Tag: IPL 2024

  • IPL 2025 | ಅತ್ಯುತ್ತಮ ಜೊತೆಯಾಟದಲ್ಲಿ ಆರ್‌ಸಿಬಿ ಆಟಗಾರರೇ ಟಾಪ್‌!

    IPL 2025 | ಅತ್ಯುತ್ತಮ ಜೊತೆಯಾಟದಲ್ಲಿ ಆರ್‌ಸಿಬಿ ಆಟಗಾರರೇ ಟಾಪ್‌!

    ಯಾವುದೇ ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡುವ ತಂಡವು ಬೃಹತ್‌ ಮೊತ್ತ ಬಾರಿಸಬೇಕಾದ್ರೆ, ಸ್ಫೋಟಕ ಬ್ಯಾಟಿಂಗ್‌ ಮಾಡುವ ಹೊರತಾಗಿ ಉತ್ತಮ ಪಾಲುದಾರಿಕೆಯೂ ಮುಖ್ಯವಾಗುತ್ತದೆ. ಐಪಿಎಲ್‌ ಟೂರ್ನಿಗೂ (IPL 2025) ಇದು ಅನ್ವಯಿಸುತ್ತದೆ.

    ಮೊದಲು ಬ್ಯಾಟಿಂಗ್‌ ಮಾಡುವ ತಂಡದ ಪರ ಬ್ಯಾಟಿಂಗ್‌ ಜೋಡಿಯು ಕ್ರೀಸ್‌ ಮೇಲೆ ಭದ್ರವಾಗಿ ನೆಲೆಯೂರಿದರೆ, ದೊಡ್ಡ ಹೊಡೆತ ನೀಡಲು ಮುಂದಾದ್ರೆ, ಕನಿಷ್ಠ 200 ರನ್‌ಗಳನ್ನು ಕಲೆಹಾಕುವುದು ಖಚಿತ. ಕೆಲವೊಮ್ಮೆ ಅಧಿಕ ರನ್‌ ಗಳಿಸಿದ ತಂಡವು ಬೌಲಿಂಗ್‌ನಲ್ಲಿ ಕೊಂಚ ಎಡವಿದರೂ ಎದುರಾಳಿ ತಂಡಕ್ಕೆ ಗೆಲುವು ತಂದುಕೊಡಬಹುದು. ಉದಾಹರಣೆಗೆ 2023ರ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಆರ್‌ಸಿಬಿ (CSK vs RCB) ನಡುವಿನ ಪಂದ್ಯ ಸಾಕ್ಷಿಯಾಗಿದೆ. ಅಂದು ಚೆನ್ನೈ 226 ರನ್‌ ಪೇರಿಸಿದ್ದರೂ, ಕೇವಲ 9 ರನ್‌ಗಳಿಂದ ಗೆಲುವು ಸಾಧಿಸಿತ್ತು. 18ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಳು ಸಮೀಪಿಸುತ್ತಿರುವ ಕಾರಣ ಈ ಹಿಂದಿನ ಅತ್ಯುತ್ತಮ ಜೊತೆಯಾಟವನ್ನು ಮೆಲುಕು ಹಾಕುಬೇಕಾಗಿದ್ದು, ಐಪಿಎಲ್‌ ಇತಿಹಾಸದಲ್ಲೇ ದಾಖಲೆಯ ಜೊತೆಯಾಟ ನೀಡಿದ ಟಾಪ್‌ ಜೋಡಿಗಳನ್ನು ಇಲ್ಲಿ ಕಾಣಬಹುದು.

    RCB 11

    ವಿರಾಟ್ ಕೊಹ್ಲಿ & ಎಬಿ ಡಿವಿಲಿಯರ್ಸ್
    ಐಪಿಎಲ್‌ ಇತಿಹಾಸದಲ್ಲಿ ಅತ್ಯುತ್ತಮ ಜೊತೆಯಾಟ ನೀಡಿದ ಟಾಪ್‌-5 ಪಟ್ಟಿಯಲ್ಲಿ ಕೊಹ್ಲಿ ಮೂರರಲ್ಲಿ ಕಾಣಿಸಿಕೊಂಡಿದ್ದಾರೆ, ಅಲ್ಲದೇ ಆರ್‌ಸಿಬಿ ತಂಡ ಮೂವರು ಆಟಗಾರರು ಈ ಪಟ್ಟಿಲ್ಲಿರುವುದು ವಿಶೇಷ. 2016ರ ಆವೃತ್ತಿಯಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಎಬಿ ಡಿವಿಲಿಯರ್ಸ್ (AB de Villiers) ಅವರೊಂದಿಗೆ 2ನೇ ವಿಕೆಟ್​ಗೆ ವಿರಾಟ್​ ಕೊಹ್ಲಿ (Virat Kohli) 229 ರನ್​​ಗಳನ್ನು ಸೇರಿಸಿದ್ದರು. ಈ ಪಂದ್ಯದಲ್ಲಿ ಇಬ್ಬರೂ ಶತಕಗಳನ್ನು ಸಿಡಿಸಿದ್ದರು. ದಕ್ಷಿಣ ಆಫ್ರಿಕಾದ ಬ್ಯಾಟರ್ ಮಿಸ್ಟರ್‌-360, ಕೇವಲ 52 ಎಸೆತಗಳಲ್ಲಿ 12 ಸಿಕ್ಸರ್​ಗಳು ಮತ್ತು 10 ಬೌಂಡರಿಗಳ ಸಹಾಯದಿಂದ 129 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ 55 ಎಸೆತಗಳಲ್ಲಿ 109 ರನ್ ಗಳಿಸುವುದರೊಂದಿಗೆ ಆರ್​ಸಿಬಿ 3 ವಿಕೆಟ್ ನಷ್ಟಕ್ಕೆ 248 ರನ್ ಪೇರಿಸಿತ್ತು. ಪಂದ್ಯದಲ್ಲಿ ಆರ್​​ಸಿಬಿ ಗೆದ್ದಿತ್ತು.

    RCB 2 3

    ವಿರಾಟ್ ಕೊಹ್ಲಿ & ಎಬಿ ಡಿವಿಲಿಯರ್ಸ್
    2015ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2ನೇ ವಿಕೆಟ್​ಗೆ ಕೊಹ್ಲಿ ಮತ್ತು ವಿಲಿಯರ್ಸ್ 215 ರನ್​ಗಳ ಜೊತೆಯಾಟವಾಡಿದ್ದರು. ಆ ಪಂದ್ಯದಲ್ಲಿ ಎಬಿಡಿ ಕೇವಲ 59 ಎಸೆತಗಳಲ್ಲಿ 19 ಬೌಂಡರಿ ಮತ್ತು 4 ಸಿಕ್ಸರ್ ಸೇರಿದಂತೆ 133 ರನ್ ಚಚ್ಚಿದ್ದರು. ವಿರಾಟ್ 50 ಎಸೆತಗಳಲ್ಲಿ 82 ರನ್ ಸಿಡಿಸಿ ಔಟಾದರು. ಮೊದಲ ಇನ್ನಿಂಗ್ಸ್​​ನಲ್ಲಿ 235/1 ಸ್ಕೋರ್ ಮಾಡಿದ್ದ ಆರ್​ಸಿಬಿ ಈ ಪಂದ್ಯವನ್ನು 39 ರನ್​ಗಳಿಂದ ಗೆದ್ದುಕೊಂಡಿತ್ತು.

    GTvsLSG 4

    ಕ್ವಿಂಟನ್‌ ಡಿ ಕಾಕ್‌ & ಕೆ.ಎಲ್‌ ರಾಹುಲ್‌
    2022ರ ಐಪಿಎಲ್‌ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಪರ ಆರಂಭಿಕರಾದ ಕ್ವಿಂಟನ್ ಡಿ ಕಾಕ್ ಮತ್ತು ಕೆ.ಎಲ್ ರಾಹುಲ್ ಅಬ್ಬರದ ಪ್ರದರ್ಶನ ನೀಡಿದ್ದರು. ಕೆಕೆಆರ್ ವಿರುದ್ಧ ರಾಹುಲ್ ಹಾಗೂ ಡಿ ಕಾಕ್ ಜೋಡಿ 210 ರನ್​ಗಳ ಜೊತೆಯಾಟ ದಾಖಲಿಸಿದ್ದರು. ಇದು ಟಿ20 ಲೀಗ್‌ನಲ್ಲಿ 3ನೇ ಅತ್ಯುತ್ತಮ ಜೊತೆಯಾಟವಾಗಿ ದಾಖಲಾಯಿತು.

    ಶುಭಮನ್‌ ಗಿಲ್‌ & ಸಾಯಿ ಸುದರ್ಶನ್‌:
    2024ರ ಐಪಿಎಲ್‌ ಆವೃತ್ತಿಯಲ್ಲಿ ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌, ಆರಂಭಿಕ ಆಟಗಾರ ಸಾಯಿ ಸುದರ್ಶನ್‌ ಮೊದಲ ವಿಕೆಟ್‌ಗೆ 210 ರನ್‌ಗಳ ಜೊತೆಯಾಟ ನೀಡಿದ್ದರು. ಈ ಪಂದ್ಯದಲ್ಲಿ ಆರಂಭಿಕರಿಬ್ಬರೂ ಶತಕ ಸಿಡಿಸಿ ಮಿಂಚಿದ್ದರು. ಇದು ಐಪಿಎಲ್‌ ಇತಿಹಾಸದಲ್ಲಿ ಅತಿಹೆಚ್ಚು ರನ್‌ಗಳ ನಾಲ್ಕನೇ ಜೊತೆಯಾಟವಾಗಿದೆ.

    ಗಿಲ್​ಕ್ರಿಸ್ಟ್​​ & ಶಾನ್​ ಮಾರ್ಷ್​​
    2011ರ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ, ಪಂಜಾಬ್ ನಾಯಕ ಆಡಂ ಗಿಲ್​​ಕ್ರಿಸ್ಟ್​​ 55 ಎಸೆತಗಳಲ್ಲಿ 106 ರನ್ ಗಳಿಸುವ ಮೂಲಕ ಅದ್ಭುತ ಶತಕ ಗಳಿಸಿದ್ದರು. ಶಾನ್ ಮಾರ್ಷ್ ಜೊತೆಗೂಡಿ 2ನೇ ವಿಕೆಟ್ ಗೆ 206 ರನ್ ಪೇರಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿನ 4ನೇ ಅತಿ ದೊಡ್ಡ ಜೊತೆಯಾಟವಾಗಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಪಂಜಾಬ್ 2 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿತ್ತು. ಅಂತಿಮವಾಗಿ ಆರ್​ಸಿಬಿ 111 ರನ್ ಗಳ ಸೋಲು ಅನುಭವಿಸಿತ್ತು.

    ದಾಖಲೆ ಜೊತೆಯಾಟ ನೀಡಿದ ಟಾಪ್‌-5 ಜೋಡಿಗಳು:
    * ವಿರಾಟ್ ಕೊಹ್ಲಿ & ಎಬಿ ಡಿವಿಲಿಯರ್ಸ್ – 2ನೇ ವಿಕೆಟ್​ಗೆ, 229 ರನ್​, ಗುಜರಾತ್​ ಲಯನ್ಸ್​ ವಿರುದ್ಧ (2016)
    * ವಿರಾಟ್ ಕೊಹ್ಲಿ & ಎಬಿ ಡಿವಿಲಿಯರ್ಸ್ – 2ನೇ ವಿಕೆಟ್​ಗೆ 215 ರನ್​, ಮುಂಬೈ ಇಂಡಿಯನ್ಸ್ ವಿರುದ್ಧ (2015)
    * ಕ್ವಿಂಟನ್ ಡಿ ಕಾಕ್ & ಕೆಎಲ್ ರಾಹುಲ್ – ಮೊದಲ ವಿಕೆಟ್​ಗೆ, 210 ರನ್​, ಕೆಕೆಆರ್ ವಿರುದ್ಧ (2022)
    * ಶುಭಮನ್‌ ಗುಲ್‌ & ಸಾಯಿ ಸುದರ್ಶನ್‌ – ಮೊದಲ ವಿಕೆಟ್‌ಗೆ, 210 ರನ್‌, ಸಿಎಸ್‌ಕೆ ವಿರುದ್ಧ (2024)
    * ಆಡಮ್ ಗಿಲ್ಕ್ರಿಸ್ಟ್ & ಶಾನ್ ಮಾರ್ಷ್ – 2ನೇ ವಿಕೆಟ್‌ಗೆ 206 ರನ್‌, ಆರ್​​ಸಿಬಿ ವಿರುದ್ಧ (2011)

  • IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    ಮುಂಬೈ: ಐಪಿಎಲ್‌ ಟೂರ್ನಿಯಲ್ಲಿ ಬಳಕೆಯಾಗುತ್ತಿರುವ ಇಂಪ್ಯಾಕ್ಟ್‌ ಪ್ಲೇಯರ್‌ ನಿಮಯ (Impact Player Rule) ಮತ್ತೆ ಬಿಸಿಬಿಸಿ ಚರ್ಚೆಯಲ್ಲಿದೆ.

    2024ರ ಐಪಿಎಲ್‌ ಟೂರ್ನಿ ಬಳಿಕ ರೋಹಿತ್‌ ಶರ್ಮಾ (Rohit Sharma) ಸೇರಿದಂತೆ ಅನೇಕರು ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಆಕ್ಷೇಪ ಹೊರಹಾಕಿದ್ದರು. ಮುಂದಿನ ಐಪಿಎಲ್‌ನಲ್ಲಿ ಇಂಪ್ಯಾಕ್ಟ್‌ ನಿಯಮ ಕೈಬಿಡುವಂತೆ ಒತ್ತಾಯಗಳೂ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಧ್ಯಕ್ಷ ಅರುಣ್ ಧುಮಾಲ್, ರೋಹಿತ್‌ ಶರ್ಮಾ ಈ ಹಿಂದೆಯೂ ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ನ್ಯೂನತೆ ತೋರಿಸಿದ್ದಾರೆ. ಪ್ರತಿಯೊಂದು ನಿಯಮಕ್ಕೂ ಅದರದ್ದೇ ಆದ ಸಾಧಕ ಬಾಧಕಗಳಿವೆ. ಪ್ರಸ್ತುತ ಐಪಿಎಲ್‌ ಸೀಸನ್‌ ಮುಗಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈ ನಿಯಮದ ಕುರಿತು ಪರಿಶೀಲಿಸಲಿದೆ ಎಂದು ಹೇಳಿದ್ದರು.

    ಈ ನಡುವೆ ಟೀಂ ಇಂಡಿಯಾದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin), ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಬ್ಯಾಟ್‌ ಬೀಸಿದ್ದಾರೆ. ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮವು ತುಂಬಾ ಕೆಟ್ಟದ್ದಲ್ಲ ಅಂತ ನಾನು ಭಾವಿಸುತ್ತೇನೆ. ಈ ನಿಯಮದಿಂದ ಆಲ್‌ರೌಂಡರ್‌ಗಳನ್ನ ನಿರುತ್ಸಾಹಗೊಳಿಸುವುದಿಲ್ಲ. ಹೊಸ ತನಕ್ಕೆ ಅವಕಾಶ ನೀಡುವ ಜೊತೆಗೆ, ಆಟವನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ ಅಂತ ಹೇಳಿದ್ದಾರೆ. ಅದಕ್ಕೆ ಉದಾಹರಣೆಯನ್ನೂ ನೀಡಿದ್ದಾರೆ.

    2024ರ ಕ್ವಾಲಿಫೈಯರ್‌-2ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡವನ್ನು ಎದುರಿಸಿತ್ತು. ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಸನ್‌ ರೈಸರ್ಸ್‌ (Sunrisers Hyderabad) ತಂಡವು 9 ವಿಕೆಟ್‌ಗೆ 175 ರನ್‌ ಗಳಿಸಿತ್ತು. ರಾಜಸ್ಥಾನ್‌ ತಂಡ 36 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯದಲ್ಲಿ ಶಹಬಾಜ್‌ ಅಹ್ಮದ್‌ ಇಂಪ್ಯಾಕ್ಟ್‌ ಆಟಗಾರನಾಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್‌ನಲ್ಲಿ 18 ರನ್‌ ಗಳಿಸಿ ಬೌಲಿಂಗ್‌ನಲ್ಲಿ 3 ಪ್ರಮುಖ ವಿಕೆಟ್‌ ಕಿತ್ತು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಈ ನಿಯಮ ಇರುವುದರಿಂದಲೇ ಬಹಳ ಆಟಗಾರರು ತಮ್ಮ ಪ್ರತಿಭೆ ತೋರಿಸಲು ಸಾಧ್ಯವಾಗಿದೆ. ಮುಖ್ಯವಾಗಿ ಇಂಪ್ಯಾಕ್ಟ್‌ ನಿಯಮ ಇಲ್ಲದೇ ಇದ್ದಿದ್ದರೇ, ಧ್ರುವ್‌ ಜುರೆಲ್‌, ಶಿವಂ ದುಬೆ, ಶಬಹಾಜ್‌ ಅಹ್ಮದ್‌ ಅಂತಹ ಆಟಗಾರರು ಎಂದಿಗೂ ಅವಕಾಶ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಶ್ವಿನ್‌ ಹೇಳಿದ್ದಾರೆ.

    ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಅಭಿಷೇಕ್‌ ಪೋರೆಲ್‌ ಇಂಪ್ಯಾಕ್ಟ್‌ ಆಟಗಾರನಾದಮೇಲೆ ಆರಂಭಿಕನಾಗಿ ಕಣಕ್ಕಿಳಿದು ಅಬ್ಬರಿಸಿದ್ದರು.

    ಏನಿದು ಇಂಪ್ಯಾಕ್ಟ್ ಪ್ಲೇಯರ್ ನಿಯಮ?
    ಇಂಪ್ಯಾಕ್ಟ್ ಪ್ಲೇಯರ್ ಎಂದರೆ ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಉಭಯ ತಂಡಗಳು ತಮ್ಮ ತಂಡದಲ್ಲಿನ ಒಬ್ಬ ಆಟಗಾರನನ್ನು ಬದಲಿಸುವ ಅವಕಾಶ ಪಡೆಯುವುದಾಗಿದೆ. ನಿಯಮದ ಪ್ರಕಾರ ತಂಡಗಳು ತಾವು ಘೋಷಿಸಿರುವ ತಂಡದಲ್ಲಿ ಒಬ್ಬ ಬೌಲರ್ ಬದಲಿಗೆ ಒಬ್ಬ ಬ್ಯಾಟ್ಸ್‌ಮನ್ ಅಥವಾ ಒಬ್ಬ ಬ್ಯಾಟ್ಸ್​ಮನ್ ಬದಲಿಗೆ ಬೌಲರ್‌ಅನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಇದರಿಂದ ಉಭಯ ತಂಡಗಳಿಗೆ ಒಬ್ಬ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ ಹೆಚ್ಚುವರಿ ಸಿಕ್ಕಂತೆ ಆಗುತ್ತದೆ. ಅಲ್ಲದೇ ಒಟ್ಟು ನಾಲ್ಕು ಜನ ಮೀಸಲು ಆಟಗಾರರು ಇರುವುದರಿಂದ ಪ್ಲೇಯಿಂಗ್‌-11 ನಲ್ಲಿರುವ ಆಟಗಾರರು ಗಾಯಕ್ಕೆ ತುತ್ತಾದಲ್ಲಿ ಮತ್ತೊಬ್ಬರನ್ನು ಫೀಲ್ಡಿಂಗ್‌ಗೆ ಬಳಸಿಕೊಳ್ಳುವ ಅವಕಾಶವೂ ಇದೆ.

    ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮ ಬಂದಿದ್ದು ಯಾವಾಗ?
    ಆಸ್ಟ್ರೇಲಿಯಾದಲ್ಲಿ ಬಿಗ್‌ಬ್ಯಾಷ್‌ ಲೀಗ್‌ನಲ್ಲಿ ಮೊದಲು ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಪರಿಚಯಿಸಲಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಬಿಸಿಸಿಐ, ಐಪಿಎಲ್‌ ಟೂರ್ನಿಯಲ್ಲಿ ಅಳವಡಿಸಲು ನಿರ್ಧರಿಸಿತು. ಆದ್ರೆ ಐಪಿಎಲ್‌ಗೂ ಮುನ್ನ 2022-23ರ ಸೈಯದ್‌ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮೊದಲ ಬಾರಿ ಈ ನಿಯಮವನ್ನು ಅಳವಡಿಸಿಕೊಂಡು ಪ್ರಯೋಗ ನಡೆಸಿತ್ತು. ಅದು ಸಕ್ಸಸ್‌ ಆದ ನಂತರ ಕಳೆದ ಎರಡು ಆವೃತ್ತಿಗಳಿಂದ ಐಪಿಎಲ್‌ನಲ್ಲಿ ಅನುಷ್ಠಾನಕ್ಕೆ ತರಲಾಯಿತು.

    ಈ ಹಿಂದೆ ರೋಹಿತ್‌ ಶರ್ಮಾ ಹೇಳಿದ್ದೇನು?
    ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ನಾನು ಅಭಿಮಾನಿಯಲ್ಲ. ಜನರಿಗೆ ಸ್ವಲ್ಪ ಮನರಂಜನೆ ನೀಡುವ ಸಲುವಾಗಿ ಪಂದ್ಯದ ದೊಡ್ಡ ಭಾಗವನ್ನು ನೀವು ತೆಗೆದುಕೊಳ್ಳುತ್ತಿದ್ದೀರಿ. ಆದರೆ, ನೀವು ಕ್ರಿಕೆಟ್‌ನ ನಿಜವಾದ ಅಂಶವನ್ನು ನೋಡುವುದಾದರೆ, ನಾನು ಕೆಲವೊಂದು ಉದಾಹರಣೆ ನೀಡುತ್ತೇನೆ. ಭಾರತ ತಂಡಕ್ಕೆ ವಾಷಿಂಗ್ಟನ್‌ ಸುಂದರ್‌, ಶಿವಂ ದುಬೆ ಅವರಂಥ ಆಟಗಾರರು ಬೌಲ್‌ ಮಾಡುವುದೇ ಇಲ್ಲ. ಹಾಗಾಗಿ ಇದು ಒಳ್ಳೆಯ ಸಂಗತಿಯಲ್ಲ. ಈ ನಿಯಮದಿಂದ ನೀವು ಏನು ಸಾಧಿಸುತ್ತೀರೋ ನನಗೆ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ತಿಳಿಸಿದ್ದರು.

  • ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

    ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

    ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಶೀಘ್ರದಲ್ಲೇ ನಡೆಯಲಿರುವ ಬಿಸಿಸಿಐ (BCCI) ಮಹತ್ವದ ಸಭೆಯಲ್ಲಿ ಮೆಗಾ ಹರಾಜಿನ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

    ಹೌದು. 3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡ ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ಮಹತ್ವದ 5 ಬೆಳವಣಿಗೆ ಏನು?
    ಸದ್ಯದ ಮಾಹಿತಿ ಪ್ರಕಾರ, ಮೆಗಾ ಹರಾಜು ವೇಳೆ ಫ್ರಾಂಚೈಸಿಗಳು ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಆಟಗಾರರನ್ನು ಬಿಡುಗಡೆಗೊಳಿಸಬೇಕಾಗುತ್ತದೆ. ಹೀಗಾಗಿ ಐದು ಬಾರಿ ಮುಂಬೈ ಇಂಡಿಯನ್ಸ್‌ಗೆ ಟ್ರೋಫಿ ತಂದುಕೊಟ್ಟ ನಾಯಕ ರೋಹಿತ್‌ ಶರ್ಮಾ (Rohit Sharma) ಈ ಬಾರಿ ಫ್ರಾಂಚೈಸಿಗೆ ಗುಡ್‌ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. 2025ರ ಐಪಿಎಲ್‌ನಲ್ಲಿ ಹಿಟ್‌ಮ್ಯಾನ್‌ ಮುಂಬೈ ಇಂಡಿಯನ್ಸ್‌ ಬಿಟ್ಟು ಗುಜರಾತ್‌ ಟೈಟಾನ್ಸ್‌ ಅಥವಾ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಲಿದ್ದಾರೆ ಎಂದು ವರದಿಯಾಗಿದೆ.

    ಇದರೊಂದಿಗೆ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah), ಸ್ಫೋಟಕ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಹ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗುಡ್‌ಬೈ ಹೇಳಲಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ಗುಜರಾತ್‌ ಟೈಟಾನ್ಸ್‌ ಫ್ರಾಂಚೈಸಿಯನ್ನು ಖರೀದಿಸಲಿದ್ದಾರೆ. 4 ಫ್ರಾಂಚೈಸಿಗಳು ತಮ್ಮ ತಂಡದ ನಾಯಕರನ್ನು ಬದಲಾವಣೆ ಮಾಡಲಿವೆ. ಇನ್ನೂ 2024ರ ಐಪಿಎಲ್‌ನಲ್ಲಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ನಾಯಕ ರಿಷಭ್‌ ಪಂತ್‌ ಸಿಎಸ್‌ಕೆ ಸೇರಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

    ಮರಳಿ ತವರಿಗೆ ಕನ್ನಡಿಗ ಕೆ.ಎಲ್‌ ರಾಹುಲ್‌?:
    2022ರಲ್ಲಿ ಆರಂಭವಾದಾಗಿನಿಂದಲೂ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಆಕ್ಷೇಪಕ್ಕೆ ಕಾರಣವಾಗಿತ್ತು. ಈ ಘಟನೆಯ ನಂತರ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವನ್ನ ಪ್ರತಿನಿಧಿಸಿದ್ದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

  • ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಗಂಭೀರ್‌ ಫಿಕ್ಸ್‌? – ಗಂಭೀರ್‌ ಸ್ಪಷ್ಟನೆ ಏನು?

    ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಗಂಭೀರ್‌ ಫಿಕ್ಸ್‌? – ಗಂಭೀರ್‌ ಸ್ಪಷ್ಟನೆ ಏನು?

    ಮುಂಬೈ: ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir) ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆಗಳು ಕೆಲ ದಿನಗಳಿಂದ ನಡೆಯುತ್ತಿವೆ. ಈ ಬಗ್ಗೆ ಸ್ವತಃ ಗಂಭೀರ್‌ ಅವರೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಈಗಾಗಲೇ ಟೀಂ ಇಂಡಿಯಾದ ಮುಖ್ಯ ಕೋಚ್ (eam India Head Coach) ಹುದ್ದೆಯ ಆಕಾಂಕ್ಷಿಯಾಗಿರುವ ಗಂಭೀರ್ ಅವರನ್ನು ಬಿಸಿಸಿಐ ಸಲಹಾ ಸಮಿತಿಯು ಸಂದರ್ಶನ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೆ ಶ್ರೀಲಂಕಾ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ವೇಳೆಗೆ ಗಂಭೀರ್‌ ತಂಡವನ್ನು ಮುನ್ನಡೆಸಲಿದ್ದಾರೆ. ಈ ನಡುವೆ ಮುಖ್ಯ ಕೋಚ್‌ ಹುದ್ದೆಗೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಭೀರ್‌, ಈ ಸಂದರ್ಭದಲ್ಲಿ ಉತ್ತರಿಸುವುದು ಕಷ್ಟ. ನಾನು ಭವಿಷ್ಯದ ಬಗ್ಗೆ ತುಂಬಾ ಯೋಚಿಸುತ್ತಿಲ್ಲ. ನೀವು ನನಗೆ ಕಠಿಣವಾದ ಪ್ರಶ್ನೆಗಳನ್ನು ಕೇಳಿ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ನಗುಮುಖದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.

    ‘ಈಗ ಇರುವ ಜವಾಬ್ದಾರಿಯನ್ನು (ಕೆಕೆಆರ್ ತಂಡದ ಮೆಂಟ‌ರ್) ಆನಂದಿಸುತ್ತಿದ್ದೇನೆ. ಈಗಷ್ಟೇ ಐಪಿಎಲ್‌ನಲ್ಲಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಕ್ಷಣವನ್ನು ಆನಂದಿಸೋಣ. ಭವಿಷ್ಯದಲ್ಲಿ ಏನು ನಡೆಯಬೇಕೋ ಅದು ನಡೆಯಲಿದೆ. ಸದ್ಯ ತುಂಬಾ ಖುಷಿಯಲ್ಲಿದ್ದೇನೆ. ಕೋಲ್ಕತ್ತಾ ಜನರನ್ನು ಖುಷಿಪಡಿಸುವುದೇ ನನ್ನ ಕೆಲಸ. ನೀವು ಖುಷಿಪಟ್ಟರೆ ನನಗೂ ಖುಷಿ ಎಂದು ಹೇಳಿದ್ದಾರೆ.

    ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
    ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್‌ ಗೆದ್ದುಕೊಟ್ಟಿರುವ ಗೌತಮ್‌ ಗಂಭೀರ್‌ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ‌ ಮೆಂಟರ್‌ ಆಗಿ ಕೆಲಸ ಮಾಡಿದ್ದ ಗಂಭೀರ್‌, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ಇದಘ ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್‌ ಸಹ ಪ್ಲೇ ಆಫ್‌ ಪ್ರವೇಶಿಸಿದೆ. ಆದ್ರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್‌ ಅವರಿಗಿಲ್ಲ.

  • IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    ಮುಂಬೈ: 2024ರ ಐಪಿಎಲ್‌ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕೋಲ್ಕತ್ತಾ ನೈಟ್‌ ರೈಡರ್ಸ್‌ 3ನೇ ಬಾರಿಗೆ ಪಟ್ಟಕ್ಕೇರಿದೆ. ಈ ನಡುವೆ ಮಾನವೀಯತೆ ಮೆರೆದಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ಟೂರ್ನಿಯ ಯಶಸ್ಸಿಗೆ ಕಾರಣಾದ ಪ್ರಮುಖ 10 ಐಪಿಎಲ್‌ ಕ್ರೀಡಾಂಗಣಗಳ ಪಿಚ್‌ಕ್ಯುರೇಟರ್‌ ಹಾಗೂ ಕ್ರೀಡಾ ಸಿಬ್ಬಂದಿಗೆ (Curators And Groundstaff) ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

    ಪ್ರಶಸ್ತಿಯನ್ನು ಗೆದ್ದಿದ್ದು ಕೆಕೆಆರ್‌ (KKR) ಫ್ರಾಂಚೈಸಿಯೇ ಆದರೂ ಹೃದಯ ಗೆದ್ದದ್ದು ಮಾತ್ರ ಪಿಚ್‌ ಕ್ಯುರೇಟರ್‌ ಹಾಗೂ ಕ್ರೀಡಾಂಗಣದ ಸಿಬ್ಬಂದಿ. ಇವರು ʻಅಸಾಧಾರಣ ಹೀರೋʼಗಳೆಂದು ಕೋಟ್ಯಂತರ ಅಭಿಮಾನಿಗಳಿಂದಲೂ ಮೆಚ್ಚುಗೆ ಪಡೆದಿದ್ದಾರೆ. ಇದನ್ನೂ ಓದಿ: Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಯ್‌ ಶಾ, ಅನಿರೀಕ್ಷಿತ ಮಳೆ, ಕಠಿಣ ಹವಾಮಾನ ಪರಿಸ್ಥಿತಿಗಳಲ್ಲಿಯೂ ಮೈದಾನ ಮತ್ತು ಪಿಚ್‌ ಅನ್ನು ನೆನೆಯದಂತೆ ನೋಡಿಕೊಂಡು, ಮೈದಾನಕ್ಕೆ ನೀರು ಬಂದರೂ ಅದನ್ನು ಹರಸಾಹಸದಿಂದ ಒಣಗಿಸಿ, ಆಟಕ್ಕೆ ಅಣಿಗೊಳಿಸಿದ ಅವರು, ಟೂರ್ನಿ ಯಶಸ್ವಿಯಾಗಲು ಪ್ರಮುಖ ಕಾರಣರಾಗಿದ್ದಾರೆ. ಹಾಗಾಗಿ ನಮ್ಮ ಶ್ಲಾಘನೆಯ ಸಂಕೇತವಾಗಿ ಐಪಿಎಲ್‌ ಟೂರ್ನಿ ನಡೆದ ಪ್ರಮುಖ ಸ್ಥಳಗಳ ಕ್ರೀಡಾಂಗಣ ಸಿಬ್ಬಂದಿ ಹಾಗೂ ಪಿಚ್‌ ಕ್ಯುರೇಟರ್‌ಗಳಿಗೆ ತಲಾ 25 ಲಕ್ಷ ರೂ. ನೀಡಲು ಮುಂದಾಗಿದ್ದೇವೆ. ಕೇವಲ ಒಂದೆರಡು ಪಂದ್ಯಗಳನ್ನು ಆಯೋಜಿಸಿದ್ದ ಸ್ಥಳಗಳಿಗೆ 10 ಲಕ್ಷ ರೂ. ಬಹುಮಾನ ಸ್ವೀಕರಿಸಲಿದ್ದಾರೆ. ನಿಮ್ಮ ಸಮರ್ಪಣಾ ಮನೋಭಾವ ಹಾಗೂ ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಕಳೆದ ವರ್ಷ ಶ್ರೀಲಂಕಾ ಮತ್ತು ಪಾಕ್‌ ಜಂಟಿ ಆತಿಥ್ಯದಲ್ಲಿ ನಡೆದ ಏಕದಿನ ಏಷ್ಯಾಕಪ್‌ ಟೂರ್ನಿ ವೇಳೆ ಜಯ್‌ ಶಾ ಅವರು, ಕೊಲಂಬೊ ಕ್ರೀಡಾ ಸಿಬ್ಬಂದಿಗೆ 42 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಇದನ್ನೂ ಓದಿ:IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    ಮೂರು ಪಂದ್ಯ ಮಳೆಗೆ ಬಲಿ:
    ಲೀಗ್‌ ಸುತ್ತಿನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ 2 ಪಂದ್ಯ ಹಾಗೂ ಕೋಲ್ಕತ್ತಾ-ರಾಜಸ್ಥಾನ್‌ ರಾಯಲ್ಸ್‌ ನಡುವಿನ ಒಂದು ಪಂದ್ಯ ಮಳೆಯಿಂದಾಗಿ ರದ್ದಾಯಿತು. ಇದಕ್ಕೂ ಮುನ್ನ ಮುಂಬೈ – ಕೆಕೆಆರ್‌ ನಡುವಿನ ಲೀಗ್‌ ಪಂದ್ಯ ಮಳೆಯಿಂದಾಗಿ ಕೆಲಕಾಲ ಅಡ್ಡಿಯಾದರೂ ಬಳಿಕ ಓವರ್‌ ಕಡಿತಗೊಳಿಸಿ ತಲಾ 16 ಓವರ್‌ಗಳಿಗೆ ಪಂದ್ಯ ನಡೆಸಲಾಗಿತ್ತು. ಸಿಎಸ್‌ಕೆ-ಆರ್‌ಸಿಬಿ ನಡುವಿನ ನಾಕೌಟ್‌ ಕದನದಲ್ಲಿ ಮಳೆ ಹೊರತಾಗಿಯೂ ಪೂರ್ಣ ಪಂದ್ಯ ನಡೆಯುವುದಕ್ಕೆ ಕ್ರೀಡಾ ಸಿಬ್ಬಂದಿ ಹಾಗೂ ಪಿಚ್‌ ಕ್ಯುರೇಟರ್‌ಗಳು ಹರಸಾಹಸಪಟ್ಟಿದ್ದನ್ನು ನೆನಪಿಸಿಕೊಳ್ಳಬಹುದು.

  • IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯವು ಭಾನುವಾರ‌ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯಗಳಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಇದರೊಂದಿಗೆ ಐಪಿಎಲ್ 2024 ರ ಫೈನಲ್ ಪಂದ್ಯದ ವಿಜೇತ ತಂಡಕ್ಕೆ 20 ಕೋಟಿ ರೂ. ಮತ್ತು ರನ್ನರ್ ಅಪ್ ತಂಡಕ್ಕೆ 13 ಕೋಟಿ ರೂ. ಬಹುಮಾನ ಲಭಿಸಿದೆ. ಇದಲ್ಲದೇ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್, ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ ಮುಂತಾದ ಹಲವು ಪ್ರಶಸ್ತಿಗಳನ್ನು ನೀಡಲಾಗಿದ್ದು, ಯಾವ ಆಟಗಾರ ಯಾವ ಪ್ರಶಸ್ತಿ ಪಡೆದಿದ್ದಾರೆ ಎಂಬುದರ ಡೀಟೈಲ್‌ ಇಲ್ಲಿದೆ.

    ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಆಲ್‌ರೌಂಡರ್ ನಿತೀಶ್ ರೆಡ್ಡಿ (Nitish Kumar Reddy) ಉದಯೋನ್ಮುಖ ಆಟಗಾರನಾಗಿ ಆಯ್ಕೆಯಾದರು. ಅವರಿಗೆ 10 ಲಕ್ಷ ರೂ. ಹಾಗೂ ಟ್ರೋಫಿಯನ್ನು ನೀಡಲಾಯಿತು. ಈ ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಕ್ಕಾಗಿ ಅಭಿಷೇಕ್ ಶರ್ಮಾ (Abhishk Sharma) ಅವರು ಸೂಪರ್ ಸಿಕ್ಸರ್‌ ಆಗಿ ಆಯ್ಕೆಯಾದರು. ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಜೇಕ್ ಫ್ರೇಸರ್ ಮೆಕ್ಗರ್ಕ್ (Jake Fraser-McGurk) ಗೆದ್ದರು. ಇದಲ್ಲದೆ ಆರೆಂಜ್ ಕ್ಯಾಪ್ ಮತ್ತೊಮ್ಮೆ ವಿರಾಟ್ ಕೊಹ್ಲಿಗೆ (Virat Kohli) ದಕ್ಕಿತು ಮತ್ತು ಹರ್ಷಲ್ ಪಟೇಲ್ (Harshal Patel)  ಪರ್ಪಲ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    IPL 2024 ಪ್ರಶಸ್ತಿಗಳ ಸಂಪೂರ್ಣ ಪಟ್ಟಿ
    * ಕೋಲ್ಕತ್ತಾ ನೈಟ್ ರೈಡರ್ಸ್ (ವಿಜೇತರು) – 20 ಕೋಟಿ ರೂ. ಮತ್ತು ಟ್ರೋಫಿ
    * ಸನ್ ರೈಸರ್ಸ್ ಹೈದರಾಬಾದ್ (ರನ್ನರ್ ಅಪ್) – 12.5 ಕೋಟಿ ರೂ. ಮತ್ತು ಟ್ರೋಫಿ
    * ನಿತೀಶ್ ರೆಡ್ಡಿ (ಉದಯೋನ್ಮುಖ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಸನ್‌ರೈಸರ್ಸ್ ಹೈದರಾಬಾದ್ ( ಫೇರ್‌ಪ್ಲೇ ಪ್ರಶಸ್ತಿ) – 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (Dream11 ಗೇಮ್ ಚೇಂಜರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಅಭಿಷೇಕ್ ಶರ್ಮಾ (ಸೀಸನ್‌ನ ಸೂಪರ್ ಸಿಕ್ಸರ್)- 10 ಲಕ್ಷ ರೂ.
    * ರಮಣದೀಪ್ ಸಿಂಗ್ (ಪರಿಪೂರ್ಣ ಕ್ಯಾಚ್)- 10 ಲಕ್ಷ ರೂ. ಮತ್ತು ಟ್ರೋಫಿ
    * ಜೇಕ್ ಫ್ರೇಸರ್ ಮೆಕ್ಗರ್ಕ್ (ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ವೆಂಕಟೇಶ್ ಅಯ್ಯರ್ (ಕ್ರೆಡ್ ಪವರ್ ಪ್ಲೇಯರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (24 ವಿಕೆಟ್)- 10 ಲಕ್ಷ ರೂ. ಮತ್ತು ಪರ್ಪಲ್ ಕ್ಯಾಪ್
    * ವಿರಾಟ್ ಕೊಹ್ಲಿ (741 ರನ್) – 10 ಲಕ್ಷ ರೂ. ಮತ್ತು ಆರೆಂಜ್ ಕ್ಯಾಪ್
    * ಸುನಿಲ್ ನರೈನ್ (ಅತ್ಯಂತ ಮೌಲ್ಯಯುತ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಪಿಚ್ ಮತ್ತು ಗ್ರೌಂಡ್ ಅವಾರ್ಡ್ – ರಾಜೀವ್ ಗಾಂಧಿ ಸ್ಟೇಡಿಯಂ ಹೈದರಾಬಾದ್- 50 ಲಕ್ಷ

    ಐಪಿಎಲ್ 2024 ಅಂಕಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳ ಮೇಲೂ ಹಣದ ಮಳೆ ಸುರಿಯಿತು. ತೃತೀಯ ಸ್ಥಾನ ಪಡೆದ ಸಂಜು ಸ್ಯಾಮ್ಸನ್ ತಂಡ 7 ಕೋಟಿ ರೂ., ನಾಲ್ಕನೇ ಸ್ಥಾನ ಪಡೆದ RCB 6.5 ಕೋಟಿ ರೂ. ಬಹುಮಾನ ಪಡೆಯಿತು. ಎರಡನೆಯದಾಗಿ, ಅತ್ಯುತ್ತಮ ಪಿಚ್ ಮತ್ತು ಗ್ರೌಂಡ್ ಪ್ರಶಸ್ತಿಯನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ನೀಡಲಾಯಿತು.

  • ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು.

    ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಕಳಪೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದಾಗಿ ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಎಸ್‌ಆರ್‌ಎಚ್‌ ಸೋಲೊಪ್ಪಿಕೊಂಡಿತು.‌ ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.

    ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಂಡ ಸೋತರೂ ರನ್ನರ್‌ ಅಪ್‌ ವರೆಗೂ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಅಭಿನಂದಿಸಿದರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    2024ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯ ಸಾಧಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನೂ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

  • IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಕೆಕೆಆರ್‌ ನಡುವಿನ ಐಪಿಎಲ್‌ ಫೈನಲ್‌ (IPL Final) ಪಂದ್ಯವು ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸೂಪರ್‌ ಸಂಡೇ (ಮೇ 26) ನಡೆಯಲಿದೆ. ಅಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆದ್ರೆ ಫೈನಲ್‌ ಪಂದ್ಯಕ್ಕೆ ಇದೀಗ ʻರೆಮಲ್‌ʼ ಚಂಡಮಾರುತದ (Cyclone Remal) ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

    ಫೈನಲ್‌ ಪಂದ್ಯವು ಮಳೆಗೆ ಬಲಿಯಾದರೆ ವಿಜೇತರು ಯಾರಾಗ್ತಾರೆ? ನಿಯಮಗಳು ಹೇಗೆ ಅನ್ವಯವಾಗುತ್ತದೆ ಅನ್ನೋ ಬಗ್ಗೆ ತಿಳಿಯುವ ಕುತೂಹಲ ನಿಮಿಗಿದ್ದರೆ ಮುಂದೆ ಓದಿ..

    ಭಾನುವಾರ ಚೆನ್ನೈ ಹವಾಮಾನ ಹೇಗಿರಲಿದೆ?
    ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ತಮಿಳುನಾಡಿನ ಚೆನ್ನೈನಲ್ಲಿ (Chennai weather) ಭಾನುವಾರ ಬಿಸಿಲು ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ. 20% ಮಳೆ ಸಾಂದ್ರತೆಯಿರಲಿದ್ದು, 56% ತೇವಾಂಶ ಇರಲಿದೆ. ಗಂಟೆಗೆ 23 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2024ರ ಐಪಿಎಲ್‌ಗೆ ವಿದಾಯ; ಅಭಿಮಾನಿಗಳೊಂದಿಗೆ ಸಿಹಿ-ಕಹಿ ನೆನಪು ಹಂಚಿಕೊಂಡ ಆರ್‌ಸಿಬಿ!

    ಮಳೆ ಅಡ್ಡಿಯಾದ್ರೆ ಮೀಸಲು ದಿನ ಇದೆಯೇ?
    ಲೀಗ್‌ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನ ಇರಲಿಲ್ಲ. ಫೈನಲ್​ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ಲೂಯಿಸ್‌ (DSL) ನಿಯಮದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ. ಕಳೆದ ವರ್ಷ ಏಕದಿನ ಏಷ್ಯಾಕಪ್‌ (ODI Asia Cup) ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ನಿಯಮವನ್ನು ಅನ್ವಯಿಸಲಾಗಿತ್ತು. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಮೀಸಲು ದಿನಕ್ಕೂ ಮಳೆ ಬಂದರೆ ಕಥೆ ಏನು?
    ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾಗಿ ಮೀಸಲು ದಿನಕ್ಕೂ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವುಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

  • RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್‌, ಈಗ ಒಡೆದ ಹೃದಯ!

    RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್‌, ಈಗ ಒಡೆದ ಹೃದಯ!

    ಅಹಮದಾಬಾದ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಎಲಿಮಿನೇಟರ್-1‌ (Eliminator) ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಗೆದ್ದರೆ, ಬಿಕಿನಿ ಫೋಟೋ ಪೋಸ್ಟ್‌ ಮಾಡುತ್ತೇನೆ ಎಂದು ಹೇಳಿದ್ದ ಸೌತ್‌ನ ಹಾಟ್‌ ಬ್ಯೂಟಿ ಹನಿ ರೋಸ್‌ (Honey Rose) ಈಗ ಒಡೆದ ಹೃದಯದ ಎಮೋಜಿ ಹಂಚಿಕೊಂಡಿದ್ದಾರೆ.

    ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್‌, ಆರ್‌ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ. ʻAAARRRRR CEEEEE BEEEEE!!!!!!!!ʼ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು. ಆರ್‌ಸಿಬಿ ಪಂದ್ಯದ ಸೋಲಿನ ಬಳಿಕ ʻಆರ್‌ಸಿಬಿ ಎಂಬ ಹೆಸರಿನೊಂದಿಗೆʼ ಮೂರು ಒಡೆದ ಹೃದಯದ ಎಮೋಜಿಯನ್ನ ಹಂಚಿಕೊಂಡಿದ್ದಾರೆ.

    ನಟಿಯ ಪೋಸ್ಟ್‌ಗೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ʻಸದ್ಯ ಆ ದೇವರು ನಮ್ಮನ್ನು ಬದುಕಿಸಿದ ಅಂತ ಕಾಮೆಂಟ್‌ ಮಾಡಿದ್ರೆ, ಇನ್ನೂ ಕೆಲವರು ಒಂದೇ ಒಂದು ಫೋಟೋವನ್ನಾದರೂ ಪೋಸ್ಟ್‌ ಅಂತ ಕೇಳಿಕೊಂಡಿದ್ದಾರೆ.

    ಸೌಂದರ್ಯಕ್ಕೆ ಮತ್ತೊಂದು ಹೆಸರಾಗಿರುವ ಹಾಟ್‌ ಬ್ಯೂಟಿ ಹನಿ ರೋಸ್‌, ಇವರು ಮಾಡಿದ ಸಿನಿಮಾಗಳಿಗಿಂತ (Honey Rose Cinema) ಇವರ ಹಾಟ್ ಹಾಟ್ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿವೆ. ಮಾನ್ಸ್ಟರ್‌, ಬಿಗ್ ಬ್ರದರ್, ವೀರ ಸಿಂಹ ರೆಡ್ಡಿ ಸಿನಿಮಾಗಳಲ್ಲಿ ನಾಯಕಿಯಾಗಿ ಹನಿ ರೋಸ್ ನಟಿಸಿದ್ದಾರೆ. ಮೋಹನ್ ಲಾಲ್, ಬಾಲಯ್ಯ ಅವರಂತಹ ದಿಗ್ಗಜ ನಟರಿಗೆ ನಾಯಕಿಯಾಗಿ ಮೋಡಿ ಮಾಡಿದ್ದಾರೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್‌ನ ಎಲಿಮಿನೇಟ್‌-1 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ, 8 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತ್ತು. 173 ರನ್‌ಗಳ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್‌ (Rajasthan Royals) ಇನ್ನು 6 ಎಸೆತ ಇರುವಂತೆಯೇ 6 ವಿಕೆಟ್‌ ನಷ್ಟಕ್ಕೆ 174 ರನ್‌ ಹೊಡೆದು ಜಯ ಸಾಧಿಸಿತು.

  • IPL 2024: ಆರ್‌ಸಿಬಿ ಹೃದಯವಿದ್ರಾವಕ ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ʻಡಿಕೆʼ

    IPL 2024: ಆರ್‌ಸಿಬಿ ಹೃದಯವಿದ್ರಾವಕ ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ʻಡಿಕೆʼ

    ಅಹಮದಾಬಾದ್‌: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್‌ ದಿನೇಶ್ ಕಾರ್ತಿಕ್ (Dinesh Karthik) ಅವರು ಇಂಡಿಯನ್ ಪ್ರೀಮಿಯರ್ ಲೀಗ್​​ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ 17ನೇ ಆವೃತ್ತಿ ಐಪಿಎಲ್ ಎಲಿಮಿನೇಟರ್ ಪಂದ್ಯವೇ ಡಿಕೆ ಪಾಲಿಗೆ ಕೊನೆಯದ್ದಾಗಿದೆ. ಆರ್​ಸಿಬಿ ಹೃದಯವಿದ್ರಾವಕ ಸೋಲಿನೊಂದಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ ಹೇಳಿದ್ದಾರೆ.

    ಪಂದ್ಯ ಮುಗಿಯುತ್ತಿದ್ದಂತೆ ತಮ್ಮ ವಿಕೆಟ್ ಕೀಪಿಂಗ್ ಗ್ಲೌಸ್‌ ತೆಗೆದು ಪ್ರೇಕ್ಷಕರತ್ತ ಕೈಬೀಸಿ ಧನ್ಯವಾದ ಅರ್ಪಿಸಿದ ದಿನೇಶ್​ ಕಾರ್ತಿಕ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಆಟಗಾರರಿಂದ ಭಾವನಾತ್ಮಕ ಗೌರವ ಪಡೆದುಕೊಂಡಿದ್ದಾರೆ. ಎದುರಾಳಿ ಆಟಗಾರರು ಹಸ್ತಲಾಘವ ಮಾಡುವ ಸಂದರ್ಭದಲ್ಲೂ ಡಿಕೆ ತೀವ್ರ ಭಾವುಕರಾಗಿದ್ದು ಕಂಡುಬಂದಿತ್ತು. ಮೈದಾನ ತೊರೆಯುವವರೆಗೂ ದಿನೇಶ್‌ ಕಾರ್ತಿಕ್‌ ಅವರ ಕಣ್ಣಲ್ಲಿ ನೀರು ತುಂಬಿತ್ತು. ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರನ್ನು ಅಪ್ಪಿಕೊಂಡು ಬೀಳ್ಕೊಡುಗೆ ನೀಡಿದರು. ಆದ್ರೆ ದಿನೇಶ್ ಕಾರ್ತಿಕ್ ಅಧಿಕೃತವಾಗಿ ಘೋಷಣೆ ಹೊರಡಿಸುವುದೊಂದೇ ಬಾಕಿಯಿದೆ.

    ದಿನೇಶ್‌ ಕಾರ್ತಿಕ್‌ ಟೂರ್ನಿ ಆರಂಭದಲ್ಲೇ ಇದು ತಮ್ಮ ಕೊನೆಯ ಐಪಿಎಲ್ (IPL 2024) ಎಂಬ ಸುಳಿವು ನೀಡಿದ್ದರು. ಉದ್ಘಾಟನಾ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತ ನಂತರ ಮಾತನಾಡಿದ್ದ ಡಿಕೆ, ಆರ್​ಸಿಬಿ ಪ್ಲೇಆಫ್ ತಲುಪಿದರೆ ಆಗ ಕೊನೆಯ ಪಂದ್ಯವಾಗುತ್ತದೆ ಎಂದು ಹೇಳಿದ್ದರು. 38 ವರ್ಷದ ಡಿಕೆ ಈಗ ಕೊನೆಗೂ ವಿದಾಯ ಹೇಳಿದ್ದಾರೆ. ಇದನ್ನೂ ಓದಿ: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ಭಗ್ನ – ರಾಜಸ್ಥಾನಕ್ಕೆ 4 ವಿಕೆಟ್‌ಗಳ ಜಯ

    ಡಿಕೆ ಐಪಿಎಲ್‌ ವೃತ್ತಿ ಜೀವನ ಹೇಗಿದೆ?
    17 ವರ್ಷಗಳ ಐಪಿಎಲ್​ನಲ್ಲಿ ಹಲವು ತಂಡಗಳ ಪರ ಆಡಿರುವ ದಿನೇಶ್ ಕಾರ್ತಿಕ್, ತಮ್ಮ ಐಪಿಎಲ್ ವೃತ್ತಿಜೀವನ ಪೂರ್ಣಗೊಳಿಸಿದ್ದಾರೆ. 2008ರಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ ತಂಡ ಸೇರಿದ್ದ ದಿನೇಶ್‌ ಕಾರ್ತಿಕ್‌, 2011ರಲ್ಲಿ ಕಿಂಗ್ಸ್‌ ಇಲವೆನ್‌ ಪಂಜಾಬ್‌ ಪಾಲಾದರು. 2012 ಮತ್ತು 2013ರಲ್ಲಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿದ್ದ ಡಿಕೆ, 2014ರಲ್ಲಿ ಮತ್ತೆ ಡೆಲ್ಲಿ ತಂಡ ಪ್ರತಿನಿಧಿಸಿದ್ದರು. 2015ರಲ್ಲಿ ಆರ್‌ಸಿಬಿ ಪರ ಆಡಿದ್ದ ದಿನೇಶ್‌ ಕಾರ್ತಿಕ್‌ 2016, 2017ರಲ್ಲಿ ಗುಜರಾತ್‌ ಲಯನ್ಸ್‌ ತಂಡದಲ್ಲಿ ಆಡಿದ್ದರು. ಬಳಿಕ 2021ರ ವರೆಗೆ ಕೆಕೆಆರ್‌ ತಂಡದಲ್ಲಿದ್ದ ದಿನೇಶ್‌ ಕಾರ್ತಿಕ್‌ 2022ರಲ್ಲಿ ಮತ್ತೆ ಆರ್‌ಸಿಬಿ ತಂಡಕ್ಕೆ ಎಂಟ್ರಿಕೊಟ್ಟರು. ಈವರೆಗೆ ದಿನೇಶ್‌ ಕಾರ್ತಿಕ್‌ ಆರ್‌ಸಿಬಿ ಪರ 973 ರನ್‌ ಗಳಿಸಿದ್ದಾರೆ. ಇದನ್ನೂ ಓದಿ: ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ – ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ದೀಪ್ತಿ!

    ಐಪಿಎಲ್‌ ವೃತ್ತಿ ಬದುಕಿನಲ್ಲಿ ದಿನೇಶ್‌ ಕಾರ್ತಿಕ್‌ ಅತಿಹೆಚ್ಚು ರನ್‌ ಗಳಿಸಿದ ಆಟಗಾರರ ಟಾಪ್‌-10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಿವಿಧ ಟೀಂಗಳಲ್ಲಿ ಆಡಿದ ಅನುಭವ ಹೊಂದಿರುವ ದಿನೇಶ್‌ ಕಾರ್ತಿ 257 ಪಂದ್ಯಗಳು ಹಾಗೂ 234 ಇನ್ನಿಂಗ್ಸ್‌ಗಳನ್ನಾಡಿ 4,842 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 22 ಅರ್ಧಶತಕ, 466 ಬೌಂಡರಿಗಳು ಹಾಗೂ 161 ಸಿಕ್ಸರ್‌ಗಳೂ ಸೇರಿವೆ. ವೈಯಕ್ತಿಕ ಗರಿಷ್ಠ ಸ್ಕೋರ್‌ 97 ರನ್‌ ಆಗಿದೆ. ಆರ್‌ಸಿಬಿ ಪರ ಆಡಿ ಫಿನಿಶರ್‌ ಖ್ಯಾತಿಯನ್ನೂ ದಿನೇಶ್‌ ಕಾರ್ತಿಕ್‌ ಪಡೆದಿದ್ದರು, ಆದರೂ ಆರ್‌ಸಿಬಿ ಕಪ್‌ ಗೆಲ್ಲಲಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಖಾಸಗಿ ಸಂಭಾಷಣೆ ಪ್ರಸಾರ ಮಾಡಿದ್ದಕ್ಕೆ ಐಪಿಎಲ್ ಪ್ರಸಾರಕರಿಗೆ ರೋಹಿತ್ ಶರ್ಮಾ ತರಾಟೆ