Tag: injury

  • ನಾಮಕರಣಕ್ಕೆ ಹೋಗ್ತಿದ್ದ ಟಾಟಾ ಏಸ್ ಪಲ್ಟಿ – 15ಕ್ಕೂ ಅಧಿಕ ಮಂದಿ ಗಾಯ

    ನಾಮಕರಣಕ್ಕೆ ಹೋಗ್ತಿದ್ದ ಟಾಟಾ ಏಸ್ ಪಲ್ಟಿ – 15ಕ್ಕೂ ಅಧಿಕ ಮಂದಿ ಗಾಯ

    ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಉರುಳಿಬಿದ್ದ ಪರಿಣಾಮ ವಾಹನದಲ್ಲಿದ್ದ 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಸಂಬಂಧಿಕರ ಮಗುವಿನ ನಾಮಕರಣಕ್ಕೆಂದು 20 ಜನರು ಟಾಟಾ ಏಸ್ ವಾಹನದಲ್ಲಿ ರಾಮನಗರದ ಕೊತ್ತಿಪುರದಿಂದ ಹಾರೋಹಳ್ಳಿ ಸಮೀಪದ ಹೆಬ್ಬೂರುದೊಡ್ಡಿಗೆ ಹೋಗುತ್ತಿದ್ದರು. ಆದರೆ ಮಾಯಗಾನಹಳ್ಳಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ.

    ಈ ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದರೆ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆ ಸಂಬಂಧ ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಕಿ ನರ್ತನಕ್ಕೆ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಕಣ್ಣೀರು

    ಬೆಂಕಿ ನರ್ತನಕ್ಕೆ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಕಣ್ಣೀರು

    ಗದಗ: ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಆದರೆ ಮದುವೆ ಸಂಭ್ರಮದ ಮನೆಯಲ್ಲಿ ಬೆಂಕಿ ನರ್ತನಕ್ಕೆ ಇಡೀ ಕುಟುಂಬ ಕಂಗಾಲಾಗಿ ಕಣ್ಣೀರು ಹಾಕುವ ಪರಿಸ್ಥಿತಿ ಗದಗ ತಾಲೂಕಿನ ಕಳಸಾಪೂರ ಗ್ರಾಮದಲ್ಲಿ ನಿರ್ಮಾಣವಾಗಿದೆ.

    ಗದಗ ತಾಲೂಕಿನ ಕಳಸಾಪೂರ ಗ್ರಾಮದಲ್ಲಿ ಮಾಬುಸಾಬ್ ಪೆಂಡಾರಿ ಎಂಬವರ ಸೊಸೆ ಅಶಮತ್‍ಳನ್ನು ಮಗುವಾಗಿದ್ದಾಗಲೇ ಮನೆಗೆ ತಂದು ಮುದ್ದಾಗಿ ಸಾಕಿದ್ದರು. ಬೆಳೆದು ನಿಂತ ಸೊಸೆಗೆ ಮದುವೆ ಮಾಡಲು ಮಾಬುಸಾಬ್, ಇದೆ ಮಾರ್ಚ್ 10 ರಂದು ಮೂಹೂರ್ತ ಸಹ ನಿಶ್ಚಯ ಮಾಡಿದ್ದರು. ಆದರೆ ಬುಧವಾರ ತಡರಾತ್ರಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮದುವೆಗೆ ಸಾಲಮಾಡಿ ತಂದ ಹಣ ಹಾಗೂ ಒಡವೆಗಳು, ಬಟ್ಟೆಗಳು ಸುಟ್ಟು ಕರಕಲಾಗಿವೆ. ಅಗ್ನಿ ದುರಂತಕ್ಕೆ ಇಡೀ ಕುಟುಂಬ ಕಂಗಾಲಾಗಿ ಕಣ್ಣೀರಿಡುವಂತೆ ಮಾಡಿದೆ ಎಂದು ಮನೆಯ ಮಾಲೀಕ ಮೆಹಬೂಬ್‍ಸಾಬ್ ಹೇಳಿದ್ದಾರೆ.

    ಕಳಸಾಪುರದ ಈ ಬಡತನದ ಕುಟುಂಬ ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿತ್ತು. ಸೊಸೆಯ ಮದುವೆ ಮಾಡಲು 40 ಸಾವಿರ ಮೊತ್ತದ ಬಟ್ಟೆ, ಬಂಗಾರ ಖರೀದಿ ಹಾಗೂ ಖರ್ಚು ವೆಚ್ಚಕ್ಕೆ ಇಟ್ಟಿದ್ದ 35 ಸಾವಿರ ನಗದು ಸುಟ್ಟ ಕರಕಲಾಗಿವೆ. ಇಷ್ಟೇ ಅಲ್ಲ ಮನೆಯಲ್ಲಿದ್ದ ಟಿವಿ, ಸೌಂಡ್ ಸಿಸ್ಟಮ್ ಸೇರಿ ಎಲ್ಲ ಗೃಹೋಪಯೋಗಿ ವಸ್ತುಗಳು ಬೆಂಕಿಯಲ್ಲಿ ಭಸ್ಮವಾಗಿವೆ. ಬೆಂಕಿ ನಂದಿಸಲು ಗ್ರಾಮಸ್ಥರು ಸಾಕಷ್ಟು ಪ್ರಯತ್ನ ಮಾಡಿದರೂ ಯಾವ ಪ್ರಯೋಜವಾಗಲಿಲ್ಲ. ಆಗ ಮನೆಯಲ್ಲಿ ಮಲಗಿದ್ದ ಮಹಿಳೆ ಫಾತೀಮಾ ಕಾಲಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಮನೆಯಿಂದ ಎಳೆದು ಹೊರತರಲಾಗಿದೆ ಎಂದು ಸ್ಥಳೀಯ ನಜೀರ್‍ಸಾಬ್ ತಿಳಿಸಿದ್ದಾರೆ.

    ಸದ್ಯಕ್ಕೆ ಫಾತೀಮಾ ಕಾಲಿಗೆ ಬೆಂಕಿ ತಗುಲಿ ಗಂಭೀರ ಗಾಯವಾಗಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅವಘಡದಲ್ಲಿ ಎಲ್ಲವೂ ಕಳೆದುಕೊಂಡು ಕುಟುಂಬದ ಸದಸ್ಯರು ಕಂಗಾಲಾಗಿದ್ದಾರೆ. ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

    ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ – 23 ಮಂದಿ ಗಂಭೀರ

    -ದಾಳಿ ಮಾಡಿದ ಉಗ್ರ ಪರಾರಿ

    ಶ್ರೀನಗರ: ಪುಲ್ವಾಮ ದಾಳಿ ಬಳಿಕ ಭಯೋತ್ಪಾದಕರು ಮತ್ತೆ ದಾಳಿ ಮುಂದುವರಿಸಿದ್ದು, ಜಮ್ಮುವಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಸ್ಫೋಟಗೊಂಡು 23 ಮಂದಿ ಗಾಯಗೊಂಡಿದ್ದಾರೆ.

    ಕಾಶ್ಮೀರದಲ್ಲಿ ನಡೆದ ದಾಳಿಯ ಬಳಿಕ ನಗರದಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿತ್ತು. ಆದರೂ ಉಗ್ರರು ಈಗ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಮಾಡುವ ಮೂಲಕ ಮತ್ತೆ ತಮ್ಮ ಅಟ್ಟಹಾಸವನ್ನು ಮೆರೆದಿದ್ದಾರೆ.

    ನಿಂತಿದ್ದ ಬಸ್ಸಿನ ಕೆಳಗಡೆ ಗ್ರೆನೇಡ್ ಇಟ್ಟು ಸ್ಫೋಟ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಬಸ್ ಹೊರಗೆ ಇದ್ದ ಜನರಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಸ್ಸಿನಲ್ಲಿ ಎಷ್ಟು ಜನರು ಇದ್ದರು ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

    ಸದ್ಯಕ್ಕೆ ಸ್ಫೋಟದ ರಭಸಕ್ಕೆ ಬಸ್ ಸುಟ್ಟು ಹೋಗಿದೆ. ಕೆಲ ವರ್ಷದಿಂದ ಉಗ್ರರು ಜನರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ನಿಲ್ಲಿಸಿ ಸೈನಿಕರ ಮೇಲೆ ದಾಳಿ ಮಾಡುತ್ತಿದ್ದರು. ಆದರೆ ಈಗ ಮತ್ತೆ ಜನರ ಮೇಲೆ ದಾಳಿ ಆರಂಭಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದು, ಮೊತ್ತರ್ವ ಉಗ್ರ ಪರಾರಿಯಾಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾರು – ಬೈಕ್‍ಗಳ ನಡುವೆ ಅಪಘಾತ – 8 ಮಂದಿಗೆ ಗಾಯ

    ಕಾರು – ಬೈಕ್‍ಗಳ ನಡುವೆ ಅಪಘಾತ – 8 ಮಂದಿಗೆ ಗಾಯ

    ಬೆಂಗಳೂರು: ಕಾರು ಮತ್ತು ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ.

    ಕಾರು ಹಾಸನದಿಂದ ನೆಲಮಂಗಲದ ಕಡೆಗೆ ಬರುತಿತ್ತು. ಆದರೆ ಯಂಟಗಾನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರು ಮತ್ತು ಬೈಕ್ ಸವಾರರು ಸೇರಿ ಎಂಟು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಜಖಂ ಆಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವರಾತ್ರಿ ಹಬ್ಬದ ದಿನವೇ ತಡರಾತ್ರಿ ಆದಿಚುಂಚನಗಿರಿಯ ಕಾಲಭೈರವೇಶ್ವರನ ದರ್ಶನಕ್ಕೆ ತೆರಳಿದ್ದ ಕುಟುಂಬ ವಾಪಸ್ ಬೆಂಗಳೂರಿಗೆ ಬರುತಿತ್ತು. ಆಗ ಭೀಕರ ಅಪಘಾತದ ಸಂಭವಿಸಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ್ದರು. ಈಗ ಇಂದು ಅದೇ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದೆ.

    ಈ ಅಪಘಾತ ನೆಲಮಂಗಲ ಸಂಚಾರಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನರಳಾಡುತ್ತಿದ್ದ ವ್ಯಕ್ತಿ – ರೈಲ್ವೇ ಹಳಿಯಲ್ಲಿ ಭುಜದ್ಮೇಲೆ ಹೊತ್ಕೊಂಡು 1.5 ಕಿ.ಮೀ ಹೋದ್ರು ಕಾನ್ ಸ್ಟೇಬಲ್

    ನರಳಾಡುತ್ತಿದ್ದ ವ್ಯಕ್ತಿ – ರೈಲ್ವೇ ಹಳಿಯಲ್ಲಿ ಭುಜದ್ಮೇಲೆ ಹೊತ್ಕೊಂಡು 1.5 ಕಿ.ಮೀ ಹೋದ್ರು ಕಾನ್ ಸ್ಟೇಬಲ್

    ಭೋಪಾಲ್: ಮಧ್ಯ ಪ್ರದೇಶದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಗಾಯಗೊಂಡ ವ್ಯಕ್ತಿಯನ್ನು ಅವರ ಹೆಗಲ ಮೇಲೆ ಹೊತ್ತುಕೊಂಡು ರೈಲ್ವೇ ಹಳಿಯ ಮೇಲೆ ಓಡಿ ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಕಾನ್ ಸ್ಟೇಬಲ್ ಪೂನಮ್ ಬಿಲ್ಲೋರ್ ಅವರು ಗಾಯಗೊಂಡಿದ್ದ ಅಜಿತ್ ಎಂಬವರನ್ನು ಹೋಶಂಗಾಬಾದ್‍ನಲ್ಲಿ ತಮ್ಮ ಭುಜದ ಮೇಲೆ ಹೊತ್ತು ರೈಲ್ವೇ ಹಳಿಯ ಮೇಲೆ ಒಂದೂವರೆ ಕಿ.ಮೀ ವರೆಗೂ ಓಡಿದ್ದಾರೆ. ಅಜಿತ್ ಚಲಿಸುವ ರೈಲಿನಿಂದ ಬಿದ್ದು ಗಾಯಗೊಂಡಿದ್ದರು. ಆದರೆ ಅಪಘಾತ ನಡೆದ ಸ್ಥಳದ ಸಮೀಪದಲ್ಲಿ ಯಾವುದೇ ವಾಹನ, ಅಂಬ್ಯುಲೆನ್ಸ್ ಅಥವಾ ಪೊಲೀಸ್ ವಾಹನವು ಇರಲಿಲ್ಲ. ಹೀಗಾಗಿ ಕಾನ್ ಸ್ಟೇಬಲ್ ನಿಲ್ಲೋರ್ ಅವರೇ ಭುಜದ ಮೇಲೆ ಹೊತ್ತಕೊಂಡು ಹೋಗಿದ್ದಾರೆ.

    ಅಜಿತ್ ಉತ್ತರ ಪ್ರದೇಶದ ಭದೋಹಿ ನಿವಾಸಿಯಾಗಿದ್ದು, ಮುಂಬೈಗೆ ಪ್ರಯಾಣಿಸುತ್ತಿದ್ದರು. ಆದರೆ ಶನಿವಾರ ಬೆಳಗ್ಗೆ ಪಗ್ಧಾಲ್ ರೈಲು ನಿಲ್ದಾಣದ ಸಮೀಪವಿರುವ ರಾವನ್ ಪೇಪಾಲ್ ಗ್ರಾಮದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಬಿದ್ದಿದ್ದಾರೆ ಎಂದು ಶಿವಾಲ್ ಪೊಲೀಸ್ ಠಾಣೆಯಲ್ಲಿ ಉಸ್ತುವಾರಿ ಸುನಿಲ್ ಪಟೇಲ್ ತಿಳಿಸಿದ್ದಾರೆ.

    “ವ್ಯಕ್ತಿ ಬಿದ್ದಿದ್ದ ಸ್ಥಳ ರೈಲ್ವೆ ಗೇಟಿನಿಂದ ಸುಮಾರು 2 ಕಿ.ಮೀ ದೂರದಲ್ಲಿತ್ತು. ಅಲ್ಲಿಗೆ ಆಂಬ್ಯುಲೆನ್ಸ್ ಬರಲಾಗಲಿಲ್ಲ. ಹೀಗಾಗಿ ನಾನೇ ಕಾಲ್ನಡಿಗೆಯಿಂದ ಅಲ್ಲಿಗೆ ಹೋಗಿದ್ದೆ. ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಒದ್ದಾಡುತ್ತಿದ್ದರು. ಆ ಸಮಯದಲ್ಲಿ ನಾನು ಅವರ ಜೀವವನ್ನು ಉಳಿಸಬೇಕಾಗಿತ್ತು. ಕೊನೆಗೆ ಭುಜದ ಮೇಲೆ ಎತ್ತುಕೊಂಡು 1.5 ಕಿ.ಮೀ ದೂರದ ವರೆಗೂ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ್ದೇನೆ” ಎಂದು ಬಿಲ್ಲೋರ್ ತಿಳಿಸಿದ್ದಾರೆ.

    ಕಾನ್ ಸ್ಟೇಬಲ್ ಪೂನಮ್ ಬಿಲ್ಲೋರ್ ಅವರು ಸರಿಯಾದ ಸಮಯಕ್ಕೆ ಗಾಯಗೊಂಡಿದ್ದ ಪ್ರಯಾಣಿಕನ ಜೀವವನ್ನು ಉಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

    ಕಾನ್ ಸ್ಟೇಬಲ್ ಗಾಯಗೊಂಡಿದ್ದ ವ್ಯಕ್ತಿಯನ್ನು ಹೊತ್ತುಕೊಂಡು ಬಂದಂತಹ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಡ್ಡಾದಿಡ್ಡಿ ಚಲಾಯಿಸಿ ಆಟೋಗಳಿಗೆ ಟಿಪ್ಪರ್ ಡಿಕ್ಕಿ – ಓರ್ವ ಸಾವು, ಮೂವರು ಗಂಭೀರ

    ಅಡ್ಡಾದಿಡ್ಡಿ ಚಲಾಯಿಸಿ ಆಟೋಗಳಿಗೆ ಟಿಪ್ಪರ್ ಡಿಕ್ಕಿ – ಓರ್ವ ಸಾವು, ಮೂವರು ಗಂಭೀರ

    ಹಾಸನ: ಟಿಪ್ಪರ್ ಚಾಲಕನೊಬ್ಬ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಆಟೋಗಳಿಗೆ ಡಿಕ್ಕಿ ಹೊಡೆದಿದ್ದು, ಓರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳೇನರಸೀಪುರದಲ್ಲಿ ನಡೆದಿದೆ.

    ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇರುವ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಶಂಕರ್ ಮೃತ ದುರ್ದೈವಿ. ಹಾಸನ ಕಡೆಯಿಂದ ಮೈಸೂರು ಕಡೆಗೆ ವೇಗವಾಗಿ ಬಂದ ಟಿಪ್ಪರ್, ಅಲ್ಲಿದ್ದ ಸರದಿ ಸಾಲಿನ ಆಟೋಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಆಟೋ ಚಾಲಕ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂರು ಮಂದಿಗೆ ಗಂಭೀರ ಗಾಯಗಳಾಗಿವೆ.

    ಆಟೋಗಳು ಸಹ ನುಜ್ಜುಗುಜ್ಜಾಗಿವೆ. ಅದೇ ವೇಗದಲ್ಲಿ ಅಲ್ಲಿಂದ ನಿಲ್ಲಿಸದ ಟಿಪ್ಪರ್ ಚಾಲಕ ಪರಾರಿಗೆ ಯತ್ನಿಸಿದ್ದಾನೆ. ಆದರೆ ಅಂಬೇಡ್ಕರ್ ನಗರದ ಬಳಿ ವೇಗವಾಗಿ ಬಂದು ತಿರುವಿನಲ್ಲಿ ಪಲ್ಟಿಯಾಗಿದೆ. ಎಂಸ್ಯಾಂಡ್ ತುಂಬಿದ ಟಿಪ್ಪರ್ ವಾಹನ ಇದಾಗಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

    ಸದ್ಯ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳೇನರಸೀಪುರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಟಿಪ್ಪರ್ ಚಾಲಕನಿಗೆ ಶೋಧ ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರೀಯ ಹೆದ್ದಾರಿಯಿಂದ ಹಾರಿ ಹಳ್ಳಕ್ಕೆ ಬಿದ್ದ ಕಾರು..!

    ರಾಷ್ಟ್ರೀಯ ಹೆದ್ದಾರಿಯಿಂದ ಹಾರಿ ಹಳ್ಳಕ್ಕೆ ಬಿದ್ದ ಕಾರು..!

    – ಕೂದಲೆಳೆ ಅಂತರದಲ್ಲಿ ತಪ್ಪಿತ್ತು ಭಾರೀ ಅನಾಹುತ

    ಬೆಂಗಳೂರು: ಕೂದಳೆಲೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯಿಂದ ಹಾರಿ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಸಮೀಪದಲ್ಲಿ ನಡೆದಿದೆ.

    ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದವರು ತುಮಕೂರಿನ ಶ್ರೀ ಕ್ಷೇತ್ರ ಗೊರವನಹಳ್ಳಿಗೆ ತೆರಳಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಮೂಲದ ಕುಟುಂಬ ಎನ್ನಲಾಗುತ್ತಿದೆ.

    ಬೇಗೂರಿನ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬಿಟ್ಟು ಪಕ್ಕದ ಪೊದೆಗೆ ಕಾರು ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಕೂಡ ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಸಣ್ಣ-ಪುಟ್ಟ ಗಾಯಗಳಾಗಿದ್ದವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅವಘಡದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಓವರ್ ಟೇಕ್ ಮಾಡೋ ಭರದಲ್ಲಿ ಡಿಕ್ಕಿ – ಬೈಕ್ ಮೇಲೆ ಹರಿದ ಕಾರು

    ಓವರ್ ಟೇಕ್ ಮಾಡೋ ಭರದಲ್ಲಿ ಡಿಕ್ಕಿ – ಬೈಕ್ ಮೇಲೆ ಹರಿದ ಕಾರು

    ಚಿಕ್ಕಬಳ್ಳಾಪುರ: ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಇಕೋ ಕಾರು ಎರಡು ಬೈಕ್‍ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜೆ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

    ಕಾರು ಕೋಲಾರ ಕಡೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ವಿಜಯಪುರ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ವೆಂಕಟಾಪುರ ಗ್ರಾಮದಲ್ಲಿ ಬೈಕ್‍ಗಳನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗಳಿಗೂ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲದೆ ಬೈಕ್ ಮೇಲೆ ಕಾರು ಹರಿದಿದೆ.

    ಅಪಘಾತದಲ್ಲಿ ಬೈಕ್ ಮೇಲೆ ಕಾರು ಹರಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೇಗವಾಗಿ ಬಂದು ರಸ್ತೆ ತಿರುವಿನಲ್ಲಿ ಮಿನಿ ಕ್ಯಾಂಟರ್ ಪಲ್ಟಿ

    ವೇಗವಾಗಿ ಬಂದು ರಸ್ತೆ ತಿರುವಿನಲ್ಲಿ ಮಿನಿ ಕ್ಯಾಂಟರ್ ಪಲ್ಟಿ

    ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರೂ ಸೇರಿದಂತೆ 8 ಮಂದಿ ಗಾಯಗೊಂಡಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಮಾಗಲು ಬಳಿ ನಡೆದಿದೆ.

    ಕಾಂಕ್ರಿಟ್ ಮಿಕ್ಸರ್ ಮತ್ತು ಕಾರ್ಮಿಕರನ್ನು ಕರೆದುಕೊಂಡು ಕ್ಯಾಂಟರ್ ಹಾಸನ ಕಡೆ ಹೊರಟಿತ್ತು. ಈ ವೇಳೆ ಸಕಲೇಶಪುರ ತಾಲೂಕಿನ ಮಾಗಲು ಬಳಿ ರಸ್ತೆ ತಿರುವಿನಲ್ಲಿ ಅತೀ ವೇಗವಾಗಿ ಬಂದಿದ್ದು ಏಕಾಏಕಿ ಕ್ಯಾಂಟರ್ ಮಗುಚಿ ಬಿದ್ದಿದೆ. ತಕ್ಷಣ ಗಾಯಾಳುಗಳನ್ನು ಸಕಲೇಶಪುರ ಮತ್ತು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೂವರು ಕಾರ್ಮಿಕರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಅತೀ ವೇಗವಾಗಿ ಕ್ಯಾಂಟರ್ ಓಡಿಸಿದ್ದೆ ಈ ಅವಘಡಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಿಚ್ಚು ಹಾಯಿಸುವಾಗ ದುರ್ಘಟನೆ – ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಕಿಚ್ಚು ಹಾಯಿಸುವಾಗ ದುರ್ಘಟನೆ – ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಮೈಸೂರು: ಸಂಕ್ರಾಂತಿ ಹಬ್ಬಕ್ಕೆ ದನಗಳಿಗೆ ಕಿಚ್ಚು ಹಾಯಿಸುವಾಗ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಹೊರವಲಯದ ಸಿದ್ದಲಿಂಗಪುರದಲ್ಲಿ ನಡೆದಿದೆ.

    ಸಿದ್ದಲಿಂಗಪುರದ ನಿವಾಸಿಗಳಾದ ಪುರುಷೋತ್ತಮ್, ಸಂಜು, ಜೀವನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರುಷೋತ್ತಮ್(24) ಗಂಭೀರ ಗಾಯಗೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಂಕ್ರಾಂತಿ ಹಬ್ಬದಲ್ಲಿ ಎತ್ತು, ದನಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸಲಾಗುತ್ತದೆ. ಹೀಗೆ ಹಬ್ಬದ ಸಂಭ್ರಮದಲ್ಲಿ ಮೈಸೂರು-ಬೆಂಗಳೂರು ರಸ್ತೆಯಲ್ಲಿ ದನಗಳಿಗೆ ಕಿಚ್ಚು ಹಾಯಿಸುವಾಗ ಈ ದುರ್ಘಟನೆ ಸಂಭವಿಸಿದೆ. ಕಿಚ್ಚು ಹಾಯಿಸುವಾಗ ಎತ್ತು ತುಳಿದ ಪರಿಣಾಮ ಯುವಕನೋರ್ವ ಗಾಯಗೊಂಡಿದ್ದು, ಆತನನ್ನು ಕೂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv