ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್ ಟಿಸಿ ಬಸ್ ಕೆರೆಗೆ ಬಿದ್ದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿರಾ ತಾಲೂಕಿನ ಕಲ್ಲಳ್ಳಿಯಲ್ಲಿ ಬಳಿ ಈ ಅವಘಡ ಸಂಭವಿಸಿದೆ. ಕೆಎಸ್‍ಆರ್ ಟಿಸಿ ಬಸ್ ಶಿರಾದಿಂದ ಕಲ್ಲಳ್ಳಿಗೆ ಹೊರಟಿತ್ತು. ಮಾರ್ಗ ಮಧ್ಯೆ ಕಲ್ಲಳ್ಳಿ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ಉರುಳಿದೆ. ಪರಿಣಾಮ ಬಸ್ ಮೂರು ಪಲ್ಟಿ ಹೊಡೆದಿದೆ.
ಈ ಬಸ್ಸಿನಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಈ ಅವಘಡದಿಂದ ಎಲ್ಲರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಕೆರೆಯಲ್ಲಿ ನೀರು ಇಲ್ಲದೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಈ ಘಟನೆ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಅಂಗಡಿಗೆ ಹೋಗಿದ್ದ ಒಂದನೇ ತರಗತಿ ಓದುತ್ತಿರುವ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ಗಂಭೀರ ಗಾಯಗೊಳಿಸಿರುವಂತಹ ಘಟನೆ ಹೊಸಕೋಟೆ ಗೌತಮ್ ಕಾಲೋನಿಯಲ್ಲಿ ನಡೆದಿದೆ.
ಮಾನಸ ದಾಳಿಗೆ ಒಳಗಾದ ಬಾಲಕಿ. ಹೊಸಕೋಟೆಯ ಓಂ ಶ್ರೀ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿರುವ ಮಾನಸ ಎಂದಿನಂತೆ ಮಂಗಳವಾರ ಬೆಳಗ್ಗೆ ಶಾಲೆಗೆ ಬಂದು ಪರೀಕ್ಷೆ ಮುಗಿಸಿ ಹತ್ತಿರದ ಅಂಗಡಿಗೆ ತಿಂಡಿ ತರಲು ಹೋಗಿದ್ದಾಳೆ. ಇದೇ ವೇಳೆ ಅಲ್ಲಿದಂತಹ ಬೀದಿ ನಾಯಿಗಳು ದಾಳಿ ನಡೆಸಿ ಮಾನಸಾಳ ತೊಡೆ ಸೇರಿದಂತೆ ದೇಹದ ನಾನಾ ಕಡೆ ಮನಬಂದಂತೆ ಕಚ್ಚಿವೆ. ಇದನ್ನು ಓದಿ: ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕನ ಸಾವು
ಗಂಭೀರವಾಗಿ ಗಾಯಗೊಂಡ ಮಾನಸಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಈಗ ದಾಖಲು ಮಾಡಲಾಗಿದೆ. ಹೊಸಕೋಟೆ ನಿವಾಸಿಗಳು ಸಾಕಷ್ಟು ಬಾರಿ ಮನವಿ ಮಾಡಿಕೊಂಡರೂ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಕಡಿವಾಣ ಹಾಕಿಲ್ಲ. ಇನ್ನಾದರೂ ಈ ಪ್ರಕರಣದಿಂದ ಎಚ್ಚೆತ್ತು ನಗರಸಭೆ ಬೀದಿನಾಯಿಗಳ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕಿದೆ. ಇದನ್ನು ಓದಿ: ಪುರಸಭೆ ಸಿಬ್ಬಂದಿಯನ್ನ ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು
ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಹಿಂದೆ ಶೌಚಾಲಯಕ್ಕೆ ಹೋಗಿದ್ದ ಬಾಲಕನ ಮೇಲೆ 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿ ಗಾಯಗೊಳಿಸಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ.
ಚಿಕ್ಕಮಗಳೂರು: ಭಯೋತ್ಪಾದಕರ ದಾಳಿಯಲ್ಲಿ ಸೊಂಟಕ್ಕೆ ಗಾಯವಾಗಿ, ಎಡಗೈಗೆ 40ಕ್ಕೂ ಹೆಚ್ಚು ಹೊಲಿಗೆ ಹಾಕಿಸಿಕೊಂಡು ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ತಿಂಗಳವರೆಗೆ ಮನೆಯವರಿಗೆ ವಿಷಯವನ್ನ ಹೇಳದೆ ಬೆಡ್ ಮೇಲೆ ಮಲಗಿಕೊಂಡೇ ಚೆನ್ನಾಗಿದ್ದೇನೆ ಅಂತ ಹೇಳುವ ಮೂಲಕ ಮಲೆನಾಡಿನ ವೀರಯೋಧರೊಬ್ಬರು ತಾಯಿ ಹಾಗೂ ತಾಯ್ನಾಡಿನ ಪ್ರೀತಿ ಮೆರೆದಿದ್ದಾರೆ.
ಜಿಲ್ಲೆಯ ಕೊಪ್ಪ ತಾಲೂಕಿನ ಸಿಗದಾಳು ಗ್ರಾಮದ ಆದರ್ಶ್ ತಾಯಿ ಮತ್ತು ತಾಯ್ನಾಡಿನ ಪ್ರೀತಿ ಮೆರೆದಿರುವ ಬಿ.ಎಸ್.ಎಫ್ ಯೋಧ. ಇವರು ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗಣರಾಜ್ಯೋತ್ಸವಕ್ಕೆ ವಾರದ ಹಿಂದೆ ಜಮ್ಮುವಿನ ಸಾಂಬಾ ಜಿಲ್ಲೆಯ ಹತ್ತು ಕಿ.ಮೀ. ದೂರದ ರಾಜ್‍ಘಡ್‍ನಲ್ಲಿ ಬೀಡುಬಿಟ್ಟಿದ್ದರು.
ಈ ವೇಳೆ ಸೀಮಾ ಗಡಿ ಉಲ್ಲಂಘನೆ ಮಾಡಿ ದಾಳಿ ಮಾಡಿದ್ದರು. 15 ಭಾರತೀಯ ಯೋಧರ ತಂಡವೂ ಪ್ರತಿದಾಳಿ ಮಾಡಿತ್ತು. ಉಗ್ರರ ಶೆಲ್ ದಾಳಿಯಿಂದ ಆದರ್ಶ್ ಕೈ ಹಾಗೂ ಸೊಂಟಕ್ಕೆ ಗಾಯವಾಗಿತ್ತು. ಉಗ್ರರ ಜೊತೆ ದಾಳಿಗೂ ಮುಂಚೆ ಪತ್ನಿ ಜೊತೆ ಆದರ್ಶ್ ಮಾತನಾಡಿದ್ದರು. ಆಗ ಪತ್ನಿಗೆ ರಾಜಕಾರಣಿಗಳು ಪ್ರಚಾರಕ್ಕೆ ಬಂದಿದ್ದರು ಎಂದು ಹೇಳಿದ್ದು, ದಾಳಿಯ ವಿಚಾರವನ್ನ ಪತ್ನಿಗೆ ಆದರ್ಶ್ ಅವರು ಹೇಳಿರಲಿಲ್ಲ. ಮನೆಗೆ ಹೇಳಿದರೆ ಗಾಬರಿಯಾಗುತ್ತಾರೆ ಎಂದು ಈ ವಿಚಾರದ ಬಗ್ಗೆ ಅವರು ಮನೆಯಲ್ಲಿ ಹೇಳಲಿಲ್ಲ.
ಇದೀಗ ಮನೆಯಲ್ಲಿ ಚಿಕಿತ್ಸೆ ಹಾಗೂ ವಿಶ್ರಾಂತಿಯಲ್ಲಿರುವ ಯೋಧ ಆದರ್ಶ್ ದಾಳಿಯನ್ನ ನೆನೆಯುತ್ತಿದ್ದು, ಗಡಿ, ಸೈನಿಕ ವೃತ್ತಿ, ಹೋರಾಟ ಹೇಗಿರುತ್ತದೆಂದು ಸುತ್ತಮುತ್ತಲಿನವರಿಗೆ ಹೇಳುತ್ತಿದ್ದಾರೆ. ಜೊತೆಗೆ ನನಗೂ ತಾಯಿಗಿಂತ ತಾಯ್ನಾಡೆ ಮುಖ್ಯ ಅಂತಿದ್ದಾರೆ. 2000 ಇಸವಿಯಲ್ಲಿ ಸೇನೆಗೆ ಸೇರಿದ್ದ ಆದರ್ಶ್, 2010ರಲ್ಲಿ ಕಮಾಂಡರ್ ಆಗಿ ವಿಶೇಷ ತರಬೇತಿ ಪಡೆದಿದ್ದರು.
ನಾನು ಪಡೆದ ತರಬೇತಿಯೇ ಉಗ್ರರ ಜೊತೆ ಹೋರಾಡುವುದಕ್ಕೆ ಉತ್ತೇಜನ ನೀಡಿತ್ತು ಎಂದು ಆದರ್ಶ್ ಹೇಳಿದ್ದಾರೆ. ಆದರೆ ಉಗ್ರರೊಂದಿಗೆ ಸೆಣಸಾಟದಲ್ಲಿ ಸ್ನೇಹಿತ ಹಾಗೂ ಸೈನಿಕ ಕೇರಳದ ಸುರೇಶ್ ಸಾವನ್ನಪ್ಪಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು: ನಟ ದರ್ಶನ್ ಕಾರು ಅಪಘಾತದಲ್ಲಿ ಬಲಗೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗಾಗಿ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ಆಸ್ಪತ್ರೆಯಲ್ಲಿ ಕಾಯುತ್ತಿದ್ದಾರೆ.
ಇಂದು ಮುಂಜಾನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆಯಲ್ಲಿ ಡಿವೈಡರಿಗೆ ಡಿಕ್ಕಿ ಹೊಡೆದು ದರ್ಶನ್ ಕಾರ್ ಅಪಘಾತ ಸಂಭವಿಸಿದೆ. ಕಾರನ್ನು ಸ್ವತಃ ದರ್ಶನ್ ಅವರೇ ಚಲಾಯಿಸುತ್ತಿದ್ದರಂತೆ. ಮೈಸೂರಿನ ಹೊರವಲದಲ್ಲಿರುವ ಆಸ್ಪತ್ರೆಯಲ್ಲಿ ದರ್ಶನ್ ಅವರನ್ನು ದಾಖಲಿಸಲಾಗಿದೆ. ದರ್ಶನ್ ಅವರ ಕೈ ಮೂಳೆ ಮುರಿದಿದ್ದು, ಆಪರೇಷನ್ ಥಿಯೇಟರ್ ನಲ್ಲಿ ಚಿಕಿತ್ಸೆ ನಡೆಯುತ್ತಿದೆ.
ದರ್ಶನ್ ಅವರಿಗೆ ಅಪಘಾತ ಸಂಭವಿಸಿದ ಬಗ್ಗೆ ಮಾಹಿತಿ ತಿಳಿದ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ನಿರ್ಮಾಪಕ ಸಂದೀಪ್ ನಾಗರಾಜು ಪುತ್ರ ಮತ್ತು ದೇವರಾಜ್ ಅವರ ಕಿರಿಯ ಪುತ್ರ ಪ್ರಣಮ್ ಆಸ್ಪತ್ರೆಗೆ ಬಂದಿದ್ದಾರೆ. ಅಪಘಾತದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ತರಚಿದ ಗಾಯಗಳಾಗಿದ್ದು, ದೇವರಾಜ್ ಅವರ ಕೈ ಬೆರಳುಗಳಿಗೆ ಗಾಯಗಳಾಗಿದೆಯಂತೆ. ಇವರೆಲ್ಲರು ಭಾನುವಾರದಿಂದ ಜೊತೆಯಲ್ಲಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ದರ್ಶನ್ ಚಿಕಿತ್ಸೆ ಮುಗಿಯಲಿದೆ ಎನ್ನಲಾಗಿದೆ.
ಇತ್ತ ಅಪಘಾತದ ಸ್ಥಳದಲ್ಲಿ ದರ್ಶನ್ ಕಾರು ನಾಪತ್ತೆಯಾಗಿದೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ ಇಲ್ಲ. ಇದರಿಂದ ದರ್ಶನ್ ಅಪಘಾತದ ವಿಚಾರದಲ್ಲಿ ಪೊಲೀಸರು ಗೌಪ್ಯತೆ ಕಾಪಾಡುತ್ತಿದ್ದಾರಾ ಎಂಬ ಮಾತು ಕೇಳಿ ಬರುತ್ತಿದೆ.
ಭಾನುವಾರ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮೃಸೂರಿನ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಷ್ಟೇ ಅಲ್ಲದೇ ಪ್ರಾಣಿಗಳನ್ನು ದತ್ತು ಪಡೆದುಕೊಂಡು ಅರಮನೆಯ ಸುತ್ತ ಓಡಾಡಿ, ಮಾವಾಡಿಗಳ ಜೊತೆ ಊಟ ಮಾಡಿ, ಯದುವೀರ್ ಅವರೊಡನೆ ಮಾತನಾಡಿ ಇಂದು ಬೆಳಗಿನ ಜಾವ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಒಂದೇ ಕಾರಿನಲ್ಲಿ ದರ್ಶನ್, ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದರು. ಈ ವೇಳೆ ಮೈಸೂರಿನ ಹೊರವಲಯದ ಹಿನಕಲ್ ಬಳಿ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಪುಣೆ: 23 ವರ್ಷದ ಪುರುಷ ಸಲಿಂಗಕಾಮಿ ಸೆಕ್ಸ್ ಗೆ ಒತ್ತಾಯಿಸಿದಕ್ಕೆ ತನ್ನ ಪಾಟ್ನರ್ ಗೆ ಚಾಕುವಿಂದ ಇರಿದಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಈ ಘಟನೆ ಹಲ್ಲೆಗೊಳಗಾದವನ ಮನೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದ್ದು, ಸದ್ಯಕ್ಕೆ ಆರೋಪಿ ಸಲಿಂಗ ಕಾಮಿಯನ್ನು ಬಂಧಿಸಲಾಗಿದೆ. ಈಗಾಗಲೇ ಬಂಧಿಸಿರುವ ಆರೋಪಿಯ ವಿರುದ್ಧ ಐಪಿಸಿಯ ಸೆಕ್ಷನ್ 307 (ಕೊಲೆಯ ಯತ್ನ)ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪುಣೆ ಸಿಟಿ ಪೊಲೀಸರು ಹೇಳಿದ್ದಾರೆ.
ಇಬ್ಬರು ಪುರುಷರು ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದರು. ಮಂಗಳವಾರ ರಾತ್ರಿ ಆರೋಪಿ ತನ್ನ ಪಾಟ್ನರ್ ಮನೆಗೆ ಬಂದು ಇಬ್ಬರು ಲೈಂಗಿಕ ಸಂಬಂಧವನ್ನು ಹೊಂದಿದ್ದರು. ದೂರುದಾರ ಬುಧವಾರ ಬೆಳಗ್ಗೆ ಮತ್ತೆ ಸೆಕ್ಸ್ ಮಾಡುವಂತೆ ಕೇಳಿದ್ದಾನೆ. ಆಗ ಆರೋಪಿ ಇದಕ್ಕೆ ನಿರಾಕರಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಆಗ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಕೋಪಗೊಂಡು ಅರಿತವಾದ ಆಯುಧದಿಂದ ತನ್ನ ಪಾಟ್ನರ್ ಗೆ ಚುಚ್ಚಿದ್ದಾನೆ ಎಂದು ಖಡಾಕ್ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಸದ್ಯಕ್ಕೆ ಹಲ್ಲೆಗೊಳಗಾದವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಪೊಲೀಸರು ಇಬ್ಬರು ಪುರುಷರ ಹೆಸರುಗಳನ್ನು ಬಹಿರಂಗಪಡಿಸಲಿಲ್ಲ.
ದುಬೈ: ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಇಲ್ಲಿನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡೋ ಪಾಕ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಂದ್ಯದ 18ನೇ ಓವರ್ ಬೌಲ್ ಮಾಡುತ್ತಿದ್ದ ಪಾಂಡ್ಯ ತಮ್ಮ ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ. ಈ ವೇಳೆ ಮೈದಾನದಲ್ಲೇ ಮಲಗಿದ್ದ ಪಾಂಡ್ಯರನ್ನು ಟೀಂ ಇಂಡಿಯಾ ತಂಡದ ವೈದ್ಯರು ಬಂದು ಉಪಚರಿಸಿದರು. ಬಳಿಕ ವೈದ್ಯರ ಸಲಹೆಯಂತೆ ಸ್ಟ್ರೆಚರ್ ಮೂಲಕ ಪಾಂಡ್ಯರನ್ನು ಮೈದಾನದಿಂದ ಹೊರತರಲಾಯಿತು. ಹಾರ್ದಿಕ್ ಓವರಿನ ಕೊನೆಯ ಎಸೆತವನ್ನು ಅಂಬಟಿ ರಾಯುಡು ಎಸೆದು ಆ ಓವರ್ ಪೂರ್ಣಗೊಳಿಸಿದರು.
Injury update – @hardikpandya7 has an acute lower back injury. He is able to stand at the moment and the medical team is assessing him now. Manish Pandey is on the field as his substitute #TeamIndia#AsiaCuppic.twitter.com/lLpfEbxykj
ಈ ಕುರಿತು ಟ್ವೀಟ್ ಮಾಡಿರುವ ಬಿಸಿಸಿಐ, ಹಾರ್ದಿಕ್ ಸದ್ಯ ನಿಂತು ಕೊಳ್ಳಲು ಸಮರ್ಥರಾಗಿದ್ದು, ವೈದ್ಯಕೀಯ ತಂಡ ಅವರನ್ನು ತಪಾಸಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದೆ. ಪಾಂಡ್ಯ ಸ್ಥಾನದಲ್ಲಿ ಕನ್ನಡಿಗ ಮನೀಶ್ ಪಾಂಡೆ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ.
ಟೀಂ ಇಂಡಿಯಾ ಪರ ಕಳೆದ 12 ತಿಂಗಳಲ್ಲಿ ಪಾಂಡ್ಯ 44 ಪಂದ್ಯಗಳನ್ನು ಆಡಿದ್ದಾರೆ. ಕಳೆದ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ಪಾಂಡ್ಯ ಟೂರ್ನಿಯ ಎಲ್ಲ ಪಂದ್ಯಗಳಲ್ಲೂ ಸ್ಥಾನ ಪಡೆದಿದ್ದರು. ಉಳಿದಂತೆ ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಒಂದು ಪಂದ್ಯಕ್ಕೆ ಮಾತ್ರ ಪಾಂಡ್ಯರನ್ನು ಕೈ ಬಿಡಲಾಗಿತ್ತು. ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 46 ಪಂದ್ಯಗಳನ್ನು ಆಡಿದ್ದಾರೆ. ಇದನ್ನು ಓದಿ: ಬೌಂಡರಿ ಗೆರೆಯಲ್ಲಿ ಮನೀಶ್ ಪಾಂಡೆ ಅದ್ಭುತ ಕ್ಯಾಚ್ – ವೀಡಿಯೋ ನೋಡಿ
ತುಮಕೂರು: ಅಕ್ರಮ ಮರಳು ದಂಧೆಯ ವಿರುದ್ಧ ದೂರು ನೀಡಿದ್ದರಿಂದ ಸಿಟ್ಟಿಗೆದ್ದ ದಂಧೆಕೋರರು ದೂರುದಾರ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ.
ಹೊನ್ನವಳ್ಳಿ ಗ್ರಾಮದ ನಿವಾಸಿ ಮಹಾಲಿಂಗಪ್ಪ ಕುಟುಂಬದವರು ದಂಧೆಕೋರರ ಹಲ್ಲೆಗೊಳಗಾಗಿದ್ದಾರೆ. ದಂಧೆಕೋರರಾದ ಜಯಣ್ಣ, ಪುಟ್ಟಸ್ವಾಮಿ, ಬಸವರಾಜು, ವೀಣಾ ಸೇರಿದಂತೆ ಇತರ ಗುಂಪು ದೂರುದಾರರ ಮೇಲೆ ಮಾರಣಾಂತಿಕವಾಗಿ ಮೇಲೆ ಹಲ್ಲೆ ಮಾಡಿದ್ದಾರೆ.
ದಂಧೆಕೋರರು ಕಬ್ಬಿಣದ ರಾಡ್, ಕಲ್ಲು, ಮತ್ತು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ಮಹಾಲಿಂಗಪ್ಪ, ಶಂಕರಪ್ಪ, ಶಾಂತಮ್ಮ, ಮತ್ತು ಹೊನ್ನರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಶಂಕರಪ್ಪರ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಸದ್ಯಕ್ಕೆ ಗಾಯಾಳುಗಳನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು: ಚುನಾವಣೆಗೆ ಮುನ್ನ ಹೊತ್ತಿ ಉರಿದಿದ್ದ ದಕ್ಷಿಣ ಕನ್ನಡದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದೆ. ವಿಟ್ಲದ ಕನ್ಯಾನದಲ್ಲಿ ತಡರಾತ್ರಿ ಯುವಕನನ್ನ ಅಟ್ಟಾಡಿಸಿಕೊಂಡು ರಾಡ್ ನಿಂದ ಬಡಿದು ಕೊಲೆ ಮಾಡುವ ಯತ್ನ ನಡೆದಿದೆ.
ಮಿತ್ತನಡ್ಕದ 23 ವರ್ಷದ ನವಾಫ್ ಎಂಬ ಯುವಕನನ್ನ ಅಟ್ಟಾಡಿಸಿ ಕೊಲೆ ಮಾಡುವ ಯತ್ನ ನಡೆದಿದೆ. ವಿಟ್ಲದ ಕನ್ಯಾನದ ಕೆಳಗಿನ ಪೇಟೆಯಲ್ಲಿ ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಕನ್ಯಾನದ ಕುಖ್ಯಾತ ಕ್ರಿಮಿನಲ್ ಹಾಗೂ ಕೇರಳ ಮೂಲದ ಇಬ್ಬರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.
ನವಾಫ್ ತಡರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಕನ್ಯಾನದ ಇಕ್ಕು ಯಾನೆ ಇಕ್ಬಾಲ್, ಹರೀಶ್ ಹಾಗೂ ಕೇರಳದ ಇಬ್ಬರು ಸೇರಿಕೊಂಡು ಆಲ್ಟೋ 800 ಕಾರಿನಲ್ಲಿ ಮಾರಕಾಸ್ತ್ರಗಳ ಸಮೇತ ಬಂದಿದ್ದಾರೆ. ನಂತರ ಏಕಾಏಕಿ ಮಾರಕಾಸ್ತ್ರಗಳಿಂದ ನವಾಫ್ ಮೇಲೆ ಹಲ್ಲೆ ನಡೆಸಿದ್ದಾರೆ. ಅದೃಷ್ಯವಶಾತ್ ನವಾಫ್ ಪಾರಾಗಿದ್ದು, ಸ್ಥಳೀಯರು ಅವನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಸದ್ಯಕ್ಕೆ ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮಾಡುತ್ತಿದ್ದಾರೆ. ಇನ್ನು ಇವರೆಲ್ಲರೂ ಒಂದೇ ಸಮುದಾಯದವರಾಗಿದ್ದು, ಹಳೆಯ ವೈಷಮ್ಯದಿಂದ ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರು ಮತ್ತು ಹಲ್ಲೆಗೊಳಗಾದವನು ಕೂಡ ಕ್ರಮಿನಲ್ ಗಳಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು: ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟೆನೆ ಬೆಂಗಳೂರು ಗ್ರಾಮಾಂತರ ಆವಲಹಳ್ಳಿ ಬಳಿ ನಡೆದಿದೆ.
ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದಿಂದ ವಿಶೇಷ ಅಭಿಯೋಜಕರಾಗಿ ನೇಮಕಗೊಂಡಿದ್ದ ವಕೀಲ ಭವಾನಿ ಸಿಂಗ್ ಪುತ್ರ ಅಮರ್ ನಾಥ್ ಸಿಂಗ್ (32) ಹಾಗೂ ಅವರ ಸ್ನೇಹಿತ ಜಸ್ವಂತ್ ಸಿಂಗ್ (30) ಮೃತ ದುರ್ದೈವಿಗಳು. ಬೆಂಗಳೂರು ನಗರದ ಕಡೆಯಿಂದ ಹೊಸಕೋಟೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ನಂತರ ಎದುರಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಅಮರ್ ನಾಥ್ ಸಿಂಗ್ ಮತ್ತು ಸ್ನೇಹಿತ ಜಸ್ವಂತ್ ಸಿಂಗ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಸ್ನೇಹಿತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಆವಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
ಬೆಂಗಳೂರು: ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ ಮೂವರು ಮಕ್ಕಳ ಮೇಲೆ ಡೆಡ್ಲಿ ಡಾಗ್ ಅಟ್ಯಾಕ್ ಮಾಡಿವೆ.
ನಗರದಲ್ಲಿ ಬೀದಿ ನಾಯಿಗಳು ರಾಕ್ಷಸನ ಹಾಗೇ ವರ್ತಿಸುತ್ತಿದ್ದು, ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆಟವಾಡುತ್ತಾ ಮನೆಗೆ ತೆರಳುತ್ತಿದ್ದ 7 ವರ್ಷದ ಬಾಲಕಿ, 9 ವರ್ಷದ ಬಾಲಕಿ ಹಾಗೂ 9 ವರ್ಷದ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ.
ಈ ಘಟನೆಯ ಪರಿಣಾಮ 9 ವರ್ಷದ ಬಾಲಕ ತನ್ಮಯ್ ಗೌಡನಿಗೆ ಗಂಭೀರ ಗಾಯಗಳಾಗಿದ್ದು, ಮಕ್ಕಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಪ್ರವೀಣ್ ಎಂಬ ಬಾಲಕ ಸೆಪ್ಟೆಂಬರ್ 2ರಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದನು. ಪ್ರವೀಣ್ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದ್ದು, ಪ್ರವೀಣ್ ನ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕನ ಸ್ಥಿತಿಯು ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಸೆಪ್ಟೆಂಬರ್ 2ರಂದು ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದನು.