Tag: infosys

  • ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಮೈಸೂರು: ಇನ್ಫೋಸಿಸ್‌ನವರು (Infosys) ಏನು ಬಹಳ ಬೃಹಸ್ಪತಿಗಳಾ ಎಂದು ಜಾತಿಗಣತಿ ಸಮೀಕ್ಷೆಗೆ ಒಪ್ಪದ ನಾರಾಯಣ ಮೂರ್ತಿ ದಂಪತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಟಾಂಗ್ ಕೊಟ್ಟರು.

    ನಗರದಲ್ಲಿ ಮಾತನಾಡಿದ ಸಿಎಂ, ಇದು ಹಿಂದುಳಿದ ವರ್ಗದ ಜಾತಿ ಸಮೀಕ್ಷೆ ಅಲ್ಲ. ಎಲ್ಲಾ ಜಾತಿಗಳ ಸಮೀಕ್ಷೆ. ಇದನ್ನ ಅರ್ಥ ಮಾಡಿಕೊಳ್ಳದಿದ್ದರೆ ನಾವು ಏನು ಮಾಡುವುದು? ಇದು ಅಜ್ಞಾನವೋ ಉದ್ದೇಶಪೂರ್ವಕವೊ ಅವರಿಗೆ ಗೊತ್ತು. ಮೇಲ್ಜಾತಿಯವರು ಗೃಹಜ್ಯೋತಿ ಪಡೆಯುತ್ತಿಲ್ವಾ? ಮೇಲ್ಜಾತಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಓಡಾಡುತ್ತಿಲ್ವಾ? ಇದು ಕೂಡ ಅದೇ ರೀತಿ. ಎಲ್ಲಾ ಜಾತಿಯವರಿಗೆ ಮಾಡುತ್ತಿರುವ ಸಮೀಕ್ಷೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಬಾಂಬ್ – ಡಿಸೆಂಬರ್‌ ಒಳಗಡೆ ಬಿಡುಗಡೆಗೆ ಆಗ್ರಹ

    ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಬಿಹಾರದಲ್ಲಿ ನಮ್ಮ ಮೈತ್ರಿ ಒಕ್ಕೂಟ ಗೆಲುವು ಪಡೆಯುವ ಸಾಧ್ಯತೆ ಇದೆ. ನನ್ನ ಪ್ರಚಾರದ ಅಗತ್ಯ ಇದ್ರೆ ನಾನು ಪ್ರಚಾರಕ್ಕೆ ಹೋಗುತ್ತೇನೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ. ಕ್ರಾಂತಿ ಕ್ರಾಂತಿ ಎಂದು ಹೇಳುವವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಸುಮ್ಮನೆ ಏನೇನೊ ಹೇಳುತ್ತಾರೆ. ಮಾಧ್ಯಮದವರು ಆ ಹೇಳಿಕೆಗಳಿಗೆ ಪ್ರಚಾರ ಕೊಡುವುದನ್ನ ನಿಲ್ಲಿಸಲಿ. ಆಗ ಅವರೇ ಸುಮ್ಮನಾಗುತ್ತಾರೆ ಎಂದು ತಿಳಿಸಿದರು.

    ಐಟಿ ಕಂಪನಿಗಳು ಆಂಧ್ರ ಪಾಲಾದ ಬಗ್ಗೆ ಮಾತನಾಡಿ, ಆಯಾ ಕಂಪನಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ರಾಜ್ಯಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಒಂದು ಕಂಪನಿ ಬೇರೆ ರಾಜ್ಯಕ್ಕೆ ಹೋದ ಕೂಡಲೇ ಇಲ್ಲಿನ ವ್ಯವಸ್ಥೆ ಸರಿ ಇಲ್ಲ ಎಂದು ಹೇಳುವುದು ತಪ್ಪು. ಹೂಡಿಕೆಗಳ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಹಾಗಾದರೆ ಅವರೆಲ್ಲ ಯಾಕೆ ನಮ್ಮಲ್ಲಿ ಉಳಿದುಕೊಂಡರು? ಆಂಧ್ರ ಐಟಿ ಸಚಿವರು ಟ್ವೀಟ್ ಮಾಡಿದ್ದು ನಮಗೆ ಗೊತ್ತಿಲ್ಲ. ಇದನ್ನ ಯಾರೋ ಸೃಷ್ಟಿ ಮಾಡುತ್ತಿರಬಹುದು ಎಂದರು. ಇದನ್ನೂ ಓದಿ: ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    5 ವರ್ಷ ನಮ್ಮ ತಂದೆಯೇ ಸಿಎಂ ಆಗಿರುತ್ತಾರೆ ಎಂಬ ಪುತ್ರನ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅವನನ್ನೇ ಉಳಿದ ವಿಚಾರ ಕೇಳಿಕೊಳ್ಳಿ ಎಂದರು. ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ಕುರಿತು ಮಾತನಾಡಿ, ಅದು ಸತ್ಯವಾಗಿದ್ರೆ ಅವರಿಗೆ ಕೋರ್ಟ್ಗೆ ಹೋಗುವುದಕ್ಕೆ ಹೇಳಿ. ಯಾರೋ ಇದನ್ನ ಅವರ ಬಳಿ ಹೇಳಿಸುತ್ತಿದ್ದಾರೆ ಎಂದರು.

    ಸರ್ಕಾರಿ ಶಾಲೆ, ಕಚೇರಿ ಜಾಗಗಳಲ್ಲಿ ನಿರ್ಬಂಧ ಹಾಕುತ್ತಿರುವುದು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅನ್ವಯ ಅಲ್ಲ. ಎಲ್ಲ ಖಾಸಗಿ ಸಂಘ-ಸಂಸ್ಥೆಗಳಿಗೂ ಅನ್ವಯ ಆಗುತ್ತದೆ. ಈ ಸುತ್ತೋಲೆ ಹೊರಡಿಸಿರೋದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ. ಬಿಜೆಪಿಯವರೇ ಮಾಡಿ, ಈಗ ವಿರೋಧ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

  • ಇನ್ಫಿ ಟ್ರೈನಿ ಉದ್ಯೋಗಿಗಳ ವಜಾ ಬೆನ್ನಲ್ಲೇ ಪ್ರಧಾನಿ ಸಚಿವಾಲಯ ಮಧ್ಯಪ್ರವೇಶ

    ಇನ್ಫಿ ಟ್ರೈನಿ ಉದ್ಯೋಗಿಗಳ ವಜಾ ಬೆನ್ನಲ್ಲೇ ಪ್ರಧಾನಿ ಸಚಿವಾಲಯ ಮಧ್ಯಪ್ರವೇಶ

    ನವದೆಹಲಿ: ಐಟಿ ದಿಗ್ಗಜ ಸಂಸ್ಥೆ ಇನ್ಫೋಸಿಸ್‌ (Infosys) ವಿವಾದದಲ್ಲಿ ಸಿಲುಕಿದೆ. ಮೈಸೂರು ಕ್ಯಾಂಪಸ್‌ನಿಂದ 400 ಮಂದಿ ಟ್ರೈನಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ವಿಚಾರ ಈಗ ಪ್ರಧಾನಮಂತ್ರಿಗಳ ಸಚಿವಾಲಯವನ್ನು (PMO Office) ತಲುಪಿದೆ.

    ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ತಮ್ಮ ಉದ್ಯೋಗವನ್ನು ಮತ್ತೆ ಕೊಡಿಸಬೇಕು. ಭವಿಷ್ಯದಲ್ಲಿ ಮತ್ತೆ ಹೀಗೆ ಆಗದಂತೆ ನೋಡಬೇಕು ಎಂದು ಸಂಸ್ಥೆಯಿಂದ ವಜಾಗೊಂಡವರು ಪ್ರಧಾನಿ ಮೋದಿಗೆ (Narendra Modi) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

     

    ಮನವಿ ಬೆನ್ನಲ್ಲೇ ಕಾರ್ಮಿಕ ಸಚಿವಾಲಯ ಸ್ಪಂದಿಸಿದ್ದು ಫೆಬ್ರವರಿ 25ರಂದು ಕರ್ನಾಟಕ ಕಾರ್ಮಿಕ ಇಲಾಖೆಗೆ ನೋಟಿಸ್‌ ಕಳುಹಿಸಿದೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡಿ ಎಂದು ಸೂಚಿಸಿದೆ ಎನ್ನಲಾಗಿದೆ.

    ಫೆಬ್ರವರಿ ಆರಂಭದಲ್ಲಿ ಇನ್ಫೊಸೀಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ 400 ಟ್ರೈನಿ ಉದ್ಯೋಗಿಗಳಿಗೆ ಲೇಆಫ್ ಪ್ರಕಟಿಸಿತ್ತು. ತಕ್ಷಣವೇ ಕ್ಯಾಂಪಸ್ ತೊರೆಯುವಂತೆ ಸೂಚಿಸಿತ್ತು ಎಂಬ ಆರೋಪ ಕೇಳಿಬಂದಿತ್ತು. ತನ್ನ ನಿರ್ಧಾರವನ್ನು ಇನ್ಫೋಸಿ ಸಮರ್ಥಿಸಿತ್ತು.

     

  • ಇನ್ಫಿ ಸಹ ಸಂಸ್ಥಾಪಕ ಕ್ರಿಸ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

    ಇನ್ಫಿ ಸಹ ಸಂಸ್ಥಾಪಕ ಕ್ರಿಸ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

    ಬೆಂಗಳೂರು: ಇನ್ಫೋಸಿಸ್ (Infosys) ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಐಐಎಸ್‌ಸಿ (IISc) ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Atrocities Act) ಪ್ರಕರಣ ದಾಖಲಾಗಿದೆ.

    ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು. 2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ (Honey Trap) ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ (Casteist abuse) ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು. ಇದನ್ನೂ ಓದಿ: My Dear Friend – ಟ್ರಂಪ್‌ ಜೊತೆಗೆ ಮೋದಿ ದೂರವಾಣಿ ಸಂಭಾಷಣೆ

    court order law

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.  ಇದನ್ನೂ ಓದಿ: ವಿವಾಹೇತರ ಸಂಬಂಧಕ್ಕೆ ಡೇಟಿಂಗ್‌ ಆಪ್‌ ಬಳಕೆ – ದೇಶದಲ್ಲೇ ಬೆಂಗಳೂರು ನಂ.1

    ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಬೋರ್ಡ್‌ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್‌ ದಾಖಲಾಗಿದೆ. ಟ್ರಸ್ಟಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

     

  • ನಾನು ನಿತ್ಯ ಬೆಳಗ್ಗೆ 6:20ಕ್ಕೆ ಆಫೀಸ್‌ಗೆ ಹೋಗಿ ರಾತ್ರಿ 8:30 ಗಂಟೆ ವರೆಗೂ ಕೆಲಸ ಮಾಡ್ತಿದ್ದೆ: ನಾರಾಯಣ ಮೂರ್ತಿ

    ನಾನು ನಿತ್ಯ ಬೆಳಗ್ಗೆ 6:20ಕ್ಕೆ ಆಫೀಸ್‌ಗೆ ಹೋಗಿ ರಾತ್ರಿ 8:30 ಗಂಟೆ ವರೆಗೂ ಕೆಲಸ ಮಾಡ್ತಿದ್ದೆ: ನಾರಾಯಣ ಮೂರ್ತಿ

    – ಹೆಚ್ಚಿನ ಸಮಯ ಕೆಲಸ ಮಾಡಿ ಎಂದು ಯಾರೂ ಹೇರಬಾರದು.. ಆದರೆ, ಇದು ಆತ್ಮಾವಲೋಕನದ ವಿಷಯ

    ನವದೆಹಲಿ: ನಾನು ಪ್ರತಿದಿನ ಬೆಳಗ್ಗೆ 6:20 ಕ್ಕೆ ಆಫೀಸ್‌ಗೆ ಹೋಗಿ ರಾತ್ರಿ 8:30 ಗಂಟೆ ವರೆಗೂ ಕೆಲಸ ಮಾಡುತ್ತಿದ್ದೆ ಎಂದು ಇನ್ಫೋಸಿಸ್‌ (Infosys) ಸಹ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ತಿಳಿಸಿದ್ದಾರೆ.

    ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕೆಂಬ ತಮ್ಮ ಹೇಳಿಕೆ ವಿವಾದಕ್ಕೆ ಗುರಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗ ಯಾರು ಕೂಡ ಇನ್ನೊಬ್ಬ ವ್ಯಕ್ತಿಯ ಮೇಲೆ ದೀರ್ಘ ಕೆಲಸದ ಸಮಯವನ್ನು ಹೇರಬಾರದು. ಇವು ಚರ್ಚೆಯ ವಿಷಯ ಅಲ್ಲ. ಆತ್ಮಾವಲೋಕನಕ್ಕೆ ಸಂಬಂಧಿಸಿದ ವಿಷಯಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು 40 ವರ್ಷಗಳ ಕಾಲ ವಾರಕ್ಕೆ 85-90 ಗಂಟೆ ಕೆಲಸ ಮಾಡಿದ್ದೆ, ನನ್ನ ಶ್ರಮ ವ್ಯರ್ಥವಾಗಲಿಲ್ಲ: ನಾರಾಯಣ ಮೂರ್ತಿ

    ನಾನು ಬೆಳಗ್ಗೆ 6:20 ಕ್ಕೆ ಕಚೇರಿಗೆ ಹೋಗಿ ರಾತ್ರಿ 8:30 ಕ್ಕೆ ಹೊರಗೆ ಬರುತ್ತಿದ್ದೆ. ಅದು ಸತ್ಯ, ನಾನು ಅದನ್ನು ಮಾಡಿದ್ದೇನೆ. ನಾನು 40 ವರ್ಷ ವಯಸ್ಸಿನವನಿದ್ದಾಗ ಇಷ್ಟು ಸಮಯ ಕೆಲಸ ಮಾಡಿದ್ದೇನೆ. ಇದು ಚರ್ಚೆಗೆ ಒಳಪಡಿಸುವ ವಿಷಯ ಅಲ್ಲ. ನಿಮಗೆ ನೀವೇ ತೀರ್ಮಾನ ಮಾಡಬಹುದು. ನೀವು ಬಯಸಿದ್ದನ್ನು ಮಾಡಬಹುದು. ನೀವು ಅದನ್ನು ಮಾಡಬೇಕು, ನೀವು ಅದನ್ನು ಮಾಡಬಾರದು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಜಾಗತಿಕವಾಗಿ ದೇಶವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಬೇಕಾದರೆ ಭಾರತದ ಯುವಸಮುದಾಯವು ಕಠಿಣ ಪರಿಶ್ರಮ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು 78 ವರ್ಷದ ನಾರಾಯಣ ಮೂರ್ತಿ ಅವರು ಹೇಳಿದ್ದರು. ನಮ್ಮ ಯುವಕರು, ‘ಇದು ನನ್ನ ದೇಶ. ನಾನು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಬಯಸುತ್ತೇನೆ’ ಎಂದು ಹೇಳಬೇಕು ಎಂದಿದ್ದರು. ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ನಾರಾಯಣ ಮೂರ್ತಿ ಅವರ ಹೇಳಿಕೆಯು ಸೋಷಿಯಲ್‌ ಮೀಡಿಯಾದಲ್ಲಿ ವಿವಾದ ಹುಟ್ಟುಹಾಕಿತು. ಉದ್ಯಮಿಯೊಬ್ಬರ ಇಂತಹ ಹೇಳಿಕೆಯು ಉದ್ಯೋಗಿಗಳ ಶೋಷಣೆಗೆ ಕಾರಣವಾಗುತ್ತದೆ. ಕೆಲಸ-ಜೀವನದ ಸಮತೋಲನದ ಅಗತ್ಯವನ್ನು ಅವರು ಅರಿತು ಮಾತನಾಡಬೇಕು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

  • ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಓಡಾಟ – ಟ್ರೈನಿಗಳಿಗೆ ಜ.26ರವರೆಗೆ ರಜೆ

    ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಓಡಾಟ – ಟ್ರೈನಿಗಳಿಗೆ ಜ.26ರವರೆಗೆ ರಜೆ

    ಮೈಸೂರು: ಇಲ್ಲಿನ (Mysuru) ಇನ್ಫೋಸಿಸ್ (Infosys) ಕ್ಯಾಂಪಸ್‍ನಲ್ಲಿ ಚಿರತೆ (Leopard) ಕಾಣಿಸಿಕೊಂಡಿದ್ದ ಹಿನ್ನೆಲೆ ಟ್ರೈನಿ ಉದ್ಯೋಗಿಗಳಿಗೆ ಜ.26ರ ವರೆಗೆ ರಜೆ ಘೋಷಿಸಲಾಗಿದೆ.

    ಕ್ಯಾಂಪಸ್ ಒಳಗೆ ಅಳವಡಿಸಲಾದ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗುತ್ತಿದೆ. ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಚಿರತೆ ಬೀಳುತ್ತಿಲ್ಲ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

    ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಎಚ್ಚೆತ್ತ ಇನ್ಫೋಸಿಸ್ ಸಂಸ್ಥೆ, ಮುನ್ನೆಚ್ಚರಿಕಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ರಜೆ ಘೋಷಿಸಿದೆ.

    ಕ್ಯಾಂಪಸ್‍ನಲ್ಲಿ ಕಳೆದ ಡಿ.31 ರಂದು ಚಿರತೆ ಕಾಣಿಸಿಕೊಂಡಿತ್ತು. ಇದಾದ ಬಳಿಕ ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು.

  • ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಕೆ: ಈಶ್ವರ್ ಖಂಡ್ರೆ

    ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಕೆ: ಈಶ್ವರ್ ಖಂಡ್ರೆ

    ಬೆಂಗಳೂರು: ಮೈಸೂರು ನಗರದ ಇನ್ಫೋಸಿಸ್ (Infosys) ಆವರಣದಲ್ಲಿ ಇಂದು ನಸುಕಿನ ಜಾವ 4:30ರ ಸುಮಾರಿನಲ್ಲಿ ಚಿರತೆ (Leopard) ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ‌ (Eshwar Khandre) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು, ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ. ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ.. ಸಚಿವ ಸಂಪುಟದಿಂದ ಕೈಬಿಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ

    ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮೆರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಹೊಸ ಲೋಕದಲ್ಲಿ ಶೋಕ ಕಾಣಬಹುದು – ವಿದೇಶ ಪ್ರವಾಸಕ್ಕೆ ಛಲವಾದಿ ವ್ಯಂಗ್ಯ

  • ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

    ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

    ಮೈಸೂರು: ಇಲ್ಲಿನ ಇನ್ಫೋಸಿಸ್ (Infosys) ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ.

    ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ದೇಶದಲ್ಲೇ 3ನೇ ಶ್ರೀಮಂತ ಸಿಎಂ – ನಂಬರ್‌ ಒನ್‌ ಯಾರು?

    ಇಂದು ಬೆಳಗ್ಗೆ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆಯ ಚಲನವಲನ ಕ್ಯಾಂಪಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆಯಿಂದ ಆದೇಶ ಹೊರಡಿಸಲಾಗಿದೆ.

  • ರತನ್‌ ಟಾಟಾರದ್ದು ಸಮಗ್ರ ವ್ಯಕ್ತಿತ್ವ: ಸುಧಾ ಮೂರ್ತಿ

    ರತನ್‌ ಟಾಟಾರದ್ದು ಸಮಗ್ರ ವ್ಯಕ್ತಿತ್ವ: ಸುಧಾ ಮೂರ್ತಿ

    ಬೆಂಗಳೂರು: ರತನ್‌ ಟಾಟಾ ಅವರದ್ದು ಸಮಗ್ರ ವ್ಯಕ್ತಿತ್ವ, ನಾನು ಅವರ ಮನೆಯಿಂದ ಮಾತ್ರ ಪರೋಪಕಾರವನ್ನು ಕಲಿಯುತ್ತೇನೆ. ಅವರ ನಿಧನ ನನಗೆ ವೈಯಕ್ತಿಕ ನಷ್ಟ ಎಂದು ಲೇಖಕಿ ಹಾಗೂ ಸಂಸದೆ ಸುಧಾ ಮೂರ್ತಿಯವರು ಹೇಳಿದ್ದಾರೆ.

    ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರತನ್ ಟಾಟಾ ಅವರನ್ನು ಭೇಟಿಯಾಗಿದ್ದೆ. ಅವರು ಪ್ರಾಮಾಣಿಕತೆ, ಸರಳತೆ, ಯಾವಾಗಲೂ ಇತರರ ಕಾಳಜಿ ವಹಿಸುವ ಮತ್ತು ಸಹಾನುಭೂತಿ ಹೊಂದಿರುವ ವ್ಯಕ್ತಿಯಾಗಿದ್ದರು. ಅಪಾರ ತಾಳ್ಮೆ, ಅಪರೂಪದ ವ್ಯಕ್ತಿತ್ವದ ಮೂಲಕ ಅವರು ದಂತಕಥೆಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಈ ಹಿಂದೆ ರತನ್ ಟಾಟಾ (Ratan Tata), ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್(KT Thomas) ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ(Kariya Munda) ಅವರನ್ನು ಪಿಎಂ-ಕೇರ್ಸ್ ಫಂಡ್(PM CARES Fund ) ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿತ್ತು. ಇದೇ ವೇಳೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್(Infosys) ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ(Sudha Murthy) ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿತ್ತು.

    ಉದ್ಯಮಿಯಾಗಿ ಸಾರ್ಥಕ ಬದುಕು ನಡೆಸಿದ ರತನ್‌ ಟಾಟಾ (Ratan Tata) ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.

  • ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುತ್ತಿಲ್ಲ: ನಾರಾಯಣ ಮೂರ್ತಿ

    ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುತ್ತಿಲ್ಲ: ನಾರಾಯಣ ಮೂರ್ತಿ

    ಲಕ್ನೋ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ (Population) ನಿಯಂತ್ರಿಸಲು ಭಾರತೀಯರು (Indians) ಸಾಕಷ್ಟು ಗಮನ ಹರಿಸುತ್ತಿಲ್ಲ ಎಂದು ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ (NR Narayana Murthy) ಅಭಿಪ್ರಾಯಪಟ್ಟಿದ್ದಾರೆ.

    ಪ್ರಯಾಗ್‌ರಾಜ್‌ದ ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಏರುತ್ತಿರುವ ಜನಸಂಖ್ಯೆ ದೇಶಕ್ಕೆ ಸವಾಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಭಾರತೀಯರು ಹೆಚ್ಚು ಗಮನ ಹರಿಸಬೇಕು. ಇದರಿಂದ ತಲಾದಾಯ (Per Capita Income) ಮತ್ತು ಆರೋಗ್ಯ (Health) ಸುಧಾರಣೆಯಾಗಬಹುದು ಎಂದು ತಿಳಿಸಿದರು. ಇದನ್ನೂ ಓದಿ: Lateral Entry | ಪರಿಕಲ್ಪನೆಯನ್ನು ಪರಿಚಯಿಸಿದ್ದೇ ಯುಪಿಎ – ಅಶ್ವಿನಿ ವೈಷ್ಣವ್‌ ತಿರುಗೇಟು

    ಭಾರತೀಯರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಗಮನ ಹರಿಸಲಿಲ್ಲ ಎಂದು ಕಳವಳವ್ಯಕ್ತಪಡಿಸಿದ ಅವರು ಅಮೆರಿಕ, ಬ್ರೆಜಿಲ್ ಮತ್ತು ಚೀನಾಕ್ಕೆ ಹೋಲಿಸಿದರೆ ಭಾರತದ ತಲಾದಾಯ ತುಂಬಾ ಕಡಿಮೆ ಇದೆ ಎಂದು ಹೇಳಿದರು.

    ನಾವು ದೊಡ್ಡ ಗುರಿಯನ್ನು ಹೊಂದಿರಬೇಕು. ಹಾಗೆಯೇ ಕಷ್ಟಪಟ್ಟು ದುಡಿಯುವ ಮೂಲಕ ನಮ್ಮ ಗುರಿಯನ್ನು ತಲುಪಬೇಕು ಎಂದರು.

    ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಪದವಿಯ 34 ಮತ್ತು ಪದವಿಯಲ್ಲಿ 13 ಚಿನ್ನದ ಪದಕ ವಿತರಣೆ ಮಾಡಲಾಯಿತು.

     

  • ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸುಧಾ ಮೂರ್ತಿ

    ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸುಧಾ ಮೂರ್ತಿ

    ತುಮಕೂರು: ಇನ್ಫೋಸಿಸ್ (Infosys) ಮುಖ್ಯಸ್ಥೆ ಸುಧಾ ಮೂರ್ತಿಯವರು (Sudha Murty) ಇಂದು (ಭಾನುವಾರ) ಮುಂಜಾನೆ ಕೊರಟಗೆರೆಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯಕ್ಕೆ (Goravanahalli Sri Mahalakshmi Temple) ಭೇಟಿ ನೀಡಿದ್ದಾರೆ.

    ಸಂಬಂಧಿಕರೊಂದಿಗೆ ಅವರು ಆಗಮಿಸಿ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದಿದ್ದಾರೆ. ಬಳಿಕ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್‌’ ಜಾಡು ಅಡಿಯಲ್ಲಿ AAP ಮುಗಿಸಲು ಬಿಜೆಪಿ ಯತ್ನ: ಕೇಜ್ರಿವಾಲ್‌

    ಈ ವೇಳೆ ದೇವಾಲಯದ ಆಡಳಿತ ಮಂಡಳಿಯಿಂದ ಸುಧಾಮೂರ್ತಿಯವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ