ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ (Intelligence Bureau) ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನ ಮಧು (28 ) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.
ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿರುವನಂತಪುರಂ: ನಗರದ ಚಕ್ಕಾ ಪ್ರದೇಶದ ಬಳಿಯ ರೈಲ್ವೆ ಹಳಿಯ ಮೇಲೆ ಗುಪ್ತಚರ ಬ್ಯೂರೋದ (Intelligence Bureau) ಮಹಿಳಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.
ಮೃತ ಅಧಿಕಾರಿಯನ್ನು ಮೇಘಾ (24) ಎಂದು ಗುರುತಿಸಲಾಗಿದೆ. ಮಾ.24ರ ಬೆಳಿಗ್ಗೆ 9:30ರ ಸುಮಾರಿಗೆ ಅವರ ಶವ ಪತ್ತೆಯಾಗಿದೆ. ಮೇಘಾ ಅವರು ಮೂಲತಃ ಪತನಂತಿಟ್ಟ ಜಿಲ್ಲೆಯವರು. ಅವರು ಕೇರಳದ (Kerala) ತಿರುವನಂತಪುರಂ (Thiruvananthapuram) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಅವರು ತಮ್ಮ ಪಾಳಿ ಕೆಲಸ ಮುಗಿಸಿ ತೆರಳಿದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.
ಈ ಸಂಬಂಧ ಪೆಟ್ಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ (Ganesh Procession) ವೇಳೆ ನಡೆದ ಕೋಮು ಗಲಭೆಗೆ ಪೊಲೀಸ್ (Police) ಮತ್ತು ಗುಪ್ತಚರ ಇಲಾಖೆ (Intelligence Bureau) ವೈಫಲ್ಯವೇ ಕಾರಣ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.
ಹೌದು. ಕಳೆದ ವರ್ಷವೇ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿದ್ದ ಕಾರಣ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದರೆ ಮುನ್ನೆಚ್ಚರಿಕೆ ವಹಿಸದ ಕಾರಣ ಈ ಗಲಭೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ವೈಫಲ್ಯ ಹೇಗೆ?
ನಾಗಮಂಗಲದ ಸ್ಥಿತಿಗತಿ ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ತಿಳಿಯುತ್ತದೆ. ಇದಕ್ಕೆ ಸಾಕ್ಷಿ ಪೆಟ್ರೋಲ್ ಬಾಂಬ್, ಕಲ್ಲು, ತಲವಾರ್‌ಗಳು. ಭಾರೀ ಪ್ರಮಾಣದಲ್ಲಿ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದರ ಜೊತೆ ಪೆಟ್ರೋಲ್ ಬಾಂಬ್ ಸಂಗ್ರಹಿಸುವ ಮೂಲಕ ಮೊದಲೇ ಗಲಭೆಗೆ ಬೇಕಾದ ವಸ್ತುಗಳನ್ನು ರಹಸ್ಯವಾಗಿ ಇಟ್ಟುಕೊಂಡಿದ್ದರು. ಜೊತೆಗೆ ಭಾರೀ ಸಂಖ್ಯೆಯಲ್ಲಿ ಯುವಕರು ಮಸೀದಿ ರಸ್ತೆಯಲ್ಲಿ ಸೇರಿದ್ದರು. ಇಷ್ಟೆಲ್ಲಾ ಪೂರ್ವಭಾವಿ ಸಿದ್ಧತೆ ಮಾಡಿದ್ದರೂ ಗುಪ್ತಚರ ಇಲಾಖೆ ಈ ವಿಚಾರ ತಿಳಿಯುವಲ್ಲಿ ವಿಫಲವಾಗಿತ್ತು. ಈ ಪೂರ್ವಭಾವಿ ವಿಚಾರ ಗೊತ್ತಾಗಿದ್ದರೆ ಗಲಭೆಯನ್ನು ಮಟ್ಟ ಹಾಕಬಹುದಿತ್ತು. ಇದನ್ನೂ ಓದಿ: ನಾನಿನ್ನೂ ವೆಬ್‌ಸೀರಿಸ್ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್
ಗಲಭೆಗೂ ಮುನ್ನವೇ ಪೊಲೀಸ್ ಇಲಾಖೆ ಮೈ ಮರೆತಿತ್ತು. ಬದ್ರಿಕೊಪ್ಪಲು ಗ್ರಾಮದಿಂದ ಹೊರಟ ಮೆರವಣಿಗೆ ಮಂಡ್ಯ ವೃತ್ತಕ್ಕೆ ಬಂದಾಗ ಅನ್ಯಕೋಮಿನ ಯುವಕರು ಕ್ಯಾತೆ ಎತ್ತಿದ್ದರು. ಈ ವೇಳೆ ಮೆರವಣಿಗೆಯ ದಾರಿಯನ್ನು ಬದಲಿಸಿದರು. ಈ ಸಂದರ್ಭದಲ್ಲೇ ಪ್ರತಿಭಟನಾ ಯುವಕರಿಗೆ ತಿಳಿ ಹೇಳಬಹುದಿತ್ತು. ಆದರೆ ಪೊಲೀಸರು ಆ ಕೆಲಸ ಮಾಡಿರಲಿಲ್ಲ.
ಪೊಲೀಸರು ಮತ್ತೆ ಮಸೀದಿ ಇರುವ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಿದ್ದರು. ಈ ವೇಳೆ ಜೈ ಗಣಪತಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದಾಗಿ ಪ್ರತಿಯಾಗಿ ಅಲ್ಲಾ-ಹು ಅಕ್ಬರ್ ಘೋಷಣೆ ಕೂಗಿ ಕಲ್ಲು ತೂರಿದ್ದಾರೆ.
ಕಳೆದ ಬಾರಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಯಾವ ದಾರಿಯಲ್ಲಿ ಮೆರವಣಿಗೆ ಹೋಗುತ್ತದೆ? ಎಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು ಎನ್ನುವುದು ತಿಳಿದಿರಬೇಕಿತ್ತು. ಎರಡನೆಯದಾಗಿ ಪ್ರತಿಭಟನಾ ಯುವಕರಿಗೆ ಪೊಲೀಸರು ತಿಳಿ ಹೇಳಬೇಕಿತ್ತು. ಪೊಲೀಸರು ಈ ಎರಡು ಕೆಲಸ ಸರಿಯಾಗಿ ಮಾಡಿದ್ದರೆ ಗಲಭೆ ಆಗುತ್ತಿರಲಿಲ್ಲ ಎಂಬ ಮಾತು ಕೇಳಿ ಬಂದಿದೆ.
ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ಅವರನ್ನು ಎತ್ತಗಂಡಿ ಮಾಡಲಾಗಿದೆ. ಇದರ ಜೊತೆ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ (Ashok Kumar) ಅವರನ್ನು ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ.
ನವದೆಹಲಿ: ಹನಿಟ್ರ್ಯಾಪ್‍ಗೆ ಒಳಗಾಗಿ ಸೂಕ್ಷ್ಮ ಮಾಹಿತಿ ಸೋರಿಕೆಯಾಗುವ ಭೀತಿ ಹಿನ್ನೆಲೆಯಲ್ಲಿ ಸಮವಸ್ತ್ರ ಧರಿಸಿದ ಫೋಟೊಗಳನ್ನು ಹಾಗೂ ರೀಲ್ಸ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Social Media) ಅಪ್ಲೋಡ್ ಮಾಡದಂತೆ ಕೇಂದ್ರೀಯ ಮೀಸಲು ಪಡೆಗಳಿಗೆ (Indian Army) ಸೂಚನೆ ನೀಡಲಾಗಿದೆ. ಅಲ್ಲದೇ ಅಪರಿಚಿತರೊಡನೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕಿಸದಂತೆ ಸೂಚಿಸಲಾಗಿದೆ.
ಮೀಸಲು ಪಡೆಯ ಹಲವು ಯೋಧರು ಸಮವಸ್ತ್ರದಲ್ಲಿ ಸೂಕ್ಷ್ಮ ಸ್ಥಳಗಳಿಂದ ವೀಡಿಯೋ ಮತ್ತು ಫೋಟೊಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದು ದುರ್ಬಳಕೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ (Intelligence Bureau) ಎಚ್ಚರಿಕೆ ನೀಡಿದೆ. ಎಚ್ಚರಿಕೆಯ ಬಳಿಕ ಭದ್ರತಾ ಪಡೆಗಳಿಗೆ ಆಯಾ ವಿಭಾಗದ ಮುಖ್ಯಸ್ಥರಿಂದ ಈ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?
ಸಿಆರ್‌ಪಿಎಫ್, ಬಿಎಸ್‍ಎಫ್, ಐಟಿಬಿಪಿ, ಸಿಐಎಸ್‍ಎಫ್ ಸೇರಿದಂತೆ ಎಲ್ಲಾ ಮೀಸಲು ಪಡೆಗಳಿಗೆ ಈ ಸೂಚನೆ ರವಾನಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಸೈನಿಕರು ಸಮವಸ್ತ್ರದಲ್ಲಿ ತಮ್ಮ ಪೋಟೋ ಹಾಗೂ ವೀಡಿಯೊಗಳನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಆಯಾ ವಿಭಾಗದ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.
ಸಾಮಾಜಿಕ ಮಾಧ್ಯಮ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು. ವ್ಯಕ್ತಿಯ ಪರಿಶೀಲನೆಯಿಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹಿತರನ್ನಾಗಿ ಮಾಡಿಕೊಳ್ಳಬಾರದು. ಈ ಸೂಚನೆಗಳ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
ಈ ಆದೇಶದ ಬೆನ್ನಲ್ಲೇ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ತಮ್ಮ ಪಡೆಗಳಿಗೆ ಪತ್ರ ಬರೆದಿದ್ದಾರೆ. ಯಾವುದೇ ಶಂಕಿತ ಅಥವಾ ಬಂಧಿತ ವ್ಯಕ್ತಿಯ ಅಪರಾಧ ಬಾಕಿ ಇರುವ ವಿಚಾರಣೆಗೆ ಸಂಬಂಧಿಸಿದ ಯಾವುದೇ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳಬಾರದು. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಗೂ ಸಂದೇ ರವಾನಿಸದಂತೆ ಸೂಚಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಸಿಐಎಸ್‍ಎಫ್‍ನಲ್ಲಿ ಹನಿಟ್ರ್ಯಾಪ್ ಪ್ರಕರಣವು ಗಮನಕ್ಕೆ ಬಂದಿತ್ತು. ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‍ನಲ್ಲಿ ಭದ್ರತೆಗೆ ನಿಯೋಜಿಸಲಾದ ಕಾನ್‍ಸ್ಟೆಬಲ್ ಪಾಕಿಸ್ತಾನದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದು ಕೆಲವು ವಿವರಗಳನ್ನು ಹಂಚಿಕೊಂಡಿರಬಹುದು ಎನ್ನಲಾಗಿದೆ. ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳು ತಮ್ಮನ್ನು ಹಿರಿಯ ಅಧಿಕಾರಿಗಳು ಎಂದು ಪರಿಚಯಿಸಿಕೊಳ್ಳುವ ಮೂಲಕ ವಿವಿಧ ಪಡೆಗಳ ನಿಯಂತ್ರಣ ಕೊಠಡಿಗಳಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ಆಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ರಹಸ್ಯವಾಗಿ ಸಿಎಂ ಭೇಟಿಯಾದ ಮತ್ತೊಬ್ಬ ಬಿಜೆಪಿ ಶಾಸಕ
ಮೈಸೂರು: ಅಪಘಾತದಲ್ಲಿ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೋ (Intelligence Bureau) ನಿವೃತ್ತ ಅಧಿಕಾರಿ ಮೃತಪಟ್ಟಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ (Manasagangothri) ಕ್ಯಾಂಪಸ್‍ನಲ್ಲಿ ನಡೆದಿದೆ.
ಆರ್.ಎಸ್. ಕುಲಕರ್ಣಿ (83) ಅಪಘಾತದಲ್ಲಿ ಮೃತಪಟ್ಟ ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿ. ಮಾನಸ ಗಂಗೋತ್ರಿ ಕ್ಯಾಂಪಸ್‍ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಕುಲಕರ್ಣಿ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಮಾಡಿ ಕೊಲೆ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಇದನ್ನೂ ಓದಿ: ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞ
ತೀವ್ರ ಗಾಯಗೊಂಡಿದ್ದ ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ (Hospital) ದಾಖಲಿಸಿದರೂ ಬದುಕುಳಿದಿಲ್ಲ. ಕುಲಕರ್ಣಿಯವರು ಸೇವೆಯಿಂದ ನಿವೃತ್ತರಾಗಿ 23 ವರ್ಷವಾಗಿತ್ತು. ಮೇಲ್ನೋಟಕ್ಕೆ ಇದೊಂದು ಹಿಟ್ ಅಂಡ್ ರನ್ ಪ್ರಕರಣವಾಗಿದ್ದು, ನಂಬರ್ ಪ್ಲೇಟ್ ಇಲ್ಲದ ಕಾರು ಇವರಿಗೆ ಡಿಕ್ಕಿಯಾಗಿದೆ. ಜಯಲಕ್ಷ್ಮೀ ಪುರಂ ಪೊಲೀಸ್ (Police) ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ
Live Tv
[brid partner=56869869 player=32851 video=960834 autoplay=true]
ಚಂಡೀಗಢ: ಪಂಜಾಬ್‌ನ (Panjab) ಐವರು ಬಿಜೆಪಿ ನಾಯಕರಿಗೆ (BJP Leader) ಜೀವ ಬೆದರಿಕೆ ಇರುವುದಾಗಿ ಗುಪ್ತಚರ ಇಲಾಖೆ ವರದಿ ಮಾಡಿದ ಬಳಿಕ ಐವರಿಗೆ Y-ಶ್ರೇಣಿ ಭದ್ರತೆ (Y-Category Security) ಕಲ್ಪಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಗುಪ್ತಚರ ಇಲಾಖೆ (Intelligence Bureau) ವರದಿ ಆಧರಿಸಿ ಗೃಹ ಸಚಿವಾಲಯವು (Home Affairs Ministry) ಅಮರಿಕ್ ಸಿಂಗ್ ಅಲಿವಾಲ್, ಹರ್ಜಿಂದರ್ ಸಿಂಗ್, ಹರ್ಚಂದ್ ಕೌರ್, ಪ್ರೇಮ್ ಮಿತ್ತಲ್ ಹಾಗೂ ಕಮಲದೀಪ್ ಸೈನಿ ಐವರು ನಾಯಕರಿಗೆ ಭದ್ರತೆ ಕಲ್ಪಿಸಿದೆ. ಈ ಐವರು ನಾಯಕರು ಪಂಜಾಬ್ (Punjab) ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಬಿಜೆಪಿ ಸೇರಿದ್ದರು. ಇದನ್ನೂ ಓದಿ: ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ
ಹೀಗಿರಲಿದೆ Y-ಶ್ರೇಣಿ ಭದ್ರತೆ: ವೈ ಶ್ರೇಣಿ ಭದ್ರತೆಯು ದೇಶದ 4ನೇ ಹಂತದ ಭದ್ರತಾ ಶ್ರೇಣಿಯಾಗಿದೆ. ವೈ-ಶ್ರೇಣಿಯಲ್ಲಿ ಒಬ್ಬರು ಅಥವಾ ಇಬ್ಬರು ಎನ್‌ಎಸ್‌ಜಿ ಕಮಾಂಡೋಗಳು (NSG commandos) ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕಳೆದ ಮೂರು ದಿನಗಳಿಂದ ಗೃಹ ಸಚಿವಾಲಯದ (MHA) ಅಧಿಕಾರಿಗಳು ಸಭೆ ನಡೆಸಿ ಪ್ರತ್ಯೇಕ ಕಂಟ್ರೋಲ್ ರೂಮ್ (Control Room) ತೆರೆದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿಎಫ್‌ಐ ಮೇಲೆ ದಾಳಿ ನಡೆಸಿದೆ. ಇಲ್ಲಿಯವರೆಗೆ ಕೆಲ ಜಾಗಗಳಲ್ಲಿ ಎನ್‌ಐಎ (NIA) ದಾಳಿ ನಡೆಸಿದ್ದರೆ, ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಇಡಿ ಜೊತೆ ಸೇರಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.
ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಿಎಫ್‌ಐ (PFI) ಭಾಗಿಯಾಗಿದೆ ಎಂಬ ಆರೋಪ ಈ ಕೇಳಿ ಬಂದಿತ್ತು. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪಕ್ಷಗಳು ಎಸ್‌ಡಿಪಿಐ (SDPI), ಪಿಎಫ್‌ಐ ನಿಷೇಧಿಸುವಂತೆ ಆಗ್ರಹಿಸಿದ್ದವು. ಇಲ್ಲಿಯವರೆಗೆ ಕೇಂದ್ರ ಸರ್ಕಾರ (Central Government) ಯಾವುದೇ ಕಠಿಣ ಕ್ರಮವನ್ನು ಕೈಗೊಂಡಿರಲಿಲ್ಲ. ಹತ್ಯೆಯಾದ ಸಂದರ್ಭದಲ್ಲಿ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಸರಿಯಾದ ಪ್ಲ್ಯಾನ್ ಮಾಡಿಕೊಂಡೇ ದೇಶಾದ್ಯಂತ ಪಿಎಫ್‌ಐ ನಾಯಕರ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: SDPI, PFI ಮೇಲೆ NIA, ED ದಾಳಿ – ಕರ್ನಾಟಕದಲ್ಲಿ 20, ದೇಶಾದ್ಯಂತ 106 ಮಂದಿ ಅರೆಸ್ಟ್
ಏನಿದು ಸಭೆಯ ರಹಸ್ಯ?
ಮೂರು ದಿನಗಳ ಹಿಂದೆಯಷ್ಟೇ ಇಡಿ, ಎನ್‌ಐಎ ಹಾಗೂ ಗುಪ್ತಚರ ಇಲಾಖೆ (Intelligence Bureau) ಅಧಿಕಾರಿಗಳೊಂದಿಗೆ ಗೃಹ ಸಚಿವಾಲಯವು ಸಭೆ ನಡೆಸಿದೆ. ಇಲ್ಲಿಯವರೆಗೆ ಯಾವೆಲ್ಲ ಪ್ರಕರಣ ದಾಖಲಾಗಿದೆ? ಈ ಸಂಘಟನೆಗೆ ಹಣ ಎಲ್ಲಿಂದ ಬರುತ್ತಿದೆ ಈ ಎಲ್ಲಾ ವಿಚಾರಗಳನ್ನು ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲಾಗಿತ್ತು. ಅದಕ್ಕಾಗಿ 6 ಕಂಟ್ರೋಲ್ ರೂಂಗಳನ್ನು ತೆರಲಾಗಿತ್ತು. ಪ್ರತಿ ರಾಜ್ಯದಲ್ಲಿರುವ ನಾಯಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಸಭೆ ನಡೆದ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು. ಪಿಎಫ್‌ಐ ಕಾರ್ಯಕರ್ತರು (PFI Workers) ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಬಹುತೇಕ ಕಡೆ ರಾತ್ರಿಯೇ ಕಾರ್ಯಚರಣೆ ನಡೆಸಿ ನಾಯಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ
ಆರೋಪ ಏನು?
ಪಶ್ಚಿಮ ಏಷ್ಯಾದ ದೇಶಗಳಾದ ಕತಾರ್, ಕುವೈತ್, ಸೌದಿ ಅರೇಬಿಯಾ, ಟರ್ಕಿಯಿಂದ ಈ ಸಂಘಟನೆಗಳಿಗೆ ಅಕ್ರಮವಾಗಿ ಹಣ ಬರುತ್ತಿದೆ ಎನ್ನವ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಭಾರತದಲ್ಲಿ ಯುವಕರ ತಲೆ ಕೆಡಿಸಿ ಭಯೋತ್ಪಾದಕ ಕೃತ್ಯ ಎಸಗಲು ಈ ಸಂಘಟನೆಗಳು ಪ್ರೋತ್ಸಾಹ ನೀಡುತ್ತಿವೆ. ವಿದೇಶದಿಂದ ಬಂದ ನಿಧಿಯನ್ನು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳಿಗೆ ಮಾತ್ರವಲ್ಲದೆ ಯುವಕರಲ್ಲಿ ಮತಾಂಧತೆಯನ್ನು ಬೆಳೆಸಲು ಬಳಸಲಾಗುತ್ತಿದೆ. ಈ ಸಂಘಟನೆಯು ಮುಸ್ಲಿಂ ಸಹೋದರತ್ವ ಹೊಂದಿರುವಂತಹ ಪ್ಯಾನ್-ಇಸ್ಲಾಮಿಸ್ಟ್ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಮಾಜಿ ಡಿಜಿಪಿ (DGP) ಬ್ರಿಜ್‌ಲಾಲ್, ಪಿಎಫ್‌ಐ ಅಪಾಯಕಾರಿ ಸಂಘಟನೆಯಾಗಿದ್ದು, ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಜೊತೆಗೆ ನೇರವಾಗಿ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿದೆ. ಈ ಸಂಘಟನೆಯ ಸದಸ್ಯರು ಭಾರತೀಯ ಮುಜಾಹಿದ್ದೀನ್‌ನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ದೇಶದಲ್ಲಿ ಅನೇಕ ದೊಡ್ಡ ಸ್ಫೋಟಗಳನ್ನು ನಡೆಸಲು ಇವರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ
ಭಾರತದಲ್ಲಿ ನಿಷೇಧಕ್ಕೆ ಒಳಗಾಗಿರುವ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(SIMI) ನಾಯಕರೇ ಪಿಎಫ್‌ಐ- ಎಸ್‌ಡಿಪಿಐ ಸಂಘಟನೆಯ ಪ್ರಮುಖ ನಾಯಕರಾಗಿದ್ದಾರೆ. ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದೇ ಇವರ ಮುಖ್ಯ ಉದ್ದೇಶ.
ಸದ್ಯ ಭಾರತದಲ್ಲಿರುವ ಶಿಯಾ, ಸುನ್ನಿ, ಸೂಫಿ, ದಿಯೋಬಂದ್ ಪಂಗಡದ ನಾಯಕರು ಪಿಎಫ್‌ಐ ಹಾಗೂ ಎಸ್‌ಡಿಪಿಐನಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಭಾರತ 75ನೇ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿದ್ದರೂ ಅದರ ನಡುವೆಯೇ ದಾಳಿಯ ಆತಂಕವನ್ನು ಎದುರಿಸುತ್ತಿದೆ. ಇಂಟೆಲಿಜೆನ್ಸ್ ಬ್ಯೂರೋ(ಐಬಿ) ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವಾರು ನಗರಗಳಲ್ಲಿ ದಾಳಿ ನಡೆಯಬಹುದಾಗಿ ಎಚ್ಚರಿಕೆಯನ್ನೂ ನೀಡಿದೆ. ಐಬಿ ನೀಡಿರುವ ಕೆಲವು ಪ್ರಮುಖ ಎಚ್ಚರಿಕೆಗಳು ಇಂತಿವೆ.
ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಧ್ವಜಾರೋಹಣ ಸಮಾರಂಭದಲ್ಲಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನಗಳನ್ನು ಬಳಸಬಹುದೆಂದು ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದಲ್ಲದೇ ಪಾಕಿಸ್ತಾನದಿಂದ ಪಂಜಾಬ್‌ನ ಗಡಿ ಮೂಲಕ ದೆಹಲಿಗೆ ಡ್ರೋನ್‌ಗಳು ಪ್ರವೇಶಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಬಂಧನಕ್ಕೊಳಗಾದ ಉಗ್ರರ ವಿಚಾರಣೆ ವೇಳೆ ಈ ವಿಷಯ ತಿಳಿದುಬಂದಿರುವುದಾಗಿ ಮಾಹಿತಿ ಲಭಿಸಿದೆ.
ಪಾಕಿಸ್ತಾನಿ ಉಗ್ರ ಸಂಘಟನೆಗಳು ಡ್ರೋನ್‌ಗಳ ಮೂಲಕ ಸಾಕಷ್ಟು ಶಸ್ತ್ರಾಸ್ತ್ಗಳು ಹಾಗೂ ಸ್ಫೋಟಕಗಳನ್ನು ಭಾರತದಲ್ಲಿ ನೆಲೆಸಿರುವ ಉಗ್ರರಿಗೆ ವಿತರಿಸಲು ಪ್ರಯತ್ನಿಸಿವೆ. ಇತ್ತೀಚೆಗೆ ಪಂಜಾಬ್‌ನಲ್ಲಿ ಬಿಎಸ್‌ಎಫ್ ಅಧಿಕಾರಿಗಳು ಅಂತಹ ಸರಬರಾಜನ್ನು ತಡೆದಿದ್ದಾರೆ. ಇದನ್ನೂ ಓದಿ: ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ
ರಾಷ್ಟ್ರ ರಾಜಧಾನಿಯಲ್ಲಿ ಒಬ್ಬ ವ್ಯಕ್ತಿಯಿಂದಲೇ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಕಳವಳ ವ್ಯಕ್ತವಾಗಿದೆ. ಒಬ್ಬ ವ್ಯಕ್ತಿ ದೊಡ್ಡ ವಾಹನ, ಹರಿತವಾದ ಆಯುಧ ಅಥವಾ ಶಸ್ತ್ರಾಸ್ತ್ರಳನ್ನು ಬಳಸಿ ದಾಳಿ ನಡೆಸುವ ಸಾಧ್ಯತೆ ಇದೆ. ಇಂತಹ ದಾಳಿಯನ್ನು ತಪ್ಪಿಸಲು ಎಚ್ಚರಿಕೆ ವಹಿಸಲು ಪೊಲೀಸರಿಗೆ ತಿಳಿಸಲಾಗಿದೆ.
ಭಯೋತ್ಪಾದಕರು ಹಲವು ತಂತ್ರಜ್ಞಾನಗಳನ್ನು ಬಳಸಿ ಗಾಳಿಪಟ ಅಥವಾ ಹಾರಾಡುವ ವಸ್ತುಗಳ ರೂಪದಲ್ಲಿ ಕೆಂಪು ಕೋಟೆಯ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕೆಂಪು ಕೋಟೆಯ ಬಳಿ ಹಾರಾಡುವ ವಸ್ತುಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸೂಚಿಸಲಾಗಿದೆ.
ನವದೆಹಲಿ: ಈ ಬಾರಿಯ 75ನೇ ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನವೇ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೇ ಉಗ್ರ ಸಂಘಟನೆಗಳಿಂದ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರೀಯ ಗುಪ್ತಚರ ಇಲಾಖೆ (ಐಬಿ) ಎಚ್ಚರಿಸಿದೆ.
ಲಷ್ಷರ್, ಜೆಇಎಂ ಮತ್ತು ಇತರೆ ಕೆಲವು ಭಯೋತ್ಪಾದನಾ ಸಂಘಟನೆಗಳಿಂದ ದಾಳಿಯ ಅಪಾಯವಿರುವ ಬಗ್ಗೆ ಐಬಿ 10 ಪುಟಗಳ ವರದಿ ನೀಡಿದ್ದು, ರೋಹಿಂಗ್ಯಾ, ಅಫ್ಘಾನಿಸ್ತಾನ ಹಾಗೂ ಸುಡಾನ್ ದೇಶದ ಹೆಚ್ಚಿನ ಜನರು ವಾಸಿಸುವ ದೆಹಲಿಯಲ್ಲಿ ಹದ್ದಿನಕಣ್ಣು ಇಡುವಂತೆ ಹಾಗೂ ಟಿಫಿನ್ ಬಾಂಬ್, ಸ್ಟಿಕ್ಕಿ ಬಾಂಬ್ ಮತ್ತು ವಿವಿಐಡಿ ಬೆದರಿಕೆಯನ್ನು ಎದುರಿಸಲು ಜಾಗರೂಕರಾಗಿರುವಂತೆ ಹೇಳಿದೆ. ಇದನ್ನೂ ಓದಿ: CommonwealthGames: ಬೆಳ್ಳಿಗೆ ಮುತ್ತಿಟ್ಟ ಭಾರತದ ವನಿತೆ ತುಲಿಕಾ ಮಾನ್
ಆಗಸ್ಟ್ 15 ರಂದು ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನ ಕೆಂಪುಕೋಟೆಗೆ ಪ್ರವೇಶಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಅದು ದೆಹಲಿ ಪೊಲೀಸರಿಗೆ ಸೂಚಿಸಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಮೇಲಿನ ದಾಳಿ, ಉದಯಪುರ ಹತ್ಯೆ ಹಾಗೂ ಅಮರಾವತಿಗಳಲ್ಲಿ ನಡೆದ ಘಟನೆಗಳನ್ನೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದೆಹಲಿ ಪೊಲೀಸರು ಬಹಳ ಜಾಗರೂಕತೆಯಿಂದ ಇರುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಆಗಸ್ಟ್ 15ರಂದು ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪ್ರವೇಶ ನಿಯಮಗಳನ್ನು ಕಠಿಣಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಬೇಹುಗಾರಿಕಾ ಸಂಸ್ಥೆಗಳು, ಉಗ್ರ ಗುಂಪುಗಳು ಹಾಗೂ ಜನನಿಬಿಡ ಸ್ಥಳಗಳಲ್ಲಿ ಅವುಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸುವಂತೆ ನಿರ್ದೇಶನ ನೀಡಲಾಗಿದೆ.
ಜೈಶ್ ಮತ್ತು ಲಷ್ಕರ್ ಉಗ್ರರಿಗೆ ಸಾಮಗ್ರಿಗಳ ಪೂರೈಕೆ ನೆರವು ನೀಡುವ ಮೂಲಕ ಪಾಕಿಸ್ತಾನದ ಐಎಸ್‌ಐ, ಭಯೋತ್ಪಾದನಾ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ದೊಡ್ಡ ನಾಯಕರು ಮತ್ತು ಪ್ರಮುಖ ಸ್ಥಳಗಳನ್ನು ಗುರಿ ಮಾಡುವಂತೆ ಜೆಇಎಂ ಹಾಗೂ ಎಲ್‌ಇಟಿ ಸಂಘಟನೆಗಳಿಗೆ ಸೂಚನೆ ನೀಡಲಾಗಿದೆ ಎಂದು ವರದಿ ಹೇಳಿದೆ.
Live Tv
[brid partner=56869869 player=32851 video=960834 autoplay=true]