Tag: IPL Trophy

  • ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ – ನೂತನ ಮುಖ್ಯಕೋಚ್‌ ಆಗಿ ಹೇಮಂಗ್‌ ಬದಾನಿ ನೇಮಕ

    ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ – ನೂತನ ಮುಖ್ಯಕೋಚ್‌ ಆಗಿ ಹೇಮಂಗ್‌ ಬದಾನಿ ನೇಮಕ

    ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನೂತನ ಮುಖ್ಯಕೋಚ್‌ (Delhi Capitals Head Coach) ಆಗಿ ಹೇಮಂಗ್ ಬದಾನಿ (Hemang Badani) ಹಾಗೂ ಕ್ರಿಕೆಟ್‌ ನಿರ್ದೇಶಕರಾಗಿ ವೇಣುಗೋಪಾಲ್ ರಾವ್ ನೇಮಕಗೊಂಡಿದ್ದಾರೆ. ಈ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಅಧಿಕೃತ ಘೋಷಣೆ ಮಾಡಿದೆ.

    7 ಆವೃತ್ತಿ ಕಳೆದರೂ ಐಪಿಎಲ್‌ ಟ್ರೋಫಿ (IPL Trophy) ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್‌ (Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಮುಖ್ಯಕೋಚ್‌ ಹುದ್ದೆಗೆ ಸೌರವ್‌ ಗಂಗೂಲಿ ಅವರ ಹೆಸರು ಕೇಳಿಬಂದಿತ್ತು. ಆದ್ರೆ ಡೆಲ್ಲಿ ಕ್ಯಾಪಿಲಟ್ಸ್‌ ಫ್ರಾಂಚೈಸಿ ಅಚ್ಚರಿ ಎನ್ನುವಂತೆ ಹೇಮಂಗ್‌ ಬದಾನಿ ಅವರನ್ನು ಮುಖ್ಯಕೋಚ್‌ ಆಗಿ ನೇಮಕ ಮಾಡಿಕೊಂಡಿದೆ. ಅಲ್ಲದೇ ಸೌರವ್‌ ಗಂಗೂಲಿ ಅವರ ಬದಲಿಗೆ ಕ್ರಿಕೆಟ್‌ ನಿರ್ದೇಶಕರನ್ನಾಗಿ ವೇಣುಗೋಪಾಲ್ ರಾವ್ ಅವರನ್ನ ನೇಮಿಸಿಕೊಂಡಿದೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    47 ವರ್ಷವಯಸ್ಸಿನ ಹೇಮಂಗ್‌ ಬದಾನಿ ಟೀಂ ಇಂಡಿಯಾದಲ್ಲಿ 4 ಟೆಸ್ಟ್‌ ಹಾಗೂ 40 ಏಕದಿನ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ. ಅಲ್ಲದೇ 2021-23 ರವರೆಗೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಫೀಲ್ಡಿಂಗ್‌ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಲಂಕಾ ಪ್ರೀಮಿಯರ್‌ ಲೀಗ್‌ನಲ್ಲಿ ಜಾಫ್ನಾ ಕಿಂಗ್ಸ್ ಫ್ರಾಂಚೈಸಿ ಕೋಚ್‌ ಆಗಿ ಬ್ಯಾಕ್‌ ಟು ಬ್ಯಾಕ್‌ 2 ಪ್ರಶಸ್ತಿಗಳನ್ನ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕಿವೀಸ್‌ ವೇಗಿಗಳ ಆರ್ಭಟ; 46ಕ್ಕೆ ಭಾರತ ಆಲೌಟ್‌ – ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ಟೀಂ ಇಂಡಿಯಾ

    SA20 ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲೇ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಪ್ರಶಸ್ತಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ ಈ ವರ್ಷದ ILT20 ನಲ್ಲಿ ದುಬೈ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದರು. ಇವರ ನೇತೃತ್ವದಲ್ಲೇ ದುಬೈ ಕ್ಯಾಪಿಟಲ್ಸ್‌ ತಂಡ ಫೈನಲ್‌ ತಲುಪಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ ಆಗಿ ನೇಮಕಗೊಂಡಿದ್ದಾರೆ.

    ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಬದಾನಿ, ದೆಹಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಸೇರುತ್ತಿರುವುದು ನನಗೆ ಹೆಮ್ಮೆ ಎನಿಸಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಮ್ಮ ಮಾಲೀಕರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 8 ಕ್ಯಾಚ್‌ ಬಿಟ್ಟ ಪಾಕ್‌ – ಚರ್ಚೆ ಹುಟ್ಟುಹಾಕಿದ ಕಳಪೆ ಫೀಲ್ಡಿಂಗ್‌

    ಇದಕ್ಕೂ ಮುನ್ನ ರಿಕಿ ಪಾಂಟಿಂಗ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದರು. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕರೂ ಆಗಿರುವ ರಿಕಿ ಪಾಂಟಿಂಗ್‌ ಕಳೆದ 7 ಆವೃತ್ತಿಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಡೆಲ್ಲಿ ಕ್ಯಾಪಿಟಲ್ಸ್‌ ಸೇರುವ ಮುನ್ನ ಪಾಂಟಿಂಗ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಿದ್ದರು. 2020ರಲ್ಲಿ ಪಾಂಟಿಂಗ್‌ ಅವರ ಸಾರಥ್ಯದಲ್ಲೇ ಡೆಲ್ಲಿ ತಂಡ ಫೈನಲ್‌ ಪ್ರವೇಶಿಸಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಸೋತು ಪ್ರಶಸ್ತಿ ಗೆಲ್ಲಲು ವಿಫಲವಾಯಿತು.

  • IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ನವದೆಹಲಿ: 7 ಆವೃತ್ತಿ ಕಳೆದರೂ ಐಪಿಎಲ್‌ ಟ್ರೋಫಿ (IPL Trophy) ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್‌ (Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ವಜಾಗೊಳಿಸಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಯಿಂದ ಪಾಂಟಿಂಗ್‌ ಡೆಲ್ಲಿ ತಂಡದ ಮುಖ್ಯ ಕೋಚ್‌ ಆಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಿರ್ದೇಶಕ ಸೌರವ್‌ ಗಂಗೂಲಿ ಖಚಿತಪಡಿಸಿದ್ದಾರೆ.

    ಆಸ್ಟ್ರೇಲಿಯಾ ತಂಡದ ಮಾಜಿ ನಾಯಕರೂ ಆಗಿರುವ ರಿಕಿ ಪಾಂಟಿಂಗ್‌ ಕಳೆದ 7 ಆವೃತ್ತಿಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ (Delhi Capitals Head Coach) ಆಗಿ ಸೇವೆ ಸಲ್ಲಿಸುತ್ತಿದ್ದರು. ಡೆಲ್ಲಿ ಕ್ಯಾಪಿಟಲ್ಸ್‌ ಸೇರುವ ಮುನ್ನ ಪಾಂಟಿಂಗ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಿದ್ದರು. ಪಾಂಟಿಂಗ್‌ ನೇತೃತ್ವದಲ್ಲಿ 2020ರಲ್ಲಿ ಪಾಂಟಿಂಗ್‌ ಅವರ ಸಾರಥ್ಯದಲ್ಲೇ ಡೆಲ್ಲಿ ತಂಡ ಫೈನಲ್‌ ಪ್ರವೇಶಿಸಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಸೋತು ಪ್ರಶಸ್ತಿ ಗೆಲ್ಲಲು ವಿಫಲವಾಯಿತು.

    2024ರ ಆವೃತ್ತಿಯಲ್ಲಿ ಆರಂಭದಲ್ಲಿ ಸತತ ಮೂರು ಸೋಲು ಕಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಬಳಿಕ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿತ್ತು. 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದರೂ ಪ್ಲೇ ಆಫ್‌ನಿಂದ ಹೊರಗುಳಿಯಿತು. ಇದನ್ನೂ ಓದಿ: ಯಶಸ್ವಿ ಕೈ ತಪ್ಪಿದ ಚೊಚ್ಚಲ T20I ಶತಕ – 10 ವಿಕೆಟ್‌ ಜಯದೊಂದಿಗೆ ಸರಣಿ ಗೆದ್ದ ಭಾರತ!

    ಇದೀಗ ತಂಡದ ಅದೃಷ್ಟ ಬದಲಾಯಿಸುವ ಪ್ರಯತ್ನದಲ್ಲಿ ನಿರಾಸೆ ಮೂಡಿಸಿದ ರಿಕಿ ಪಾಂಟಿಂಗ್ ಅವರನ್ನು ಮುಂದುವರಿಸರಿದಲು ಫ್ರಾಂಚೈಸಿ ನಿರ್ಧರಿಸಿದೆ. ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಇದನ್ನು ದೃಢಪಡಿಸಿದ್ದಾರೆ.

    ಪಾಂಟಿಂಗ್‌ ಅವರನ್ನು ಮುಖ್ಯಕೋಚ್‌ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಮುಖ್ಯಕೋಚ್‌ ಹುದ್ದೆಗೆ ಗಂಗೂಲಿ ಅವರ ಹೆಸರು ಕೇಳಿಬಂದಿದೆ. 2025ರ ಆವೃತ್ತಿಯಿಂದ ಗಂಗೂಲಿ ಅವರು ಡೆಲ್ಲಿ ತಂಡದ ಮುಖ್ಯಕೋಚ್‌ ಹುದ್ದೆ ಅಲಂಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ! 

  • IPL 2024: ಕಳೆದ 6 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್!

    IPL 2024: ಕಳೆದ 6 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್!

    – ಸಾಧಕರ ಎಲೈಟ್‌ ಲಿಸ್ಟ್‌ ಸೇರಿದ ಕೆಕೆಆರ್‌
    – ಆರ್‌ಸಿಬಿ ಹೊಗಳಿದ ಆಂಡ್ರೆ ರಸ್ಸೆಲ್‌

    ಅಹಮದಾಬಾದ್‌: ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 6 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 17ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಕೆಕೆಆರ್‌ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರಾಜಸ್ಥಾನ್‌ಗೆ ಇಂದು ರಾಯಲ್‌ ಚಾಲೆಂಜ್‌ – ಮೋದಿ ಅಂಗಳದಲ್ಲಿ ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಗೆಲುವು?

    ದಿಗ್ಗಜ ತಂಡಗಳ ಎಲೈಟ್‌ ಪಟ್ಟಿ ಸೇರಿದ ಕೆಕೆಆರ್‌:
    17ನೇ ಆವೃತ್ತಿಯಲ್ಲಿ ನಾಲ್ಕನೇ ಬಾರಿಗೆ ಫೈನಲ್‌ ಪ್ರವೇಶಿಸಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು ಹೆಚ್ಚು ಬಾರಿ ಐಪಿಎಲ್‌ ಫೈನಲ್‌ ಪ್ರವೇಶಿಸಿದ ತಂಡಗಳ ಎಲೈಟ್‌ ಪಟ್ಟಿ ಸೇರಿದೆ. ಈ ಪಟ್ಟಿಯಲ್ಲಿ ಸಿಎಸ್‌ಕೆ ಅಗ್ರಸ್ಥಾನದಲ್ಲಿದೆ. ಸಿಎಸ್‌ಕೆ 10 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಮುಂಬೈ 6 ಬಾರಿ, ಕೋಲ್ಕತ್ತಾ ನೈಟ್‌ರೈಡರ್ಸ್‌ 4 ಬಾರಿ ಹಾಗೂ ಆರ್‌ಸಿಬಿ 3 ಬಾರಿ ಫೈನಲ್‌ ಪ್ರವೇಶಿಸಿದ ತಂಡಗಳಾಗಿವೆ. ಇದನ್ನೂ ಓದಿ: ಆರ್‌ಸಿಬಿಗಾಗಿ ಬಿಡ್‌ ಮಾಡಿದಾಗ, ನನ್ನಿಂದ ಉತ್ತಮ ಆಯ್ಕೆ ಸಾಧ್ಯವಿಲ್ಲವೆಂದು ನನ್ನ ಆಂತರಿಕ ಪ್ರವೃತ್ತಿ ಹೇಳ್ತಿತ್ತು: ಮಲ್ಯ

    ಆರ್‌ಸಿಬಿ ಹೊಗಳಿದ ರಸ್ಸೆಲ್‌:
    ಇನ್ನೂ ಕೆಕೆಆರ್‌ ಗೆಲುವಿನ ನಂತರ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಆಲ್‌ರೌಂಡರ್‌ ಆಂಡ್ರೆ ರಸ್ಸೆಲ್‌, ಪ್ಲೇ ಆಫ್‌ ಪ್ರವೇಶಿಸಿರುವ ಆರ್‌ಸಿಬಿ ತಂಡವನ್ನ ಹೊಗಳಿದ್ದಾರೆ. ಆರ್‌ಸಿಬಿ ಉತ್ತಮ ಕ್ರಿಕೆಟ್‌ ಆಡುತ್ತಿದೆ. ಅವರ ಆಟದಲ್ಲಿ ವೇಗವನ್ನು ಕಂಡುಕೊಂಡಿದೆ. ನಾವು ಫೈನಲ್‌ನಲ್ಲಿ ಯಾವುದೇ ತಂಡವನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ನುಡಿದಿದ್ದಾರೆ.

    ಸೋಮವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ತಂಡವು 159 ರನ್‌ ಬಾರಿಸಿತ್ತು. ಗೆಲ್ಲಲು 160 ರನ್‌ಗಳ ಗುರಿ ಪಡೆದ ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆಯುವ ಮೂಲಕ ಜಯಗಳಿಸಿತು.‌ ಇಲ್ಲಿಯವರೆಗೆ 2012, 2014, 2021ರಲ್ಲಿ ಕೋಲ್ಕತ್ತಾ ಫೈನಲ್‌ ಪ್ರವೇಶಿಸಿತ್ತು. 2012 ಮತ್ತು 2014ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

  • RCB ಕಪ್‌ ಗೆಲ್ಲುವಂತೆ ಬೆಂಬಲಿಸಿ ಎಂದ ‌ಅಭಿಮಾನಿ – ಲೆಜೆಂಡ್‌ ಮಹಿ ಕೊಟ್ಟ ಉತ್ತರ ಏನು?

    RCB ಕಪ್‌ ಗೆಲ್ಲುವಂತೆ ಬೆಂಬಲಿಸಿ ಎಂದ ‌ಅಭಿಮಾನಿ – ಲೆಜೆಂಡ್‌ ಮಹಿ ಕೊಟ್ಟ ಉತ್ತರ ಏನು?

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ‌16 ಆವೃತ್ತಿ ಕಳೆದರೂ ಟ್ರೋಫಿ ಗೆಲ್ಲದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 2024ರ ಟೂರ್ನಿಯಲ್ಲಿ ಚಾಂಪಿಯನ್ ಟ್ರೋಫಿ ಗೆಲ್ಲುವಂತೆ ಬೆಂಬಲಿಸಿ ಎಂದು ಆರ್‌ಸಿಬಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್‌ ಧೋನಿ (MS Dhoni) ಉತ್ತರ ಕೊಟ್ಟಿದ್ದಾರೆ.

    ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರು (RCB Fan) 17ನೇ ಆವೃತ್ತಿಯಲ್ಲಿ ಆರ್‌ಸಿಬಿ ಕಪ್‌ (RCB Trophy) ಗೆಲ್ಲುವಂತೆ ನೀವು ಬೆಂಬಲಿಸಬೇಕು ಎಂದು ಧೋನಿ ಅವರಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಲೆಜೆಂಡ್‌, ಬೆಂಗಳೂರು ನಿಜಕ್ಕೂ ಉತ್ತಮ ತಂಡವಾಗಿದೆ. ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ ತಂಡಗಳು ಬಲಿಷ್ಠವಾಗಿವೆ. ಎಲ್ಲ ತಂಡಗಳು ಟ್ರೋಫಿ ಗೆಲ್ಲಲಿ ಎಂದು ನಾನು ಶುಭಕೋರಬಹುದು, ಆದ್ರೆ ನನ್ನ ತಂಡದಿಂದ ಆಚೆ ಬಂದು ಪ್ರತ್ಯೇಕವಾಗಿ ಮತ್ತೊಂದು ತಂಡವನ್ನು ಬೆಂಬಲಿಸೋದಕ್ಕೆ ಆಗಲ್ಲ. ಹಾಗೆ ಮಾಡಿದ್ರೆ ನನ್ನ ತಂಡದ ಅಭಿಮಾನಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

    ಐಪಿಎಲ್ ಟೂರ್ನಿಯ ಕುರಿತು ಮಾತನಾಡುವುದಾದ್ರೆ ಎಲ್ಲಾ 10 ತಂಡಗಳು ಉತ್ತಮ ಆಟಗಾರರನ್ನ ಹೊಂದಿವೆ. ಆರ್‌ಸಿಬಿ ನಿಜಕ್ಕೂ ಉತ್ತಮ ತಂಡ. ಆದ್ರೆ ನಾವು ಮೊದಲು ಕ್ರಿಕೆಟ್‌ನಲ್ಲಿ ಹೇಗೆ ಪ್ಲ್ಯಾನ್‌ ಮಾಡ್ತೀವಿ ಅನ್ನೋದನ್ನ ಅರಿತುಕೊಳ್ಳಬೇಕು. ಟೂರ್ನಿಯಲ್ಲಿ ವೈಯಕ್ತಿಕ ಕಾರಣಗಳು, ಗಾಯದ ಸಮಸ್ಯೆಗಳಿಂದ ಪ್ರಮುಖ ಆಟಗಾರರ ಸೇವೆ ಕಳೆದುಕೊಂಡಾಗ ನಿಜವಾದ ಸಮಸ್ಯೆ ಎದುರಾಗುತ್ತದೆ. ಅಲ್ಲದೇ ಎಲ್ಲ ಯೋಜನೆಗಳು ನಾವು ಹಾಕಿಕೊಂಡಂತೆ ಸಾಗುವುದಿಲ್ಲ ಎಂದು ಮಹಿ ಹೇಳಿದ್ದಾರೆ. ಇದನ್ನೂ ಓದಿ: IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

    ಸದ್ಯದ ಪರಿಸ್ಥಿತಿಯಲ್ಲಿ ನನ್ನ ಸ್ವಂತ ತಂಡದಲ್ಲೂ ಕೆಲವು ಸಂಗತಿಗಳ ಕುರಿತು ಚಿಂತಿಸುತ್ತಿದ್ದೇನೆ. ನಾನು ಎಲ್ಲ ತಂಡಗಳಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಅದಕ್ಕಿಂತ ಹೆಚ್ಚಿನದ್ದನ್ನು ಏನು ಮಾಡಲು ಸಾಧ್ಯವಿಲ್ಲ. ಬೇರೆ ತಂಡಗಳಿಗೆ ನೆರವು ನೀಡಲು ಹೋದ್ರೆ, ಸಿಎಸ್‌ಕೆ ಅಭಿಮಾನಿಗಳಿಗೆ ಏನನ್ನಿಸುತ್ತೆ ಅನ್ನೋದನ್ನ ಯೋಚಿಸಿ ಎಂದು ತಿಳಿಸಿದ್ದಾರೆ.

    ಹರಾಜಿನಲ್ಲಿ ಸಿಎಸ್‌ಕೆ ಪಾಲಾದ ಆಟಗಾರರು:
    2024ರ ಐಪಿಎಲ್ ಟೂರ್ನಿಗಾಗಿ ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಸಿಎಸ್‌ಕೆ ಫ್ರಾಂಚೈಸಿ, ರಚಿನ್ ರವೀಂದ್ರ (1.80 ಕೋಟಿ ರೂ.), ಶಾರ್ದೂಲ್‌ ಠಾಕೂರ್ (4 ಕೋಟಿ ರೂ.), ಡೇರಿಲ್‌ ಮಿಚೆಲ್ (14 ಕೋಟಿ ರೂ.), ಸಮೀರ್ ರಿಜ್ವಿ (8.40 ಕೋಟಿ ರೂ.), ಮುಸ್ತಾಫಿಝರ್‌ (2 ಕೋಟಿ ರೂ.), ಅವನೀಶ್ ರಾವ್ ಅರವೆಲ್ಲಿ (20 ಲಕ್ಷ ರೂ.) ಸೇರಿದಂತೆ 6 ಆಟಗಾರರನ್ನು ಖರೀದಿಸಿತು. ಇದನ್ನೂ ಓದಿ: IPL 2024 Auction: ಚೆನ್ನೈ ಪಾಲಾದ ಕನ್ನಡಿಗ ರಚಿನ್‌ – ಕಿವೀಸ್‌ ಫ್ಲೇವರ್‌ ಆಯ್ತು ಸೂಪರ್‌ ಕಿಂಗ್ಸ್‌!

    2023ರ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್ ಟೈಟಾನ್ಸ್‌ ತಂಡ 20 ಓವರ್‌ಗಳಲ್ಲಿ 214 ರನ್‌ ಬಾರಿಸಿತ್ತು. ಆದ್ರೆ ಮಳೆ ಅಡಿಯುಂಟು ಮಾಡಿದ್ದರಿಂದ ಸಿಎಸ್‌ಕೆಗೆ 15 ಓವರ್‌ಗಳಲ್ಲಿ 171 ರನ್‌ಗಳ ಗುರಿ ನೀಡಲಾಯಿತು. ಆರಂಭದಿಂದಲೇ ಸ್ಫೋಟಕ ಇನ್ನಿಂಗ್ಸ್‌ ಶುರುಮಾಡಿದ ಸಿಎಸ್‌ಕೆ 5 ವಿಕೆಟ್‌ಗಳ ಗೆಲುವು ಸಾಧಿಸಿ 5ನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ಸಿಎಸ್‌ಕೆ 5 ಬಾರಿ ಟ್ರೋಫಿ ಗೆದ್ದ ಸಾಧನೆಗೆ ಪಾತ್ರವಾಗಿವೆ.

  • ಧೋನಿ ಕ್ಯಾಪ್ಟನ್‌ ಆಗಿದ್ದಿದ್ದರೆ RCB ಮೂರು ಬಾರಿ ಕಪ್‌ ಗೆಲ್ಲುತ್ತಿತ್ತು ಎಂದ ಪಾಕ್‌ ಮಾಜಿ ಕ್ರಿಕೆಟಿಗ

    ಧೋನಿ ಕ್ಯಾಪ್ಟನ್‌ ಆಗಿದ್ದಿದ್ದರೆ RCB ಮೂರು ಬಾರಿ ಕಪ್‌ ಗೆಲ್ಲುತ್ತಿತ್ತು ಎಂದ ಪಾಕ್‌ ಮಾಜಿ ಕ್ರಿಕೆಟಿಗ

    ಮುಂಬೈ: ಎಂ.ಎಸ್‌ ಧೋನಿ (MS Dhoni) ಆರ್‌ಸಿಬಿ (RCB) ಕ್ಯಾಪ್ಟನ್‌ ಆಗಿದ್ದಿದ್ದರೆ ಆರ್‌ಸಿಬಿ ತಂಡ ಮೂರು ಬಾರಿ ಐಪಿಎಲ್‌ ಕಪ್‌ (Indian Premier League Title) ಗೆಲ್ಲುತ್ತಿತ್ತು ಎಂದು ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್‌ ಅಭಿಪ್ರಾಯಪಟ್ಟಿದ್ದಾರೆ.

    ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2008ರಲ್ಲಿ ಐಪಿಎಲ್‌ ಆರಂಭಗೊಂಡಾಗಿನಿಂದಲೂ ಆರ್‌ಸಿಬಿ ಈವರೆಗೆ ಒಮ್ಮೆಯೂ ಕಪ್‌ ಗೆದ್ದಿಲ್ಲ. 2009ರಲ್ಲಿ ಡೆಕ್ಕನ್‌ ಚಾರ್ಜಸ್‌, 2011ರಲ್ಲಿ ಚೆನ್ನೈಸೂಪರ್‌ ಕಿಂಗ್ಸ್‌ (CSK) ಹಾಗೂ 2016ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಸೋತು ಕಪ್‌ ಗೆಲ್ಲುವ ಅವಕಾಶ ಕಳೆದುಕೊಂಡಿತು. ಆದ್ರೆ ಧೋನಿ ಆರ್‌ಸಿಬಿ ನಾಯಕನಾಗಿ ಇರುತ್ತಿದ್ದರೆ ಮೂರು ಬಾರಿ ಆರ್‌ಸಿಬಿ ಪ್ರಶಸ್ತಿ ಗೆಲ್ಲುತ್ತಿತ್ತು ಎಂದು ವಾಸಿಂ ಅಕ್ರಮ್‌ (Wasim Akram) ಹೇಳಿದ್ದಾರೆ. ಇದನ್ನೂ ಓದಿ: ವಿರಾಟ್‌ ಕೊಹ್ಲಿ ನನ್ನ ಫೇವ್ರೆಟ್‌ – ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ

    ಆರ್‌ಸಿಬಿ ತಂಡಕ್ಕೆ ಅಷ್ಟೊಂದು ಸಪೋರ್ಟ್‌ ಇದೆ. ವಿಶ್ವದ ಅಗ್ರ ಬ್ಯಾಟ್ಸ್‌ಮ್ಯಾನ್‌ಗಳಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ ಟೀಂ ನಲ್ಲಿ ಇದ್ದಾರೆ. ಆದರೂ ಈವರೆಗೆ ಕಪ್‌ ಗೆಲ್ಲೂಕೆ ಸಾಧ್ಯವಾಗಿಲ್ಲದೇ ಇರೋದು ದುರದೃಷ್ಟಕರ ಎಂದಿದ್ದಾರೆ. ಇದನ್ನೂ ಓದಿ: IPL 2023: RCB ನನ್ನ ಹೆಮ್ಮೆಯ ತಂಡ – ಇಂದಲ್ಲ ನಾಳೆ ಕಪ್‌ ನಮ್ದೆ ಎಂದ ಸಿದ್ದರಾಮಯ್ಯ

    ಪ್ರಸ್ತುತ ಐಪಿಎಲ್‌ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ತಂಡ 10 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಮುಂಬೈ, ಪಂಬಾಜ್‌ ಕಿಂಗ್ಸ್‌ ಸಹ 10 ಅಂಕಗಳೊಂದಿಗೆ ಕ್ರಮವಾಗಿ 6, 7ನೇ ಸ್ಥಾನದಲ್ಲಿದೆ. ಆದ್ರೆ ಬ್ಯಾಟಿಂಗ್‌ ಪಡೆಯ ಸಮಸ್ಯೆ ಎದುರಿಸುತ್ತಿರುವ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಲು ಕನಿಷ್ಠ 4ರಲ್ಲಿ 3 ಪಂದ್ಯಗಳನ್ನಾದರೂ ಗೆಲ್ಲಲೇಬೇಕಿದೆ. ಈಗಾಗಲೇ 11ರಲ್ಲಿ 8 ಪಂದ್ಯ ಗೆದ್ದಿರುವ ಗುಜರಾತ್‌ ಟೈಟಾನ್ಸ್‌ ಬಹುತೇಕ ಪ್ಲೆ ಆಫ್‌ ಸ್ಥಾನ ಖಚಿತಪಡಿಸಿಕೊಂಡಿದೆ. ಸಿಎಸ್‌ಕೆ 6ರಲ್ಲಿ ಗೆಲುವು ಸಾಧಿಸಿ 2ನೇ ಸ್ಥಾನದಲ್ಲಿದೆ.