Tag: International market

  • 400 ವಂದೇ ಭಾರತ್ ರೈಲುಗಳಿಗೆ ಚಾಲನೆ – 2023ಕ್ಕೆ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

    400 ವಂದೇ ಭಾರತ್ ರೈಲುಗಳಿಗೆ ಚಾಲನೆ – 2023ಕ್ಕೆ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

    ನವದೆಹಲಿ: ದೇಶದಲ್ಲಿ ಈಗಗಾಲೇ 5 ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ರೈಲಿಗೆ ಚಾಲನೆ ನೀಡಲಾಗಿದೆ. 2025-26ಕ್ಕೆ ಭಾರತಕ್ಕೆ ತಿರುವುಗಳಲ್ಲಿ ಮೋಟಾರ್ ಬೈಕ್‌ನಂತೆ ವಾಲುವ ಲಿಟ್ಟಿಂಗ್ ರೈಲು ಬರಲಿದೆ. ಲಿಟ್ಟಿಂಗ್ ರೈಲು ಬಂದ ನಂತರ 100 ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಈ ತಂತ್ರಜ್ಞಾನ ಅಳವಡಿಸುವ ಯೋಜನೆಯನ್ನು ರೈಲ್ವೆ ಇಲಾಖೆ ಹಾಕಿಕೊಂಡಿದೆ.

    ಈ ಬೆನ್ನಲ್ಲೇ ಮುಂಬರುವ 2023ರ ಕೇಂದ್ರ ಬಜೆಟ್‌ನಲ್ಲಿ (Union Budget 2023) ಭಾರತೀಯ ರೈಲ್ವೆಗೆ ಅತಿ ಹೆಚ್ಚು ಬಜೆಟ್ ಹಂಚಿಕೆ ಮಾಡಲಿದ್ದು, ಸುಮಾರು 300 ರಿಂದ 400 ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಕ್ಕಳ ಜೊತೆ ಅಸಭ್ಯ ವರ್ತನೆ – ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

    ರೈಲ್ವೇ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw), 2024ರ ಮೊದಲ ತ್ರೈಮಾಸಿಕದಲ್ಲಿ ಸ್ಲೀಪರ್ ಕೋಚ್‌ಗಳೊಂದಿಗೆ ಮೊದಲ ವಂದೇ ಭಾರತ್ ರೈಲನ್ನು ಹೊರತರಲಾಗುವುದು ಎಂದು ತಿಳಿಸಿದ್ದಾರೆ.

    ಭಾರತವು ಮುಂದಿನ 3 ವರ್ಷಗಳಲ್ಲಿ 475 ವಂದೇ ಭಾರತ್ ರೈಲುಗಳನ್ನು ಉತ್ಪಾದಿಸುವ ಯೋಜನೆಯ ಹಾದಿಯಲ್ಲಿದೆ. ಕಳೆದ ಬಜೆಟ್‌ನಲ್ಲಿ 400 ರೈಲುಗಳನ್ನು ಮಂಜೂರು ಮಾಡಲಾಗಿತ್ತು. ಅದಕ್ಕೂ ಮೊದಲು 75 ರೈಲುಗಳನ್ನು ಮಂಜೂರು ಮಾಡಲಾಗಿತ್ತು. ಮುಂದಿನ 3 ವರ್ಷಗಳಲ್ಲಿ ಇದರ ಸಂಪೂರ್ಣ ಗುರಿ ಸಾಧಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: GPS ಟ್ರ್ಯಾಕರ್ ಬಳಸಿ ಉದ್ಯಮಿಯಿಂದ 50 ಲಕ್ಷ ದರೋಡೆ ಮಾಡಿದ್ದ ಖತರ್ನಾಕ್ ಕಳ್ಳರ ಬಂಧನ

    ಇದರೊಂದಿಗೆ ದೆಹಲಿ-ಮುಂಬೈ, ದೆಹಲಿ-ಹೌರಾ ಮತ್ತು ಇತರ ಪ್ರಮುಖ ಮಾರ್ಗಗಳಲ್ಲಿ ಅಸ್ತಿತ್ವದಲ್ಲಿರುವ ರಾಜಧಾನಿ ಮತ್ತು ಡುರೊಂಟೊ (Duronto Trains) ರೈಲುಗಳನ್ನು ಬದಲಿಸುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

    ಮುಖ್ಯವಾಗಿ 2025-26ರ ವೇಳೆಗೆ ಭಾರತೀಯ ರೈಲ್ವೆಯು ಯೂರೋಪ್, ದಕ್ಷಿಣ ಅಮೆರಿಕ ಮತ್ತು ಪೂರ್ವ ಏಷ್ಯಾದ ಮಾರುಕಟ್ಟೆಗಳಿಗೆ (International Market) ವಂದೇ ಭಾರತ್ ರೈಲುಗಳ ಪ್ರಮುಖ ರಫ್ತುದಾರನಾಗಲು ಯೋಜಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

    ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

    ನವದೆಹಲಿ: 200ರ ಗಡಿ ದಾಟಿದ್ದ ಸೂರ್ಯಕಾಂತಿ ಖಾದ್ಯ ತೈಲ ಇದ್ದಕ್ಕಿದ್ದಂತೆ ಭಾರೀ ಇಳಿಕೆಯಾಗಿರುವುದು ಕಂಡುಬಂದಿದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯತೈಲ ಬೆಲೆ ಇಳಿಕೆಯಾದ ನಂತರ ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ `ಅದಾನಿ ವಿಲ್ಮರ್’ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್‌ಗೆ 30 ರೂ. ವರೆಗೆ ಇಳಿಕೆ ಮಾಡಿದೆ. ಇದನ್ನೂ ಓದಿ: ಲೀಟರ್‌ ಗೋಮೂತ್ರಕ್ಕೆ 4 ರೂ. – ರೈತರಿಂದ ಖರೀದಿಗೆ ಮುಂದಾದ ಸರ್ಕಾರ

    ಇದರ ಬೆನ್ನಲ್ಲೇ ಅಲ್ಪಸ್ವಲ್ಪ ಇಳಿಕೆ ಮಾಡಿದೆ. ಇತರ ಕಂಪನಿಗಳು ಇದೇ ಹಾದಿ ಹಿಡಿಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಜೋರಾಯ್ತು ಕುರ್ಚಿ ಕದನ – ಸಿಎಂ ಪಟ್ಟಕ್ಕಾಗಿ ಸಮುದಾಯದ ಬೆಂಬಲ ಕೋರಿದ ಡಿಕೆ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಬೆಲೆ ಇಳಿಕೆ ಮತ್ತು ಕೇಂದ್ರ ಸರ್ಕಾರ ಆಮದು ಸುಂಕವನ್ನು ಶೇ.5ರಷ್ಟು ಇಳಿಸಿದ ಪರಿಣಾಮ ಫಾರ್ಚೂನ್ ವಿವಿಧ ಮಾದರಿಯ ಖಾದ್ಯ ತೈಲ ಬೆಲೆಯನ್ನು ಲೀ.ಗೆ 5 ರೂ. ನಿಂದ 30 ರೂ. ವರೆಗೂ ಇಳಿಸಿದೆ. ಹೀಗಾಗಿ ಅದಾನಿ ವಿಲ್ಮರ್ ಕಂಪನಿಯ ಸೋಯಾ ಎಣ್ಣೆ ದರದಲ್ಲಿ ಲೀ.ಗೆ 195 ರೂ. ನಿಂದ 165 ರೂ.ಗೆ, ಸೂರ್ಯಕಾಂತಿ ಎಣ್ಣೆ 210 ರೂ. ನಿಂದ 199 ರೂ.ಗೆ, ಎಳ್ಳೆಣ್ಣೆ 195 ರೂ. ನಿಂದ 190 ರೂ.ಗೆ, ಶೇಂಗಾ ಎಣ್ಣೆ 220 ರೂ. ನಿಂದ 210 ರೂ. ಇಳಿಕೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    ನವದೆಹಲಿ: ತಮಿಳಿನ ಖ್ಯಾತ ನಟ ಸೂರ್ಯ ಅಭಿನಯದ ಅಯನ್ ಸಿನಿಮಾದಲ್ಲಿರುವ ದೃಶ್ಯದಂತೆ ತಮ್ಮ ಹೊಟ್ಟೆಯೊಳಗೆ ಸುಮಾರು 28 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಸಾಗಿಸುತ್ತಿದ್ದ ಇಬ್ಬರು ಚಾಲಾಕಿ ಮಹಿಳೆಯರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್‌ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

    ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ಮಾತ್ರೆಗಳಲ್ಲಿ ಅಡಗಿಸಿಟ್ಟು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್‍ಪಿನ್ ಅರೆಸ್ಟ್

    ಒಬ್ಬ ಮಹಿಳೆ ನಿನ್ನೆ ಸಿಕ್ಕಿಬಿದ್ದಿದ್ದರು. ಈಕೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 13.6 ಕೋಟಿಗಳಷ್ಟಿದೆ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಮೇ 22 ರಂದು ಬಂಧಿತ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 80 ಕ್ಯಾಪ್ಸುಲ್‌ಗಳು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಆಕೆಯನ್ನು ಇದೇ ಆಸ್ಪತ್ರೆಗೆ ದಾಖಲಿಸಿ 0.957 ಕೆಜಿ ತೂಕದ ಕೊಕೇನ್ ಇರುವುದನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮೌಲ್ಯ 14 ಕೋಟಿಗಳಷ್ಟಿತ್ತು ಎಂದು ಅಂದಾಜಿಸಿದ್ದರು.

  • 41 ಸಾವಿರ ಗಡಿ ದಾಟಿತು – ಗಗನಕ್ಕೇರಿದ ಚಿನ್ನದ ಬೆಲೆ

    41 ಸಾವಿರ ಗಡಿ ದಾಟಿತು – ಗಗನಕ್ಕೇರಿದ ಚಿನ್ನದ ಬೆಲೆ

    ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನ 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 710 ರೂ. ಏರಿಕೆಯಾಗಿ 41,130 ರೂ.ಗೆ ತಲುಪಿದೆ. ಇದು ಚಿನ್ನದ ಬೆಲೆಯ ಸಾರ್ವಕಾಲಿಕ ದಾಖಲೆಯಾಗಿದೆ.

    ಇದೇ ಮೊದಲ ಬಾರಿಗೆ ದೇಶದಲ್ಲಿ 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 41 ಸಾವಿರ ಗಡಿಯನ್ನು ದಾಟಿದ್ದು, 10 ಗ್ರಾಂ ಚಿನ್ನದ ಬೆಲೆ 2 ಸಾವಿರದಷ್ಟು ಹೆಚ್ಚಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.1.10 ರಷ್ಟು ಹೆಚ್ಚಳವಾಗಿದ್ದರೆ, 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಶೇ.0.83ರಷ್ಟು ಏರಿಕೆಯಾಗಿದೆ.

    ಡಿಸೆಂಬರ್ ತಿಂಗಳ ಅಂತ್ಯದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಇದು ಆಭರಣಕೊಳ್ಳುವವರಿಗೆ ನಿರಾಸೆಯನ್ನು ಮೂಡಿಸಿದೆ. ಅಮೆರಿಕ ಇರಾನ್ ದೇಶದ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಚಿನ್ನ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಮೇಲೆ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯನ್ನು ಆಭರಣ ಅಂಗಡಿ ಮಾಲೀಕರು ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ:  ಅಮೆರಿಕದಿಂದ ಏರ್ ಸ್ಟ್ರೈಕ್ – ಇರಾನ್ ಸೇನಾಧಿಕಾರಿ ಹತ್ಯೆ, ಕಚ್ಚಾ ತೈಲ ಬೆಲೆ ಏರಿಕೆ

    ಭಾರತದ ಜನರು ಸಂಪೂರ್ಣವಾಗಿ ಚಿನ್ನದ ಆಮದು ಮೇಲೆ ಅವಲಂಬಿತವಾಗಿದ್ದು, ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯಾಗುವ ನೇರ ಪರಿಣಾಮವನ್ನು ಎದುರಿಸಬೇಕಿದೆ. ಚೀನಾ ಹಾಗೂ ಅಮೆರಿಕ ನಡುವೆ ನಡೆಯುತ್ತಿರುವ ಟ್ರೆಡ್ ವಾರ್ ಪರಿಣಾಮವೂ ಚಿನ್ನದ ಬೆಲೆಯ ಮೇಲೆ ಬೀರುತ್ತಿದೆ. ಭಾರತದ ವಿಶ್ವದಲ್ಲೇ ಅತಿ ದೊಡ್ಡ ಚಿನ್ನ ಆಮದು ಮಾಡುವ ದೇಶವಾಗಿದೆ. ಆದರೆ ಕಳೆದ ಕೆಲ ವರ್ಷಗಳಿಂದ ಭಾರತದ ಚಿನ್ನದ ಆಮದು ಪ್ರಮಾಣ ಕಡಿಮೆಯಾಗಿದೆ. 2019-20ರ ಅಂಕಿ ಅಂಶಗಳ ಅನ್ವಯ ಚಿನ್ನದ ಆಮದು ಪ್ರಮಾಣ 1.43 ಲಕ್ಷ ಕೋಟಿಗಳಷ್ಟಿದೆ. ವಾರ್ಷಿಕವಾಗಿ 800 ರಿಂದ 900 ಟನ್‍ನಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿದೆ.

    ತೈಲ ಬೆಲೆ ಏರಿಕೆ:
    ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.4.39 ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 69.16 ಡಾಲರ್(ಅಂದಾಜು 4,900 ರೂ.) ತಲುಪಿದೆ. ಈ ಹಿಂದೆ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 66.25 ಡಾಲರ್(ಅಂದಾಜು 4,700 ರೂ.) ಇತ್ತು.