Tag: International Yoga Day

  • ಅಮೆರಿಕದಲ್ಲಿ ಮೋದಿ ‘ಯೋಗ’ – ಗಿನ್ನಿಸ್‌ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ

    ಅಮೆರಿಕದಲ್ಲಿ ಮೋದಿ ‘ಯೋಗ’ – ಗಿನ್ನಿಸ್‌ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ

    – 135 ಕ್ಕೂ ಹೆಚ್ಚು ರಾಷ್ಟ್ರಗಳ ಪ್ರಜೆಗಳು ಯೋಗಾಭ್ಯಾಸದಲ್ಲಿ ಭಾಗಿ

    ನ್ಯೂಯಾರ್ಕ್‌: ವಿಶ್ವ ಯೋಗ ದಿನದ (International Yoga Day 2023) ಅಂಗವಾಗಿ ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಕ್ಕೂ ಹೆಚ್ಚು ರಾಷ್ಟ್ರಗಳ ಜನರು ಭಾಗವಹಿಸಿ, ಗಿನ್ನಿಸ್‌ ದಾಖಲೆ ಬರೆದರು.

    ಪ್ರಧಾನಿ ಮೋದಿ ಅವರು ಇದೇ ಮೊದಲ ಬಾರಿಗೆ ವಿದೇಶದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದರು. ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮೋದಿ ಭಾಷಣ

    ಮೊದಲಿಗೆ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮೋದಿ ಬಳಿಕ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು. ಮೋದಿ ಆಗಮಿಸುತ್ತಿದ್ದಂತೆ ಅಮೆರಿಕದಲ್ಲೂ `ಮೋದಿ.. ಮೋದಿ’ ಜಯಘೋಷ ಮೊಳಗಿತು. ವಸುದೈವ ಕುಟುಂಬಕಂ ಘೋಷದೊಂದಿಗೆ ನಡೆದ ಮೋದಿಯ ಯೋಗ ಯಾಗಕ್ಕೆ ವಿಶ್ವದ 135 ಕ್ಕೂ ಹೆಚ್ಚು ದೇಶಗಳ ಗಣ್ಯರು ಸಾಕ್ಷಿಯಾದರು.

    ಸಾವಿರಾರು ಜನರ ಜೊತೆ ಪ್ರಧಾನಿ ಮೋದಿ ಪ್ರಾಣಾಯಾಮ, ಓಂಕಾರ, ಧ್ಯಾನ ಮತ್ತು ಸಂಕಲ್ಪ ಆ ಬಳಿಕ ಕಪಾಲಬಾತಿ, ಷಣ್ಮುಖ ಮುದ್ರೆ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡಿದರು. ಯೋಗಾಸನಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ಯೋಗ ಭಾರತದ ಪರಂಪರೆ ಸಾರುತ್ತದೆ. ಯೋಗದಿಂದ ಇಡೀ ವಿಶ್ವವೇ ಒಗ್ಗೂಡಿದೆ. ಯೋಗ ಎಂದರೆ ಏಕತೆ. ಎಲ್ಲರನ್ನು ಒಗ್ಗೂಡಿಸುತ್ತೆ. ಯೋಗದ ಮೂಲಕ ಇಡೀ ವಿಶ್ವವೇ ಹತ್ತಿರವಾಗುತ್ತಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

    ಯೋಗ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ದೇಶಗಳ ಪ್ರಜೆಗಳು ಭಾಗಿಯಾಗಿದ್ದಕ್ಕೆ ಗಿನ್ನಿಸ್ ರೆಕಾರ್ಡ್ ಆಗಿದೆ. ಯೋಗ ಮಹತ್ವ ಸಾರುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೆನಿಯೋ ಗುಟಾರೆಸ್ ಶ್ಲಾಘಿಸಿದ್ದಾರೆ.

  • ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮೋದಿ ಭಾಷಣ

    ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮೋದಿ ಭಾಷಣ

    ವಾಷಿಂಗ್ಟನ್: ಯೋಗ ಭಾರತದಿಂದ ಬಂದಿದ್ದು, ಅತ್ಯಂತ ಹಳೆಯ ಸಂಪ್ರದಾಯವಾಗಿದೆ. ಯೋಗಾಸನಗಳನ್ನು ಮಾಡಲು ಯಾವುದೇ ವಯಸ್ಸು, ಲಿಂಗ ಭೇದವಿಲ್ಲ. ಮಾತ್ರವಲ್ಲದೆ ಪ್ರತಿಯೊಬ್ಬರ ಆರೋಗ್ಯದ ಮಟ್ಟಕ್ಕೂ ಇದು ಹೊಂದಿಕೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ.

    ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ ವಿಶ್ವ ಯೋಗ ದಿನದ (International Yoga Day) ನೇತೃತ್ವ ವಹಿಸಿದ ಮೋದಿ, ಕಳೆದ ವರ್ಷ ಇಡೀ ವಿಶ್ವವೇ 2023ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಭಾರತದ ಪ್ರಸ್ತಾಪವನ್ನು ಒಮ್ಮತದಿಂದ ಒಪ್ಪಿಕೊಂಡಿತು. ಇದೀಗ ಜಗತ್ತು ಈ ವಿಶೇಷ ದಿನಕ್ಕಾಗಿ ಒಟ್ಟುಗೂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    ಈ ಕಾರ್ಯಕ್ರಮ ಸಂಪೂರ್ಣ ಮಾನವೀಯತೆಯ ಸಂಗಮ ಸ್ಥಳದಲ್ಲಿ ನಡೆಯುತ್ತಿದೆ. ನಿಮ್ಮೆಲ್ಲರನ್ನೂ ನೋಡಲು ನನಗೆ ಸಂತೋಷವಾಗಿದೆ ಹಾಗೂ ವಿಶ್ವ ಯೋಗ ದಿನವನ್ನಾಚರಿಸಲು ಬಂದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ: ಎಲಾನ್ ಮಸ್ಕ್

    ಇಂದು ಇಲ್ಲಿ ಪ್ರತಿಯೊಂದು ರಾಷ್ಟ್ರದಿಂದ ಪ್ರತಿನಿಧಿಯಾಗಿ ಸೇರಿದ್ದಾರೆ ಎಂದು ಆಯೋಜಕರು ನನಗೆ ಹೇಳಿದರು. ಯೋಗ ಎಂದರೆ ಒಂದುಗೂಡಿಸುವುದು. ಆದ್ದರಿಂದ ನೀವು ಒಟ್ಟಿಗೆ ಸೇರುತ್ತಿರುವುದು ಯೋಗದ ಮತ್ತೊಂದು ರೂಪದ ಅಭಿವ್ಯಕ್ತಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

    ಯೋಗವು ಹಕ್ಕುಸ್ವಾಮ್ಯಗಳು, ಪೇಟೆಂಟ್‌ಗಳಿಂದ ಮಾತ್ರವಲ್ಲದೇ ದುಬಾರಿ ಪಾವತಿಗಳಿಂದಲೂ ಮುಕ್ತವಾಗಿದೆ. ಯೋಗ ಯಾವುದೇ ವಯಸ್ಸು, ಲಿಂಗ ಹಾಗೂ ಫಿಟ್‌ನೆಸ್ ಮಟ್ಟಕ್ಕೂ ಹೊಂದಿಕೊಳ್ಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

  • ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್

    ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್

    ಬೆಂಗಳೂರು: ಆಧುನಿಕ ಜೀವನ ಶೈಲಿಯ ಒತ್ತಡಗಳ (Stress) ಪರಿಹಾರಕ್ಕೆ ಯೋಗ ಸಹಕಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

    ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಬುಧವಾರ ನಡೆದ ಯೋಗ ದಿನಾಚರಣೆ (International Yoga Day) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ ಪ್ರಪಂಚಕ್ಕೆ ಭಾರತ ಕೊಟ್ಟ ಕೊಡುಗೆಯಾಗಿದೆ. ವಿಶ್ವದಾದ್ಯಂತ ಯೋಗಕ್ಕೆ ಮನ್ನಣೆ ಸಿಗುತ್ತಿದೆ. ಇದರ ಅಭ್ಯಾಸದಿಂದ ದೈಹಿಕ ಮಾನಸಿಕ ಆರೋಗ್ಯ ಸುಧಾರಣೆಯೊಂದಿಗೆ ಉತ್ಸಾಹ ಮೂಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು

    ಇಂದಿನ ಜೀವನ ಶೈಲಿಯಿಂದ ಮಧುಮೇಹ, ಬಿಪಿ, ಕ್ಯಾನ್ಸರ್, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿವೆ. ಯೋಗವನ್ನು ರೂಢಿಸಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ನಮ್ಮ ಸರ್ಕಾರದಿಂದ ಯೋಗಕ್ಕೆ ಪ್ರೋತ್ಸಾಹ ದೊರೆಯಲಿದೆ ಎಂದಿದ್ದಾರೆ.

    ಶಾಲೆಗಳು ಸೇರಿದಂತೆ ಎಲ್ಲಾ ಕಡೆ ಯೋಗಭ್ಯಾಸಕ್ಕೆ ಪ್ರೋತ್ಸಾಹವನ್ನು ಸರ್ಕಾರದ ವತಿಯಿಂದಲೂ ನೀಡಲಾಗುತ್ತದೆ. ಯುವ ಜನರು ಯೋಗದ ಮಹತ್ವವನ್ನು ಅರಿತು ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಇದರಿಂದಾಗಿ ಹಿರಿಯರು ನಮಗೆ ನೀಡಿರುವ ಕೊಡುಗೆ ಇನ್ನೂ ಬೆಳೆಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ: ಎಲಾನ್ ಮಸ್ಕ್

  • ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ: ಮೋದಿ

    ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ: ಮೋದಿ

    ನ್ಯೂಯಾರ್ಕ್‌: ಅಂತಾರಾಷ್ಟ್ರೀಯ ಯೋಗ ದಿನದ (International Yoga Day) ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುತ್ತದೆ. ಯೋಗ ದಿನಾಚರಣೆಗೆ ಭಾರತ ಕರೆ ನೀಡಿತ್ತು. ಭಾರತ ಕರೆ ನೀಡಿದಂತೆ ವಿಶ್ವದ ಹಲವು ದೇಶಗಳಲ್ಲಿ ಯೋಗ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ಮೋದಿ

    ವಿಶ್ವಸಂಸ್ಥೆಯ (United Nations) ಪ್ರಧಾನ ಕಚೇರಿಯಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ. 2014ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನಾಚರಣೆಯ ಪ್ರಸ್ತಾಪ ಬಂದಾಗ ಅದಕ್ಕೆ ದಾಖಲೆ ಸಂಖ್ಯೆಯ ದೇಶಗಳು ಬೆಂಬಲ ನೀಡಿದ್ದವು ಎಂದರು.

    ಅಮೇರಿಕ ಅಧ್ಯಕ್ಷ ಜೋ ಬೈಡೆನ್‌ (Joe Biden) ಆಹ್ವಾನ ಮೇರೆಗೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವ ಮೋದಿ ಅವರಿಗೆ ರಾಜತಾಂತ್ರಿಕ ಅಧಿಕಾರಿಗಳಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

    ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ.

    ಇದಾದ ಬಳಿಕ ಅವರು ರಾತ್ರಿ 8 ಗಂಟೆಗೆ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಮಾಡಲಿದ್ದಾರೆ. ವಾಷಿಂಗ್ಟನ್ ಡಿಸಿ ತಲುಪಿದ ಬಳಿಕ ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಆಯೋಜಿಸಿರುವ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.

  • ಮೋದಿ ಅಮೆರಿಕ ಪ್ರವಾಸ – ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ, ಮೊದಲ ಬಾರಿ ಈಜಿಪ್ಟ್‌ಗೆ ನಮೋ

    ಮೋದಿ ಅಮೆರಿಕ ಪ್ರವಾಸ – ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ, ಮೊದಲ ಬಾರಿ ಈಜಿಪ್ಟ್‌ಗೆ ನಮೋ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 20ರಿಂದ ಅಮೆರಿಕ (America) ಪ್ರವಾಸ ಕೈಗೊಳ್ಳಲಿದ್ದು ಜೂನ್ 22 ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

    ಮೋದಿ ಅದೇ ದಿನ ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್‌ನಲ್ಲಿ ಮೋದಿ ಪ್ರಮುಖ ಸಿಇಒಗಳು, ವೃತ್ತಿಪರರು, ಇತರೆ ಉದ್ಯಮಿಗಳ ಜೊತೆ ಸಂವಾದಗಳನ್ನು ನಡೆಸಲು ನಿರ್ಧರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

    ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಜೂನ್ 21 ರಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ (International Yoga Day) ಆಚರಣೆಯನ್ನು ಪ್ರಧಾನ ಮಂತ್ರಿ ಮೋದಿ ಮುನ್ನಡೆಸಲಿದ್ದಾರೆ.

    ಜೂನ್ 21 ರಂದು ಆಚರಿಸಲಾಗುವ 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಅಧಿವೇಶನವನ್ನು ಮುನ್ನಡೆಸಲಿದ್ದಾರೆ. ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಅಂತಾರಾಷ್ಟ್ರೀಯ ಯೋಗ ದಿನ ಹೊಂದಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

    ಜೂನ್ 23 ರಂದು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ವಿಶೇಷ ಆಹ್ವಾನಿತ ಅನಿವಾಸಿ ಭಾರತೀಯರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 15 ಭಾರತೀಯ ರಾಜ್ಯಗಳನ್ನು ಪ್ರತಿನಿಧಿಸುವ 25 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲು 160 ಕ್ಕೂ ಹೆಚ್ಚು ಕಲಾವಿದರು ಕಳೆದ ವಾರದಿಂದ ಅಮೆರಿಕದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಬಹುತೇಕ ಕಲಾವಿದರು ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಸಾರಲಿದ್ದಾರೆ.

    ಜೂನ್ 24-25 ರಂದು ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್‌ನ (Egypt) ಕೈರೋಗೆ ತೆರಳಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಆಹ್ವಾನದ ಮೇರೆಗೆ ಮೋದಿ ತೆರಳುತ್ತಿದ್ದು ಇದು ಅವರ ಮೊದಲ ಈಜಿಪ್ಟ್ ಭೇಟಿಯಾಗಲಿದೆ. ಮಾತ್ರವಲ್ಲದೇ ಇದೊಂದು ಐತಿಹಾಸಿಕ ಕಾರ್ಯಕ್ರವಾಗಲಿದೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು

  • ಯೋಗ ದಿನದಂದು ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

    ಯೋಗ ದಿನದಂದು ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

    ವಿಜಯಪುರ: ಯೋಗ ದಿನದಂದೂ ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಐತಿಹಾಸಿಕ ಗೋಲಗುಮ್ಮಟದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮಾಜಿ ಕೇಂದ್ರ ಸಚಿವ, ಸಂಸದ ರಮೇಶ್ ಜಿಗಜಿಣಗಿ ಗೈರಾಗಿದ್ದರು.

    ಹಾಲಿ ಕೇಂದ್ರ ಸಚಿವರು ಬಂದಿದ್ದರೂ ಯೋಗ ದಿನಾಚರಣೆಯಿಂದ ರಮೇಶ್ ಜಿಗಜಿಣಗಿ ಹಾಗೂ ಟೀಮ್ ಗೈರಾಗಿತ್ತು. ಶಾಸಕ ಯತ್ನಾಳ್ ಹಾಗೂ ಸಂಸದ ರಮೇಶ್ ಜಿಗಜಿಣಗಿ ಮಧ್ಯೆ ಇರುವ ಭಿನ್ನಮತ ಹಿನ್ನೆಲೆ ಸರ್ಕಾರದಿಂದ ಆಯೋಜಿಸಿದ್ದ ಯೋಗ ದಿನಾಚರಣೆಗೆ ಸಂಸದ ರಮೇಶ್ ಜಿಗಜಿಣಗಿ ಗೈರಾಗಿದ್ದಾರೆ ಎಂಬ ಚರ್ಚೆ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಮುಂಬೈನಲ್ಲಿ ಮಠದ ಶಿಷ್ಯರೊಂದಿಗೆ ಯೋಗ ಮಾಡಿದ ಪೇಜಾವರ ಶ್ರೀ

    ಸರ್ಕಾರಿ ಯೋಗ ದಿನಾಚರಣೆಗೆ ಗೈರಾದ ಸಂಸದ ರಮೇಶ್ ಜಿಗಜಿಣಗಿ ನಗರದ ಗಗನ ಮಹಲ್ ಆವರಣದಲ್ಲಿ ಬಿಜೆಪಿಯಿಂದ ಪ್ರತ್ಯೇಕ ಯೋಗ ದಿನಾಚರಣೆ ಆಚರಿಸಿದರು. ಯತ್ನಾಳ್ ವಿರೋಧಿ ಬಣದಿಂದ ಪ್ರತ್ಯೇಕ ಯೋಗ ದಿನಾಚರಣೆ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಉಮೇಶ್ ಕತ್ತಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗಿಯಾದ ಯೋಗ ದಿನಾಚರಣೆಯಿಂದ ರಮೇಶ್ ಜಿಗಜಿಣಗಿ ದೂರ ಉಳಿದಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿಯಿಂದ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಸಂಸದ ರಮೇಶ್ ಜಿಗಜಿಣಗಿಗೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಅರುಣ್ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌ಆರ್ ಪಾಟೀಲ್ ಕೂಚಬಾಳ ಸಾಥ್ ನೀಡಿದ್ದಾರೆ.

    Live Tv

  • ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.

    ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ತಂದೆಯೊಂದಿಗಿನ ಸಂಬಂಧ ಕಡಿದುಕೊಳ್ಳಲು ಸಿದ್ಧವಾದ ಮಸ್ಕ್ ತೃತೀಯ ಲಿಂಗಿ ಮಗಳು

    Yogi wants madrasas in UP to record August 15 celebrations on camera -  India News

    ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

    ಪ್ರಾರಂಭವಾಗಿದ್ದು ಹೇಗೆ?
    ಯೋಗದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯ 69ನೇ ಅಧಿವೇಶನದಲ್ಲಿ ಯೋಗ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದರು. ನಂತರ 2014ರ ಡಿಸೆಂಬರ್ 11 ರಂದು, ಯುಎಸ್‍ಜಿಎ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಘೋಷಿಸಿತು. ಇದನ್ನೂ ಓದಿ: ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು 

    ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಯೋಗ ಫಾರ್ ಹ್ಯುಮಾನಿಟಿ’.

    Live Tv

  • ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು

    ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು

    ಬೆಂಗಳೂರು: ಇಂದು ‘ಅಂತರಾಷ್ಟ್ರೀಯ ಯೋಗ ದಿನ’. ಎಲ್ಲಕಡೆ ಯೋಗ ಮಾಡುವ ವಾತಾವರಣ ಸೃಷ್ಟಿಯಾಗಿದ್ದು, ನಾಡಿನ ಹಲವು ಜನರು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅದರಲ್ಲಿಯೂ ರಾಜಕಾರಣಿಗಳು, ಸೆಲೆಬ್ರಿಟಿಗಳು ಯೋಗ ದಿನದ ಶುಭ ಕೋರುವ ಮೂಲಕ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದ್ದಾರೆ.

    ಕೂ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ರಾಜ್ಯದ ಜನರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು. ‘ಮಾನವೀಯತೆಗಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಜಗತ್ತಿನೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಾಗುತ್ತಿದೆ. ಬೆಂಗಳೂರು ನಿವಾಸದಲ್ಲಿ ಇಂದು ಯೋಗಾಭ್ಯಾಸ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಲಾಗಿದೆ: ಅದಿತಿ ಪ್ರಭುದೇವ 

    ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸಹ ಕೂ ಮಾಡಿದ್ದು, ಯೋಗವು ಜಗತ್ತಿಗೆ ಭಾರತ ನೀಡಿದ ಅಮೂಲ್ಯ ಕೊಡುಗೆಯಾಗಿದೆ. ಈ ಅಂತರಾಷ್ಟ್ರೀಯ ಯೋಗ ದಿನದಂದು, ಮಾನವಕುಲದ ಸುಧಾರಣೆಗಾಗಿ ಈ ಕಾಲಾತೀತ ಜ್ಞಾನವನ್ನು ಪಡೆದುಕೊಳ್ಳಲು ಪ್ರತಿಜ್ಞೆ ಮಾಡೋಣ ಎಂದು ಮನವಿ ಮಾಡಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಆರೋಗ್ಯಪೂರ್ಣ ಶರೀರ ಮತ್ತು ಮನಸ್ಸಿನ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದಿದ್ದಾರೆ.

    ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಯೋಗ ನಮ್ಮ ಹೆಮ್ಮೆಯ ಪರಂಪರೆ. ಸನ್ಮಾನ್ಯ ಪ್ರಧಾನಿ @narendramodi ಅವರ ದಿಟ್ಟ ಪ್ರಯತ್ನದಿಂದ ಯೋಗಕ್ಕೆ ಇಂದು ಅಂತಾರಾಷ್ಟ್ರೀಯ ಮಾನ್ಯತೆ ದೊರಕಿದೆ. ದೇಹ ಹಾಗೂ ಮನಸ್ಸನ್ನು ಕೇಂದ್ರೀಕರಿಸಿ ಶಿಸ್ತಿನ ಪಾಠ ಹೇಳುವ ಯೋಗ ಕುರಿತು ಜಾಗೃತಿ ಹೆಚ್ಚಿಸೋಣ. ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗದಿನದ ಶುಭಾಶಯಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ತಂದೆಯೊಂದಿಗಿನ ಸಂಬಂಧ ಕಡಿದುಕೊಳ್ಳಲು ಸಿದ್ಧವಾದ ಮಸ್ಕ್ ತೃತೀಯ ಲಿಂಗಿ ಮಗಳು

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಯೋಗದ ಶ್ಲೋಕವನ್ನು ಕೂ ಮಾಡುವ ಮೂಲಕ ಜನರಿಗೆ ಯೋಗ ದಿನದ ಶುಭಕೋರಿದ್ದಾರೆ.

    ಯೋಗೇನ ಚಿತ್ತಸ್ಯ ಪದೇನ ವಾಚಂ |
    ಮಲಂ ಶರೀರಸ್ಯ ಚ ವೈದ್ಯಕೇನ
    ಯೋಪಾಕರೋತ್ತಂ ಪ್ರವರಂ ಮುನೀನಾಂ |
    ಪತಂಜಲಿಂ ಪ್ರಾಂಜಲಿರಾನ ತೋಸ್ಮಿ ||

    Koo App

    ಯೋಗೇನ ಚಿತ್ತಸ್ಯ ಪದೇನ ವಾಚಂ | ಮಲಂ ಶರೀರಸ್ಯ ಚ ವೈದ್ಯಕೇನ ಯೋಪಾಕರೋತ್ತಂ ಪ್ರವರಂ ಮುನೀನಾಂ | ಪತಂಜಲಿಂ ಪ್ರಾಂಜಲಿರಾನ ತೋಸ್ಮಿ || ಪತಂಜಲಿ ಮಹಾಮುನಿಗಳಿಂದ ರಚನೆಯಾದ ಜಗತ್ತಿನ ಅತ್ಯುತ್ತಮ ವಿದ್ಯೆ ಯೋಗಶಾಸ್ತ್ರ. ಭಾರತದ ಈ ಪುರಾತನ ವಿದ್ಯೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹಾಗೂ ಜಗತ್ತಿಗೆ ಯೋಗದಿನಾಚರಣೆಯನ್ನ ಪರಿಚಯಿಸಿದ ಕೀರ್ತಿ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಸರ್ವರಿಗೂ ಯೋಗದಿನಾಚರಣೆಯ ಶುಭಾಶಯಗಳು.

    C T Ravi (@ctravibjp) 21 June 2022

    ಪತಂಜಲಿ ಮಹಾಮುನಿಗಳಿಂದ ರಚನೆಯಾದ ಜಗತ್ತಿನ ಅತ್ಯುತ್ತಮ ವಿದ್ಯೆ ಯೋಗಶಾಸ್ತ್ರ. ಭಾರತದ ಈ ಪುರಾತನ ವಿದ್ಯೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹಾಗೂ ಜಗತ್ತಿಗೆ ಯೋಗದಿನಾಚರಣೆಯನ್ನ ಪರಿಚಯಿಸಿದ ಕೀರ್ತಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಸರ್ವರಿಗೂ ಯೋಗದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

    Live Tv

  • ದೆಹಲಿ ಸ್ಟೇಡಿಯಂನಲ್ಲಿ ಸಾರ್ವಜನಿಕರೊಂದಿಗೆ ಕೇಜ್ರಿವಾಲ್ ಯೋಗ

    ದೆಹಲಿ ಸ್ಟೇಡಿಯಂನಲ್ಲಿ ಸಾರ್ವಜನಿಕರೊಂದಿಗೆ ಕೇಜ್ರಿವಾಲ್ ಯೋಗ

    ನವದೆಹಲಿ: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಗರದ ತ್ಯಾಗರಾಜ್ ಕ್ರೀಡಾಂಗಣದಲ್ಲಿ ನೂರಾರು ಜನರೊಂದಿಗೆ ಯೋಗಾಸನ ಮಾಡಿದರು.

    ತ್ಯಾಗರಾಜ್ ಕ್ರೀಡಾಂಗಣದಲ್ಲಿ ಕೇಜ್ರಿವಾಲ್ ಅವರು ತಮ್ಮ ಡೆಪ್ಯೂಟಿ ಮನೀಶ್ ಸಿಸೋಡಿಯಾ ಅವರೊಂದಿಗೆ ‘ದಿಲ್ಲಿ ಕಿ ಯೋಗಶಾಲಾ’ ಸದಸ್ಯರೊಂದಿಗೆ ಸೇರಿಕೊಂಡು ಯೋಗ ಮಾಡಿದರು. ಇದೇ ವೇಳೆ ಪ್ರತಿದಿನ ಯೋಗಾಭ್ಯಾಸ ಹಾಗೂ ಪ್ರಾಣಾಯಾಮವನ್ನು ಅಭ್ಯಾಸ ಮಾಡುವಂತೆ ಸಂಕಲ್ಪ ಮಾಡಬೇಕೆಂದು ಜನರಿಗೆ ಮನವಿ ಮಾಡಿದ್ದಾರೆ.

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿದ್ದ ಅವರು, ದೆಹಲಿ ಸರ್ಕಾರವು ಉಚಿತ ಯೋಗ ತರಗತಿಗಳನ್ನು ಏರ್ಪಡಿಸಿದೆ ಮತ್ತು ಆರೋಗ್ಯಕರ ಜೀವನಕ್ಕಾಗಿ ವ್ಯಾಯಾಮಗಳನ್ನು ಅಭ್ಯಾಸ ಮಾಡುವಂತೆ ಜನರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಪ್ರಧಾನಿಯೊಂದಿಗೆ ಭಾಗವಹಿಸಿದ್ದು ಸಂತಸ ತರಿಸಿದೆ: ಯದುವೀರ್

    ಯೋಗಾಭ್ಯಾಸ ಮಾಡಲು ನಾಗರಿಕರು ಸಿದ್ಧರಿದ್ದರೆ 20 ರಿಂದ 25 ಗುಂಪುಗಳಲ್ಲಿ ‘ದಿಲ್ಲಿ ಕಿ ಯೋಗಸಹಾಲಾ’ ಕಾರ್ಯಕ್ರಮದ ಅಡಿಯಲ್ಲಿ ದೆಹಲಿ ಸರ್ಕಾರವು ಬೋಧಕರನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ

    Live Tv

  • ಪ್ರಧಾನಿಯೊಂದಿಗೆ ಭಾಗವಹಿಸಿದ್ದು ಸಂತಸ ತರಿಸಿದೆ: ಯದುವೀರ್

    ಪ್ರಧಾನಿಯೊಂದಿಗೆ ಭಾಗವಹಿಸಿದ್ದು ಸಂತಸ ತರಿಸಿದೆ: ಯದುವೀರ್

    ಮೈಸೂರು: ನಮ್ಮ ದೇಶದ ಪ್ರತಿಯೊಬ್ಬರ ಪ್ರತಿನಿಧಿಯಾಗಿರುವಂತಹ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದು ಬಹಳ ಸಂತೋಷವಾಯಿತು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ಮೈಸೂರು ಆಸ್ಥಾನದ ಒಡೆಯರ ಕಾಲದಿಂದಲೂ ಯೋಗಾಭ್ಯಾಸ ನಡೆಯುತ್ತಿದೆ. ಮೈಸೂರು ಆಸ್ಥಾನದಲ್ಲಿ ಯೋಗ ಮುಂದುವರೆಯುವುದಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣ ರಾಜ ಒಡೆಯರ್ ನೀಡುತ್ತಿದ್ದರು. ಈ ಕಾರ್ಯಕ್ರಮ ಆ ಪರಂಪರೆಯ ಪ್ರತಿಬಿಂಬ ಎಂದೇ ಹೇಳಬಹುದು. ವಿಶೇಷವೆಂದರೆ 2 ವರ್ಷಗಳ ನಂತರ ಸಾರ್ವಜನಿಕವಾಗಿ ಕಾರ್ಯಕ್ರಮ ನಡೆಯುತ್ತಿರುವುದು ಅತ್ಯಂತ ಸಂತೋಷಕರವಾದ ವಿಚಾರವಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ

    ದಿನನಿತ್ಯ ಯೋಗಾಭ್ಯಾಸ ಮಾಡಿ, ಯೋಗಾಭ್ಯಾಸ ಶಾರೀಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ಕೂಡ ನಿಮ್ಮನ್ನು ಆರೋಗ್ಯಕರವಾಗಿರಿಸುತ್ತದೆ. ಯೋಗಾಭ್ಯಾಸ ಮುಂದುವರೆದರೆ ಇಡೀ ಸಮಾಜವೇ ಆರೋಗ್ಯಕರವಾಗಿರುತ್ತದೆ. ಜೀವನದ ಪ್ರಮುಖ ಅಂಶಗಳಲ್ಲಿ ಯೋಗಾಭ್ಯಾಸ ಕೂಡ ಒಂದಾಗಿದೆ ಎಂದು ಯುವಕರಿಗೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ:  ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ

    Live Tv