Tag: Intravenous

  • Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಬೆಂಗಳೂರಿನ (Bengaluru) ವಿಕಾಸ ಸೌಧದಲ್ಲಿಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

    ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್‌ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್‌ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್ ಗಳ ವಿಚಾರವಾಗಿ ಕಂಪನಿಯವರನ್ನ ಪ್ರಾಸಿಕ್ಯೂಷನ್‌ಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್‌ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್‌ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

    ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಭ ನೀತಿ ಏಕೆ? ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ? ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

    ಐವಿ ರಿಂಗರ್ ಲ್ಯಾಕ್ಟೇಟ್‌ನ 192 ಬ್ಯಾಚ್‌ಗಳಲ್ಲಿ ಟೆಸ್ಟಿಂಗ್‌ಗೆ ಬಾಕಿ ಇರುವ ಬ್ಯಾಚ್‌ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಲ್ಯಾಬ್‌ನಲ್ಲಿ 192 ಬ್ಯಾಚ್‌ಗಳು ಐವಿ ದ್ರಾವಣ ಪಾಸಿಟಿವ್ ರಿಪೋರ್ಟ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ವೈದ್ಯರ ನಿರ್ಲಕ್ಷ್ಯದಿಂದಲ್ಲ – ದಿನೇಶ್ ಗುಂಡೂರಾವ್

    ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ ವರದಿಯಲ್ಲಿ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿಯಿದೆ. ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್ ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಲ್ಯಾಬ್‌ನವರು 192 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ? ಈ ಬಗ್ಗೆ ಪರಿಶೀಲನೆ ನಡೆಸಿ. ಲ್ಯಾಬ್‌ನವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

  • ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್‌ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

    ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್‌ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

    ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ (Dinesh Gundurao) ಅವರನ್ನ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ವಜಾ ಮಾಡಬೇಕು ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ (VidhanSoudha) ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಆರೋಗ್ಯ ಮಂತ್ರಿ ಆಗಲು ಯೋಗ್ಯರು ಇದ್ದೀರಾ? ಅವರೇ ವೈದ್ಯರಾ? ನಾವು ಸದನದಲ್ಲಿ ವೆಟನರಿ ಔಷಧಿ ಕೊಟ್ರು ಅಂತ ಆರೋಪ ಮಾಡಿದಾಗ ಯೂಟರ್ನ್ ಹೊಡೆದಿದ್ರಿ. ಈಗ ಬಾಣಂತಿಯರಿಗೆ ಕೊಟ್ಟ ಔಷಧಿ ಕಳಪೆ ಮತ್ತು ದ್ರಾವಣ ಕೂಡ ಕಳಪೆ ಆಗಿದೆ ಅಂತ ರಿಪೋರ್ಟ್ ಬಂದಿದೆ. ಹೀಗಿದ್ರು ದಿನೇಶ್ ಗುಂಡೂರಾವ್ ಬದಲಾವಣೆ ಮಾಡಿಲ್ಲ. ಆರೋಗ್ಯ ಇಲಾಖೆ (Health Department) ಅವರು ಜನರ ಜೀವಗಳ ಜೊತೆ ಆಟ ಆಡ್ತಿದ್ದಾರೆ. ಕೂಡಲೇ ದಿನೇಶ್ ಗುಂಡೂರಾವ್‌ರನ್ನ ವಜಾ ಮಾಡಬೇಕು ಅಂತ ಸಿಎಂರನ್ನ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಂಎಸ್ಸಿ ನರ್ಸಿಂಗ್, ಎಂಪಿಟಿ ಕೋರ್ಸ್ ಅರ್ಜಿ ಸಲ್ಲಿಸಲು ಡಿ.2 ಕೊನೆ ದಿನ: ಕೆಇಎ

    IV ದ್ರಾವಣವೇ ಸಾವಿಗೆ ಕಾರಣ:
    ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ (ಐವಿ) ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ (ಗ್ಲೂಕೋಸ್) ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: BBK 11: ಉಗ್ರಂ ಮಂಜು, ಮೋಕ್ಷಿತಾ ದಿಢೀರ್‌ ಬಂಧನ- ಟ್ವಿಸ್ಟ್‌ ಕೊಟ್ಟ ʻಬಿಗ್‌ ಬಾಸ್‌ʼ

    ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವಾಗಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.

    ಇದೇ ವಿಚಾರವನ್ನ ನವೆಂಬರ್ 16 ರಂದು ʻಪಬ್ಲಿಕ್ ಟಿವಿʼ ವರದಿ ಪ್ರಸಾರ ಮಾಡಿತ್ತು. ವೈದ್ಯರು ನೀಡಿದ್ದ ಗ್ಲೂಕೋಸ್ ರಿಯಾಕ್ಷನ್‌ನಿಂದಲೇ ಬಾಣಂತಿಯರ ಸಾವಾಗಿದ್ದು ಎಂದು ವಿಸ್ತೃತ ವರದಿ ಬಿತ್ತರಿಸಲಾಗಿತ್ತು. ?ಪಬ್ಲಿಕ್ ಟಿವಿ’ ವರದಿ ಬಳಿಕ ಎಚ್ಚೆತ್ತುಕೊಂಡಿದ್ದ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಡಿಹೆಚ್‌ಒಗಳಿಗೆ ಪತ್ರ ಬರೆದು ಬಾಂಗ್ಲಾ ಮೂಲದಿಂದ ಸರಬರಾಗಿದ್ದ ಗ್ಲೂಕೋಸ್ ಬಳಸದಂತೆ ಹೇಳಿತ್ತು. ಇದನ್ನೂ ಓದಿ: ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ

  • ಬಳ್ಳಾರಿ | ಬಾಣಂತಿಯರ ಸರಣಿ ಸಾವಿಗೆ IV ದ್ರಾವಣ ಕಾರಣ – ವರದಿಯಲ್ಲಿ ಬಹಿರಂಗ

    ಬಳ್ಳಾರಿ | ಬಾಣಂತಿಯರ ಸರಣಿ ಸಾವಿಗೆ IV ದ್ರಾವಣ ಕಾರಣ – ವರದಿಯಲ್ಲಿ ಬಹಿರಂಗ

    – ನವೆಂಬರ್ 16ರಂದೇ ʻಪಬ್ಲಿಕ್ ಟಿವಿʼ ವರದಿ ಮಾಡಿತ್ತು

    ಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ (Intravenous) ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ.

    ಬಾಣಂತಿಯರ ಸರಣಿ ಸಾವಿನ (Serial Deaths of Barmaids) ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ (Glucose) ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವಾಗಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.

    ಇದೇ ವಿಚಾರವನ್ನ ನವೆಂಬರ್ 16 ರಂದು ʻಪಬ್ಲಿಕ್ ಟಿವಿʼ ವರದಿ ಪ್ರಸಾರ ಮಾಡಿತ್ತು. ವೈದ್ಯರು ನೀಡಿದ್ದ ಗ್ಲೂಕೋಸ್ ರಿಯಾಕ್ಷನ್‌ನಿಂದಲೇ ಬಾಣಂತಿಯರ ಸಾವಾಗಿದ್ದು ಎಂದು ವಿಸ್ತೃತ ವರದಿ ಬಿತ್ತರಿಸಲಾಗಿತ್ತು. ʻಪಬ್ಲಿಕ್ ಟಿವಿʼ ವರದಿ ಬಳಿಕ ಎಚ್ಚೆತ್ತುಕೊಂಡಿದ್ದ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಡಿಹೆಚ್‌ಒಗಳಿಗೆ ಪತ್ರ ಬರೆದು ಬಾಂಗ್ಲಾ ಮೂಲದಿಂದ ಸರಬರಾಗಿದ್ದ ಗ್ಲೂಕೋಸ್ ಬಳಸದಂತೆ ಹೇಳಿತ್ತು.

    ತಪ್ಪು ಸಾಬೀತಾದ್ರೆ ಕಂಪನಿ ಬ್ಲಾಕ್‌ಲಿಸ್ಟ್‌ಗೆ:
    ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್, ಬಾಣಂತಿಯರ ಸಾವಿನ ಬಗ್ಗೆ ತನಿಖೆ ನಡೆಸಲಾಗ್ತಿದೆ. ಪ್ರಾಥಮಿಕ ವರದಿ ನಮಗೆ ಬಂದಿದೆ. ವರದಿಯಲ್ಲಿ ಮೇಲ್ನೋಟಕ್ಕೆ ಐವಿ ಪ್ಲುಯೆಡ್‌ನಿಂದ ಸಮಸ್ಯೆ ಆಗಿದೆ ಅನ್ನೋದು ಗೊತ್ತಾಗಿದೆ. ಹೀಗಾಗಿ ಸ್ಯಾಂಪಲ್‌ಗಳನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಇನ್ನೊಂದು ವಾರದಲ್ಲಿ ವರದಿ ಬರಲಿದೆ. ಮೆಡಿಕಲ್ ನೆಗ್ಲಿಜೆನ್ಸಿ ಇದ್ಯಾ ಅನ್ನೋದನ್ನ ಕೂಡ ನೋಡ್ತಿವಿ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು. ಈ ಹಿಂದೆ ಕೂಡ ಎರಡು ಬ್ಯಾಚ್ ಮೇಲೆ ಆರೋಪ ಇತ್ತು. ಎರಡು ಬ್ಯಾಚ್ ಬ್ಲಾಕ್‌ಲಿಸ್ಟ್‌ಗೆ ಸೇರಿಸಲಾಗಿತ್ತು. ಕೋರ್ಟ್‌ನಲ್ಲಿ ಸಾಬೀತು ಆದ ಬಳಿಕ ಮತ್ತೆ ಔಷಧ ಪೂರೈಕೆ ಮಾಡಲಾಗಿದೆ. ಇದೀಗ ಈ ಪ್ರಕರಣದ ಬಗ್ಗೆ ವರದಿ ಬಂದ ಬಳಿಕ ತಪ್ಪು ಸಾಬೀತಾದಲ್ಲಿ ಬ್ಲಾಕ್ ಲಿಸ್ಟ್‌ಗೆ ಸೇರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.