Tag: Indus Waters Treaty

  • ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

    ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

    ಇಸ್ಲಾಮಾಬಾದ್‌: ಇತ್ತೀಚೆಗಷ್ಟೇ ಭಾರತದ (India) ವಿರುದ್ಧ ಯುದ್ಧ ಗೆದ್ದಂತೆ ಪೋಸ್‌ ಕೊಟ್ಟು ನಗೆಪಾಟಲಿಗೀಡಾಗಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ (Asim Munir) ಮತ್ತೆ ಭಾರತದ ವಿರುದ್ಧ ವಿಷ ಕಾರಿದ್ದಾರೆ. ಸಿಂಧೂ ಜಲ ಒಪ್ಪಂದವು (Indus Waters Treaty) ನಮಗೆ ಲಕ್ಷ್ಮಣ ರೇಖೆ ಇದ್ದಂತೆ ಈ ವಿಚಾರದಲ್ಲಿ ಎಂದಿಗೂ ರಾಜಿ ಇಲ್ಲ ಅಂತ ಹೇಳಿದ್ದಾರೆ.

    ಪಾಕಿಸ್ತಾನದ (Pakistan) ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಪ್ರಾಂಶುಪಾಲರು, ಹಿರಿಯ ಶಿಕ್ಷಕರು ಮತ್ತು ಶಿಕ್ಷಣ ತಜ್ಞರೊಂದಿಗಿನ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮುನೀರ್‌ ಮಾತನಾಡಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    ಭಾರತದ ಪ್ರಾಬಲ್ಯವನ್ನು ನಾವು ಎಂದಿಗೂ ಒಪ್ಪಿಕೊಳ್ಳಲ್ಲ. ಸಿಂಧೂ ಜಲ ಒಪ್ಪಂದ ಪಾಕಿಸ್ತಾನಕ್ಕೆ ಲಕ್ಷ್ಮಣ ರೇಖೆ ಇದ್ದಂತೆ. ಈ ವಿಚಾರದಲ್ಲಿ ಪಾಕಿಸ್ತಾನ ಎಂದಿಗೂ ರಾಜಿ ಮಾಡಿಕೊಳ್ಳಲ್ಲ, ಭಾರತಕ್ಕೆ ತಲೆಬಾಗುವುದಿಲ್ಲ. ಏಕೆಂದರೆ ಇದು 2.40 ಕೋಟಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ನೇರವಾಗಿ ಸಂಬಂಧಿಸಿದ್ದಾಗಿದೆ ಅಂದಿದ್ದಾರೆ. ಅಲ್ಲದೇ ಬಲೂಚಿಸ್ತಾನದ ದಂಗೆಗೆ ಭಾರತವೇ ಕಾರಣ ಅಂತ ದೂರಿದ್ದಾರೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಕಳೆದ ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿಯು ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸಲು ನಿರ್ಧರಿಸಿತು. ಇದನ್ನೂ ಓದಿ: ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!

  • ಸಿಂಧೂ ನದಿ ನೀರು ನಿಲ್ಲಿಸಿದ್ರೆ ನಿಮ್ಮ ಉಸಿರು ನಿಲ್ಲಿಸ್ತೀವಿ, ಉಗ್ರ ಹಫೀಜ್‌ನ ಮಾತನ್ನೇ ಪುನರುಚ್ಚರಿಸಿದ ಪಾಕ್‌ ಸೇನಾ ವಕ್ತಾರ

    ಸಿಂಧೂ ನದಿ ನೀರು ನಿಲ್ಲಿಸಿದ್ರೆ ನಿಮ್ಮ ಉಸಿರು ನಿಲ್ಲಿಸ್ತೀವಿ, ಉಗ್ರ ಹಫೀಜ್‌ನ ಮಾತನ್ನೇ ಪುನರುಚ್ಚರಿಸಿದ ಪಾಕ್‌ ಸೇನಾ ವಕ್ತಾರ

    ಇಸ್ಲಮಾಬಾದ್:‌ ನೀವು ನಮಗೆ ಬರಬೇಕಾದ ನೀರನ್ನು ನಿರ್ಬಂಧಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸ್ತೇವೆ ಎಂದು ಹೇಳಿದ್ದ ಉಗ್ರ ಹಫೀಜ್ ಸಯೀದ್ ಮಾತನ್ನೇ ಪಾಕಿಸ್ತಾನದ (Pakistan) ಸೇನಾ ವಕ್ತಾರ ಅಹ್ಮದ್ ಷರೀಫ್ ಪುನರುಚ್ಚರಿಸಿದ್ದಾನೆ.

    ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಾರತವು (India) ಸಿಂಧೂ ನದಿ ನೀರಿನ ಒಪ್ಪಂದ (Indus Waters Treaty) ಅಮಾನತು ಮಾಡಿರುವ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ, ಭಾರತ ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ಕಟ್ಟಿ ಹಾಕುತ್ತೇವೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು. ಭಾರತದ ಈ ಕ್ರಮವನ್ನು ಉಲ್ಲೇಖಿಸಿ, 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಸಹ ಇದೇ ಹೇಳಿಕೆ ನೀಡಿದ್ದ. ಇದೀಗ ಪಾಕ್‌ ಸೇನಾ ವಕ್ತಾರ ಸಹ ಅದನ್ನೇ ಪುನರುಚ್ಚರಿಸಿದ್ದಾನೆ. ಪಾಕ್‌ ಸೇನಾ ವಕ್ತಾರ ಕಾರ್ಯಕ್ರಮದಲ್ಲಿ ಮಾತಾಡುತ್ತಿರುವ ವೀಡಿಯೋ ಎಕ್ಸ್‌ನಲ್ಲಿ ವೈರಲ್‌ ಆಗಿದೆ.

    ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಏ.23 ರಂದು ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿತ್ತು. 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಎರಡು ದೇಶಗಳ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಹಂಚಿಕೆಯ ಒಪ್ಪಂದ ನಡೆದಿತ್ತು.

    ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಒಂಬತ್ತು ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ 100ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿತ್ತು. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

  • ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್‌ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ

    ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್‌ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಹಿಟ್ಟಿರುವ ಭಾರತ ಈಗಾಗಲೇ ಪಾಕ್‌ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಇಂದು ಸರ್ವಪಕ್ಷ ಸಭೆಯ ಬಳಿಕ 1960ರಲ್ಲಿ ವಿಶ್ವಬ್ಯಾಂಕ್‌ ಮಧ್ಯಸ್ಥಿಕೆಯಲ್ಲಿ ನಡೆದ ಸಿಂಧೂ ನದಿ ಒಪ್ಪಂದ ಸ್ಥಗಿತಗೊಳಿಸುವ ಕುರಿತು ಭಾರತ, ಪಾಕಿಸ್ತಾನಕ್ಕೆ ಅಧಿಕೃತವಾಗಿ ಹೇಳಿದೆ.

    ಇಂದು ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಭಾರತ, ಪಾಕಿಸ್ತಾನಕ್ಕೆ ಔಪಚಾರಿಕ ರಾಜತಾಂತ್ರಿಕ ಟಿಪ್ಪಣಿಯನ್ನು ಕಳುಹಿಸಲಾಗಿದೆ ಎಂದು ಉನ್ನತಮೂಲಗಳು ತಿಳಿಸಿವೆ. ಜಲ ಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ಪಾಕಿಸ್ತಾನ ಜಲ ಸಂಪನ್ಮೂಲ ಸಚಿವಾಲಯದ ಪಾಕ್‌ ಸಚಿವ ಸೈಯದ್ ಅಲಿ ಮುರ್ತಾಜಾ ಅವರಿಗೆ ಪತ್ರ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

    ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಂದು ಪ್ರಮುಖ ಒಪ್ಪಂದವಾಗಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಸಹಾಯ ಮಾಡಿದೆ. ಈ ಒಪ್ಪಂದದ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ, ಎರಡೂ ದೇಶಗಳು ಮಾತುಕತೆಗಳ ಮೂಲಕ ಪರಿಹರಿಸಿಕೊಳ್ಳಬೇಕು. ವಿಶ್ವ ಬ್ಯಾಂಕ್ ಕೂಡ ಈ ವಿಷಯದಲ್ಲಿ ಸಹಾಯ ಮಾಡಬಹುದು.

    ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಿದ್ದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿತ್ತು.

    ಪ್ರಮುಖ ನಿರ್ಣಯಗಳೇನು?
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ. ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

  • Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ

    Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ (ಏ.24) ಸರ್ವಪಕ್ಷಗಳ ಸಭೆ ಕರೆದಿದೆ.

    ಗುರುವಾರ (ಏ.24) ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್‌ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಇಂದಿನ ಸಭೆಯಲ್ಲಿ ಪಾಕ್‌ ಉಗ್ರರನ್ನು ಮಟ್ಟಹಾಕಲು, ಪಾಕ್‌ ಸಂಬಂಧ ಕಡಿದುಕೊಳ್ಳುವ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ವಿವರಿಸಲಿದ್ದಾರೆ.

    ಇಂದಿನ ಸಭೆಯಲ್ಲಿ ಆಗಿದ್ದೇನು?
    ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

    ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

    ಪ್ರಮುಖ ನಿರ್ಣಯಗಳು
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ.

    ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

  • 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    – 1960ರ ಸಿಂಧೂ ನದಿ ಒಪ್ಪಂದ ರದ್ದು
    – ಮೂರು ಗಂಟೆ ಹೈವೋಲ್ಟೇಜ್‌ ಸಭೆ ಬಳಿಕ ಭಾರತ ಪ್ರತೀಕಾರದ ನಿರ್ಧಾರ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ.

    ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದಾರೆ.

    ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah), ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

    ಪ್ರಮುಖ ನಿರ್ಣಯಗಳು
    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ.

    ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ.

    ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

    ಸರ್ವಪಕ್ಷ ಸಭೆಗೆ ಕರೆ
    ಜೊತೆಗೆ ಗುರುವಾರ (ಏ.24) ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.