Tag: International Yoga Day

  • ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ

    ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ

    ಮೈಸೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಮಿಕರು, ಸರ್ಕಾರಿ ನೌಕರರ ಜೊತೆ ಅರಮನೆ ನಗರಿಯಲ್ಲಿ 15 ಸಾವಿರ ಯೋಗ ಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಯೋಗಾಸನ ಮಾಡಿದ್ದಾರೆ.

    ಖಾಸಗಿ ಹೋಟೆಲಿನಿಂದ ಬೆಳಗ್ಗೆ 6:30ರ ವೇಳೆಗೆ ಅರಮನೆ ಮುಂಭಾಗಕ್ಕೆ ಮೋದಿ ಆಗಮಿಸಿದರು. ಚುಟುಕಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಆಯುಷ್‌ ಸಚಿವ ಸರ್ಬಾನಂದ ಸೊನೊವಾಲ್, ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದರು.

    ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಯೋಗದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಕೇವಲ ವ್ಯಕ್ತಿಗೆ ಮಾತ್ರ ಯೋಗ ಅಲ್ಲ. ಇದು ಮನುಕುಲಕ್ಕೆ ಯೋಗ ಮುಖ್ಯ. ಯೋಗದಿಂದ ವ್ಯಕ್ತಿಗೆ ಮಾತ್ರ ಶಾಂತಿ ಸಿಗುವುದಿಲ್ಲ. ಇಡಿ ವಿಶ್ವಕ್ಕೆ ಶಾಂತಿ ಸಿಗುತ್ತದೆ ಎಂದು ಕೊಂಡಾಡಿದರು.

     

    75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಚರಿಸಲಾಗುತ್ತಿರುವ ಅಜಾದಿ ಕೀ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ವಿಶ್ವದ 75 ಭಾಗಗಳಲ್ಲಿ ಯೋಗ ದಿನಾಚರಣೆ ನಡೆಯುತ್ತಿದೆ. ಈ ಮೂಲಕ ಯೋಗ ದೇಶ ದೇಶಗಳನ್ನು ಒಂದಾಗಿಸುತ್ತದೆ. ವಿಶ್ವದ ವಿವಿಧ ಭಾಗದಲ್ಲಿ ಯೋಗ ದಿನಾಚರಣೆ ನಡೆಸುತ್ತಿರುವ ಎಲ್ಲರಿಗೆ ಸಮಸ್ತ ಭಾರತೀಯರ ಪರವಾಗಿ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

    ಭಾಷಣ ಮುಗಿದ ಬಳಿಕ ವೇದಿಕೆಯಿಂದ ಕೆಳಗೆ ಇಳಿದ ಮೋದಿ ಯೋಗಾಸನ ಮಾಡಲು ನಿಗದಿಯಾದ ಸ್ಥಳಕ್ಕೆ ತೆರಳಿದರು. ಬೆಳಗ್ಗೆ 7:08ಕ್ಕೆ ಆರಂಭಗೊಂಡ ಯೋಗ ಕಾರ್ಯಕ್ರಮ  ಶಾಂತಿ ಮಂತ್ರದೊಂದಿಗೆ 7:52ಕ್ಕೆ ಮುಕ್ತಾಯಗೊಂಡಿತು.

    15 ಸಾವಿರ ಮಂದಿ ಪೈಕಿ ಸುಮಾರು 8 ಸಾವಿರ ಜನರು ಮೋದಿ ಯೋಗ ಮಾಡುವ ಜಾಗದ ಅಕ್ಕಪಕ್ಕದಲ್ಲೇ ಯೋಗ ಮಾಡಿದ್ದಾರೆ. ಉಳಿದವರು ಅರಮನೆಯ ಹಿಂಭಾಗದ ಆವರಣದಲ್ಲಿ ಯೋಗ ಮಾಡಿದ್ದಾರೆ. 15 ಸಾವಿರ ಜನರಲ್ಲಿ 3 ಸಾವಿರ ಜನರು ಕೇಂದ್ರ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ 12 ಸಾವಿರ ಮಂದಿ ಸ್ಥಳೀಯರು ಭಾಗವಹಿಸಿದ್ದರು.

     

    ಟೀ ಶರ್ಟ್, ಯೋಗ ಮ್ಯಾಟ್, ವಾಟರ್ ಬಾಟಲಿ ಅನ್ನು ಆಯೋಜಕರು ಅದೇ ಸ್ಥಳದಲ್ಲಿ ನೀಡಿದ್ದಾರೆ. ಮೊಬೈಲ್ ಹೊರತು ಪಡಿಸಿ ಬೇರೆ ಯಾವುದೇ ವಸ್ತುಗಳ ತೆಗೆದು ಕೊಂಡು ಹೋಗಲು ಅವಕಾಶವಿರಲಿಲ್ಲ.

    ಯಾರೆಲ್ಲ ಯೋಗ ಮಾಡಿದ್ದಾರೆ?
    5 ಸಾವಿರ ಯೋಗ ಒಕ್ಕೂಟದ ಸದಸ್ಯರು, 1200 ವಿದ್ಯಾರ್ಥಿಗಳು, ಶಿಕ್ಷಕರು, 2,500 ಜೆಎಸ್‍ಎಸ್ ಸಂಸ್ಥೆಯವರು, 600 ದ್ವಿತೀಯ ಪಿಯುಸಿ ತಂಡ, 600 ಕಾಲೇಜ್ ವಿದ್ಯಾರ್ಥಿಗಳು, 150 ನ್ಯಾಚುರೋಪತಿ, ಯೋಗ ಕಾಲೇಜು, 120 ಆಯುರ್ವೇದಿಕ್ ಕಾಲೇಜು, 100 ಕಾರ್ಮಿಕ ಇಲಾಖೆಯ ಸಿಬ್ಬಂದಿ, 70 ಡಿಎಫ್‍ಆರ್‌ಎಲ್, 300 ಎನ್‍ಎಸ್‍ಎಸ್ ವಿದ್ಯಾರ್ಥಿಗಳು, 100 ವಿಶೇಷ ಚೇತನರು, 100 ಹಾಸ್ಟೆಲ್ ವಿದ್ಯಾರ್ಥಿಗಳು, 30 ತೃತೀಯ ಲಿಂಗಿಗಳು, 100 ಕೆಎಸ್ ಆರ್ ಪಿ ಸಿಬ್ಬಂದಿ ಯೋಗ ಮಾಡಿದ್ದಾರೆ.

    ಎರಡು ವರ್ಷ ಕೊರೊನಾ ಕಾರಣದಿಂದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ರದ್ದಾಗಿತ್ತು. ಆದರೆ ಈ ಬಾರಿ ಮೈಸೂರಿನಲ್ಲಿ ಮತ್ತೆ ಈ ಹಿಂದೆ ನಡೆದಂತೆ  ಯಶಸ್ವಿಯಾಗಿ ನಡೆದು ಸಂಪನ್ನಗೊಂಡಿತು.

    Live Tv

  • ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

    ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

    ಬೆಂಗಳೂರು: ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಸ್ವಾಗತಕ್ಕೆ ಕರ್ನಾಟಕ ಸಜ್ಜಾಗಿದೆ.

    ಚುನಾವಣಾ ವರ್ಷದ ಆರಂಭದಲ್ಲಿಯೇ ಮೋದಿ ರಾಜ್ಯಕ್ಕೆ ಬರುತ್ತಿರುವುದು ಬಿಜೆಪಿಗರ ಹುಮ್ಮಸ್ಸನ್ನು ಇಮ್ಮಡಿ ಮಾಡಿದೆ. ಸಿಎಂ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಮೋದಿ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಈ ಪ್ರವಾಸವನ್ನು ಯಶಸ್ವಿಗೊಳಿಸಲು ಇಡೀ ಸರ್ಕಾರ ಶ್ರಮಿಸುತ್ತಿದೆ. ಮೋದಿ 20 ಗಂಟೆಗಳ ಕಾಲ ರಾಜ್ಯದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಯೋಗ ಸೇರಿ 10 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    33 ಸಾವಿರ ಕೋಟಿ ವೆಚ್ಚದ 19 ಯೋಜನೆಗಳಿಗೆ ಚಾಲನೆ ಕೊಡಲಿದ್ದಾರೆ. ಇದಲ್ಲದೇ ಉಪನಗರ ರೈಲು ಯೋಜನೆಗೆ ಶಂಕುಸ್ಥಾಪನೆ, ಯಶವಂತಪುರ ಮತ್ತು ದಂಡು ರೈಲ್ವೇ ನಿಲ್ದಾಣದ ಅಭಿವೃದ್ಧಿಯೂ ಸೇರಿದೆ. ಸಂಜೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಫಲಾನುಭವಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಸೊಸೆ ಮೇಲೆ ಕೋಪಗೊಂಡು 45 ಸುತ್ತು ಪೊಲೀಸರ ಮೇಲೆಯೇ ಗುಂಡು ಹಾರಿಸಿದ ಮಾವ

    ನಂತರ ಸುತ್ತೂರುಮಠ, ಚಾಮುಂಡಿ ಬೆಟ್ಟಕ್ಕೂ ಪ್ರಧಾನಿ ಭೇಟಿ ನೀಡುತ್ತಿದ್ದಾರೆ. ಮೋದಿ ಸಂಚರಿಸುವ ಮಾರ್ಗದ ಎಲ್ಲಾ ಕಾಲೇಜುಗಳಿಗೆ, ಬೆಂಗಳೂರು ವಿವಿಗೆ ರಜೆ ಘೋಷಣೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಉನ್ನತ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ. ಭಾನುವಾರ ತಡರಾತ್ರಿ ಸಿಎಂ ಕೊಮ್ಮಘಟ್ಟಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಅತ್ತ, ಮೈಸೂರಿನಲ್ಲಿ ಜಿಲ್ಲಾಡಳಿತ ಸಹ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮೋದಿ ಕಾರ್ಯಕ್ರಮದ ಭದ್ರತೆಗಾಗಿಯೇ ಸುಮಾರು 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ:  ನಾಳೆ ಫಸ್ಟ್ ಡೇ ಕೆಲಸಕ್ಕೆ ಹೋಗಬೇಕಿದ್ದವ ಮಸಣಕ್ಕೆ – ಅಪಘಾತದಲ್ಲಿ ತಂದೆ, ಮಗ ಸ್ಥಳದಲ್ಲೇ ಮೃತ

    Live Tv

  • ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ಚಿನ್ನದ ಅಕ್ಷರಗಳಲ್ಲಿ ಬರೆದ ನೆನಪಿನ ಕಾಣಿಕೆ

    ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ಚಿನ್ನದ ಅಕ್ಷರಗಳಲ್ಲಿ ಬರೆದ ನೆನಪಿನ ಕಾಣಿಕೆ

    ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಜೂನ್ 21 ರಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಿನ್ನದ ಅಕ್ಷರಗಳಲ್ಲಿ ಬರೆದಿರುವ ನೆನಪಿನ ಕಾಣಿಕೆ ಸಿದ್ಧವಾಗಿದೆ.

    ಥಾಯ್ಲೆಂಡ್‌ನಲ್ಲಿ ತಯಾರಿಸಲಾದ ಈ ನೆನಪಿನ ಕಾಣಿಕೆಯನ್ನು ಮೈಸೂರಿನ ಜೈನ ಸಮುದಾಯ ಹಾಗೂ ನವರತ್ನ ಜ್ಯೂವೆಲರ್ಸ್‌ ನವರು ಪ್ರಧಾನಿಗೆ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

    `ಯೋಗ ನಗರಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೈಸೂರಿಗರಿಗೆ ಹೆಮ್ಮೆಯಾಗುತ್ತಿದೆ. ಮೈಸೂರನ್ನೂ ನೀವು ಆಯ್ಕೆ ಮಾಡಿಕೊಂಡಿದ್ದಕ್ಕೆ ನಿಮಗೆ ಹೃದಯ ಪೂರ್ವಕ ಅಭಿನಂದನೆ’ ಎಂಬ ಸುವರ್ಣಾಕ್ಷರಗಳು ನೆನಪಿನ ಕಾಣಿಕೆಯ ಮೇಲೆ ಇದೆ. ಇದನ್ನೂ ಓದಿ: ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ 

    ಮೋದಿ ಅವರು ಯೋಗ ದಿನದಂದು ಹೇಳಿದ್ದ ಸಂಸ್ಕೃತ ಶ್ಲೋಕವನ್ನೂ ಸುವರ್ಣಾಕ್ಷರದಲ್ಲಿ ಬರೆಸಲಾಗಿದೆ. ಇದರ ಜೊತೆಗೆ ಮೈಸೂರು ಅರಮನೆ ಹಾಗೂ ಮೋದಿ ಅವರ ಚಿತ್ರಕ್ಕೆ ಚಿನ್ನದ ಫ್ರೇಂ ಹಾಕಲಾಗಿದೆ. ಈ ನೆನಪಿನ ಕಾಣಿಕೆಯನ್ನು ಯೋಗ ದಿನದಂದು ಸಂಸದ ಪ್ರತಾಪ್ ಸಿಂಹ ಅವರು ಪ್ರಧಾನಿಗೆ ನೀಡಲಿದ್ದಾರೆ.

    Live Tv

  • ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

    ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

    ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

    ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ ಮಧ್ಯಾಹ್ನ 12:30ಕ್ಕೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಸೈಕಲ್‌ನಿಂದ ಬಿದ್ದ ವಿಶ್ವದ ದೊಡ್ಡಣ್ಣ

    ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿ ಸಂಜೆ 6 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಲಿದ್ದಾರೆ.

    ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸಂಜೆ 7:30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಕೇವಲ 1 ಗಂಟೆಯಲ್ಲಿ 3,182 ಪುಷ್‌-ಅಪ್‌ ಮಾಡಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ಭೂಪ!

    ಬಳಿಕ ರ‍್ಯಾಡಿಷನ್ ಬ್ಲೂ ಹೋಟೆಲ್‍ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಜೂ.21ರಂದು ಬೆಳಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸ್ವತಃ ಮೋದಿ ಅವರೇ ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಕುರಿತಂತೆ ಸಂದೇಶ ಸಾರಲಿದ್ದಾರೆ. ಎಲ್ಲ ಕಾರ್ಯಕ್ರಮಗಳ ಮುಕ್ತಾಯದ ನಂತರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

    Live Tv

  • ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ ಸಿಎಂ

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ ಸಿಎಂ

    ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಅವರಿಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಧಾರಾವಾಹಿಯಲ್ಲೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ : ಜೇನುಗೂಡಿಗೆ ಜವಳಿ ಹಿಡಿದು ಬಂದ ಹಿರಿಯ ನಟ ಉಮೇಶ್

    ಜೂನ್ 20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್‌ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

    ಏನಿದೆ ಕಾರ್ಯಕ್ರಮ? 
    ಪ್ರಧಾನಿ ಮೋದಿ ಅವರು ಬೆಳಗ್ಗೆ 11.55 ಕ್ಕೆ ಬೆಂಗಳೂರಿನ ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಭಾರತೀಯ ವಿಜ್ಞಾನ ಸಂಸ್ಥೆ) ನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಕ್ರಿಸ್ ಗೋಪಾಲಕೃಷ್ಣ ಅವರು 450 ಕೋಟಿ ರೂ.ಗಳ ದೇಣಿಗೆಯಲ್ಲಿ ನಿರ್ಮಿಸಿರುವ ಬ್ರೈನ್ ಸೆಲ್ ಅಭಿವೃದ್ಧಿ ಕೇಂದ್ರವನ್ನು ದೇಣಿಗೆಯಲ್ಲಿ ನಿರ್ಮಿಸಿದ್ದು ಅದರ ಉದ್ಘಾಟನೆ ನಡೆಯಲಿದೆ. ನಂತರ ಮೈಂಡ್ ಟ್ರೀ ಸಂಸ್ಥೆ 850 ಹಾಸಿಗೆಗಳ ಸಂಶೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದರು.

    ಸಬ್‌ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ:
    ನಂತರ 15,000 ಕೋಟಿ ರೂ.ಗಳ ವೆಚ್ಚದ ಸಬ್‌ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜೊತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ದೊರಕಲಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಚಾಲನೆ ದೊರಕಲಿದೆ. ಎಸ್‌ಟಿಆರ್‌ಆರ್ ಯೋಜನೆಗೂ ಶಂಕುಸ್ಥಾಪನೆ ನೆರವೇರಲಿದೆ. ದಾಬಸಪೇಟೆಯಿಂದ ಹೊಸಕೋಟೆ ಹಳೆ ಮದ್ರಾಸು ರಸ್ತೆಯವರೆಗೂ ಸಂಪರ್ಕಿಸುವ ರಸ್ತೆ ಇದು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೊಂದಿಗೆ 2 ಬಾರಿ ಮಾತನಾಡಿದ ಮೇಲೆ ವಿಶೇಷ ವಿನಾಯ್ತಿ ನೀಡಿ ಆದೇಶ ಮಾಡಿದ್ದಾರೆ. ವಿಶೇಷ ವಿನಾಯ್ತಿ ನೀಡಿದ ಮೇಲೆ ಈ ಯೋಜನೆಗೆ ಚಾಲನೆ ದೊರೆಯಲಿದೆ. ಇಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನೀನಾ, ನಾನಾ ಅಂತ ಕಾಳಗಕ್ಕಿಳಿದ ಹಾವು, ನಾಯಿ – ಸಾವಿನಲ್ಲಿ ಅಂತ್ಯ

    ಇದಾದ ನಂತರ ಬೆಂಗಳೂರು ವಿವಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಭೇಟಿ ನೀಡಿ ಮೂರ್ತಿ ಅನಾವರಣ ಹಾಗೂ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಲಿದ್ದಾರೆ. ಅಲ್ಲಿ ಕೇಂದ್ರ ಸರ್ಕಾರಿ ಯೋಜನೆ ಫಲಾನುಭವಿಗಳ ಸಮ್ಮೇಳನವಿದೆ. ಅದನ್ನು ಮುಗಿಸಿ ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ವಿವರಿಸಿದ್ದಾರೆ.

    ಕಾರ್ಯಕ್ರಮ ಯಶಸ್ವಿಗೊಳಿಸಿ:
    ಈ ಎಲ್ಲ ಕಾರ್ಯಕ್ರಮಗಳ ಸಿದ್ಧತೆಗಳ ವೀಕ್ಷಣೆ ಮಾಡಿದ್ದು, ಅಚ್ಚುಕಟ್ಟಾಗಿ ಸಿದ್ಧತೆ ಆಗುತ್ತಿದೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಆಗಮಿಸುವ ಸಂದರ್ಭದಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಅಗತ್ಯ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. ಬೆಂಗಳೂರಿನ ಮಹಾಜನತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ ಎಂದು ಹೇಳಿದ್ದಾರೆ.

    Live Tv

  • ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ

    ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ

    ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ.

    ಯೋಗ ವೇದಿಕೆಯಲ್ಲಿ ರಾಜವಂಶಸ್ಥರಿಗೆ ಆಹ್ವಾನವಿಲ್ಲ ಎಂಬ ಅಭಿಯಾನ ಶುರುವಾದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಗಣ್ಯರ ಪಟ್ಟಿಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರನ್ನು ಸೇರಿಸಲಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್

    ಅರಮನೆಯ ಯೋಗ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯದುವೀರ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ, ಕೇಂದ್ರ ಆಯುಷ್ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೂ ವೇದಿಕೆಯ ಯೋಗಾಭ್ಯಾಸದಲ್ಲಿ ಭಾಗಿಯಾಗಲಿದ್ದಾರೆ.  ಇದನ್ನೂ ಓದಿ: ರಾಷ್ಟ್ರಪತಿ ಪದವಿಗೆ ದೇವೇಗೌಡರ ಸ್ಪರ್ಧೆ ಇಲ್ಲ: ಕುಮಾರಸ್ವಾಮಿ

    ಯೋಗಾಭ್ಯಾಸದ ನಂತರ ಮೈಸೂರು ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಇರಲಿದೆ. ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಆಹ್ವಾನದ ಮೇರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಸುಮಾರು ಒಂದು ಗಂಟೆಗಳ ಕಾಲ ಅರಮನೆಯಲ್ಲಿ ರಾಜವಂಶಸ್ಥರ ಜೊತೆ ಮೋದಿ ಮಾತುಕತೆ ನಡೆಯಲಿದೆ.

    ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿದ್ಧಪಡಿಸಿದ್ದ ಗಣ್ಯರ ಪಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ರಾಜವಂಶಸ್ಥರಿಗೆ ಆಹ್ವಾನವಿಲ್ಲವೆಂಬ ಅಭಿಯಾನ ಶುರುವಾಗಿತ್ತು. ನಿನ್ನೆಯಷ್ಟೇ ಇದಕ್ಕೆ ಸ್ಪಷ್ಟನೆ ನೀಡಿದ್ದ ಸಂಸದ ಪ್ರತಾಪ್ ಸಿಂಹ, ಗಣ್ಯರ ಪಟ್ಟಿ ಸಿದ್ಧವಾಗುತ್ತಿದೆ. ಮೈಸೂರು ರಾಜವಂಶಸ್ಥರ ಬಗ್ಗೆ ಎಲ್ಲರಿಗಿಂತ ಅತಿಯಾದ ಗೌರವ ನಮಗಿದೆ. ಮಹಾರಾಜರ ಬಗ್ಗೆ ಹಗುರವಾಗಿ ಮಾತಾಡಿದಾಗ ಮೊದಲು ಧ್ವನಿ ಎತ್ತಿದ್ದು ನಾನು ಎಂದು ಸಮರ್ಥಿಸಿಕೊಂಡಿದ್ದರು.

    Live Tv

  • ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್

    ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಜೊತೆಗೆ ಮೈಸೂರಿನ ಮೋದಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು. ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಗೊಂದಲ ಸೃಷ್ಟಿಸಿದೆ.

    vaccine
    ಮೋದಿ ರಾಜ್ಯ ಪ್ರವಾಸ ಕೋವಿಡ್ ಪರೀಕ್ಷೆಯ ಗೊಂದಲ ತಂದಿಟ್ಟಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು, ಬಿಜೆಪಿ ಮುಖಂಡರು, ಸಾರ್ವಜನಿಕರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂಬ ಗೊಂದಲ ಉಂಟಾಗಿದೆ. ಪೊಲೀಸ್ ಇಲಾಖೆ ಪ್ರಧಾನಿ ಕಾರ್ಯಕ್ರಮದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ಆದೇಶ ಮಾಡಿದೆ. ಅದೇ ಆದೇಶವನ್ನೂ ಮಾಧ್ಯಮದವರು ಪಾಲಿಸಬೇಕೆಂದು ವಾರ್ತಾ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಪದವಿಗೆ ದೇವೇಗೌಡರ ಸ್ಪರ್ಧೆ ಇಲ್ಲ: ಕುಮಾರಸ್ವಾಮಿ

    ಮೋದಿ ಪ್ರವಾಸ ಮಾಹಿತಿ:
    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಯಿಂದ 6.15 ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.

    ಒಂದು ಕಾಲು ಗಂಟೆಯ ಸಂವಾದ ಮುಗಿಸಿ ಅಲ್ಲಿಂದ ನೇರವಾಗಿ ಚಾಮುಂಡಿ ಬೆಟ್ಟದ ಪಾದದ ಬಳಿಯ ಶ್ರೀ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. 7.15 ರವರೆಗೆ ಪ್ರಧಾನಿಗಳು ಮಠದಲ್ಲಿ ಇರಲಿದ್ದಾರೆ. ಮಠದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ 7.30 ಕ್ಕೆ ಸರಿಯಾಗಿ ಆಗಮಿಸಲಿರುವ ಪ್ರಧಾನಿ, 15 ನಿಮಿಷ ಬೆಟ್ಟದಲ್ಲಿ ಇರಲಿದ್ದಾರೆ. ತಾಯಿ ದರ್ಶನ ಮುಗಿಸಿ ರಾಯ್ಡಿಸನ್ ಹೋಟೆಲ್ ಗೆ ಬಂದು ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ. – ಒಂದೇ ವರ್ಷದಲ್ಲಿ ಶೇ. 50ರಷ್ಟು ಏರಿಕೆ

    ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 6.30ಕ್ಕೆ ಆರಂಭವಾಗುವ ಯೋಗ 7.45 ಕ್ಕೆ ಮುಕ್ತಾಯವಾಗಲಿದೆ. ಕಾರ್ಯಕ್ರಮದ ನಂತರ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ್ ಅವರನ್ನು ಅರಮನೆಯ ಹಿಂಭಾಗದಲ್ಲಿನ ರಾಜವಂಶಸ್ಥರ ಮನೆಯಲ್ಲೆ ಭೇಟಿಯಾಗುವ ಸಾಧ್ಯತೆ ಇದೆ. ನಂತರ ಅಲ್ಲಿಂದ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಕೇರಳಕ್ಕೆ ತೆರಳಲಿದ್ದಾರೆ.

    ಚಾಮುಂಡಿ ತಾಯಿ ದರ್ಶನ, ಸುತ್ತೂರು ಮಠಕ್ಕೆ ಭೇಟಿ ಹಾಗೂ ಯದುವಂಶದ ರಾಜವಂಶಸ್ಥರ ಜೊತೆ ಮಾತುಕತೆ ಮೋದಿ ಅವರ ಯೋಗ ಕಾರ್ಯಕ್ರಮ ಹಿನ್ನೆಲೆಯಲ್ಲಿನ ಪ್ರಮುಖ ಭೇಟಿಗಳಾಗಿವೆ.

    Live Tv

  • ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದು, ಅಂದು ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಾವಿರಾರು ಮಂದಿ ಯೋಗ ಮಾಡಲಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಯೋಗ ದಿನಕ್ಕೆ ಸಂದೇಶ ನೀಡಿದ್ದು, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂಬರುವ ದಿನಗಳಲ್ಲಿ ವಿಶ್ವವೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ. ಈ ದಿನವನ್ನು ಆಚರಿಸುವ ಮೂಲಕ ಯೋಗ ನಿಮ್ಮ ದೈನಂದಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಏಕೆಂದರೆ ಇದರಲ್ಲಿ ಹಲವು ಪ್ರಯೋಜನಗಳಿವೆ ಎಂದೂ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಇದರೊಂದಿಗೆ ಯೋಗ ಪ್ರದರ್ಶನ ಹಾಗೂ ಪ್ರಯೋಜನಗಳನ್ನು ತಿಳಿಸುವ ವೀಡಿಯೋ ಲಿಂಕ್ ಒಂದನ್ನು ಲಗತ್ತಿಸಿದ್ದಾರೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

    Narendra modi

    ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆದ ತಮ್ಮ 89ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕುರಿತು ಮಾತನಾಡಿದ್ದರು.

    ಈ ಬಾರಿ ಪ್ರತಿಯೊಬ್ಬರೂ ಯೋಗ ದಿನವನ್ನು ಆಚರಿಸಬೇಕು. ಅದಕ್ಕಾಗಿ ನಿಮ್ಮ ನಗರ, ಪಟ್ಟಣ ಅಥವಾ ಹಳ್ಳಿಯಲ್ಲಿನ ಯಾವುದಾರೂ ವಿಶೇಷ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ. ಅದು ಪುರಾತನ ದೇವಾಲಯವಾಗಿರಬಹುದು, ಪ್ರವಾಸಿ ಕೇಂದ್ರವಾಗಿರಬಹುದು ಅಥವಾ ಪ್ರಸಿದ್ಧ ನದಿಯ ತಪ್ಪಲಾಗಿರಬಹುದು. ಅಲ್ಲಿ ಯೋಗ ಪ್ರದರ್ಶನ ಮಾಡುವುದರಿಂದ ನಿಮ್ಮ ಪ್ರದೇಶವನ್ನೂ ಗುರುತಿಸಿದಂತಾಗುತ್ತದೆ. ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗುತ್ತದೆ ಎಂದು ಅವರು ಸಲಹೆ ನೀಡಿದ್ದರು.

  • ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ

    ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ

    ಡೆಹರಾಡೂನ್: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತಂಡವು ಉತ್ತರಾಖಂಡದ ಮಾಂಟ್ ಅಬಿ ಗಮಿನ್ ಪರ್ವತದ 22,850 ಅಡಿ ಎತ್ತರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೂ ಮುನ್ನ ಯೋಗಾಭ್ಯಾಸ ಮಾಡಿ ದಾಖಲೆ ನಿರ್ಮಿಸಿದೆ.

    ಈ ಕುರಿತ ವೀಡಿಯೋವೊಂದನ್ನು ತಂಡವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಐಟಿಬಿಪಿಯಿಂದ ಎತ್ತರದಲ್ಲಿ ಯೋಗವನ್ನು ಅಭ್ಯಾಸ ಮಾಡುವ ಹೊಸ ದಾಖಲೆ ಎಂದು ಬರೆದುಕೊಂಡಿದ್ದಾರೆ. ಜೂನ್ 2 ರಂದು, ತಂಡವು 24,131 ಅಡಿ ಎತ್ತರದ ಮೌಂಟ್ ಅಬಿ ಗಮಿನ್ ಶಿಖರವನ್ನೇರಿ ‘ಬದ್ರಿ ವಿಶಾಲ್ ಕಿ ಜೈ’ ಎಂದು ಘೋಷಣೆ ಮಾಡಿದೆ. ದನ್ನು ಓದಿ : ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

    ಕಳೆದ ತಿಂಗಳು ಡೆಹ್ರಾಡೂನ್‍ನಿಂದ ಹೊರಟಿದ್ದ ತಂಡ ಭಾನುವಾರ ಮರಳಿದೆ. ಉಪ ಕಮಾಂಡೆಂಟ್ ಕುಲದೀಪ್ ಕುಮಾರ್ ನೇತೃತ್ವದಲ್ಲಿ ಈ ಸಾಹಸ ಮಾಡಲಾಗಿದೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಐಟಿಬಿಪಿಯ ಉತ್ತರ ಫ್ರಾಂಟಿಯರ್ ಕೈಗೊಂಡ ದಂಡಯಾತ್ರೆಯನ್ನು ಮೇ 9 ರಂದು ಡೆಹ್ರಾಡೂನ್‍ನಿಂದ ಪ್ರಾರಂಭಿಸಲಾಯಿತು. ತಂಡವು ನಿನ್ನೆ ಬೇಸ್ ಕ್ಯಾಂಪ್‍ಗೆ ಮರಳಿದೆ.

  • ಸಮಸ್ತ ಕನ್ನಡಿಗರ ಪರವಾಗಿ ಮೋದಿಗೆ ಸ್ವಾಗತ ಕೋರುತ್ತೇನೆ: ಪ್ರತಾಪ್ ಸಿಂಹ

    ಸಮಸ್ತ ಕನ್ನಡಿಗರ ಪರವಾಗಿ ಮೋದಿಗೆ ಸ್ವಾಗತ ಕೋರುತ್ತೇನೆ: ಪ್ರತಾಪ್ ಸಿಂಹ

    ಹಾಸನ: ವಿಶ್ವ ಯೋಗ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸಮಸ್ತ ಕನ್ನಡಿಗರ ಪರವಾಗಿ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

    ಹಾಸನದಲ್ಲಿ ಮಾತನಾಡಿದ ಅವರು, ಸಮಸ್ತ ಕನ್ನಡಿಗರು, ಮೈಸೂರಿಗರ ಪರವಾಗಿ ಮೋದಿ ಅವರಿಗೆ ಸ್ವಾಗತ ಕೋರುತ್ತೇನೆ. ಕಳೆದ ಏಪ್ರಿಲ್ 5 ರಂದು ನಾನು ನನ್ನ ಕುಟುಂಬ, ನಮ್ಮ ಪಾರ್ಲಿಮೆಂಟರಿ ಅಫೇರ್ಸ್ ಮಿನಿಸ್ಟರ್ ಆದಂತಹ ಪ್ರಹ್ಲಾದ್ ಜೋಶಿ ಅವರೊಂದಿಗೆ ಹೋಗಿ, ಮೋದಿ ಅವರನ್ನು ಖುದ್ದಾಗಿ ಮೈಸೂರಿಗೆ ಆಗಮಿಸಲು ಮನವಿ ಮಾಡಿದ್ದೆವು. ಇದನ್ನೂ ಓದಿ: ಕಾರವಾರದಲ್ಲಿ ಉದ್ದ ಕಣ್ಣಿನ ಅಪರೂಪದ ಏಡಿ ಪತ್ತೆ

    ಮೈಸೂರು ಸಿಟಿ ಆಫ್ ಯೋಗ ಎಂದು ಪ್ರಸಿದ್ಧ ಪಡೆದಿದೆ. ಮಹಾರಾಜರು, ಅಯ್ಯಂಗಾರರು, ಕೃಷ್ಣಮಾಚಾರಿ, ಪಟ್ಟಾಭಿಯವರೆಲ್ಲರು ಯೋಗ ಪೋಷಕರಾಗಿದ್ದಾರೆ. ಅವರೆಲ್ಲರ ಪ್ರೋತ್ಸಾಹದಿಂದ ಮೈಸೂರು ಸಿಟಿ ಆಫ್ ಯೋಗ ಎನಿಸಿಕೊಂಡಿದೆ. ಇದೀಗ ನಮ್ಮ ಮನವಿಗೆ ಸ್ಪಂದಿಸಿ ಮೋದಿಯವರು ಬರುತ್ತಿರುವುದು ಅತೀವ ಸಂತಸ ತಂದಿದೆ. ಈ ಒಂದು ಕಾರ್ಯಕ್ರಮವನ್ನು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಯೋಗಪಟುಗಳನ್ನು ಒಂದೇ ಕಡೆ ಕಲೆ ಹಾಕಿ ಅದ್ಭುತವಾಗಿ ನಡೆಸಿಕೊಡುತ್ತೇವೆ. ಇದನ್ನೂ ಓದಿ: ಅಕ್ರಮ ಗಣಿ ಮಾಫಿಯಾಗೆ ಮಂಡ್ಯ ವ್ಯಕ್ತಿ ಬಲಿ – ಹೊಳೆನರಸೀಪುರ ಅರಣ್ಯದಲ್ಲಿ ಹೂತು ಹಾಕಿದ್ರಾ ಶವ? 

    ಮೋದಿ ಅವರ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಮಂತ್ರಿಗಳು ಸೇರಿದಂತೆ ಹಲವರು ಪಾಲ್ಗೊಳ್ಳುತ್ತಾರೆ. ಭದ್ರತೆ ಸಂಬಂಧ ಏನೇ ವಿಷಯ ಇದ್ದರೂ ಜಿಲ್ಲಾಡಳಿತ, ರಾಜ್ಯ ಸರ್ಕಾರ ಎಸ್‍ಬಿಜಿ ಜೊತೆ ಕೋರ್ಡಿನೇಷನ್ ನಡೆಸಲಿದೆ ಎಂದು ತಿಳಿಸಿದ್ದಾರೆ.