Tag: Intelligence Report

  • ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

    ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

    ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮುಜುಗರವಾಗಿದೆ. ಇರಾನ್ ಮೇಲೆ ದಾಳಿ ನಡೆಸಿದ ಅಮೆರಿಕ ಸೇನೆ ಅಲ್ಲಿರುವ ಎಲ್ಲ ಪರಮಾಣು ಆಸ್ತಿಯನ್ನು ನಾಶ ಮಾಡಿರುವುದಾಗಿ ಟ್ರಂಪ್ ಹೇಳಿದ್ದರು. ಇದು ಇರಾನ್ (Iran) ಪರಮಾಣು ಕಾರ್ಯಕ್ರಮಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ, ಈ ನಡುವೆ ಬಂದಿರುವ ಗುಪ್ತಚರ ವರದಿಯೊಂದು ಟ್ರಂಪ್ ಅವರನ್ನು ಪೇಚಿಗೆ ಸಿಲುಕಿಸಿದೆ.

    Fordo Nuclear Facility

    ಗುಪ್ತಚರ ವರದಿಯ ಪ್ರಕಾರ, ಇರಾನ್ ದೇಶದ ಪರಮಾಣು ಕೇಂದ್ರಗಳ (Nuclear Sites) ಮೇಲೆ ಅಮೆರಿಕದ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ. ಬಿ2 ಬಾಂಬರ್ ದಾಳಿ ನಡೆಸಿದ್ದರೂ, ಅದರ ತೀವ್ರತೆ ಇರಾನ್ ದೇಶಕ್ಕೆ ನಷ್ಟವಾಗುವಂತದಲ್ಲ. ದಾಳಿ ನಡೆದಿದ್ದೇನೋ ಹೌದು, ಆದರೆ ಯಾವ ಉದ್ದೇಶಕ್ಕಾಗಿ ಅಮೆರಿಕ (America) ದಾಳಿಯನ್ನು ನಡೆಸಿತ್ತೋ ಅದು ಕೈಗೂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

    ಇದು ಇರಾನ್ ದೇಶದ ಪರಮಾಣು ಕಾರ್ಯಕ್ರಮಕ್ಕೆ ತಕ್ಕಮಟ್ಟಿನ ಹಿನ್ನಡೆ ಮಾತ್ರ ಎಂದು ವರದಿಯಲ್ಲಿ ಹೇಳಲಾಗಿದೆ. ಇರಾನ್‌ನಲ್ಲಿದ್ದ ಯುರೇನಿಯಂ ಸಂಗ್ರಹವನ್ನು ನಾಶ ಮಾಡವಲ್ಲೂ ಅಮೆರಿಕ ವೈಫಲ್ಯ ಕಂಡಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಇದು ಟ್ರಂಪ್ ಹೇಳಿಕೆಗೆ ತದ್ವಿರುದ್ಧವಾಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಶ್ವೇತಭವನ ಇದೊಂದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಈ ವರದಿಯನ್ನು ತಳ್ಳಿಹಾಕಿದೆ. ಇದನ್ನೂ ಓದಿ: ಅಭಿನಂದನ್‌ ವರ್ಧಮಾನ್‌ ಸೆರೆಹಿಡಿದಿದ್ದವ ಎನ್‌ಕೌಂಟರ್‌ನಲ್ಲಿ ಹತ್ಯೆ

    ಇಸ್ರೇಲ್ ಇರಾನ್ ಉಭಯ ದೇಶಗಳ ಸಂಘರ್ಷದಲ್ಲಿ ಅಮೆರಿಕ ಸೇನೆ ನೇರವಾಗಿ ಮಧ್ಯಪ್ರವೇಶಿಸುವ ಮೂಲಕ ಇರಾನ್ ಮೂರು ಅಣುಸ್ಥಾವರಗಳ ಮೇಲೆ ದಾಳಿ ನಡೆಸಿತ್ತು. ಆದರೆ ಯುದ್ದಕ್ಕೂ ಮೊದಲು ಇರಾನ್ ಬಳಿ ಇದ್ದ 400 ಕೆಜಿಯಷ್ಟು ಯುರೇನಿಯಂ ನಾಪತ್ತೆಯಾಗಿರುವುದಾಗಿ ಅಮೆರಿಕ ಉಪಾಧ್ಯಕ್ಷ ಜೆ.ಡಿ.ವಾನ್ಸ್ ತಿಳಿಸಿದ್ದಾರೆ. ಇದನ್ನೂ ಓದಿ: 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    Iran Nuclear Sites

    ಅಮೆರಿಕದ ಎಬಿಸಿ ನ್ಯೂಸ್ ಜೊತೆಗೆ ಮಾತನಾಡಿರುವ ವಾನ್ಸ್, ಕಳೆದ ವಾರ ಇರಾನ್‌ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ 6 ಬಂಕರ್ ಬಸ್ಟರ್‌ಗಳಿಂದ ದಾಳಿ ನಡೆಸುವ ಮುನ್ನವೇ ಸುಮಾರು 10 ಅಣ್ವಸ್ತ್ರಗಳನ್ನು ತಯಾರಿಸಬಲ್ಲಷ್ಟು 400 ಕೆಜಿ ಯುರೇನಿಯಂ ಅನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು ಎಂದು ವಿವರಿಸಿದ್ದಾರೆ. ಈ ನಡುವೆ ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ) ಜೊತೆಗಿನ ಸಹಕಾರವನ್ನು ಸ್ಥಗಿತಗೊಳಿಸುವ ಮಸೂದೆಯನ್ನು ಇರಾನ್ ಸಂಸತ್ತು ಅನುಮೋದಿಸಿದೆ. ಈ ಬಗ್ಗೆ ಸಮಿತಿಯ ವಕ್ತಾರ ಇಬ್ರಾಹಿಂ ರೆಜೈ ಮಾಹಿತಿ ನೀಡಿದ್ದು, ಹೊಸ ಮಸೂದೆಯ ಪ್ರಕಾರ, ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸುವುದು, ತಪಾಸಣೆಗೆ ಅವಕಾಶ ನೀಡುವುದು ಮತ್ತು ಐಎಇಎಗೆ ವರದಿಗಳನ್ನು ಸಲ್ಲಿಸುವುದು ಪರಮಾಣು ಸೌಲಭ್ಯಗಳ ಸುರಕ್ಷತೆಯನ್ನು ಖಾತರಿಪಡಿಸುವವರೆಗೆ ಸ್ಥಗಿತಗೊಳಿಸಲಾಗುತ್ತದೆ. ಆದರೆ, ಈ ನಿಟ್ಟಿನಲ್ಲಿ ಸಂಸತ್ತು ಇನ್ನೂ ಪೂರ್ಣ ಅಧಿವೇಶನದಲ್ಲಿ ಮಸೂದೆಯನ್ನು ಅನುಮೋದಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

    ಐಎಇಎ ಕ್ಯಾಮೆರಾಗಳು ಮತ್ತು ತಪಾಸಣೆಗಳು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಏಕೈಕ ವಿಶ್ವಾಸಾರ್ಹ ಮೂಲವಾಗಿದೆ. ಈಗ ಈ ಮಸೂದೆಯನ್ನು ಪರಿಚಯಿಸುವುದರೊಂದಿಗೆ, ಇರಾನ್ ಪಾರದರ್ಶಕತೆಯಿಂದ ಹಿಂದೆ ಸರಿಯುವತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.

  • 6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

    6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

    ನವದೆಹಲಿ: ಹರಿಯಾಣ ಮತ್ತು ಪಂಜಾಬ್‍ನ ಪ್ರತಿಭಟನಾ ನಿರತ ರೈತರು ಮಂಗಳವಾರ ದೆಹಲಿಯತ್ತ ಪ್ರಯಾಣ ಆರಂಭಿಸಲಿದ್ದಾರೆ. ಸುದೀರ್ಘ ಅವಧಿಯ ಪ್ರತಿಭಟನೆಗಾಗಿ ಸುಮಾರು ಆರು ತಿಂಗಳಿಗೆ ಬೇಕಾಗುವಷ್ಟು ದವಸ ಧಾನ್ಯಗಳು ಹಾಗೂ ಇಂಧನವನ್ನು ಸಂಗ್ರಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಖಾತ್ರಿ ಸೇರಿದಂತೆ ಹಲವು ಬೇಡಿಕೆಗಳಿಗೆ ಮಣಿಯುವಂತೆ ಕೇಂದ್ರವನ್ನು ಒತ್ತಾಯಿಸುವ ಉದ್ದೇಶದಿಂದ 200 ಕ್ಕೂ ಹೆಚ್ಚು ರೈತ ಸಂಘಗಳು `ದೆಹಲಿ ಚಲೋ’ (Delhi Chalo) ಮೆರವಣಿಗೆಗಾಗಿ ರಾಷ್ಟ್ರ ರಾಜಧಾನಿಗೆ ತೆರಳುತ್ತಿವೆ. ಪಂಜಾಬ್ ಒಂದರಿಂದಲೇ ರೈತರ ಪ್ರತಿಭಟನೆಗೆ (Farmers Protest) 1,500 ಟ್ರಾಕ್ಟರ್‌ಗಳು ಮತ್ತು 500 ವಾಹನಗಳಲ್ಲಿ ರೈತರು ತೆರಳುತ್ತಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಹರಿಯಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸೇರಿಕೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ (Intelligence Report) ಸಹ ಎಚ್ಚರಿಸಿದೆ.

    ಇತ್ತೀಚೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಸಭೆ ಯಾವುದೇ ನಿರ್ಣಯವಿಲ್ಲದೆ ಮುಕ್ತಾಯಗೊಂಡಿತ್ತು. ಇದಾದ ಬಳಿಕ ರೈತರು, ಪ್ರತಿಭಟನೆಯನ್ನು ಮುಂದುವರೆಸಲು ರೈತರು ನಿರ್ಧರಿಸಿದ್ದರು. ರೈತರ ಪ್ರತಿಭಟನೆಗೆ ಕರೆ ನೀಡುವ ಮುನ್ನ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ (ಕೆಎಂಎಸ್‍ಸಿ) ಹಿರಿಯ ನಾಯಕತ್ವ ಮತ್ತು ಕೋರ್ ಕಮಿಟಿ ಕೇರಳ, ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ತಮಿಳುನಾಡುಗಳಿಗೆ ಭೇಟಿ ನೀಡಿ ಆಯಾ ರಾಜ್ಯಗಳ ರೈತರಿಂದ ಬೆಂಬಲವನ್ನು ಕೋರಿತ್ತು.

    ರೈತರು ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರ, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡು ಕ್ಷಿಪ್ರ ಪ್ರತಿಭಟನೆ ನಡೆಸಲು ಯೋಜಿಸಿದ್ದಾರೆ. ಅಲ್ಲದೇ ಪ್ರಧಾನ ಮಂತ್ರಿ ಭವನ, ಗೃಹ ಸಚಿವರ ಭವನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ.

    ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್‍ಗಳು, ಕಬ್ಬಿಣದ ಮೊಳೆಗಳನ್ನು ರಸ್ತೆಗೆ ಹಾಕಿದ್ದಾರೆ. ಇನ್ನೂ ಈ ವಿಚಾರವಾಗಿ ಬಲಪ್ರಯೋಗ ಅಂತಿಮ ಮಾರ್ಗವಾಗಬೇಕು ಎಂದು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಹೇಳಿದೆ.

  • ಪ್ರಧಾನಿ, ಗೃಹ ಸಚಿವರ ನಿವಾಸದ ಮುಂದೆ ರೈತರ ದೀಢಿರ್ ಪ್ರತಿಭಟನೆ ಸಾಧ್ಯತೆ

    ಪ್ರಧಾನಿ, ಗೃಹ ಸಚಿವರ ನಿವಾಸದ ಮುಂದೆ ರೈತರ ದೀಢಿರ್ ಪ್ರತಿಭಟನೆ ಸಾಧ್ಯತೆ

    – ರೈತ ಹೋರಾಟ ಗಂಭೀರತೆ ಬಗ್ಗೆ ಗುಪ್ತಚರ ಇಲಾಖೆ ವರದಿ

    ನವದೆಹಲಿ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ (Farmers Protest) ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

    ಸಣ್ಣ ಸಣ್ಣ ಗುಂಪುಗಳಲ್ಲಿ ದೆಹಲಿಗೆ ಆಗಮಿಸುತ್ತಿರುವ ರೈತರು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ಕೇಂದ್ರ ಸಚಿವರ ಜೊತೆಗಿನ ಮಾತುಕತೆ ವಿಫಲವಾದ ಬಳಿಕ ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ಗುಪ್ತಚರ ಇಲಾಖೆ ವರದಿ (Intelligence Report) ಬಿಡುಗಡೆ ಮಾಡಿದೆ. ವರದಿ ಪ್ರಕಾರ ಪಂಜಾಬ್ ಒಂದರಿಂದಲೇ 1500 ಟ್ರ್ಯಾಕ್ಟರ್, 509 ವಿವಿಧ ವಾಹನಗಳ ಮೂಲಕ ರೈತರು ದೆಹಲಿಯತ್ತ ಹೊರಟಿದ್ದಾರೆ. ಹರಿಯಾಣದಿಂದ ಬರುವ ರೈತರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

    ಪ್ರತಿಭಟನಾಕಾರರು ಸುಮಾರು ಆರು ತಿಂಗಳಿಗೆ ಬೇಕಾಗುವ ಆಹಾರ ಧಾನ್ಯಗಳನ್ನು ಟ್ರ್ಯಾಕ್ಟರ್‍ನಲ್ಲಿ ಸಂಗ್ರಹ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್‍ಗಳನ್ನೇ ಶೆಲ್ಟರ್ ಮಾಡಿಕೊಂಡಿದ್ದಾರೆ. ಹೀಗಾಗಿ ಕಳೆದ ಬಾರಿಯಂತೆ ದೆಹಲಿಯ ಗಡಿಯಲ್ಲಿ ಸುದೀರ್ಘ ಧರಣಿ ನಡೆಯಬಹುದು. ಅಲ್ಲದೇ ಈ ಹೋರಾಟಕ್ಕೆ ದಕ್ಷಿಣ ರಾಜ್ಯಗಳ ನೆರವನ್ನು ಕೋರಲಾಗಿದೆ ಎಂದು ಇಲಾಖೆ ಎಚ್ಚರಿಸಿದೆ.

    ಮುಂದುವರಿದು ರೈತರು ಸಣ್ಣ ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರಗಳು, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡಿದ್ದು, ಕ್ಷಿಪ್ರ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದ್ದಾರೆ. ಅವರು ಪ್ರಧಾನ ಮಂತ್ರಿ ಭವನ, ಗೃಹ ಸಚಿವರ ಭವನದಂತಹ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಬಹುದೆಂದು ಎಚ್ಚರಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ಮೇಲೆ ಲೋಕಾಯುಕ್ತದಿಂದ ಎಫ್‌ಐಆರ್‌ ದಾಖಲು