Tag: IPL

  • ಆರ್‌ಸಿಬಿ ಸೇಲ್‌ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?

    ಆರ್‌ಸಿಬಿ ಸೇಲ್‌ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಮಾರಾಟವಾಗುತ್ತಾ? ಕೋವಿಡ್‌ ಲಸಿಕೆ (Covid Vaccine) ಕೋವಿಶೀಲ್ಡ್‌ ತಯಾರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ (Adar Poonawalla) ಖರೀದಿಸುತ್ತಾರಾ ಈ ಪ್ರಶ್ನೆ ಈಗ ಎದ್ದಿದೆ.

    ಹೌದು. ಆರ್‌ಸಿಬಿ ಷೇರನ್ನು ಮಾರಾಟ ಮಾಡಲು ಡಿಯಾಜಿಯೊ ಮುಂದಾಗಿದೆ ಎಂದು ಐಪಿಎಲ್‌ ಮಾಜಿ ಮುಖ್ಯಸ್ಥ ಲಲಿತ್‌ ಮೋದಿ ಸಾಮಾಜಿಕ ಜಾಲತಾಣದಲ್ಲಿ ಬಾಂಬ್‌ ಸಿಡಿಸಿದ್ದಾರೆ. ಎಕ್ಸ್‌ನಲ್ಲಿ ಸ್ಫೋಟಕ ವಿಚಾರ ಬಹಿರಂಗ ಪಡಿಸಿದ ಬೆನ್ನಲ್ಲೇ ಅದಾರ್ ಪೂನವಾಲಾ ಆರ್‌ಸಿಬಿ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

    ಮೋದಿ ಹೇಳಿದ್ದೇನು?
    ಆರ್‌ಸಿಬಿ ಫ್ರಾಂಚೈಸಿ ಮಾರಾಟದ ಬಗ್ಗೆ ಇಲ್ಲಿ ಸಾಕಷ್ಟು ವದಂತಿಗಳಿತ್ತು. ನಂತರ ಈ ವದಂತಿಗಳನ್ನು ನಿರಾಕರಿಸಲಾಗಿತ್ತು. ಆದರೆ ಮಾಲೀಕರು ಅಂತಿಮವಾಗಿ ಮಾರಾಟ ಮಾಡಲು ಮುಂದಾಗಿದ್ದಾರೆ. ಕಳೆದ ಬಾರಿ ಚಾಂಪಿಯನ್‌ ಆಗಿರುವ ತಂಡಕ್ಕೆ ಅತಿ ಹೆಚ್ಚು ಅಭಿಮಾನಿಗಳಿದ್ದಾರೆ ಮತ್ತು ಅತ್ಯುತ್ತಮ ಮ್ಯಾನೆಜ್ಮೆಂಟ್‌ ತಂಡವಿದೆ. ಫ್ರಾಂಚೈಸಿಗಳ ಪೈಕಿ ಅತ್ಯುತ್ತಮ ತಂಡ ಆಗಿರುವ ಕಾರಣ ದೊಡ್ಡ ಜಾಗತಿಕ ಹೂಡಿಕೆದಾರರು ಭಾರತದ ಹೂಡಿಕೆ ತಂತ್ರವಾಗಿ ಹೂಡಿಕೆ ಮಾಡಲು ಮುಂದಾಗಿವೆ. ಇದಕ್ಕಿಂತ ಉತ್ತಮ ಹೂಡಿಕೆ ಅವಕಾಶ ಇನ್ನೊಂದಿಲ್ಲ ಎಂದು ನಾನು ಭಾವಿಸುತ್ತೇನೆ. ಮಾರಾಟದ ಮೊತ್ತ ದಾಖಲೆಯಾಗಲಿದೆ. ಇದು ಐಪಿಎಲ್ ವೇಗವಾಗಿ ಬೆಳೆಯುತ್ತಿರುವ ಗ್ಲೋಬಲ್ ಸ್ಪೋರ್ಟಿಂಗ್ ಲೀಗ್ ಮಾತ್ರವಲ್ಲದೆ ಅತ್ಯಂತ ಮೌಲ್ಯಯುತವಾಗಿದೆ ಎಂದು ತೋರಿಸುತ್ತದೆ. ಎಲ್ಲರಿಗೂ ಶುಭವಾಗಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

     

     

    ಲಲಿತ್‌ ಮೋದಿ ಬಾಂಬ್‌ ಸಿಡಿಸಿದ ಬೆನ್ನಲ್ಲೇ ಆರ್‌ಸಿಬಿ ಖರೀದಿಸಲು ಅದರ್ ಪೂನವಾಲಾ ಮುಂದಾಗಿದ್ದು ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿದೆ. ಡಿಯಾಜಿಯೊ ಸದ್ಯ ಸಂಭಾವ್ಯ ಸಲಹೆಗಾರರೊಂದಿಗೆ ಚರ್ಚೆ ನಡೆಸಿದೆ ಮತ್ತು 2 ಬಿಲಿಯನ್ ಡಾಲರ್‌ ಮೌಲ್ಯಮಾಪನವನ್ನು ಬಯಸುತ್ತಿದೆ ಮತ್ತು ಹೂಡಿಕೆದಾರರಿಂದ ಒಂದು ಬಾರಿಯ ಪಾವತಿಯನ್ನು ಬಯಸುತ್ತಿದೆ ಎನ್ನಲಾಗುತ್ತಿದೆ.

    ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ ಬಳಿಕ ಆರ್‌ಸಿಬಿ ಫ್ರಾಂಚೈಸಿಯಲ್ಲಿರುವ ತನ್ನ ಪಾಲನ್ನು ಮಾರಾಟ ಮಾಡಲು ಡಿಯಾಜಿಯೊ (Diageo) ಮುಂದಾಗಿದೆ ಎಂದು ವರದಿಯಾಗಿತ್ತು. ವರದಿ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆಗೆ ಡಿಯಾಜಿಯೊದ ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಸಂಭಾವ್ಯ ಪಾಲು ಮಾರಾಟಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಊಹಾತ್ಮಕ ಸ್ವರೂಪದ್ದಾಗಿವೆ. ಅಂತಹ ಯಾವುದೇ ಚರ್ಚೆಗಳನ್ನು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ಡಿಯಾಜಿಯೊ ತೆಕ್ಕೆಗೆ ಆರ್‌ಸಿಬಿ ಹೋಗಿದ್ದು ಹೇಗೆ?
    2008 ರಲ್ಲಿ ವಿಜಯ್‌ ಮಲ್ಯ ಒಡೆತನದ ಯುನೈಟೆಡ್‌ ಸ್ಪೀರಿಟ್ಸ್‌ ಆರ್‌ಸಿಬಿ ತಂಡವನ್ನು 111.6 ಮಿಲಿಯನ್‌ ಡಾಲರ್‌(ಆಗಿನ 700-800 ಕೋಟಿ ರೂ.) ನೀಡಿ ಖರೀದಿಸಿತ್ತು. 2012ರಲ್ಲಿ ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕಾರ್ಯಾಚರಣೆ ನಿಲ್ಲಿಸಿತು. ಉದ್ಯಮದಲ್ಲಿ ನಷ್ಟವಾದ ಕಾರಣ ಮಲ್ಯ ಅವರ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯನ್ನು ಡಿಯಾಜಿಯೊ ಸ್ವಾಧೀನಪಡಿಸಿಕೊಂಡಿತು. ಆರ್‌ಸಿಬಿಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಇದ್ದ ಕಾರಣ ಅದರ ಮಾಲೀಕತ್ವ ಡಿಯಾಜಿಯೊಗೆ (Diageo) ಹೋಗಿತ್ತು.

  • ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ, ಕುಂಬ್ಳೆ ಮುಂದೆ ಅತ್ತಿದ್ದೆ: ಕ್ರಿಸ್‌ ಗೇಲ್‌

    ಮುಂಬೈ: ಪಂಜಾಬ್‌ ಕಿಂಗ್ಸ್‌ (Punjab Kings) ತಂಡದಲ್ಲಿ ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನನ್ನು ಸಣ್ಣ ಮಕ್ಕಳಂತೆ ನಡೆಸಿಕೊಂಡಿದ್ದರು ಎಂದು ಎಂದು ಮಾಜಿ ವಿಂಡೀಸ್‌ ಆಟಗಾರ ಕ್ರಿಸ್‌ ಗೇಲ್‌ (Chris Gayle) ಹೇಳಿದ್ದಾರೆ.

    ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಗೇಲ್‌, ಗೌರವದಿಂದ ನನ್ನನ್ನು ತಂಡ ನಡೆಸಿಕೊಂಡಿರಲಿಲ್ಲ. ಇದರಿಂದ ನಾನು ಖಿನ್ನತೆಗೆ ಒಳಗಾಗುವ ಸ್ಥಿತಿ ತಲುಪಿದ್ದೆ ಎಂದು ತಿಳಿಸಿದರು.

    ಪಂಜಾಬ್ ಕಿಂಗ್ಸ್ ತಂಡದಲ್ಲಿ ನನ್ನ ಐಪಿಎಲ್ ಜೀವನ ಬಹಳ ಬೇಗ ಕೊನೆಯಾಯಿತು. ನಾನು ತಂಡಕ್ಕೆ ಕೊಡುಗೆ ನೀಡಿದ್ದರೂ ಹಿರಿಯ ಆಟಗಾರನಾಗಿ ಕೊಡಬೇಕಾದ ಗೌರವ ಸಿಗಲಿಲ್ಲ. ಅನಿಲ್‌ ಕುಂಬ್ಳೆ (Anil Kumble) ಅವರ ಜೊತೆ ಮಾತನಾಡುವಾಗ ನಾನು ಅತ್ತಿದ್ದೆ. ತಂಡ ನನ್ನನ್ನು ನಡೆಸಿಕೊಂಡ ರೀತಿಯಿಂದ ನಿರಾಸೆಯಾಗಿತ್ತು ಎಂದು ದೂರಿದರು. ಇದನ್ನೂ ಓದಿ: BCCI ಬ್ಯಾಂಕ್ ಬ್ಯಾಲೆನ್ಸ್‌ 20 ಸಾವಿರ ಕೋಟಿಗೂ ಅಧಿಕ 5 ವರ್ಷದಲ್ಲಿ 14,627 ಕೋಟಿ ಆದಾಯ ಹೆಚ್ಚಳ

    ಕೆಎಲ್‌ ರಾಹುಲ್‌ ಅವರು ಕರೆ ಮಾಡಿ ಕ್ರಿಸ್‌ ಇರು ಮುಂದಿನ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು. ಇದಕ್ಕೆ ನಾನು, ನಿಮಗೆ ಒಳ್ಳೆಯದಾಗಿ ಎಂದು ಹೇಳಿ ಬ್ಯಾಗ್‌ ಹಿಡಿದು ಹೊರಟೆ ಎಂದು ಹಳೆಯ ನೆನಪನ್ನು ಬಿಚ್ಚಿಟ್ಟರು.

    ಕ್ರಿಸ್ ಗೇಲ್ ಅವರು ಐಪಿಎಲ್‌ನಲ್ಲಿ 2018ರಿಂದ 2021ರವರೆಗೆ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆರಂಭಿಕ ಆಟಗಾರರಾಗಿ 41 ಪಂದ್ಯಗಳಲ್ಲಿ 40.75 ಸರಾಸರಿಯಲ್ಲಿ 1,304 ರನ್ ಹೊಡೆದಿದ್ದರು. ಇದರಲ್ಲಿ 1 ಶತಕ ಮತ್ತು ಹನ್ನೊಂದು ಅರ್ಧ ಶತಕಗಳಿದ್ದವು. ಅವರ ಸ್ಟ್ರೈಕ್ ರೇಟ್ 148.65 ಆಗಿದ್ದರೂ ತಂಡದ ಮ್ಯಾನೇಜ್ ಮೆಂಟ್ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದಿದ್ದಾರೆ.

    ಗೇಲ್‌ ಐಪಿಎಲ್‌ನಲ್ಲಿ ಮೂರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಆರಂಭದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌(2009-10), ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (2011-2027), ಬಳಿಕ ಪಂಜಾಬ್‌ ಕಿಂಗ್ಸ್‌ (2018-2021) ತಂಡದ ಪರ ಆಡಿದ್ದರು.

  • ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

    ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್‌ ದರ

    – ಆರ್‌ಸಿಬಿಯ ಬೆಂಗಳೂರು ಪಂದ್ಯಗಳಿಗೆ ಅತಿ ಹೆಚ್ಚು ದರ

    ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(GST) ಸ್ಲ್ಯಾಬ್‌ ಪರಿಷ್ಕರಣೆ ಬೆನ್ನಲ್ಲೇ 2026ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳ (IPL Match) ಟಿಕೆಟ್‌ ದರ ದುಬಾರಿಯಾಗಲಿದೆ.

    ಇಲ್ಲಿಯವರೆಗೆ ಐಪಿಎಲ್ ಟಿಕೆಟ್‌ಗಳು 28% ರಷ್ಟು ತೆರಿಗೆ ಸ್ಲ್ಯಾಬ್ ಅಡಿಯಲ್ಲಿದ್ದವು. ಆದರೆ ಪರಿಷ್ಕರಣೆಯಾದ ಬಳಿಕ ಇವು 40% ರ ವಿಭಾಗದಲ್ಲಿ ಬರುವುದರಿಂದ ಟಿಕೆಟ್‌ ದರ (Ticket Price) ಏರಿಕೆಯಾಗಲಿದೆ.

    ತಂಬಾಕು ಉತ್ಪನ್ನಗಳು ಹಾಗೂ ಕ್ಯಾಸಿನೊ, ರೇಸ್ ಕ್ಲಬ್‌ಗಳು ಮತ್ತು ಇತರ ಐಷಾರಾಮಿ ಖರ್ಚುಗಳಿಗೆ 40% ತೆರಿಗೆ ಹಾಕಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬೆಂಗಳೂರಿನ ಪಂದ್ಯದ ಟಿಕೆಟ್‌ ದರ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

    ಎಷ್ಟು ಏರಿಕೆಯಾಗಬಹುದು?
    ಈ ಸೀಸನ್ ವರೆಗೆ 500 ರೂ. ಮೂಲ ಬೆಲೆ ಹೊಂದಿದ್ದ ಟಿಕೆಟ್‌ 28% ಜಿಎಸ್‌ಟಿ ಹಾಕಲಾಗುತ್ತಿತ್ತು. ಹೀಗಾಗಿ ಒಂದು ಟಿಕೆಟ್‌ ದರ 640 ರೂ. ಆಗುತ್ತಿತ್ತು. 2026 ರ ಆವೃತ್ತಿಯಲ್ಲಿ ಸರ್ಕಾರವು 40% ರಷ್ಟು ಜಿಎಸ್‌ಟಿ ವಿಧಿಸಿದ ನಂತರ ಅದೇ ಟಿಕೆಟ್‌ ದರ 700 ರೂ.ಗೆ ಏರಿಕೆಯಾಗಲಿದೆ.  ಇದನ್ನೂ ಓದಿ: ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ ಸೆ.22 ರಿಂದ ಜಾರಿ| ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ

    ಈ ವರ್ಷ ಆರ್‌ಸಿಬಿಯ ಬೆಂಗಳೂರು ಪಂದ್ಯದ ದುಬಾರಿ ಟಿಕೆಟ್‌ ಬೆಲೆ 42,350 ರೂ. ಇತ್ತು. ಈ ದರಕ್ಕೆ 40% ಜಿಎಸ್‌ಟಿ ಹಾಕಿದರೆ ಸುಮಾರು 4 ಸಾವಿರ ರೂ. ಏರಿಕೆ ಕಾಣಬಹುದು. ಚೆಪಾಕ್‌ನಲ್ಲಿ ಅತ್ಯಂತ ದುಬಾರಿ ಟಿಕೆಟ್ (7,000 ರೂ.) 7,656 ಕ್ಕೆ ಏರುವ ಸಾಧ್ಯತೆಯಿದೆ. ಆರ್‌ಸಿಬಿಯ ಬೆಂಗಳೂರು ಪಂದ್ಯದ ಕಡಿಮೆ ಬೆಲೆಯ ಟಿಕೆಟ್‌ಗೆ 2,300 ರೂ. ಇತ್ತು. ಇನ್ನು ಮುಂದೆ ಈ ದರ 2,515 ರೂ. ಆಗಬಹುದು.

    ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಚೆನ್ನೈ ತಂಡಕ್ಕೆ ಭಾರೀ ಅಭಿಮಾನಿಗಳಿದ್ದಾರೆ. ಬೇರೆ ತಂಡಗಳಿಗೆ ಹೋಲಿಸಿದರೆ ಈ ಎರಡು ತಂಡಗಳ ಟಿಕೆಟ್‌ ದರ ಜಾಸ್ತಿ ಇರುತ್ತದೆ. ಮನರಂಜನಾ ತೆರಿಗೆ ವಿಧಿಸುವುದರಿಂದ ಟಿಕೆಟ್‌ ದರ ಮತ್ತಷ್ಟು ಏರಿಕೆಯಾಗುತ್ತದೆ.  ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿ ಸೇರಿದಂತೆ ಈ ಹಿಂದೆ ಹಲವು ಸ್ಟಾರ್‌ ಪ್ಲೇಯರ್‌ಗಳು ಹಿಂದೆ ಆಡಿದ್ದರಿಂದ ಬೆಲೆ ಜಾಸ್ತಿಯಿದೆ. ಆದರೆ ಬೆಂಗಳೂರು ಹೊರತುಪಡಿಸಿ ಬೇರೆ ಕಡೆ ನಡೆಯುವ ಆರ್‌ಸಿಬಿ ಪಂದ್ಯದ ಟಿಕೆಟ್‌ ದರ ಕಡಿಮೆ ಇರುತ್ತದೆ.  ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ಆ್ಯಪ್ ಪ್ರಕರಣ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ಧವನ್‌ಗೆ ಇಡಿ ಸಮನ್ಸ್

    ಟಿಕೆಟ್‌ ದರಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನಲ್ಲಿ ಯಾವುದೇ ನಿಯಮಗಳು ಇಲ್ಲ. ಹೀಗಾಗಿ ಫ್ರಾಂಚೈಸಿಗಳು ಪಂದ್ಯದ ಟಿಕೆಟ್‌ ದರವನ್ನು ತಮಗೆ ಇಷ್ಟ ಬಂದಂತೆ ನಿಗದಿ ಮಾಡುತ್ತವೆ.

    ಐಪಿಎಲ್ ಮಾತ್ರವಲ್ಲ, ಪ್ರೊ ಕಬಡ್ಡಿ ಲೀಗ್ ಮತ್ತು ಇಂಡಿಯನ್ ಸೂಪರ್ ಲೀಗ್ ಕೂಡ ಟಿಕೆಟ್ ಬೆಲೆಯಲ್ಲಿ ಹೆಚ್ಚಳವಾಗಬಹುದು. 500 ರೂ. ಗಿಂತ ಹೆಚ್ಚಿಲ್ಲದ ಮಾನ್ಯತೆ ಪಡೆದ ಕ್ರೀಡಾಕೂಟಗಳು ಸೇರಿದಂತೆ ಇತರ ಕ್ರೀಡಾಕೂಟಗಳಿಗೆ ಪ್ರವೇಶಕ್ಕೆ ವಿನಾಯಿತಿ ನೀಡಲಾಗಿದೆ. ಟಿಕೆಟ್‌ ದರ 500 ರೂ.ಗಿಂತ ಜಾಸ್ತಿ ಇದ್ದರೆ ಅದಕ್ಕೆ 18% ರ ಪ್ರಮಾಣಿತ ದರದಲ್ಲಿ ತೆರಿಗೆ ವಿಧಿಸಲಾಗುತ್ತದೆ.

    ಈ ಬಾರಿ ಆರ್‌ಸಿಬಿ ಟಿಕೆಟ್‌ ದರ ಎಷ್ಟಿತ್ತು?
    ಕೆಐಎ ವೈರ್‌ ಮತ್ತು ಕೇಬಲ್‌ಗಳು ಎ ಸ್ಟ್ಯಾಂಡ್: 2,300 ರೂ.
    ಬೋಟ್ ಸಿ ಸ್ಟ್ಯಾಂಡ್ – 3,300
    ಪೂಮಾ ಬಿ ಸ್ಟ್ಯಾಂಡ್ 3,300
    ಟಿಕೆಟ್‌ ಜಿಟಿ ಅನೆಕ್ಸ್ – 4,000 ರೂ.
    ಕತಾರ್ ಏರ್‌ವೇಸ್ ಜಾವಗಲ್‌ ಶ್ರೀನಾಥ್ ಸ್ಟ್ಯಾಂಡ್ – 10,000 ರೂ.
    ಬಿರ್ಲಾ ಎಸ್ಟೇಟ್ ಬಿಎಸ್ ಚಂದ್ರಶೇಖರ್ ಸ್ಟ್ಯಾಂಡ್ – 15,000 ರೂ.

  • ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಸಂಭವಿಸಿದ ಕಾಲ್ತುಳಿತದಲ್ಲಿ (Stampede )ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ (Royal Challengers Bengaluru) ತಲಾ 25 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

    ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.

    ಇದು ಆರ್‌ಸಿಬಿ ಕೇರ್ಸ್‍ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಪೋಸ್ಟ್‍ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ.

    ಏನಿದು ದುರ್ಘಟನೆ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ (IPL) ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

  • ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ (Bengaluru Stampede) ಭಾರೀ ನೋವು ಅನುಭವಿಸಿದ್ದ ಆರ್‌ಸಿಬಿ (RCB) ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಮುಂದಾಗಿದೆ.

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಪೋಸ್ಟ್‌ ಮಾಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಒಂದು ಕಾಲದಲ್ಲಿ ಅಭಿಮಾನಿಗಳು ಹೆಚ್ಚು ಸಂಭ್ರಮದಿಂದ ಕಳೆದ ಸ್ಥಳ. ಆದರೆ ಜೂ.4ರಂದು ಸಂಭವಿಸಿದ ದುರ್ಘಟನೆಯಿಂದ ಆ ಸಂಭ್ರಮ ಮರೆಯಾಗಿದೆ. ಆ ದಿನ ನಮ್ಮ ಹೃದಯ ಚೂರಾಯಿತು. ಈ ಸಂಕಟವನ್ನು ನಾವು ಮೂರು ತಿಂಗಳ ಕಾಲ ಮೌನವಾಗಿ ಅನುಭವಿಸಿದ್ದೇವೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ – ಸಿಎಂ ಭಾವುಕ

    ಈ ದುರ್ಘಟನೆಯಿಂದ ಸಾಕಷ್ಟು ಕಲಿತಿದ್ದೇವೆ. ಇದಕ್ಕಾಗಿಯೇ ನಾವು ಅಭಿಮಾನಿಗಳ ಜೊತೆ ನಿಲ್ಲಲು ನಿರ್ಧರಿಸಿದ್ದೇವೆ. ಇದೇ ಕಾರಣಕ್ಕೆ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ನಿರ್ಧರಿಸಲಾಗಿದೆ. ಈ ಮೂಲಕ ಕರ್ನಾಟಕದ ಹೆಮ್ಮೆಯಾಗಿ ಮುಂದುವರಿಯುತ್ತೇವೆ.‌ ಈ ಬಗ್ಗೆ ಹೆಚ್ಚಿನ ವಿವರ ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ ಎಂದು ಆರ್‌ಸಿಬಿ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದೆ.

    ಏನಿದು ದುರ್ಘಟನೆ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ (IPL) ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

  • ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್‌

    ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್‌

    ಚೆನ್ನೈ: ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ (R Ashwin) ಅವರು ತಮ್ಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ.

    221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌ ಸಾಮಾಜಿಕ ಜಾಲತಾಣದಲ್ಲಿ (Social Media) ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ. ಎಲ್ಲಾ ಅದ್ಭುತ ನೆನಪುಗಳು ಮತ್ತು ಸಂಬಂಧಗಳನ್ನು ನೀಡಿದ ಎಲ್ಲಾ ಫ್ರಾಂಚೈಸಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಐಪಿಎಲ್ ಮತ್ತು ಬಿಸಿಸಿಐಗೆ (BCCI) ಕೃತಜ್ಞತೆಗಳು ಎಂದು ಹೇಳಿದ್ದರು. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ಐಪಿಎಲ್‌ನಲ್ಲಿ ಅಶ್ವಿನ್‌ ಐದು ತಂಡಗಳ ಪರ ಆಡಿದ್ದಾರೆ ಅಷ್ಟೇ ಅಲ್ಲದೇ ನಾಯಕನಾಗಿ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವನ್ನು ಮುನ್ನಡೆಸಿದ್ದಾರೆ. ತಮ್ಮ ಐಪಿಎಲ್ ವೃತ್ತಿಜೀವನದ ಅವಧಿಯಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್, ಪಂಜಾಬ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಅನ್ನು ಪ್ರತಿನಿಧಿಸಿದ್ದರು.

    ಅಶ್ವಿನ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಯಜುವೇಂದ್ರ ಚಹಲ್‌, ಭುವನೇಶ್ವರ್ ಕುಮಾರ್, ಸುನಿಲ್ ನರೈನ್ ಮತ್ತು ಪಿಯೂಷ್ ಚಾವ್ಲಾ ನಂತರ ಅಶ್ವಿನ್‌ ಇದ್ದಾರೆ.

    ಅಶ್ವಿನ್‌ ಕೊನೆಯ ಬಾರಿ ಚೆನ್ನೈ ತಂಡದ ಪರ ಆಡಿದ್ದರು. 2025 ರಲ್ಲಿ ಚೆನ್ನೈ ತಂಡ ಅಶ್ವಿನ್‌ ಅವರನ್ನು 9.75 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ 9 ಪಂದ್ಯವಾಡಿ 7 ವಿಕೆಟ್‌ ಮಾತ್ರ ಪಡೆದಿದ್ದರು.

  • Video | RCB ನಮ್ಮ ಟೀಮೇ ಅಲ್ಲ, ಅವ್ರು ಕರ್ನಾಟಕದವ್ರೇ ಅಲ್ಲ, ಕಾರ್ಯಕ್ರಮಕ್ಕೆ ಬರಲ್ಲ ಅಂದಿದ್ದೆ: ಸಿಎಂ

    Video | RCB ನಮ್ಮ ಟೀಮೇ ಅಲ್ಲ, ಅವ್ರು ಕರ್ನಾಟಕದವ್ರೇ ಅಲ್ಲ, ಕಾರ್ಯಕ್ರಮಕ್ಕೆ ಬರಲ್ಲ ಅಂದಿದ್ದೆ: ಸಿಎಂ

    ಬೆಂಗಳೂರು: ಆರ್‌ಸಿಬಿ ಜಗತ್ತಿನಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದಾಗ, ನಮ್ಮ ಕರ್ನಾಟಕದ್ದೇ ತಂಡ ಗೆದ್ದಿದೆ ಅಂದುಕೊಂಡ್ರು. ಆದ್ರೆ ನನ್ನನ್ನ ಕಾರ್ಯಕ್ರಮಕ್ಕೆ ಕರೆದಾಗ ಓ ಬಿಡಪ್ಪ, ಆರ್‌ಸಿಬಿ ನಮ್ಮ ಟೀಮೇ ಅಲ್ಲ, ಅವರು ನಮ್ಮ ಕರ್ನಾಟಕದವರೇ ಅಲ್ಲ, ನಾನು ಕಾರ್ಯಕ್ರಮಕ್ಕೆ ಬರಲ್ಲ ಅಂತ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರು. ಈ ಕುರಿತ ವಿಡಿಯೋ ಇಲ್ಲಿದೆ… 

  • ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಜೈಪುರ: ಬಾಲಕಿಯೊಬ್ಬಳ ಮೇಲೆ 2‌ ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ಗೆ (Yash Dayal) ವಿರುದ್ಧ ಪೋಕ್ಸೋ ಪ್ರಕರಣ (POCSO Case)ಲಾಗಿದೆ.

    ಹೌದು.‌ 2025ರ ಐಪಿಎಲ್‌ (IPL 2025) ಮುಕ್ತಾಯಗೊಂಡ ಕೆಲ ದಿನಗಳಿಂದ ಸ್ಟಾರ್‌ ವೇಗಿಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್‌ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ (Minor Girl Rape) ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

    Yash Dayal 2 1

    ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಹೋಟೆಲ್‌ನಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ
    ಕ್ರಿಕೆಟ್‌ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್‌ ಜೈಪುರದ ಸೀತಾಪುರ ಹೋಟೆಲ್‌ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಕೆಲ ದಿನಗಳ ಹಿಂದಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈ ನಡುವೆ ಅಲಹಾಬಾದ್‌ ಹೈಕೋರ್ಟ್‌ ದಯಾಳ್‌ ಬಂಧನಕ್ಕೆ ತಡೆ ನೀಡಿತ್ತು. ಇದಾದ ಕೆಲ ದಿನಗಳಲ್ಲೇ ಪೋಕ್ಸೋ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

  • BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ!

    BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ!

    -2023-24ರ ಐಪಿಎಲ್‌ನಿಂದಲೇ 9,742 ಕೋಟಿ ರೂ. ಆದಾಯ
    -ವರ್ಷಕ್ಕೆ 1,000 ಕೋಟಿ ಬಡ್ಡಿ!

    ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಳಿ ಬರೋಬ್ಬರಿ 30 ಸಾವಿರ ಕೋಟಿ ರೂ. ನಿಧಿ ಇದೆ. ಈ ನಿಧಿಯಿಂದಲೇ ಬಿಸಿಸಿಐ ಪ್ರತಿ ವರ್ಷ 1000 ಕೋಟಿ ರೂ. ಬಡ್ಡಿಗಳಿಸುತ್ತಿದೆ ಎಂಬ ಅಚ್ಚರಿಯ ಸಂಗತಿಯೊಂದು ಹೊರಬಿದ್ದಿದೆ.

    ಈ ಬಗ್ಗೆ ರೆಡಿಪ್ಯೂಷನ್ ಸಂಸ್ಥೆ ವರದಿ ಮಾಡಿದ್ದು, ಬಿಸಿಸಿಐ 2023-24ರ ಆರ್ಥಿಕ ವರ್ಷದಲ್ಲಿ 9,742 ಕೋಟಿ ರೂ. ಆದಾಯಗಳಿಸಿದೆ ಎಂದು ಉಲ್ಲೇಖಿಸಿದೆ. 2008ರಲ್ಲಿ ಆರಂಭಗೊಂಡಿದ್ದ ಐಪಿಎಲ್ ಈಗ ಬಿಸಿಸಿಐ ಪಾಲಿನ ಚಿನ್ನದ ಮೊಟ್ಟೆ ಇಡುವ ಕೋಳಿ ಎನಿಸಿಕೊಂಡಿದ್ದು, ಬಿಸಿಸಿಐ ತನ್ನ ಹೆಚ್ಚಿನ ಆದಾಯವನ್ನು ಇಂಡಿಯನ್ ಪ್ರೀಮಿಯರ್ ಲೀಗ್(IPL) ಮೂಲಕವೇ ಗಳಿಸುತ್ತದೆ. ಲೀಗ್‌ನಿಂದ 2023-24ರಲ್ಲಿ ಮಂಡಳಿಗೆ 5,761 ಕೋಟಿ ರೂ. ಆದಾಯ ಲಭಿಸಿದೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ಈ ನಿಧಿ ಬಿಸಿಸಿಐನ ಆದಾಯದ ಶೇ.59ರಷ್ಟಿದೆ. ಜೊತೆಗೆ ಐಸಿಸಿಯಿಂದಲೂ ಬಹುಪಾಲು ಮೊತ್ತ ಬಿಸಿಸಿಐಗೆ ಲಭಿಸುತ್ತದೆ. ಮಹಿಳಾ ಪ್ರೀಮಿಯರ್ ಲೀಗ್ (WPL)ನಿಂದ 378 ಕೋಟಿ ರೂ. ಆದಾಯ ಲಭಿಸಿದ್ದು, ಭಾರತದ ಪುರುಷರ ಕ್ರಿಕೆಟ್ ತಂಡದ ಸರಣಿಗಳ ಮೂಲಕ 2,350 ಕೋಟಿ ರೂ.ಗೂ ಹೆಚ್ಚು ಲಾಭವಾಗಿದೆ.

    ಬಿಸಿಸಿಐಗೆ ಆದಾಯ ಹೇಗೆ ಬರುತ್ತೆ?
    ಬಿಸಿಸಿಐ ತನ್ನ ಬಹುಪಾಲು ಆದಾಯವನ್ನು ಐಪಿಎಲ್ ಮೂಲಕವೇ ಗಳಿಸುತ್ತದೆ. ಐಪಿಎಲ್ ತಂಡಗಳ ಮಾರಾಟ, ಮಾಧ್ಯಮ ಹಕ್ಕು, ಜಾಹೀರಾತುಗಳಿಂದ ಬಹುಕೋಟಿ ಆದಾಯ ಬಿಸಿಸಿಐಗೆ ಬರುತ್ತದೆ. ಉಳಿದಂತೆ ಕಿಟ್ ಪ್ರಾಯೋಜಕತ್ವ, ಶೀರ್ಷಿಕೆ ಪ್ರಾಯೋಜಕತ್ವ, ಭಾರತ ತಂಡದ ಸರಣಿ ಆಯೋಜನೆ, ದೇಸಿ ಟೂರ್ನಿ, ಡಬ್ಲ್ಯುಪಿಎಲ್ ಹಾಗೂ ಇತರ ಮೂಲಗಳಿಂದಲೂ ಮಂಡಳಿಗೆ ಹಣ ಹರಿದುಬರುತ್ತಿದೆ.

    ಐಸಿಸಿಗಿಂತ ಬಿಸಿಸಿಐ ಆದಾಯವೇ ಹೆಚ್ಚು:
    ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೂಡಾ ಭಾರತೀಯ ಕ್ರಿಕೆಟ್ ಮಂಡಳಿಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ವಿಶೇಷವೆಂದರೆ ಐಸಿಸಿಗಿಂತ ಬಿಸಿಸಿಐ ವಾರ್ಷಿಕವಾಗಿ ಹೆಚ್ಚಿನ ಆದಾಯ ಗಳಿಸುತ್ತದೆ. ಜಾಗತಿಕ ಕ್ರಿಕೆಟ್‌ನ ಆರ್ಥಿಕತೆಯಲ್ಲಿ ಭಾರತ ಕೊಡುಗೆ ಶೇ.70ರಿಂದ 80ರಷ್ಟಿದೆ. ಅಂದರೆ ವಾರ್ಷಿಕವಾಗಿ 5,000 ಕೋಟಿ ರೂ.ಗೂ ಹೆಚ್ಚಿನ ಹಣ ಸಂಪಾದಿಸುವ ಐಸಿಸಿ, 4,000 ಕೋಟಿ ರೂ.ಯಷ್ಟು ಮೊತ್ತವನ್ನು ಬಿಸಿಸಿಐ ಮೂಲಕವೇ ಗಳಿಸುತ್ತದೆ. ಇದಕ್ಕೆ ಪ್ರತಿಯಾಗಿ ವಾರ್ಷಿಕವಾಗಿ ಐಸಿಸಿ ತನ್ನ ಸದಸ್ಯ ರಾಷ್ಟ್ರಗಳಿಗೆ ಹಂಚುವ ಆದಾಯದಲ್ಲಿ ಬಿಸಿಸಿಐ ಶೇ.38.5ರಷ್ಟು ಪಾಲು ಪಡೆಯುತ್ತದೆ.ಇದನ್ನೂ ಓದಿ: ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

  • ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ

    ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣದ (Chinnaswamy Stampede) ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

    ಬೆಂಗಳೂರು (Bengaluru) ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಕಾಲ್ತುಳಿತಕ್ಕೆ ಆರ್‌ಸಿಬಿಯೇ (RCB) ಕಾರಣ ಎಂದು ಉಲ್ಲೇಖಿಸಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್ ಪೊಲೀಸರ ಅನುಮತಿ ಪಡೆಯದೇ ಫ್ರೀ ಪಾಸ್‌ ಎಂದು ಘೋಷಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಘಟನೆಗೆ ನಾಲ್ವರು ಕಾರಣರಾಗಿದ್ದಾರೆ. ನಾಲ್ವರಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್ ನಿರ್ಧಾರವೇ ದೊಡ್ಡ ತಪ್ಪು. ಮೊದಲನೇ ಸ್ಥಾನದಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್, ಎರಡನೇ ಸ್ಥಾನದಲ್ಲಿ ಡಿಎನ್‌ಎ , ಮೂರನೇ ಸ್ಥಾನದಲ್ಲಿ ಕೆಎಸ್‌ಸಿಎ ಹಾಗೂ ನಾಲ್ಕನೇ ಸ್ಥಾನದಲ್ಲಿ ಪೊಲೀಸರದ್ದು ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ