Tag: International Yoga Day 2024

  • ಕಾಶ್ಮೀರದ ದಾಲ್‌ ಸರೋವರ ದಡದಲ್ಲಿ ‘ನಮೋ’ ಯೋಗ – PHOTOS ನೋಡಿ..

    ಕಾಶ್ಮೀರದ ದಾಲ್‌ ಸರೋವರ ದಡದಲ್ಲಿ ‘ನಮೋ’ ಯೋಗ – PHOTOS ನೋಡಿ..

    ಮ್ಮು-ಕಾಶ್ಮೀರದಲ್ಲಿ ಇಂದು ನಡೆದ (ಜೂ.21) ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಈ ವೇಳೆ ಹಲವು ಆಸನಗಳನ್ನು ಮೋದಿ ಪ್ರದರ್ಶಿಸಿದರು. ಪ್ರಧಾನಿಗೆ ಕಾಶ್ಮೀರದ ಜನತೆ ಸಾಥ್‌ ನೀಡಿದರು. ಸುಮಾರು 7 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಪ್ರಧಾನಿ ಜೊತೆ ಯೋಗ ಮಾಡಿದರು.

  • ಆದಿಯೋಗಿ ಸನ್ನಿಧಿಯಲ್ಲಿ KGF ನಟಿ ಶ್ರೀನಿಧಿ ಶೆಟ್ಟಿ ಯೋಗ ಪ್ರದರ್ಶನ – ಸೈನಿಕರೂ ಭಾಗಿ

    ಆದಿಯೋಗಿ ಸನ್ನಿಧಿಯಲ್ಲಿ KGF ನಟಿ ಶ್ರೀನಿಧಿ ಶೆಟ್ಟಿ ಯೋಗ ಪ್ರದರ್ಶನ – ಸೈನಿಕರೂ ಭಾಗಿ

    ಚಿಕ್ಕಬಳ್ಳಾಪುರ: ತಾಲ್ಲೂಕಿನ ಆವಲಗುರ್ಕಿ ಬಳಿಯಿರುವ ಈಶ ಫೌಂಡೇಶನ್‌ನ (Isha Foundation) ಆದಿಯೋಗಿ ಬೃಹತ್ ಪ್ರತಿಮೆಯ ಮುಂಭಾಗ ವಿವಿಧ ಆಸನಗಳನ್ನು ಅಭ್ಯಾಸ ಮಾಡುವ ಮೂಲಕ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2024) ಆಚರಿಸಲಾಯಿತು.

    ಕರ್ನಾಟಕ ಗೋವಾ ಎನ್‌ಸಿಸಿ ಬೆಟಾಲಿಯನ್‌ನ ಡೆಪ್ಯುಟಿ ಡೈರೆಕ್ಟರ್ ಜನರಲ್, ಏರ್ ಕಮಾಂಡರ್ ಎಸ್.ಬಿ.ಅರುಣ್ ಕುಮಾರ್ ಉದ್ಘಾಟಿಸಿದರು. ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಉಪಸ್ಥಿತರಿದ್ದು, ವಿವಿಧ ಆಸನಗಳನ್ನೂ ಪ್ರದರ್ಶಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಈ ವೇಳೆ ಮಾತನಾಡಿದ ಏರ್ ಕಮಾಂಡರ್ ಎಸ್.ಬಿ.ಅರುಣ್ ಕುಮಾರ್, ಒತ್ತಡ ಮತ್ತು ರೋಗ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದ್ದು, ಭಾರತ ಮೂಲದ ಯೋಗ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆದಿರುವುದು ಭಾರತೀಯರೆಲ್ಲರೂ ಹೆಮ್ಮೆ ಪಡುವ ಸಂಗತಿ. ಯೋಗ ಕೇವಲ ದೈಹಿಕ ಸದೃಢತೆಗೆ ಮಾತ್ರವಲ್ಲದೇ ಮಾನಸಿಕ ಸದೃಢತೆಗೂ ಪೂರಕವಾಗಿದೆ. ದೇಹವನ್ನು ಹಗುರ ಮಾಡುವುದಲ್ಲದೇ ಮನುಷ್ಯನಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ. ದೇಹ ಮತ್ತು ಮನಸ್ಸಿನ ಸಮತೋಲನೆಗೆ ಯೋಗ ಸಹಕಾರಿ ಎಂದು ಕಿವಿಮಾತು ಹೇಳಿದರು.

    ಯೋಗಪ್ರದರ್ಶನದಲ್ಲಿ ಭಾರತೀಯ ಸೇನೆ, ಭಾರತೀಯ ಸೀಮಾ ಸುರಕ್ಷಾ ಪಡೆ ಮತ್ತು ರಾಷ್ಟ್ರೀಯ ಸೈನಿಕ ಪಡೆಗಳ ಸೈನಿಕರು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು, ಈಶಾ ಸಂಸ್ಥೆಯ ಸ್ವಯಂ ಸೇವಕರು ಪಾಲ್ಗೊಂಡು ಸೂರ್ಯ ನಮಸ್ಕಾರ, ಪ್ರಾಣಾಯಾಮ, ಬಾಲಾಸನ, ನಾಡಿಶುದ್ಧಿ ಸೇರಿದಂತೆ ವಿವಿಧ ಸರಳ ಆಸನಗಳನ್ನು ಪ್ರದರ್ಶಿಸಿದರು. ಇದನ್ನೂ ಓದಿ: ಕರ್ನಾಟಕ ಪೊಲೀಸರು ಹೋಗಿ ಉತ್ತರ ಪ್ರದೇಶದಲ್ಲಿ ತಪ್ಪೇನೂ ಮಾಡಿಲ್ಲ: ಗೃಹ ಸಚಿವ ಪರಮೇಶ್ವರ್

    ಈ ಸಂದರ್ಭದಲ್ಲಿ ಸಾರ್ವಜನಿಕರು ಯೋಗಾಭ್ಯಾಸ ಮಾಡಲು ಅನುಕೂಲವಾಗುವಂತೆ ಯೋಗ ಭವನವನ್ನು ಉದ್ಘಾಟಿಸಲಾಯಿತು. ಈ ಭವನ ಪ್ರತಿ ದಿನ ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆ ವರೆಗೆ ಯೋಗಾಭ್ಯಾಸಕ್ಕಾಗಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದರು. ಇದನ್ನೂ ಓದಿ: ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

  • ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ

    ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ

    ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ ಮಾಡಲಾಯಿತು.

    ಅಟಾರಿ ವಾಘಾ ಗಡಿಯಲ್ಲಿ ಯೋಗಭ್ಯಾಸ ಮಾಡಲಾಯಿತು. ರಾಜಸ್ಥಾನದ ಗಡಿ ಮತ್ತು ಸಿಯಾಚಿನ್‌ನಲ್ಲೂ ಯೋಗ ಪ್ರದರ್ಶನ ನೀಡಲಾಯಿತು. ಜೊತೆಗೆ ದೆಹಲಿಯ ಸಂಸತ್ ಭವನದ ಆವರಣದಲ್ಲಿ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಯೋಗಾಚರಣೆ ನಡೆಯಿತು.

    10ನೇ ಯೋಗ ದಿನದ ಹಿನ್ನೆಲೆಯಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯೋಗ ಪ್ರದರ್ಶನ ಮಾಡಲಾಯಿತು. ದಾಲ್‌ ಸರೋವರ ತೀರದಲ್ಲಿ ಮೋದಿ ಯೋಗಾಸನ ಮಾಡಿದರು.

    ದೇಶ-ವಿದೇಶಗಳಲ್ಲಿ ಹಲವೆಡೆ ಯೋಗ ಪ್ರದರ್ಶನ ನಡೆದಿದೆ. ಕರ್ನಾಟಕದ ಬಳ್ಳಾರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ಸಿಎಂ ಜೊತೆ ನಟಿ ಶ್ರೀಲೀಲಾ ಯೋಗಾಸನ ಮಾಡಿದರು.

  • ಆರೋಗ್ಯವಂತರಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು: ಹೆಚ್‌ಡಿಕೆ

    ಆರೋಗ್ಯವಂತರಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು: ಹೆಚ್‌ಡಿಕೆ

    – ದೆಹಲಿಯಲ್ಲಿ ಯೋಗ ಮಾಡಿದ ಕೇಂದ್ರ ಸಚಿವ

    ನವದೆಹಲಿ: ನೋಯ್ಡಾದ ಬಿಹೆಚ್‌ಇಎಲ್‌ ಟೌನ್‌ಶಿಪ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ (International Yoga Day 2024) ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭಾಗಿಯಾಗಿದ್ದರು. ಸ್ವತಃ ಯೋಗ ಮಾಡಿ ವಿಶೇಷ ದಿನವನ್ನು ಆಚರಿಸಿದರು.

    ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ಭಾಗಿಯಾದರು. ಬಿಹೆಚ್ಇಎಲ್‌ನ ಸಿಬ್ಬಂದಿ ಮತ್ತು ಸ್ಥಳೀಯರು ಸಾಥ್‌ ನೀಡಿದರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಯೋಗ ದಿನದ ಕುರಿತು ಮಾತನಾಡಿದ ಹೆಚ್‌ಡಿಕೆ, 2014 ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲಿ ಮೋದಿ ಅವರು ಮೊದಲ ಬಾರಿಗೆ ಯೋಗ ಮಾಡಿದರು. ಯೋಗಕ್ಕೆ ಪ್ರಧಾನಿಗಳ ಪ್ರೋತ್ಸಾಹ ಹೆಚ್ಚು ಪ್ರಚುರಪಡಿಸಿದೆ. ಕಾಯಿಲೆಗಳಿಗೆ ಯೋಗ ಸ್ವಲ್ಪ ಮುಕ್ತಿ ನೀಡುತ್ತದೆ. ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಅವರು ಯೋಗ ಮಾಡುತ್ತಿದ್ದಾರೆ. ಇದು ಒಳ್ಳೆಯ ಸಂದೇಶ, ಪ್ರೇರಣೆ ಎಂದು ತಿಳಿಸಿದರು.

    ಮದ್ಯದ ದರ ಇಳಿಕೆಗೆ ಸರ್ಕಾರದ ಅಧಿಸೂಚನೆ ಕುರಿತು ಪ್ರತಿಕ್ರಿಯಿಸಿ, ದರ ಇಳಿಸ್ತಾರ? ಧ್ಯಾನೋದಯ ಆಗಿದಿಯಾ ಅಂತಾ? ಆಸೆಯೇ ದುಃಖಕ್ಕೆ ಕಾರಣ ಎಂದು ಬುದ್ಧ ಒಂದು ಮಾತು ಹೇಳಿದ್ದರು. ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎನ್ನುವುದು ನಮ್ಮ ಮುಖ್ಯಮಂತ್ರಿಗಳ ಸಂದೇಶ ಎನ್ನುವುದು ನನ್ನ ಅಭಿಪ್ರಾಯ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    ಡಿಸಿಎಂ ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿಲ್ಲ. ಈಗ ಚನ್ನಪಟ್ಟಣದ ಬಗ್ಗೆ ಮಮತೆ ಬಂದಿದೆ. ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದಾರೆ. ಇಲ್ಲಿವರೆಗೂ ಅಭಿವೃದ್ಧಿ ಮಾಡಬೇಡಿ ಎಂದು ತಡೆದವರು ಯಾರು? ಸಂಸದರಾಗಿ ಅವರ ಸಹೋದರನ ಕೊಡುಗೆ ಏನು? ಅವರು ಯಾರು ಬೇಕಾದರೂ ಅಭ್ಯರ್ಥಿಯಾಗಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸಲಿದೆ ಎಂದರು.

    ದರ್ಶನ ಪ್ರಕರಣದ ಬಗ್ಗೆ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿರುವುದನ್ನು ನೀವೇ ತೋರಿಸುತ್ತಿದ್ದೀರಿ ಎಂದಷ್ಟೇ ಉತ್ತರಿಸಿದರು.

  • International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    ಯೋಗವೆಂದರೆ (International Yoga Day 2024) ಕೇವಲ ದೈಹಿಕವಾಗಿ ಮಾಡುವ ಆಸನಗಳ ವ್ಯಾಯಾಮ ಅಷ್ಟೇ ಅಲ್ಲ. ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಮ್ಮಿಲನದ ಆಯಾಮ. ಈಗಿನ ವೇಗದ, ಒತ್ತಡಮಯ ಜೀವನಶೈಲಿಯಿಂದ ಮನುಕುಲ ಅಲ್ಪಾಯುಷಿಯಾಗುತ್ತಿದೆ. ಯಾರೊಬ್ಬರ ಬದುಕಿನಲ್ಲಿ ‘ಯೋಗ’ ವೆಂಬುದೇ ಇಲ್ಲದಂತಾಗಿದೆ. ದೈಹಿಕ ಸದೃಢತೆ, ಮಾನಸಿಕ ಸಾಮರ್ಥ್ಯ, ಆಧ್ಯಾತ್ಮಿಕ ಚಿಂತನೆ ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತದೆ. ಮನುಷ್ಯ ಪರಿಪೂರ್ಣನಾಗಿದ್ದರೆ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಈಗಿನ ಡೋಲಾಯಮಾನ ಯುಗದಲ್ಲಿ ಯೋಗದ ಹಾದಿಯಲ್ಲಿ ನಡೆದು ಆರೋಗ್ಯಕರ ಸಮಾಜ ನಿರ್ಮಿಸುವುದು ಮುಖ್ಯವಾಗಿದೆ.

    ಇಂದು (ಜೂ.21) ಅಂತರರಾಷ್ಟ್ರೀಯ ಯೋಗ ದಿನ. ಈ ಬಾರಿಯ ವಸ್ತು ವಿಷಯ ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’. ಇಡೀ ಜಗತ್ತಿಗೆ ಇಂದು ಯೋಗಾಸನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಎಲ್ಲರ ಚಿತ್ತ ಯೋಗದ ಕಡೆ ನೆಟ್ಟಿದೆ. ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಯನ್ನು ದಾಟಿ ಯೋಗ ಪಸರಿಸಿದೆ. ಯೋಗಾಸನದ (Yoga) ಪ್ರಯೋಜನ, ಮಹತ್ವವನ್ನು ಜಗತ್ತು ಕೊಂಡಾಡುತ್ತಿದೆ. ಭಾರತವಷ್ಟೇ ಅಲ್ಲ, ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗುತ್ತಿದೆ. ದೈಹಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಯೋಗ ಎಂದು ಸಾರಿ ಹೇಳಲಾಗುತ್ತಿದೆ. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಭಾರತದಲ್ಲಂತೂ ಪ್ರತಿ ವರ್ಷ ಯೋಗ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಗುಜರಾತ್, ಕರ್ನಾಟಕ ಹೀಗೆ ಅನೇಕ ರಾಜ್ಯಗಳಲ್ಲಿ ಗಿನ್ನಿಸ್ ರೆಕಾರ್ಡ್‌ಗಳು ಕೂಡ ಆಗಿದೆ. ‘ಯೋಗ’ಕ್ಕೆ ಜಾಗತಿಕ ಮನ್ನಣೆ ತಂದುಕೊಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದರು. ಅವರ ನೇತೃತ್ವದಲ್ಲಿ ಭಾರತದ ಅನೇಕ ಕಡೆಗಳಲ್ಲಿ ದಾಖಲೆಯ ಮಟ್ಟದಲ್ಲಿ ಜನರನ್ನು ಸೇರಿ ಯೋಗ ದಿನವನ್ನು ಆಚರಿಸಲಾಗುತ್ತಿದೆ.

    ಮೊದಲ ಅಂತಾರಾಷ್ಟ್ರೀಯ ಯೋಗ ದಿನವೇ ರೆಕಾರ್ಡ್
    2015ರ ಜೂ.21 ರಂದು ವಿಶ್ವದಾದ್ಯಂತ ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಭಾರತದ ನವದೆಹಲಿಯ ರಾಜಪಥದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಅನೇಕ ರಾಷ್ಟ್ರಗಳ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು. 35 ನಿಮಿಷಗಳ ಕಾಲ 21 ಆಸನಗಳನ್ನು ಪ್ರದರ್ಶಿಸಲಾಯಿತು. ಬರೋಬ್ಬರಿ 35,985 ಮಂದಿ ಒಂದೇ ವೇದಿಕೆಯಲ್ಲಿ ಯೋಗಾಸನದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ಗಿನ್ನಿಸ್ ದಾಖಲೆ ಬರೆಯಿತು. ಭಾರತವಷ್ಟೇ ಅಲ್ಲದೇ ನ್ಯೂಯಾರ್ಕ್, ಪ್ಯಾರಿಸ್, ಬೀಜಿಂಗ್, ಬ್ಯಾಂಕಾಕ್, ಕೌಲಾಲಂಪುರ್, ಸ್ಯಾನ್ ಫ್ರಾನ್ಸಿಸ್ಕೋ, ಸಿಯೋಲ್ ಮತ್ತು ಸೀಶೆಲ್ಸ್ ಸೇರಿದಂತೆ ಅನೇಕ ರಾಷ್ಟçಗಳಲ್ಲಿ ಯೋಗ ದಿನವನ್ನು ಆಚರಿಸಲಾಗಿತ್ತು. ಇದನ್ನೂ ಓದಿ: ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ

    ಉತ್ತರ ಪ್ರದೇಶದಲ್ಲಿ 51,000 ಜನರಿಂದ ಯೋಗಾಸನ
    ಮೊದಲ ವರ್ಷದ ಯಶಸ್ಸಿನ ಫಲವಾಗಿ, ಪ್ರತಿ ಬಾರಿ ದೊಡ್ಡ ಕಾರ್ಯಕ್ರಮ ಆಯೋಜಿಸಿ ಜನರನ್ನು ಒಟ್ಟುಗೂಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೊಂಡಿತು. 2017 ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಉತ್ತರ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು 50,000 ಜನರು ಪಾಲ್ಗೊಂಡು ಯೋಗಾಸನ ಮಾಡಿದರು. ಇದು ಮೊದಲ ವರ್ಷದ ದಾಖಲೆಯನ್ನು ಮುರಿಯಿತು. ಆಗ ಕರ್ನಾಟಕದ ಮೈಸೂರಿನಲ್ಲೂ ಬೃಹತ್ ವೇದಿಕೆಯಲ್ಲಿ ಯೋಗಾಸನ ಕಾರ್ಯಕ್ರಮ ಜರುಗಿತ್ತು. ಇಲ್ಲಿ 55,506 ಜನರು ಭಾಗವಹಿಸಿದ್ದರು. ಇದು ಕೂಡ ಗಿನ್ನಿಸ್ ರೆಕಾರ್ಡ್ ದಾಖಲಿಸಿತ್ತು.

    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ಹಂಗಾಮ
    2022ರಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ಕಾರ್ಯಕ್ರಮ ನಡೆದಿತ್ತು. ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಜನರು ಯೋಗಾಸನ ಮಾಡಿದರು. ಆಗ ಸುಮಾರು 15,000 ಮಂದಿ ಭಾಗವಹಿಸಿದ್ದರು. ಇದು ಗಿನ್ನಿಸ್ ರೆಕಾರ್ಡ್ ಮಾಡದೇ ಇದ್ದರೂ ದೇಶದ ಗಮನ ಸೆಳೆಯಿತು. ಆಗ ತಾನೇ ದೇಶವು ಜನತೆ ಕೋವಿಡ್ ಸಾಂಕ್ರಾಮಿಕದಿಂದ ಚೇತರಿಸಿಕೊಂಡಿತ್ತು. ಹೀಗಾಗಿ ಮುಂಜಾಗ್ರತೆ ದೃಷ್ಟಿಯಿಂದ ಸೀಮಿತ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದನ್ನೂ ಓದಿ: ಅಫ್ಘಾನ್‌ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್‌ ಜಯ – ಹಿಟ್‌ಮ್ಯಾನ್‌ ವಿಶೇಷ ಸಾಧನೆ!

    ಮೋದಿ ತವರಲ್ಲಿ ದಾಖಲೆ
    2023ರಲ್ಲಿ ಪ್ರಧಾನಿ ಮೋದಿ ತವರು ಗುಜರಾತ್‌ನ ಸೂರತ್‌ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಸುಮಾರು 1.50 ಲಕ್ಷ ಜನರು ಪಾಲ್ಗೊಂಡು ಯೋಗಾಸನ ಮಾಡಿದರು. ವಿಶ್ವದಲ್ಲೇ ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ನಡೆಸಿದ ಕಾರ್ಯಕ್ರಮ ಇದಾಗಿದೆ. ಇದುವರೆಗಿನ ಅತಿದೊಡ್ಡ ದಾಖಲೆಯಿದು. ಹೀಗಾಗಿ ಇದು ವರ್ಲ್ಡ್ ಆಫ್ ಬುಕ್ ರೆರ್ಕಾಡ್ ಸೇರಿತು. ಇದೇ ವರ್ಷ ಭಾರತದ ನರೇಂದ್ರ ಮೋದಿ ನೇತೃತ್ವದಲ್ಲಿ ನ್ಯೂಯಾರ್ಕ್ನಲ್ಲಿರುವ ಯುಎನ್ ಪ್ರಧಾನ ಕಚೇರಿಯಲ್ಲಿ ಐತಿಹಾಸಿಕ ಯೋಗ ಕಾರ್ಯಕ್ರಮ ನಡೆಯಿತು.