Tag: Indus water treaty

  • ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಇಸ್ಲಾಮಾಬಾದ್:‌ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸೋದನ್ನ ಮುಂದುವರಿಸಿದ್ರೆ ನಾವು ಯುದ್ಧದಿಂದ ಹಿಂದೆ ಸರಿಯಲ್ಲ ಅಂತ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಭಾರತಕ್ಕೆ ಬೆದರಿಕೆಯೊಡ್ಡಿದ್ದಾರೆ.

    ಸಿಂಧ್ ಸರ್ಕಾರದ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿರುವುದು ಸಿಂಧೂ ಕಣಿವೆ ನಾಗರಿಕತೆ ಮತ್ತು ಸಂಸ್ಕೃತಿಯ ಮೇಲೆ ಭಾರತ ಮಾಡುತ್ತಿರುವ ದಾಳಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಯನ್ನ ಪ್ರತಿಪಾದಿಸುತ್ತೆ. ಆದ್ರೆ ಭಾರತ ಯುದ್ಧಕ್ಕೆ ಒತ್ತಾಯಿಸಿದರೆ, ನಾವು ಹಿಂದೆ ಸರಿಯಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: 1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

    bilawal bhutto

    ಮೋದಿ ಸರ್ಕಾರಕ್ಕೆ ನಾವು ಒಂದು ಸಂದೇಶ ಕಳಿಸುತ್ತೇವೆ. ನಾವು ಯಾವುದಕ್ಕೂ ಹಿಂದೆ ಸರಿಯುವುದಿಲ್ಲ, ತಲೆಬಾಗುವುದಿಲ್ಲ ಮತ್ತು ನೀವು ಸಿಂಧೂ ನದಿಯನ್ನು ಅತಿಕ್ರಮಿಸಲು ಧೈರ್ಯ ಮಾಡಿದರೆ, ಪಾಕಿಸ್ತಾನದ ಪ್ರತಿಯೊಂದು ಪ್ರಾಂತ್ಯದ ಜನರು ನಿಮ್ಮೊಂದಿಗೆ ಹೋರಾಡಲು ಸಿದ್ಧರಿರುತ್ತಾರೆ ಭುಟ್ಟೋ ಹೇಳಿದ್ದಾರೆ. ಇದನ್ನೂ ಓದಿ: ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿದ್ದೇಕೆ?
    ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಕ್ಕೆ ಬ್ರೇಕ್‌ ಹಾಕಿತು. ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

  • ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು: ಜೈಶಂಕರ್

    ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು: ಜೈಶಂಕರ್

    ನವದೆಹಲಿ: ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ, ಪಾಕಿಸ್ತಾನ (Pakistan) ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಶಾಶ್ವತವಾಗಿ ತ್ಯಜಿಸುವವರೆಗೆ ಸಿಂಧೂ ನದಿ (Sindhu River) ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ (S Jaishankar) ತಿಳಿಸಿದ್ದಾರೆ.

    `ಆಪರೇಷನ್ ಸಿಂಧೂರ’ದ (Operation Sindoor) ಚರ್ಚೆಯ ಭಾಗವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದವು ಬಹಳ ವಿಶಿಷ್ಟವಾದ ಒಪ್ಪಂದವಾಗಿದೆ. ನಾನು ಈವರೆಗೂ ಯಾವುದೇ ಒಂದು ದೇಶವು ತನ್ನ ಪ್ರಮುಖ ನದಿಗಳನ್ನು ಯಾವುದೇ ಹಕ್ಕುಗಳಿಲ್ಲದೆ ಬೇರೊಂದು ದೇಶಕ್ಕೆ ಅನುಮತಿಸಿದ್ದನ್ನು ನಾನು ನೋಡಿಲ್ಲ. ಆದ್ದರಿಂದ ಇದು ಅಸಾಧಾರಣ ಒಪ್ಪಂದವಾಗಿತ್ತು. ನಾವು ಈ ಒಪ್ಪಂದವನ್ನು ಸ್ಥಗಿತಗೊಳಿಸಿದರೆ ಈ ಘಟನೆ ನಮ್ಮ ನೆನಪಿಗೆ ಬರುತ್ತದೆ ಅದು ತುಂಬಾ ಮುಖ್ಯವಾದದ್ದು ಎಂದರು.ಇದನ್ನೂ ಓದಿ: ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

    ಮಂಗಳವಾರ ಕೆಲವರು ಹೇಳುವುದನ್ನು ನಾನು ಕೇಳಿಸಿಕೊಂಡೆ, ಜನರು ಇತಿಹಾಸವನ್ನು ಅಹಿತಕರ ಎಂದುಕೊಳ್ಳುತ್ತಾರೆ. ಜೊತೆಗೆ ಇತಿಹಾಸದ ವಿಷಯಗಳನ್ನು ಮರೆತುಬಿಡಬೇಕೆಂದುಕೊಳ್ಳುತ್ತಾರೆ. ಹೌದು, ಅವರು ಕೇವಲ ಕೆಲವು ವಿಷಯಗಳನ್ನು ಮಾತ್ರ ನೆನಪಿಸಿಕೊಳ್ಳಲು ಇಷ್ಟಪಡುತ್ತಾರೆ ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಜೈಶಂಕರ್, ಭಯೋತ್ಪಾದನೆ ಮಿತಿಮೀರಿ ಹೋಗಿದೆ. ಹೀಗಾಗಿ ಇದು ಸ್ವೀಕಾರಾರ್ಹವಲ್ಲ, ಕಳೆದ ದಶಕದಲ್ಲಿ ಭಾರತವು ಭಯೋತ್ಪಾದನೆಯನ್ನು ಎಸ್‌ಸಿಓ, ಬ್ರಿಕ್ಸ್ ಹಾಗೂ ಕ್ವಾಡ್‌ನಂತಹ ಜಾಗತಿಕ ಮಟ್ಟದಲ್ಲಿ ಪ್ರಸ್ತಾಪಿಸಿತು.ಇದನ್ನೂ ಓದಿ: ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್

  • ಜಲಯುದ್ಧ – ಚೆನಾಬ್ ನದಿಯ 2 ಡ್ಯಾಂನಿಂದ ನೀರು ಬಿಟ್ಟು ಪಾಕ್‌ಗೆ ಶಾಕ್ ಕೊಟ್ಟ ಭಾರತ

    ಜಲಯುದ್ಧ – ಚೆನಾಬ್ ನದಿಯ 2 ಡ್ಯಾಂನಿಂದ ನೀರು ಬಿಟ್ಟು ಪಾಕ್‌ಗೆ ಶಾಕ್ ಕೊಟ್ಟ ಭಾರತ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahalgam) ನಡೆದ ಹಿಂದೂಗಳ ನರಮೇಧದ ಬಳಿಕ ಕೇಂದ್ರ ಸರ್ಕಾರವು ಪಾಕ್ ಜೊತೆಗಿನ ಸಿಂಧೂ ನದಿ (Sindhu River) ಒಪ್ಪಂದವನ್ನು ಸ್ಥಗಿತಗೊಳಿಸಲು ನಿರ್ಧರಿಸಿತ್ತು. ಇದೀಗ ಭಾರತ ಚೆನಾಬ್ ನದಿಯ 2 ಡ್ಯಾಂನಿಂದ ಪಾಕ್‌ಗೆ ನೀರು ಹರಿಬಿಟ್ಟು ಮತ್ತೆ ಶಾಕ್ ಕೊಟ್ಟಿದೆ.

    ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಟ್ಟಿರುವ ಭಾರತ (India) ಈಗಾಗಲೇ ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಸಿಂಧೂ ನದಿ ಒಪ್ಪಂದ ಸ್ಥಗಿತಗೊಳಿಸಿದ ನಂತರ ನೀರು ಹರಿಸುವುದನ್ನು ನಿಲ್ಲಿಸಿದರೆ ರಕ್ತ ಹರಿಸುತ್ತೇವೆ ಎಂದಿದ್ದ ಪಾಕ್‌ಗೆ, ಭಾರತ ಉರಿ ಜಲಾಶಯದಿಂದ ಝಿಲಂ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಿ ಶಾಕ್ ಕೊಟ್ಟಿತ್ತು. ಆಗ ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಆರೋಪ ಮಾಡಿದ್ದವು.ಇದನ್ನೂ ಓದಿ: ನಾಳೆ ಜಮ್ಮು ಕಾಶ್ಮೀರದ ಸರ್ಕಾರಿ, ಖಾಸಗಿ ಶಾಲೆಗಳು ಕ್ಲೋಸ್

    ಇದೀಗ ಕೇಂದ್ರ ಸರ್ಕಾರ ರಾಂಬನ್‌ನಲ್ಲಿರುವ ಚೆನಾಬ್ ನದಿಯ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಎರಡು ಗೇಟ್ ಹಾಗೂ ರಿಯಾಸಿಯ ಸಲಾಲ್ ಅಣೆಕಟ್ಟಿನ ಮೂರು ಗೇಟ್‌ಗಳನ್ನು ತೆರೆದಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾಗುವ ನೀರಿನ ಮಟ್ಟ ಹಾಗೂ ಅಣೆಕಟ್ಟಿನ ಒತ್ತಡವನ್ನು ನಿರ್ವಹಿಸುವುದು ಇದರ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಮೊದಲು ಚೆನಾಬ್‌ನಂತಹ ಪಶ್ಚಿಮ ನದಿಗಳ ಹರಿವಿನಲ್ಲಿ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳಬೇಕಾದರೂ ಭಾರತ, ಪಾಕಿಸ್ತಾನಕ್ಕೆ ತಿಳಿಸಬೇಕಿತ್ತು. ಆದರೆ ಸಿಂಧೂ ನದಿ ಒಪ್ಪಂದ ಸ್ಥಗಿತಗೊಂಡ ನಂತರ ಭಾರತ ಏಕಪಕ್ಷೀಯವಾಗಿ ವರ್ತಿಸುತ್ತಿದ್ದು, ದೇಶದ ಅಗತ್ಯಕ್ಕನುಸಾರವಾಗಿ ನೀರನ್ನು ತಡೆಹಿಡಿಯುವುದು ಹಾಗೂ ಬಿಡುಗಡೆ ಮಾಡುವುದನ್ನು ಮಾಡುತ್ತಿದೆ.ಇದನ್ನೂ ಓದಿ: ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

  • ಪಾಕಿಸ್ತಾನ ವಿರುದ್ಧ ಭಾರತದ ಜಲಯುದ್ಧ!

    ಪಾಕಿಸ್ತಾನ ವಿರುದ್ಧ ಭಾರತದ ಜಲಯುದ್ಧ!

    ನವದೆಹಲಿ: ಸಿಂಧೂನದಿ (Indus Water Treaty) ವಿಚಾರದಲ್ಲಿ ಡಬಲ್‌ಗೇಮ್ ಆಡ್ತಿರೋ ಪಾಕಿಸ್ತಾನದ (Pakistan) ವಿರುದ್ಧ ಭಾರತ (India) ಈಗ ಜಲಯುದ್ಧ (Water War) ಸಾರಿದೆ. ಸಿಂಧೂ ಜಲ ಒಪ್ಪಂದದಲ್ಲಿ ಬದಲಾವಣೆಗಾಗಿ ಪಾಕಿಸ್ತಾನಕ್ಕೆ ಭಾರತ ನೋಟಿಸ್ ಜಾರಿ ಮಾಡಿದೆ.

    ಒಪ್ಪಂದದ ಉಲ್ಲಂಘನೆಯನ್ನು 90 ದಿನಗಳ ಒಳಗೆ ಸರಿಪಡಿಸಲು ಸೂಚಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ಭಾರತದ ನಿರಂತರ ಪ್ರಯತ್ನದ ನಡುವೆಯೂ ಕಿಶೆನ್‌ಗಂಗಾ, ರಾಟ್ಲ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ಸ್‌ ಸಂಬಂಧ ಚರ್ಚಿಸಲು ಪಾಕಿಸ್ಥಾನ ಮುಂದಾಗಿಲ್ಲ. ಸಿಂಧೂ ಜಲ ಒಪ್ಪಂದಕ್ಕೆ ಅನುಗುಣವಾಗಿ ಸಂಪೂರ್ಣ, ಯಥಾವತ್ತಾಗಿ ಜಾರಿಗೊಳಿಸಿಲ್ಲ. ಇದು ಐಡಬ್ಲ್ಯೂಟಿಯಲ್ಲಿನ ಬದಲಾವಣೆಗಾಗಿ ಸೂಕ್ತ ಅಂತಲೂ ನೋಟಿಸ್‌ನಲ್ಲಿ ಹೇಳಿದೆ. ಇದನ್ನೂ ಓದಿ: 1 ವರದಿಗೆ ಕರಗಿತು 4 ಲಕ್ಷ ಕೋಟಿ ಸಂಪತ್ತು – 7ನೇ ಸ್ಥಾನಕ್ಕೆ ಜಾರಿದ ಅದಾನಿ: ಯಾವುದು ಎಷ್ಟು ಇಳಿಕೆ?

    ಕಿಶೆನ್‌ಗಂಗಾ ಮತ್ತು ರಾಟ್ಲ್ ಹೈಡ್ರೋ ಎಲೆಕ್ಟ್ರಿಕ್ ಯೋಜನೆಗಳಿಗೆ ತಾಂತ್ರಿಕ ಆಕ್ಷೇಪ ಪರಿಶೀಲನೆಗೆ ಪರಿಣತರ ಸಮಿತಿಗೆ ಪಟ್ಟು ಹಿಡಿದಿದ್ದ ಪಾಕ್, ಏಕಾಏಕಿ ಹಿಂದೆ ಸರಿದಿತ್ತು. 1960ರ ಒಪ್ಪಂದದಂತೆ ಪೂರ್ವದ ಬಿಯಾಸ್, ರಾವಿ ಮತ್ತು ಸಟ್ಲೆಜ್ ನೀರಿನ ಹಕ್ಕು ಭಾರತಕ್ಕೆ ಹಾಗೂ ಪಶ್ಚಿಮದ ಮೂರು ನದಿಗಳಾದ ಸಿಂಧೂ, ಚೆನಾಬ್ ಮತ್ತು ಝೇಲಂ ನದಿಗಳ ನಿಯಂತ್ರಣ ಪಾಕಿಸ್ತಾನದ ಸುಪರ್ದಿಗೆ ದೊರಕಿತ್ತು.

    ಸಿಂಧೂನದಿಯಿಂದ ಕೇವಲ ಶೇ.20ರಷ್ಟು ನೀರು ಭಾರತಕ್ಕೆ ಇದ್ದರೆ, ಶೇ. 80ರಷ್ಟು ನೀರು ಪಾಕಿಸ್ತಾನದಲ್ಲಿದೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದ ʼGo First’ಗೆ 10 ಲಕ್ಷ ದಂಡ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಲ ವಿವಾದ ಬಗೆಹರಿಸಲು ಪಾಕಿಸ್ತಾನದ ನಿಯೋಗ ಭಾರತಕ್ಕೆ ಭೇಟಿ

    ಇಸ್ಲಾಮಾಬಾದ್: ಉಭಯ ದೇಶಗಳ ನಡುವಿನ ಜಲ ವಿವಾದದ ಕುರಿತು ಮಾತುಕತೆ ನಡೆಸಲು ಪಾಕಿಸ್ತಾನ ನಿಯೋಗದ 5 ಸದಸ್ಯರು ಮೇ 30-31 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಸಿಂಧೂ ನದಿ ವಿವಾದವನ್ನು ಬಗೆಹರಿಸುವ ಬಗ್ಗೆ ಮೇ 30 ಹಾಗೂ 31ರಂದು ನವದೆಹಲಿಯಲ್ಲಿ ಮಾತುಕತೆ ನಡೆಯಲಿದೆ ಎಂದು ಪಾಕಿಸ್ತಾನದ ಕಮಿಷನರ್ ಸೈಯದ್ ಮಹಮ್ಮದ್ ಮೆಹರ್ ಅಲಿ ಷಾ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ತಳಿ ಪ್ರಕರಣ ಪತ್ತೆ – 7 ಪಾಸಿಟಿವ್

    ಪಾಕಿಸ್ತಾನದ ನಿಯೋಗ ವಾಘಾ ಗಡಿ ಮೂಲಕ ಭಾರತಕ್ಕೆ ಪ್ರವಾಸ ಮಾಡಲಿದ್ದು, ಭಾರತದೊಂದಿಗಿನ ಮಾತುಕತೆಯಲ್ಲಿ ಪ್ರವಾಹ ಮುನ್ಸೂಚನೆಯ ದತ್ತಾಂಶವನ್ನು ಹಂಚಿಕೊಳ್ಳುವ ಬಗ್ಗೆ ಹಾಗೂ ಪಿಸಿಐಡಬ್ಲ್ಯು(ಸಿಂಧೂ ನೀರಿನ ಪಾಕಿಸ್ತಾನದ ಆಯುಕ್ತ)ವಿನ ವಾರ್ಷಿಕ ವರದಿಯನ್ನು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಲ್ಕೈದು ದಿನ ತಿರುಪತಿ ಭೇಟಿಯನ್ನು ಮುಂದೂಡಿ: ಟಿಟಿಡಿ ಮನವಿ

    ಮಾರ್ಚ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ಸಿಂಧೂ ಜಲ ಒಪ್ಪಂದವನ್ನು ಅದರ ನೈಜ ಸ್ಫೂರ್ತಿಯೊಂದಿಗೆ ಕಾರ್ಯಗತಗೊಳಿಸುವ ಬದ್ಧತೆ ಬಗ್ಗೆ ಮತ್ತೆ ಪ್ರಸ್ತಾಪ ನಡೆಸಿತ್ತು. ಈ ಬಗ್ಗೆ ಖಾಯಂ ಸಿಂಧೂ ಆಯೋಗ ಮುಂದಿನ ಸಭೆಯನ್ನು ಭಾರತದಲ್ಲಿ ನಡೆಸುವ ಬಗ್ಗೆ ಭರವಸೆ ನೀಡಿತ್ತು.

  • ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ

    ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ

    ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ಭಾರತ ಈಗ ಜಲಾಸ್ತ್ರವನ್ನು ಪ್ರಯೋಗಿಸಿದ್ದು, ಕೆಲಸ ಈಗಾಗಲೇ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಂಡಸ್ ಒಪ್ಪಂದವನ್ನು ಉಲ್ಲಂಘಿಸದೇ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಹೇಳಿದ್ದಾರೆ.

    ನಾನು ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸುತ್ತಿರುವ ಬಗ್ಗೆ ಮಾತನಾಡುತ್ತೇನೆಯೇ ಹೊರತು ಇಂಡಸ್ ಒಪ್ಪಂದ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಅಲ್ಲ. ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಜಾಸ್ತಿ ನೀರು ಹರಿದು ಹೋಗುತ್ತದೆ. ನೀರನ್ನು ಸಂಗ್ರಹಿಸಲು ನಾವು ಜಲಾಶಯವನ್ನು ನಿರ್ಮಿಸುತ್ತಿದ್ದೇವೆ. ನಂತರ ಕಾಲುವೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ವಿವರಿಸಿದರು.

    ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ. ಮಳೆ ಕಡಿಮೆಯಾದ ಸಂದರ್ಭದಲ್ಲಿ ನೀರನ್ನು ಹರಿಸಲು ಈ ಡ್ಯಾಂ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸರ್ಕಾರದ ಕ್ರಮಕ್ಕೆ ಅವರು ಸಮರ್ಥನೆ ನೀಡಿದರು.

    2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಈ ವಿಚಾರದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದ ಅಂದಿನ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ, ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

    ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಸಹಕಾರ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಸಹಕಾರ ನೀಡಿದರೆ ಭಾರತದಿಂದ ಹರಿಯುವ ನೀರನ್ನು ನಿಲ್ಲಿಸುತ್ತೇವೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರ್ಯಾಣ, ಪಂಜಾಬ್, ರಾಜಸ್ಥಾನಕ್ಕೆ ಹರಿಸಲಾಗುವುದು. ಈ ಸಂಬಂಧ ಈಗಾಗಲೇ ಅಧ್ಯಯನ ಆರಂಭಗೊಂಡಿದೆ ಎಂದು ತಿಳಿಸಿದ್ದರು.

    ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ. ಈ ನೀರನ್ನು ನಿಲ್ಲಸಬೇಕು ಎನ್ನುವ ಇಚ್ಛೆ ನಮಗಿಲ್ಲ. ನದಿ ನೀರಿನ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ನೇಹಯುತ ಸಂಬಂಧ ಇದ್ದ ಕಾರಣ ಈ ನದಿ ಒಪ್ಪಂದ ನಡೆದಿದೆ. ಆದರೆ ಈಗ ಎರಡು ದೇಶಗಳ ನಡುವಿನ ಸಂಬಂಧ ಮುರಿದು ಬಿದ್ದಿದೆ. ಹೀಗಾಗಿ ಈ ಒಪ್ಪಂದವನ್ನು ಪಾಲನೆ ಮಾಡಬೇಕಾದ ಅಗತ್ಯ ನಮಗಿಲ್ಲ ಎಂದು ಗಡ್ಕರಿ ಖಡಕ್ ಮಾತುಗಳನ್ನು ಆಡಿದ್ದರು.

    ಮಾಜಿ ಪ್ರಧಾನಿ ಜವಾಹರಲಾಲ್ ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯುಬ್ ಖಾನ್ ನಡುವೆ 1960 ರಲ್ಲಿ ಇಂಡಸ್ ನದಿ ಯೋಜನೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಮೂರು ನದಿಗಳು ಭಾರತಕ್ಕೆ ಹಂಚಿಕೆಯಾದರೆ ಮೂರು ನದಿಗಳು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ.

    ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ ರಾವಿ, ಸಟ್ಲೇಜ್, ಬೀಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ. ಈ ಒಪ್ಪಂದದ ಪ್ರಕಾರ ಭಾರತಕ್ಕೆ ಮೀಸಲಾಗಿರುವ ಮೂರು ನದಿಗಳ ನೀರನ್ನು ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸಬಹುದಾಗಿದೆ.

    ಈಗಾಗಲೇ ಯಮುನಾ ನದಿಯ ಪುನಶ್ಚೇತನಕ್ಕೆ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಮೂರು ನದಿಗಳು ಭಾರತಕ್ಕೆ, ಮೂರು ನದಿಗಳನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ಭಾರತ ಉದಾರ ಮನಸ್ಸಿನಿಂದ ನಿರಂತರವಾಗಿ ಪಾಕಿಸ್ತಾನಕ್ಕೆ ನೀರನ್ನು ನೀಡುತ್ತಲೇ ಇದೆ. ಆದರೆ ಈಗ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಸಂಗ್ರಹಿಸಿ ನೀರಾವರಿ ಯೋಜನೆಯ ಮೂಲಕ ಜಮ್ಮು ಕಾಶ್ಮೀರ ಮತ್ತು ಪಂಜಾಬ್‍ಗೆ ನೀಡಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದರು.

    ಈಗಾಗಲೇ ಪಂಜಾಬಿನ ಪಠಾಣ್‍ಕೋಟ್ ಜಿಲ್ಲೆಯ ಶಾಪಕುರ್ಕಿಂಡಿಯಲ್ಲಿ ರವಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣವಾಗುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ರವಿ ನದಿ ವ್ಯಾಪ್ತಿಯ ರಾಜ್ಯಗಳಿಗೆ ಈ ನೀರನ್ನು ಹರಿಸಲಾಗುತ್ತದೆ. ಈ ಯೋಜನೆಗಳು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸಲ್ಪಟ್ಟಿವೆ ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು.

    ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಕಿತ್ತೆಸೆದು ಅಲ್ಲಿಂದ ದೇಶಕ್ಕೆ ರಫ್ತಾಗುತ್ತಿದ್ದ ಉತ್ಪನ್ನಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಭಾರತ ವಿಧಿಸಿದೆ.

  • ಪಾಕಿಗಳು ನಮ್ಮ ರಕ್ತ ಹರಿಸ್ತಾರೆ, ನಾವೇಕೆ ನೀರು ಕೊಡಬೇಕು: ಕೇಂದ್ರ ಸಚಿವ

    ಪಾಕಿಗಳು ನಮ್ಮ ರಕ್ತ ಹರಿಸ್ತಾರೆ, ನಾವೇಕೆ ನೀರು ಕೊಡಬೇಕು: ಕೇಂದ್ರ ಸಚಿವ

    ನವದೆಹಲಿ: ಪಾಕಿಸ್ತಾನಿಯರು ನಮ್ಮ ರಕ್ತ ಹರಿಸುತ್ತಾರೆ. ಅಂತವರಿಗೆ ನಾವೇಕೆ ನೀರು ಕೊಡಬೇಕು ಎಂದು ಕೇಂದ್ರ ಸಚಿವ ಅರ್ಜುನ್ ಮೇಘ್ವಾಲ್ ಕಿಡಿಕಾರಿದ್ದಾರೆ.

    ನಮ್ಮ ದೇಶಕ್ಕೆ ಸಂಬಂಧಿಸಿದ ನೀರು ಪಾಕಿಸ್ತಾನಕ್ಕೆ ಹೋಗದಂತೆ ತಡೆದು ಸಂಗ್ರಹಿಸಬೇಕು. ಈ ಮೂಲಕ ಸಿಂಧೂ ನದಿ ನೀರಿನ ಒಪ್ಪಂದವನ್ನು ಕೈಬಿಟ್ಟು, 5.3 ಲಕ್ಷ (0.53 ಮಿಲಿಯನ್) ಎಕರೆ ಅಡಿ ನೀರು ತಡೆಯುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು.

    ಪಾಕಿಸ್ತಾನಕ್ಕೆ ಹೋಗುವ ನೀರನ್ನು ತಡೆದರೆ ಪಂಜಾಬ್ ಹಾಗೂ ರಾಜಸ್ಥಾನದ ಜನರಿಗೆ ಕುಡಿಯಲು ಪೂರೈಕೆ ಮಾಡಬಹುದು. ಇಲ್ಲವೇ ಕೃಷಿಗೆ ಬಳಕೆ ಮಾಡಿಕೊಳ್ಳಬಹುದು. ಸಂಗ್ರಹಿಸಿಟ್ಟ ನೀರಿನಿಂದ ಹೆಚ್ಚಿನ ಉಪಯೋಗವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪಾಕ್‍ಗೆ ಪೂರೈಕೆಯಾಗುವ ನೀರನ್ನು ತಡೆಯುವ ಕ್ರಮಕೈಗೊಳ್ಳಲಿದೆ ಎಂದರು.

    ಪುಲ್ವಾಮಾ ದಾಳಿಯ ಬಳಿಕ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ಕೂಡ ಪಾಕಿಸ್ತಾನಕ್ಕೆ ಹೋಗುವ ನೀರನ್ನು ತಡೆಯುವ ಎಚ್ಚರಿಕೆ ನೀಡಿದ್ದರು. ಉತ್ತರ ಪ್ರದೇಶದ ಭಾಗ್ಪತ್‍ನಲ್ಲಿ ಮಾತನಾಡಿದ್ದ ಅವರು, ಪುಲ್ವಾಮಾ ಉಗ್ರರ ದಾಳಿ ಬಳಿಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ಪಾಕಿಸ್ತಾನ ನಿಲ್ಲಿಸದಿದ್ದರೆ 1960ರ ಭಾರತ-ಪಾಕಿಸ್ತಾನ ನಡುವಿನ ಸಿಂಧೂ ನದಿ ಹಂಚಿಕೆ ಒಪ್ಪಂದವನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಗುಡುಗಿದ್ದರು.

    ಭಾರತದ ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದೆ. ನ್ಯಾಯಸಮ್ಮತವಾಗಿ ನಮಗೆ ಸಿಗುತ್ತಿದ್ದ ನೀರು ಪಾಕ್ ಪಾಲಾಗುತ್ತಿದೆ. ಈ ಹಿನ್ನೆಲೆ ಆ ಮೂರು ನದಿಗಳ ನೀರು ಯಮುನಾಗೆ ಹರಿಯುವಂತೆ ಯೋಜನೆಯೊಂದನ್ನು ಪರಿಕಲ್ಪನೆ ಮಾಡಲಾಗಿದೆ. ಇದು ರೆಡಿಯಾದ ಬಳಿಕ ಯಮುನಾ ನದಿಯಲ್ಲಿ ಸಾಕಷ್ಟು ನೀರಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದರು.

    ಈಗಾಗಲೇ ಯಮುನಾ ನದಿಯ ಪುನಶ್ಚೇತನಕ್ಕೆ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಮೂರು ನದಿಗಳು ಭಾರತಕ್ಕೆ, ಮೂರು ನದಿಗಳನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ಭಾರತ ಉದಾರ ಮನಸ್ಸಿನಿಂದ ನಿರಂತರವಾಗಿ ಪಾಕಿಸ್ತಾನಕ್ಕೆ ನೀರನ್ನು ನೀಡುತ್ತಲೇ ಇದೆ. ಆದರೆ ಈಗ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಸಂಗ್ರಹಿಸಿ ನೀರಾವರಿ ಯೋಜನೆಯ ಮೂಲಕ ಜಮ್ಮು ಕಾಶ್ಮೀರ ಮತ್ತು ಪಂಜಾಬ್‍ಗೆ ನೀಡಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದರು.

    ಈಗಾಗಲೇ ಪಂಜಾಬಿನ ಪಠಾಣ್‍ಕೋಟ್ ಜಿಲ್ಲೆಯ ಶಾಪಕುರ್ಕಿಂಡಿಯಲ್ಲಿ ರವಿ ನದಿಗೆ ಅಡ್ಡಲಾಗಿ ಸರ್ಕಾರ ಜಲಾಶಯವನ್ನು ನಿರ್ಮಾಣ ಮಾಡುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ರವಿ ನದಿ ವ್ಯಾಪ್ತಿಯ ರಾಜ್ಯಗಳಿಗೆ ಈ ನೀರನ್ನು ಹರಿಸಲಾಗುತ್ತದೆ. ಈ ಯೋಜನೆಗಳು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸಲ್ಪಟ್ಟಿವೆ. 2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ ರಾವಿ, ಸಟ್ಲೇಜ್, ಬೀಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv