Tag: Internal Reservation

  • ಶೇ.1ರಷ್ಟು ಮೀಸಲಾತಿಗೆ ಆಗ್ರಹ – ದೆಹಲಿಯ ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ

    ಶೇ.1ರಷ್ಟು ಮೀಸಲಾತಿಗೆ ಆಗ್ರಹ – ದೆಹಲಿಯ ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ

    – ಎಐಸಿಸಿ ಕಚೇರಿಗೆ ಮುತ್ತಿಗೆ ಯತ್ನ, ಪ್ರತಿಭಟನಾಕಾರರು ವಶಕ್ಕೆ

    ನವದೆಹಲಿ: ಒಳಮೀಸಲಾತಿ (Internal Reservation) ಅವೈಜ್ಞಾನಿಕ ವರ್ಗೀಕರಣ ಆರೋಪದ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಅಲೆಮಾರಿ ಸಮುದಾಯ (Nomadic Community) ಸಿಡಿದೆದ್ದಿದೆ. ಶೇ.1ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ದೆಹಲಿಯ (Delhi) ಜಂತರ್ ಮಂತರ್‌ನಲ್ಲಿ (Jantar Mantar) ಹೋರಾಟಗಾರರು ಪ್ರತಿಭಟನೆ ನಡೆಸಿದರು.

    ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಾಕಾರರು, ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಬಳಿಕ ಅಕ್ಬರ್ ರಸ್ತೆಯಲ್ಲಿರುವ ಹಳೆಯ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನವನ್ನೂ ನಡೆಸಿದರು. ಈ ವೇಳೆ ಉದ್ರಿಕ್ತ ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಹಾಕಿ ದೆಹಲಿ ಪೊಲೀಸರು ತಡೆದರು. ಬಳಿಕ ನಿಯೋಗವೊಂದು ಕಾಂಗ್ರೆಸ್ ನಾಯಕ ಅಭಿಷೇಕ್ ದತ್ ಅವರನ್ನು ಭೇಟಿಯಾಗಿ ಮನವಿ ಪತ್ರವನ್ನು ನೀಡಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ

    ನ್ಯಾ. ನಾಗಮೋಹನ್ ದಾಸ್ ತಮ್ಮ ವರದಿಯಲ್ಲಿ ಪರಿಶಿಷ್ಟ ಸಮುದಾಯವನ್ನ ಐದು ವಿಭಾಗಗಳಾಗಿ ಪರಿಗಣಿಸಿ ಮೀಸಲಾತಿ ಹಂಚಿಕೆ ಮಾಡಿದ್ದರು. ಆದರೆ ಸರ್ಕಾರ ಅದನ್ನ ಕೇವಲ ಮೂರು ವರ್ಗಕ್ಕೆ ಮಾತ್ರ ಸೀಮಿತಗೊಳಿಸಿದೆ. ಅಲೆಮಾರಿ ಸಮುದಾಯಕ್ಕೆ ನೀಡಲಾಗಿದ್ದ ಶೇ.1ರಷ್ಟು ಮೀಸಲಾತಿಯನ್ನ ತೆಗೆಯಲಾಗಿದ್ದು, ವರ್ಗ ‘ಸಿ’ಗೆ ವಿಲೀನಗೊಳಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ

    ಸಾಮಾಜಿಕ ನ್ಯಾಯದ ಬಗ್ಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮಾತನಾಡುತ್ತಾರೆ. ಆದರೆ ಬಲ್ಯಾಡ ಸಮುದಾಯಗಳ ಒತ್ತಡಕ್ಕೆ ಮಣಿದು ಅವರೇ ಅಲೆಮಾರಿಗಳಿಗೆ ಅನ್ಯಾಯ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಅನ್ವಯ, ನಾಗಮೋಹನ್ ದಾಸ್ ವರದಿ ಜಾರಿ ಮಾಡಿ ಶೇ.1ರಷ್ಟು ಮೀಸಲು ಕೊಡಬೇಕು ಎಂದು ಅಲೆಮಾರಿ ಸಮುದಾಯದ ನಾಯಕ ಮೂರ್ತಿ ಹೇಳಿದರು. ಇದನ್ನೂ ಓದಿ: ಸಾಲು ಸಾಲು ರಜೆ ಎಫೆಕ್ಟ್‌ – ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌, ಹೈರಾಣದ ಪೊಲೀಸರು!

    ಅಲೆಮಾರಿಗಳಿಗೆ ಅನ್ಯಾಯ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಹಬ್ಬ ಆಚರಿಸುತ್ತಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು ಹೋರಾಟ ಮಾಡುವ ರಾಹುಲ್ ಗಾಂಧಿ ಎಲ್ಲಿದ್ದಾರೆ? ನಮಗೆ ನ್ಯಾಯ ಸಿಗದಿದ್ದರೇ ಮುಂದಿನ ದಿನಗಳ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಅಲೆಮಾರಿಗಳ ಸಮುದಾಯದ ನಾಯಕ ಲೋಹಿತ್ ಹೇಳಿದರು. ಇದನ್ನೂ ಓದಿ: ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ

  • ಒಳಮೀಸಲಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ – ವಿಧಾನಸಭೆಯಲ್ಲಿ ಚರ್ಚೆಗೆ ಸಿಗದ ಅವಕಾಶ

    ಒಳಮೀಸಲಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ – ವಿಧಾನಸಭೆಯಲ್ಲಿ ಚರ್ಚೆಗೆ ಸಿಗದ ಅವಕಾಶ

    ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿ (Internal Reservation) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ (Legislative Assembly) ಅಧಿಕೃತವಾಗಿ ಘೋಷಿಸಿದ್ದಾರೆ.

    ಎಡಗೈ-ಬಲಗೈ ಸಮೂಹದ ಉಪ ಜಾತಿಗಳಿಗೆ ತಲಾ 6% ಕೊಟ್ಟಿದ್ದೇವೆ. ಅದೇ ರೀತಿ, ಸ್ಪೃಶ್ಯ ಸಮೂಹಗಳಿಗೆ ಆದಿ ಕರ್ನಾಟಕ/ದ್ರಾವಿಡ/ಆಂಧ್ರ ಉಪಜಾತಿಗಳನ್ನು ಸೇರಿಸಿ 5% ಮೀಸಲಾತಿ ಕೊಡಲು ತೀರ್ಮಾನಿಸಿದ್ದೇವೆ ಅಂತ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಅಂತ ಪಂಜಾಬ್ ಹೈಕೋರ್ಟ್ ಆದೇಶ ಇದೆ. 1.05 ಕೋಟಿ ಜನರ ಸಮೀಕ್ಷೆ ಮಾಡಲಾಗಿದೆ. ನಾಗಮೋಹನದಾಸ್ ಶಿಫಾರಸುಗಳನ್ನು ಕೆಲವು ಮಾರ್ಪಾಡುಗಳೊಂದಿಗೆ ಅಂಗೀಕರಿಸಿದ್ದೇವೆ. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿರಿಸಿಕೊಂಡು ಒಳಮೀಸಲಾತಿ ಒದಗಿಸಲಾಗಿದೆ ಅಂತ ವಿವರಣೆ ನೀಡಿದರು. ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚನೆ, ಒಳ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಿಸಿದ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಸರ್ಕಾರ ತೀರ್ಮಾನಿಸಿದೆ ಅಂತ ಸಿಎಂ ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು

    ಇನ್ನು, ಒಳಮೀಸಲಾತಿ ಚರ್ಚೆಗೆ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಸ್ಪೀಕರ್ ಅವಕಾಶ ನೀಡಲಿಲ್ಲ. ಸಿಎಂ ಪಲಾಯನವಾದ ಮಾಡ್ತಿದ್ದಾರೆ ಅಂತ ಅಶೋಕ್ ಹೇಳಿದರು. 42 ವರ್ಷದ ರಾಜಕೀಯದಲ್ಲಿ ಪಲಾಯನ ಮಾಡಿಲ್ಲ. ನಿಮ್ಮನ್ನು ಕಂಡ್ರೆ ನಮಗೆ ಭಯನೇ ಇಲ್ಲ ಅಂತ ಸಿಎಂ ಕೌಂಟರ್ ಕೊಟ್ಟು ಹೊರ ನಡೆದರು. ಆಗ, ಸಿದ್ದರಾಮಯ್ಯ ನಮ್ಮ ಸಿಎಂ ಅಲ್ಲ, ಡಿಕೆಶಿಯೇ ನಮ್ಮ ಸಿಎಂ ಅಂತ ಅಶೋಕ್ ಕಿಚಾಯಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

  • ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

    ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

    ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಒಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು, ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು (Mukhyamantri Chandru) ಹೇಳಿದರು.

    ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆ. ನ್ಯಾ. ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣದಿಂದ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆಯೂ ಸಹ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ದಲಿತ ಸಮುದಾಯ 3 ಗುಂಪಾಗಿ ವರ್ಗೀಕರಿಸಿ ಮೀಸಲಾತಿ ಹಂಚಿಕೆ ಜಾರಿಗೆ ಸಂಪುಟ ನಿರ್ಧಾರ

    ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲೀಕರಣಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆಗಳನ್ನು ತರಲು ಬಳಸಬೇಕಿದೆ ಎಂದು ಒತ್ತಾಯಿಸಿದರು.

    ಈ ಸಮಾಜದ ಮಕ್ಕಳಿಗೆ ವಿಶ್ವ ಗುಣಮಟ್ಟದ ಆಧುನಿಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವಂತಹ ಯೋಜನೆಗಳು ಜಾರಿಯಾಗಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು. ಇದನ್ನೂ ಓದಿ: ಪುನರ್ವಸತಿ ಕಾರ್ಯಕರ್ತರ ಗೌರವಧನ 1,000 ರೂ. ಹೆಚ್ಚಳ – ಲಕ್ಷ್ಮಿ ಹೆಬ್ಬಾಳ್ಕರ್‌

  • ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

    ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

    ಬೆಂಗಳೂರು: ಎಸ್‌ಸಿ (SC) ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ (Internal Reservation) ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಿ ಎಂದು ಶಾಸಕ ಬಿವೈ ವಿಜಯೇಂದ್ರ (BY Vijayendra) ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‌ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಜಾತಿಗಳವರು, ಎಸ್‌ಸಿ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡದಂತೆ ನೋಡಿಕೊಳ್ಳಿ ಎಂದು ತಿಳಿಸಿದರು. ಇದನ್ನೂ ಓದಿ: ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ

    ಎಲ್ಲ ವಿಷಯಗಳನ್ನೂ ವಿಮರ್ಶಿಸಿ, ಸಮರ್ಪಕ ತೀರ್ಮಾನವನ್ನು ರಾಜ್ಯದ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣಕರ್ತರು. ಗೊಂದಲಗಳು, ಸಮಸ್ಯೆಗೆ ಇತಿಶ್ರೀ ಹಾಡುವ ಕರ್ತವ್ಯ ಈ ರಾಜ್ಯದ ಮುಖ್ಯಮಂತ್ರಿಗಳಿಗೆ ಇದೆ. ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಾರೆ ಎಂಬ ಅಪೇಕ್ಷೆಯಲ್ಲಿ ನಮ್ಮ ಎಸ್‌ಸಿ ಸಮುದಾಯ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

    ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಒಳ ಮೀಸಲಾತಿ ವಿಷಯದಲ್ಲಿ ಯಾವುದೇ ಒಂದು ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರವು ಗೊಂದಲದಲ್ಲಿ ಇರುವುದನ್ನು ನಾವು ನೋಡಿದ್ದೇವೆ ಎಂದು ಟೀಕಿಸಿದರು. ಇದನ್ನೂ ಓದಿ: ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್

    ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ಪರಿಶಿಷ್ಟ ಜಾತಿಗೆ 15% ಇದ್ದುದನ್ನು 17%ಗೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ 3% ಇದ್ದುದನ್ನು ಏರಿಸಿ 7% ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು, ಅವರ ಜೊತೆಗಾರರು ಅದು ಅನುಷ್ಠಾನ ಆಗಿಲ್ಲ, ಬಿಜೆಪಿಯವರು ಕೇವಲ ಭಾಷಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    ನಾಗಮೋಹನ್‌ದಾಸ್ ವರದಿ ಅಂಶಗಳು ಏನಿದೆಯೋ ಅದನ್ನೇ ಬಿಜೆಪಿ ಈ ಹಿಂದೆ ಜಾರಿ ಮಾಡಿತ್ತು. ಸಿದ್ದರಾಮಯ್ಯನವರು ಇವತ್ತು ಸಚಿವ ಸಂಪುಟದ ವಿಶೇಷ ಸಭೆ ಕರೆದಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದನ್ನೇ ಇವರೂ ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮುಂದಿನ ಬಾರಿ ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡುತ್ತೇವೆ – ಮತದಾರ ಅಧಿಕಾರ್ ರ‍್ಯಾಲಿಯಲ್ಲಿ ತೇಜಸ್ವಿ ಯಾದವ್ ಘೋಷಣೆ

  • ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    – ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇಲ್ಲ
    – ಅಗತ್ಯವಿರುವ ಕಡೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ
    – ಮೀಸಲಾತಿ ವಿವಾದ ಮುಗಿದ ತಕ್ಷಣವೇ ಹುದ್ದೆಗಳ ಭರ್ತಿ

    ಬೆಂಗಳೂರು: ಒಳಮೀಸಲಾತಿ (Internal Reservation) ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharan Prakash Patil) ವಿಧಾನ ಪರಿಷತ್‌ನಲ್ಲಿ ಆಶ್ವಾಸನೆ ನೀಡಿದರು.

    ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಮುಂದಿನ ವಿಶೇಷ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ

    ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಯಾವುದೇ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದಂತೆ ಮುಖ್ಯಮಂತ್ರಿಯವರು ಸೂಚನೆ ಕೊಟ್ಟಿದ್ದಾರೆ. ಅಲ್ಲಿಯವರೆಗೂ ನಾವು ಏನು ಮಾಡಲೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ವೈದ್ಯಕೀಯ ಕಾಲೇಜುಗಳಲ್ಲಿ (Medical College) ಒಟ್ಟು 21,860 ಹುದ್ದೆಗಳಿವೆ. ಇದರಲ್ಲಿ 9,413 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 12,447 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳ ವಿವರ ನೀಡಿದರು. ಹುದ್ದೆಗಳು ಖಾಲಿ ಇದ್ದರೂ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಇಲ್ಲವೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎನ್‌ ರಾಜಣ್ಣ ಏನು ತಪ್ಪು ಹೇಳಿದ್ದಾರೆ – ಪುತ್ರ ರಾಜೇಂದ್ರ ಪಶ್ನೆ

    ಅಗತ್ಯವಿರುವ ಕಡೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಮತ್ತು ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಸ್ಥರಿಗೂ ನಿರ್ದೇಶನ ನೀಡಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ಮತ್ತಿತರ ಕೆಲವು ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿಗಳ ಕೊರತೆ ಇತ್ತು. ಈಗಾಗಲೇ ಅದನ್ನು ಭರ್ತಿ ಮಾಡಿದ್ದೇವೆ. ಯಾವುದೇ ಕಾಲೇಜು ಇಲ್ಲವೇ ಆಸ್ಪತ್ರೆಗಳಲ್ಲಿ ಸಮಸ್ಯೆ ಎದುರಾಗಿಲ್ಲ. ಹಾಗೊಂದು ವೇಳೆ ಸಮಸ್ಯೆ ಇರುವುದನ್ನು ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್‌

  • ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

    ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

    ಬೆಂಗಳೂರು: ಒಳಮೀಸಲಾತಿ (Internal Reservation) ವರ್ಗೀಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾ.ನಾಗಮೋಹನ್ ದಾಸ್ (Nagmohan Das) ವರದಿ ಸಂಪುಟದಲ್ಲಿ ಮಂಡನೆಯಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ದೆಹಲಿ ನಂತರದ ದೊಡ್ಡ ಮೆಟ್ರೋ ಸಂಚಾರ ಜಾಲ: ತೇಜಸ್ವಿ ಸೂರ್ಯ

    ಕ್ಯಾಬಿನೆಟ್‌ನಲ್ಲಿ ವರದಿ ಸ್ವೀಕಾರ ಮಾಡಿ ಯಾವುದೇ ಚರ್ಚೆ ನಡೆಸದೇ ಎಲ್ಲ ಸಚಿವರಿಗೂ ವರದಿ ಪ್ರತಿ ನೀಡಲು ಸೂಚಿಸಲಾಗಿದೆ. ಅಲ್ಲದೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಆ ಸಭೆಯಲ್ಲಿ ಮೀಸಲಾತಿ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಸಂಪುಟ ಸಭೆಯಲ್ಲಿ ಮಂಡನೆಯಾದ ನ್ಯಾ.ನಾಗಮೋಹನ್ ದಾಸ್ ಶಿಫಾರಸ್ಸಿನ ಪ್ರಕಾರ 5 ವರ್ಗಗಳನ್ನ ಗುರುತಿಸಿದ್ದು, ಪ್ರವರ್ಗ ಎ ವರ್ಗಕ್ಕೆ 1% ಮೀಸಲಾತಿ, ಪ್ರವರ್ಗ ಬಿ (ಎಡ)ಗೆ 6% ಮೀಸಲಾತಿ, ಪ್ರವರ್ಗ ಸಿ(ಬಲ)ಗೆ 5%, ಪ್ರವರ್ಗ ಡಿಗೆ 4%, ಪ್ರವರ್ಗ ಇಗೆ 1% ಮೀಸಲಾತಿಗೆ ಶಿಫಾರಸು ಮಾಡಲಾಗಿದೆ. ಆದರೆ ಈ ವಿಚಾರದಲ್ಲಿ ಸಂಪುಟದ ಎಸ್‌ಸಿ ಸಮುದಾಯದ ಸಚಿವರಲ್ಲೇ ಭಿನ್ನಾಭಿಪ್ರಾಯ ಇದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.ಇದನ್ನೂ ಓದಿ: ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು

  • ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

    ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

    ಬೆಂಗಳೂರು: ಒಳಮೀಸಲಾತಿ (Internal Reservation) ಕೊಡುವ ಸಂಬಂಧ ನ್ಯಾ. ನಾಗಮೋಹನ್ ದಾಸ್ ಆಯೋಗ ಇವತ್ತು ವರದಿ ಕೊಡ್ತಿದ್ದು, ಮಾದಿಗರಿಗೆ ನ್ಯಾಯ ಸಿಗೋ ವಿಶ್ವಾಸ ಇದೆ. ಮಾದಿಗರಿಗೆ 7% ಆದರೂ ಒಳಮೀಸಲಾತಿ ಕೊಡಬೇಕು ಎಂದು ಮಾಜಿ ಸಚಿವ ಆಂಜನೇಯ (H Anjaneya) ಒತ್ತಾಯ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವರದಿ ಕೊಡುತ್ತಿರುವುದರಿಂದ ಆತಂಕ, ಕುತೂಹಲ, ಸಂತೋಷ ಎಲ್ಲಾ ಆಗುತ್ತಿದೆ. ಒಳಮೀಸಲಾತಿ ಬೇಕು ಅಂತ 35 ವರ್ಷಗಳ ಹೋರಾಟ ಮಾಡುತ್ತಿದ್ದೇವೆ. ಮಾದಿಗರಿಗೆ ಸರಿಯಾದ ಸವಲತ್ತು ಇದೂವರೆಗೂ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್ ಒಳಮೀಸಲಾತಿ ಕೊಡಿ ಅಂತ ಆದೇಶ ಬಂದ ಮೇಲೆ ನಮಗೆ ಧೈರ್ಯ ಬಂತು. ಈವರೆಗೂ ನಮಗೆ ಸಿಗೋ ಸವಲತ್ತು ಸಿಕ್ಕಿಲ್ಲ. ಮಾದಿಗರು ಅವಕಾಶದಿಂದ ವಂಚನೆ ಆಗುತ್ತಿದ್ದಾರೆ. ಒಳಮೀಸಲಾತಿಯ ವರದಿ ಕೊಡುತ್ತಿದ್ದಾರೆ. ಒಳಮೀಸಲಾತಿ ವರದಿ ಕೊಡ್ತಿರೋದ್ರಿಂದ ಮಾದಿಗರು ಬದುಕಬಹುದು ಎಂಬ ನಂಬಿಕೆ ಬಂದಿದೆ ಎಂದರು. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

    ನಾವು ಅಸ್ಪೃಶ್ಯರು ಅಂತ ಸರಿಯಾಗಿ ಸರ್ಕಾರದ ಸವಲತ್ತು ಸಿಕ್ಕಿರಲಿಲ್ಲ. ಸಿದ್ದರಾಮಯ್ಯ (Siddaramaiah) ಸಾಮಾಜಿಕ ನ್ಯಾಯದ ಹರಿಕಾರ ಒಳಮೀಸಲಾತಿ ಜಾತಿಗೆ ಆಯೋಗ ರಚನೆ ಮಾಡಿದ್ರು. ಆಯೋಗ ರಾಜ್ಯಾದ್ಯಂತ ಸಮೀಕ್ಷೆ ಮಾಡಿದೆ. ವರದಿ ಚೆನ್ನಾಗಿ ಇದೆ ಅನ್ನೋ ವಿಶ್ವಾಸ ಇದೆ. ನಮಗೆ ಸಿಗಬೇಕಾದ ಸವಲತ್ತು ಸಿಗೋ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ

    ಸದಾಶಿವ ಆಯೋಗ ಎಡ ಸಮುದಾಯಕ್ಕೆ 6% ಒಳಮೀಸಲಾತಿ ಕೊಟ್ಟಿದ್ದರು. ಮಾಧುಸ್ವಾಮಿ ಅವರು 6% ಕೊಡಬೇಕು ಅಂತ ಹೇಳಿದ್ರು. ಈಗ 7% ಮೀಸಲಾತಿಯಾದ್ರು ಮಾದಿಗರಿಗೆ ಸರ್ಕಾರ ಕೊಡಬೇಕು. 15% ಮೀಸಲಾತಿ ಇದ್ದಾಗ 6% ಶಿಫಾರಸು ಮಾಡಿದ್ರು. ಈಗ 17% ಮೀಸಲಾತಿ ಇದೆ. ಈಗ 7% ಆದ್ರು ಮೀಸಲಾತಿ ಎಡ ಸಮುದಾಯಕ್ಕೆ ಕೊಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ:  ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

  • ಕೂಡಲೇ ಒಳಮೀಸಲಾತಿ ಜಾರಿ ಮಾಡದಿದ್ರೆ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ: ಎ.ನಾರಾಯಣಸ್ವಾಮಿ

    ಕೂಡಲೇ ಒಳಮೀಸಲಾತಿ ಜಾರಿ ಮಾಡದಿದ್ರೆ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ: ಎ.ನಾರಾಯಣಸ್ವಾಮಿ

    ಬೆಂಗಳೂರು: ಕೂಡಲೇ ಒಳಮೀಸಲಾತಿ ಜಾರಿ ಮಾಡದೆ ಇದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾದಿಗರಿಂದ ಅಸಹಕಾರ ಚಳವಳಿ ನಡೆಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ (A Narayanaswamy) ಎಚ್ಚರಿಕೆ ನೀಡಿದ್ದಾರೆ.

    ಒಳಮೀಸಲಾತಿ (Internal Reservation) ಜಾರಿ ಮಾಡಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಬೆಂಗಳೂರು ಒಕ್ಕೂಟದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಶುಕ್ರವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಮಾದಿಗರು ಇನ್ನು ಕಾಯುವುದಿಲ್ಲ. ಓಲೈಕೆಗೆ ಬಗ್ಗುವುದಿಲ್ಲ. ಮುಂದಿನ ಚುನಾವಣೆವರೆಗೆ ಕಾಯುವುದಿಲ್ಲ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಹೋರಾಟ ನಡೆಯುತ್ತಿದೆ. ಪಕ್ಷಭೇದ ಮರೆತು ಹೋರಾಟ ನಡೆಯುತ್ತಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಬಿಹಾರ ಕರಡು ಮತದಾರರ ಪಟ್ಟಿ ಔಟ್‌

    ಇದು ಬಿಜೆಪಿಯ ಹೋರಾಟವಲ್ಲ. ಕರ್ನಾಟಕ ಸರ್ಕಾರಕ್ಕೆ ಕುರ್ಚಿ ಪ್ರಮುಖವೇ ಅಥವಾ ಸಮಸ್ಯೆಗಳು ಮುಖ್ಯವೇ? ಮಾದಿಗರಿಗೆ ನ್ಯಾಯ ಲಭಿಸಿಲ್ಲ. ನಮ್ಮ ಸಹನೆಯ ಕಟ್ಟೆ ಒಡೆದಿದೆ. ಇನ್ನು ಕಾಯಲಾಗದು. ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌| ಬೆಂಗಳೂರಿನ ಎಫ್‌ಎಸ್‌ಎಲ್‌ಗೆ 25 ಮೂಳೆ ರವಾನೆ

    1976ರಿಂದ ಮಾದಿಗರಿಗೆ ಆದ ಅನ್ಯಾಯದ ವರದಿ ಕೊಡಿ ಎಂದರೆ ಮುಖ್ಯ ಕಾರ್ಯದರ್ಶಿ ಸಭೆ ಮಾಡುವುದಿಲ್ಲ. ಕೇವಲ ಜನಸಂಖ್ಯೆ ಆಧರಿಸಿ ಮೀಸಲಾತಿ ಕೊಡುವುದಲ್ಲ. ಸುಮಾರು 40 ವರ್ಷಗಳಿಂದ ಆದ ಅನ್ಯಾಯವನ್ನು ಪರಿಗಣಿಸಿ ಮೀಸಲಾತಿ ಕೊಡಬೇಕಿದೆ. ಅನೇಕ ದಶಕಗಳಿಂದ ಆದ ಅನ್ಯಾಯ ಪರಿಗಣಿಸಿ ಹೆಚ್ಚು ಮೀಸಲಾತಿ ಕೊಡದೆ ಇದ್ದರೆ ರಾಜ್ಯದ ಮಾದಿಗರು ಹೋರಾಟಕ್ಕೆ ಸನ್ನದ್ಧರಾಗುತ್ತಾರೆ ಎಂದಿದ್ದಾರೆ.

    ವಿಧಾನಸೌಧದ ಮೆಟ್ಟಿಲೇರಿದವರಿಗೆ ನಾಲಿಗೆ ಬಿದ್ದು ಹೋಗಿದೆ. ಮಾದಿಗರ ಪರವಾಗಿ ಮಾತನಾಡದ ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮತ ಕೇಳುತ್ತೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕ್‌ ಬೆಂಬಲಿಸಿದ ಟರ್ಕಿಗೆ ಶಾಕ್‌ – ಭಾರತೀಯ ಪ್ರವಾಸಿಗರ ಸಂಖ್ಯೆ ಭಾರೀ ಕುಸಿತ

    ಈ ದೇಶದ ಮಾದಿಗರಿಗೆ ಮೀಸಲಾತಿ ಕೊಡಬಾರದು ಎಂದಿದೆಯೇ? ಜಿಲ್ಲಾ ಪಂಚಾಯಿತಿ ಮತ್ತಿತರ ಸಂಸ್ಥೆಗಳ ಚುನಾವಣೆ ವೇಳೆ ನಾಳೆ, ನಾಳೆ ಮೀಸಲಾತಿ ಎನ್ನುತ್ತಾರೆ. ಸಂವಿಧಾನಕ್ಕೆ ಬೀಗ ಹಾಕಿ ತುರ್ತು ಪರಿಸ್ಥಿತಿ ಘೋಷಿಸಿ ಪ್ರಧಾನಿಯಾಗಿ ಮುಂದುವರೆಯಲು ನಿಮಗೆ ಅಧಿಕಾರ ಇತ್ತು. ಈ ರಾಜ್ಯದ, ದೇಶದ ಶೋಷಿತ ವರ್ಗದ ಅಸ್ಪೃಶ್ಯ ಮಾದಿಗರಿಗೆ ಸ್ವಾತಂತ್ರ್ಯ ನಂತರ ನಿರಂತರ ಅನ್ಯಾಯವಾಗಿದೆ. ಅನೇಕ ಮಾದಿಗರ ಮಕ್ಕಳು ಹಣವಿಲ್ಲದೇ ಎಂಬಿಬಿಎಸ್ ಮಾಡಲಾಗುತ್ತಿಲ್ಲ. ಇದೆಲ್ಲ ನಿಮಗೆ ಅರ್ಥವಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್

    ಮಾದಿಗರು ಎಲ್ಲ ಕಡೆ ಹಿಂದುಳಿದಿದ್ದಾರೆ. ಮುಖ್ಯಮಂತ್ರಿಗಳ ಸಮಾಜವಾದ ಎಲ್ಲಿ ಹೋಗಿದೆ? ಎಲ್ಲರಿಗೂ ನ್ಯಾಯ ಕೊಡುವುದಾಗಿ ಹೇಳುವ ಸಮಾಜವಾದಿ ಮುಖ್ಯಮಂತ್ರಿ ಯಾವುದರ ಚಾಂಪಿಯನ್. ಎಲ್ಲ ರಂಗಗಳಲ್ಲೂ ಹಿಂದುಳಿದ ಮಾದಿಗರಿಗೆ ಒಂದೇ ಒಂದು ಯೋಜನೆ ನೀಡಿಲ್ಲ. ಅಸಹಕಾರ ಚಳವಳಿ ಒಂದೇ ಅಲ್ಲ. ಸರ್ಕಾರವನ್ನು ಕಿತ್ತೊಗೆಯುವ ಚಳವಳಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

    ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ಮಹದೇವಪ್ಪ, ಪರಮೇಶ್ವರ್ ವಿರುದ್ಧವೂ ಕಿಡಿಕಾರಿದ ಅವರು, ಈ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡದೇ ಹೋದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

  • ಒಳಮೀಸಲಾತಿ ಜಾರಿಗೆ ಆಗ್ರಹ; ನಾಳೆ ಬೆಂಗಳೂರು, ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ: ನಾರಾಯಣಸ್ವಾಮಿ

    ಒಳಮೀಸಲಾತಿ ಜಾರಿಗೆ ಆಗ್ರಹ; ನಾಳೆ ಬೆಂಗಳೂರು, ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ: ನಾರಾಯಣಸ್ವಾಮಿ

    ಬೆಂಗಳೂರು: ರಾಜ್ಯದ ಸುಮಾರು 26 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಾಳೆ ಮಾದಿಗ ಸಮುದಾಯಗಳಿಂದ ಒಳಮೀಸಲಾತಿಗೆ (Internal Reservation) ಆಗ್ರಹಿಸಿ ಹೋರಾಟ ನಡೆಯಲಿದೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ (A Narayanaswamy) ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗರ ಸಂಘಟನೆಗಳ ಸಭೆ ನಡೆಸಿ ಎಲ್ಲ ಜಿಲ್ಲೆಗಳಲ್ಲಿ ಹೋರಾಟಕ್ಕೆ ಸಿದ್ಧತೆ ನಡೆದಿದೆ. ವಿದ್ಯಾರ್ಥಿಗಳು ಸೇರಿದಂತೆ ಸಮುದಾಯದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಆಗಸ್ಟ್ ಅಂತ್ಯದಿಂದ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿ: ಪರಮೇಶ್ವರ್

    ಸದನ ಮುಗಿಯುವ ಒಳಗೆ ಒಳ ಮೀಸಲಾತಿ ಜಾರಿಗೊಳಿಸದೇ ಇದ್ದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲಿನ ಅನುಮಾನ ದುಪ್ಪಟ್ಟಾಗಲಿದೆ. ಮಾದಿಗರನ್ನು ತಾತ್ಸಾರವಾಗಿ ನೋಡುವುದು ನಿಮ್ಮ ನಿರ್ಲಕ್ಷ್ಯ. ನಾಗಮೋಹನ್‌ದಾಸ್ ವರದಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಮಾದಿಗ ಹೋರಾಟದ ಬಿಸಿ ಕಡಿಮೆ ಮಾಡಲು ಹೇಳಿಕೆಗಳನ್ನು ಕೊಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು

    ಹೋರಾಟಕ್ಕೆ ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ ಮೊದಲಾದವರು ಅವಶ್ಯಕತೆ ಇಲ್ಲ. ಹೋರಾಟಕ್ಕೆ ಸಹಕರಿಸದಿರಿ ಎಂದು ಹೇಳಿಕೆ ಕೊಡುತ್ತಿದ್ದಾರೆ. ಒಳಮೀಸಲಾತಿ ಗೊಂದಲಕ್ಕೆ ತಾವೇ ಕಾರಣ ಎಂದು ಕಾಂಗ್ರೆಸ್ಸಿನವರು ಒಪ್ಪಿಕೊಂಡಿಲ್ಲ. ಒಳಮೀಸಲಾತಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದವ್ರಿಗೆ ಶಿಕ್ಷೆ ಆಗ್ಬೇಕು: ರಾಕ್‍ಲೈನ್ ವೆಂಕಟೇಶ್

    ನಾಳೆ ನಡೆಯುವ ಹೋರಾಟದಲ್ಲಿ ಎಲ್ಲ ಮಾದಿಗ ಬಂಧುಗಳು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಹೋರಾಟದಲ್ಲಿ ಮಾದಿಗ ಸಮುದಾಯದ ಎಲ್ಲ ಉಪಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದು ಸಮುದಾಯದ ಶಕ್ತಿ ಪ್ರದರ್ಶನದಂತಿರಲಿ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಕೋರಿದ್ದಾರೆ.

  • ಬೆಂಗ್ಳೂರಲ್ಲಿ ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು? – ನ್ಯಾ.ನಾಗಮೋಹನ್ ದಾಸ್

    ಬೆಂಗ್ಳೂರಲ್ಲಿ ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು? – ನ್ಯಾ.ನಾಗಮೋಹನ್ ದಾಸ್

    – ಮನೆ ಮನೆ ಸಮೀಕ್ಷೆ ಮೇ 25ರ ವರೆಗೆ ವಿಸ್ತರಣೆ

    ಬೆಂಗಳೂರು: ನಗರದಲ್ಲಿ (Bengaluru) ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು ಎಂದು ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾ. ಹೆಚ್.ಎನ್.ನಾಗಮೋಹನ್ ದಾಸ್ (Nagamohan Das ) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಒಳ ಮೀಸಲಾತಿ ಜಾರಿ ವಿಚಾರವಾಗಿ ದತ್ತಾಂಶ ಸಂಗ್ರಹಕ್ಕೆ ನಡೆಯುತ್ತಿದೆ. ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.‌ ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷೆ ಮೇ 25ರ ತನಕ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಳ ಮೀಸಲಾತಿಗಾಗಿ ಇಂದಿನಿಂದ ಸಮೀಕ್ಷೆ, 2 ತಿಂಗಳಲ್ಲಿ ಜಾರಿ – ಯಾವ ಹಂತದಲ್ಲಿ ಏನು?

    73.72% ಮನೆ ಮನೆ ಸಮೀಕ್ಷೆ ಪೂರ್ಣ
    ವಿಶೇಷ ಶಿಬಿರದ ದಿನಾಂಕ ಮರು ನಿಗದಿ ಮಾಡಿದ್ದು, ಮೇ 26ರಿಂದ ಮೇ 28ರ ತನಕ ನಡೆಯಲಿದೆ. ಅನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ದಿನಾಂಕ ಮೇ 19ರಿಂದ ಮೇ 28ರ ತನಕ ನಿಗದಿ ಮಾಡಿದ್ದು, ಇಲ್ಲಿ ತನಕ 73.72% ಮನೆ ಮನೆ ಸಮೀಕ್ಷೆ ಪೂರ್ಣ ಆಗಿದೆ.

    ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು?
    ಬೆಂಗಳೂರಿನಲ್ಲಿ ಕೇವಲ 36% ಮಾತ್ರ ಸಮೀಕ್ಷೆ ಆಗಿದ್ದು, ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ. ಅವರ ಮಾಹಿತಿಯನ್ನೇ ನೀಡಲ್ಲ ಎಂದರೆ ಅವರಿಗೆ ನೀರು, ಕರೆಂಟ್ ಕಟ್ ಮಾಡಿದರೆ ಹೇಗೆ? ಅವರು‌ ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು? ಈಗಾಗಲೇ ಬಿಬಿಎಂಪಿಗೆ ಸೂಚನೆ ಕೊಟ್ಟಿದ್ದೇವೆ. ಸಮೀಕ್ಷೆ ಸಹಕರಿಸಲು ಎಚ್ಚರಿಕೆ ಕೊಡುವಂತೆ ಲಿಖಿತವಾಗಿ ಬಿಬಿಎಂಪಿಗೆ ಸೂಚಿಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲು‌ ಸಹ ಸೂಚಿಸಿದ್ದೇವೆ. ಖಾಸಗಿ ಶಾಲೆಯ ಶಿಕ್ಷಕರನ್ನ ಸಮೀಕ್ಷೆಗೆ ನೇಮಿಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಕರ್ನಾಟಕದಲ್ಲಿ 2011ರ ಜನಗಣತಿ ಪ್ರಕಾರ ಎಸ್‌ಸಿ ಸಮುದಾಯದಲ್ಲಿ 101 ಉಪಜಾತಿಗಳಿವೆ. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿದ್ದಾರೆ. ಸಮೀಕ್ಷೆಗಳು ಮುಗಿದ ಬಳಿಕ ದತ್ತಾಂಶ ಸಂಗ್ರಹದ ಅಧ್ಯಯನ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಆದೇಶದ ಮಾನದಂಡಗಳನ್ನು ಅನುಸರಿಸುತ್ತೇವೆ. ಆ ಬಳಿಕ ಒಳ ಮೀಸಲಾತಿ ಜಾತಿಗಳನ್ನ ವರ್ಗೀಕರಣ ಮಾಡುತ್ತೇವೆ. ಯಾವುದೇ ವಿಳಂಬ ಆಗದಂತೆ ಅಂತಿಮ ವರದಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಮಾಡಿಯೇ ಮಾಡ್ತೀವಿ, ಯಾರಿಗೂ ಅನ್ಯಾಯ ಮಾಡಲ್ಲ: ಸಿದ್ದರಾಮಯ್ಯ