Tag: IPL 2026

  • IPL 2026 | ಸಂಜು ಸ್ಯಾಮ್ಸನ್‌ ಆರ್‌ಸಿಬಿ ಸೇರೋದು ಪಕ್ಕಾನಾ?

    IPL 2026 | ಸಂಜು ಸ್ಯಾಮ್ಸನ್‌ ಆರ್‌ಸಿಬಿ ಸೇರೋದು ಪಕ್ಕಾನಾ?

    ಮುಂಬೈ: ರಾಜಸ್ಥಾನ್‌ ರಾಯಲ್ಸ್ (Rajasthan Royals) ಜೊತೆಗಿನ ಸಂಬಂಧ ಹದಗೆಟ್ಟಿರುವುದರಿಂದ ಸಂಜು ಸ್ಯಾಮ್ಸನ್ ಅವರು 2026ರ ಐಪಿಎಲ್‌ ಮಿನಿ ಹರಾಜಿಗೂ ಮುನ್ನವೇ ಫ್ರಾಂಚೈಸಿಯಿಂದ ಹೊರಬರಲು ಇಚ್ಛಿಸಿದ್ದಾರೆ. ಈ ಬೆನ್ನಲ್ಲೇ ವೈರಲ್‌ ಆಗಿರುವ ಫೋಟೋಗಳು ಸಂಜು ಸ್ಯಾಮ್ಸನ್‌ (Sanju Samson) ಆರ್‌ಸಿಬಿ ಸೇರೋದು ಪಕ್ಕಾ ಎಂದು ಹೇಳುತ್ತಿವೆ.

    ಹೌದು. 2026ರ ಐಪಿಎಲ್‌ಗೆ (IPL 2025) ಮುಂಚಿತವಾಗಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ ತಮ್ಮನ್ನು ಫ್ರಾಂಚೈಸಿಯಿಂದ ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದಾರಂತೆ. ಈ ಬೆನ್ನಲ್ಲೇ ಸಂಜು ಆರ್‌ಸಿಬಿ (RCB) ಥ್ರೋ ಡೌನ್ ಸ್ಪೆಷಲಿಸ್ಟ್ ಜೊತೆ ತರಬೇತಿ ಪಡೆಯುತ್ತಿರುವ ಫೋಟೋಗಳು ವೈರಲ್‌ ಆಗಿದ್ದು, ಭಾರೀ ಹೈಪ್‌ ಕ್ರಿಯೆಟ್‌ ಮಾಡಿದೆ.

    ಕಳೆದ ತಿಂಗಳು ಮುಕ್ತಾಯಗೊಂಡ ಟಿ20 ಏಷ್ಯಾಕಪ್‌ (T20 Asia Cup) ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್‌ ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಿದ್ದರು. ಅಲ್ಲದೇ ಅಕ್ಟೋಬರ್‌ 29ರಿಂದ ಶುರುವಾಗಲಿರುವ 5 ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದು, ಆಸ್ಟ್ರೇಲಿಯಾಗೆ (Australia) ಪ್ರಯಾಣಿಸಲಿದ್ದಾರೆ. ಅದಕ್ಕೂ ಮುನ್ನ ಸಂಜು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಥ್ರೋ-ಡೌನ್ ಸ್ಪೆಷಲಿಸ್ಟ್ ಗೇಬ್ರಿಯಲ್ ಅವರಿಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಈ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಸ್ಯಾಮ್ಸನ್‌ ಆರ್‌ಆರ್‌ ತೊರೆಯಲು ಕಾರಣ ಏನು?
    ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕನಾಗಿದ್ದ ಸಂಜು ಸ್ಯಾಮ್ಸನ್‌ 2025ರ ಐಪಿಎಲ್‌ ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದಿದ್ದರು. ರಿಯಾನ್‌ ಪರಾಗ್‌ ನಾಯಕನಾಗಿ ಅನೇಕ ಪಂದ್ಯಗಳನ್ನ ಮುನ್ನಡೆಸಿದ್ದರು. ಇದು ಅಸಮಾಧಾನ ಮೂಡಿಸಿತ್ತು ಎನ್ನಲಾಗಿದೆ. ಅಲ್ಲದೇ ಜೋಸ್‌ ಬಟ್ಲರ್‌ ಅವರನ್ನ ಫ್ರಾಂಚೈಸಿಯಿಂದ ಕೈಬಿಟ್ಟಿದ್ದು ಸಹ ಸಂಜುಗೆ ಬೇಸರ ತರಿಸಿತ್ತಂತೆ. ಹೀಗಾಗಿ 2025ರ ಟೂರ್ನಿ ಮುಗಿದ ಬೆನ್ನಲ್ಲೇ ತನ್ನನ್ನು ಹರಾಜಿನಲ್ಲಿ ಬಿಡುಗಡೆ ಮಾಡಲು ಅಥವಾ ಬೇರೆ ಫ್ರಾಂಚೈಸಿ ಜೊತೆಗೆ ವಿನಿಮಯ ಮಾಡುವಂತೆ ಕೇಳಿಕೊಂಡಿದ್ದರು. ಆರಂಭದಲ್ಲಿ ಸಂಜು ಸಿಎಸ್‌ಕೆ ಸೇರಿಕೊಳ್ಳಲಿದ್ದು, ಧೋನಿ ಬಳಿಕ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಆರ್‌ಸಿಬಿ ಫ್ರಾಂಚೈಸಿ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

    IPL RR VS RCB 2

    ಈಗಾಗಲೇ 2026ರ ಐಪಿಎಲ್‌ನ ಮಿನಿ ಹರಾಜಿಗೆ ತಯಾರಿ ನಡೆಯುತ್ತಿದೆ. ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸುವಂತೆ ಐಪಿಎಲ್‌ ಮಂಡಳಿ ತಿಳಿಸಿದೆ. ಡಿಸೆಂಬರ್‌ 13 ರಿಂದ 15ರ ಒಳಗೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಮಾತ್ರವೆ ಮೆಗಾ ಹರಾಜು ನಡೆಯಲಿದೆ.

  • IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    – ಐವರು ಸ್ಟಾರ್‌ ಪ್ಲೇಯರ್‌ಗಳನ್ನ ಹೊರದಬ್ಬಲು ಮುಂದಾದ ಸಿಎಸ್‌ಕೆ
    – ಫ್ರಾಂಚೈಸಿಗಳ ಪರ್ಸ್‌ ಮೊತ್ತ 151 ಕೋಟಿಗೆ ಹೆಚ್ಚಳ

    ಮುಂಬೈ: ಮುಂದಿನ ಡಿಸೆಂಬರ್‌ 13 ರಿಂದ 15ರ ಅವಧಿಯಲ್ಲಿ 2026ರ ಐಪಿಎಲ್‌ ಟೂರ್ನಿಗೆ ಮಿನಿ ಹರಾಜು (IPL Mini Auction) ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡಲಾಗಿದೆ.

    ಮುಂದಿನ ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಪ್ರಕಟಿಸಲು ಐಪಿಎಲ್‌ ಮಂಡಳಿ ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    3 ವರ್ಷಗಳಿಗೊಮ್ಮೆ ಮೆಗಾ ಹರಾಜು ನಡೆಯಲಿದೆ. 2025ರ ಐಪಿಎಲ್‌ ಟೂರ್ನಿ ವೇಳೆ ಮೆಗಾ ಹರಾಜು ನಡೆದಿತ್ತು. ಆದ್ದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ. ಆದ್ರೆ ಬಿಸಿಸಿಐ (BCCI) ಈಗಾಗಲೇ ವಿಧಿಸಿರುವಂತೆ ಕಳೆದಬಾರಿಗಿಂತ ಫ್ರಾಂಚೈಸಿಗಳ ಪರ್ಸ್‌ ಮೊತ್ತ ಹಿಗ್ಗಲಿದೆ.

    ಪರ್ಸ್‌ ಮೊತ್ತ ಇನ್ನಷ್ಟು ಹೆಚ್ಚಳ
    ಈ ಹಿಂದೆ 90 ಕೋಟಿ ರೂ.ಗಳಷ್ಟಿದ್ದ ಐಪಿಎಲ್‌ ಫ್ರಾಂಚೈಸಿಗಳ ಪರ್ಸ್‌ 2023-24ರ ಐಪಿಎಲ್‌ ಟೂರ್ನಿಯಲ್ಲಿ 100 ಕೋಟಿ ರೂ.ಗೆ ಹೆಚ್ಚಿಸಲಾಗಿತ್ತು. 2025ರ ಐಪಿಎಲ್‌ ಟೂರ್ನಿಯ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಮೂರು ವರ್ಷಗಳ ಅವಧಿಗೆ ವೇತನ ಸೇರಿ ಪರ್ಸ್‌ ಮೊತ್ತವನ್ನ 157 ಕೋಟಿ ರೂ.ಗಳ ವರೆಗೆ ಹೆಚ್ಚಿಸಿದೆ. ಅದರಂತೆ 2025ರ ಐಪಿಎಲ್‌ ಟೂರ್ನಿಯಲ್ಲಿ ಫ್ರಾಂಚೈಸಿಗಳು ಸಂಬಳ ಮಿತಿ ಸೇರಿ ತಲಾ 146 ಕೋಟಿ ರೂ. ಬಳಕೆ ಮಾಡಿದ್ದವು. 2026ರ ಟೂರ್ನಿಗೆ 151 ಕೋಟಿ ರೂ. ಬಳಕೆ ಮಾಡಲಿದ್ದು, 2027ರ ಟೂರ್ನಿಗೆ 157 ಕೋಟಿ ರೂ.ಗಳನ್ನು ಫ್ರಾಂಚೈಸಿಗಳು ಬಳಸಲಿವೆ. ಇದನ್ನೂ ಓದಿ: 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಐವರು ಸ್ಟಾರ್‌ಗಳನ್ನ ಹೊರದಬ್ಬಲು ಮುಂದಾದ ಸಿಎಸ್‌ಕೆ
    ಇನ್ನೂ ಮಿನಿ ಹರಾಜಿಗೂ ಮುನ್ನ ರಿಟೇನ್‌ ಆಟಗಾರರ ಪಟ್ಟಿ ಬಿಡುಗಡೆಗೊಳಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡ್ತಿದ್ದಂತೆ ದೀಪಕ್ ‌ಹೂಡ, ವಿಜಯ್‌ ಶಂಕರ್‌, ರಾಹುಲ್‌ ತ್ರಿಪಾಟಿ, ಸ್ಯಾಮ್‌ ಕರ್ರನ್‌, ಡಿವೋನ್‌ ಕಾನ್ವೆ ಅವರನ್ನ ತಂಡದಿಂದ ಹೊರಬ್ಬಲು ಫ್ರಾಂಚೈಸಿ ನಿರ್ಧರಿಸಿದೆ ಎಂಧು ತಿಳಿದುಬಂದಿದೆ. ಈ ಬಗ್ಗೆ ಸಿಎಸ್‌ಕೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: 6 ಆಟಗಾರರ ರಿಟೇನ್‌ಗೆ ಬಿಸಿಸಿಐ ಅವಕಾಶ, ಪರ್ಸ್‌ ಮೊತ್ತ 120 ರಿಂದ 157 ಕೋಟಿ ರೂ.ಗೆ ಹೆಚ್ಚಳ!

  • ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ಜೈಪುರ: 2026ರ ಐಪಿಎಲ್‌ ಟೂರ್ನಿಗೂ ಮುನ್ನವೇ ರಾಹುಲ್‌ ದ್ರಾವಿಡ್‌ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡದ ಮುಖ್ಯಕೋಚ್‌ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್‌ ಟೂರ್ನಿ ವೇಳೆ ರಾಜಸ್ಥಾನ್‌ ತಂಡದ ಕೋಚ್‌ ಆಗಿದ್ದ ದ್ರಾವಿಡ್‌ (Rahul Dravid) ಒಂದೇ ವರ್ಷಕ್ಕೆ ಫ್ರಾಂಚೈಸಿಯಿಂದ ಹೊರಬಂದಿದ್ದಾರೆ.

    19ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ದ್ರಾವಿಡ್‌ ಹೆಡ್‌ ಕೋಚ್‌ (Head Coach) ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ರಾಜಸ್ಥಾನ್‌ ರಾಯಲ್ಸ್‌ ಶನಿವಾರ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ರಾಜಸ್ಥಾನ್‌ ರಾಯಲ್ಸ್ ತಂಡದ ಪ್ರಯಾಣದಲ್ಲಿ ರಾಹುಲ್ ಹಲವು ವರ್ಷಗಳಿಂದ ಕೇಂದ್ರಬಿಂದುವಾಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ದೊಡ್ಡ ಮೌಲ್ಯಗಳನ್ನು ನಿರ್ಮಿಸಿದೆ ಮತ್ತು ಫ್ರಾಂಚೈಸಿಯೊಂದಿಗೆ ಅಳಿಸಲಾಗದ ಗುರುತು ಬಿಟ್ಟಿದ್ದಾರೆ. ಫ್ರಾಂಚೈಸಿ ರಚನಾತ್ಮಕ ಪರಿಶೀಲನೆಯ ಭಾಗವಾಗಿ, ರಾಹುಲ್‌ಗೆ ಫ್ರಾಂಚೈಸಿಯಲ್ಲಿ ವಿಶಾಲವಾದ ಸ್ಥಾನ ನೀಡಲಾಗಿತ್ತು, ಆದರೆ ಅದನ್ನು ತೆಗೆದುಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮತ್ತು ವಿಶ್ವದಾದ್ಯಂತ ಇರುವ ಫ್ರಾಂಚೈಸಿಯ ಎಲ್ಲಾ ಆಟಗಾರರು ಹಾಗೂ ಲಕ್ಷಾಂತರ ಅಭಿಮಾನಿಗಳು ರಾಹುಲ್‌ ದ್ರಾವಿಡ್‌ ಅವರ ಸೇವೆಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ ಎಂದು ಫ್ರಾಂಚೈಸಿ ಹೇಳಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ಟೀಂ ಇಂಡಿಯಾದ ಮುಖ್ಯಕೋಚ್‌ ಹುದ್ದೆಯಿಂದ ಹೊರ ಬಂದ ಬಳಿಕ 2024ರ ಸೆಪ್ಟೆಂಬರ್‌ನಲ್ಲಿ ದ್ರಾವಿಡ್ ಅವರನ್ನು ಬಹು ವರ್ಷಗಳ ಒಪ್ಪಂದದ ಮೇಲೆ RR ತಂಡದ ಮುಖ್ಯಕೋಚ್‌ ಆಗಿ ನೇಮಕ ಮಾಡಿಕೊಳ್ಳಲಾಗಿತ್ತು. ಉದ್ಘಾಟನಾ ಆವೃತ್ತಿಯಲ್ಲಿ ಐಪಿಎಲ್‌ ಟ್ರೋಫಿ ಗೆದ್ದಿದ್ದ ರಾಜಸ್ಥಾನ್‌ ರಾಯಲ್‌ ಡ್ರಾವಿಡ್‌ ಅವರನ್ನು ಕೋಚ್‌ ಆಗಿ ನೇಮಿಸಿಕೊಂಡ ಬಳಿಕ ಮತ್ತೊಂದು ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದ್ರೆ 2025ರ ಐಪಿಎಲ್‌ನಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ಕಳಪೆ ಪ್ರದರ್ಶನ ನೀಡಿತು, 14 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತು.