Tag: INDIRA Food Kit

  • ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    – ಗ್ಯಾರಂಟಿಗಳಿಂದ ಅಭಿವೃದ್ಧಿಯ ವೇಗ ತಗ್ಗಿದೆ ಎಂದು `ಕೈʼ ಶಾಸಕ ಬೇಸರ

    ಕಾರವಾರ: ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ (Congress Guarantee Scheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.

    ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.

    ಇನ್ನೂ 5 ಕೆಜಿ ಅಕ್ಕಿ ಬದಲಿಗೆ ಸರ್ಕಾರದಿಂದ ಇಂದಿರಾ ಕಿಟ್‌ (INDIRA Food Kit) ಕೊಡುವ ನಿರ್ಧಾರ ಕುರಿತು ಮಾತನಾಡ್ತಾ, ಮುಖ್ಯಮಂತ್ರಿಗಳು ಇಂದಿರಾ ಕಿಟ್ ಕೊಡ್ತಾರೋ ತೆಂಗಿನಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

  • ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    – 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ನಿರ್ಧಾರ

    ಬೆಂಗಳೂರು: ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.

    ʻಇಂದಿರಾ ಆಹಾರ ಕಿಟ್‌ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್‌ ನೀಡಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ

    ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ (INDIRA Food Kit) ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಅಕ್ಕದಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್‌ ಅನ್ನು ಒದಗಿಸಲು ಬಜೆಟ್‌ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ