Tag: International Court of Justice

  • ಭಾರತದ ನಿರ್ಧಾರ ಪ್ರಶ್ನಿಸಿ ಅಂತರಾಷ್ಟ್ರೀಯ ಕೋರ್ಟ್ ಮೊರೆ ಹೋಗಲು ಪಾಕ್ ನಿರ್ಧಾರ

    ಭಾರತದ ನಿರ್ಧಾರ ಪ್ರಶ್ನಿಸಿ ಅಂತರಾಷ್ಟ್ರೀಯ ಕೋರ್ಟ್ ಮೊರೆ ಹೋಗಲು ಪಾಕ್ ನಿರ್ಧಾರ

    ಇಸ್ಲಾಮಾಬಾದ್: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಪಾಕಿಸ್ತಾನ ತೀವ್ರ ಆತಂಕಕ್ಕೊಳಗಾಗಿದ್ದು, ಭಾರತದ ನಿರ್ಧಾರವನ್ನು ಪ್ರಶ್ನಿಸಿ ಅಂತರಾಷ್ಟ್ರೀಯ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

    ಈ ಕುರಿತು ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಭಾರತದ ನಿರ್ಧಾರವನ್ನು ಅಂತರಾಷ್ಟ್ರೀಯ ಕೋರ್ಟ್‍ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಅವರು ಪಾಕಿಸ್ತಾನದ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    ಎಲ್ಲ ಕಾನೂನು ಅಂಶಗಳನ್ನು ಪರಿಶೀಲಿಸಿದ ನಂತರ ಪಾಕಿಸ್ತಾನ ಈ ನಿರ್ಧಾರಕ್ಕೆ ಬಂದಿದೆ ಎಂದು ಖುರೇಷಿ ಮಾಹಿತಿ ನೀಡಿದ್ದಾರೆ.

    ಭಾರತದ ನಿರ್ಧಾರವನ್ನು ಪಾಕಿಸ್ತಾನ ಕಳೆದ ವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಪ್ರಶ್ನಿಸಿತ್ತು. ಸಭೆಯ ನಂತರ ಪ್ರಮುಖ ದೇಶಗಳ ಸದಸ್ಯರು ಭಾರತದ ನಿಲುವನ್ನು ಬೆಂಬಲಿಸಿದ್ದರು.

    ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ ಸರ್ಕಾರ ಪ್ಯಾಸಿಸ್ಟ್, ರ್ಯಾಸಿಸ್ಟ್ ಎಂದು ಕರೆದಿದ್ದರು. ಮಾತ್ರವಲ್ಲದೆ, ನ್ಯೂಕ್ಲಿಯರ್ ಅರ್ಸೆನಲ್ ಭಾರತದ ಕಂಟ್ರೋಲ್‍ನಲ್ಲಿದೆ ಎಂದು ಕಿಡಿ ಕಾರಿದ್ದರು.

    ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ 30 ನಿಮಿಷಗಳ ಕಾಲ ಫೋನ್‍ನಲ್ಲಿ ಮಾತನಾಡಿದ್ದು, ದ್ವಿಪಕ್ಷೀಯ ವಿಷಯಗಳಲ್ಲದೆ, ಪ್ರಾದೇಶಿಕ ಸ್ಥಿತಿಗತಿ ಕುರಿತು ಸಹ ಉಭಯ ನಾಯಕರು ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ಮುಂದೆ ಶಾಂತಿ ಮಾತುಕತೆ ಫಲಿಸುವುದಿಲ್ಲ ಎಂದು ತಿಳಿಸಿದ್ದರು.

  • ಇಂದು ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು

    ಇಂದು ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು

    ನವದೆಹಲಿ: ಇಂದು ಭಾರತೀಯ ನೌಕಾದಳದ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಪ್ರಕಟವಾಗಲಿದೆ. ವಾದ-ಪ್ರತಿವಾದ ಆಲಿಸಿರುವ ಅಂತರಾಷ್ಟ್ರೀಯ ನ್ಯಾಯಾಲಯ ಇಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಮುಖ್ಯ ನ್ಯಾಯಾಧೀಶರಾದ ಅಬ್ದುಲಕಾವೀ ಅಹಮದ್ ಯೂಸೂಫ್ ತೀರ್ಪು ಓದಲಿದ್ದಾರೆ.

    ಜಾಧವ್ ಮೇಲೆ ಗೂಢಾಚಾರಿಕೆ ಹಾಗೂ ಉಗ್ರವಾದದ ಆರೋಪದ ಮೇಲೆ ಪಾಕಿಸ್ತಾನ ಸೇನಾ ನ್ಯಾಯಾಲಯ 2017ರ ಏಪ್ರಿಲ್‍ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಪಾಕಿಸ್ತಾನ ತೀರ್ಪಿನ ವಿರುದ್ಧ ಭಾರತ, ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಬಲೂಚಿಸ್ತಾನ ಪ್ರಾಂತ್ಯ ಪ್ರವೇಶಿಸುವ ವೇಳೆ 2016 ಮಾರ್ಚ್3ರಂದು ಭದ್ರತಾ ಪಡೆಗಳು ಜಾಧವ್‍ರನ್ನು ಬಂಧಿಸಿತ್ತು ಎಂಬುದು ಪಾಕಿಸ್ತಾನದ ವಾದವಾದ್ರೆ, ಜಾಧವ್ ಇರಾನ್‍ನಲ್ಲಿ ವ್ಯಾಪಾರ ನಡೆಸುತ್ತಿದ್ದರು. ಅವರನ್ನು ಅಲ್ಲಿಂದ ಅಪಹರಿಸಲಾಗಿದೆ ಎಂಬುದು ಭಾರತದ ಪ್ರತಿವಾದವಾಗಿದೆ.

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

    ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

  • ಜುಲೈ ಅಂತ್ಯಕ್ಕೆ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪಿನ ನಿರೀಕ್ಷೆ

    ಜುಲೈ ಅಂತ್ಯಕ್ಕೆ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪಿನ ನಿರೀಕ್ಷೆ

    ನವದೆಹಲಿ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವ ಕುಲಭೂಷಣ್ ಜಾಧವ್ ಅವರ ಪ್ರಕರಣ ತೀರ್ಪು ಈ ತಿಂಗಳ ಅಂತ್ಯದ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

    ಭಾರತೀಯ ವಾಯಸೇನೆಯ ನಿವೃತ್ತ ನೌಕರರಾಗಿರುವ ಜಾಧವ್ ಅವರಿಗೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಈ ತೀರ್ಪಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಪ್ರಕರಣದ ವಿಚಾರಣೆ ನಡೆಸಿತ್ತು. ಭಾರತದ ವಕೀಲರು ಜಾಧವ್ ಬಿಡುಗಡೆಗೆ ವಾದ ಮಂಡಿಸಿದ್ದರು. ಎರಡು ದೇಶಗಳ ವಕೀಲರು ಪ್ರಕರಣದಲ್ಲಿ ತಮ್ಮ ವಾದ ಮಂಡಿಸಿದ್ದಾರೆ.

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಆದರೆ ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

  • ಜಾಧವ್ ಕೇಸ್ – ಐಸಿಜೆಯಲ್ಲಿ ಪಾಕ್ ಮಿಲಿಟರಿ ಕೋರ್ಟ್ ಮಾನ ಹರಾಜು

    ಜಾಧವ್ ಕೇಸ್ – ಐಸಿಜೆಯಲ್ಲಿ ಪಾಕ್ ಮಿಲಿಟರಿ ಕೋರ್ಟ್ ಮಾನ ಹರಾಜು

    ನವದೆಹಲಿ: ಪಾಕಿಸ್ತಾನದ ಬಂಧನದಲ್ಲಿರುವ ಕುಲಭೂಷಣ್ ಜಾಧವ್ ವಿಚಾರಣೆ ವಿಧಾನ ಕಾನೂನುಬಾಹಿರವೆಂದು ಘೋಷಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ(ಐಸಿಜೆ) ಭಾರತ ಮನವಿ ಸಲ್ಲಿಸಿದೆ.

    ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಂದು ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಯಿತು. ಭಾರತದ ಪರ ಹರೀಶ್ ಸಾಳ್ವೆ ಅವರು ವಾದ ಮಂಡಿಸಿದರು.

    ಭಾರತದ ವಾದವೇನು?:
    ಪಾಕಿಸ್ತಾನ 1963ರ ವಿಯೆನ್ನಾ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದೆ. ಕುಲಭೂಷಣ್ ಜಾಧವ್ ರಾ (ರಿಸರ್ಚ್ & ಅನಾಲಿಸಿಸ್ ವಿಂಗ್)ಗೆ ಸೇರಿದವರಲ್ಲ. ಅವರನ್ನು ಬಂಧಿಸಿದ 1 ತಿಂಗಳ ನಂತರ ಎಫ್‍ಐಆರ್ ದಾಖಲಿಸಲಾಯಿತು. 3 ವರ್ಷಗಳ ಕಾಲ ಚಿತ್ರಹಿಂಸೆ ನೀಡಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದೆ. ಪಾಕಿಸ್ತಾನ ಮಿಲಿಟರಿ ಕೋರ್ಟ್ ಸರಿಯಾಗಿ ವಿಚಾರಣೆಯನ್ನೂ ನಡೆಸದೆ, ಆರೋಪ ಸಾಬೀತಾಗದಿದ್ದರೂ ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಎಲ್ಲಾ ರೀತಿಯಲ್ಲೂ ಮಾನವಹಕ್ಕುಗಳನ್ನು ಉಲ್ಲಂಘಿಸಿದೆ. 13 ಬಾರಿ ಮನವಿ ಮಾಡಿದರೂ ರಾಜತಾಂತ್ರಿಕರ ಭೇಟಿಗೆ ಅವಕಾಶ ನೀಡದೇ ದ್ವಿಪಕ್ಷೀಯ ಒಪ್ಪಂದ ಉಲ್ಲಂಘಿಸಿದೆ. ಅಲ್ಲದೆ ಈವರೆಗೆ ಪಾಕಿಸ್ತಾನ ಜಾಧವ್ ವಿರುದ್ಧದ ದಾಖಲೆಗಳನ್ನೂ ನೀಡಿಲ್ಲ ಎಂದು ಭಾರತದ ಪರ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ.

    ಸೋಮವಾರ ಭಾರತ ವಾದ ಮಂಡಿಸಿದರೆ ಮಂಗಳವಾರ ಪಾಕಿಸ್ತಾನ ವಾದ ಮಂಡಿಸಲಿದೆ. ಬುಧವಾರ ಪಾಕ್ ಆರೋಪಗಳಿಗೆ ಭಾರತ ಉತ್ತರ ನೀಡಿದರೆ, ಗುರುವಾರ ಭಾರತದ ಆರೋಪಗಳಿಗೆ ಪಾಕ್ ಉತ್ತರ ನೀಡಲಿದೆ. ಎರಡು ಕಡೆಯ ವಾದವನ್ನು ಆಲಿಸಿದ ಕೋರ್ಟ್ ಈ ವರ್ಷದ ಬೇಸಗೆಯಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ.

    ಏನಿದು ಪ್ರಕರಣ?
    ಭಾರತದ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನದ ಭಯೋತ್ಪಾದನ ನಿಗ್ರಹ ದಳವು ಬಲೂಚಿಸ್ತಾನದಲ್ಲಿ 2016 ಮಾರ್ಚ್ 3ರಂದು ಬಂಧಿಸಿತ್ತು. ಭಾರತದ ಸಂಶೋಧನಾ ಮತ್ತು ವಿಶ್ಲೇಷಣಾ ದಳದ ಭಾತ್ಮಿದಾರನಾಗಿ ಕುಲಭೂಷಣ್ ಜಾಧವ್, ಹುಸೇನ್ ಮುಬಾರಕ್ ಪಟೇಲ್ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದರೆಂಬ ಆರೋಪದ ಮೇಲೆ ಅವರನ್ನು ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಜಾಧವ್‍ಗೆ 2017 ಏಪ್ರಿಲ್ 10ರಂದು ಮರಣದಂಡನೆ ಶಿಕ್ಷೆ ವಿಧಿಸಿತ್ತು. ಯಾವುದೇ ಸಾಕ್ಷಿ, ಆಧಾರಗಳಲಿಲ್ಲದೆ ಗಲ್ಲು ಶಿಕ್ಷೆ ವಿಧಿಸಿದ ಕ್ರಮವನ್ನು ಪ್ರಶ್ನಿಸಿ ಭಾರತ ಐಸಿಜೆ ಮೆಟ್ಟಿಲೇರಿತ್ತು. ಇದರಿಂದಾಗಿ ಐಸಿಜೆಯ 10 ಸದಸ್ಯರ ನ್ಯಾಯಪೀಠ ವಿಚಾರಣೆ ಅಂತ್ಯಗೊಳ್ಳುವವರೆಗೂ ಜಾಧವ್ ಮರಣದಂಡನೆಗೆ ತಡೆ ನೀಡಿ 2017 ಮೇ 18ರಂದು ಆದೇಶ ಹೊರಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯಪಡ್ತೀರಿ

    ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯಪಡ್ತೀರಿ

    ನವದೆಹಲಿ: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ವಿಶ್ವ ಸಂಸ್ಥೆಯ ಇಂಟರ್‍ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್‍ನಲ್ಲಿ ಭಾರತದ ಪರವಾಗಿ ವಾದ ಮಾಡಲು ವಕೀಲರಾದ ಹರೀಶ್ ಸಾಳ್ವೆ ಎಷ್ಟು ಸಂಭವನೆ ಪಡೆಯುತ್ತಿದ್ದಾರೆ ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಬಹಿರಂಗಪಡಿಸಿದ್ದಾರೆ.

    ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಗೆ ಇಂಟರ್ ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್ ತಡೆ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿ, ಯಾವುದೇ ಒಳ್ಳೆಯ ಭಾರತೀಯ ವಕೀಲರಾದ್ರೂ ಇದೇ ಕೆಲಸವನ್ನ ಮಾಡ್ತಿದ್ರು. ಹಾಗೂ ಹರೀಶ್ ಸಾಳ್ವೆ ಅವರಿಗಿಂತ ಕಡಿಮೆ ಸಂಭಾವನೆ ಪಡೆದು ಮಾಡುತಿದ್ರು. ತೀರ್ಪಿಗಾಗಿ ಕಾಯೋಣ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಇದು ಸರಿಯಲ್ಲ. ಹರೀಶ್ ಸಾಳ್ವೆ ಅವರು ನಮ್ಮಿಂದ ಕೇವಲ 1 ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    https://twitter.com/goyalsanjeev/status/864160971350134784

    ಗೂಢಚಾರಿಕೆ ಆರೋಪದ ಮೇಲೆ ಜಾಧವ್ ಅವರಿಗೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿರುವ ಹಿನ್ನೆಲೆಯಲ್ಲಿ ಭಾರತದ ಮನವಿಯನ್ನ ಹೇಗೆ ಮಂಡಿಸಬೇಕು ಎಂಬ ಬಗ್ಗೆ ಭಾರತದ ಮಾಜಿ ಸಾಲಿಸಿಟರ್ ಜೆನರಲ್ ಹರೀಶ್ ಸಾಳ್ವೆ ಇಂದು ಒಂದೂವರೆ ಗಂಟೆಗಳ ಕಾಲ ಮಾತನಾಡಿದ್ರು.

    ಜಾಧವ್ ಅವರ ಗಲ್ಲು ಶಿಕ್ಷೆಯನ್ನ ಪ್ರಶ್ನಿಸಿ ಕಳೆದ ವಾರ ಭಾರತ ಇಂಟರ್ ನ್ಯಾಷನಲ್ ಕೋರ್ಟ್‍ನ ಮೊರೆ ಹೋಗಿತ್ತು. ಕೋರ್ಟ್ ತೀರ್ಮಾನಕ್ಕೂ ಮುನ್ನವೇ ಜಾಧವ್ ಅವರಿಗೆ ಶಿಕಗ್ಷೆಯಾಗಬಹುದೆಂಬ ಆತಂಕವಿತ್ತು. ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು ಹಾಗೂ ಅವಸರವಿತ್ತು. ಆದ್ದರಿಂದ ನಾವು ಬೇಗನೆ ಕೋರ್ಟ್ ಮೊರೆ ಹೋದೆವು ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ.