Tag: Invite

  • ಕೊಹ್ಲಿಯನ್ನು ಟಿಕ್‍ಟಾಕ್‍ನಲ್ಲಿ ಡ್ಯುಯೆಟ್ ಮಾಡಲು ಆಹ್ವಾನಿಸಿದ ವಾರ್ನರ್

    ಕೊಹ್ಲಿಯನ್ನು ಟಿಕ್‍ಟಾಕ್‍ನಲ್ಲಿ ಡ್ಯುಯೆಟ್ ಮಾಡಲು ಆಹ್ವಾನಿಸಿದ ವಾರ್ನರ್

    ನವದೆಹಲಿ: ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಡೇವಿಡ್ ವಾರ್ನರ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಟಿಕ್‍ಟಾಕ್‍ನಲ್ಲಿ ಡ್ಯುಯೆಟ್ ಮಾಡಲು ಆಹ್ವಾನಿಸಿದ್ದಾರೆ.

    ಡೇವಿಡ್ ವಾರ್ನರ್ ಅವರು ಲಾಕ್‍ಡೌನ್ ವೇಳೆ ತಮ್ಮ ಕುಟುಂಬದ ಜೊತೆ ಉತ್ತಮ ಕಾಲವನ್ನು ಕಳೆಯುತ್ತಿದ್ದಾರೆ. ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುವ ವಾರ್ನರ್ ಟಿಕ್‍ಟಾಕ್ ವಿಡಿಯೋಗಳನ್ನು ಮಾಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಮಡದಿ ಮಕ್ಕಳ ಜೊತೆ ಫನ್ನಿ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

    https://www.instagram.com/p/CAfNQG9Jgbp/

    ಇತ್ತೀಚೆಗೆ ವಾರ್ನರ್ ಅವರು ಅಕ್ಷಯ್ ಕುಮಾರ್ ಅವರ ಬಹು ಜನಪ್ರಿಯ ಗೀತೆ ಬಾಲ ಹಾಡಿಗೆ ಟಿಕ್‍ಟಾಕ್‍ನಲ್ಲಿ ಹೆಜ್ಜೆ ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಈ ಟಿಕ್‍ಟಾಕ್ ವಿಡಿಯೋವನ್ನು ವಾರ್ನರ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲೂ ಹಂಚಿಕೊಂಡಿದ್ದರು. ಇದನ್ನು ನೋಡಿ ಫಿದಾ ಆದ ಕೊಹ್ಲಿ ಈ ವಿಡಿಯೋಗೆ ವ್ಯಂಗ್ಯವಾಗಿ ನಗುತ್ತಿರುವ ಇಮೋಜಿಗಳನ್ನು ಕಮೆಂಟ್ ಮಾಡಿದ್ದಾರೆ.

    https://www.instagram.com/p/CAZmL8HJ4xR/

    ಇದಾದ ನಂತರ ಕೊಹ್ಲಿಯ ಕಮೆಂಟ್‍ಗೆ ಉತ್ತರ ನೀಡಿರುವ ವಾರ್ನರ್ ಅವರು, ನೀನು ಡ್ಯುಯೆಟ್ ಮಾಡು ಬಾ ಮ್ಯಾನ್. ನಿನ್ನ ಪತ್ನಿ ನಿನಗೆ ಹೇಳಿಕೊಡುತ್ತಾರೆ ಎಂದು ರಿಪ್ಲೈ ಮಾಡಿದ್ದಾರೆ. ವಾರ್ನರ್ ಅವರ ರಿಪ್ಲೈ ಕಂಡು ಬೆರಗಾದ ಅಭಿಮಾನಿಗಳು ಇಂದು ಭಾರತದಲ್ಲಿ ಟಿಕ್‍ಟಾಕ್ ಇನ್ನೂ ಜೀವಂತವಾಗಿದೆ ಎಂದರೆ ಅದು ವಾರ್ನರ್ ಅವರಗಾಗಿಯೇ ಎಂದು ಕಮೆಂಟ್ ಮಾಡಿದ್ದಾರೆ.

    https://www.instagram.com/p/B_mINrppW7d/

    ಸದ್ಯ ಟಿಕ್‍ಟಾಕ್‍ನಲ್ಲಿ ವಿಡಿಯೋ ಮಾಡುವುದರಲ್ಲಿ ಬ್ಯುಸಿ ಇರುವ ಡೇವಿಡ್ ವಾರ್ನರ್ ಇತ್ತೀಚೆಗೆ ಬ್ಯಾಟ್ ಹಿಡಿದು ಬಾಹುಬಲಿ ಡೈಲಾಗ್ ಹೇಳಿ ಮಿಂಚಿದ್ದರು. ಜೊತೆಗೆ ಮಡದಿ ಮಕ್ಕಳ ಜೊತೆಗೆ ಅಲ್ಲು ಅರ್ಜುನ್ ಅವರ ಬುಟ್ಟ ಬೊಮ್ಮ ಹಾಡಿಗೆ ಹೆಜ್ಜೆ ಹಾಕಿದ್ದರು. ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗಿರುವ ವಾರ್ನರ್ ತೆಲುಗು ಹಾಡುಗಳಿಗೆ ಟಿಕ್‍ಟಾಕ್ ಮಾಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

    ಟಿಕ್‍ಟಾಕ್ ಬ್ಯಾನ್ ಮಾಡಿ
    ಟಿಕ್‍ಟಾಕ್ ಅನ್ನು ಭಾರತದಲ್ಲಿ ಅತೀ ಹೆಚ್ಚು ಜನ ಬಳಸುತ್ತಿದ್ದಾರೆ. ಆದರೆ ಭಾರತದಲ್ಲಿ ಬ್ಯಾನ್ ಮಾಡಬೇಕು ಎಂಬ ಕೂಗು ಕೂಡ ಕೇಳಿಬಂದಿದೆ. ಇದರಲ್ಲಿ ಜನಪ್ರಿಯತೆ ಪಡೆಯಬೇಕು ಎಂದು ಜನರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಈ ಟಿಕ್‍ಟಾಕ್‍ನಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತಿದೆ ಎಂದು ರಾಷ್ಟೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಕೆಲವರ ಆಗ್ರಹಿಸುತ್ತಿದ್ದಾರೆ. ಶರ್ಮಾ ಅವರು ಹೇಳಿದ್ದಾರೆ. ಜೊತೆಗೆ ಟಿಕ್‍ಟಾಕ್ ಚೀನಾ ಆ್ಯಪ್ ಆಗಿದ್ದು, ಇದನ್ನು ನಿಷೇಧ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಜನ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

  • ಮಗಳ ಮದ್ವೆಗೆ ಆಹ್ವಾನ – ಮೋದಿ ರಿಪ್ಲೈ ಕಂಡು ತಂದೆಗೆ ಅಚ್ಚರಿ

    ಮಗಳ ಮದ್ವೆಗೆ ಆಹ್ವಾನ – ಮೋದಿ ರಿಪ್ಲೈ ಕಂಡು ತಂದೆಗೆ ಅಚ್ಚರಿ

    ಚೆನ್ನೈ: ತಮಿಳುನಾಡಿನ ವೆಲ್ಲೂರಿನಲ್ಲಿ ತಂದೆಯೊಬ್ಬರು ತಮ್ಮ ಮಗಳ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ಪತ್ರಕ್ಕೆ ಮೋದಿ ಅವರ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕಂಡು ವಧು-ವರರು ಸೇರಿದಂತೆ ಇಡೀ ಕುಟುಂಬ ಅಚ್ಚರಿಗೊಂಡಿದೆ.

    ವೆಲ್ಲೂರಿನ ನಿವೃತ್ತ ಪ್ರಾದೇಶಿಕ ವೈದ್ಯಕೀಯ ಸಂಶೋಧಕ ಟಿ.ಎಸ್ ರಾಜಶೇಖರನ್ ಅವರು ಸೆಪ್ಟೆಂಬರ್ 11ರಂದು ನಡೆಯುವ ತಮ್ಮ ಮಗಳ ಮದುವೆಗೆ ಪತ್ರ ಬರೆಯುವ ಮೂಲಕ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದರು. ರಾಜಶೇಖರನ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ಮೋದಿ, “ನಿಮ್ಮ ಮಗಳು ಡಾ. ರಾಜಶ್ರೀ ಅವರು ಡಾ. ಸುದರ್ಶನ್ ಅವರ ಜೊತೆ ಮದುವೆಯಾಗುತ್ತಿರುವ ವಿಷಯ ತಿಳಿದು ಸಂತೋಷವಾಯಿತು. ಈ ಮಹತ್ವದ ಸಂದರ್ಭದಲ್ಲಿ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ಉತ್ತರಿಸಿದ್ದರು.

    ಮದುವೆಗೆ ಆಹ್ವಾನಿಸಿದಕ್ಕೆ ಧನ್ಯವಾದ ಹೇಳುವುದರ ಜೊತೆಗೆ ಮೋದಿ ಅವರು ನವಜೋಡಿಗೆ ಸಮೃದ್ಧಿ ಮತ್ತು ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿ, ಅವರು ಖುಷಿ ಹಾಗೂ ಸಂತೋಷದಿಂದ ತಮ್ಮ ಜೀವನ ನಡೆಸಲಿ ಎಂದು ನಾನು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು. ಮೋದಿ ಅವರು ಪತ್ರದ ಕೊನೆಯಲ್ಲಿ ನವಜೋಡಿಯ ವೈವಾಹಿಕ ಜೀವನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಟಿ.ಎಸ್ ರಾಜಶೇಖರನ್ ಅವರ ಕುಟುಂಬ, ಸ್ನೇಹಿತರು ಮತ್ತು ಮದುವೆಗೆ ಹಾಜರಾಗಲಿರುವ ಎಲ್ಲರಿಗೂ ಅವರು ತಮ್ಮ ಶುಭಾಶಯ ತಿಳಿಸಿದ್ದಾರೆ.

    ಪ್ರಧಾನಿ ಮೋದಿ ಅವರಿಂದ ಪ್ರತಿಕ್ರಿಯೆ ದೊರೆತ ನಂತರ ರಾಜಶೇಖರನ್ ಹಾಗೂ ಅವರ ಕುಟುಂಬಸ್ಥರು ಸಂತೋಷಗೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಸ್ಥಳೀಯ ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಪ್ರಧಾನಿ ಅವರ ಪತ್ರ ನಮಗೆ ಅಚ್ಚರಿಯನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 11ರಂದು ಮೋದಿ ಮದುವೆಗೆ ಆಗಮಿಸಿದ್ದರೆ ಕುಟುಂಬಸ್ಥರು ಅವರ ಜೊತೆ ಫೋಟೋ ತೆಗೆದುಕೊಳ್ಳಲು ನಿರ್ಧರಿಸಿದ್ದರು.

  • ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

    ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

    ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ.

    ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ. ದಿಗಂಬರ ರಾಜಭಾರತಿ ಸ್ವಾಮೀಜಿ ವರ್ಷದಲ್ಲಿ ಆರು ತಿಂಗಳು ಮಾತನಾಡುತ್ತಾರೆ ಹಾಗೂ ಉಳಿದ ಆರು ತಿಂಗಳು ಮೌನದಲ್ಲಿರುತ್ತಾರೆ.

    ಜನಾರ್ದನ ರೆಡ್ಡಿ ನಾಗಸಾಧುವನ್ನು ಮನೆಗೆ ಕರೆಸಿಕೊಂಡು ತನಗಿರುವ ಕಷ್ಟದ ಬಗ್ಗೆ ಅವರ ಬಳಿ ಹೇಳಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ಅವರ ಕಷ್ಟ ಕೇಳಿ ಶೀಘ್ರದಲ್ಲೇ ಎಲ್ಲ ಕಷ್ಟ ನಿವಾರಣೆಯಾಗುತ್ತದೆ ಎಂದು ನಾಗಸಾಧು ಆಶೀರ್ವಾದ ಮಾಡಿದ್ದಾರೆ.

    ಹೊಸಪೇಟೆ ತಾಲೂಕಿನ ಸಂಕ್ಲಾಪುರದಲ್ಲಿರುವ ಶಾಲೆಯಲ್ಲಿ ಇದೇ ತಿಂಗಳು 15ರಂದು ನಾಗಸಾಧು ಶಾಲೆಯಲ್ಲಿ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜನಾರ್ದನ ರೆಡ್ಡಿ ಅವರನ್ನು ನಾಗಸಾಧು ಆಹ್ವಾನಿಸಿದ್ದಾರೆ.

  • ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ಬೆಂಗಳೂರು: ಸಿಲಿಕಾನ್ ಸಿಟಿಯ ವಿದ್ಯಾರ್ಥಿನಿಯೊಬ್ಬಳು ಈ ಬಾರಿ ಪ್ರಧಾನಿ ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲಿದ್ದಾಳೆ. ಇದೇ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನ ವಿದ್ಯಾರ್ಥಿನಿಗೆ ದೆಹಲಿಯ ಮಾನವ ಸಂಪನ್ಮೂಲ ಇಲಾಖೆಯಿಂದ ಆಹ್ವಾನ ಬಂದಿದೆ.

    ನಗರದ ಗೋಕುಲ್ ಎಕ್ಸ್ ಟೆನ್ಶನ್ ನಲ್ಲಿರುವ ನವ್ಕೀಸ್ ಶಾಲೆಯಲ್ಲಿ ಓದುತ್ತಿರುವ ದೇವಿಕಾ ಸಂತೋಷ್ ಪ್ರಧಾನ ಮಂತ್ರಿ ಬಾಕ್ಸ್ ನಲ್ಲಿ ಕುಳಿತು ಗಣರಾಜ್ಯೋತ್ಸವ ಪರೇಡ್ ವೀಕ್ಷಣೆ ಮಾಡಲಿದ್ದಾಳೆ.

    ಕಳೆದ ವರ್ಷ ಸಿಬಿಎಸ್‍ಸಿಯ 10ನೇ ತರಗತಿಯಲ್ಲಿ ದೇಶದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಲ್ಲಿ ದೇವಿಕಾ ಒಬ್ಬಳಾಗಿದ್ದಳು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ ಈ ವಿಶೇಷ ಆಹ್ವಾನ ಬಂದಿದೆ.

    ಪ್ರತಿ ವರ್ಷ ನೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಹ್ವಾನ ಬರುತ್ತದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ದೇವಿಕಾ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ದೇವಿಕಾ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನನಗೆ 10ನೇ ತರಗತಿಯ ಸಿಬಿಎಸ್‍ಸಿ ಪರೀಕ್ಷೆಯಲ್ಲಿ ಶೇ. 99.2 ಅಂಕಗಳು ಬಂದಿತ್ತು. ನನಗೆ 10ನೇ ತರಗತಿಯ ಸಿಬಿಎಸ್‍ಸಿ ಪರೀಕ್ಷೆಯಲ್ಲಿ ಶೇ. 99.2 ಅಂಕಗಳು ಬಂದಿತ್ತು. ನಮಗೆ ಪ್ರಧಾನಿ ಮೋದಿ ಪರವಾಗಿ ಜಲಸಂಪನ್ಮೂಲ ಇಲಾಖೆಯಿಂದ ಪತ್ರ ಬಂತು. ಗಣರಾಜ್ಯೋತ್ಸವದ ಪರೇಡ್ ನೋಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಾನು 26 ಜನವರಿಯಂದು ಉಳಿದ 99 ಮಕ್ಕಳ ಜೊತೆ ಪರೇಡ್ ವೀಕ್ಷಿಸುತ್ತೇನೆ ಎಂದು ಹೇಳಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ನವದೆಹಲಿ: 2019ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೊಸಾ ಒಪ್ಪಿಕೊಂಡಿದ್ದಾರೆ.

    ಅಧ್ಯಕ್ಷ ಸಿರಿಲ್ ರಮಫೊಸಾ ಅವರ ಭಾರತ ಭೇಟಿಯ ಬಗ್ಗೆ ದಕ್ಷಿಣ ಆಫ್ರಿಕ ವಿದೇಶಾಂಗ ಕಾರ್ಯಾಲಯ ಶನಿವಾರ ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದೆ. ಸಿರಿಲ್ ರಮಫೊಸಾರವರು ಭಾರತದ 2019ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ಪುರಸ್ಕರಿಸಿದ್ದಾರೆ. ಹೀಗಾಗಿ ಜನವರಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಅವರು ಭಾರತಕ್ಕೆ ಆಗಮಿಸುತ್ತಾರೆಂದು ತಿಳಿಸಿದ್ದಾರೆ.

    ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ದಕ್ಷಿಣ ಆಫ್ರಿಕ ಅಧ್ಯಕ್ಷರಿಗೆ ಭಾರತ ಸರ್ಕಾರ ಮನವಿಯನ್ನು ಮಾಡಿಕೊಂಡಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಅಧ್ಯಕ್ಷ ಸಿರಿಲ್ ರಮಫೋಸ ಭಾರತಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.

    ಯಾರಿದು ಸಿರಿಲ್ ರಮಫೊಸಾ?
    ಆಫ್ರಿಕಾದ ಗಾಂಧಿ ಎಂದೇ ಹೆಸರು ಪಡೆದಿದ್ದ ನೆಲ್ಸನ್ ಮಂಡೇಲಾರ ಪರಮಾಪ್ತರೇ ಸಿರಿಲ್ ರಮಫೋಸ. ಇವರನ್ನು ದಕ್ಷಿಣ ಆಫ್ರಿಕಾದ ಮುಂದಿನ ಅಧ್ಯಕ್ಷೀಯ ಗಾದಿಗೆ ಸ್ವತಃ ನೆಲ್ಸನ್ ಮಂಡೇಲಾರೇ ಶಿಫಾರಸ್ಸು ಮಾಡಿದ್ದರು. ಸಿರಿಲ್ ರಮಫೋಸಾ ಕೂಡ ಗಾಂಧಿವಾದಿಗಳಾಗಿದ್ದಾರೆ. ಹೀಗಾಗಿ ಭಾರತ ಸರ್ಕಾರ ಸಿರಿಲ್ ಅವರಿಗೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಯ್ಕೆಮಾಡಿತ್ತು.

    ಇದಕ್ಕೂ ಮುನ್ನ ಭಾರತ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಗಣರಾಜ್ಯೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿತ್ತು. ಆದರೆ ಟ್ರಂಪ್ ರವರ ಬಿಡುವಿನ ಸಮಯ ಸಿಗದ ಕಾರಣ, ಶ್ವೇತಭವನದ ಅಧಿಕಾರಿಗಳು ಭಾರತದ ಮನವಿಯನ್ನು ತಿರಸ್ಕರಿಸಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಸಾರ್ಕ್ ಶೃಂಗ ಸಭೆಗೆ ಪ್ರಧಾನಿ ಮೋದಿಗೆ ಪಾಕ್ ಆಹ್ವಾನ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆಯುವ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಸ್ಥೆ(ಸಾರ್ಕ್)ಯ 19ನೇ ಶೃಂಗ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ಹೇಳಿದೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಾಕ್ ವಿದೇಶಾಂಗ ವಕ್ತಾರ ಡಾ. ಮೊಹಮ್ಮದ್ ಫೈಸಲ್, ಸಾರ್ಕ್ ಶೃಂಗಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು. ಅಲ್ಲದೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಮೊದಲ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಮಾತುಕತೆಯ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ಪಾಕ್ ಎರಡು ಹೆಜ್ಜೆ ಮುಂದಿಡುತ್ತದೆ ಎನ್ನುವ ವಿಚಾರವನ್ನೂ ಸಹ ಪ್ರಸ್ತಾಪಿಸಿದರು.

    ಸಾರ್ಕ್ ಶೃಂಗ ಸಭೆ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತವೆ. 2014ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಪಾಲ್ಗೊಂಡಿದ್ದರು. ಆದರೆ 2016ರಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿದ್ದ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರಲಿಲ್ಲ. ಏಕೆಂದರೆ 2016ರ ಸೆಪ್ಟೆಂಬರ್ 18 ರಂದು ಪಾಕ್ ಉಗ್ರಗಾಮಿಗಳು ಜಮ್ಮು ಕಾಶ್ಮೀರದ ಉರಿ ಪ್ರದೇಶದಲ್ಲಿನ ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ, 19 ಯೋಧರನ್ನು ಬಲಿ ಪಡೆದುಕೊಂಡಿದ್ದರು. ಹೀಗಾಗಿ ದಾಳಿಯನ್ನು ಖಂಡಿಸಿ ಭಾರತ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ತಿಳಿಸಿತ್ತು.

    ಉಗ್ರ ದಾಳಿಯಿಂದಾಗಿ ಭಾರತ ಶೃಂಗ ಸಭೆಗೆ ಹಿಂದೆ ಸರಿದ ಬೆನ್ನಲ್ಲೇ, ಸಾರ್ಕ್ ಸದಸ್ಯ ರಾಷ್ಟ್ರಗಳಾದ ಬಾಂಗ್ಲಾದೇಶ, ಭೂತಾನ್ ಹಾಗೂ ಅಪ್ಘಾನಿಸ್ತಾನ ದೇಶಗಳು ಕೂಡ ಸಭೆಗೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಪಾಕಿಸ್ತಾನ ಅನಿವಾರ್ಯವಾಗಿ ಶೃಂಗಸಭೆಯನ್ನು ಮುಂದೂಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಪಾಕ್ ವಿದೇಶಾಂಗ ಇಲಾಖೆ, ಶೃಂಗಸಭೆಯನ್ನು ಮುಂದೂಡಿದ್ದರೂ ಭವಿಷ್ಯದಲ್ಲಿ ಮತ್ತೆ ಸಭೆಯ ಆತಿಥ್ಯವನ್ನು ನಾವೇ ವಹಿಸುತ್ತೇವೆ ಎಂದು ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಗೆ ಆಹ್ವಾನ?

    ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಗೆ ಆಹ್ವಾನ?

    ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಾ (ಆರ್‌ಎಸ್‌ಎಸ್‌) ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ನೇತೃತ್ವದ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಆಹ್ವಾನ ನೀಡಲು ಸಿದ್ಧತೆ ನಡೆಸುತ್ತಿದೆ.

    ಹೌದು, ಸೆಪ್ಟಂಬರ್ ನ 17 ರಿಂದ 19 ರವರೆಗೆ ಆರ್‌ಎಸ್‌ಎಸ್‌ `ಭಾರತದ ಭವಿಷ್ಯ’ ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ನೇತೃತ್ವವನ್ನು ಮೋಹನ್ ಭಾಗವತ್‍ರವರು ವಹಿಸಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘವನ್ನು ತೀಕ್ಷ್ಣವಾಗಿ ಟೀಕಿಸುವ ಕಾಂಗ್ರೆಸ್ಸಿನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ಸಿದ್ದತೆ ನಡೆಸಿರುವುದಾಗಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್‍ರವರು ವಿವಿಧ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದು, ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಲಿವೆ ಎನ್ನುವ ಮಾಹಿತಿ ಲಭಿಸಿದೆ. ಕಾರ್ಯಕ್ರಮಕ್ಕೆ ಸಿಪಿಎಂ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ಎಡರಂಗದ ಪ್ರಮುಖ ನಾಯಕರನ್ನು ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಆರ್‌ಎಸ್‌ಎಸ್‌ನ ಪ್ರಮುಖ ಪ್ರಚಾರಕರಾದ ಅರುಣ್ ಕುಮಾರ್ ರವರು, ದೆಹಲಿಯ ವಿಜ್ಞಾನ ಭವನದಲ್ಲಿ ಸೆಪ್ಟಂಬರ್ 17 ರಿಂದ 19 ರವರೆಗೆ ಮೂರು ದಿನಗಳವರೆಗೆ ಮೋಹನ್ ಭಾಗವತ್‍ರವರ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಿನ್ನ ದೃಷ್ಟಿಕೋನ ಹೊಂದಿರುವ ನಾಯಕರುಗಳಿಗೆ ಆಹ್ವಾನ ನೀಡಬೇಕೆಂದು ನಿರ್ಧಾರ ಮಾಡಿದ್ದೇವೆ. ಆದರೆ ಇದುವರೆಗೂ ಯಾವೆಲ್ಲಾ ನಾಯಕರುಗಳಿಗೆ ಆಹ್ವಾನ ನೀಡಬೇಕೆಂಬುದು ಅಂತಿಮವಾಗಿಲ್ಲವೆಂದು ತಿಳಿಸಿದ್ದಾರೆ.

    ಲಂಡನ್ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು, ಲಂಡನ್ನಿನ ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್ ಆಫ್ ಸ್ಟ್ರಾಟೆಜಿಕ್ ಸ್ಟಡೀಸ್ ಕಾಲೇಜಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.  ಅರಬ್ ರಾಷ್ಟ್ರಗಳಲ್ಲಿರುವ ಮುಸ್ಲಿಂ ಬ್ರದರ್ ಹುಡ್ ರೀತಿಯಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಎರಡು ಸಂಘಟನೆಗಳ ಕಲ್ಪನೆಗಳು ಒಂದೇ ಆಗಿದೆ. ಇದು ಭಾರತದಲ್ಲಿನ ಸ್ವರೂಪವನ್ನೇ ಬದಲಿಸುವ ಯತ್ನ ಮಾಡುತ್ತಿದೆ ಎಂದು ಹೇಳುವ ಮೂಲಕ ಆರ್‌ಎಸ್‌ಎಸ್‌ ನಾಯಕರುಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

    ಇದೀಗ ಆರ್‌ಎಸ್‌ಎಸ್‌ ತನ್ನ ಉಪನ್ಯಾಸ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಡೊನಾಲ್ಡ್ ಟ್ರಂಪ್ ಮುಖ್ಯ ಅತಿಥಿ?

    2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಡೊನಾಲ್ಡ್ ಟ್ರಂಪ್ ಮುಖ್ಯ ಅತಿಥಿ?

    ನವದೆಹಲಿ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತ ಸರ್ಕಾರ ಆಹ್ವಾನ ನೀಡಿದೆ ಎಂದು ತಿಳಿದು ಬಂದಿದೆ.

    ಈ ಸಂಬಂಧ ಕಳೆದ ಏಪ್ರಿಲ್ ನಲ್ಲೇ ಭಾರತ ಅಮೆರಿಕ ಅಧ್ಯಕ್ಷರ ಶ್ವೇತಭವನಕ್ಕೆ ಆಹ್ವಾನವನ್ನು ಕಳುಹಿಸಿದೆ. ಇದಕ್ಕೆ ಶ್ವೇತಭವನದ ಆಡಳಿತ ಮಂಡಳಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ಭಾರತದ ಆಹ್ವಾನವನ್ನು ಒಪ್ಪಿಕೊಂಡರೆ ಬರಾಕ್ ಒಬಾಮ ನಂತರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿರುವ ಎರಡನೆಯ ಅಮೆರಿಕದ ಅಧ್ಯಕ್ಷ ಎಂಬ ಗೌರವಕ್ಕೆ ಟ್ರಂಪ್ ಪಾತ್ರರಾಗಲಿದ್ದಾರೆ. 2015ರಲ್ಲಿ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

    ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕ ರಾಯಭಾರಿಯಾದ ನಿಕ್ಕಿ ಹ್ಯಾಲೆ ಇರಾನ್ ವಿರುದ್ಧದ ಹೋರಾಟದಲ್ಲಿ ಸಹಕರಿಸುವಂತೆ ಭಾರತವನ್ನು ಕೇಳಿಕೊಂಡಿತ್ತು. ಅಲ್ಲದೇ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವೆ ಇರುವ ಬಿಕ್ಕಟ್ಟಿನಿಂದಾಗಿ, ಇರಾನ್ ನಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲಗಳನ್ನು ನಿಲ್ಲಿಸುವಂತೆ ತಿಳಿಸಿದ್ದರು.

    ಇದಲ್ಲದೆ ಕೆಲ ದಿನಗಳ ಹಿಂದೆ ಭಾರತದ ವಸ್ತುಗಳ ಮೇಲೆ ಅಮೆರಿಕ ಅಮದು ಸುಂಕವನ್ನು ಹೆಚ್ಚಿಸಿದ್ದಕ್ಕೆ ಭಾರತವೂ ಅಮೆರಿಕದ ಉತ್ಪನ್ನಗಳ ಮೇಲೆ ಆಮದು ಸುಂಕವನ್ನು ಹೆಚ್ಚಿಸಿತ್ತು. ಎರಡು ದೇಶಗಳ ನಡುವೆ ವ್ಯಾಪಾರ ವಿಚಾರದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಭಾರತ ಡೊನಾಲ್ಡ್ ಟ್ರಂಪ್ ಅವರನ್ನು ಗಣರಾಜ್ಯೋತ್ಸವ ಪರೇಡ್ ಗೆ ಆಹ್ವಾನಿಸಿರುವುದು ಕುತೂಹಲ ಕೆರಳಿಸಿದೆ.