Tag: Intelligence Department

  • ಭಾರತದ ವಿರುದ್ಧ ಸೈಬರ್ ದಾಳಿಗೆ ಚೀನಾ ಸಿದ್ಧತೆ

    ಭಾರತದ ವಿರುದ್ಧ ಸೈಬರ್ ದಾಳಿಗೆ ಚೀನಾ ಸಿದ್ಧತೆ

    ನವದೆಹಲಿ: ಭಾರತ ವಿರುದ್ಧ ಸೈಬರ್ ದಾಳಿ ನಡೆಸಲು ಚೀನಾ ಸಿದ್ಧತೆ ನಡೆಸುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

    ಚೀನಾ ಮಿಲಿಟರಿಯೂ ಭಾರತದ ರಕ್ಷಣಾ ಮಾಹಿತಿಗಳನ್ನು ಕದಿಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೂಲಗಳ ಪ್ರಕಾರ ಚೀನಾದ ಮಿಲಿಟರಿಯಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‍ಎ) ಯೂನಿಟ್ 61398 ಸೈಬರ್ ದಾಳಿಯನ್ನ ನಡೆಸಲು ಹೊಣೆಹೊತ್ತಿದ್ದು, ಈಗಾಗಲೇ ಭೌಗೋಳಿಕ ಸ್ಥಳಗಳು ಮಾಹಿತಿಯನ್ನು ಕಲೆ ಹಾಕುತ್ತಿದೆ ಎಂದು ಗುಪ್ತಚರ ಇಲಾಖೆ ಸರ್ಕಾರ ಮಾಹಿತಿ ನೀಡಿದೆ.

    ಶಾಂಘೈನಲ್ಲಿ ಬೀಡು ಬಿಟ್ಟಿರುವ ಹ್ಯಾಕರ್ ಗಳು ಚೀನಾದ ಗುಪ್ತಚರ ಇಲಾಖೆಯ ಸಿಬ್ಬಂದಿಗಳ ಸಹಾಯದಿಂದ ದೇಶದ ಕೈಗಾರಿಕೆ ಮತ್ತು ಸರ್ಕಾರಿ ಸಂಸ್ಥೆಗಳ ಸೂಕ್ಷ್ಮ ಮಾಹಿತಿಗಳನ್ನ ಹ್ಯಾಕ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

    ಭಾರತದ ಮೊದಲ ಪರಮಾಣು ಜಲಂತರ್ಗಾಮಿ ಐಎನ್‍ಎಸ್ ಅರಿಹಂತ್ ಸೋಮವಾರ ಪರೀಕ್ಷಾರ್ಥ ಗಸ್ತು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಮೂಲಕ ನೌಕಾ ಸೇನೆಗೆ ಆನೆ ಬಲ ಬಂದಂತಾಗಿದೆ. ಜೊತೆಗೆ ವಾಯು, ನೆಲ ಹಾಗೂ ಜಲಗಳಲ್ಲಿ ಪರಮಾಣು ಅಸ್ತ್ರಗಳ ಸಾಮರ್ಥ್ಯ ಬೆಳೆಸಿಕೊಂಡ ಜಾಗತಿಕ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಿಕೊಂಡಿದೆ. ಒಂದು ತಿಂಗಳ ಕಾಲ ನೀರಿನ ಒಳಗಡೆಯೇ ನಿಲ್ಲುವ ಸಾಮರ್ಥ್ಯವನ್ನು ಅರಿಹಂತ್ ಹೊಂದಿದೆ.

    ಭಾರತ ಅಮೆರಿಕದಿಂದ ಪಿ8ಐ ಯುದ್ಧ ವಿಮಾನವನ್ನು ಖರೀದಿಸಿದ್ದು, ಈ ವಿಮಾನ ನೀರಿನಲ್ಲಿ ಅಡಗಿರುವ ಜಲಂತರ್ಗಾಮಿಯನ್ನು ಪತ್ತೆ ಹಚ್ಚುವ ಸಾಮರ್ಥ್ಯ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಗೊತ್ತಾಗಿದ್ದು ಹೇಗೆ..?

    ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಗೊತ್ತಾಗಿದ್ದು ಹೇಗೆ..?

    ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತೆರೆಮರೆಯ ಕಸರತ್ತುಗಳನ್ನು ಸಿಎಂ ಕುಮಾರಸ್ವಾಮಿ ಹದ್ದಿನ ಕಣ್ಣಿಡುವ ಮೂಲಕ ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಮುಂದಾಗಿದ್ದಾರೆ.

    ಸಮ್ಮಿಶ್ರ ಸರ್ಕಾರದ ಪತಕ್ಕೆ ಬಿಜೆಪಿ ರೂಪಿಸಿದ್ದ ಆಪರೇಷನ್ ಕಮಲದ ಜಾಲವನ್ನು ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ಮಟ್ಟಹಾಕುವಲ್ಲಿ ತಮ್ಮದೇ ಆದ ತಂತ್ರಗಳನ್ನು ರೂಪಿಸಿಕೊಂಡಿರುವ ಬಗ್ಗೆ ಪಬ್ಲಿಕ್ ಟಿವಿಗೆ ಸಂಪೂರ್ಣ ಮಾಹಿತಿ ಲಭಿಸಿದೆ.

    ಗೃಹ ಇಲಾಖೆಯನ್ನು ಪರಮೇಶ್ವರ್ ಅವರಿಗೆ ನೀಡಿದ್ದರು ಸಹ ಗುಪ್ತಚರ ಇಲಾಖೆಯನ್ನು ಮಾತ್ರ ತಮ್ಮ ಬಳಿಯೇ ಸಿಎಂ ಕುಮಾರರಸ್ವಾಮಿ ಉಳಿಸಿಕೊಂಡಿದ್ದರು. ಇದೇ ಗುಪ್ತಚರ ಇಲಾಖೆಯ ಮೂಲಕ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದರು. ಇದಕ್ಕಾಗಿ ನುರಿತ ಪೊಲೀಸರ ಬಳಕೆ ಮಾಡಿಕೊಂಡಿದಲ್ಲದೇ, ನಿವೃತ್ತಿ ಹೊಂದಿದ ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂಬುದರ ಖಚಿತ ಮಾಹಿತಿ ಸಿಕ್ಕಿದೆ.ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಸಿಸಿಬಿಗೆ ಅಲೋಕ್ ಕುಮಾರ್ ವರ್ಗ

    ಈಗಾಗಲೇ ಅಧಿಕಾರಿಗಳು ಬಿಜೆಪಿ ನಾಯಕರ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದರು. ಹೀಗಾಗಿಯೇ ಕುಮಾರಸ್ವಾಮಿಯವರು ಇತ್ತೀಚೆಗೆ ಕಿಂಗ್‍ಪಿನ್‍ಗಳ ಮಾಹಿತಿಯನ್ನು ಪರೋಕ್ಷವಾಗಿ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಅಲ್ಲದೇ ಗುಪ್ತಚರ ಇಲಾಖೆಯು ಆಪರೇಷನ್ ಕಮಲದ ಕಿಂಗ್‍ಪಿನ್‍ಗಳು ಯಾರು? ಈ ಹಿಂದೆ ಅವರ ಮೇಲೆ ಯಾವ ಯಾವ ಕೇಸುಗಳೆ ಇವೆ? ಎಂಬುದನ್ನು ಸಹ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲಾಟರಿ, ಇಸ್ಪೀಟ್ ದಂಧೆ ಹಣದಲ್ಲಿ ಸರ್ಕಾರ ಬೀಳಿಸಲು ಯತ್ನ: ಸಿಎಂ ಎಚ್‍ಡಿಕೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ.

    ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

     

    ಏನಿದು ಫೋನ್ ಪದ್ದಾಲಿಕೆ?
    ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ.

    ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

    ಯಾರಿಗೆ ಅನುಮತಿ ಇದೆ?
    ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

    ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

    ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

    ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

    ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಸಹಾಯದಿಂದ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

    ಆಗಸ್ಟ್ 11 ರಂದು ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಆಗಸ್ಟ್ 15 ರಂದು ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಈ ಎರಡೂ ಕಾರ್ಯಕ್ರಮಗಳ ನಡುವೆ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಮೂಲದ ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಗೃಹ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ.

    ಉಗ್ರರ ಬಾರ್ಡರ್ ಆ್ಯಕ್ಷನ್ ಟೀಂ (ಬ್ಯಾಟ್) ತಂಡದ ಸೋಗಿನಲ್ಲಿ ಪಾಕಿಸ್ತಾನಿ ಸೈನಿಕರೇ ಭಾರತೀಯ ಯೋಧರ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದೆ.

    ಗಡಿಯಲ್ಲಿ ಈಗಾಗಲೇ ಸುಮಾರು 600ಕ್ಕೂ ಅಧಿಕ ಉಗ್ರರು ಮತ್ತು ಉಗ್ರರ ಸೋಗಿನಲ್ಲಿರುವ ಪಾಕಿಸ್ತಾನಿ ಸೈನಿಕರು ಗಡಿನಿಯಂತ್ರಣ ರೇಖೆ ದಾಟಲು ಕಾದು ಕುಳಿತಿದ್ದು, ಅವಕಾಶ ಸಿಕ್ಕ ತಕ್ಷಣವೇ ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

    ಭಾರತದ ಗಡಿ ಪ್ರದೇಶಗಳಾದ ಗುರೆಝ್ ಸೆಕ್ಟರ್ 67 ಮಂದಿ ಭಯೋತ್ಪಾದಕರು ಹಾಗೆಯೇ ಮಶಿಲ್ ಸೆಕ್ಟರ್ ನಲ್ಲಿ 96, ಕೆರನ್ ಸಕ್ಟರ್ ನಲ್ಲಿ 117, ಟ್ಯಾಂಗ್ಧರ್ ಸೆಕ್ಟರ್ ನಲ್ಲಿ 79, ಉರಿ ಸೆಕ್ಟರ್ 26, ರಾಂಪುರ ಸೆಕ್ಟರ್ 43, ಪೂಂಚ್ ಸೆಕ್ಟರ್ 43, ಕೃಷ್ಣಾ ಘಾಟಿ ಸೆಕ್ಟರ್ 21, ಬೀಂಬರ್ ಗ್ಯಾಲಿ ಸೆಕ್ಟರ್ 40, ನೌಶೇರಾ ಸೆಕ್ಟರ್ 6 ಹಾಗೂ ಸುಂದರ್ಬನಿ ಸೆಕ್ಟರ್ ನಲ್ಲಿ 16 ಮಂದಿ ಭಯೋತ್ಪಾದಕರು ಸೇರಿದಂತೆ ಒಟ್ಟು 600 ಮಂದಿ ಉಗ್ರರು ಒಳನುಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.

    ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸೇನೆಗೆ ಗಡಿಯಲ್ಲಿ ವ್ಯಾಪಕವಾಗಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

  • ದೇಶದೊಳಗೆ ನುಸುಳಿದ್ದಾರೆ 12 ಉಗ್ರರು: ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ

    ದೇಶದೊಳಗೆ ನುಸುಳಿದ್ದಾರೆ 12 ಉಗ್ರರು: ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ

    ಶ್ರೀನಗರ : 12 ಉಗ್ರಗಾಮಿಗಳ ತಂಡವೊಂದು ಜಮ್ಮು ಕಾಶ್ಮೀರ ಗಡಿ ಮೂಲಕ ಒಳನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

    ಮೌಲಾನ ಮಸೂದ್ ಅಜಾದ್ ಮುಖ್ಯಸ್ಥನಾಗಿರುವ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ 12 ಉಗ್ರಗಾಮಿಗಳ ಗುಂಪು ಗಡಿಪ್ರವೇಶ ಮಾಡಿದೆ. ಮಾಹಿತಿಗಳ ಪ್ರಕಾರ ರಂಜಾನ್ ಉಪವಾಸದ 17ನೇ ದಿನವಾದ ಜೂನ್ 2 ರಂದು ಶ್ರೀನಗರದ ಸೇನೆಯ ಮೇಲೆ ಫಿದಾಯಿನ್ ದಾಳಿ ನಡೆಸುವ ಸಾಧ್ಯತೆಯಿದೆ.

    ಉಗ್ರರ ದಾಳಿ ಸೂಚನೆ ಸಿಕ್ಕಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಎಲ್ಲಾ ಸ್ಥಳೀಯ ಹೋಟೆಲ್ ಮತ್ತು ವಸತಿ ಗೃಹಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿದ್ದು, ಜಮ್ಮು ಕಾಶ್ಮೀರ ಮತ್ತು ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ.

    ಕೇಂದ್ರ ಸರ್ಕಾರವು ಮೇ 16ರಂದು ರಂಜಾನ್ ಹಬ್ಬದ ಪ್ರಯುಕ್ತ ಕದನ ವಿರಾಮಕ್ಕೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಭಾರತೀಯ ಸೇನೆಯು ತನ್ನ ಹೆಚ್ಚಿನ ಪಡೆಯನ್ನು ಗಡಿ ಪ್ರದೇಶಗಳಿಂದ ಹಿಂತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಉಗ್ರರು ಸೇನೆಯ ಕಣ್ತಪ್ಪಿಸಿ ಗಡಿ ಪ್ರವೇಶ ಮಾಡಿದ್ದಾರೆಂದು ತಿಳಿದುಬಂದಿದೆ.

    ಕದನ ವಿರಾಮ ಜಾರಿಯ ನಂತರ ಗಡಿ ಪ್ರದೇಶದಲ್ಲಿ ಪದೇಪದೇ ಗುಂಡಿನ ಚಕಮಕಿ ನಡೆಯುತ್ತಿದೆ. ಕಳೆದ ಮಂಗಳವಾರ ಕುಪ್ವಾರ ಜಿಲ್ಲೆಯ ಪುಲ್ವಾಮ್ ಅರಣ್ಯ ಪ್ರದೇಶದಲ್ಲಿ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆದು ಹಲವು ಉಗ್ರರರನ್ನು ಸೇನೆ ಸದೆಬಡಿದಿತ್ತು. ಹಾಗೂ ಇದೇ ತಿಂಗಳು ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಕಾಳಗದಲ್ಲಿ ಹಿಜ್ಬುಲ್ ಸಂಘಟನೆಗೆ ಹೊಸದಾಗಿ ನೇಮಕವಾಗಿದ್ದ ಪ್ರೊಫೆಸರ್‍ನನ್ನು ಸೇನೆ ಹೊಡೆದು ಹಾಕಿತ್ತು.