Tag: international cricket stadium

  • ಕೊಡಗಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

    ಕೊಡಗಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

    ಮಡಿಕೇರಿ: ಸುತ್ತಲೂ ಹಸಿರು ರಾಶಿ, ಬೆಟ್ಟ – ಗುಡ್ಡ, ಇಂತಹ ಪ್ರಕೃತಿ ಸೌಂದರ್ಯದ ಮಧ್ಯೆ ಕುಳಿತು ಅಂತಾರಾಷ್ಟ್ರೀಯ ಕ್ರಿಕೆಟ್ (International Cricket) ಪಂದ್ಯಾವಳಿ ನೋಡುವ ಅವಕಾಶ ಸಿಕ್ಕರೆ ಅದೆಷ್ಟು ಮಜವಿರುತ್ತದೆ ಅಲ್ಲವೇ? ಹೌದು. ಮುಂದಿನ 3-4 ವರ್ಷಗಳಲ್ಲೇ ಕೊಡಗಿನ (Kodagu) ಜನಕ್ಕೆ ಈ ಸದವಕಾಶ ಸಿಗಲಿದೆ.

    ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ (International Cricket Stadium) ತಲೆ ಎತ್ತಲಿದ್ದು, ಈಗಾಗಲೇ ನಿರ್ಮಾಣ ಕಾರ್ಯ ಶುರುವಾಗಿದೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪುತ್ರನ ಮನೆ ಬೆಂಕಿಗಾಹುತಿ

    ಜಿಲ್ಲೆಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ ಬೇಕು ಅನ್ನೋದು ಇಲ್ಲಿನ ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈಗ ಆ ಬೇಡಿಕೆ ಈಡೇರುವ ಕಾಲ ಹತ್ತಿರವಾಗಿದೆ. ಮಡಿಕೇರಿ ತಾಲೂಕಿನ ಪಾಲೆಮಾಡು ಗ್ರಾಮದ ಬಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತುತ್ತಿದೆ. ಈಗಾಗಲೆ ಮೈದಾನ ನಿರ್ಮಾಣ ಕಾಮಗಾರಿ ಆರಂಭವಾಗಿದೆ.

    ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣಕ್ಕೆ ಜಿಲ್ಲಾಡಳಿತ 12 ಎಕರೆ ಜಾಗ ನೀಡಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಮಾದರಿಯಲ್ಲೇ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಈ ಪ್ರದೇಶದಲ್ಲಿ ಬೆಟ್ಟವನ್ನು ಸಮತಟ್ಟುಗೊಳಿಸಲಾಗುತ್ತಿದೆ. ಇದನ್ನೂ ಓದಿ: Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?

    ಸದ್ಯ ಕ್ರೀಡಾಂಗಣ ನಿರ್ಮಾಣಕ್ಕೆ ಕಾಮಗಾರಿ ಶುರುವಾಗಿದ್ದು, ಮುಂದಿನ 3-4 ವರ್ಷಗಳಲ್ಲಿ ಅಂಗಳ ನಿರ್ಮಾಣವಾಗಲಿದೆ. ಇದು ಸ್ಥಳೀಯ ಕ್ರೀಡಾಪಟುಗಳಿಗೂ ವರದಾನವಾಗಲಿದೆ. ಈಗಾಗಲೇ ಜಿಲ್ಲೆಯಲ್ಲಿ ಆಸ್ಟ್ರೋ ಟರ್ಫ್ ಹಾಕಿ ಕ್ರೀಡಾಂಗಣವಿದೆ. ಆದರೆ, ಕನಿಷ್ಠ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸುವಂತಹ ಅಥ್ಲೆಟಿಕ್ ಕ್ರೀಡಾಂಗಣವಾಗಲಿ, ಕ್ರಿಕೆಟ್​​ ಮೈದಾನವಾಗಲಿ ಇಲ್ಲ. ಸದ್ಯ ಕ್ರಿಕೆಟ್ ಮೈದಾನ ತಲೆ ಎತ್ತುತ್ತಿದ್ದು, ಇದರೊಂದಿಗೆ ಕೊಡಗು ಜಿಲ್ಲೆ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಬ್ಯಾಟ್‌ ಬೀಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಕಾಮಗಾರಿಗೆ ಸಿಎಂ ಚಾಲನೆ

    ಬ್ಯಾಟ್‌ ಬೀಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಕಾಮಗಾರಿಗೆ ಸಿಎಂ ಚಾಲನೆ

    ತುಮಕೂರು: ಬ್ಯಾಟಿಂಗ್ ಮಾಡುವ ಮೂಲಕ ತುಮಕೂರಿನ (Tumkur) ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (International Cricket Stadium) ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ಈ ವೇಳೆ ಗೃಹಸಚಿವ ಪರಮೇಶ್ವರ್‌ ವಿಕೆಟ್ ಕೀಪಿಂಗ್‌ ಮಾಡಿದ್ದಾರೆ. ಬಳಿಕ ಟೋಪಿ ಹಾಕಿಕೊಂಡೇ ಕ್ರೀಡಾಪಟುವಂತೆ ವೇದಿಕೆಗೆ ಸಿಎಂ ಆಗಮಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಕ್ರಿಕೆಟ್ ಕ್ರೀಡಾಂಗಣಕ್ಕೆ 41 ಎಕರೆ ಜಮೀನಿದ್ದು, ಖರಾಬು ಸೇರಿ 50 ಎಕರೆ ಕ್ರಿಕೆಟ್‍ ಸಂಸ್ಥೆಗೆ ಸಿಗುತ್ತಿದೆ. ಇದು ಬೆಂಗಳೂರಿಗೆ ಸಮೀಪದ ಸ್ಥಳವಾಗಿದೆ. ಇಲ್ಲಿ ಕ್ರೀಡಾಂಗಣ ಆಗುತ್ತಿರುವುದು ಸಂತೋಷದ ವಿಚಾರ. ಸಂಸ್ಥೆಗೆ ಮೈಸೂರಿನಲ್ಲೂ ಸರ್ಕಾರಿ ಜಮೀನು ಕೊಡುತ್ತೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ.

    ಕ್ರಿಕೆಟ್ ಬೆಳೆಯಲು ಅವಕಾಶ ಕಲ್ಪಿಸಬೇಕು. ಇಲ್ಲಿ ತಂಬಾ ಜನ ಕ್ರಿಕೆಟ್‌ ಆಟಗಾರರಿದ್ದಾರೆ. ಈ ಕ್ರೀಡಾಂಗಣ ಅನೇಕ ಹುದ್ದೆಗಳನ್ನು ಸೃಷ್ಟಿಸಲಿದೆ. ಕ್ರಿಕೆಟ್ ಕ್ರೀಡಾಂಗಣ ಆಗಲಿದೆ ಎಂಬ ಮಾಹಿತಿ ಬೆನ್ನಲ್ಲೇ, ಎಕರೆ ಜಮೀನಿಗೆ 50 ಲಕ್ಷ ರೂ. ಏರಿಕೆ ಕಂಡಿದೆ. ನೋಡಪ್ಪ ಸುರೇಶ್‍ಗೌಡ ಎಂದು ಹಾಸ್ಯ ಚಟಾಕಿ ಸಿಡಿಸಿದ್ದಾರೆ.

    ವಿರೋಧ ಪಕ್ಷದವರನ್ನು ಎದುರಿಸುವ ಶಕ್ತಿ ನಮಗಿದೆ. ನಾನು ಎರಡು ಬಾರಿ ವಿರೋಧ ಪಕ್ಷದ ನಾಯಕ, ಸಿಎಂ ಆಗಿದ್ದೇನೆ. ಹೆದರುವ ಪ್ರಶ್ನೆಯೇ ಇಲ್ಲ. ನಿಮಗೆ ಹೆದರಿಸುವ ಶಕ್ತಿ ನಮಗಿದೆ. ಸುರೇಶ್ ಗೌಡ ನಿನ್ನೆಯ ವರೆಗೂ ಹೇಗೋ ಇದ್ದರು. ಇಂದು ಸರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

    ಸುರೇಶ್ ಗೌಡ ಅವರು ಬಿಜೆಪಿ, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ತಾರತಮ್ಯ ವಿಚಾರಕ್ಕೆ ಸಿಎಂ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ ನೀಡಿದ್ದರು. ಇನ್ನೂ ಇದೇ ವೇಳೆ ಪರಮೇಶ್ವರ್‌ ಅವರು ಸುರೇಶ್‌ ಗೌಡರ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಸಿಎಂಗೆ ವೇದಿಕೆ ಮೇಲೆ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕ, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • 9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

    9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

    – 150 ಕೋಟಿ ವೆಚ್ಚದ ಕ್ರೀಡಾಂಗಣ ಶಂಕಿಸ್ಥಾಪನೆ

    ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದು ತುಮಕೂರು (Tumakuru) ಗ್ರಾಮಾಂತರಕ್ಕೆ ನೀಡಲಿದ್ದು, 9 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಇದನ್ನೂ ಓದಿ: ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

    ಇದೇ ವೇಳೆ ತುಮಕೂರು ಗ್ರಾಮಾಂತರದ ಸೋರೆಕುಂಟೆ ಬಳಿಯ ಪಿ ಗೊಲ್ಲಹಳ್ಳಿಯಲ್ಲಿ 41 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ 150 ಕೋಟಿ ರೂ. ವೆಚ್ಚದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.

    ಮಧ್ಯಾಹ್ನ 12 ಗಂಟೆಗೆ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಯತ್ನಾಳ್‌ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್

  • ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

    ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ (Varanasi) ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium) ಶಂಕುಸ್ಥಾಪನೆ ನೆರವೇರಿಸಿದರು.

    ಈ ಸಂದರ್ಭ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ (BCCI) ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಕೂಡಾ ಭಾಗವಹಿಸಿದ್ದರು. ಇದನ್ನೂ ಓದಿ: ಮೂರಲ್ಲ, 6 ಡಿಸಿಎಂ ಹುದ್ದೆಗಳು ಮಾಡಲಿ, ಡಿಕೆಶಿ ಸಿನಿಯರ್ DCM ಆಗಲಿ – ಬಸವರಾಜ್ ರಾಯರೆಡ್ಡಿ

    ಸ್ಟೇಡಿಯಂಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 121 ಕೋಟಿ ರೂ. ಹಣವನ್ನು ಖರ್ಚು ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅದರ ನಿರ್ಮಾಣಕ್ಕೆ 330 ಕೋಟಿ ರೂ. ವೆಚ್ಚ ಮಾಡಲಿದೆ. ರಜತಲಾಬ್ ಪ್ರದೇಶದ ರಿಂಗ್ ರೋಡ್ ಬಳಿ ನಿರ್ಮಾಣವಾಗಲಿರುವ ಕ್ರೀಡಾಂಗಣವು ಡಿಸೆಂಬರ್ 2025ರ ವೇಳೆಗೆ ಸಿದ್ಧವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನಿಜ್ಜರ್‌ನಿಂದ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ, ಭಾರತದಲ್ಲಿ ದಾಳಿಗೆ ಧನ ಸಹಾಯ: ಗುಪ್ತಚರ ದಾಖಲೆ

    ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯು ವಾರಣಾಸಿಯ ಘಾಟ್‌ಗಳ ಮೆಟ್ಟಿಲುಗಳನ್ನು ಹೋಲುತ್ತದೆ. ಕಾನ್ಪುರ ಮತ್ತು ಲಕ್ನೋ ನಂತರ ಉತ್ತರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇದಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕನಿಂದ ನಿಂದನೆಗೊಳಗಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]