Tag: IPL 2022 Mega Auction

  • ನಾನು ಯಾವಾಗಲೂ ಮುಂಬೈ ಇಂಡಿಯನ್ಸ್‌ಗಾಗಿ ಆಡಲು ಬಯಸುತ್ತೇನೆ: ಜೋಫ್ರಾ ಆರ್ಚರ್

    ನಾನು ಯಾವಾಗಲೂ ಮುಂಬೈ ಇಂಡಿಯನ್ಸ್‌ಗಾಗಿ ಆಡಲು ಬಯಸುತ್ತೇನೆ: ಜೋಫ್ರಾ ಆರ್ಚರ್

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಮುಂಬೈ ಇಂಡಿಯನ್ಸ್ ಅನ್ನು ಪ್ರತಿನಿಧಿಸಲು ನಾನು ಯಾವಾಗಲೂ ಬಯಸುತ್ತೇನೆ. ಅಂತಿಮವಾಗಿ ಮುಂಬೈ ತಂಡದ ಪರ ಆಡಲು ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನ 2ನೇ ದಿನದಂದು ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ 8 ಕೋಟಿ ರೂ.ಗೆ ಖರೀದಿಸಿದೆ. ಆರ್ಚರ್ ಐಪಿಎಲ್ 2022 ಸೀಸನ್‍ಗೆ ಲಭ್ಯವಿರುವುದಿಲ್ಲ. ಆದರೆ ಅವರು ಮುಂದಿನ 2023ರ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: RCB ತಂಡದಲ್ಲಿ ಇಬ್ಬರು ಕನ್ನಡಿಗರು – ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

    ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಮುಂಬೈ ತಂಡವು ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುವ ಫ್ರಾಂಚೈಸಿ ಆಗಿದೆ. ನಾನು ಯಾವಾಗಲೂ ಮುಂಬೈ ತಂಡಕ್ಕಾಗಿ ಆಡಲು ಬಯಸುತ್ತೇನೆ. ಅಂತಿಮವಾಗಿ ಫ್ರಾಂಚೈಸಿಗಾಗಿ ಆಡಲು ಮತ್ತು ಕ್ರಿಕೆಟ್‍ನ ದೊಡ್ಡ ತಾರೆಗಳೊಂದಿಗೆ ಡ್ರೆಸ್ಸಿಂಗ್ ಕೋಣೆಯನ್ನು ಹಂಚಿಕೊಳ್ಳಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಮುಂಬೈ ತಂಡದೊಂದಿಗಿನ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಿಜವಾಗಿಯೂ ನಾನು ಎದುರು ನೋಡುತ್ತಿದ್ದೇನೆ ಎಂದು ಮುಂಬೈ ಇಂಡಿಯನ್ಸ್‌ನ ಯುಟ್ಯೂಬ್ ಚಾನೆಲ್‍ನಲ್ಲಿ ಪೋಸ್ಟ್ ಮಾಡಿದ ವೀಡಿಯೋದಲ್ಲಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಹರಾಜು ಅಂತ್ಯ – ಫ್ರಾಂಚೈಸ್‍ಗಳಿಗೆ ಬೇಡವಾದ ಸ್ಟಾರ್ ಆಟಗಾರರು

    ಜೋಫ್ರಾ ಆರ್ಚರ್ ಮತ್ತು ಜಸ್ಪ್ರೀತ್ ಬುಮ್ರಾ ಅವರು ಮುಂಬೈ ತಂಡದಲ್ಲಿ ಒಟ್ಟಿಗೆ ಬೌಲಿಂಗ್ ಮಾಡುವುದನ್ನು ನೋಡಲು ಬಯಸುತ್ತಿದೆ ಎಂದು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕ ಜಹೀರ್ ಖಾನ್ ಹೇಳಿದ್ದಾರೆ.

    ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಸಿಂಗಾಪುರದ ಟಿಮ್ ಡೇವಿಡ್ ಅವರಿಗೆ 8.25 ಕೋಟಿ ರೂ. ಇಶಾನ್ ಕಿಶನ್ ಅವರಿಗೆ 15.25 ಕೋಟಿ ರೂ. ಮತ್ತು ಅರ್ಜುನ್ ತೆಂಡೂಲ್ಕರ್ ಅವರಿಗೆ 30 ಲಕ್ಷ ರೂ. ನೀಡಿ ಅವರನ್ನು ಖರೀದಿಸಿದೆ.

  • ಐಪಿಎಲ್ 2022ರ ಹರಾಜು ಪ್ರಕ್ರಿಯೆ ವೀಕ್ಷಿಸಿ ತುಂಬಾ ದಣಿದಿದ್ದೇನೆ: ಪ್ರೀತಿ ಜಿಂಟಾ

    ಐಪಿಎಲ್ 2022ರ ಹರಾಜು ಪ್ರಕ್ರಿಯೆ ವೀಕ್ಷಿಸಿ ತುಂಬಾ ದಣಿದಿದ್ದೇನೆ: ಪ್ರೀತಿ ಜಿಂಟಾ

    ಮುಂಬೈ: ಪಂಜಾಬ್ ಕಿಂಗ್ಸ್ ತಂಡದ ಒಡತಿ ಪ್ರೀತಿ ಜಿಂಟಾ ನಿನ್ನೆ ನಡೆದ ಮೊದಲನೆಯ ದಿನದ ಐಪಿಎಲ್ ಹರಾಜು ಪ್ರಕ್ರಿಯೆಗೆ ಗೈರಾಗಿದ್ದು, ಮನೆಯಲ್ಲಿಯೇ ಕುಳಿತು ತಮ್ಮ ಇಬ್ಬರು ಅವಳಿ ಮಕ್ಕಳೊಂದಿಗೆ ಮೆಗಾ ಹರಾಜನ್ನು ವೀಕ್ಷಿಸಿದ್ದಾರೆ.

    ನಿನ್ನೆ ನಡೆದ ಮೊದಲನೆಯ ಐಪಿಎಲ್ ಹರಾಜನ್ನು ನೋಡಿದ ನಂತರ ತುಂಬಾ ದಣಿದಿದ್ದೇನೆ ಪೋಸ್ಟ್‌ವೊಂದನ್ನು ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Preity G Zinta (@realpz)

    ರಾತ್ರಿಯಿಡೀ ಎಚ್ಚರವಾಗಿ ಐಪಿಎಲ್ ಹರಾಜು ಪ್ರಕ್ರಿಯೆಯನ್ನು ನೋಡಿದ ನಂತರ ನಾನು ತುಂಬಾ ದಣಿದಿದ್ದೇನೆ. ನಾಳೆಯವರೆಗೆ ನಮಗೆ ಬಹಳಷ್ಟು ಕೆಲಸಗಳಿವೆ. ಹೀಗಾಗಿ ಫೆಬ್ರವರಿ 13ನೇ ತಾರೀಖಿನ 2ನೇಯ ದಿನದ ಹರಾಜು ಪ್ರಕ್ರಿಯೆಯಲ್ಲಿಯೂ ಕೂಡಾ ನಾನು ಪಾಲ್ಗೊಳ್ಳಲಾಗುವುದಿಲ್ಲ. ಅಲ್ಲಿಯವರೆಗೆ ನೀವು ನಿಮ್ಮ ಕಾಳಜಿ ವಹಿಸಿ, ಸುರಕ್ಷಿತವಾಗಿರಿ. ಎನ್ ಚಕ್ ದೇ ಫಾಟ್ಟೆ ಅಂತ ಘೋಷ ವಾಕ್ಯದೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: IPL ಹರಾಜಿನಲ್ಲಿ ಅನ್‍ಸೋಲ್ಡ್ ಆದ ಸ್ಟಾರ್ ಆಟಗಾರರು

    ಪ್ರತಿ ವರ್ಷ ಪ್ರೀತಿ ಜಿಂಟಾ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಆಟದ ಮೈದಾನದಲ್ಲಿ ಹುರಿದುಂಬಿಸುತ್ತಿರುತ್ತಾರೆ. ಆದರೆ ಅವರು ತಮ್ಮ ಅವಳಿ ಮಕ್ಕಳ ಪೋಷಣೆಯಲ್ಲಿ ತೊಡಗಿಕೊಂಡ ಕಾರಣದಿಂದಾಗಿ ಈ ವರ್ಷ ಐಪಿಎಲ್ ಹರಾಜು ಪ್ರಕ್ರಿಯೆಗೆ ಹಾಜರಾಗಲು ಸಾಧ್ಯವಾಗಲಿಲ್ಲ.

    ಐಪಿಎಲ್ ಹರಾಜು ಈ ವರ್ಷ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಪ್ರೀತಿ ತಮ್ಮ ಅವಳಿ ಮಕ್ಕಳೊಂದಿಗೆ ಮುದ್ದಾದ ಸೆಲ್ಫಿಯೊಂದಿಗೆ ಐಪಿಎಲ್ 2022 ಹರಾಜಿನ ಬಗ್ಗೆ ತನ್ನ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ.

    ಪ್ರೀತಿ ನಿನ್ನೆ ನಡೆದ ಮೆಗಾ ಹರಾಜನ್ನು ವೀಕ್ಷಿಸಲು ಸಿದ್ಧವಾಗುತ್ತಿದ್ದಂತೆ. ಈ ವರ್ಷ ತಮ್ಮ ಅವಳಿ ಮಕ್ಕಳು ಜೈ ಜಿಂಟಾ ಹಾಗೂ ಜಿಯಾ ಜಿಂಟಾ ಐಪಿಎಲ್ ಹರಾಜು ಪ್ಯಾಡಲ್ ಅನ್ನು ಬದಲಾಯಿಸಲಿವೆ ಎಂದು ತಮಾಷೆ ಮಾಡಿದ್ದಾರೆ.

     

    View this post on Instagram

     

    A post shared by Preity G Zinta (@realpz)

    ಇಂದು ರಾತ್ರಿ ಟಾಟಾ ಐಪಿಎಲ್‍ನ ಎರಡನೇ ಮೆಗಾ ಹರಾಜನ್ನು ವೀಕ್ಷಿಸಲು ನಾನೂ ಸಿದ್ಧವಾಗಿದ್ದೇನೆ. ಆದರೆ ಕುಟುಂಬದ ಕೆಲ ಜವಾಬ್ದಾರಿಗಳಿಂದಾಗಿ ಪಂಜಾಬ್ ತಂಡದ ಪರ ಹರಾಜು ನಡೆಸುವ ಬದಲಿಗೆ ನನ್ನ ತೋಳುಗಳಲ್ಲಿ ಮುದ್ದಾದ ಮಗುವನ್ನು ಎತ್ತಿಕೊಂಡು ಅದರ ಪೋಷಣೆಯಲ್ಲಿ ತೊಡಗಿಕೊಂಡಿದ್ದೇನೆ. ಈ ವರ್ಷದ ನಮ್ಮ ಪಂಜಾಬ್ ರಾಜರ ಆಟವನ್ನು ನಾನು ನನ್ನ ಇಬ್ಬರು ಮುದ್ದಾದ ಮಕ್ಕಳೊಂದಿಗೆ ವೀಕ್ಷಿಸಲು ಬಹಳ ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL Auction -15.25 ಕೋಟಿಗೆ ಇಶಾನ್ ಕಿಶನ್ ಸೇಲ್‌

    ಇನ್‍ಸ್ಟಾಗ್ರಾಮ್‍ನ ಮೊದಲ ಪೋಸ್ಟ್‌ನಲ್ಲಿ ಪ್ರೀತಿಯವರು ಕಪ್ಪು ಕನ್ನಡಕದೊಂದಿಗೆ ಬಿಳಿಯ ಟಿ-ಶರ್ಟ್ ಅನ್ನು ಧರಿಸಿದ್ದು, ತಮ್ಮ ಗುಳಿ ಕೆನ್ನೆಯೊಂದಿಗೆ ಮುದ್ದಾದ ನಗೆಯನ್ನು ಬೀರಿದ್ದಾರೆ. ಎರಡನೇ ಪೋಸ್ಟ್‌ನಲ್ಲಿ ತಮ್ಮ ಶಿಶುವನ್ನು ಬಿಳಿಯ ವಸ್ತ್ರದೊಂದಿಗೆ ಬೆಚ್ಚಗೆ ಇರಿಸಿ ತಮ್ಮ ಎದೆಯ ಮೇಲೆ ಮಲಗಿಸಿಕೊಂಡಿದ್ದಾರೆ.

  • ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡ ಶ್ರೀಶಾಂತ್ – ಮೂಲಬೆಲೆ ಎಷ್ಟು ಗೊತ್ತಾ?

    ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡ ಶ್ರೀಶಾಂತ್ – ಮೂಲಬೆಲೆ ಎಷ್ಟು ಗೊತ್ತಾ?

    ತಿರುವನಂತಪುರಂ: ತಿರುವನಂತಪುರಂ ಎಕ್ಸ್‌ಪ್ರೆಸ್ ಖ್ಯಾತಿಯ ಕೇರಳದ ವೇಗಿ ಎಸ್.ಶ್ರೀಶಾಂತ್ 2022ರ ಐಪಿಎಲ್ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೋಂದಾಣಿ ಮಾಡಿಕೊಂಡಿದ್ದಾರೆ.

    2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ನಿಷೇಧದ ಬಳಿಕ ಕಳೆದ ವರ್ಷ ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರನ್ನು ಶ್ರೀಶಾಂತ್ ನೋಂದಾಣಿ ಮಾಡಿಕೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಶ್ರೀಶಾಂತ್ ಅವರ ಹೆಸರು ಇರಲಿಲ್ಲ. ಇದೀಗ ಈ ಬಾರಿ ಮತ್ತೆ 50 ಲಕ್ಷ ರೂ. ಮೂಲಬೆಲೆಗೆ ಶ್ರೀಶಾಂತ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ – ಶಾರೂಕ್ ಖಾನ್, ಅವೇಶ್ ಖಾನ್ ಬೆಲೆ ಕಂಡು ದಂಗಾದ ಕ್ರಿಕೆಟ್‌ ಪ್ರಿಯರು

    ನಿಷೇಧದ ಬಳಿಕ ಕ್ರಿಕೆಟ್‍ಗೆ ವಾಪಾಸಾದ ಶ್ರೀ, ಕೇರಳ ಪರ ವಿಜಯ ಹಜಾರೆ, ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಶ್ರೀಶಾಂತ್ ನಿಷೇಧ ಶಿಕ್ಷೆಗೆ ಗುರಿಯಾಗುವ ಮೊದಲು ರಾಜಸ್ಥಾನ ರಾಯಲ್, ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಕಿಂಗ್ಸ್ 11 ಪಂಜಾಬ್ ಪರ ಆಡಿದ್ದರು. ಐಪಿಎಲ್‍ನಲ್ಲಿ ಒಟ್ಟು 44 ಪಂದ್ಯವಾಡಿರುವ ಶ್ರೀ 44 ವಿಕೆಟ್ ಪಡೆದು ಮಿಂಚಿದ್ದಾರೆ. ಇದನ್ನೂ ಓದಿ: ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್

    15ನೇ ಆವೃತ್ತಿ ಐಪಿಎಲ್‍ನ ಮೆಗಾ ಹರಾಜಿನಲ್ಲಿ 1,214 ಮಂದಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ಕೊಟ್ಟಿದ್ದಾರೆ. ಈ ಬಾರಿ 5 ಕ್ಯಾಟಗರಿಯಲ್ಲಿ ಆಟಗಾರರಿಗೆ ಬೆಲೆ ನಿಗದಿಪಡಿಸಲಾಗಿದೆ. 2 ಕೋಟಿ, 1.5 ಕೋಟಿ, 1 ಕೋಟಿ, 50 ಲಕ್ಷ ಮತ್ತು 20 ಲಕ್ಷ ರೂಪಾಯಿಯ ಮೂಲ ಬೆಲೆ ಕ್ಯಾಟಗರಿಯಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

    ಅಚ್ಚರಿ ಎಂಬಂತೆ ಸ್ಟಾರ್ ಆಟಗಾರರಾಗಿ ಗುರುತಿಸಿಕೊಂಡಿದ್ದ, ಕ್ರಿಸ್ ಗೇಲ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಸ್ಯಾಮ್ ಕರ್ರನ್, ಮಿಚೆಲ್ ಸ್ಟಾರ್ಕ್ ಐಪಿಎಲ್‍ನಿಂದ ಹಿಂದೆ ಸರಿದಿದ್ದಾರೆ. ಈ ನಡುವೆ ಈ ಹಿಂದಿನ ಐಪಿಎಲ್ ಮತ್ತು ದೇಶಿ ಟೂರ್ನಿಗಳಲ್ಲಿ ಮಿಂಚುಹರಿಸಿದ ಆಟಗಾರಾದ ಶಾರೂಖ್ ಖಾನ್ ಮತ್ತು ಆವೇಶ್ ಖಾನ್ ಮೂಲಬೆಲೆಯನ್ನು 20 ಲಕ್ಷ ಫಿಕ್ಸ್ ಮಾಡಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.‌ ಇದನ್ನೂ ಓದಿ: ಒತ್ತಾಯಕ್ಕೆ ಮಣಿದು ಕೊಹ್ಲಿ ನಾಯಕತ್ವ ತೊರೆದರು: ಶೋಯೆಬ್‌ ಅಖ್ತರ್‌