Tag: injury

  • ಅಟ್ಟಾಡಿಸಿ ಯುವಕನ ಬರ್ಬರ ಕೊಲೆ – ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್

    ಅಟ್ಟಾಡಿಸಿ ಯುವಕನ ಬರ್ಬರ ಕೊಲೆ – ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರ ಗುಂಡು ಸದ್ದು ಮಾಡಿದ್ದು, ಕೊಲೆ ಆರೋಪಿಗಳ ಮೇಲೆ ನಗರದ ಕಾಮಾಕ್ಷಿಪಾಳ್ಯ ಪೊಲೀಸರು ಫೈರಿಂಗ್ ಮಾಡಿದ್ದಾರೆ.

    ಪ್ರವೀಣಾ ಅಲಿಯಾಸ್ ಇಟಾಚಿ, ಅಭಿ ಅಲಿಯಾಸ್ ಅಂದ್ರಹಳ್ಳಿ ಅಭಿ ಗುಂಡೇಟು ತಿಂದ ಆರೋಪಿಗಳು. ಇವರು ಶನಿವಾರ ರಾತ್ರಿ ಮಹೇಶ್ ಕುಮಾರ್ ಎಂಬವನನ್ನು ಸುಂಕದಕಟ್ಟೆಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಅಟ್ಟಾಡಿಸಿಕೊಂಡು ಬರ್ಬರವಾಗಿ ಕೊಲೆ ಮಾಡಿದ್ದರು. ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸೆರೆಹಿಡಿಯಲು ಪೊಲೀಸರು ಹೋಗಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲಿಯೇ ಅಟ್ಟಾಡಿಸಿ ಯುವಕನ ಬರ್ಬರ ಕೊಲೆ

    ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆಗ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಹೆಡ್ ಕಾನ್‍ಸ್ಟೇಬಲ್ ವಸಂತ್ ಕುಮಾರ್ ಮತ್ತು ಸತೀಶ್ ಅವರಿಗೆ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೊಲೆಯಾಗಿರುವ ಮಹೇಶ್ ಈ ಹಿಂದೆ ಡಬಲ್ ಮರ್ಡರ್ ಪ್ರಕರಣದಲ್ಲಿ ಆರೋಪಿಯಾಗಿದ್ದನು. 2014ರಲ್ಲಿ ತಾವರೆಕೆಯಲ್ಲಿ ಕೊಲೆಯಾಗಿದ್ದ ಸೂರಿ ಕೊಲೆಯ ಪ್ರತೀಕಾರಕ್ಕೆ ಮಹೇಶನನ್ನ ಕೊಲೆಗೈದಿದ್ದಾರೆ. ಆರೋಪಿಗಳಾದ ಅಭಿ ಹಾಗೂ ಪ್ರವೀಣ ಇಬ್ಬರೂ ಸ್ಲಂ ಭರತನ ಸಹಚರರಾಗಿದ್ದರು.

  • ಕ್ರೀಡಾಕೂಟದ ವೇಳೆ ಗ್ಯಾಲರಿ ಕುಸಿತ – ಇಬ್ಬರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಕ್ರೀಡಾಕೂಟದ ವೇಳೆ ಗ್ಯಾಲರಿ ಕುಸಿತ – ಇಬ್ಬರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಬಳ್ಳಾರಿ: ಕ್ರೀಡಾಕೂಟದ ವೇಳೆ ಗ್ಯಾಲರಿ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಸಿರಗುಪ್ಪದಲ್ಲಿ ಪಟ್ಟಣದಲ್ಲಿ ನಡೆದಿದೆ.

    ಸಿರಗುಪ್ಪ ಪಟ್ಟಣದಲ್ಲಿ ಇರುವ ತಾಲೂಕು ಕ್ರೀಡಾಂಗಣದಲ್ಲಿ ಹೈಸ್ಕೂಲ್ ಶಾಲೆಗಳ ಕ್ರೀಡಾಕೂಟ ನಡೆಯುವ ವೇಳೆ ಈ ಘಟನೆ ನಡೆದಿದ್ದು, ಕ್ರೀಡಾಕೂಟ ವೀಕ್ಷಣೆ ಮಾಡುತ್ತಿದ್ದ ಇಬ್ಬರು ಸಾವನ್ನಪ್ಪಿ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಹಲವರು ಸಾರ್ವಜನಿಕರಿಗು ಗಂಭೀರ ಗಾಯವಾಗಿದೆ.

    ಕ್ರೀಡಾಕೂಟ ನೋಡಲು ಬಂದು ಗ್ಯಾಲರಿ ಮೇಲೆ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಗ್ಯಾಲರಿಯಲ್ಲಿ ನೂರಾರು ವಿದ್ಯಾರ್ಥಿಗಳು ಕುಳಿತ್ತಿದ್ದು, ಇದರಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಿರಗುಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ರಕ್ತ ಉಗುಳಿದ ಧೋನಿ

    ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ರಕ್ತ ಉಗುಳಿದ ಧೋನಿ

    ಲಂಡನ್: ಟೀಂ ಇಂಡಿಯಾ ಅನುಭವಿ ಆಟಗಾರ ಎಂಎಸ್ ಧೋನಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ರಕ್ತ ಉಗುಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಂದ್ಯದಲ್ಲಿ ಧೋನಿ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಈ ವೇಳೆ ಬೆರಳಿನಲ್ಲಿದ್ದಸ ರಕ್ತವನ್ನು ಚೀಪಿ ಧೋನಿ ಉಗುಳಿದ್ದಾರೆ. ಈ ಫೋಟೋಗಳನ್ನು ಧೋನಿ ಅಭಿಮಾನಿಗಳು ಟ್ವೀಟ್ ಮಾಡಿ ಧೋನಿ ಬಹುಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

    ಪಂದ್ಯದ ವೇಳೆ ಧೋನಿ ಗಾಯಗೊಂಡಿರುವುದು ಹೆಚ್ಚಿನ ಜನರ ಗಮನಕ್ಕೆ ಬಂದಿರಲಿಲ್ಲ. ಆದರೆ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದಕ್ಕೆ ಧೋನಿ ಟ್ರೋಲ್ ಆಗಿದ್ದರು. 32 ಎಸೆತಗಳಲ್ಲಿ ಅಜೇಯ 41 ರನ್ ಗಳನ್ನು ಧೋನಿ ಗಳಿಸಿದ್ದರು. ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಅಂತರದಲ್ಲಿ ಸೋಲುಂಡಿತ್ತು.

    https://twitter.com/Shashank654/status/1145962487583391744

    ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ಮಾತ್ರವಲ್ಲದೇ ಕೀಪಿಂಗ್ ಬಗ್ಗೆಯೂ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದುವರೆಗೂ ವಿಶ್ವಕಪ್ ಟೂರ್ನಿಯಲ್ಲಿ ಧೋನಿ 2 ಕ್ಯಾಚ್ ಹಾಗೂ 2 ಸ್ಟಂಪಿಂಗ್ ಅವಕಾಶಗಳನ್ನು ಕೈಚೆಲ್ಲಿದ್ದಾರೆ. ಅಲ್ಲದೇ ಕಳೆದ ಪಂದ್ಯದಲ್ಲಿ ಡಿಆರ್‍ಎಸ್ ಮನವಿ ಮಾಡಲು ತೆಗೆದುಕೊಳ್ಳಲು ಕೂಡ ತಪ್ಪು ಎಸಗಿದ್ದರು. ಪಂದ್ಯದ 11ನೇ ಓವರಿನಲ್ಲಿ ಜೇಸನ್ ರಾಯ್ ಕ್ಯಾಚ್ ನೀಡಿದ್ದರು. ಆದರೆ ಅಂಪೈರ್ ಇದನ್ನು ನಿರಾಕರಿಸಿದ್ದರು. ಆದರೆ ಕೊಹ್ಲಿ ಡಿಆರ್‍ಎಸ್ ಪಡೆಯಲು ಮುಂದಾಗಲಿಲ್ಲ. ವಿಕೆಟ್ ಹಿಂದೆ ನಿಂತಿದ್ದ ಧೋನಿ ಕೂಡ ಇದನ್ನು ಗ್ರಹಿಸಲು ವಿಫಲರಾಗಿದ್ದರು. ಧೋನಿ ಅನೇಕ ಬಾರಿ ಡಿಆರ್‍ಎಸ್ ಪಡೆದು ಯಶಸ್ವಿ ಆಗಿದ್ದರು ಕೂಡ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಅವರ ನಿರ್ಧಾರ ತಂಡಕ್ಕೆ ಮುಳುವಾಗಿತ್ತು. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

    https://twitter.com/DazzlingSree27_/status/1145956219640659968

  • ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

    ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

    ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ ಪ್ರಯಾಣಿಕರಿದ್ದ ಬಸ್ ಕಿಶ್ತಾವರ್ ನಿಂದ ಕೇಶವನ್ ಕಡೆಗೆ ಸಂಚರಿಸುತಿತ್ತು. ಈ ವೇಳೆ ಶ್ರೀಗ್ವಾರಿ ಬಳಿ ಬಸ್ ಜಾರಿ ಆಳವಾದ ಕಂದಕಕ್ಕೆ ಉರುಳಿದೆ. ಪರಿಣಾಮ 33 ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ.

    ಬಸ್‍ನಲ್ಲಿ ಓವರ್ ಲೋಡ್ ಮಾಡಲಾಗಿತ್ತು. ಅಲ್ಲದೆ ಓವರ್ ಸ್ಪೀಡ್ ಹಾಗೂ ಸರಿಯಾದ ರಸ್ತೆ ಇಲ್ಲದ ಕಾರಣ ಈ ಅಪಘಾತವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ.

    ಪೊಲೀಸರು ಪರಿಹಾರ ಹಾಗೂ ರಕ್ಷಣಾ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು- ಕಾಶ್ಮೀರದ ಹಿರಿಯ ರಾಜಕಾರಣಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

  • ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ

    ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

    ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

    ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಗಾಯಗೊಂಡು ಫಾರ್ಮಸಿಗೆ ಬಂದ ಶ್ವಾನ -ವಿಡಿಯೋ ವೈರಲ್

    ಗಾಯಗೊಂಡು ಫಾರ್ಮಸಿಗೆ ಬಂದ ಶ್ವಾನ -ವಿಡಿಯೋ ವೈರಲ್

    ಅಂಕಾರಾ: ಸಾಮಾನ್ಯವಾಗಿ ಮನುಷ್ಯರು ಗಾಯಗೊಂಡರೆ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಇಲ್ಲೊಂದು ಶ್ವಾನ ಗಾಯಗೊಂಡ ತಕ್ಷಣ ಫಾರ್ಮಸಿಗೆ ಓಡಿ ಬಂದಿರುವ ಘಟನೆ ಟರ್ಕಿಯಲ್ಲಿ ನಡೆದಿದೆ.

    ಕಳೆದ ವಾರ ಟರ್ಕಿಯ ಇಸ್ತಾಂಬುಲ್‍ನಲ್ಲಿ ಈ ಘಟನೆ ನಡೆದಿದ್ದು, ನಾಯಿ ಫಾರ್ಮಸಿಗೆ ಓಡಿ ಬಂದು ಚಿಕಿತ್ಸೆ ಪಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಗಾಯಗೊಂಡು ದಾರಿತಪ್ಪಿ ಶ್ವಾನ, ಬಾನು ಸೆಂಗಿಜ್ ನಡೆಸುತ್ತಿದ್ದ ಫಾರ್ಮಸಿ(ಔಷಧಾಲಯಕ್ಕೆ) ಬಂದಿದೆ. ಗಾಯಗೊಂಡು ಫಾರ್ಮಸಿಗೆ ಬಂದು ಮಲಗಲು ಜಾಗ ಹುಡುಕುತ್ತಿರುವ ನಾಯಿ ಪ್ರಾಣಿ ಪ್ರೇಮಿಯಾಗಿರುವ ಎಂ.ಎಸ್. ಸೆಂಗಿಜ್ ಅವರ ಕಣ್ಣಿಗೆ ಬಿದ್ದಿದೆ. ಕೂಡಲೇ ಅವರು ನಾಯಿಯನ್ನು ನೋಡಿ ಬೇಬಿ, ಸಮಸ್ಯೆ ಇದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

    ನಾಯಿಯ ಒಂದು ಕಾಲಿಗೆ ಗಾಯವಾಗಿ ರಕ್ತ ಬರುತ್ತಿತ್ತು. ಇದನ್ನು ನೋಡಿದ ಸೆಂಗಿಜ್ ಅವರು ಗಾಯಗೊಂಡಿದ್ದ ನಾಯಿಗೆ ಚಿಕಿತ್ಸೆ ನೀಡಿದ್ದಾರೆ. ಅವರು ಚಿಕಿತ್ಸೆ ನೀಡುವಾಗ ನಾಯಿಯು ಸುಮ್ಮನೆ ನೋಡುತ್ತಾ ಚಿಕಿತ್ಸೆ ಪಡೆಯುತ್ತಿತ್ತು ಇದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಚಿಕಿತ್ಸೆ ಪಡೆದ ತಕ್ಷಣ ನಾಯಿ ಅಲ್ಲಿಯೇ ಮಲಗಿಕೊಂಡಿತು. ನಾನು ಬೇರೆ ಏನಾದರೂ ಸಮಸ್ಯೆ ಇದೆಯಾ ಎಂದು ಪರೀಕ್ಷೆ ಮಾಡಿದೆ. ಆದರೆ ಬೇರೆ ಯಾವ ಗಾಯವೂ ಆಗಿರಲಿಲ್ಲ. ಸ್ವಲ್ಪ ಸಮಯದ ನಂತರ ಅದು ನನಗೆ ಧನ್ಯವಾದ ಹೇಳಿತು ಎಂದು ತಿಳಿಸಿದ್ದಾರೆ.

    ತನಗೆ ಅಗತ್ಯವಾದ ಚಿಕಿತ್ಸೆ ಸಿಕ್ಕ ನಂತರ ನಾಯಿ ಅಲ್ಲಿಯೇ ವಿಶ್ರಾಂತಿ ಪಡೆದಿದೆ. ಸ್ವಲ್ಪ ಸಮಯದವರೆಗೂ ಫಾರ್ಮಸಿಯಲ್ಲಿ ಚೇತರಿಸಿಕೊಂಡು ಬಳಿಕ ಹೋಗಿದೆ. ಈ ಎಲ್ಲವೂ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿದೆ. ಇದೀಗ ಆಡಿಯೋ ವೈರಲ್ ಆಗಿದ್ದು, ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ಸ್ ಮಾಡುತ್ತಿದ್ದಾರೆ.

  • ಜಮೀನಿಗಾಗಿ ಬೆಂಗ್ಳೂರಿಂದ ಪುಂಡರನ್ನ ಕರೆಸಿ ಮಹಿಳೆ ಮೇಲೆ ಹಲ್ಲೆ

    ಜಮೀನಿಗಾಗಿ ಬೆಂಗ್ಳೂರಿಂದ ಪುಂಡರನ್ನ ಕರೆಸಿ ಮಹಿಳೆ ಮೇಲೆ ಹಲ್ಲೆ

    ತುಮಕೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯೋರ್ವಳ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಆದಿನಾಯಕನಹಳ್ಳಿಯಲ್ಲಿ ಜರುಗಿದೆ.

    ಅರುಣ್ ಕುಮಾರ್ ಹಾಗೂ ನಾಗಬಾಯಮ್ಮ ನಡುವೆ ಜಮೀನು ವಿವಾದ ಇತ್ತು. ಹಾಗಾಗಿ ಅರುಣ್ ಕುಮಾರ್ ಬೆಂಗಳೂರಿನಿಂದ ಪುಂಡ ಯುವಕರನ್ನು ಕರೆದುಕೊಂಡು ಬಂದು ವೃದ್ಧೆ ನಾಗಬಾಯಮ್ಮರ ವಿರುದ್ಧ ಛೂ ಬಿಟ್ಟಿದ್ದಾನೆ.

    ಅದರಂತೆಯೇ ಮಚ್ಚು ಹಿಡಿದು ಯುವಕನೊರ್ವ ಕೊಲೆ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ ಅಶ್ಲೀಲ ಪದಗಳಿಂದ ನಿಂದಿಸಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ನಾಗಬಾಯಮ್ಮರ ಮಗಳು ಸುಜಾತಾಗೆ ಗಾಯವಾಗಿದೆ. ಗಾಯಾಳು ಸುಜಾತಾ ಅವರನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಚ್ಚು ಹಿಡಿದು ಬೆದರಿಸಿದ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಈ ಕುರಿತು ಹೊನ್ನವಳ್ಳಿ ಪೊಲೀಸರಿಗೆ ವಿಡಿಯೋ ಸಮೇತ ದೂರು ಕೊಟ್ಟಿದ್ದೇವೆ. ಆದರೆ ಅವರು ಕೊಲೆಯತ್ನ ಕೇಸ್ ಹಾಕದೇ ಕಾಟಾಚಾರದ ಎಫ್‍ಐಆರ್ ದಾಖಲು ಮಾಡಿದ್ದಾರೆ ಎಂದು ವೃದ್ಧೆ ಆರೋಪಿಸಿದ್ದಾರೆ.

  • ಹುಬ್ಬಳ್ಳಿಯಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಮಾಜಿ ಮೇಯರ್‌ನಿಂದ ಅಮಾಯಕರ ಮೇಲೆ ಹಲ್ಲೆ

    ಹುಬ್ಬಳ್ಳಿಯಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಮಾಜಿ ಮೇಯರ್‌ನಿಂದ ಅಮಾಯಕರ ಮೇಲೆ ಹಲ್ಲೆ

    ಹುಬ್ಬಳ್ಳಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಗಳ ನಡುವೆ ಘರ್ಷಣೆ ನಡೆದಿದ್ದು, ಮಾಜಿ ಮೇಯರ್ ಸೇರಿದಂತೆ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿರುವ ಘಟನೆ ಹುಬ್ಬಳ್ಳಿಯ ತೊರವಿಹಕ್ಕಲ್‍ದಲ್ಲಿ ನಡೆದಿದೆ.

    ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕಮರಿಪೇಟ್‍ನಲ್ಲಿ ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ ಗುಂಪು ಹಾಗೂ ಅವರ ಸಮುದಾಯದ ಇನ್ನೊಂದು ಗುಂಪಿನ ಮಧ್ಯೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ನಾಲ್ಕೈದು ಬೈಕ್‍ಗಳು ಜಖಂಗೊಂಡಿದ್ದು, ಐದಾರು ಜನರಿಗೆ ಪೆಟ್ಟು ಬಿದ್ದಿದೆ.

    ಕಮರಿಪೇಟ್‍ನಲ್ಲಿನ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ 10-15 ವರ್ಷಗಳಿಂದ ಈ ಗುಂಪುಗಳ ಮಧ್ಯೆ ವಿವಾದವಿತ್ತು. ಈ ವಿಷಯ ಈಗಾಗಲೇ ನ್ಯಾಯಾಲಯ ಮೆಟ್ಟಿಲೇರಿದೆ. ಆಗಾಗ ಎರಡು ಗುಂಪುಗಳ ನಡುವೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿತ್ತು. ಕಳೆದ ಎರಡು ದಿನಗಳ ಹಿಂದೆ ಇವರ ನಡುವೆ ಗಲಾಟೆ ನಡೆದಿತ್ತು.

    ಈ ವಿಚಾರವನ್ನು ಮರು ಪ್ರಶ್ನಿಸಲು ಶುಕ್ರವಾರ ಒಂದು ಗುಂಪು ತೊರವಿಹಕ್ಕಲದಲ್ಲಿ ರಾತ್ರಿ ಆಗಮಿಸಿತ್ತು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಮಾರಾಮಾರಿ, ಕಲ್ಲು ತೂರಾಟ ನಡೆದಿದೆ. ಪೊಲೀಸರ ಸಮ್ಮುಖದಲ್ಲಿ ಗಲಾಟೆ ನಡೆದರೂ ಪೊಲೀಸರು ಮಾತ್ರ ಮೂಖ ಪ್ರೇಕ್ಷಕರಾಗಿದ್ದರು.

    ಈ ಘಟನೆಯಲ್ಲಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಈ ಕುರಿತು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶಿಕ್ಷಕಿ ಹಿಂದೆ ಬಿದ್ದ 60ರ ಅಂಕಲ್ – ಒಪ್ಪದಿದ್ದಕ್ಕೆ ಕೊಲೆಗೈದು, ತಾನೂ ಶೂಟ್ ಮಾಡ್ಕೊಂಡ

    ಶಿಕ್ಷಕಿ ಹಿಂದೆ ಬಿದ್ದ 60ರ ಅಂಕಲ್ – ಒಪ್ಪದಿದ್ದಕ್ಕೆ ಕೊಲೆಗೈದು, ತಾನೂ ಶೂಟ್ ಮಾಡ್ಕೊಂಡ

    ಮಡಿಕೇರಿ: ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ.

    ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಬಾಳೆಲೆ ಪೊಲೀಸ್ ಉಪಠಾಣೆ ಎದುರು ಕಾಯುತ್ತಿದ್ದರು. ಈ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು ಹಾರಿಸಿದ್ದಾನೆ. ಪರಿಣಾಮ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಳಿಕ ಆರೋಪಿ ಕೂಡ ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇತ್ತ ಗುಂಡಿನ ದಾಳಿಯ ವೇಳೆ ಶಿಕ್ಷಕಿಯ ರಕ್ಷಣೆಗೆ ಮುಂದಾದ ವಿದ್ಯಾರ್ಥಿ ಮತ್ತು ತೋಟದ ಕಾರ್ಮಿಕನ ಕೈಗೆ ಗುಂಡು ತಗುಲಿದ್ದು, ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ವಿದ್ಯಾರ್ಥಿ ದಿನೇಶ್ ಹಾಗೂ ತೋಟದ ಕಾರ್ಮಿಕ ರಾಜುನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗುಂಡಿಕ್ಕಿದಾತ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದು ಬಂದಿದೆ. ಆಶಾ ಅವರು ಗೋಣಿಕೊಪ್ಪಲು ಲಯನ್ಸ್ ಹೈಸ್ಕೂಲ್ ಶಾಲೆಯ ಶಿಕ್ಷಕಿಯಾಗಿದ್ದರು. ಶಿಕ್ಷಕಿ ಮೇಲೆ ಜಗದೀಶ್ ಕಣ್ಣು ಹಾಕಿದ್ದನು. ಪತಿ ಇಲ್ಲದ ಆಶಾಗೆ ಪತ್ನಿ ಇಲ್ಲದ ಜಗದೀಶ್ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಎರಡು ವರ್ಷಗಳಿಂದ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು.

    ಅಷ್ಟೇ ಅಲ್ಲದೆ ಎರಡು ವರ್ಷದ ಹಿಂದಷ್ಟೇ ಅತ್ಯಾಚಾರ ಯತ್ನದ ಬಗ್ಗೆ ಜಗದೀಶ್ ವಿರುದ್ಧ ಶಿಕ್ಷಕಿ ಆಶಾ ದೂರು ನೀಡಿದ್ದರು. ಜೈಲಿನಲ್ಲಿದ್ದ ಜಗದೀಶ್ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದನು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಮತ್ತೆ ಶಿಕ್ಷಕಿಯ ಹಿಂದೆ ಬಿದ್ದಿದ್ದನು. ಇದನ್ನು ತಿರಸ್ಕರಿಸಿದ್ದಕ್ಕೆ ಇಂದು ಮುಂಜಾನೆ ಟೀಚರ್ ಮೇಲೆ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿದ್ದಾನೆ.

    ಸದ್ಯಕ್ಕೆ ಈ ಕುರಿತು ಪೋನ್ನಂಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸ್, ಲಾರಿ ಮುಖಾಮುಖಿ ಡಿಕ್ಕಿ – 10ಕ್ಕೂ ಅಧಿಕ ಮಂದಿಗೆ ಗಾಯ

    ಬಸ್, ಲಾರಿ ಮುಖಾಮುಖಿ ಡಿಕ್ಕಿ – 10ಕ್ಕೂ ಅಧಿಕ ಮಂದಿಗೆ ಗಾಯ

    -ಬಸ್ಸಿನಲ್ಲೇ ಸಿಲುಕಿಕೊಂಡ ಚಾಲಕ

    ಕಾರವಾರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದಿದೆ.

    ಈ ಅಪಘಾತ ಆಂದ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸುಗಮಾ ಟ್ರಾವೆಲ್ಸ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಹೋಗುತಿತ್ತು, ಲಾರಿ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಅಂಕೋಲಾ ತಾಲೂಕಿನ ಆಂದ್ಲೆ ಬಳಿ ವೇಗವಾಗಿ ಬಂದು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ.

    ಅಪಘಾತದ ರಭಸಕ್ಕೆ ಚಾಲಕ ಬಸ್‍ನಲ್ಲೇ ಸಿಲುಕಿಕೊಂಡಿದ್ದು, ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸದ್ಯ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.