Tag: IPL 2024 Auction

  • IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

    IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

    ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auctio) ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್‌ ಸ್ಟಾರ್ಕ್‌ (Mitchell Starc) ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆಸೀಸ್‌ ತಂಡದ ನಾಯಕ 20.50 ಕೋಟಿ ರೂ.ಗೆ ಮಾರಾಟವಾಗಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದರು. ಆದ್ರೆ 2023ರ ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ತಂಡದ ಪಾಲಾಗಿ ದಾಖಲೆ ಬರೆದರು. ಇದನ್ನೂ ಓದಿ: IPL 2024 Auction: ದುಬಾರಿ ಆಟಗಾರ – 20.50 ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್‌ ಕಮ್ಮಿನ್ಸ್‌

    ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್‌ನಲ್ಲಿ ಸ್ಟಾರ್ಕ್‌ ಅವರನ್ನ ಖರೀದಿಸಲು ಗುಜರಾತ್‌ ಟೈಟಾನ್ಸ್‌ (Gujarat Taitans) ಹಾಗೂ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ನಡುವೆ ಹಣಾಹಣಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್‌ ಬಿಡ್‌ ಕೂಗಿ ಕೂಗಿ ಸುಸ್ತಾಗಿದ್ದರು. ತನ್ನ ಪರ್ಸ್‌ನಲ್ಲಿ 38.15 ಕೋಟಿ ರೂ. ಉಳಿಸಿಕೊಂಡಿದ್ದ ಗುಜರಾತ್‌ ಟೈಟಾನ್ಸ್‌ 24.50 ಕೋಟಿ ರೂ.ವರೆಗೂ ಬಿಡ್‌ ಮಾಡಿತ್ತು. ಆದ್ರೆ ಪಟ್ಟು ಬಿಡದ ಕೆಕೆಆರ್‌ ಜೋಳಿಗೆಯಲ್ಲಿ 32.70 ಕೋಟಿ ರೂ. ಇದ್ದರೂ 24.75 ಕೋಟಿ ರೂ.ಗೆ ಸ್ಟಾರ್ಕ್‌ ಅವರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು.

    ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಜಿದ್ದಾ-ಜಿದ್ದಿಯಲ್ಲಿ ಹೈದರಾಬಾದ್ ತಂಡ 20.50 ಕೋಟಿ ರೂ.ಗೆ ಬಿಡ್ ಮಾಡಿ ಪ್ಯಾಟ್‌ಕಮ್ಮಿನ್ಸ್ ಅವರನ್ನ ಖರೀದಿಸಿತು. ಇದನ್ನೂ ಓದಿ: IPL 2024 Auction: ಚೆನ್ನೈ ಪಾಲಾದ ಕನ್ನಡಿಗ ರಚಿನ್‌ – ಕಿವೀಸ್‌ ಫ್ಲೇವರ್‌ ಆಯ್ತು ಸೂಪರ್‌ ಕಿಂಗ್ಸ್‌!

  • IPL 2024 Auction: ಚೆನ್ನೈ ಪಾಲಾದ ಕನ್ನಡಿಗ ರಚಿನ್‌ – ಕಿವೀಸ್‌ ಫ್ಲೇವರ್‌ ಆಯ್ತು ಸೂಪರ್‌ ಕಿಂಗ್ಸ್‌!

    IPL 2024 Auction: ಚೆನ್ನೈ ಪಾಲಾದ ಕನ್ನಡಿಗ ರಚಿನ್‌ – ಕಿವೀಸ್‌ ಫ್ಲೇವರ್‌ ಆಯ್ತು ಸೂಪರ್‌ ಕಿಂಗ್ಸ್‌!

    ದುಬೈ: ಐಪಿಎಲ್‌ ಮಿನಿ ಹರಾಜಿನಲ್ಲಿ ಬೆಂಗಳೂರು ಮೂಲದ ರಚಿನ್‌ ರವೀಂದ್ರ (Rachin Ravindra) ಚೆನ್ನೈ ಸೂಪರ್‌ಕಿಂಗ್ಸ್‌ (CSK) ತಂಡದ ಪಾಲಾಗಿದ್ದಾರೆ. ಇದರಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ಅಭಿಮಾನಿಗಳು ಕಿವೀಸ್‌ ಫ್ಲೇವರ್‌ ಬಿರುದು ಕೊಟ್ಟಿದ್ದಾರೆ.

    ಈಗಾಗಲೇ ಕಿವೀಸ್‌ ತಂಡದ ಡಿವೋನ್‌ ಕಾನ್ವೆ, ಮಿಚೆಲ್‌ ಸ್ಯಾಂಟ್ನರ್‌ ಸಿಎಸ್‌ಕೆ ತಂಡದಲ್ಲಿ ಮಿಂಚಿದ್ದಾರೆ. ಇದೀಗ ಸ್ಟಾರ್‌ ಆಲ್‌ರೌಂಡರ್‌ ರಚಿನ್‌ ರವೀಂದ್ರ ಅವರನ್ನ 1.80 ಕೋಟಿ ರೂ.ಗೆ ಹಾಗೂ ಡೇರಿಲ್‌ ಮಿಚೆಲ್‌ (Daryl Mitchell) ಅವರನ್ನ 14 ಕೋಟಿ ರೂ.ಗೆ ಖರೀದಿಸಿದೆ. ಈ ಮೂಲಕ ತಂಡದ ಬಲ ಮತ್ತಷ್ಟು ಹೆಚ್ಚಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್‌ನಲ್ಲಿದ್ದ ಶಾರ್ದೂಲ್‌ ಠಾಕೂರ್‌ ಅವರನ್ನು 4 ಕೋಟಿ ರೂ.ಗೆ ಚೆನ್ನೈ ತಂಡ ಖರೀದಿಸಿದೆ. ಇದನ್ನೂ ಓದಿ: IPL ಇತಿಹಾಸದಲ್ಲೇ ದುಬಾರಿ ಆಟಗಾರ – 20.50 ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್‌ ಕಮ್ಮಿನ್ಸ್‌

    ಅಲ್ಲದೇ ಹರ್ಷಲ್‌ ಪಟೇಲ್‌ ಅವರನ್ನು 11.75 ಕೋಟಿ ರೂ.ಗೆ ಪಂಜಾಬ್‌ ಕಿಂಗ್ಸ್‌, ಅಲ್ಜಾರಿ ಜೋಸೆಫ್ ಅವರನ್ನ 11.50 ಕೋಟಿ ರೂ.ಗೆ ರಾಯಲ್‌ ಚಾಲೆಂಜರ್ಸ್‌, ಉಮೇಶ್‌ ಯಾದವ್‌ ಅವರನ್ನ 5.80 ಕೋಟಿ ರೂ.ಗೆ ಗುಜರಾತ್‌ ಟೈಟಾನ್ಸ್‌, ದಕ್ಷಿಣ ಆಫ್ರಿಕಾದ ಜೆರಾಲ್ಟ್‌ ಕೋಟ್ಜಿ ಅವರನ್ನ 5 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್‌ ಖರೀದಿ ಮಾಡಿದೆ.

    ಇನ್ನೂ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ್ದ ಟ್ರಾವಿಸ್‌ ಹೆಡ್‌ 6.80 ಕೋಟಿ ರೂ.ಗೆ ಎಸ್‌ಆರ್‌ಹೆಚ್‌ ಪಾಲಾದರೆ, ವೆಸ್ಟ್‌ ಇಂಡೀಸ್‌ ತಂಡದ ನಾಯಕ ರೋವ್ಮನ್‌ ಪೋವೆಲ್‌ 7.40 ಕೋಟಿ ರೂ.ಗೆ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಬಿಕರಿಯಾಗಿದ್ದಾರೆ. ಇದನ್ನೂ ಓದಿ: ಅಚ್ಚರಿ ಬೆಳವಣಿಗೆಯಲ್ಲಿ ಮುಂಬೈ ಸಾರಥಿಯಾದ ಪಾಂಡ್ಯ – ಹಿಟ್‌ಮ್ಯಾನ್‌ ಸ್ಥಾನ ಏನು?

    20.50ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್‌ ಕಮ್ಮಿನ್ಸ್‌:
    ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಟಗಾರ ಹಾಗೂ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಬರೋಬ್ಬರಿ 20.50 ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

  • IPL 2024 Auction: ದುಬಾರಿ ಆಟಗಾರ – 20.50 ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್‌ ಕಮ್ಮಿನ್ಸ್‌

    IPL 2024 Auction: ದುಬಾರಿ ಆಟಗಾರ – 20.50 ಕೋಟಿ ರೂ.ಗೆ ಬಿಕರಿಯಾದ ಪ್ಯಾಟ್‌ ಕಮ್ಮಿನ್ಸ್‌

    ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auction) ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಟಗಾರ ಹಾಗೂ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಬರೋಬ್ಬರಿ 20.50 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ.

    2023ರ ಐಪಿಎಲ್‌ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್‌ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ (Sam Curran) 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆದರೀಗ ಏಕದಿನ ವಿಶ್ವಕಪ್‌ (ODI World Cup) ವಿಜೇತ ತಂಡದ ಸಾರಥ್ಯ ವಹಿಸಿದ್ದ ಪ್ಯಾಟ್‌ ಕಮ್ಮಿನ್ಸ್‌ ದುಬಾರಿ ಮೊತ್ತಕ್ಕೆ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾಗಿದ್ದಾರೆ. ಇದನ್ನೂ ಓದಿ: ಪಾಂಡ್ಯ ನಾಯಕತ್ವ ವರವೋ ಶಾಪವೋ – ಕ್ಯಾಪ್ಟನ್‌ ಆದ ಒಂದೇ ಗಂಟೆಯಲ್ಲಿ 4 ಲಕ್ಷ ಫಾಲೋವರ್ಸ್‌ ಕಳೆದುಕೊಂಡ ಮುಂಬೈ

    ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‍ನಲ್ಲಿ ಪ್ಯಾಟ್‌ ಕಮ್ಮಿನ್ಸ್‌ ಅವರನ್ನ ಖರೀದಿಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ನಡುವೆ ಜಿದ್ದಾ-ಜಿದ್ದಿ ನಡೆದಿತ್ತು. ತನ್ನ ಪರ್ಸ್‌ನಲ್ಲಿ 23.25 ಕೋಟಿ ರೂ.ಗಳನ್ನಷ್ಟೇ ಉಳಿಸಿಕೊಂಡಿದ್ದ ಆರ್‌ಸಿಬಿ 20.25 ಕೋಟಿ ರೂ.ವರೆಗೂ ಬಿಡ್‌ ಮಾಡಿತ್ತು. ಅಂತಿಮವಾಗಿ ಹೈದರಾಬಾದ್‌ (Sunrisers Hyderabad) ತಂಡ 20.50 ಕೋಟಿ ರೂ.ಗೆ ಬಿಡ್‌ ಮಾಡಿ ಪ್ಯಾಟ್‌ಕಮ್ಮಿನ್ಸ್‌ ಅವರನ್ನ ತನ್ನತ್ತ ಸೆಳೆದುಕೊಂಡಿತು. ಇದನ್ನೂ ಓದಿ: ಅರ್ಷ-ಆವೇಶ ಘಾತುಕ ಬೌಲಿಂಗ್‌ – ಶ್ರೇಯಸ್‌, ಸುದರ್ಶನ್‌ ಅರ್ಧಶತಕಗಳ ಮಿಂಚು – ಭಾರತಕ್ಕೆ 8 ವಿಕೆಟ್‌ಗಳ ಜಯ

    ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕತ್ವ ವಹಿಸಿದ್ದ ಪ್ಯಾಟ್‌ ಕಮ್ಮಿನ್ಸ್‌ ವಿಶ್ವಕಪ್‌ ಗೆಲ್ಲಿಸುವಲ್ಲಿ ಯಶಸ್ವಿಯಾದರು. ಆಸೀಸ್‌ ತಂಡ 6ನೇ ಬಾರಿಗೆ ಟ್ರೋಫಿಗೆದ್ದ ಸಾಧನೆ ಮಾಡಲು ಕಾರಣರಾದರು. ಇದಕ್ಕೂ ಮುನ್ನ ಕಮ್ಮಿನ್ಸ್‌ ನಾಯಕತ್ವದಲ್ಲೇ ಆಸೀಸ್‌ ತಂಡ ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಪಟ್ಟವನ್ನೂ ಗೆದ್ದುಕೊಂಡಿತ್ತು. ಈ ಮೂಲಕ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಚಾಂಪಿಯನ್‌ ಆದ ಮೊದಲ ತಂಡ ಆಸೀಸ್‌ ಎಂಬ ಹೆಗ್ಗಳಿಗೆ ಪಾತ್ರವಾಯಿತು. ಈ ಹಿನ್ನೆಲೆಯಲ್ಲಿ ಪ್ಯಾಟ್‌ ಕಮ್ಮಿನ್ಸ್‌ ಅವರ ಮೇಲಿನ ನಿರೀಕ್ಷೆ ಹೆಚ್ಚಾಗಿದ್ದು, ಅಧಿಕ ಮೊತ್ತಕ್ಕೆ ಬಿಡ್‌ ಮಾಡಲಾಗಿದೆ.

  • IPL 2024 Auction: ಇಂದು ಮಿನಿ ಹರಾಜು – RCBಗಿಂತಲೂ ಚೆನ್ನೈ, ಗುಜರಾತ್‌ ಜೋಳಿಗೆಯಲ್ಲಿದೆ ಹೆಚ್ಚು ಹಣ

    IPL 2024 Auction: ಇಂದು ಮಿನಿ ಹರಾಜು – RCBಗಿಂತಲೂ ಚೆನ್ನೈ, ಗುಜರಾತ್‌ ಜೋಳಿಗೆಯಲ್ಲಿದೆ ಹೆಚ್ಚು ಹಣ

    ದುಬೈ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಮಿನಿ ಹರಾಜು (IPL 2024 Auction) ಪ್ರಕ್ರಿಯೆ ಮಂಗಳವಾರ (ಇಂದು) ದುಬೈನಲ್ಲಿ ನಡೆಯಲಿದೆ.

    ದುಬೈನ ಕೋಕಾ ಕೋಲಾ ಅರೆನಾದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಮಿನಿ ಹರಾಜಿಗೆ ಒಟ್ಟು 333 ಆಟಗಾರರನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿದೆ. ಈ ಪೈಕಿ 214 ಭಾರತೀಯ ಆಟಗಾರರು ಹಾಗೂ 119 ವಿದೇಶಿ ಆಟಗಾರರು ಇದ್ದಾರೆ. ಎಲ್ಲಾ 10 ಫ್ರಾಂಚೈಸಿಗಳು ತಮ್ಮ ತಂಡವನ್ನು ಮತ್ತಷ್ಟು ಬಲಪಡಿಸಲು ಎದುರುನೋಡುತ್ತಿದ್ದು, ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿವೆ. ಅದರಲ್ಲೂ ಆಸೀಸ್‌ ಆಟಗಾರರಾದ ಮಿಚೆಲ್‌ ಸ್ಟಾರ್ಕ್‌ (Mitchell Starc), ಪ್ಯಾಟ್‌ ಕಮ್ಮಿನ್ಸ್‌, ಟ್ರಾವಿಸ್‌ ಹೆಡ್‌, ಕಿವೀಸ್‌ನ ರಚಿನ್‌ ರವೀಂದ್ರ (Rachin Ravindra), ಡೇರಿಲ್‌ ಮಿಚೆಲ್‌ ಹಾಗೂ ದಕ್ಷಿಣ ಆಫ್ರಿಕಾದ ವೇಗಿ ಜೆರಾಲ್ಡ್ ಕೋಟ್ಜಿ ಮೇಲೆ ಫ್ರಾಂಚೈಸಿಗಳು ಕಣ್ಣಿಟ್ಟಿವೆ.

    2023ರ ಐಪಿಎಲ್‌ ಟೂರ್ನಿಗೆ ಇಂಗ್ಲೆಂಡ್‌ನ ಸ್ಟಾರ್‌ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ 18.50 ಕೋಟಿ ರೂ.ಗೆ ಬಿಕರಿಯಾಗಿ ಇತಿಹಾಸ ನಿರ್ಮಿಸಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಯಾರು ಹೆಚ್ಚಿನ ಬೆಲೆಗೆ ಹರಾಜಾಗುತ್ತಾರೆ ಅನ್ನೂದು ಕುತೂಹಲ ಮೂಡಿಸಿದೆ.

    ಯಾವ ಫ್ರಾಂಚೈಸಿಯಲ್ಲಿ ಎಷ್ಟು ಹಣ ಬಾಕಿಯಿದೆ? – ರೂ.ಗಳಲ್ಲಿ ನೀಡಲಾಗಿದೆ:

    ಚೆನ್ನೈ ಸೂಪರ್‌ ಕಿಂಗ್ಸ್‌
    ಖರ್ಚು ಮಾಡಿದ ಒಟ್ಟು ಹಣ – 68.60 ಕೋಟಿ
    ಬಾಕಿ ಉಳಿದಿರುವ ಹಣ – 31.40 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    ಡೆಲ್ಲಿ ಕ್ಯಾಪಿಟಲ್ಸ್‌
    ಖರ್ಚು ಮಾಡಿದ ಒಟ್ಟು ಹಣ – 71.05 ಕೋಟಿ
    ಬಾಕಿ ಉಳಿದಿರುವ ಹಣ – 28.95 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 9

    ಗುಜರಾತ್‌ ಟೈಟಾನ್ಸ್
    ಖರ್ಚು ಮಾಡಿದ ಒಟ್ಟು ಹಣ – 61.85 ಕೋಟಿ
    ಬಾಕಿ ಉಳಿದಿರುವ ಹಣ – 38.15 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಕೋಲ್ಕತ್ತಾ ನೈಟ್‌ರೈಡರ್ಸ್‌
    ಖರ್ಚು ಮಾಡಿದ ಒಟ್ಟು ಹಣ – 67.3 ಕೋಟಿ
    ಬಾಕಿ ಉಳಿದಿರುವ ಹಣ – 32.70 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 12

    ಲಕ್ನೋ ಸೂಪರ್‌ ಜೈಂಟ್ಸ್‌
    ಖರ್ಚು ಮಾಡಿದ ಒಟ್ಟು ಹಣ – 86.85 ಕೋಟಿ
    ಬಾಕಿ ಉಳಿದಿರುವ ಹಣ – 13.15 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    ಮುಂಬೈ ಇಂಡಿಯನ್ಸ್
    ಖರ್ಚು ಮಾಡಿದ ಒಟ್ಟು ಹಣ -‌ 82.25 ಕೋಟಿ
    ಬಾಕಿ ಉಳಿದಿರುವ ಹಣ – 17.75 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಪಂಜಾಬ್‌ ಕಿಂಗ್ಸ್‌
    ಖರ್ಚು ಮಾಡಿದ ಒಟ್ಟು ಹಣ – 70.90 ಕೋಟಿ
    ಬಾಕಿ ಉಳಿದಿರುವ ಹಣ – 29.10 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು
    ಖರ್ಚು ಮಾಡಿದ ಒಟ್ಟು ಹಣ – 76.75
    ಬಾಕಿ ಉಳಿದಿರುವ ಹಣ – 23.25
    ಲಭ್ಯವಿರುವ ಸ್ಲಾಟ್‌ಗಳು – 6

    ರಾಜಸ್ಥಾನ್‌ ರಾಯಲ್ಸ್‌
    ಖರ್ಚು ಮಾಡಿದ ಒಟ್ಟು ಹಣ – 85.50 ಕೋಟಿ
    ಬಾಕಿ ಉಳಿದಿರುವ ಹಣ – 14.50 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಸನ್‌ ರೈಸರ್ಸ್‌ ಹೈದರಾಬಾದ್‌
    ಖರ್ಚು ಮಾಡಿದ ಒಟ್ಟು ಹಣ – 66 ಕೋಟಿ
    ಬಾಕಿ ಉಳಿದಿರುವ ಹಣ – 34 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    10 ತಂಡಗಳ ಲೆಕ್ಕಾಚಾರ
    ತಂಡಗಳಿಗೆ ನಿಗದಿ ಮಾಡಿದ ಹಣ – 100 ಕೋಟಿ (ತಲಾ)
    ಒಟ್ಟು ಖರ್ಚು ಮಾಡಿರುವ ಹಣ – 737.05 ಕೋಟಿ
    ಬಾಕಿ ಉಳಿಸಿಕೊಂಡಿರುವ ಹಣ – 262.95 ಕೋಟಿ
    ಬಾಕಿ ಉಳಿದಿರುವ ಸ್ಲಾಟ್‌ಗಳು – 77

  • IPL Mock Auction: 18.50 ಕೋಟಿ ರೂ.ಗೆ RCB ಪಾಲಾದ ಮಿಚೆಲ್‌ ಸ್ಟಾರ್ಕ್‌ – ಯಾರ ಪರ್ಸ್‌ನಲ್ಲಿ ಎಷ್ಟು ಹಣವಿದೆ?

    IPL Mock Auction: 18.50 ಕೋಟಿ ರೂ.ಗೆ RCB ಪಾಲಾದ ಮಿಚೆಲ್‌ ಸ್ಟಾರ್ಕ್‌ – ಯಾರ ಪರ್ಸ್‌ನಲ್ಲಿ ಎಷ್ಟು ಹಣವಿದೆ?

    ಮುಂಬೈ: ಬಹುನಿರೀಕ್ಷಿತ 2024ರ ಐಪಿಎಲ್‌ ಹರಾಜು (IPL 2024 Auction) ಪ್ರಕ್ರಿಯೆ ಮಂಗಳವಾರ (ಡಿ.19) ದುಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ.

    10 ಫ್ರಾಂಚೈಸಿಗಳು ತಂಡವನ್ನು ಇನ್ನಷ್ಟು ಬಲಪಡಿಸಲು ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿವೆ. ಅದರಲ್ಲೂ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಆಸೀಸ್‌ ಆಟಗಾರರ ಮೇಲೆ ಕಣ್ಣು ನೆಟ್ಟಿದೆ. ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿದ ಟ್ರಾವಿಸ್‌ ಹೆಡ್‌ (Travis Head), ಮಾರಕ ಬೌಲಿಂಗ್‌ ದಾಳಿ ನಡೆಸಿದ ಮಿಚೆಲ್‌ ಸ್ಟಾರ್ಕ್‌ (Mitchell Starc) ಹಾಗೂ ಪ್ಯಾಟ್‌ ಕಮ್ಮಿನ್ಸ್‌ ಅವರ ಮೇಲೆ ಫ್ರಾಂಚೈಸಿಗಳು ಗಮನಹರಿಸಿವೆ.

    ವಿಶ್ವಕಪ್‌ನಲ್ಲಿ ಮಿಂಚಿದ ಕಿವೀಸ್‌ ಆಟಗಾರರ ಮೇಲೂ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಮಿಚೆಲ್‌‌ ಸ್ಟಾರ್ಕ್‌ ಅವರನ್ನು ಆರ್‌ಸಿಬಿ ಹಾಗೂ ರಚಿನ್‌ ರವೀಂದ್ರ (Rachin Ravindra) ಅವರನ್ನು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: IPL 2024 Retention: 10 ತಂಡಗಳಲ್ಲಿ 173 ಜನ ಸೇಫ್‌ – 50 ಆಟಗಾರರಿಗೆ ಗೇಟ್‌ಪಾಸ್‌ – ಇಲ್ಲಿದೆ ಡಿಟೇಲ್ಸ್‌

    ಸೋಮವಾರ (ಇಂದು) ಜಿಯೋಸಿನಿಮಾ ನಡೆದ ಅಣುಕು ಹರಾಜಿನಲ್ಲಿ ಆಸೀಸ್‌ನ ಮಿಚೆಲ್‌ ಸ್ಟಾರ್ಕ್‌ ದಾಖಲೆಯ 18.50 ಕೋಟಿ ರೂ.ಗಳಿಗೆ ಆರ್‌ಸಿಬಿ ಪಾಲಾಗಿದ್ದಾರೆ. ಇನ್ನುಳಿದಂತೆ ಜೆರಾಲ್ಡ್ ಕೋಟ್ಜಿ 18 ಕೋಟಿ ರೂ.ಗೆ ಗುಜರಾತ್‌ ಟೈಟಾನ್ಸ್‌ ಪರ, ಪ್ಯಾಟ್‌ ಕಮ್ಮಿನ್ಸ್‌ 17.50 ಕೋಟಿ ರೂ.ಗೆ ಹೈದರಾಬಾದ್‌ ಪರ, ಶಾರ್ದೂಲ್‌ ಠಾಕೂರ್‌ 14 ಕೋಟಿ ರೂ.ಗೆ ಕಿಂಗ್ಸ್‌ ಪಂಜಾಬ್‌ ಪರ ಹಾಗೂ ದಿಲ್ಶಾನ್‌ ಮದುಸಂಕ 10.50 ಕೋಟಿ ರೂ.ಗಳಿಗೆ ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಕರಿಯಾಗಿದ್ದಾರೆ.

    ಐಪಿಎಲ್‌ ಇತಿಹಾಸದಲ್ಲಿ ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ 18.50 ಕೋಟಿ ರೂ.ಗೆ ಹರಾಜಾಗಿರುವುದು ದಾಖಲೆಯಾಗಿದೆ. ಈ ಬಾರಿ ಯಾರು ದುಬಾರಿಯಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024 Auction: ರಚಿನ್‌ ರವೀಂದ್ರ, ಮಿಚೆಲ್‌ ಸ್ಟಾರ್ಕ್‌ ಸೇರಿ 1,116 ಆಟಗಾರರು ನೋಂದಣಿ

    ಯಾವ ಫ್ರಾಂಚೈಸಿಯಲ್ಲಿ ಎಷ್ಟು ಹಣ ಬಾಕಿಯಿದೆ?

    ಚೆನ್ನೈ ಸೂಪರ್‌ ಕಿಂಗ್ಸ್‌

    ಖರ್ಚು ಮಾಡಿದ ಒಟ್ಟು ಹಣ – 68.6 ಕೋಟಿ
    ಬಾಕಿ ಉಳಿದಿರುವ ಹಣ – 31.40 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    ಡೆಲ್ಲಿ ಕ್ಯಾಪಿಟಲ್ಸ್‌

    ಖರ್ಚು ಮಾಡಿದ ಒಟ್ಟು ಹಣ – 71.05 ಕೋಟಿ
    ಬಾಕಿ ಉಳಿದಿರುವ ಹಣ – 28.95 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 9

    ಗುಜರಾತ್‌ ಟೈಟಾನ್ಸ್

    ಖರ್ಚು ಮಾಡಿದ ಒಟ್ಟು ಹಣ – 61.85 ಕೋಟಿ
    ಬಾಕಿ ಉಳಿದಿರುವ ಹಣ – 38.15 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಕೋಲ್ಕತ್ತಾ ನೈಟ್‌ರೈಡರ್ಸ್‌

    ಖರ್ಚು ಮಾಡಿದ ಒಟ್ಟು ಹಣ – 67.3 ಕೋಟಿ
    ಬಾಕಿ ಉಳಿದಿರುವ ಹಣ – 32.70 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 12

    ಲಕ್ನೋ ಸೂಪರ್‌ ಜೈಂಟ್ಸ್‌

    ಖರ್ಚು ಮಾಡಿದ ಒಟ್ಟು ಹಣ – 86.85 ಕೋಟಿ
    ಬಾಕಿ ಉಳಿದಿರುವ ಹಣ – 13.15 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    ಮುಂಬೈ ಇಂಡಿಯನ್ಸ್

    ಖರ್ಚು ಮಾಡಿದ ಒಟ್ಟು ಹಣ -‌ 82.25 ಕೋಟಿ
    ಬಾಕಿ ಉಳಿದಿರುವ ಹಣ – 17.75 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಪಂಜಾಬ್‌ ಕಿಂಗ್ಸ್‌

    ಖರ್ಚು ಮಾಡಿದ ಒಟ್ಟು ಹಣ – 70.9 ಕೋಟಿ
    ಬಾಕಿ ಉಳಿದಿರುವ ಹಣ – 29.1 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಆರ್‌ಸಿಬಿ

    ಖರ್ಚು ಮಾಡಿದ ಒಟ್ಟು ಹಣ – 76.75
    ಬಾಕಿ ಉಳಿದಿರುವ ಹಣ – 23.25
    ಲಭ್ಯವಿರುವ ಸ್ಲಾಟ್‌ಗಳು – 6

    ರಾಜಸ್ಥಾನ್‌ ರಾಯಲ್ಸ್‌

    ಖರ್ಚು ಮಾಡಿದ ಒಟ್ಟು ಹಣ – 85.5 ಕೋಟಿ
    ಬಾಕಿ ಉಳಿದಿರುವ ಹಣ – 14.50 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 8

    ಸನ್‌ ರೈಸರ್ಸ್‌ ಹೈದರಾಬಾದ್‌

    ಖರ್ಚು ಮಾಡಿದ ಒಟ್ಟು ಹಣ – 66 ಕೋಟಿ
    ಬಾಕಿ ಉಳಿದಿರುವ ಹಣ – 34 ಕೋಟಿ
    ಲಭ್ಯವಿರುವ ಸ್ಲಾಟ್‌ಗಳು – 6

    10 ತಂಡಗಳ ಲೆಕ್ಕಾಚಾರ

    ತಂಡಗಳಿಗೆ ನಿಗದಿ ಮಾಡಿದ ಹಣ – 100 ಕೋಟಿ (ತಲಾ)
    ಒಟ್ಟು ಖರ್ಚು ಮಾಡಿರುವ ಹಣ – 737.05 ಕೋಟಿ
    ಬಾಕಿ ಉಳಿಸಿಕೊಂಡಿರುವ ಹಣ – 262.95 ಕೋಟಿ
    ಬಾಕಿ ಉಳಿದಿರುವ ಸ್ಲಾಟ್‌ಗಳು – 77

  • ಐಪಿಎಲ್ 2024 ಮಿನಿ ಹರಾಜಿನ ಅಧಿಕೃತ ದಿನಾಂಕ ಪ್ರಕಟ – 1166 ಆಟಗಾರರು ನೋಂದಣಿ

    ಐಪಿಎಲ್ 2024 ಮಿನಿ ಹರಾಜಿನ ಅಧಿಕೃತ ದಿನಾಂಕ ಪ್ರಕಟ – 1166 ಆಟಗಾರರು ನೋಂದಣಿ

    ನವದೆಹಲಿ: ಐಪಿಎಲ್ 2024ರ ಮಿನಿ ಹರಾಜು (IPL 2024 Auction) ಪ್ರಕ್ರಿಯೆಗೆ ಅಧಿಕೃತ ದಿನಾಂಕ ಪ್ರಕಟಗೊಂಡಿದೆ. ಡಿ.19ರಂದು ದುಬೈನಲ್ಲಿ ಐಪಿಎಲ್ 2024ರ ಹರಾಜು ಪ್ರಕ್ರಿಯೆ ನಡೆಸುವುದರ ಕುರಿತು ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಮಾಹಿತಿ ನೀಡಿದೆ. ಇದೇ ಮೊದಲ ಬಾರಿಗೆ ವಿದೇಶದಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ.

    ಮಿನಿ ಹರಾಜಿಗೆ 1166 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 830 ಭಾರತೀಯರಾಗಿದ್ದಾರೆ. ಉಳಿದ 336 ಆಟಗಾರರು ವಿದೇಶಿಗರಾಗಿದ್ದಾರೆ. 1166 ಆಟಗಾರರು ಐಪಿಎಲ್ ತಂಡ ಸೇರಿಕೊಳ್ಳುವ ಉತ್ಸಾಹ ತೋರಿದ್ದರೂ, 10 ತಂಡಗಳು ಭರ್ತಿ ಮಾಡಬೇಕಿರುವುದು ಕೇವಲ 77 ಸ್ಲಾಟ್ ಮಾತ್ರ. ಹೀಗಾಗಿ ಹರಾಜಿನಲ್ಲಿ ಪಾಲ್ಗೊಂಡಿರುವ 1000ಕ್ಕೂ ಅಧಿಕ ಆಟಗಾರರಿಗೆ ನಿರಾಸೆಯಾಗಲಿದೆ. ಇದನ್ನೂ ಓದಿ: WPL 2024 ಹರಾಜಿಗೆ 165 ಪ್ಲೇಯರ್ಸ್‌ ನೋಂದಣಿ – ಯಾರಾಗ್ತಾರೆ ಈ ಬಾರಿಯ ಟಾಪ್‌ ಪ್ಲೇಯರ್‌?

    ಅಲ್ಲದೇ, ಶಾರ್ಟ್‍ಲಿಸ್ಟ್ ಮಾಡಿದ ಆಟಗಾರರು ಮಾತ್ರ ಅಂತಿಮ ಪಟ್ಟಿಯಲ್ಲಿ ಇರಲಿದ್ದಾರೆ. ಶೀಘ್ರದಲ್ಲೇ ಹರಾಜಿಗೆ ಲಭ್ಯವಿರುವ ಆಟಗಾರರ ಪಟ್ಟಿಯನ್ನು ಐಪಿಎಲ್ ಪ್ರಕಟಿಸಲಿದೆ. ಡಿ.12ರ ವರೆಗೆ ಟ್ರೇಡಿಂಗ್ ವಿಂಡೋ ತೆರೆದಿರಲಿದ್ದು, ಆಟಗಾರರ ಬದಲಾಗುವ ಸಾಧ್ಯತೆ ಕೂಡ ಇದೆ.

    ಈ ಬಾರಿಯ ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರು ಹರಾಜಿನಲ್ಲಿ ಕೇಂದ್ರಬಿಂದು ಆಗಲಿದ್ದಾರೆ. ಟೀಂ ಇಂಡಿಯಾದ ಆಟಗಾರರಾದ ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್, ಉಮೇಶ್ ಯಾದವ್ ಭಾರಿ ಮೊತ್ತಕ್ಕೆ ತಂಡ ಸೇರಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಈಗಾಗಲೇ ಈ ಆಟಗಾರರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ – ಟ್ರಕ್‌ಗೆ ಲಗೇಜ್‌ ಲೋಡ್‌ ಮಾಡಿದ ಆಟಗಾರರು

  • IPL 2024 Auction: ರಚಿನ್‌ ರವೀಂದ್ರ, ಮಿಚೆಲ್‌ ಸ್ಟಾರ್ಕ್‌ ಸೇರಿ 1,116 ಆಟಗಾರರು ನೋಂದಣಿ

    IPL 2024 Auction: ರಚಿನ್‌ ರವೀಂದ್ರ, ಮಿಚೆಲ್‌ ಸ್ಟಾರ್ಕ್‌ ಸೇರಿ 1,116 ಆಟಗಾರರು ನೋಂದಣಿ

    -830 ಭಾರತೀಯರು, 336 ವಿದೇಶಿ ಆಟಗಾರರು ಹರಾಜಿಗೆ ನೋಂದಣಿ

    ಅಬುಧಾಬಿ: ಮುಂಬರುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಆಟಗಾರರ ಮಿನಿ ಹರಾಜು ಡಿಸೆಂಬರ್ 19 ರಂದು ನಡೆಯಲಿದೆ. ನವೆಂಬರ್ 30ರ ವರೆಗೂ ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು (Auction Players Registration) ಆಟಗಾರರಿಗೆ ಅವಕಾಶವಿತ್ತು. ಶುಕ್ರವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಹಂಚಿಕೊಂಡ ಪಟ್ಟಿಯಲ್ಲಿ ಒಟ್ಟು 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

    2023ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅನೇಕ ಆಟಗಾರರು ಐಪಿಎಲ್‌ ಹರಾಜಿಗೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಕಿವೀಸ್‌ ಆಟಗಾರ ರಚಿನ್‌ ರವೀಂದ್ರ (Rachin Ravindra), ಡೇರಿಲ್‌ ಮಿಚೆಲ್‌, ವಿಶ್ವಕಪ್‌ ವಿಜೇತ ಆಸೀಸ್‌ ತಂಡದಿಂದ ವೇಗಿ ಮಿಚೆಲ್‌ ಸ್ಟಾರ್ಕ್‌ (Mitchell Starc), ಪ್ಯಾಟ್‌ ಕಮ್ಮಿನ್ಸ್‌, ಟ್ರಾವಿಸ್‌ ಹೆಡ್‌ (Travis Head) ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ರಚಿನ್‌ ರವಿಂದ್ರ ಅವರ ಮೂಲ ಬೆಲೆ 50 ಲಕ್ಷ ರೂ.ಗೆ ನಿಗದಿಯಾಗಿದೆ. ಇದನ್ನೂ ಓದಿ: ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ

    ಆಸೀಸ್‌ ಎಡಗೈ ವೇಗಿ ಮಿಚೆಲ್‌ ಸ್ಟಾರ್ಕ್‌ 2015ರಲ್ಲಿ ಐಪಿಎಲ್‌ನಲ್ಲಿ ಆಡಿದ್ದರು. ಆರ್‌ಸಿಬಿ ತಂಡದಲ್ಲಿ ಮಿಂಚಿದ್ದರು. ಆ ನಂತರ ಐಪಿಎಲ್‌ನಿಂದ ದೂರ ಉಳಿದಿದ್ದರು. 2023ರಲ್ಲಿ‌ ಆಶಸ್‌ ಟೂರ್ನಿಯಿಂದಾಗಿ ಐಪಿಎಲ್‌ನಿಂದ ಹೊರಗುಳಿದ್ದರು. ಇನ್ನೂ ಜೋಶ್‌ ಹೇಝಲ್ವುಡ್‌, ಲೀಗ್‌ ಸುತ್ತಿನ ಕೆಲ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನವಿದೆ. ಹೀಗಿದ್ದೂ ಅವರು ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಇದನ್ನೂ ಓದಿ: 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

    ಈ ಬಾರಿ ಐಪಿಎಲ್‌ ಮಿನಿ ಹರಾಜಿಗೆ ನೋಂದಣೆ ಮಾಡಿಕೊಂಡಿರುವ ಒಟ್ಟು 1,166 ಆಟಗಾರರ ಪೈಕಿ 830 ಭಾರತೀಯ ಆಟಗಾರರಿದ್ದರೆ, 336 ವಿದೇಶಿ ಆಟಗಾರರು ಇದ್ದಾರೆ. ಈ ಪಟ್ಟಿಯಲ್ಲಿ 212 ಕ್ಯಾಪ್ಡ್, 909 ಅನ್‌ಕ್ಯಾಪ್ಡ್ ಮತ್ತು 45 ಅಸೋಸಿಯೇಟ್ ದೇಶದ ಆಟಗಾರರು ಸೇರಿದ್ದಾರೆ. 830 ಭಾರತೀಯರ ಪೈಕಿ ವರುಣ್ ಆರೋನ್, ಕೆ.ಎಸ್ ಭರತ್, ಕೇದಾರ್ ಜಾಧವ್, ಸಿದ್ಧಾರ್ಥ್ ಕೌಲ್, ಧವಳ್ ಕುಲಕರ್ಣಿ, ಶಿವಂ ಮಾವಿ, ಶಹಬಾಜ್ ನದೀಮ್, ಕರುಣ್ ನಾಯರ್, ಮನೀಶ್ ಪಾಂಡೆ, ಚೇತನ್ ಸಕಾರಿಯ, ಮನ್‌ದೀಪ್ ಸಿಂಗ್, ಬರೀಂದರ್ ಸ್ರಾನ್ ಸೇರಿದಂತೆ 18 ಆಟಗಾರರಿದ್ದಾರೆ. ಇದನ್ನೂ ಓದಿ: ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

  • IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ

    IPL 2024 Retention: ಭಾರೀ ಹೈಡ್ರಾಮಾ ಬಳಿಕ ಪಾಂಡ್ಯ ಮುಂಬೈಗೆ

    ಮುಂಬೈ: ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ (Hardik Pandya) ಅಧಿಕೃತವಾಗಿ ಮುಂಬೈ ಇಂಡಿಯನ್ಸ್‌ (Mumbai Indians) ಬಳಗ ಸೇರಿದ್ದಾರೆ. ನಾಯಕನಾಗಿ 2 ವರ್ಷಗಳ ಕಾಲ ಗುಜರಾತ್‌ ಟೈಟಾನ್ಸ್‌ ತಂಡವನ್ನು ಮುನ್ನಡೆಸಿದ್ದ ಪಾಂಡ್ಯ ತಂಡ ಪ್ರವೇಶಿಸಿದ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಸ್ಥಾನ ತಂದುಕೊಟ್ಟಿದ್ದರು.

    ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್‌ ಟೈಟಾನ್ಸ್‌ (GujaratTaitans) ತಂಡ ಐಪಿಎಲ್ 2024 ಟೂರ್ನಿಗೆ ಪ್ರಕಟ ಮಾಡಿದ ಉಳಿಸಿಕೊಂಡ ಆಟಗಾರರ ಪಟ್ಟಿಯಲ್ಲಿ ಸೇರಿಸಿತ್ತು. ಆದ್ರೆ, ಇದಾದ ಕೆಲವೇ ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಟ್ರೇಡಿಂಗ್ ವಿಂಡೋ ಮೂಲಕ ಮುಂಬೈ ಇಂಡಿಯನ್ಸ್‌ ಸೇರಿದ್ದಾರೆ. ಹಾರ್ದಿಕ್ ಸಲುವಾಗಿ ಟೈಟಾನ್ಸ್‌ ತಂಡಕ್ಕೆ ಮುಂಬೈ ಇಂಡಿಯನ್ಸ್‌ 15 ಕೋಟಿ ರೂ. ನೀಡಲಿದೆ ಎಂದು ವರದಿಯಾಗಿದೆ.

    ಗುಜರಾತ್‌ ಟೈಟಾನ್ಸ್‌ ತಂಡದಿಂದ ಹಾರ್ದಿಕ್ ಪಾಂಡ್ಯ ಹೊರಬಂದಿರುವ ಕಾರಣ ಯುವ ಆರಂಭಿಕ ಬ್ಯಾಟರ್‌ ಶುಭಮನ್ ಗಿಲ್‌ (Shubhman Gill) ತಂಡದ ಕ್ಯಾಪ್ಟನ್‌ ಆಗುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂಬೈ ಇಂಡಿಯನ್ಸ್‌ ತಾನು ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಿದ ಬಳಿಕ ತನ್ನ ಖಾತೆಯಲ್ಲಿ 15.25 ಕೋಟಿ ರೂ. ಮಾತ್ರವೇ ಹೊಂದಿತ್ತು. ಈಗ ಹಾರ್ದಿಕ್‌ ಪಾಂಡ್ಯ ಖರೀದಿ ಸಲುವಾಗಿ ತನ್ನ ಸ್ಟಾರ್‌ ಆಲ್‌ರೌಂಡರ್‌ ಕ್ಯಾಮರೂನ್‌ ಅವರನ್ನು ಆರ್‌ಸಿಬಿಗೆ (RCB) ಬಿಟ್ಟುಕೊಡುವ ಮೂಲಕ ಪರ್ಸ್‌ ಮೊತ್ತ ಹೆಚ್ಚಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್‌ 19ರಂದು ದುಬೈನಲ್ಲಿ ನಡೆಯಲಿದೆ. ಈ ಸಲುವಾಗಿ ಉಳಸಿಕೊಂಡ ಆಟಗಾರರ ಪಟ್ಟಿ ಪ್ರಕಟ ಮಾಡಲು ನವೆಂಬರ್‌ 26 ಅಂತಿಮ ದಿನವಾಗಿತ್ತು. ಆದರೂ, ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಇರುವ ಟ್ರೇಡಿಂಗ್‌ ವಿಂಡೋ ಡಿಸೆಂಬರ್‌ 12ರ ವರೆಗೆ ತೆರೆದಿರಲಿದೆ. ಹೀಗಾಗಿ ಉಳಿಸಿಕೊಂಡ ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸುವ ಡೀಲ್‌ ಮುಗಿಸಲಾಗಿದೆ.

    ಐಪಿಎಲ್‌ 2014 ಟೂರ್ನಿಯಿಂದ 2021ರ ಆವೃತ್ತಿವರಗೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಆಡಿ 5 ಬಾರಿ ಟ್ರೋಫಿ ಗೆದ್ದಿದ್ದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಬಳಿಕ ಹೊಸ ಫ್ರಾಂಚೈಸಿ ಗುಜರಾತ್‌ ಟೈಟಾನ್ಸ್‌ ಸೇರಿದ್ದರು. ಐಪಿಎಲ್ 2022 ಟೂರ್ನಿಯಲ್ಲಿ ಮೊದಲ ಪ್ರಯತ್ನದಲ್ಲೇ ಟೈಟಾನ್ಸ್‌ಗೆ ಟ್ರೋಫಿ ಗೆದ್ದುಕೊಟ್ಟರು. ಐಪಿಎಲ್ 2023 ಟೂರ್ನಿಯಲ್ಲೂ ಫೈನಲ್‌ಗೆ ಮುನ್ನಡೆಸಿದರಾದರೂ, ಸಿಎಸ್‌ಕೆ ಎದುರು ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿದ್ದರು.

    ಹಾರ್ದಿಕ್ ಪಾಂಡ್ಯ ಈ ಮೂಲಕ ಐಪಿಎಲ್‌ ಟ್ರೇಡಿಂಗ್ ವಿಂಡೋ ಮೂಲಕ ಬೇರೆ ತಂಡ ಸೇರಿದ 3ನೇ ಕ್ಯಾಪ್ಟನ್‌ ಆಗಿದ್ದಾರೆ. ಐಪಿಎಲ್ 2020 ಟೂರ್ನಿ ವೇಳೆ ರವಿಚಂದ್ರನ್ ಅಶ್ವಿನ್ ಮತ್ತು ಅಜಿಂಕ್ಯ ರಹಾನೆ ಬೇರೆ ತಂಡಗಳನ್ನು ಸೇರಿದ ಕ್ಯಾಪ್ಟನ್‌ಗಳಾಗಿದ್ದರು.

    ಏನಿದು ಟ್ರೇಡ್‌ ವಿಂಡೋ ನಿಯಮ?
    ಫ್ರಾಂಚೈಸಿಗಳು ಪರಸ್ಪರ ಆಟಗಾರರನ್ನ ವಿನಿಮಯ ಮಾಡಿಕೊಳ್ಳಬಹುದು ಅಥವಾ ನಗದು ವ್ಯವಹಾರಗಳಲ್ಲಿ ಆಟಗಾರರನ್ನು ಖರೀದಿಸಬಹುದು. ಈ ಸಂಪೂರ್ಣ ವಿಷಯದಲ್ಲಿ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ಅಧಿಕಾರ ನೀಡಿದೆ. ಹೆಚ್ಚಿನ ಫ್ರಾಂಚೈಸಿಗಳು ಒಂದೇ ಆಟಗಾರನನ್ನು ಖರೀದಿಸಲು ಬಯಸಿದರೆ. ಈ ಸಂದರ್ಭದಲ್ಲಿ ಫ್ರಾಂಚೈಸಿ ತನ್ನ ಆಟಗಾರ ಯಾವ ತಂಡಕ್ಕೆ ಹೋಗಬೇಕೆಂದು ನಿರ್ಧರಿಸುವ ಅಧಿಕಾರವನ್ನು ಹೊಂದಿರುತ್ತದೆ. ಆದರೆ ಆಟಗಾರನ ವ್ಯಾಪಾರ ಅಥವಾ ವರ್ಗಾವಣೆಯ ಮೊದಲು ಆಟಗಾರನ ಒಪ್ಪಿಗೆ ಕೂಡ ಅಗತ್ಯ. ಆಟಗಾರನು ನಿರಾಕರಿಸಿದರೆ, ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಲಾಗುತ್ತದೆ.

  • KKR, SRH, LSG, PBKS ಫ್ರಾಂಚೈಸಿಗಳು ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ..

    KKR, SRH, LSG, PBKS ಫ್ರಾಂಚೈಸಿಗಳು ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ..

    ಮುಂಬೈ: 2024ರ ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ ಕೈ ಬಿಟ್ಟಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‍ರೈಸರ್ಸ್ ಹೈದರಾಬಾದ್ ತಂಡಗಳು ಸಹ ತಮ್ಮ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ.

    ಲಕ್ನೋ ಸೂಪರ್ ಜೈಂಟ್ಸ್
    ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯ್ನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್ (ಆರ್‌ಆರ್ ತಂಡದಿಂದ ಟ್ರೇಡ್), ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಕೃನಾಲ್ ಪಾಂಡ್ಯ, ಯುಧ್ವಿರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್ ತಂಡಕ್ಕೆ ರಿಟೇನ್ ಆಗಿದ್ದಾರೆ.

    ಜಯದೇವ್ ಉನದ್ಕತ್, ಡೇನಿಯಲ್ ಸಾಮ್ಸ್, ಮನನ್ ವೋಹ್ರಾ, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪಿತ್ ಗುಲೇರಿಯಾ, ಸೂಯಾರ್ಂಶ್ ಶೆಡ್ಗೆ, ಕರುಣ್ ನಾಯರ್ ಆಟಗಾರರನ್ನು ಕೈಬಿಡಲಾಗಿದೆ.

    ಸನ್ ರೈಸರ್ಸ್ ಹೈದರಾಬಾದ್
    ಅಬ್ದುಲ್ ಸಮದ್, ಐಡೆನ್ ಮಾಕ್ರ್ರಾಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಅನ್ಮೋಲ್‍ಪ್ರೀತ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಸನ್ವಿರ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಾಕ್ ಫರೂಕಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಮಯಾಂಕ್ ಮಾಕರ್ಂಡೆ, ಶಹಬಾಜ್ ಅಹ್ಮದ್ (ಟ್ರೇಡಿಂಗ್) ತಂಡದಲ್ಲಿದ್ದಾರೆ.

    ಹ್ಯಾರಿ ಬ್ರೂಕ್, ಆದಿಲ್ ರಶೀದ್, ಅಕೇಲ್ ಹೊಸೈನ್, ಕಾರ್ತಿಕ್ ತ್ಯಾಗಿ, ವಿವ್ರಾಂತ್ ಶರ್ಮಾ, ಸಮರ್ಥ ವ್ಯಾಸ್ ಆಟಗಾರರಿಗೆ ತಂಡ ಕೊಕ್ ನೀಡಿದೆ.

    ಕೋಲ್ಕತ್ತಾ ನೈಟ್ ರೈಡರ್ಸ್
    ಮುಂಬರುವ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅತ್ಯುತ್ತಮ ಆಟಗಾರರನ್ನು ಆಯ್ಕೆ ಮಾಡಲು ಮುಂದಾಗಿದೆ. ಫ್ರಾಂಚೈಸಿಯು ಬರೋಬ್ಬರಿ 12 ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ. ತಂಡವು ತನ್ನ ಹಳೆಯ ಆಟಗಾರರಾದ ರಸೆಲ್ ಹಾಗೂ ನರೈನ್ ಅವರನ್ನು ಉಳಿಸಿಕೊಂಡಿದೆ.

    ಗಾಯದ ಸಮಸ್ಯೆಯಿಂದಾಗಿ 2023ರ ಐಪಿಎಲ್‍ನಲ್ಲಿ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಈ ಬಾರಿಯ ಐಪಿಎಲ್‍ನಲ್ಲಿ ಆಡಲಿದ್ದಾರೆ. ಅತ್ಯುತ್ತಮ ಬ್ಯಾಟರ್ ರಿಂಕು ಸಿಂಗ್ ಅವರನ್ನು ಉಳಿಸಿಕೊಂಡಿದೆ. ಶಾರ್ದೂಲ್ ಠಾಕೂರ್ ಸೇರಿದಂತೆ ತಂಡದಿಂದ ಒಟ್ಟು 12 ಕ್ರಿಕೆಟಿಗರನ್ನು ಬಿಡುಗಡೆ ಮಾಡಿದೆ. ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಆರ್ಯ ದೇಸಾಯಿ, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ನಾರಾಯಣ್ ಜಗದೀಸನ್, ಮಂದೀಪ್ ಸಿಂಗ್, ಕುಲ್ವಂತ್ ಖೆಜ್ರೋಲಿಯಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಜಾನ್ಸನ್ ಚಾಲ್ರ್ಸ್ ಅವರನ್ನು ರಿಲೀಸ್ ಮಾಡಿದೆ.

    ಪಂಜಾಬ್ ಕಿಂಗ್ಸ್
    ಶಿಖರ್ ಧವನ್, ಜಿತೇಶ್ ಶರ್ಮಾ, ಜಾನಿ ಬೈರ್‍ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‍ಸ್ಟನ್, ಮ್ಯಾಥ್ಯೂ ಶಾರ್ಟ್, ಹರ್‍ಪ್ರೀತ್ ಭಾಟಿಯಾ, ಅಥರ್ವ ಟೈಡೆ, ರಿಷಿ ಧವನ್, ಸ್ಯಾಮ್ ಕರನ್, ಸಿಕಂದರ್ ರಜಾ, ಶಿವಂ ಸಿಂಗ್, ಹರ್‍ಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ಕಗಿಸೊ ರಬಾಡಾ, ನಥನ್ ಎಲಿಸ್, ರಾಹುಲ್ ಚಹಾರ್, ಗುರ್ನೂರ್ ಬ್ರಾರ್, ವಿದ್ವತ್ ಕಾವೇರಪ್ಪ ತಂಡಕ್ಕೆ ರಿಟೇನ್ ಆಗಿದ್ದಾರೆ.

    ಶಾರುಖ್ ಖಾನ್, ರಾಜ್ ಬಾವಾ, ಬಲ್ತೇಜ್ ಧಂಡಾ, ಮೋಹಿತ್ ರಥಿ, ಭಾನುಕಾ ರಾಜಪಕ್ಸೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

  • IPL 2024 Retention: ರೋಹಿತ್‌ ಕ್ಯಾಪ್ಟನ್‌ – ಮುಂಬೈನಲ್ಲಿ ಯಾರಿಗೆ ಲಕ್‌, ಯಾರಿಗೆ ಕೊಕ್‌?

    IPL 2024 Retention: ರೋಹಿತ್‌ ಕ್ಯಾಪ್ಟನ್‌ – ಮುಂಬೈನಲ್ಲಿ ಯಾರಿಗೆ ಲಕ್‌, ಯಾರಿಗೆ ಕೊಕ್‌?

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಹರಾಜಿಗೆ ಕೆಲವೇ ದಿನಗಳು ಬಾಕಿಯಿದ್ದು, ನವೆಂಬರ್‌ 26ರಂದು 10 ಫ್ರಾಂಚೈಸಿಗಳು ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಭಾನುವಾರ ಅಧಿಕೃತಗೊಳಿಸಿವೆ. ಈ ನಡುವೆ ಮುಂಬೈ ಇಂಡಿಯನ್ಸ್‌ ಕೂಡ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    11 ಆಟಗಾರರಿಗೆ ಗೇಟ್‌ ಪಾಸ್‌ ಕೊಟ್ಟಿರುವ ಮುಂಬೈ ಇಂಡಿಯನ್ಸ್‌, 17 ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿದೆ. ರೋಹಿತ್‌ ಶರ್ಮಾ ನಾಯಕನಾಗಿ ಮುಂದುವರಿದಿದ್ದಾರೆ. ಇದನ್ನೂ ಓದಿ: IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

    ಮುಂಬೈ ಇಂಡಿಯನ್ಸ್‌ 2013, 2015, 2017, 2019 ಹಾಗೂ 2020ರ ಆವೃತ್ತಿಯಲ್ಲಿ 5 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2022ರ ಐಪಿಎಲ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನದಿಂದಾಗಿ ಲೀಗ್‌ ಸುತ್ತಿನಲ್ಲೇ ಹೊರಬಿದ್ದಿದ್ದ ಮುಂಬೈ ಇಂಡಿಯನ್ಸ್‌ ಪ್ಲೇ ಆಫ್‌ ಪ್ರವೇಶಿಸುವ ಅವಕಾಶವನ್ನೇ ಕಳೆದುಕೊಂಡಿತ್ತು. 2023ರ ಐಪಿಎಲ್‌ನಲ್ಲಿ 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿತ್ತು. ಆದ್ರೆ ಪ್ಲೇ ಆಫ್‌ನ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೋತು ಫೈನಲ್‌ ಪ್ರವೇಶಿಸುವ ಅವಕಾಶ ಕಳೆದುಕೊಂಡಿತ್ತು.

    ಮುಂಬೈ ತಂಡದ ರಿಟೇನ್‌ ಪ್ಲೇಯರ್ಸ್‌: ರೋಹಿತ್‌ ಶರ್ಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ತಿಲಕ್‌ ವರ್ಮಾ, ಟಿಮ್‌ ಡೇವಿಡ್‌, ವಿಷ್ಣು ವಿನೋದ್‌, ಅರ್ಜುನ್‌ ತೆಂಡೂಲ್ಕರ್‌, ಕ್ಯಾಮರೂನ್‌ ಗ್ರೀನ್‌, ಶಾಮ್ಸ್‌ ಮಲಾನಿ, ನೆಹಾಲ್‌ ವಧೇರಾ, ಜಸ್ಪ್ರೀತ್‌ ಬುಮ್ರಾ, ಕುಮಾರ್‌ ಕಾರ್ತಿಕೇಯ, ಪಿಯೂಷ್‌ ಚಾವ್ಲಾ, ಆಕಾಶ್‌ ಮಧ್ವಾಲ್‌, ಜೇಸನ್ ಬೆಹ್ರೆನ್ಡಾರ್ಫ್, ರೊಮಾರಿಯೋ ಶೆಫರ್ಡ್ (ಲಕ್ನೋ ತಂಡದಿಂದ).

    ಬಿಡುಗಡೆ ಮಾಡಿದ ಆಟಗಾರರು: ಮೊಹಮ್ಮದ್ ಅರ್ಷದ್ ಖಾನ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ರಾಘವ್ ಗೋಯಲ್, ಜೋಫ್ರಾ ಆರ್ಚರ್, ಟ್ರಿಸ್ಟಾನ್ ಸ್ಟಬ್ಸ್, ಡುವಾನ್ ಜಾನ್ಸೆನ್, ಝೈ ರಿಚರ್ಡ್ಸನ್, ರಿಲೆ ಮೆರೆಡಿತ್, ಕ್ರಿಸ್ ಜೋರ್ಡಾನ್, ಸಂದೀಪ್ ವಾರಿಯರ್. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ