Tag: International Award

  • ಕಿಚ್ಚ ಸುದೀಪ್ ಮುಡಿಗೇರಿದ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ

    ಕಿಚ್ಚ ಸುದೀಪ್ ಮುಡಿಗೇರಿದ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಚಂದನವನದ ಮಾಣಿಕ್ಯ ಭಾಜನರಾಗಿದ್ದಾರೆ.

    ‘ದಬಾಂಗ್ 3’ ಸಿನಿಮಾದ ಬಲ್ಲಿಸಿಂಗ್ ಪಾತ್ರಕ್ಕೆ ಕಿಚ್ಚನಿಗೆ ಈ ಹೆಮ್ಮೆಯ ಪ್ರಶಸ್ತಿ ಒಲಿದಿದೆ. ಫೆಬ್ರವರಿ 20ರಂದು ಮುಂಬೈನಲ್ಲಿ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಲಿದೆ. ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ರಾಜ್ಯಪಾಲರು ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ.

    ದಾದಾ ಸಾಹೇಬ್ ಫಾಲ್ಕೆ ಹಾಗೂ ಮಹಾತ್ಮ ಗಾಂಧೀಜಿಯವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಅದ್ಧೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಗೆ ಕಿಚ್ಚ ಆಯ್ಕೆಯಾಗಿರುವ ವಿಚಾರವನ್ನು ಚಂದ್ರಶೇಖರ್ ಪುಸಲ್ಕರ್ ಅವರು ಖಚಿತಪಡಿಸಿದ್ದಾರೆ. ಚಂದ್ರಶೇಖರ್ ಪುಸಲ್ಕರ್ ದಾದಾ ಸಾಹೇಬ್ ಫಾಲ್ಕೆಯವರ ಮೊಮ್ಮಗ ಹಾಗೂ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ನ ಜ್ಯೂರಿ ಪ್ರೆಸಿಡೆಂಟ್ ಆಗಿದ್ದಾರೆ.