ಮಂಗಳೂರು: ಇನ್ಸ್ಟಾಗ್ರಾಂನಲ್ಲಿ (Instagram) ಪರಿಚಯವಾಗಿದ್ದ ಹುಡುಗಿಗೆ ಲೈಕ್ ಕೊಟ್ಟಿದ್ದಕ್ಕೆ ಯುವಕನೊಂದಿಗೆ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದ ಯುವತಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ (Bantwal) ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ನಡೆದಿದೆ.
ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್‌ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಪ್ರೀತಿಸಿ 8 ತಿಂಗಳ ಹಿಂದೆ ಇವರಿಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಜ.21ರಂದು ಚೇತನ್ ತನ್ನ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದ. ಇದನ್ನು ಪ್ರಶ್ನಿಸಲು ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಚೇತನ್ ಮನೆಗೆ ಬಂದಿದ್ದಳು. ಈ ವೇಳೆ ಚೇತನ್ ತಾಯಿ ಮನೆಯಲ್ಲಿ ಇರಲಿಲ್ಲ. ಚೇತನ್ ಓರ್ವನೇ ಇದ್ದ. ಲೈಕ್ ನೀಡಿದ್ದಕ್ಕೆ ಯುವತಿ ಚೇತನ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವ ಸಂದರ್ಭದಲ್ಲೇ ಮನೆಯೊಳಗೆ ತೆರಳಿ ಮನೆಯ ಮೇಲ್ಛಾವಣಿಗೆ ಬಟ್ಟೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂಓದಿ: ಹೀರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್ ಕತ್ತಿ ರಾಜೀನಾಮೆ
ಬಳಿಕ ಚೇತನ್ ತಾಯಿಗೆ ಚೈತನ್ಯ ಕರೆ ಮಾಡಿ ಮಲಗಿದ್ದಾತ ಏಳುತ್ತಿಲ್ಲ ಎಂದು ಹೇಳಿ ಕರೆಸಿಕೊಂಡಿದ್ದಾಳೆ. ಬಳಿಕ ಮನೆಯ ಮೆಲ್ಛಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿದೆ. ನೇಣು ಬಿಗಿದ ಬಳಿಕ ಚೇತನ್‌ನನ್ನು ಯುವತಿಯೇ ಕೆಳಗೆ ಇಳಿಸಿದ್ದಳು. ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂಓದಿ: ನಕಲಿ ಫೈನಾನ್ಸ್ ರಿಕವರಿ ಟೀಂನಿಂದ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ಸೋಷಿಯಲ್ ಮೀಡಿಯಾ ಸ್ಟಾರ್ (Social Media Star) ಹಾಗೂ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ (25) ಗುರುಗ್ರಾಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.
ಮಾಹಿತಿ ಪ್ರಕಾರ, ಸಿಮ್ರಾನ್ ಗುರುಗ್ರಾಮ್ ಸೆಕ್ಟರ್-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಆಕೆಯ ಸ್ನೇಹಿತನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ 5, 8ನೇ ತರಗತಿ ವಿದ್ಯಾರ್ಥಿಗಳು ಫೇಲ್ ಆಗ್ತಾರಾ?; ಏನಿದು ‘ನೋ-ಡಿಟೆನ್ಷನ್ ಪಾಲಿಸಿ’?
ಬೆಂಗಳೂರು/ಮಂಡ್ಯ: ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ (SM ಕೃಷ್ಣ) ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ನೋವಿನ ನುಡಿಗಳನ್ನು ಹಂಚಿಕೊಂಡಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ʻʻಒಬ್ಬ Statesman ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು… ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳು… ಎಂದು ಬರೆದುಕೊಂಡಿದ್ದಾರೆ. ಕೊನೆಯಲ್ಲಿ ನೀವು ಈಗ ನಿಮ್ಮ ಬೆಸ್ಟ್‌ಫ್ರೆಂಡ್ ಜೊತೆಗೆ ಇದ್ದೀರಾ ಎಂದು ಬರೆದು ಹಾರ್ಟ್ ಎಮೊಜಿ ಹಾಕಿದ್ದಾರೆ.
ಮಂಗಳವಾರ (ಡಿ.10) ಸದಾಶಿವನಗರ ಆಗಮಿಸಿ ಎಸ್‌ಎಂ ಕೃಷ್ಣ (SM Krishna) ಪಾರ್ಥಿವ ಶರೀರಕ್ಕೆ ಆಗಮಿಸಿದ್ದ ರಮ್ಯಾ ಅಂತಿಮ ನಮನ ಸಲ್ಲಿಸಿ, ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟಿದ್ದರು. ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದ್ದರು. ಇದನ್ನೂ ಓದಿ: ‘ಪುಷ್ಪ 2’ ಭರ್ಜರಿ ಕಲೆಕ್ಷನ್- 922 ಕೋಟಿ ಗಳಿಕೆ ಮಾಡಿದ ರಶ್ಮಿಕಾ ಮಂದಣ್ಣ ಸಿನಿಮಾ
ಸಿನಿಮಾ ರಂಗದಲ್ಲಿದ್ದ ರಮ್ಯಾ ಅವರನ್ನು ರಾಜಕಾರಣಕ್ಕೆ (Politics) ಕರೆತಂದಿದ್ದೇ ಎಸ್‌ಎಂಕೆ. ಈ ಕಾರಣದಿಂದ ಹಲವಾರು ಬಾರಿ ರಮ್ಯಾ ಅವರು ಎಸ್‌ಎಂಕೆ ನಿವಾಸಕ್ಕೆ ತೆರಳಿ ಮಾತನಾಡಿ ಸಲಹೆಗಳನ್ನು ಪಡೆಯುತ್ತಿದ್ದರು. ಎಸ್.ಎಂ ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟ ರಮ್ಯಾ ಅವರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್‌ನಿಂದಾಗಿ ಹೈಕಮಾಂಡ್‌ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಹೈಕಮಾಂಡ್‌ನ ಪ್ರಭಾವಶಾಲಿ ನಾಯಕರ ಜೊತೆ ನೇರವಾಗಿ ಸಂಪರ್ಕ ಸಾಧಿಸಬಲ್ಲ ರಾಜ್ಯದ ಕೆಲವೇ ಕಾಂಗ್ರೆಸ್ಸಿಗರಲ್ಲಿ ರಮ್ಯಾ ಕೂಡ ಒಬ್ಬರಾಗಿದ್ದರು. ಕೃಷ್ಣ ಅವರನ್ನು ಅಂಕಲ್ ಎಂದೇ ಕರೆಯುತ್ತಿದ್ದ ರಮ್ಯಾ, ಕೃಷ್ಣ ಅವರ ಮಾರ್ಗದರ್ಶನದಲ್ಲೇ ರಾಜಕೀಯ ನಡೆಗಳನ್ನು ಇಟ್ಟವರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ನ ಒಳ ರಾಜಕಾರಣವನ್ನು ಭೇದಿಸಿ ಸಂಸದರಾಗಲು ಈ ಮಾರ್ಗದರ್ಶನವೇ ಅವರಿಗೆ ರಕ್ಷೆಯಾಗಿತ್ತು. ಇದನ್ನೂ ಓದಿ: ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್ಎಂಕೆ – ರಾಧಿಕಾ ಪಂಡಿತ್ ಭಾವುಕ ಪೋಸ್ಟ್
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ಮಹಿಳೆ ತೃಪ್ತಿ ಜೊತೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಚಿರಂಜೀವಿ ಎಂಬಾತ ಈ ಕೊಲೆ ಮಾಡಿದ್ದಾನೆ. ಹಲವು ದಿನಗಳಿಂದ ಇಬ್ಬರು ಸ್ನೇಹಿತರಾಗಿದ್ದರು. ತಿಂಗಳ ಹಿಂದೆ ಚಿರಂಜೀವಿ ಜೊತೆ ತೃಪ್ತಿ ಹೋಗಿದ್ದಳು. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ, ಆತನ ಜೊತೆ ಮಾತು ಹಾಗೂ ಸ್ನೇಹವನ್ನು ಬಿಟ್ಟಿದ್ದಳು ಎನ್ನಲಾಗಿದೆ.
ಸಂಪೂರ್ಣ ಮಾತು ಬಿಟ್ಟ ಪರಿಣಾಮ ಕೋಪಗೊಂಡ ಚಿರಂಜೀವಿ ಶನಿವಾರ ಏಕಾಏಕಿ ಮನೆಗೆ ನುಗ್ಗಿ ತೃಪ್ತಿಯ ಮೇಲೆ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ಮನೆಯಿಂದ ಎಳೆದೊಯ್ದು ಗ್ರಾಮದ ಸಮೀಪದ ಕೆರೆಗೆ ಬಿಸಾಡಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ಈ ಕೃತ್ಯ ಎಸಗಿದ್ದು, ಘಟನೆಯಿಂದಾಗಿ ಗ್ರಾಮದ ಜನರು ಕೆಲಕಾಲ ಆತಂಕಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಪ್ರಕರಣ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈ ವೇಳೆ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ತೃಪ್ತಿಯೊಂದಿಗೆ ಕೆಲ ತಿಂಗಳು ನಡೆದ ಮಾತುಕತೆಯಿಂದ ಸ್ನೇಹ ಪ್ರೀತಿಗೆ ತಿರುಗಿದೆ. ಇದೇ ವೇಳೆ ಇಬ್ಬರು ಮೊಬೈಲ್ ನಂಬರ್‌ಗಳನ್ನು ಹಂಚಿಕೊಂಡು ಮಾತನಾಡಿ ಸಂಪರ್ಕ ಬೆಳೆಸಿದ್ದಾರೆ. ದಿನ ಕಳೆದಂತೆ ಇಬ್ಬರ ನಡುವಿನ ಪ್ರೀತಿ ಸಂಪರ್ಕಕ್ಕೆ ಕೊಂಡಿಯಾಗಿ ಕಳೆದ ಕೆಲವೇ ತಿಂಗಳ ಹಿಂದೆ ಇಬ್ಬರು ಬೆಂಗಳೂರಿಗೆ ಹೋಗಿದ್ದರು. ಪರಿಣಾಮ ಪತಿ, ಪತ್ನಿ ಕಾಣೆಯಾಗಿದ್ದಾಳೆ ಎಂದು ಠಾಣೆಗೆ ದೂರು ನೀಡಿದ್ದರು. ಪೊಲೀಸರ ಪರಿಶೀಲನೆ ಬಳಿಕ ಬಾಳೆಹೊನ್ನೂರಿಗೆ ಬಂದಿದ್ದ ಪತಿ-ಪತ್ನಿ ರಾಜಿ ಸಂಧಾನದ ಮೂಲಕ ಇಬ್ಬರು ಎಲ್ಲವನ್ನು ಮರೆತು ಖುಷಿಯಿಂದ ಜೀವನ ನಡೆಸುತ್ತಿದ್ದರು.
ಏಕಾಏಕಿ ಗ್ರಾಮದ ಮನೆಗೆ ನುಗ್ಗಿ ಮಾರಣಾಂತಿಕವಾಗಿ ಮಹಿಳೆಯ ಮೇಲೆ ಹಲ್ಲೆ ಮಾಡಿದ ಆರೋಪಿ, ಅರ್ಧ ಕಿ.ಮೀ. ದೂರ ಆಕೆಯನ್ನ ಕಾಫಿ ತೋಟದ ನಡುವೆ ಎಳೆದು ತಂದು 40 ಅಡಿ ಆಳವಿರುವ ಕೆರೆಯಲ್ಲಿ ಹಾಕಿದ್ದಾನೆ. ಮಲೆನಾಡನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕೆಲವೇ ಗಂಟೆಗಳಲ್ಲಿ ಚಿಕ್ಕಮಗಳೂರು ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿ ಚಿರಂಜೀವಿಯನ್ನು ಬಂಧಿಸಿದ್ದಾರೆ.
ಚಂಡೀಗಢ: 3 ವರ್ಷದ ಹಿಂದೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ವಿವಾಹವಾಗಲು ಸಕಲ ಸಿದ್ಧತೆಗಳೊಂದಿಗೆ ಮದುಮಗಳು ತಿಳಿಸಿದ್ದ ಜಾಗಕ್ಕೆ ಬಂದಿದ್ದ ವರನಿಗೆ (Groom) ದೊಡ್ಡ ಆಘಾತವೇ ಉಂಟಾಗಿತ್ತು. ಇತ್ತ ವಧುವೂ ಇಲ್ಲ ಅತ್ತ ಆಕೆ ಹೇಳಿದ್ದ ಕಲ್ಯಾಣ ಮಂಟಪವೂ ಇಲ್ಲವಾದ್ದರಿಂದ ಇದೀಗ ವರ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿರುವ ಘಟನೆ ಪಂಜಾಬ್‌ನ (Punjab) ಮೋಗಾದಲ್ಲಿ ನಡೆದಿದೆ.
ಮನ್‌ಪ್ರೀತ್ ಕೌರ್ ಎಂಬ ಯುವತಿ ಹಾಗೂ ಜಲಂಧರ್ ಮೂಲದ ಯುವಕ ದೀಪಕ್ ಕುಮಾರ್ (24) ಇನ್ಸ್ಟಾದಲ್ಲಿ ಪರಿಚಯವಾಗಿ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಒಮ್ಮೆಯೂ ಮುಖಾಮುಖಿಯಾಗಿ ಭೇಟಿಯಾಗಿಲ್ಲ. ಆನ್‌ಲೈನ್‌ನಲ್ಲೇ ವಧು-ವರರ ಕುಟುಂಬಸ್ಥರು ವಿವಾಹ ನಿಶ್ಚಯವೂ ಮಾಡಿಕೊಂಡು ಮದುವೆಗೆ ದಿನಾಂಕ ಕೂಡ ಗೊತ್ತುಪಡಿಸಿ, ಕಲ್ಯಾಣ ಮಂಟಪ ಯಾವುದು ಎಂಬುದನ್ನೂ ಕೂಡ ನಿರ್ಧರಿಸಿದ್ದರು. ಅದರಂತೆಯೇ ವರ ದೀಪಕ್ ಕಳೆದ ತಿಂಗಳು ದುಬೈನಿಂದ (Dubai) ಆಗಮಿಸಿ ಕುಟುಂಬಸ್ಥರೊಂದಿಗೆ ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ. ಇದನ್ನೂ ಓದಿ: ಗಂಡಸರಿಗೂ ಫ್ರೀ ಬಸ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿದ್ದರಾಮಯ್ಯ
ಸಾಂದರ್ಭಿಕ ಚಿತ್ರ
ಮದುವೆಯ ದಿನ ಜಲಂಧರ್‌ನಿಂದ ಮಂಡಿಯಾಲಿ ಗ್ರಾಮದಿಂದ ಮೋಗಾದಲ್ಲಿನ ಮದುಮಗಳು ಹೇಳಿದ ಸ್ಥಳಕ್ಕೆ ವರ ಹಾಗೂ ಆತನ ಕುಟುಂಬಸ್ಥರು ತೆರಳಿದ್ದರು. ಮೋಗಾ ತಲುಪಿದ ಬಳಿಕ ತಮ್ಮ ಕಡೆಯ ಕೆಲವರು ಅಲ್ಲಿಗೆ ಬಂದು ನಿಮ್ಮನ್ನು ಮದುವೆ ಹಾಲ್‌ಗೆ ಕರೆದುಕೊಂಡು ಬರುತ್ತಾರೆ ಎಂದು ವಧು ತಿಳಿಸಿದ್ದಳು. ಆದರೆ ಬೆಳಗ್ಗೆಯಿಂದ ಸಂಜೆಯವರೆಗೆ ಕಾದರೂ ಹುಡುಗಿಯ ಕಡೆಯವರ ಪತ್ತೆಯಿರಲಿಲ್ಲ. ಬಳಿಕ ತಾವೇ ಕಲ್ಯಾಣ ಮಂಟಪ ಹುಡಕುವ ಸಲುವಾಗಿ ಸ್ಥಳಿಯರಲ್ಲಿ ‘ರೋಸ್ ಗಾರ್ಡನ್ ಪ್ಯಾಲೇಸ್’ ಎಲ್ಲಿದೆ ಎಂದು ಕೇಳಿದಾಗ ಅಂತಹದೊಂದು ಜಾಗವೇ ಇಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ತಾನು ಮೋಸ ಹೋಗಿರುವುದನ್ನು ಅರಿತ ಮದುಮಗ ಪೊಲೀಸ್ ಠಾಣೆಗೆ ತೆರಳಿ ವಧು ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾನೆ. ಇದನ್ನೂ ಓದಿ: ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್
ಮದುವೆ ಸಿಧ್ಧತೆಗಾಗಿ 50,000 ಹಣ ಪಡೆದಿದ್ದ ವಧು:
ತಾನು ದುಬೈನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಇನ್‌ಸ್ಟಾಗ್ರಾಂನಲ್ಲಿ ಕಳೆದ ಮೂರು ವರ್ಷದಿಂದ ಕೌರ್ ಜತೆಗೆ ಸಂಪರ್ಕದಲ್ಲಿದ್ದೆ ಎಂದು ದೀಪಕ್ ತಿಳಿಸಿದ್ದಾನೆ. ಆಕೆ ಆತನೊಂದಿಗೆ ತನ್ನ ಫೋಟೋಗಳನ್ನು ಹಂಚಿಕೊಂಡಿದ್ದಳು. ಆದರೆ ಎಂದಿಗೂ ಪರಸ್ಪರ ಭೇಟಿ ಮಾಡಿರಲಿಲ್ಲ. ಇಬ್ಬರೂ ಮದುವೆಯಾಗುವುದಾಗಿ ತೀರ್ಮಾನಿಸಿದ ನಂತರ ಫೋನ್ ಮೂಲಕವೇ ಎರಡೂ ಕುಟುಂಬದ ಹಿರಿಯರು ಮಾತುಕತೆಗಳನ್ನು ನಡೆಸಿದ್ದರು. ಮದುವೆ ಸಿದ್ಧತೆಗಾಗಿ ಆಕೆಗೆ ದಿನೇಶ್ 50 ಸಾವಿರ ರೂ ಹಣ ಸಹ ಕಳುಹಿಸಿದ್ದ. ಇದನ್ನೂ ಓದಿ: ಇಷ್ಟು ಕಾಲ ಸಹಿಸಿದ್ದೇವೆ, ಇನ್ಮುಂದೆ ಸಹಿಸಲು ಆಗಲ್ಲ: ಯತ್ನಾಳ್ ವಿರುದ್ಧ ವಿಜಯೇಂದ್ರ ಆಕ್ರೋಶ
ಮದುವೆ ಸ್ಥಳಕ್ಕೆ 150 ಬರಾತಿಗಳ ಜತೆ ತೆರಳಿದ್ದಲ್ಲದೆ, ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದೆವು. ಕ್ಯಾಟರಿಂಗ್ ಮತ್ತು ವಿಡಿಯೋಗ್ರಾಫರ್‌ಗೆ ಮುಂಗಡ ಹಣ ಕೂಡ ಪಾವತಿಸಿದ್ದೆವು ಎಂದು ದೀಪಕ್‌ನ ತಂದೆ ಪ್ರೇಮ್ ಚಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಶಾಸಕರ ವಿರುದ್ಧ ಕ್ರಮದ ಅಧಿಕಾರ: ಸಿ.ಟಿ ರವಿ
ತಾನು ಮೋಗಾದವಳಾಗಿದ್ದು, ಫಿರೋಜ್‌ಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ಮನ್‌ಪ್ರೀತ್ ಕೌರ್ ಹೇಳಿಕೊಂಡಿದ್ದಳು. ಮದುಮಗಳ ಫೋನ್ ಸ್ವಿಚ್ ಆಫ್ ಆಗಿದ್ದು, ಆಕೆಯನ್ನು ಸಂಪರ್ಕಿಸುವುದು ವರನ ಕಡೆಯವರಿಗೆ ಸಾಧ್ಯವಾಗುತ್ತಿಲ್ಲ ಎಂದು ದೀಪಕ್ ಕುಮಾರ್ ಕಡೆಯಿಂದ ದೂರು ದಾಖಲಿಸಲಾಗಿದೆ ಎಂಬುದಾಗಿ ಮೋಗಾದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹರ್ಜಿಂದರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ (Instagram) ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು 5 ವರ್ಷದ ಮಗುವನ್ನು ತಾಯಿ ಕೊಲೆ ಮಾಡಿರುವ ಘಟನೆ ದೆಹಲಿಯ (Delhi) ಅಶೋಕ್ ವಿಹಾರದಲ್ಲಿ ಘಟನೆ ನಡೆದಿದೆ.
ಶುಕ್ರವಾರ ಈ ಘಟನೆ ನಡೆದಿದ್ದು, ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆತರುವ ಮಾರ್ಗದಲ್ಲಿ ಮೃತಪಟ್ಟಿದೆ. ಮಗು ಹಾಗೂ ತಾಯಿಯ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಸೋತರು ತೊಡೆ ತಟ್ಟಿದ ಬಂಗಾರು ಹನುಮಂತ!
ಪೊಲೀಸರ ಮಾಹಿತಿಯ ಪ್ರಕಾರ, ಮಗುವನ್ನು ಕತ್ತು ಹಿಸುಕಿ ಸಾಯಿಸಲಾಗಿದ್ದು, ಗುರುತುಗಳು ಪತ್ತೆಯಾಗಿವೆ. ತಕ್ಷಣವೇ ಪ್ರಕರಣ ದಾಖಲಿಸಿಕೊಂಡಿದ್ದು, ತಾಯಿ ಸೇರಿದಂತೆ ಮಗುವಿನ ಸಂಬಂಧಿಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಗುವಿನ ತಾಯಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಸತ್ಯ ಬಿಚ್ಚಿಟ್ಟಿದ್ದು, ಸ್ವತಃ ತಾನೇ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಆಕೆಯ ಮೊದಲ ಪತಿ ಅವಳನ್ನು ಬಿಟ್ಟುಹೋಗಿದ್ದ. ಈ ಸಮಯದಲ್ಲಿ ಆಕೆಗೆ ಇನ್‌ಸ್ಟಾಗ್ರಾಂ ಮೂಲಕ ರಾಹುಲ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಅದಾದ ಬಳಿಕ ಆತನೊಂದಿಗೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು. ಮದುವೆಗಾಗಿ ದೆಹಲಿಯಲ್ಲಿರುವ ರಾಹುಲ್ ಮನೆಗೆ ತೆರಳಿದಾಗ ರಾಹುಲ್ ಮತ್ತು ಆತನ ಕುಟುಂಬದವರು ಆಕೆಗೆ ಮಗುವಿರುವ ಕಾರಣದಿಂದ ಮದುವೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಮದುವೆಯ ಕಾರಣದಿಂದ ಕೊಂದಿರುವುದಾಗಿ ತಿಳಿಸಿದ್ದಾಳೆ.
ತನ್ನ ಭಿನ್ನ ಫ್ಯಾಷನ್ ಉಡುಗೆಗಳಿಂದಲೇ ವೈರಲ್ ಆಗುತ್ತಿರುವ ಬಾಲಿವುಡ್ ನಟಿ ಕಮ್ ಬಿಗ್‌ಬಾಸ್ ಮಾಜಿ ತಾರೆ ಉರ್ಫಿ ಜಾವೇದ್ (Uorfi Javed) ಇತ್ತೀಚೆಗೆ ಧರಿಸಿದ ಹಸಿರು ಸೀರೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ.
ಹೌದು. ಉರ್ಫಿ ಫ್ಯಾಷನ್ ಸೆನ್ಸ್ ಊಹೆಗೂ ನಿಲುಕದ್ದು. ಪ್ರತಿ ಬಾರಿ ಒಂದೊಂದು ಅವತಾರದಲ್ಲಿ ಕಾಣಿಸಿಕೊಂಡು ಸಂಚಲನ ಸೃಷ್ಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲೂ ಉರ್ಫಿ ಜಾವೇದ್ ಫ್ಯಾಷನ್ ಸೆನ್ಸ್‌ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ಫಿದಾ ಆಗಿದ್ದಾರೆ. ಏಕೆಂದ್ರೆ ಪ್ರತಿ ಬಾರಿಯೂ ಉರ್ಫಿ ಬೋಲ್ಡ್ ಹಾಗೂ ಮಾದಕ ಲುಕ್‌ನಲ್ಲಿ ಕಾಣಿಸಿಕೊಂಡು ಕಣ್ಣು ಕುಕ್ಕಿದ್ದಾರೆ.
ಅದೇ ರೀತಿ ಈ ಬಾರಿ ಉರ್ಫಿ ಮೈತುಂಬಾ ಸೀರೆಯುಟ್ಟ (Saree Goals) ಅವತರಾದಲ್ಲಿ ಕಾಣಿಸಿಕೊಂಡಿದ್ದಾರೆ. ಆದ್ರೆ ಅದರಲ್ಲೂ ಕೊಂಕು ಕಂಡ ನೆಟ್ಟಿಗರು ಒಳಉಡುಪು ಎಲ್ಲಿ ಹೋಯ್ತಮ್ಮಾ? ಇನ್ನೂ ಈ ಕಣ್ಣಲ್ಲಿ ಅದೇನು ನೋಡ್ಬೇಕೋ ಅಂತಾ ಕೆಣಕಿದ್ದಾರೆ.
ಉರ್ಫಿ ವಿಡಿಯೋ ವೈರಲ್:
ಇನ್‌ಸ್ಟಾಂಟ್ ಬಾಲಿವುಡ್ ಇನ್‌ಸ್ಟಾಗ್ರಾಂ (Instagram) ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಉರ್ಫಿ ಜಾವೇದ್ ಸೀರೆ ಉಟ್ಟುಕೊಂಡು ಕಾರ್ಯಕ್ರಮವೊಂದಕ್ಕೆ ಆಗಮಿಸುವ ದೃಶ್ಯವಿದೆ. ಅಚ್ಚರಿಯೆಂದರೆ ಸೊಂಟ, ತೊಡೆ ತುಸು ಕಾಣಿಸುವಂತೆ ಸೀರೆ ಧರಿಸಿದ್ದಾರೆ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಂತೆ ಕೆಲವರು ಒಳುಉಡುಪಿ ಎಲ್ಲಿ ಹೋಯ್ತು? ಅಂತ ನೆಗೆಟಿವ್ ಕಾಮೆಂಟ್ ಹಾಕಿದ್ರೆ ಇನ್ನೂ ಕೆಲವರು ಲುಕಿಂಗ್ ಲೈಕ್ ಎ ವಾವ್ ಅಂತಾ ಕಾಮೆಂಟ್ ಮಾಡಿದ್ದಾರೆ. ಅಷ್ಟೇ ಅಲ್ಲ ವೈರಲ್ ಆಗಲು ಇಷ್ಟೊಂದು ಅಶ್ಲೀಲ ಪ್ರದರ್ಶನ ಅಗತ್ಯವಿತ್ತೇ ಅಂತಾ ಪ್ರಶ್ನೆ ಮಾಡಿದ್ದಾರೆ.
ಒಂದು ದಿನದ ಹಿಂದೆಯಷ್ಟೇ ಈ ವೀಡಿಯೋ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಲ್ಲೇ (Moving Car) 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇನ್ಸ್ಟಾ ಸ್ನೇಹಿತನಿಂದಲೇ ಕೃತ್ಯ:
9ನೇ ತರಗತಿ ಓದುತ್ತಿರುವ ಬಾಲಕಿಗೆ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿದ್ದ. ಇಬ್ಬರೂ ಪರಸ್ಪರ ಚಾಟಿಂಗ್ ಮಾಡುತ್ತಿದ್ದರು. ಜೂನ್ 1ರಂದು ಇಬ್ಬರು ವ್ಯಕ್ತಿಗಳೊಂದಿಗೆ ಆರೋಪಿ ಬಾಲಕಿಯನ್ನ ಭೇಟಿಯಾಗಿದ್ದ. ಆಕೆಯ ಹಳ್ಳಿಯಲ್ಲೇ ಭೇಟಿಯಾಗಿ ಬಾಲಕಿಯನ್ನು ತನ್ನೊಂದಿಗೆ ಲಾಂಗ್ ಡ್ರೈವ್ ಬರುವಂತೆ ಕೇಳಿದ್ದ. ಬಾಲಕಿ ಬರಲಿಲ್ಲವೆಂದರೂ ಪದೇ ಪದೇ ಪೀಡಿಸಿದ್ದ. ಇದರಿಂದ ಬಾಲಕಿ ಆತನೊಂದಿಗೆ ಕಾರಿನಲ್ಲಿ ಹೊರಟಿದ್ದಳು. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!
ಕಾರಿನಲ್ಲಿ ಹೋಗುತ್ತಿದ್ದಾಗ ಮೂವರ ಪೈಕಿ ಓರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತೊಬ್ಬ ಕಾರು ಓಡಿಸುತ್ತಿದ್ದಾಗ, ಇನ್ನೊಬ್ಬ ಕೃತ್ಯವನ್ನು ವೀಡಿಯೋ ಚಿತ್ರೀಕರಣ ಮಾಡಿದ್ದಾನೆ. ಇಷ್ಟಕ್ಕೆ ಸುಮನ್ನಾಗದ ಕಾಮುಕ ಆಕೆಯನ್ನು ಪದೇ ಪದೇ ಭೇಟಿಯಾಗಲು ಪೀಡಿಸಿದ್ದಾನೆ. ಬರದಿದ್ದರೆ, ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆಯನ್ನೂ ಹಾಕಿದ್ದಾನೆ. ಕೊನೆಗೆ ಬೇಸತ್ತು ಆಕೆ ಆರೋಪಿಗಳೊಂದಿಗೆ ಹೊರಡಲು ನಿರಾಕರಿಸಿದ ನಂತರ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಬಳಿಕ ಈ ವಿಷಯ ಕುಟುಂಬಸ್ಥರಿಗೆ ತಿಳಿದು ಬಾಲಕಿಯನ್ನು ವಿಚಾರಿಸಿದ್ದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪ್ರಕರಣದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದ್ದು, 3ನೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಅಪರಾಧಕ್ಕೆ ಬಳಸಿದ ಮೊಬೈಲ್ ಫೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ನಿರಂಜನ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಹಳಿ ಮೇಲೆ ಮಲಗಿದ ಯುವಕರು; ರೈಲು ಹರಿದು ಮೂವರ ದುರ್ಮರಣ
ಚಿಕ್ಕಮಗಳೂರು: ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಹಿಡಿದು ಓಡಾಡಿದ್ದ ಹಾಗೂ ಇನ್ಸ್ಟಾಗ್ರಾಮ್‍ನಲ್ಲಿ (Instagram) ಫೋಟೋ ಹಂಚಿಕೊಂಡಿದ್ದ ಇಬ್ಬರನ್ನು ಎನ್‍ಆರ್‌ಪುರ (NRPura) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಎನ್‍ಆರ್‌ಪುರದ ಸೈಯದ್ ಸಲ್ಮಾನ್ (22) ಮೊಹಮ್ಮದ್ ಸಾಧಿಕ್ (25) ಎಂದು ಗುರುತಿಸಲಾಗಿದೆ. ಆರೋಪಿಗಳು ತಲ್ವಾರ್ ಹಿಡಿದು ಕಾರಿನಲ್ಲಿ ಅಡ್ಡಾಡುತ್ತಿದ್ದರು. ಇದೀಗ ಪೊಲೀಸರು ಸಿನಿಮೀಯ ರೀತಿಯಲ್ಲಿ ಸೌತಿಕೆರೆ ಗ್ರಾಮದ ಬಳಿ ಕಾರನ್ನು ಅಡ್ಡಗಟ್ಟಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸೂರಜ್ ಪ್ರಕರಣ ನಮಗೂ ಮುಜುಗರ ತಂದಿದೆ – ಚಲುವರಾಯಸ್ವಾಮಿ
ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ಲಾಂಗ್ ಪ್ರದರ್ಶನ ಮಾಡಿದ್ದರು. ಈ ಸಂಬಂಧ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರು ಎನ್‍ಆರ್‌ಪುರದಲ್ಲಿ ಮೆಕಾನಿಕ್ ಆಗಿ ಕೆಲಸಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ತಮ್ಮ ಇನ್‌ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.
ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ದರ್ಶನ್ (Darshan) ಅವರನ್ನು ಅನ್‌ಫಾಲೋ ಮಾಡಿ, ಡಿಪಿ ರಿಮೂವ್ ಮಾಡಿದ್ದರು. ಆದರೆ ಇಂದು ವಿಜಯಲಕ್ಷ್ಮಿ ಇನ್ ಸ್ಟಾಗ್ರಾಂ ಖಾತೆಯಿಂದಲೇ ಹೊರ ನಡೆದಿದ್ದಾರೆ. ಅಂದರೆ ಇನ್‌ಸ್ಟಾ ಖಾತೆಯನ್ನು ಅವರು Dactivate ಮಾಡಿದ್ದಾರೆ.
ಬಳಕೆದಾರರು ಇನ್‌ಸ್ಟಾದಲ್ಲಿ ಮೆಸೇಜ್ ಮಾಡಿ ನಿಂದನೆ ಮಾಡುತ್ತಾ ಇದ್ದಿದ್ದರಿಂದ ಬೇಸರಗೊಂಡು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವಿಜಯಲಕ್ಷ್ಮಿ ಅವರು Dactivate ಮಾಡಲು ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು- ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ!
ಏನಿದು ಪ್ರಕರಣ..?: ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಡಿ ಬಾಸ್ ಗ್ಯಾಂಗ್ ಚಿತ್ರಹಿಂಸೆ ನೀಡಿ ಕೊಲೆ ಮಾಡಿತ್ತು. ಬಳಿಕ ಶವವನ್ನು ಸುಮನಹಳ್ಳಿ ಬಳಿ ಮೋರಿಗೆ ಎಸೆದಿದ್ದರು. ಇದಾದ ಬಳಿಕ ಇಬ್ಬರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದರು. ಇವರನ್ನು ವಿಚಾರಣೆ ನಡೆಸಿದಾಗ ಕರಾಳ ಸತ್ಯ ಬಯಲಾಗಿದೆ.
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಹೆಸರು ಕೇಳಿ ಬಂತು. ಕೂಡಲೇ ದರ್ಶನ್ ಅವರನ್ನು ಮೈಸೂರಿನಲ್ಲಿಯೇ ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಇತ ಪವಿತ್ರಾ ಗೌಡರನ್ನು ಕೂಡಲೇ ಬಂಧಿಸಲಾಗಿತ್ತು. ಸದ್ಯ ಪಕ್ರಕರಣ ಸಂಬಂಧ ಒಟ್ಟು 14 ಮಂದಿಯನ್ನು ಬಂಧಿಸಿದ್ದು, ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.