Tag: injury problem

  • ಸನ್ ರೈಸರ್ಸ್‍ಗೆ ಆರಂಭಿಕ ಆಘಾತ – ಐಪಿಎಲ್‍ನಿಂದ ಮಿಚೆಲ್ ಮಾರ್ಷ್ ಔಟ್

    ಸನ್ ರೈಸರ್ಸ್‍ಗೆ ಆರಂಭಿಕ ಆಘಾತ – ಐಪಿಎಲ್‍ನಿಂದ ಮಿಚೆಲ್ ಮಾರ್ಷ್ ಔಟ್

    ಅಬುಧಾಬಿ: ಐಪಿಎಲ್ ಆರಂಭದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಲ್‍ರೌಂಡರ್ ಮಿಚೆಲ್ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದಾರೆ.

    ಕಳೆದ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಮಾರ್ಷ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುವ ವೇಳೆ ಹೊಸ ಶೂ ಧರಿಸಿದ್ದ ಕಾರಣ ಅವರ ಪಾದಕ್ಕೆ ಗಾಯವಾಗಿತ್ತು. ಈಗ ಇದೇ ಸಮಸ್ಯೆಯಿಂದ ಮಾರ್ಷ್ ಟೂರ್ನಿಯಿಂದ ಹೊರಬಂದಿದ್ದು, ಹೈದರಾಬಾದ್ ತಂಡಕ್ಕೆ ಆರಂಭಿಕ ಹಿನ್ನೆಡೆಯಾಗಿದೆ.

    ಈ ವಿಚಾರವಾಗಿ ತನ್ನ ಅಧಿಕೃತ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮಿಚೆಲ್ ಮಾರ್ಷ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಅವರು ಬೇಗ ಗಾಯದಿಂದ ಗುಣಮುಖರಾಗಲಿ ಎಂದು ನಾವು ಹಾರೈಸುತ್ತೇವೆ. ವೆಸ್ಟ್ ಇಂಡೀಸ್ ತಂಡದ ಆಲ್‍ರೌಂಡರ್ ಜೇಸನ್ ಹೋಲ್ಡರ್ ಅವರು ಅವರ ಜಾಗಕ್ಕೆ ಬಂದಿದ್ದಾರೆ ಎಂದು ಮಾಹಿತಿ ನೀಡಿದೆ.

    ಸೋಮವಾರ ನಡೆದ ಆರ್‍ಸಿಬಿ ವಿರುದ್ಧ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಅವರು ಐದನೇ ಓವರ್ ಬೌಲಿಂಗ್ ಮಾಡಿದ್ದರು. ಈ ಓವರಿನ ಎರಡನೇ ಬಾಲ್ ಎಸೆದಾಗ ಫಿಂಚ್ ಅವರು ಅದನ್ನು ನೇರವಾಗಿ ಹೊಡೆದರು, ಈ ವೇಳೆ ಇದನ್ನು ತಡೆಯಲು ಹೋಗಿ ಮಾರ್ಷ್ ಅವರು ತಮ್ಮ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಇದಾದ ನಂತರವೂ ಕೂಡ ಎರಡು ಬಾಲ್ ಬೌಲ್ ಮಾಡಿದ ಮಾರ್ಷ್ ನಂತರ, ಪಾದದ ನೋವಿನಿಂದ ಮೈದಾನದಿಂದ ಹೊರಬಂದಿದ್ದರು.

    ಕೇವಲ ನಾಲ್ಕು ಬಾಲ್ ಬೌಲ್ ಮಾಡಿ ಮಾರ್ಷ್ ಹೊರಬಂದರು, ಇದಾದ ನಂತರ ವಿಜಯ್ ಶಂಕರ್ ಅವರು ಉಳಿದ ಎರಡು ಬಾಲನ್ನು ಹಾಕಿದ್ದರು. ನಂತರ ಹೈದರಾಬಾದ್ ಬ್ಯಾಟಿಂಗ್ ವೇಳೆ ಕೂಡ ಗಾಯವಾಗಿದ್ದರೂ ಮಿಚೆಲ್ ಮಾರ್ಷ್ ತಂಡಕ್ಕಾಗಿ ಬ್ಯಾಟಿಂಗ್ ಬೀಸಲು ಬಂದಿದ್ದರು. ಆದರೆ ಮೊದಲ ಬಾಲಿನಲ್ಲೇ ಕ್ಯಾಚ್ ಕೊಟ್ಟು ಔಟ್ ಆದರು. ಆದರೆ ನಿಲ್ಲಲೂ ಆಗದ ಸ್ಥಿತಿಯಲ್ಲಿ ತಂಡ ಸಂಕಷ್ಟಕ್ಕೆ ಸಿಲುಕಿದೆ ಎಂದು ಬ್ಯಾಟಿಂಗ್ ಮಾಡಲು ಬಂದ ಮಾರ್ಷ್‍ಗೆ ಅಪಾರ ಪ್ರಮಾಣದ ಮೆಚ್ಚುಗೆ ವ್ಯಕ್ತವಾಗಿತ್ತು.

  • ಬರೋಬ್ಬರಿ 12 ವರ್ಷಗಳ ಬಳಿಕ ಧೋನಿಗೆ ಗಾಯದ ಸಮಸ್ಯೆ!

    ಬರೋಬ್ಬರಿ 12 ವರ್ಷಗಳ ಬಳಿಕ ಧೋನಿಗೆ ಗಾಯದ ಸಮಸ್ಯೆ!

    ಮೌಂಟ್ ಮೌಂಗಾನೆ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎಷ್ಟು ಫಿಟ್ ಆಗಿರುತ್ತಾರೆ ಎಂಬುವುದು ಎಲ್ಲರಿಗೂ ತಿಳಿದ ವಿಷಯ. 37 ವರ್ಷದ ಧೋನಿ ಯುವ ಆಟಗಾರರಿಗೆ ಪೈಪೋಟಿ ನೀಡುವಂತೆ ಕ್ರೀಸ್ ನಲ್ಲಿ ಓಡುತ್ತಾರೆ. ಅಲ್ಲದೇ ತಾವು ಮ್ಯಾಚ್ ಫಿನಿಷರ್ ಎಂಬುವುದನ್ನು ಮತ್ತೆ ಆಸೀಸ್, ನ್ಯೂಜಿಲೆಂಡ್ ಸರಣಿಯಲ್ಲಿ ಸಾಬೀತು ಪಡಿಸಿದ್ದರು.

    ವಿಕೆಟ್ ಹಿಂದೆಯೂ ಕೂಡ ವೇಗವಾಗಿ ಕಾರ್ಯನಿರ್ವಹಿಸಿದ್ದ ಧೋನಿ ಎಲ್ಲರಿಗೂ ಅಚ್ಚರಿಯನ್ನು ಉಂಟು ಮಾಡಿದ್ದರು. ಆದರೆ ಇಂದು ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಹೊರಗುಳಿದ್ದರು.

    2004ರ ಡಿಸೆಂಬರ್ ನಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ಧೋನಿ ಗಾಯ/ ಆರೋಗ್ಯ ಸಮಸ್ಯೆಯಿಂದ ಕಾರಣದಿಂದ ತಂಡದಿಂದ ಹೊರಗುಳಿದಿರುವುದು ಇದು ಮೂರನೇ ಬಾರಿ ಮಾತ್ರ. 2013ರಲ್ಲಿ ತಂಡದಿಂದ ಹೊರಗಿದ್ದ ಧೋನಿ ಬರೋಬ್ಬರಿ 12 ವರ್ಷಗಳ ಬಳಿಕ ಮತ್ತೆ ಗಾಯದ ಸಮಸ್ಯೆ ಎದುರಿಸಿದ್ದಾರೆ. ಮೊದಲ ಬಾರಿಗೆ 2007 ರಲ್ಲಿ ಐರ್ಲೆಂಡ್, ದಕ್ಷಿಣ ಆಫ್ರಿಕಾದಲ್ಲಿ ಜರುಗಿದ್ದ 2 ಪಂದ್ಯಗಳ ವೇಳೆ ಜ್ವರದ ಕಾರಣ ಮ್ಯಾಚ್‍ನಿಂದ ಹಿಂದೆ ಸರಿದಿದ್ದರು. 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತ್ರಿಕೋನ ಸರಣಿಯಲ್ಲಿ 3 ಏಕದಿನ ಪಂದ್ಯದಲ್ಲಿ ಭಾಗವಹಿಸಿರಲಿಲ್ಲ.

    ವೆಸ್ಟ್ ಇಂಡೀಸ್ ಸರಣಿ ವೇಳೆ ತೊಡೆಯ ಗಾಯದ ಸಮಸ್ಯೆಯಿಂದ ಮ್ಯಾಚ್ ಮಿಸ್ ಮಾಡಿದ್ದ ಧೋನಿ, ಮತ್ತೆ ಇದೇ ಕಾರಣದಿಂದ ಇಂದು ಪಂದ್ಯದಿಂದ ಹೊರಗುಳಿದ್ದಾರೆ ಎಂದು ವರದಿಯಾಗಿದೆ. 2018ರಲ್ಲಿ ಕಳಪೆ ಫಾರ್ಮ್ ನಿಂದ ಟೀಕೆಗೆ ಗುರಿಯಾಗಿದ್ದ ಧೋನಿ ಅವರು 2019ರ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿದ್ದರು.

    ಈ ವರ್ಷದಲ್ಲಿ ಧೋನಿ 241ರ ಸರಾಸರಿಯಲ್ಲಿ 241 ರನ್ ಸಿಡಿಸಿದ್ದಾರೆ. ಆಸೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲೂ ಬಿರುಸಿನ ಆಟ ಪ್ರದರ್ಶಿಸಿದ ಧೋನಿ, 33 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 48 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಧೋನಿ ಗಾಯದ ಸಮಸ್ಯೆಗೆ ಒಳಗಾದ ಪರಿಣಾಮದಿಂದ ದಿನೇಶ್ ಕಾರ್ತಿಕ್ 3ನೇ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದು 38 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ನೆರವಿನಿಂದ 38 ರನ್ ಸಿಡಿಸಿದರು.

    ಅಂದಹಾಗೇ ಧೋನಿಗೆ ಕಾಣಿಸಿಕೊಂಡಿರುವ ಗಾಯದ ಸಮಸ್ಯೆ ಸಾಮಾನ್ಯವಾಗಿ ಕ್ರೀಡಾಪುಟುಗಳಲ್ಲಿ ಕಾಣಿಸಿಕೊಳ್ಳುವ ಸ್ನಾಯು ಸೆಳೆತದ ಭಾಗವಾಗಿದ್ದು, ಧೋನಿ ಅವರಿಗೆ ತೊಡೆಯ ಹಿಂಭಾಗದಲ್ಲಿ ಸ್ನಾಯು ಸೆಳೆತ ಉಂಟಾಗಿದೆ. ಸಾಮಾನ್ಯವಾಗಿ ಲಘು ಸ್ನಾಯು ಸೆಳೆತ, ಭಾಗಶಃ ಸ್ನಾಯು ಸೆಳೆತ ಎಂದು ಎರಡು ರೀತಿಯಲ್ಲಿ ಇದನ್ನು ಪರಿಗಣಿಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಆಘಾತ!

    ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಮತ್ತೊಂದು ಆಘಾತ!

    ಲಂಡನ್: ಆಗಸ್ಟ್ 1 ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಮತ್ತೊಂದು ಅಘಾತವನ್ನು ಎದುರಿಸಿದ್ದು, ತಂಡದ ಪ್ರಮುಖ ಸ್ಪೀನರ್ ಆರ್ ಅಶ್ವಿನ್ ಗಾಯದ ಸಮಸ್ಯೆ ಸಿಲುಕಿದ್ದಾರೆ.

    ಎಸ್ಸೆಕ್ಸ್ ತಂಡದ ವಿರುದ್ಧ ಏಕೈಕ ಅಭ್ಯಾಸ ಪಂದ್ಯಕ್ಕೂ ಮೊದಲು ಅಭ್ಯಾಸದ ವೇಳೆ ಅಶ್ವಿನ್ ತಮ್ಮ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಕೈ ಬೆರಳಿಗೆ ಗಾಯವಾದ ಕಾರಣ ಅಶ್ವಿನ್ 2ನೇ ದಿನದ ತರಬೇತಿಗೆ ಗೈರುಹಾಜರಿ ಆಗಿದ್ದರು. ಸದ್ಯ ಅಶ್ವಿನ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದೆ ಎಂದು ಬಿಸಿಸಿಐ ವೈದ್ಯರು ತಿಳಿಸಿದ್ದಾರೆ. ಆಗಸ್ಟ್ 1 ರಂದು ಆರಂಭವಾಗುವ ಮೊದಲ ಪಂದ್ಯದಲ್ಲಿ ಅಶ್ವಿನ್ ಭಾಗವಹಿಸುವ ನಿರೀಕ್ಷೆ ಇದೆ.

    ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಆರಂಭದಲ್ಲೇ ಟೀಂ ಇಂಡಿಯಾ ಆಟಗಾರರು ಗಾಯದ ಸಮಸ್ಯೆ ಎದುರಿಸಿದ್ದರು. ತಂಡದ ಪ್ರಮುಖ ಬೌಲರ್ ಭುವನೇಶ್ವರ್ ಕುಮಾರ್ ಹಾಗೂ ಜಸ್‍ಪ್ರೀತ್ ಬುಮ್ರಾ ಗಾಯದ ಸಮಸ್ಯೆಗೆ ಸಿಲುಕಿದ್ದರು.

    ಎಸ್ಸೆಕ್ಸ್ ತಂಡದ ವಿರುದ್ಧದ ಎರಡನೇ ದಿನದಾಟವನ್ನು ಮುಂದುವರಿಸಿದ ದಿನೇಶ್ ಕಾರ್ತಿಕ್ (82 ರನ್) ಅರ್ಧ ಶತಕ ಸಿಡಿಸಿ ಮಿಂಚಿದರು. ಮೊದಲ ದಿನದಾಟದಲ್ಲಿ 33 ರನ್ ಗಳಿಸಿದ್ದ ಪಾಂಡ್ಯ ಕೂಡ 51 ರನ್ ಗಳಿಸಿ ಅರ್ಧಶತಕ ಗಳಿಸಿ ತಂಡದ ಮೊತ್ತ 300 ಗಡಿದಾಟಲು ನೆರವಾದರು. ಬಳಿಕ ಬಂದ ರಿಷಭ್ ಪಂತ್ ಬಿರುಸಿನ ಆಟವಾಡಿ 33 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 395 ರನ್ ಗಳಿಸಿ ಅಲೌಟ್ ಆಗಿದೆ.

    ಎಸ್ಸೆಕ್ಸ್ ತಂಡ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 235 ರನ್ ಗಳಿಸಿದೆ. ಎಸ್ಸೆಕ್ಸ್ ತಂಡದ ಪರ ಟಾಮ್ ವೆಸ್ಟ್ಲಿ 57 ರನ್ ಹಾಗೂ ಮೈಕಲ್ ಪೆಪ್ಪರ್ 53 ರನ್ ಗಳಿಸಿ ಅರ್ಧಶತಕ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ಉಮೇಶ್ ಯಾದವ್ ಹಾಗೂ ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದಿದ್ದಾರೆ. ಎಸ್ಸೆಕ್ಸ್ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನವೇ ಕ್ರೀಡಾಂಗಣ ಪಿಚ್ ಕುರಿತು ಟೀಂ ಇಂಡಿಯಾ ಆಕ್ಷೇಪ ವ್ಯಕ್ತಪಡಿಸಿತ್ತು, ಇದರಿಂದ 4 ದಿನಗಳ ಪಂದ್ಯವನ್ನು 3 ದಿನಗಳಿಗೆ ಕಡಿತಗೊಳಿಸಲಾಯಿತ್ತು.