ಮಟ್ಟದ ಅಥವಾ ಸಿಐಡಿ ತನಿಖೆ ನಡೆಸುವ ಬಗ್ಗೆ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್. ರಮೇಶ್ ಅವರ ದೂರು ಸೇರಿದಂತೆ ಸಾರ್ವಜನಿಕವಾಗಿ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಗೆ ಮುಂದಾಗುವ ಸಂಭವ ಇದೆ.
ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣದ ಗೋಲ್ ಮಾಲ್ ಮಾಹಿತಿ:
* ಮಾಜಿ ಸಿಎಂ ಸಿದ್ದರಾಮಯ್ಯ 2017 ರಲ್ಲಿ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಆದೇಶ ನೀಡಲಾಗಿತ್ತು.
* ತಮಿಳುನಾಡು ಮೂಲದ ಎಂ/ಎಸ್ ಇನ್‍ಪ್ರಸ್ಟ್ರಕ್ಚರ್ ಫ್ರೈ ಲಿಮಿಟೆಡ್‍ಗೆ ಕ್ಯಾಂಟೀನ್ ನಿರ್ಮಾಣ ಗುತ್ತಿಗೆ
* ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಒಟ್ಟು 72 ಕೋಟಿ 90 ಲಕ್ಷ ವೆಚ್ಚ
* ಪ್ರತಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ತಲಾ 28.50 ಲಕ್ಷ
* 198 ಕ್ಯಾಂಟೀನ್‍ಗೆ ಒಟ್ಟು 56.3 ಕೋಟಿ ವೆಚ್ಚ
* ಅಡುಗೆ ಮನೆ ನಿರ್ಮಾಣಕ್ಕೆ 16.47 ಕೋಟಿ.
* ಕ್ಯಾಂಟೀನ್, ಅಡುಗೆ ಮನೆ ಅಗತ್ಯ ಸಲಕರಣೆಗಳಿಗೆ 14 ಕೋಟಿ 53 ಲಕ್ಷ ಬಿಡುಗಡೆ
* 900 ಚ.ಅಡಿ ವಿಸ್ತೀರ್ಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ.
ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಹಗರಣದ ದೂರು ಸದ್ಯ ಎಸಿಬಿ, ಲೋಕಾಯುಕ್ತ, ಬಿಎಂಟಿಎಫ್ ಅಂಗಳದಲ್ಲಿದೆ. ಕಟ್ಟಡ ಕೆಲಸಕ್ಕೆ ಮುನ್ನ ಸರ್ಕಾರ ಹಣ ಬಿಡುಗಡೆ ಮಾಡಿತ್ತು. 198 ಕ್ಯಾಂಟೀನ್ ಗಳಲ್ಲಿ 174 ಕ್ಯಾಂಟೀನ್ ಮಾತ್ರ ನಿರ್ಮಾಣವಾಗಿದೆ. 27 ಅಡುಗೆ ಮನೆ ನಿರ್ಮಿಸಬೇಕಿದ್ದ ಸಂಸ್ಥೆ 19 ಅಡುಗೆ ಮನೆ ಮಾತ್ರ ನಿರ್ಮಿಸಿದೆ. 24 ಕ್ಯಾಂಟೀನ್, 8 ಅಡುಗೆ ಮನೆ ನಿರ್ಮಾಣ ಬಾಕಿ ಇದ್ದರೂ ಹೆಚ್ಚುವರಿಯಾಗಿ 11 ಕೋಟಿ 72 ಲಕ್ಷ ಹಣ ಈಗಾಗಲೇ ಸಂಸ್ಥೆಗೆ ಬಿಡುಗಡೆಯಾಗಿದೆ.
ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿ ಎರಡು ವರ್ಷಗಳು ಕಳೆದಿವೆ. ಆದರೆ ಯೋಜನೆ ಆರಂಭದಿಂದಲೂ ಸಾಕಷ್ಟು ವಿವಾದಗಳು ಸೃಷ್ಟಿ ಆಗುತ್ತಿವೆ. ಆರಂಭದಲ್ಲಿ ಕ್ಯಾಂಟೀನ್ ನಿರ್ಮಾಣದಲ್ಲಿ 9 ಲಕ್ಷದಲ್ಲಿ ನಿರ್ಮಿಸಬಹುದಾದ ಕಟ್ಟಡಕ್ಕೆ 28 ಲಕ್ಷ ವೆಚ್ಚ ಮಾಡಿದ ಆರೋಪ ಕೇಳಿಬಂದಿತ್ತು. ಬಳಿಕ ಶೆಫ್ ಟಾಕ್ ಮತ್ತು ರಿವಾರ್ಡ್ ಎಂಬ ಗುತ್ತಿಗೆ ಪಡೆದ ಎರಡು ಸಂಸ್ಥೆಗಳು ಸರ್ಕಾರದಿಂದ ಅಕ್ರಮವಾಗಿ ಸಬ್ಸಿಡಿ ಪಡೆಯುತ್ತಿವೆ ಎಂದು ದಾಖಲೆ ಸಹಿತ ದೂರಿನ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿದ್ದವು.
ಅದರಲ್ಲೂ ಮುಖ್ಯವಾಗಿ ಊಟ, ತಿಂಡಿ ಲೆಕ್ಕದಲ್ಲಿ ನೀಡುತ್ತಿರುವ ಇಂಡೆಂಟ್‍ಗಳ ದಾಖಲೆಗಳಂತೆ ಪ್ರತೀ ತಿಂಗಳು ಗ್ರಾಹಕರಿಂದ ಸಂಗ್ರಹಿಸುತ್ತಿರುವ ಮೊತ್ತ ಸರಾಸರಿ 4,69,92,900 ರೂಪಾಯಿ ಆಗಿದೆ. ಹಾಗೆಯೇ ಪ್ರತೀ ತಿಂಗಳೂ ಬಿಬಿಎಂಪಿ ಮೂಲಕ ಸರ್ಕಾರದಿಂದ ಇವುಗಳು ಪಡೆಯುತ್ತಿರುವ ಸಬ್ಸಿಡಿ ಮೊತ್ತವು ಸುಮಾರು 6,82,81,373 ರೂಪಾಯಿ ಇದೆ. ಈ ಅಂಕಿ ಅಂಶಗಳ ಲೆಕ್ಕ ಸಂಶಯಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ವರ್ಷಗಳ ಹಿಂದೆ ಬಿಜೆಪಿ ತನಿಖೆಗೆ ಒತ್ತಾಯಿಸಿತ್ತು. ಆ ವಿಚಾರ ಇದೀಗ ಪಾಲಿಕೆಯಲ್ಲಿ ಮತ್ತೆ ಸದ್ದು ಮಾಡುತ್ತಿದೆ.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆದ 60ಕ್ಕೂ ಹೆಚ್ಚು ಅಕ್ರಮಗಳ ಬಗ್ಗೆ ಬಿಜೆಪಿ ಸರ್ಕಾರ ತನಿಖೆಗೆ ಮುಂದಾಗಿದೆ. ಅದರಲ್ಲಿ ಮುಖ್ಯವಾಗಿ ಇಂದಿರಾ ಕ್ಯಾಂಟೀನ್‍ನಲ್ಲಾದ ಅಕ್ರಮದ ಬಗ್ಗೆಯೂ ತನಿಖೆ ನಡೆಸಲು ಸಿಎಂ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿದ್ದ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಅನೇಕ ಯೋಜನೆಗಳು ರದ್ದು ಆಗಲಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿತ್ತು. ಇದನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿಗಳು ಜನಪರ ಯೋಜನೆಗಳನ್ನು ಮುಂದುವರಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ಯ ಭಾಗ್ಯಯೋಜನೆಯನ್ನು ಕೂಡ ರದ್ದು ಮಾಡುವುದಿಲ್ಲ. ಈ ಯೋಜನೆ ಮುಂದುವರಿಸಲು ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆ ಕಡತಕ್ಕೆ ಈಗಾಗಲೇ ಸಹಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿ ಆ ಹಣವನ್ನು ಕೃಷಿ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಬಂದಿದೆ. ಒಂದು ವೇಳೆ ಸರ್ಕಾರ ಇಂತಹ ನಿರ್ಧಾರ ಕೈಗೊಂಡಲ್ಲಿ ಸದನದ ಹೊರಗೆ ಹಾಗೂ ಒಳಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಬಡತನ ರೇಖೆಗಿಂತ ಕೆಳಗಿದ್ದ 4 ಕೋಟಿ ಬಡವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆದರೆ ಬಿಜೆಪಿ ಸರ್ಕಾರ ಅನ್ನಭಾಗ್ಯದ ಯೋಜನೆ ಅಡಿ ನೀಡುವ ಅಕ್ಕಿಯನ್ನು 7 ಕೆ.ಜಿ.ಗಿಂತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಸಿದೆ. ಅನ್ನಭಾಗ್ಯದಲ್ಲಿ ಉಳಿದ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಲು ಮುಂದಾಗಿದೆ. ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೀಡಲಿ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಬಡವರ ಅಕ್ಕಿ ಕಡಿತ ಮಾಡಿ ಹಣ ಕೊಡುವುದು ಬಡವರ ವಿರೋಧಿ ಚಿಂತನೆ ಆಗಿದೆ ಎಂದು ಕಿಡಿಕಾರಿದ್ದರು.
ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ.#MyPressconference
ಇಂದಿರಾ ಕ್ಯಾಂಟೀನ್‍ನಲ್ಲೂ ಗುಣಮಟ್ಟದ ಆಹಾರ ಸಿಗಬೇಕು. ಅದರ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಬೇಕು. ಇದು ಸಹ ಬಡವರಿಗೆ, ಹಸಿದವರಿಗೆ ರಿಯಾಯಿತಿ ದರದಲ್ಲಿ ಮಾಡಿದ ಕಾರ್ಯಕ್ರಮ. ಬೆಂಗಳೂರಿನ ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚುವರಿ ಇಂದಿರಾ ಕ್ಯಾಂಟೀನ್ ಆಗಬೇಕಿದೆ. ಇಂದಿರಾ ಕ್ಯಾಂಟೀನ್‍ಗೆ ಸರ್ಕಾರದಿಂದ ಹಣ ನೀಡಲು ಆಗಲ್ಲ. ನೀವೇ ಮಾಡಿಕೊಳ್ಳಿ ಎಂದು ಬಿಬಿಎಂಪಿಗೆ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಯೋಜನೆಗೆ 200 ಕೋಟಿ ರೂ.ಗಳೂ ಖರ್ಚಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಇದು ನಿರಂತರವಾಗಿ ನೆಡೆಯಬೇಕು ಎಂದು ಆಗ್ರಹಿಸಿದರು.
2.30 ಲಕ್ಷ ಕೋಟಿ ರೂ. ರಾಜ್ಯದ ಬಜೆಟ್ ಇದೆ. ಕಾಲೇಜು ವಿಧ್ಯಾರ್ಥಿಗಳಿಗೆ, ಆಸ್ಪತ್ರೆಗಳ ಕಡೆ ಇದು ತುಂಬಾ ಅನುಕೂಲ ಆಗಿದೆ. ಜೊತೆಗೆ ಕಾಲೇಜು, ಆಸ್ಪತ್ರೆಗಳ ಕಡೆ ಈ ಯೋಜನೆ ಮುಂದುವರೆಸಿ ಎಂದು ಬೇಡಿಕೆ ಹೆಚ್ಚಿದೆ. ಹೀಗಾಗಿ ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಯೋಜನೆ ಬಿಟ್ಟರೆ ನಾನು ಸುಮ್ಮನಿರಲ್ಲ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಎಚ್ಚರಿಸಿದ್ದರು.
ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ.
ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿ ಆ ಹಣವನ್ನು ಕೃಷಿ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಬಂದಿದ್ದು, ಸರ್ಕಾರ ಇಂತಹ ನಿರ್ಧಾರ ಕೈಗೊಂಡಲ್ಲಿ ಸದನದ ಹೊರಗೆ ಹಾಗೂ ಒಳಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬಡತನ ರೇಖೆಗಿಂತ ಕೆಳಗಿದ್ದ 4 ಕೋಟಿ ಬಡವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆದರೆ ಬಿಜೆಪಿ ಸರ್ಕಾರ ಅನ್ನಭಾಗ್ಯದ ಯೋಜನೆಯಡಿ ನೀಡುವ ಅಕ್ಕಿಯನ್ನು 7 ಕೆ.ಜಿ.ಗಿಂತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಸಿದೆ. ಅನ್ನಭಾಗ್ಯದಲ್ಲಿ ಉಳಿದ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಲು ಮುಂದಾಗಿದೆ. ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ.ನೀಡಲಿ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಬಡವರ ಅಕ್ಕಿ ಕಡಿತ ಮಾಡಿ ಹಣ ಕೊಡುವುದು ಬಡವರ ವಿರೋಧಿ ಚಿಂತನೆ ಆಗಿದೆ ಎಂದು ಕಿಡಿ ಕಾರಿದ್ದಾರೆ.
ನಾನು ಎರಡನೇ ಬಾರಿ ಅಧಿಕಾರಕ್ಕೆ ಬಂದಿದ್ದರೆ ಪ್ರತಿಯೊಬ್ಬರಿಗೆ 10 ಕೆ.ಜಿ ಕೊಡುವ ಚಿಂತನೆ ಮಾಡಿದ್ದೆ. ಆದರೆ ಬಿಜೆಪಿಯವರು ಇದೀಗ ಪ್ರತಿಯೊಬ್ಬರಿಗೆ 7 ಕೆ.ಜಿ. ನೀಡುತ್ತಿರುವುದರಲ್ಲಿಯೂ ಕಡಿಮೆ ಮಾಡುತ್ತಿದ್ದಾರೆ. ಈ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯಲು ಮುಂದಾಗಿದ್ದಾರೆ. ಇದು ಬಡವರಿಗಾಗುವ ಅನ್ಯಾಯ, ಅನ್ನಭಾಗ್ಯ ಅಕ್ಕಿ ಕಡಿತ ಮಾಡಿದಲ್ಲಿ ಕಾಂಗ್ರೆಸ್ ಸಹಿಸುವುದಿಲ್ಲ. ಈ ಕುರಿತು ತೀವ್ರ ಹೋರಾಟ ಮಾಡುತ್ತೇವೆ. ಸರ್ಕಾರ ಕೂಡಲೇ ಈ ಚಿಂತನೆ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಇಂದಿರಾ ಕ್ಯಾಂಟೀನ್‍ನಲ್ಲೂ ಗುಣಮಟ್ಟದ ಆಹಾರ ಸಿಗಬೇಕು. ಅದರ ಸಂಪೂರ್ಣ ವೆಚ್ಚ ಸರ್ಕಾರ ಭರಿಸಬೇಕು. ಇದು ಸಹ ಬಡವರಿಗೆ, ಹಸಿದವರಿಗೆ ರಿಯಾಯಿತಿ ದರದಲ್ಲಿ ಮಾಡಿದ ಕಾರ್ಯಕ್ರಮ. ಬೆಂಗಳೂರಿನ ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚುವರಿ ಇಂದಿರಾ ಕ್ಯಾಂಟೀನ್ ಆಗಬೇಕಿದೆ. ಇಂದಿರಾ ಕ್ಯಾಂಟೀನ್‍ಗೆ ಸರ್ಕಾರದಿಂದ ಹಣ ನೀಡಲು ಆಗಲ್ಲ. ನೀವೇ ಮಾಡಿಕೊಳ್ಳಿ ಎಂದು ಬಿಬಿಎಂಪಿಗೆ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಯೋಜನೆಗೆ 200 ಕೋಟಿ ರೂ.ಗಳೂ ಖರ್ಚಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಇದು ನಿರಂತರವಾಗಿ ನೆಡೆಯಬೇಕು ಎಂದು ಆಗ್ರಹಿಸಿದರು.
ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು,ಎಚ್ಚರ ಇರಲಿ. ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ.@INCKarnatakapic.twitter.com/NKvOa8YUTX
2.30 ಲಕ್ಷ ಕೋಟಿ ರೂ. ರಾಜ್ಯದ ಬಜೆಟ್ ಇದೆ. ಕಾಲೇಜು ವಿಧ್ಯಾರ್ಥಿಗಳಿಗೆ, ಆಸ್ಪತ್ರೆಗಳ ಕಡೆ ಇದು ತುಂಬಾ ಅನುಕೂಲ ಆಗಿದೆ. ಜೊತೆಗೆ ಕಾಲೇಜು, ಆಸ್ಪತ್ರೆಗಳ ಕಡೆ ಈ ಯೋಜನೆ ಮುಂದುವರೆಸಿ ಎಂದು ಬೇಡಿಕೆ ಹೆಚ್ಚಿದೆ. ಹೀಗಾಗಿ ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಯೋಜನೆ ಬಿಟ್ಟರೆ ನಾನು ಸುಮ್ಮನಿರಲ್ಲ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರವೇ ಇಲ್ಲ:
ಬಿಎಸ್‍ವೈ ಮುಖ್ಯಮಂತ್ರಿಯಾಗಿ 22 ದಿನ ಆಯ್ತು, ರಾಜ್ಯದಲ್ಲಿ ಸರ್ಕಾರವೇ ಇಲ್ಲ. ರಾಜ್ಯದ 7 ಜಿಲ್ಲೆಯ 42 ತಾಲೂಕಿನಲ್ಲಿ ತೀವ್ರ ತರನಾದ ಬರ ಇದೆ. ವಾಡಿಕೆ ಮಳೆಗಿಂತ ಶೇ.20 ಕೊರತೆಯಾಗಿದೆ.
ಆದರೆ, ಈವರೆಗೆ ಆ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಫೆಬ್ರವರಿಯಿಂದ ಕೇಂದ್ರ ಸರ್ಕಾರ ಅನುದಾನವನ್ನೇ ಬಿಡುಗಡೆ ಮಾಡಿಲ್ಲ. ಮೋದಿ ಬಡವರ ಪರ ಮಾತನಾಡುತ್ತಾರೆ ಅಂದುಕೊಂಡಿದ್ದೆ. ಎಲ್ಲಿದೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ನಾವು ಮನವಿ ಕೊಟ್ಟಿರುವ ಅನುದಾನವನ್ನೇ ಕೇಂದ್ರ ನೀಡಿಲ್ಲ. ಈಗ ಹೇಗೆ ನೆರವು ಘೋಷಿಸುತ್ತದೆ. ಅಭಿವೃದ್ಧಿ, ಬರ, ಪ್ರವಾಹದ ಬಗ್ಗೆ ಮಾತುಕತೆಯೇ ಇಲ್ಲ. ಕೇವಲ ಭಾವನಾತ್ಮಕವಾಗಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಲ್ಲಾ ಮಂತ್ರಿಗಳಿಲ್ಲದೆ ಸ್ವಾತಂತ್ರ್ಯ ದಿನವನ್ನು ಆಚರಿಸಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು. ಕೇವಲ ಅಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ, ಇದು ಸರ್ಕಾರಕ್ಕೆ ನಾಚಿಕೆಗೇಡು ಎಂದು ಗುಡುಗಿದರು.
ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿಯವರೇ ಸ್ವತಃ ಬಂದು ಪರಿಶೀಲಿಸಬೇಕಿತ್ತು. ಇಲ್ಲಿಯವರೆಗೆ ಒಂದೇ ಒಂದು ರೂಪಾಯಿ ನೀಡಿಲ್ಲ. ಹೋಗಲಿ ಎಷ್ಟು ನಷ್ಟವಾಗಿದೆ ಎಂಬ ಸರ್ವೆಯನ್ನೇ ಮಾಡಿಸಿಲ್ಲ. ನಷ್ಟದ ಅಂದಾಜಿನ ಬಗ್ಗೆ ವರದಿಯನ್ನೇ ಕೇಂದ್ರಕ್ಕೆ ನೀಡಿಲ್ಲ. ನಿನ್ನೆ ನರೇಂದ್ರ ಮೋದಿಯವರನ್ನು ಬಿಎಸ್‍ವೈ ಭೇಟಿ ಮಾಡಿದ್ದಾರೆ. ಪ್ರಧಾನಿ ಒಂದೇ ಒಂದು ಭರವಸೆ ನೀಡಿಲ್ಲ. ನೆರವು ಕೊಡ್ತಾರೆ ಎಂದು ಇವರೇ ಹೇಳಿಕೊಂಡಿದ್ದಾರೆ. ಇವರು ಕೇಂದ್ರಕ್ಕೆ ವರದಿ ನೀಡುವುದು ಯಾವಾಗ, ಕೇಂದ್ರದಿಂದ ಪರಿಹಾರ ಬರುವುದು ಯಾವಾಗ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka
ನಾನು ಸೋಮವಾರದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಹೋಗುತ್ತೇನೆ. ಕೇಂದ್ರ ಸರ್ಕಾರ ಈ ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಯಡಿಯೂರಪ್ಪನವರಿಗೆ ಮೋದಿ ಕಂಡರೆ ಹೆದರಿಕೆ ಅನ್ನಿಸುತ್ತೆ. ನಾನು ಹಿಂದೆ ನಿಯೋಗ ಕರೆದೋಯ್ಯುತ್ತಿದ್ದೆ. ಆಗಲೂ ಬಿಎಸ್‍ವೈ, ಮೋದಿ ಎದುರು ಮಾತನಾಡುತ್ತಿರಲಿಲ್ಲ. ಹೋಗಲಿ ಈಗಲಾದ್ರೂ ಸರ್ವ ಪಕ್ಷ ಸಭೆ ಕರೆಯಲಿ. ಸರ್ವ ಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಲಿ. ಇವರು ಮಾತನಾಡದಿದ್ದರೂ, ನಾವೇ ಮಾತನಾಡುತ್ತೇವೆ ಎಂದು ಬಿಎಸ್‍ವೈ ವಿರುದ್ಧ ಹರಿಹಾಯ್ದರು.
ಕಣ್ಣು, ಕಿವಿ ಇಲ್ಲದ ಸರ್ಕಾರ:
ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನು ನಾನು ಎಂದಿಗೂ ನೋಡಿಲ್ಲ. ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. 1 ಲಕ್ಷ ಕೋಟಿ ರೂ. ನಷ್ಟ ಆಗಿದೆ. ಇಷ್ಟು ನಿರ್ಲಜ್ಜವಾದ, ನಾಚಿಕೆಗೇಡಿನ ಸರ್ಕಾರವನ್ನು ನಾನೂ ನೋಡಿರಲಿಲ್ಲ. ಪ್ರಧಾನಿಗಳು ಪ್ರವಾಹದ ವಿಚಾರವನ್ನು ಕಾಟಾಚಾರ ಎಂಬಂತೆ ತೆಗೆದುಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರವೇಕೆ ಈವರೆಗೆ ವರದಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ನೀವ್ಯಾಕೆ ಇರೋದು?
ಸಚಿವ ಸಂಪುಟದ ಕುರಿತು ಪ್ರಶ್ನಿಸಿದರೆ, ಬಿಎಸ್‍ವೈ ಸಚಿವರಿಲ್ಲದಿದ್ದರೇನಂತೆ ಅಧಿಕಾರಿಗಳಿದ್ದಾರೆ ಎಂದು ಹೇಳುತ್ತಾರೆ. ಅಧಿಕಾರಿಗಳಿರುವುದಾದರೆ ಮುಖ್ಯಮಂತ್ರಿಗಳೇಕೆ ಇರಬೇಕು. ನಿಮ್ಮ ಪರವಾಗಿ ಪ್ರಧಾನ ಕಾರ್ಯದರ್ಶಿಗಳು ಕೆಲಸ ಮಾಡುತ್ತಾರೆ. ಅವರೇ ಅಧಿಕಾರ ನಡೆಸುತ್ತಾರೆ, ನಿಮಗೇಕೆ ಅಧಿಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲೇ ಇಂದಿರಾ ಕ್ಯಾಂಟಿನ್ ಬಂದ್ ಆಗಿದೆ.
ಟೆಂಡರ್‌ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಲು ನಿರ್ಧಾರ ಮಾಡಿಕೊಂಡಿದ್ದಾರೆ.
ಟೆಂಡರ್‌ದಾರ ಸುಮಾರು 6 ತಿಂಗಳ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಕೂಸಿಗೆ ಕೊಡಲಿ ಏಟು ಬಿದ್ದಿದೆ.
ನವಾಜ್ ಫಯಾಜ್ ಎಂಬವರು ಕರ್ನಾಟಕದ ಹಲವು ಕ್ಯಾಂಟೀನ್ ಅವರು ತೆಗೆದುಕೊಂಡಿದ್ದಾರೆ. ಹೆಚ್.ಡಿ ಕೋಟೆ, ಟಿ. ನರಸೀಪುರ ಇದು ಎಲ್ಲ ನಮ್ಮ ತಂಡ ಹಾಗೂ ಇಲ್ಲಿನ ಸಿಬ್ಬಂದಿಗೆ ಸಂಬಳ ಸಿಗುತ್ತಿಲ್ಲ. ಸಂಬಳ ಸಿಗದೇ ಹಲವು ಸಿಬ್ಬಂದಿ ಕೆಲಸ ಬಿಟ್ಟಿದ್ದಾರೆ. ಇಲ್ಲಿ ಕೂಡ ಸಿಬ್ಬಂದಿ ಬಿಟ್ಟು ಹೋಗದಂತೆ ನೋಡಿಕೊಂಡಿದ್ದೇನೆ. ಅಲ್ಲದೆ ಸಾಲ ಮಾಡಿ ನಾನೇ ಅವರಿಗೆ ಸಂಬಳ ನೀಡಿದ್ದೇನೆ. ನನ್ನ ಕೈಯಲ್ಲಿ ಆದಷ್ಟು ಮಾಡಿದ್ದೇನೆ. ಆದರೆ ಈಗ ನನ್ನಿಂದ ಆಗುತ್ತಿಲ್ಲ. ಹಾಗಾಗಿ ಕ್ಯಾಂಟೀನ್ ಕ್ಲೋಸ್ ಮಾಡಿದ್ದೇನೆ ಎಂದು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್‍ಗೆ ಬಡವರು, ಗ್ಯಾರೆ ಕೆಲಸ ಮಾಡುವವರು ಬರುತ್ತಿದ್ದರು. ಬಡವರಿಗೆ ಅನುಕೂಲ ಆಗಲಿ ಎಂದು ಕ್ಯಾಂಟೀನ್ ನಡೆಸಲಾಗುತ್ತಿತ್ತು. ಆದರೆ ಈಗ ನನ್ನಿಂದ ಆಗುತ್ತಿಲ್ಲ. ಹಾಗಾಗಿ ಇಂದಿನಿಂದ ಕ್ಯಾಂಟೀನ್ ಕ್ಲೋಸ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ರಾಮನಗರ: ಹಸಿ ಕಸವನ್ನು ಬಳಸಿಕೊಂಡು ರಸವನ್ನು ತಯಾರಿಸುವಂತಹ ಯಂತ್ರವನ್ನು ಇದೀಗ ರಾಮನಗರದ ಇಂದಿರಾ ಕ್ಯಾಂಟೀನ್‍ನಲ್ಲಿ ಪ್ರಾಯೋಗಿಕವಾಗಿ ಬಳಸಿಕೊಳ್ಳಲಾಗಿದೆ. ಫುಡ್ ವೇಸ್ಟ್ ಡೈಜೆಸ್ಟರ್ ಎಂಬ ಯಂತ್ರವನ್ನು ಇದೀಗ ಇಂದಿರಾ ಕ್ಯಾಂಟೀನ್‍ನಲ್ಲಿ ಅಳವಡಿಸಲಾಗಿದೆ.
ಮಾನವನ ಜೀರ್ಣಾಂಗ ವ್ಯವಸ್ಥೆಯಂತೆ ಈ ಯಂತ್ರ ಹಸಿಕಸವನ್ನ ಜೀರ್ಣ ಮಾಡಿ ನೀರನ್ನು ಹೊರ ಹಾಕುತ್ತಿದೆ. ಈ ಹಸಿ ಕಸದ ನೀರು ವಿಟಮಿನ್ ಹಾಗೂ ಪ್ರೊಟಿನ್‍ನಿಂದ ಕೂಡಿದ್ದು ಸಸ್ಯಗಳಿಗೆ ಹಾಕಿದರೆ ಉತ್ತಮವಾಗಿ ಬೆಳೆಯಲಿವೆ. ಅಲ್ಲದೇ ಪ್ರಾಣಿಗಳಿಗೆ ಈ ನೀರನ್ನು ಕುಡಿಸಿದರೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ.
ಇದೀಗ ಪ್ರಾಯೋಗಿಕವಾಗಿ 9 ಲಕ್ಷ ವೆಚ್ಚದ ಈ ಯಂತ್ರವನ್ನು ರಾಮನಗರದ ಇಂದಿರಾ ಕ್ಯಾಂಟೀನ್‍ನಲ್ಲಿ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆಗಳಲ್ಲೂ ಸಹ ಅಳವಡಿಸುವ ಪ್ರಯತ್ನವನ್ನು ನಡೆಸಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.