Tag: Invest Karnataka

  • 21 ಕಂಪನಿಗಳಿಂದ ಹೂಡಿಕೆ ಘೋಷಣೆ – ಯಾವ ಕಂಪನಿಯಿಂದ ಏನು ಘೋಷಣೆ?

    21 ಕಂಪನಿಗಳಿಂದ ಹೂಡಿಕೆ ಘೋಷಣೆ – ಯಾವ ಕಂಪನಿಯಿಂದ ಏನು ಘೋಷಣೆ?

    ಬೆಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕಕ್ಕೆ (Invest Karnataka) ಅದ್ಧೂರಿ ಚಾಲನೆ ಸಿಕ್ಕಿದೆ. ನಾಲ್ಕು ದಿನ ನಡೆಯುವ ಸಮಾವೇಶವನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ (Rajnath Singh) ಸಿಎಂ ಸಿದ್ದರಾಮಯ್ಯ (CM Siddaramaiah) ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

    ಉದ್ಯಮಿಗಳಾದ ಆನಂದ್ ಮಹೀಂದ್ರ 40 ಸಾವಿರ ಕೋಟಿ ರೂ., ಸಜ್ಜನ್ ಜಿಂದಾಲ್ 56 ಸಾವಿರ ಕೋಟಿ ರೂ. ಹೂಡಿಕೆಯ ಘೋಷಣೆ ಮಾಡಿದ್ದರು. ಸಿಎಂ ಜೊತೆ ಒಪ್ಪಂದಕ್ಕೆ ಸಹಿಯನ್ನು ಹಾಕಿದ್ದರು.

    ಈ ಮೂಲಕ ಮೊದಲ ದಿನವೇ 1 ಲಕ್ಷ ಕೋಟಿ ಹೂಡಿಕೆ ಹರಿದು ಬಂದಿದೆ. ನಾಳೆಯಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಬೀಳಲಿದೆ. 10 ಲಕ್ಷ ಕೋಟಿ ಹೂಡಿಕೆಯನ್ನು ಸರ್ಕಾರ ನಿರೀಕ್ಷೆ ಮಾಡಿದೆ

    ಇನ್ವೆಸ್ಟ್‌ ಕರ್ನಾಟಕದಲ್ಲಿ ಇಂದು 21 ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ.

    ಆಸಕ್ತಿ ತೋರಿಸಿದ ಕಂಪನಿಗಳ ಪಟ್ಟಿ:
    1.ಜೆಎಸ್‌ಡಡಬ್ಲ್ಯು ನಿಯೊ ಎನರ್ಜಿ ಲಿಮಿಟೆಡ್ – ಸೌರ ಯೋಜನೆ , ಗಾಳಿ ಶಕ್ತಿ ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹಣೆ, ಬ್ಲೇಡ್ ತಯಾರಿಕೆ ಮತ್ತು ವಿಂಡ್ ಟರ್ಬೈನ್ ಜನರೇಟರ್ ಸ್ಥಾವರ ಸ್ಥಾಪನೆಗೆ 56,000 ಕೋಟಿ ರೂ. ಹೂಡಿಕೆ.

    2.ಬಲ್ಡೋಟಾ ಸ್ಟೀಲ್ ಆ್ಯಂಡ್‌ ಪವರ್ ಲಿಮಿಟೆಡ್ – ಸಮಗ್ರ ಉಕ್ಕು ತಯಾರಿಕಾ ಸ್ಥಾವರಕ್ಕೆ ರೂ 54,000 ಕೋಟಿ ರೂ. ಹೂಡಿಕೆ.

    3.ಟಾಟಾ ಪವರ್ ರಿನ್ಯೂವೇಬಲ್‌ ಎನರ್ಜಿ ಲಿಮಿಟೆಡ್ – ರಾಜ್ಯದಾದ್ಯಂತ ನವೀಕರಿಸಬಹುದಾದ ಇಂಧನ ವಿದ್ಯುತ್ ಯೋಜನೆಗಳು ಮತ್ತು ಮೇಲ್ಚಾವಣಿ ವಿದ್ಯುತ್‌ ಪರಿಹಾರಗಳ ಅಭಿವೃದ್ಧಿಗೆ 50,000 ಕೋಟಿ ರೂ. ಹೂಡಿಕೆ.

    4.ರೆನ್ಯೂ ಪ್ರೈವೇಟ್‌ ಲಿಮಿಟೆಡ್ – 4 ಗಿಗಾವಾಟ್‌ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು 50,000 ಕೋಟಿ ರೂ. ಹೂಡಿಕೆ.

    5.ಸೆರೆಂಟಿಕಾ ರಿನ್ಯೂವೇಬಲ್ಸ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳ ಅಭಿವೃದ್ಧಿಗಾಗಿ 43,975 ಕೋಟಿ ರೂ. ಹೂಡಿಕೆ.

    6.ಜೆಎಸ್‌ಡಬ್ಲ್ಯು ಗ್ರೂಪ್ – ಜೆಎಸ್‌ಡಬ್ಲ್ಯು ಸಿಮೆಂಟ್ ಆ್ಯಂಡ್‌ ಸ್ಟೀಲ್ ಮತ್ತು ಅದರ ಅಂಗಸಂಸ್ಥೆಗಳಿಗೆ 43,900 ಕೋಟಿ ರೂ. ಹೂಡಿಕೆ.

    7.ಮಹೀಂದ್ರಾ ಸಸ್ಟೆನ್ ಪ್ರೈವೇಟ್ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು 35,000 ಕೋಟಿ ರೂ. ಹೂಡಿಕೆ. ಇದನ್ನೂ ಓದಿ: ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

    8.ಹೀರೋ ಫ್ಯೂಚರ್ ಎನರ್ಜಿಸ್ – ನವೀಕರಿಸಬಹುದಾದ ಇಂಧನ, ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳ ಯೋಜನೆಗಳಿಗೆ 22,200 ಕೋಟಿ ರೂ. ಹೂಡಿಕೆ.

    9. ಸುಜ್ಲಾನ್ ಎನರ್ಜಿ ಲಿಮಿಟೆಡ್ – ಪವನ ವಿದ್ಯುತ್ ಯೋಜನೆಗಳಿಗೆ 21,950 ಕೋಟಿ ರೂ. ಹೂಡಿಕೆ.

    10. ಎಸ್ಸಾರ್ ರಿನ್ಯೂವೇಬಲ್ಸ್‌ ಲಿಮಿಟೆಡ್‌- 20,000 ಕೋಟಿ ರೂ. ಹೂಡಿಕೆ.

    11.ಅವಾಡಾ ಎನರ್ಜಿ ಪ್ರೈವೇಟ್ ಲಿಮಿಟೆಡ್ – 18,000 ಕೋಟಿ ರೂ. ಹೂಡಿಕೆ.

    12.ಎಪ್ಸಿಲಾನ್ ಗ್ರೂಪ್ – ಆನೋಡ್ ಮತ್ತು ಕ್ಯಾಥೋಡ್ ಪದಾರ್ಥಗಳ ತಯಾರಿಕೆಗೆ 15,350 ಕೋಟಿ ರೂ. ಹೂಡಿಕೆ.

    13. ಎಂವೀ ಎನರ್ಜಿ ಪ್ರೈವೇಟ್ ಲಿಮಿಟೆಡ್ – ಸೋಲಾರ ಫೊಟೊವೊಲ್ಟ್ಯಾಕ್‌ ಸೆಲ್ಸ್‌ ಮತ್ತು ಮಾಡ್ಯೂಲ್‌ಗಳ ತಯಾರಿಕೆಗೆ 15,000 ಕೋಟಿ ರೂ. ಹೂಡಿಕೆ.

    14. ಲ್ಯಾಮ್ ರಿಸರ್ಚ್ – ಸೆಮಿಕಂಡಕ್ಟರ್‌ ಉಪಕರಣಗಳ ತಯಾರಿಕೆಗೆ 10,000 ಕೋಟಿ ರೂ. ಹೂಡಿಕೆ

    15. ಆಂಪಿನ್‌ ಎನರ್ಜಿ ಟ್ರಾನ್ಸಿಷನ್ ಪ್ರೈವೇಟ್ ಲಿಮಿಟೆಡ್ – 10,000 ಕೋಟಿ ರೂ. ಹೂಡಿಕೆ.

    16. ಎಸಿಎಂಇ ಸೋಲಾರ್ ಹೋಲ್ಡಿಂಗ್ಸ್ ಲಿಮಿಟೆಡ್ – 10,000 ಕೋಟಿ ರೂ. ಹೂಡಿಕೆ.

    17. ಔ2 ಪವರ್ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಸೌರ ಮತ್ತು ಪವನ ಯೋಜನೆಗಳ ಸ್ಥಾಪನೆಗೆ 10,000 ಕೋಟಿ ರೂ. ಹೂಡಿಕೆ

    18. ಕಾಂಟಿನುಮ್‌ ಗ್ರೀನ್ ಎನರ್ಜಿ ಜಿಪಿ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಅಭಿವೃದ್ಧಿಪಡಿಸಲು 10,000 ಕೋಟಿ ರೂ. ಹೂಡಿಕೆ.

    19. ಸೋಟೆಫಿನ್ ಭಾರತ್ – ಸಂಪೂರ್ಣ ಸ್ವಯಂಚಾಲಿತ ರೊಬೊಟಿಕ್ ಬಹುಮಹಡಿ ಕಾರ್ ಮತ್ತು ಬಸ್ ಪಾರ್ಕಿಂಗ್ ವ್ಯವಸ್ಥೆಗಳ ನಿರ್ಮಾಣ ಮತ್ತು ಸ್ಥಾಪನೆಗೆ 8,500 ಕೋಟಿ ರೂ. ಹೂಡಿಕೆ.

    20. ಶ್ರೀ ಸಿಮೆಂಟ್ ಲಿಮಿಟೆಡ್ – ಇಂಟೆಗ್ರೇಟೆಡ್‌ ಸ್ಥಾವರ ಮತ್ತು ಕ್ಲಿಂಕರ್ ಗ್ರೈಂಡಿಂಗ್ ಘಟಕಕ್ಕೆ 8,350 ಕೋಟಿ ರೂ. ಹೂಡಿಕೆ.

    21. ಹೆಕ್ಸಾ ಕ್ಲೈಮೇಟ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ – 8,000 ಕೋಟಿ ರೂ. ಹೂಡಿಕೆ.

  • ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ – ರಾಜನಾಥ್ ಸಿಂಗ್

    ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ – ರಾಜನಾಥ್ ಸಿಂಗ್

    ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ. ಭಾರತದ ಭವ್ಯ ಭವಿಷ್ಯ ಬೆಂಗಳೂರಿನ ಕೈಯಲ್ಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.

    ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ನಡೆದ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಅವರು ಚಾಲನೆ ನೀಡಿದರು. ಫೆ.14ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಜಗತ್ತಿನ ನಾನಾ ಭಾಗಗಳ 5000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.ಇದನ್ನೂ ಓದಿ: ಜಾಗತಿಕ ಹೂಡಿಕೆದಾರರ ಸಮಾವೇಶ – 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ.ಬಿ ಪಾಟೀಲ್

    ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದರು.

    ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡರಿಂದಲೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ. ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಬಹಳ ಮುಖ್ಯ. ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ತೊಂದರೆ ಎದುರಾಗುತ್ತಿತ್ತು, ಆದರೆ ಈಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರ್ಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ ಎಂದು ಶ್ಲಾಘಿಸಿದರು.ಇದನ್ನೂ ಓದಿ: ಸಂಸತ್ ಅಧಿವೇಶನದಿಂದ ಹೂಡಿಕೆದಾರರ ಶೃಂಗದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ – ಹೆಚ್‌ಡಿಕೆ

     

  • ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

    ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

    ಬೆಂಗಳೂರು: ಮೂರು ದಿನ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶ(Global Investors Meet) ಕರ್ನಾಟಕ ಸರ್ಕಾರದ( Karnataka Government) ನಿರೀಕ್ಷೆ ಮೀರಿ ಯಶಸ್ವಿಯಾಗಿದೆ. ರಾಜ್ಯದಲ್ಲಿ 10.5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳು ಏರ್ಪಟ್ಟಿದೆ.

    ಈ ಪೈಕಿ 2.83 ಲಕ್ಷ ಕೋಟಿ ಮೊತ್ತದ ಯೋಜನೆಗಳ ಜಾರಿಗೆ ಏಕಗವಾಕ್ಷಿ ಯೋಜನೆಯಡಿ ರಾಜ್ಯ ಸರ್ಕಾರ ತಕ್ಷಣ ಅನುಮೋದನೆ ನೀಡಿದೆ. ಈ ಜಿಮ್(GIM) ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿತ್ತು. ಇದನ್ನೂ ಓದಿ: ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

    ಕೊನೆಯ ದಿನವಾದ ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಖುಷಿ ಹಂಚಿಕೊಂಡರು.

    ಬೊಮ್ಮಾಯಿ ಮಾತನಾಡಿ, ಕನ್ನಡಿಗರು ಬಂಡವಾಳ ಹೂಡಿ ಬಿಸ್ನೆಸ್ ಮ್ಯಾನ್ ಆಗಿ ವಿಶ್ವವಿಖ್ಯಾತರಾಗಬೇಕೆಂಬುದು ನಮ್ಮ ಆಶಯ. ಆ ಸಾಮರ್ಥ್ಯ ಕನ್ನಡಿಗರಲ್ಲಿ ಬರಬೇಕು ಎಂಬುದು ನಮ್ಮ ಉದ್ದೇಶ ಎಂದರು.

    ಈ ಹೂಡಿಕೆಯಿಂದ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಜಿಮ್ ಸಮಾವೇಶದಲ್ಲಿ ಮೊದಲ ದಿನವೇ ಭರಪೂರ ಬಂಡವಾಳ ಹೂಡಿಕೆ ಹರಿದು ಬಂದಿತ್ತು. ಮೊದಲ ದಿನ 4.5 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

    ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

    ಬೆಂಗಳೂರು: ರಾಜ್ಯದ ಐದನೇಯ ಜಾಗತಿಕ ಬಂಡವಾಳ‌ ಹೂಡಿಕೆದಾರರ ಸಮಾವೇಶ(Global Investment Meet) ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಅರಮನೆ ಆವರಣದಲ್ಲಿ ಶುರುವಾಗಿದೆ. ಕೋವಿಡ್ ನಂತರ ನಡೆಯುತ್ತಿರುವ ಈ ಜಿಮ್ ಸಮಾವೇಶದಲ್ಲಿ ರಾಜ್ಯ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ದೇಶ ವಿದೇಶಗಳ‌ ದೊಡ್ಡ ದೊಡ್ಡ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದು, ಜಗತ್ತಿನ ಗಮನ ಸೆಳೆದಿದೆ.

    ಸಮಾವೇಶದಲ್ಲಿ ದೇಶ-ವಿದೇಶಗಳ ಅನೇಕ ಕೈಗಾರಿಕೋದ್ಯಮಿಗಳು, ಐಟಿಬಿಟಿ ಕಂಪನಿಗಳು, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಸ್ಟಾರ್ಟಪ್‌ಗಳ ಉದ್ಯಮಿಗಳು ಭಾಗವಹಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿದ್ದಾರೆ.

     

    ಇಂದು ಬೆಳಗ್ಗೆ 10:30ಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ವರ್ಚುವಲ್‌ ಮೂಲಕ ಮೊದಲ‌ ದಿನದ ಸಮಾವೇಶದಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಉದ್ಘಾಟನಾ ಭಾಷಣದ ಮೂಲಕ ಕರ್ನಾಟಕದ ಹೂಡಿಕೆ ಸ್ನೇಹಿ ವಾತಾವರಣದ ಬಗ್ಗೆ ಉದ್ಯಮಿಗಳಿಗೆ ಪ್ರಧಾನಿ ಮೋದಿ ಮನವರಿಕೆ ಮಾಡಿಕೊಟ್ಟರು. ಕರ್ನಾಟಕ ದೇಶದ ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ, ಹೂಡಿಕೆಗೆ ಕರ್ನಾಟಕ ಪ್ರಶಸ್ತ ಮತ್ತು ಸುರಕ್ಷಿತ ರಾಜ್ಯ ಎಂದು ಉದ್ಯಮಿಗಳಿಗೆ ಪ್ರಧಾನಿ ಮೋದಿ ಸಂದೇಶ ರವಾನಿಸಿದರು.  ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಕೊಹ್ಲಿ ಕಿಂಗ್ – ನೂತನ ವಿಶ್ವದಾಖಲೆ

    ಈ ಜಿಮ್ ಸಮಾವೇಶದಲ್ಲಿ 7 ಲಕ್ಷ ಕೋಟಿ ರು.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆ ಇದೆ. ಜೊತೆಗೆ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಜಿಮ್ ಸಮಾವೇಶದಲ್ಲಿ ಮೊದಲ ದಿನವೇ ಭರಪೂರ ಬಂಡವಾಳ ಹೂಡಿಕೆ ಹರಿದು ಬಂದಿದೆ. ಮೊದಲ ದಿನ 4.5 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಯ್ತು. ಮೂಲಸೌಕರ್ಯ, ಲಾಜಿಸ್ಟಿಕ್, ಗ್ರೀನ್ ಹೈಡ್ರೋಜನ್, ಗ್ರೀನ್ ಅಮೋನಿಯ, ಸೋಲಾರ್ ಇಂಧನ ಕ್ಷೇತ್ರ, ಸೆಮಿ ಕಂಡಕ್ಟರ್ ವಲಯ, ಎಲೆಕ್ಟ್ರಾನಿಕ್ಸ್, ಉತ್ಪಾದನಾ ವಲಯ ಸೇರಿ ಹಲವು ಕಂಪೆನಿಗಳ ಕೈಗಾರಿಕೋದ್ಯಮಿಗಳು ಮೊದಲ ದಿನ ಹೂಡಿಕೆಗೆ ರಾಜ್ಯ ಸರ್ಕಾರದ ಜತೆಗೆ ಒಪ್ಪಂದ ಮಾಡಿಕೊಂಡವು. ಸಮಾವೇಶದಲ್ಲಿ ಸೋಲಾರ್‌, ಗ್ರೀನ್‌ ಹೈಡ್ರೋಜನ್‌ ಸೇರಿ ಹಸಿರು ಇಂಧನ ಕ್ಷೇತ್ರದಲ್ಲೇ ಸುಮಾರು 2 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ ಮಾಡಲಾಗಿದೆ. ಈ ಪೈಕಿ ರಾಜ್ಯದ ಜಿಂದಾಲ್‌ ಸಂಸ್ಥೆಯೇ 40 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಈ ಸಲ ರಾಜ್ಯ ಮಟ್ಟದ ಉನ್ನತಾಧಿಕಾರ ಸಮಿತಿ ಈಗಾಗಲೇ ಅನುಮೋದಿಸಿರುವ 1.73 ಲಕ್ಷ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳು, ದಾವೋಸ್‌ನಲ್ಲಿ ಸಿಎಂ ಸಮ್ಮುಖದಲ್ಲಿ ಸಹಿ ಹಾಕಿರುವ 58,000 ಕೋಟಿ ರೂ. ಒಪ್ಪಂದಗಳೂ ಸಮಾವೇಶದ ಭಾಗವಾಗಿರಲಿವೆ.

    ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರದ ಸಚಿವರಾದ ನಿರ್ಮಲಾ ಸೀತಾರಾಮನ್‌, ಪಿಯೂಶ್‌ ಗೋಯೆಲ್‌, ಪ್ರಹ್ಲಾದ್‌ ಜೋಶಿ, ರಾಜೀವ್‌ ಚಂದ್ರಶೇಖರ್‌, ಸಚಿವರಾದ ಅಶ್ವಥ್ ನಾರಾಯಣ, ಎಂಟಿಬಿ ನಾಗರಾಜ್ ಭಾಗವಹಿಸಿದ್ದರು.

    ಉದ್ಯಮಿಗಳಾದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರಮಂಗಳಂ ಬಿರ್ಲಾ, ಕಿರ್ಲೋಸ್ಕರ್‌ ಮೋಟಾರ್ಸ್‌ನ ವಿಕ್ರಮ ಕಿರ್ಲೋಸ್ಕರ್‌, ವಿಪ್ರೋ ಅಧ್ಯಕ್ಷ ರಿಶಾದ್‌ ಪ್ರೇಮ್‌ಜಿ, ಅದಾನಿ ಪೋರ್ಟ್ಸ್ ಸಿಇಒ ಕರಣ್‌ ಅದಾನಿ, ಜೆಎಸ್‌ಡಬ್ಲ್ಯೂ ಅಧ್ಯಕ್ಷ ಸಜ್ಜನ್‌ ಜಿಂದಾಲ್‌, ಭಾರತಿ ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ರಾಜನ್‌ ಮಿತ್ತಲ್‌, ಸ್ಟೆರಲೈಟ್‌ ಪವರ್‌ನ ಸಿಇಒ ಮತ್ತು ಎಂಡಿ ಪ್ರತೀಕ್‌ ಅಗರವಾಲ್‌ ಮತ್ತು ಸ್ಟಾರ್‌ಬಕ್ಸ್‌ ಸಹಸಂಸ್ಥಾಪಕ ಜೆವ್‌ ಸಿಗೆಲ್‌ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಇನ್ವೆಸ್ಟ್ ಕರ್ನಾಟಕ – 72 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ!

    ಇನ್ವೆಸ್ಟ್ ಕರ್ನಾಟಕ – 72 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ!

    – 90 ಸಾವಿರ ಉದ್ಯೋಗ ಸೃಷ್ಟಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಒಟ್ಟು 51 ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಯಿತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಸಮಾವೇಶದ ಬಳಿಕ ಡೆನಿಸ್ಸನ್ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಮಾವೇಶದ ಕುರಿತು ಮಾಹಿತಿ ನೀಡಿದರು. ಇನ್ವೆಸ್ಟ್ ಕರ್ನಾಟಕ ನಿರೀಕ್ಷೆಗೂ ಮೀರಿ ಯಶಸ್ವಿಗೊಂಡಿದೆ. 1500 ಕ್ಕೂ ಹೆಚ್ಚು ಉದ್ಯಮಿಗಳು ಆಗಮಿದ್ದರು. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಯು ಈ ಸಮಾವೇಶದ ಯಶಸ್ಸಿಗೆ ಸಾಕ್ಷಿಯಾದವು ಎಂದರು.

    ಒಟ್ಟು ಸಮಾವೇಶದಲ್ಲಿ 51 ಕಂಪನಿಗಳೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದ್ದು, 72 ಸಾವಿರ ಕೋಟಿ ಹೂಡಿಕೆ ಹರಿದು ಬರಲಿದೆ. ಇದರಿಂದ 90 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಜಗದೀಶ್ ಶೆಟ್ಟರ್ ವಿವರಿಸಿದರು.

    ಇನ್ವೆಸ್ಟ್ ಮಾಡಿದ ಕಂಪನಿಗಳು:
    ರಾಜೇಶ್ ಎಕ್ಸ್ ಪೋಟ್ರ್ಸ್ ಲಿಮಿಟೆಡ್ 50 ಸಾವಿರ ಕೋಟಿ, ಸೊನಾಲಿ ಪವರ್ ಪ್ರೈವೆಟ್ ಲಿಮಿಟೆಡ್ ಕಂಪನಿಯು 4800 ಕೋಟಿ ರೂ., ನ್ಯಾಟ್‍ಕ್ಯಾಪ್ ಪವರ್ ಪ್ರೈವೆಟ್ ಲಿಮಿಟೆಡ್ 3000 ಕೋಟಿ, ಜೆಟ್‍ವಿಂಗ್ಸ್ ಏರೋಸ್ಪೇಸ್ ಆಂಡ್ ಏವಿಯೇಷನ್ 2060 ಕೋಟಿ, ಅಯನಾ ರಿನಿವೆಬಲ್ ಪವರ್ ಪ್ರೈವೆಟ್ ಲಿಮಿಟೆಡ್ 3000 ಕೋಟಿ, ಲುಗ್ಸೋರ್ ಎನರ್ಜಿ ಪ್ರೈವೆಟ್ ಲಿಮಿಟೆಡೆ 1200 ಕೋಟಿ ಸೇರಿದಂತೆ ಭಾಗೀರಥ ಕೆಮಿಕಲ್ಸ್, ಎಚ್‍ಪಿಸಿ, ಐಒಸಿ, ಪವರ್ ರಿನ್ಯೂ, ಗುಜರಾತ್ ಅಂಬುಜಾ, ಕೆಎಲ್‍ಇ ಸೊಸೈಟಿ, ದೋಡ್ಲಾ ಡೈರಿ, ಎಸಿಸಿ ಲಿಮಿಟೆಡ್, ಡೆಪೆಡ್ರೊ ಶುಗರ್, ವುಕ್ಸಿ ಮೆಂಗ್ಯಾಂಗ್ ಮೆಷಿನರಿ ಕಂಪನಿಗಳು ಒಳಗೊಂಡಿವೆ.

  • ಉತ್ತರ ಕರ್ನಾಟಕದಲ್ಲಿ ಶಾಹಿ ಎಕ್ಸ್‌ಪೋರ್ಟ್‌ ಸಂಸ್ಥೆಯಿಂದ 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

    ಉತ್ತರ ಕರ್ನಾಟಕದಲ್ಲಿ ಶಾಹಿ ಎಕ್ಸ್‌ಪೋರ್ಟ್‌ ಸಂಸ್ಥೆಯಿಂದ 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

    ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪನೆ ಗುರಿ ಹೊಂದಲಾಗಿದ್ದು, ಸುಮಾರು 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಲು ಯೋಜಿಸಲಾಗಿದೆ ಎಂದು ಶಾಹಿ ಎಕ್ಸ್‌ಪೋರ್ಟ್‌ ಸಂಸ್ಥೆಯ ಪಿ.ಬಿ ಆನಂದಪದ್ಮನಾಭ ಹೇಳಿದ್ದಾರೆ.

    ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ ಮೂರು ಸರ್ಕಾರಗಳಯ ಬದಲಾಗಿವೆ. ಆದರೆ ಕೈಗಾರಿಕಾ ನೀತಿಯಲ್ಲಿ ಬದಲಾವಣೆಗಳಾಗಿಲ್ಲ. ಉದ್ಯಮಿಗಳಿಗೆ ನಿರಂತರ ಪ್ರೋತ್ಸಾಹ ಸಿಗುತ್ತಿದೆ, 2 ವರ್ಷಗಳಲ್ಲಿ 200 ಕೋಟಿ ರೂ. ಬಂಡವಾಳ ಹೂಡಲಾಗಿದೆ ಎಂದು ತಿಳಿಸಿದರು.

    ಕಳೆದ 8 ವರ್ಷಗಳಲ್ಲಿ 23 ಉದ್ದಿಮೆಗಳು ಬೆಂಗಳೂರು ಕೇಂದ್ರಿತವಾಗಿ ಕಾರ್ಯನಿರ್ವಹಿಸುತ್ತಿದ್ದವು. ಈಗ ಬೆಂಗಳೂರಿನಿಂದ ಹೊರಗಡೆ 24 ಉದ್ಯಮಗಳಿವೆ. ಉತ್ತರ ಕರ್ನಾಟಕದ ಗದಗ, ಧಾರವಾಡ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಬರುವ ವರ್ಷಗಳಲ್ಲಿ 5 ಉದ್ಯಮಗಳನ್ನು ಸ್ಥಾಪಿಸಿ, 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲಾಗುವುದು ಎಂದು ಮಾಹಿತಿ ನೀಡಿದರು.

    ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ ಹುಬ್ಬಳ್ಳಿ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯುತ್ತಿದೆ.

    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರಾಸ್ತಾವಿಕವಾಗಿ ಮಾತನಾಡಿ, ಹದಿನೈದು ವರ್ಷಗಳ ಹಿಂದೆ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ತಮಗೆ ಉತ್ತರ ಕರ್ನಾಟಕದ ಭೂಗೋಳಿಕ, ಸಾಮಾಜಿಕ, ಆರ್ಥಿಕ ಪರಿಚಯವಿದೆ. ಈ ಭಾಗದ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿದೆ. ಇನ್ವೆಸ್ಟ್ ಕರ್ನಾಟಕ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದು ಹೊಸ ಭರವಸೆ ಹುಟ್ಟಿಸಿದೆ ಎಂದರು.

    ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಚಯ ಮಾಡಿಕೊಟ್ಟರು.

    ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಬಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಪ್ರಮುಖ ಉದ್ದಿಮೆದಾರರು, ಕಂಪನಿಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

  • ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಇನ್ವೆಸ್ಟ್ ಕರ್ನಾಟಕ

    ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಇನ್ವೆಸ್ಟ್ ಕರ್ನಾಟಕ

    ಧಾರವಾಡ/ಹುಬ್ಬಳ್ಳಿ: ಬೆಂಗಳೂರು ಹೊರತುಪಡಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಫೆಬ್ರವರಿ 14 ರಂದು “ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ-2020” ಆಯೋಜಿಸಲಾಗಿದೆ. ಇನ್‍ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಿವರಣೆ ನೀಡಿದ್ರು.

    ಹುಬ್ಬಳ್ಳಿ ನಗರದ ಡೆನಿಸ್ಸನ್ ಹೋಟೆಲ್‍ನಲ್ಲಿ ಆಯೋಜಿಸಿರುವ ಈ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚಾಲನೆ ನೀಡಲಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ.ಸದಾನಂದಗೌಡ ಹಾಗೂ ರೈಲ್ವೇ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಬಹುತೇಕರಿಗೆ ಕರ್ನಾಟಕವೆಂದರೆ ಬೆಂಗಳೂರು ಮಾತ್ರ ಎಂಬ ಕಲ್ಪನೆ ಇದೆ. ಕೈಗಾರಿಕಾ ಬೆಳವಣಿಗೆ ಕೇವಲ ಬೆಂಗಳೂರಿನಲ್ಲಿ ಆಗುತ್ತಿದ್ದು, 2 ಟಯರ್ ಮತ್ತು 3 ಟಯರ್ ಸಿಟಿಗಳಲ್ಲಿಯೂ ಕೈಗಾರಿಕೊದ್ಯಮದ ಬೆಳವಣಿಗೆ ಆಗಬೇಕೆಂಬ ಉದ್ದೇಶದಿಂದ ಈ ಭಾಗದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ ಆಯೋಜಿಸಿದ್ದೇವೆ. ಈ ಸಮಾವೇಶದಿಂದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ, ಕಲುಬುರಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೊದ್ಯಮ ಚಿಗುರೊಡೆಯಲಿದೆ.

    ಈ ಸಮಾವೇಶಕ್ಕೆ 1000ಕ್ಕೂ ಹೆಚ್ಚು ಉದ್ಯಮಿಗಳ ಆಗಮನ ನಿರೀಕ್ಷಿಸಿದ್ದೇವೆ. ಹೈದರಾಬಾದ್, ಮುಂಬೈ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೂಡಿಕೆಗೆ ಇರುವ ವಿಫುಲ ಅವಕಾಶಗಳ ಬಗ್ಗೆ ಉದ್ಯಮಿಗಳಿಗೆ ತಿಳಿಸಿದಾಗ ಅವರು ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಹಿಂದೂಜಾ ಹಾಗೂ ಟಾಟಾ ಗ್ರೂಪ್‍ನ ಮುಖ್ಯಸ್ಥರು ಈ ಸಮಾವೇಶಕ್ಕೆ ತಮ್ಮ ತಂಡ ಕಳುಹಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ತಂಡಗಳು ಆಗಮಿಸಿ ಯಾವ ವಲಯದಲ್ಲಿ ಹೂಡಿಕೆ ಮಾಡಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲಿವೆ. ಜೊತೆಗೆ, ಚೀನಾ ಮೂಲದ ಕಂಪನಿಯ ಬೆಂಗಳೂರು ಪ್ರತಿನಿಧಿಗಳು ಸಹ ಈ ಸಮಾವೇಶಕ್ಕೆ ಆಗಮಿಸಿ, ವಿದ್ಯುತ್ಚಾಲಿತ ವಾಹನ ನಿರ್ಮಾಣದ ಕುರಿತು ಸಾಧಕ ಬಾಧಕದ ಬಗ್ಗೆಯೂ ವಿವರ ಕಲೆಹಾಕಲಿದ್ದಾರೆ ಎಂದರು.

    ಹುಬ್ಬಳ್ಳಿ- ಧಾರವಾಡ ನಗರ ಹೂಡಿಕೆಗೆ ಸೂಕ್ತ ವಾತಾವರಣವನ್ನು ಹೊಂದಿದೆ. ಹುಬ್ಬಳ್ಳಿಯಲ್ಲಿ ಎಫ್‍ಎಂಸಿಜಿ ಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಗುವಾಹಟಿಗೆ ಭೇಟಿ ನೀಡಿ, ಗುವಾಹಟಿ ಮ್ಯಾನೇಜ್‍ಮೆಂಟ್ ಅಸೋಸಿಯೇಷನ್ (ಜಿಎಂಎ) ಮತ್ತು ಗ್ರಾಹಕ ಸರಕುಗಳ ಉತ್ಪಾದನಾ ಉದ್ಯಮಗಳಾದ (ಜ್ಯೋತಿ ಲ್ಯಾಬ್ಸ್, ಗೋದ್ರೇಜ್ ಮತ್ತು ಕ್ರಿಯೇಟಿವ್ ಪಾಲಿಪ್ಯಾಕ್) ಕರ್ನಾಟಕದಲ್ಲಿ ಹೂಡಿಕೆ ಮಾಡಲು ಸೆಳೆದಿದ್ದೇವೆ ಎಂದು ಹೇಳಿದರು.

    ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ 2500 ಎಕರೆ ಲ್ಯಾಂಡ್ ಬ್ಯಾಂಕ್ ಲಭ್ಯತೆ ಇದೆ. ಆ ಭಾಗದಲ್ಲಿ ಕೈಗಾರಿಕೆ ತೆರೆಯುವ ಆಸಕ್ತಿಯೂ ಕೆಲ ಕಂಪನಿಗಳಿಂದ ವ್ಯಕ್ತವಾಗಿವೆ. ಕೆಐಎಡಿಬಿಯು ಭೂ ಲಭ್ಯತೆ ಹೊಂದಿದ್ದು, ಕೆಲವೆಡೆ ಭೂ ಸ್ವಾಧೀನವನ್ನೂ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಆಸಕ್ತರನ್ನು ಸ್ಥಳ ಪರಿಶೀಲನೆಗೂ ಕರೆದೊಯ್ಯಲಾಗುತ್ತಿದೆ. ಮತ್ತೊಂದೆಡೆ ಮೂಲಸೌಕರ್ಯವಾದ ನೀರು ಹಾಗೂ ರಸ್ತೆ ಅಗಲೀಕರಣದಂತಹ ಕೆಲಸವೂ ಸಾಗಿವೆ ಎಂದು ವಿವರಣೆ ನೀಡಿದರು.

    ಉತ್ತರ ಕರ್ನಾಟಕ ಭಾಗದಲ್ಲಿ ಟೆಕ್ಸ್ ಟೈಲ್ಸ್, ವಾಲ್ಸ್, ಸೋಲಾರ್ ಪವರ್, ಫುಡ್‍ಫಾರ್ಕ್ ಸೇರಿದಂತೆ ಬಹುತೇಕ ವಲಯಗಳಲ್ಲಿ ಆಸಕ್ತಿ ವ್ಯಕ್ತವಾಗಿವೆ. ಇತ್ತೀಚೆಗೆ ಪತಂಜಲಿ ಸಂಸ್ಥಾಪಕ ಬಾಬಾ ರಾಮ್ ದೇವ್ ಅವರೊಂದಿಗೂ ಫುಡ್‍ಪಾರ್ಕ್ ತೆರೆಯುವ ಸಂಬಂಧ ಚರ್ಚಿಸಿದ್ದೇವೆ. ಅವರ ತಂಡ ಹುಬ್ಬಳ್ಳಿಗೆ ಆಗಮಿಸಿ ಇಲ್ಲಿನ ಆಹಾರ ಪದಾರ್ಥಗಳ ಲಭ್ಯತೆ ಆಧಾರದ ಮೇಲೆ ಅಧ್ಯಯನ ನಡೆಸುವುದಾಗಿ ಹೇಳಿದೆ ಎಂದರು.

    ಫೆಬ್ರವರಿ 14ರಂದು ಬೆಳಗ್ಗೆ 10 ರಿಂದ 12ರವರೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಯಾವ ರೀತಿಯ ಹೂಡಿಕೆಗೆ ಅವಕಾಶಗಳು ಇವೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನಂತರ ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ರಿಂದ ವಿವಿಧ ಉದ್ಯಮಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮವಿರಲಿದೆ ಎಂದು ವಿವರಣೆ ನೀಡಿದರು.

    ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಸಹ ಈ ಸಮಾವೇಶಕ್ಕೆ ಕೈ ಜೋಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದಲೂ ಸಾಕಷ್ಟು ಸಹಕಾರ ವ್ಯಕ್ತವಾಗಿದೆ. ಈ ಸಮಾವೇಶ ನೆರವೇರಿಕೆಗೆ ಇಲಾಖೆಯ ಎಲ್ಲಾ ಅಧಿಕಾರಿಗಳು ಸಹ ಒಟ್ಟಿಗೆ ನಿಂತು ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಹುಬ್ಬಳ್ಳಿ – ಧಾರವಾಡ ನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಡಿಸಿ ದೀಪಾ ಚೋಳನ್, ಶಾಸಕ ಅರವಿಂದ ಬೆಲ್ಲದ್ ಉಪಸ್ಥಿತರಿದ್ದರು.

  • ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಗುವಾಹಟಿ ಕೈಗಾರಿಕೋದ್ಯಮಿಗಳನ್ನ ಆಹ್ವಾನಿಸಿದ ಜಗದೀಶ್ ಶೆಟ್ಟರ್

    ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಗುವಾಹಟಿ ಕೈಗಾರಿಕೋದ್ಯಮಿಗಳನ್ನ ಆಹ್ವಾನಿಸಿದ ಜಗದೀಶ್ ಶೆಟ್ಟರ್

    ಬೆಂಗಳೂರು: ಎಫ್‍ಎಂಸಿಜಿ(ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ಕ್ಲಸ್ಟರ್ ನಿರ್ಮಾಣದ ಕುರಿತು ಮಾಹಿತಿ ಪಡೆಯಲು ಹಾಗೂ ‘ಇನ್ವೆಸ್ಟ್ ಕರ್ನಾಟಕ’ ಹುಬ್ಬಳ್ಳಿ ಸಮಾವೇಶಕ್ಕೆ ಆಗಮಿಸುವಂತೆ ಗುವಾಹಟಿ ಎಫ್‍ಎಂಸಿಜಿ ವಲಯದ ಕೈಗಾರಿಕೋದ್ಯಮಿಗಳನ್ನು ಇಂದು ಆಹ್ವಾನಿಸಲಾಯಿತು.

    ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಗುವಾಹಟಿ ಎಫ್‍ಎಂಸಿಜಿ ವಲಯಕ್ಕೆ ಭೇಟಿ ನೀಡಿ, ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಿದರು. ಫಿಕ್ಕಿಯ ಕರ್ನಾಟಕ ಚಾಪ್ಟರ್ ಹಾಗೂ ‘ಇನ್ವೆಸ್ಟ್ ಕರ್ನಾಟಕ’ ಫೋರಂ ವತಿಯಿಂದ ಏರ್ಪಡಿಸಿದ್ದ ಹೂಡಿಕೆದಾರರು ಮತ್ತು ಉದ್ಯಮಿಗಳ ಸಭೆಯಲ್ಲಿ ಗುವಾಹಟಿ ಮ್ಯಾನೇಜ್‍ಮೆಂಟ್ ಅಸೋಸಿಯೇಷನ್ ಸದಸ್ಯರು ಪಾಲ್ಗೊಂಡಿದ್ದರು.

    ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಇದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಹೂಡಿಕೆಗೆ ವಿಫುಲ ಅವಕಾಶವಿದೆ. ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಎಫ್‍ಎಂಸಿಜಿ ಕ್ಲಸ್ಟರ್ ಸ್ಥಾಪನೆಗೆ ಸರ್ಕಾರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ ಎಂದು ಜಗದೀಶ್ ಶೆಟ್ಟರ್ ಕೈಗಾರಿಕೋದ್ಯಮಿಗಳಿಗೆ ಜಗದೀಶ್ ಶೆಟ್ಟರ್ ವಿವರಣೆ ನೀಡಿದರು.

    ಇದೇ ವೇಳೆ ಜಗದೀಶ್ ಶೆಟ್ಟರ್ ಅವರು ಗುವಾಹಟಿಯಲ್ಲಿ ಉಜಾಲ ಘಟಕ, ಗೋದ್ರೇಜ್, ಮಾರ್ಗೋ ಸೇರಿದಂತೆ ಇನ್ನಿತರೆ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯನ್ನು ಅವಲೋಕಿಸಿದರು. ಸಚಿವರ ಜೊತೆಯಲ್ಲಿ ಇನ್ವೆಸ್ಟ್ ಕರ್ನಾಟಕ ಫೋರಂನ ಸಿಓಓ ಶ್ರೀಮತಿ ಸ್ವರೂಪ ಟಿ.ಕೆ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

  • ಇನ್‍ವೆಸ್ಟ್ ಕರ್ನಾಟಕ 2020ರ ಕರ್ಟೈನ್ ರೈಸರ್ ಉದ್ಘಾಟನೆ

    ಇನ್‍ವೆಸ್ಟ್ ಕರ್ನಾಟಕ 2020ರ ಕರ್ಟೈನ್ ರೈಸರ್ ಉದ್ಘಾಟನೆ

    – ಜಾಗತಿಕ ಹೂಡಿಕೆದಾರರಿಗೆ ಸಿಎಂ ಆಹ್ವಾನ

    ದಾವೋಸ್ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜಾಗತಿಕ ಹೂಡಿಕೆದಾರರ ಶೃಂಗಸಭೆ 2020ರ (ಆವಿಷ್ಕಾರ ಈಗ- ಅಭಿವೃದ್ದಿ ನಿರಂತರ) ಕರ್ಟೈನ್ ರೈಸರ್ ಅನ್ನು ದಾವೋಸ್ ನಲ್ಲಿ ನೆರವೇರಿಸಿದರು. ಈ ಜಾಗತಿಕ ಹೂಡಿಕೆದಾರರ ಸಮಾವೇಶವು ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಅಧಿಕೃತ ದಿನಾಂಕವನ್ನು ಸಿಎಂ ಘೋಷಿಸಿದರು. ಕರ್ಟೈನ್ ರೈಸರ್ ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೊದ್ಯಮಿಗಳು, ಉದ್ಯಮಿಗಳು ಮತ್ತು ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪ್ರದರ್ಶಿಸಲಾಯಿತು.

    ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು, ಜಾಗತಿಕ ವ್ಯಾಪಾರ ಮುಖಂಡರನ್ನು ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ವಾಣಿಜ್ಯ ಸಚಿವ ಶ್ರೀ ಪಿಯೂಷ್ ಗೋಯಲ್, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ ರಮಣ ರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಸಿಐಐ ನ ಡೈರೆಕ್ಟರ್ ಜೆನರಲ್ ಚಂದ್ರಜೀತ್ ಬ್ಯಾನರ್ಜಿ, ಭಾರತ್ ಫೋರ್ಜ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಾಬಾ ಕಲ್ಯಾಣಿ, ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‍ನ ಅಧ್ಯಕ್ಷ ಮತ್ತು ಎಂಡಿ ಶ್ರೀ ವಿಕ್ರಮ್ ಕಿರ್ಲೋಸ್ಕರ್ ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಸ್ವಿಟ್ಜಲ್ರ್ಯಾಂಡಿನ ಸಂಸತ್ ಸದಸ್ಯರ ತಂಡ ಹಾಗೂ ಸ್ವಿಸ್ – ಇಂಡಿಯಾ ಪಾರ್ಲಿಮೆಂಟೇರಿಯನ್ ಗ್ರೂಪ್ ನ ಅಧ್ಯಕ್ಷ ಡಾ ನಿಕ್ಲೂಸ್ – ಸ್ಯಾಮ್ಯೂಲ್ ಗುಗ್ಗರ್ ಸಹ ಪಾಲ್ಗೊಂಡಿದ್ದರು.