Tag: INDvsAUS

  • ಜಡೇಜಾ ಜಾದು – ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ಜಡೇಜಾ ಜಾದು – ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ನವದೆಹಲಿ: ಜಡೇಜಾ (Ravindra Jadeja) ಸ್ಪಿನ್ ಜಾದುವಿನಿಂದಾಗಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 6 ವಿಕೆಟ್‌ಗಳ ಜಯ ಸಾಧಿಸಿ ಬಾರ್ಡರ್ ಗಾವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

    ಇಂದು ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ರವೀಂದ್ರ ಜಡೇಜಾ ಬೌಲಿಂಗ್ ದಾಳಿಗೆ ಪಲ್ಟಿ ಹೊಡೆಯಿತು. ನಿನ್ನೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) 43 ರನ್, ಲಾಬುಶೇನ್ 35 ರನ್‌ಗಳಿಗೆ ಔಟಾದರು. ಪರಿಣಾಮ ಆಸ್ಟ್ರೇಲಿಯಾ 31.1 ಓವರ್‌ಗಳಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ಬೌಲರ್‌ಗಳ ಆಟಕ್ಕೆ ಕಂಗಾಲು – ಮೊದಲ ದಿನವೇ ಆಸೀಸ್ ಸರ್ವಪತನ

    Team India 3

    114 ರನ್‌ಗಳ ಸುಲಭ ಗುರಿ ಪಡೆದ ಭಾರತ 26.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 118 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಆರಂಭಿಕರಾದ ನಾಯಕ ರೋಹಿತ್ ಶರ್ಮಾ (Rohit Sharma) 20 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ಇದನ್ನೂ ಓದಿ: ಲಿಯಾನ್ ಬೌಲಿಂಗ್‌ಗೆ ಭಾರತ ಪಲ್ಟಿ – ಆಸ್ಟ್ರೇಲಿಯಾಗೆ 62 ರನ್‌ಗಳ ಮುನ್ನಡೆ

    Axar Patel

    ಕೆ.ಎಲ್ ರಾಹುಲ್ ಮತ್ತೆ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಕೆಗೆ ಗುರಿಯಾದರು. ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಳಿದ ವಿರಾಟ್ ಕೊಹ್ಲಿ (Virat Kohli) 31 ಎಸೆತಗಳಲ್ಲಿ 20 ರನ್ ಗಳಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಶ್ರೀಕರ್ ಭರತ್ ಹಾಗೂ ಚೇತೇಶ್ವರ ಪೂಜಾರ ಉತ್ತಮ ಇನ್ನಿಂಗ್ಸ್ ಕಟ್ಟಿದ್ದರು. ತಾಳ್ಮೆಯ ಆಟವಾಡಿದ ಪೂಜಾರ ಅಜೇಯ 31 ರನ್ (74 ಎಸೆತ, 4 ಬೌಂಡರಿ) ಗಳಿಸಿದರೆ, 22 ಎಸೆತ ಎದುರಿಸಿದ ಶ್ರೀಕರ್ ಭರತ್ 3 ಬೌಂಡರಿ, 1 ಸಿಕ್ಸರ್ ನೊಂದಿಗೆ 23 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    Australia 2

    2ನೇ ಟೆಸ್ಟ್ ಪಂದ್ಯದಲ್ಲೂ ಅದ್ಭುತ ಫಾರ್ಮ್ ಮುಂದುವರಿಸಿದ ಜಡೇಜಾ 7 ವಿಕೆಟ್ ಪಡೆದು ಮಿಂಚಿದರೆ, ರವಿಚಂದ್ರನ್ ಅಶ್ವಿನ್ 3 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಆಸ್ಟ್ರೇಲಿಯಾ ತಂಡದ ಪರ ನಥನ್ ಲಿಯಾನ್ (Nathan Lyon) 2 ವಿಕೆಟ್, ಟಾಡ್ ಮರ್ಫಿ 1 ವಿಕೆಟ್ ಪಡೆದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

    `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

    ನಾಗ್ಪುರ: ಟೀಂ ಇಂಡಿಯಾ (Team India) ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಸದಾ ಟ್ರೆಂಡ್ ನಲ್ಲಿರುತ್ತಾರೆ ಅನ್ನೋದಕ್ಕೆ ಕೆಲವು ನಿದರ್ಶನಗಳು ಸಾಕ್ಷಿಯಾಗುತ್ತಿವೆ. ವಿಶ್ವಾದ್ಯಂತ ಕೊಹ್ಲಿ ಅಭಿಮಾನಿಗಳು ಒಂದಿಲ್ಲೊಂದು ಕಾರಣಗಳಿಂದ ಕೊಹ್ಲಿ (Virat Kohli) ಅವರನ್ನ ಮತ್ತೆ ಮತ್ತೆ ಮುನ್ನೆಲೆಗೆ ತರುತ್ತಿದ್ದಾರೆ.

    ಹಾಗೆಯೇ ಆಸ್ಟ್ರೇಲಿಯಾ (Australia) ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ವೇಳೆ ಕೊಹ್ಲಿ ಅಭಿಮಾನಿಯೊಬ್ಬರು ಹಿಡಿದ ಪೋಸ್ಟರ್ ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಇದನ್ನೂ ಓದಿ: ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ಪಂಜುರ್ಲಿ ದೈವ!

    ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ (Rohit Sharma) ಅವರೊಂದಿಗೆ ಕ್ರೀಸ್‌ಗೆ ಇಳಿಯುತ್ತಿದ್ದಂತೆ ಅಭಿಮಾನಿ ಪೋಸ್ಟರ್ ಹಿಡಿದಿದ್ದಾರೆ. `ನಾನು ನನ್ನ ಹೆಂಡತಿಗಿಂತ ವಿರಾಟ್ ಕೊಹ್ಲಿಯನ್ನು ಹೆಚ್ಚು ಪ್ರೀತಿಸುತ್ತೇನೆ’ ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಆತನ ಪತ್ನಿಯೂ ಸಹ ಇದರಿಂದ ಹೆಚ್ಚು ಸಂತಸಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು, ಇದನ್ನ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದ್ರೆ ಹುಷಾರು ನಿನ್ನ ಹೆಂಡತಿಗೆ ಗೊತ್ತಾದ್ರೆ ಮೂಳೆ ಮುರಿಯುತ್ತಾಳೆ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ‘ಚೌಕಾಬಾರ’ ಟೀಮ್ ನಿಂದ ರೊಮ್ಯಾಂಟಿಕ್ ಸಾಂಗ್

    ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy 2023) ಟೆಸ್ಟ್ ಸರಣಿಯಲ್ಲಿರುವ ಟೀಂ ಇಂಡಿಯಾ (Team India) ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 132 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಜಯದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 26 ಎಸೆತಗಳಲ್ಲಿ ಕೇವಲ 12 ರನ್ ಗಳಿಸಿ ಪೆವಿಲಿಯನ್ ಸೇರಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೂರ್ಯ ಜಸ್ಟ್ ಮಿಸ್ – ತಪ್ಪಿದ ಭಾರೀ ಅನಾಹುತ!

    ಸೂರ್ಯ ಜಸ್ಟ್ ಮಿಸ್ – ತಪ್ಪಿದ ಭಾರೀ ಅನಾಹುತ!

    ಕ್ಯಾನ್ಬೆರಾ: ಟಿ20 ವಿಶ್ವಕಪ್‌ಗೂ (T20 WorldCup) ಮುನ್ನ ಸೋಮವಾರ ಭಾರತ (Team India) ಮತ್ತು ಆಸ್ಟ್ರೇಲಿಯಾ (Australia) ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ರನ್‌ಗಳ ರೋಚಕ ಜಯ ಸಾಧಿಸಿತು.

    ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಮ್ಯಾಜಿಕ್ ಫೀಲ್ಡಿಂಗ್, ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಕೆ.ಎಲ್ ರಾಹುಲ್‌ರ (KL Rahul) ಭರ್ಜರಿ ಬ್ಯಾಂಟಿಂಗ್ ಪ್ರದರ್ಶನ ಟೀಂ ಇಂಡಿಯಾ (Team India) ಗೆಲುವಿಗೆ ಕಾರಣವಾಯಿತು. ಆದರೆ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ (Mitchell Starc) ಅವರು ಎಸೆದ ಬಾಲ್ ಸೂರ್ಯಕುಮಾರ್ ಯಾದವ್ ಅವರ ಹೆಲ್ಮೆಟ್‌ಗೆ ತಗುಲಿ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಇದನ್ನೂ ಓದಿ: ಡೇಟಿಂಗ್ ಬಗ್ಗೆ ಯುವತಿಗೆ ಅಡ್ವೈಸ್ ಕೊಟ್ಟ ಜೋ ಬೈಡೆನ್ – ವೀಡಿಯೋ ವೈರಲ್

    ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಆಟ ಪ್ರದರ್ಶಿಸಿದರು. 33 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡಂತೆ 50 ರನ್ ಗಳಿಸಿದರು. ಇದನ್ನೂ ಓದಿ: ದಾದಾ ಪರ ದೀದಿ ಬ್ಯಾಟಿಂಗ್ – ICC ಚುನಾವಣೆಗೆ ಅವಕಾಶ ಕೊಡುವಂತೆ ಮೋದಿಗೆ ಪತ್ರ

    ಸೂರ್ಯಕುಮಾರ್ ಯಾದವ್ ಯಾವಾಗಲೂ ವಿಕೆಟ್ ಹಿಂದಿನಿಂದ ರನ್ ಗಳಿಸುವುದರಲ್ಲಿ ಫೇಮಸ್. ಹಾಗೆಯೇ ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ, ಅವರು ಮಿಚೆಲ್ ಸ್ಟಾರ್ಕ್ ಅವರ 5ನೇ ಎಸೆತವನ್ನು ಬೌಂಡರಿಗೆ ಅಟ್ಟುವ ಪ್ರಯತ್ನ ಮಾಡಿದರು. ಈ ವೇಳೆ ಚೆಂಡು ನೇರವಾಗಿ ಅವರ ಹೆಲ್ಮೆಟ್‌ಗೆ ಬಿದ್ದಿತು. ಹೀಗಾಗಿ ಸ್ವಲ್ಪ ಸಮಯದವರೆಗೆ ಪಂದ್ಯವನ್ನು ನಿಲ್ಲಿಸಲಾಯಿತು. ಆದರೆ ಸೂರ್ಯಕುಮಾರ್ ಯಾದವ್ ಗಾಯದಿಂದ ಪಾರಾಗಿದ್ದಾರೆ. ಇದಾದ ಬಳಿಕ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಬಂದು ತಪಾಸಣೆ ನಡೆಸಿದ ಬಳಿಕ ಮತ್ತೆ ಇನ್ನಿಂಗ್ಸ್ ಮುಂದುವರಿಯಿತು.

    Live Tv
    [brid partner=56869869 player=32851 video=960834 autoplay=true]