Tag: IPL Mega Auction 2025

  • IPL Mega Auction 2025: ಹರಾಜಲ್ಲಿ 13ರ ಬಾಲಕ!

    IPL Mega Auction 2025: ಹರಾಜಲ್ಲಿ 13ರ ಬಾಲಕ!

    ಕೇವಲ 13ನೇ ವಯಸ್ಸಿನ ವೈಭವ್ ಸೂರ್ಯವಂಶಿ (Vaibhav Suryavanshi) ಐಪಿಎಲ್ ಹರಾಜು ಪಟ್ಟಿಯಲ್ಲಿ (Mega Auction 2025) ಸ್ಥಾನ ಪಡೆದಿದ್ದಾರೆ. ಯಾವುದಾದರೂ ಫ್ರಾಂಚೈಸಿ ಸೂರ್ಯವಂಶಿಯನ್ನು ಖರೀದಿಸಿದರೆ ಅತ್ಯಂತ ಕಿರಿಯ ಆಟಗಾರ ಎಂಬ ಇತಿಹಾಸ ಸೃಷ್ಟಿಯಾಗಲಿದೆ.

    ಐಪಿಎಲ್ ಮೆಗಾ ಹರಾಜಿಗಾಗಿ 574 ಆಟಗಾರರ ಪಟ್ಟಿ ಅಂತಿಮಗೊಂಡಿದೆ. ಇದರಲ್ಲಿ 366 ಭಾರತೀಯ ಆಟಗಾರರಿದ್ದಾರೆ. ಇವರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಬಿಹಾರ ಮೂಲದ ಸೂರ್ಯವಂಶಿ ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅದರ ಫಲವಾಗಿಯೇ ಐಪಿಎಲ್‌ ಹರಾಜು ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

    5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.

    2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದರು.

    ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ವೈಭವ್‌ ಹೆಸರು ಯಾವುದಾದರೂ ತಂಡದಲ್ಲಿ ಕಾಣಲಿದೆಯೇ ಎಂಬುದು ನ.24 ಅಥವಾ 25 ರಂದು ತಿಳಿಯಲಿದೆ.

  • 2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್‌ – ಅ.31ಕ್ಕೆ ರಿಟೇನ್‌ ಆಟಗಾರರ ಭವಿಷ್ಯ!

    2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್‌ – ಅ.31ಕ್ಕೆ ರಿಟೇನ್‌ ಆಟಗಾರರ ಭವಿಷ್ಯ!

    ಮುಂಬೈ: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮೆಗಾ ಹರಾಜಿಗೂ (IPL Mega Auction 2025) ಮುನ್ನವೇ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಲೆಜೆಂಡ್‌ ಕ್ರಿಕೆಟಿಗ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಜೀವಾಳ ಎಂ.ಎಸ್‌ ಧೋನಿ (MS Dhoni) 2025ರ ಐಪಿಎಲ್‌ ಆವೃತ್ತಿಯಲ್ಲೂ ಕಣಕ್ಕಿಳಿಯೋದು ಫಿಕ್ಸ್‌ ಆಗಿದೆ.

    ಈಗಾಗಲೇ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ಫ್ರಾಂಚೈಸಿ ಮಾಲೀಕರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. 2025ರ ಐಪಿಎಲ್‌ನಲ್ಲೂ ಮಹಿ ಆಡುತ್ತಾರೆ ಎಂದು ಫ್ರಾಂಚೈಸಿ ಮಾಲೀಕ ಎನ್‌. ಶ್ರೀನಿವಾಸನ್‌ ತಿಳಿಸಿರುವುದಾಗಿ ವರದಿಯಾಗಿದೆ. ಆದ್ರೆ ಮಹಿ ತಂಡದಲ್ಲಿ ಮೊದಲ ರಿಟೇನ್‌ ಆಟಗಾರನಾಗಿ ಉಳಿಯುತ್ತಾರಾ? ಅಥವಾ ಅನ್‌ಕ್ಯಾಪ್ಡ್‌ ಪ್ಲೇಯರ್‌ (ಹೊಸಬರು) ಆಗಿ ತಂಡದಲ್ಲಿರುತ್ತಾರಾ? ಎಂಬುದು ಪಟ್ಟಿ ಬಿಡುಗಡೆ ಮಾಡಿದ ಬಳಿಕ ತಿಳಿಯಲಿದೆ. ಇದನ್ನೂ ಓದಿ: IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    ಅ.31ಕ್ಕೆ ಆಟಗಾರರ ಭವಿಷ್ಯ:
    2025 ಐಪಿಎಲ್‌ ಮೆಗಾ ಹರಾಜು ಹಿನ್ನೆಲೆಯಲ್ಲಿ ಇದೇ ಅಕ್ಟೋಬರ್‌ 31ರಂದು ಸಂಜೆ 4:30ರ ವೇಳೆಗೆ ಎಲ್ಲಾ ಫ್ರಾಂಚೈಸಿಗಳು ತಂಡದ ರಿಟೇನ್‌ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಿವೆ. ಜಿಯೋ ಸಿನಿಮಾದಲ್ಲಿ (Jio Cinema) ಇದರ ನೇರ ಪ್ರಸಾರ ನಡೆಯಲಿದೆ. ಇದನ್ನೂ ಓದಿ: ಒಂದೇ ದಿನ 14 ವಿಕೆಟ್‌ ಉಡೀಸ್‌ – ಭಾರತದ ವಿರುದ್ಧ ಕಿವೀಸ್‌ಗೆ 301 ರನ್‌ಗಳ ಭರ್ಜರಿ ಮುನ್ನಡೆ

    ಮಹಿ ನಂ.1 ರಿಟೇನ್‌ ಆಟಗಾರ?
    ಮೂಲಗಳ ಪ್ರಕಾರ, ಮಹಿ ಮುಂದಿನ ಆವೃತ್ತಿಯಲ್ಲಿ ಚೆನ್ನೈ ತಂಡದಲ್ಲಿ ಆಡಲಿದ್ದು, ಫ್ರಾಂಚೈಸಿ ಅವರನ್ನು ನಂ.1 ರಿಟೇನರ್‌ ಮಾಡಿಕೊಂಡಿದೆ. ಇನ್ನುಳಿದಂತೆ ನಾಯಕ ಋತುರಾಜ್‌ ಗಾಯಕ್ವಾಡ್‌ ನಂ.2, ಆಲ್‌ರೌಂಡರ್‌ ರವೀಂದ್ರ ಜಡೇಜಾ ನಂ.3 ಆಟಗಾರನಾಗಿ ತಂಡದಲ್ಲಿ ಉಳಿಯಲಿದ್ದಾರೆ. ಇದರೊಂದಿಗೆ ಶಿವಂ ದುಬೆ, ಡೆವೊನ್ ಕಾನ್ವೆ, ಮತೀಶ ಪತಿರಣ ಮತ್ತು ರಮೀಜ್‌ ರಿಜ್ವಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದ್ರೆ ಕೆಲವು ವರದಿಗಳು ಧೋನಿ ಅನ್‌ಕ್ಯಾಪ್ಡ್‌ ಪ್ಲೇಯರ್‌ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಅ.31ರಂದು ಫ್ರಾಂಚೈಸಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಬಿಡುಗಡೆಗೊಳಿಸಿದ ಬಳಿಕ ಯಾರ ಭವಿಷ್ಯ ಹೇಗೆ? ಎಂಬುದು ಗೊತ್ತಾಗಲಿದೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಲೆಜೆಂಡ್ ಕ್ರಿಕೆಟಿಗ ಎಂ.ಎಸ್ ಧೋನಿ ನೇಮಕ

    ರಿಟೇನ್‌ ಆಟಗಾರರಿಗೆ ಮೊತ್ತ ಎಷ್ಟು?
    ಈ ಬಾರಿ ಐಪಿಎಲ್‌ನಲ್ಲಿ ಮಹತ್ವದ ಬದಲಾವಣೆ ತಂದಿರುವ ಬಿಸಿಸಿಐ 5 ಆಟಗಾರರನ್ನು ರಿಟೇನ್‌ ಮಾಡಿಕೊಳ್ಳಲು ಹಾಗೂ 1 ಆರ್‌ಟಿಎಂ ಕಾರ್ಡ್‌ (RTM Card) ಬಳಕೆಗೆ ಅನುಮತಿ ನೀಡಿದೆ. ಈ ಪೈಕಿ ಇಬ್ಬರು ಆಟಗಾರರ (ಮೊದಲು ಮತ್ತು 4ನೇ ರಿಟೇನ್‌ ಆಟಗಾರ) ತಲಾ 18 ಕೋಟಿ ರೂ. ಪಡೆಯಲಿದ್ದಾರೆ. 2 ಮತ್ತು 5ನೇ ಆಟಗಾರ ತಲಾ 14 ಕೋಟಿ ರೂ. ಹಾಗೂ 3ನೇ ರಿಟೇನ್‌ ಆಟಗಾರ 11 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ. ಆದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ 5 ವರ್ಷ ಪೂರೈಸಿದ ಆಟಗಾರರನ್ನು ಅನ್‌ಕ್ಯಾಪ್ಡ್‌ ಪ್ಲೇಯರ್‌ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಅವರು ನಿಯಮದಂತೆ 4 ಕೋಟಿ ರೂ. ಮಾತ್ರವೇ ಸಂಭಾವನೆ ಪಡೆಯಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.