Tag: IPL

  • ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    – ಶ್ರೇಯಸ್‌ ಅಯ್ಯರ್‌ ಸ್ಫೋಟಕ ಅರ್ಧಶತಕ
    – 2ನೇ ಬಾರಿ ಫೈನಲ್‌ ಪ್ರವೇಶಿಸಿದ ಪಂಜಾಬ್‌

    ಅಹಮಾದಾಬಾದ್‌: ಕ್ವಾಲಿಫೈಯರ್‌-2ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ರೋಚಕ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಪಂಜಾಬ್‌ (Punjab Kings) ಐಪಿಎಲ್‌ ಫೈನಲ್‌ಗೆ (IPL Final) ಪ್ರವೇಶಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಬಗ್ಗು ಬಡಿದ ಪಂಜಾಬ್‌ 2ನೇ ಬಾರಿ ಫೈನಲ್‌ಗೆ ತಲುಪಿದ್ದು ನಾಳೆ ಆರ್‌ಸಿಬಿಯನ್ನು (RCB) ಎದುರಿಸಲಿದೆ

    ಮಳೆಯಿಂದ 2 ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನೂ 6 ಎಸೆತ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್‌ ಆರ್ಯ 20 ರನ್‌, ಪ್ರಭುಸಿಮ್ರಾನ್‌ ಸಿಂಗ್‌ 6 ರನ್‌, ಬುಮ್ರಾ ಮೊದಲ ಓವರ್‌ನಲ್ಲಿ 20 ರನ್‌ ಹೊಡೆದ ಜೋಶ್‌ ಇಂಗ್ಲಿಸ್‌ 38 ರನ್‌(21 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದಾಗ ಪಂಜಾಬ್‌ ಸ್ಕೋರ್‌ 3 ವಿಕಟ್‌ ನಷ್ಟಕ್ಕೆ 72 ರನ್‌ ಗಳಿಸಿತ್ತು. ಇದನ್ನೂ ಓದಿ: ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

    ಒಂದು ಹಂತದಲ್ಲಿ ಸಂಕಷ್ಟದಲ್ಲಿದ್ದರೂ ಶ್ರೇಯಸ್‌ ಅಯ್ಯರ್‌ ಮತ್ತು ನೆಹಲ್‌ ವಧೇರಾ 47 ಎಸೆತಗಳಲ್ಲಿ 84 ರನ್‌ ಜೊತೆಯಾಟವಾಡಿ ತಂಡವನ್ನು ಪಾರು ಮಾಡಿದರು. ವಧೇರಾ 48 ರನ್‌(29 ಎಸೆತ, 4 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ನಾಯಕನ ಆಟವಾಡಿದ ಶ್ರೇಯಸ್‌ ಅಯ್ಯರ್‌ ಔಟಾಗದೇ 87 ರನ್‌(41 ಎಸೆತ, 5 ಬೌಂಡರಿ, 8 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು. ಅತ್ಯುತ್ತಮ ಆಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟ ಶ್ರೇಯಸ್‌ ಅಯ್ಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

     

    11 ವರ್ಷಗಳ ಬಳಿಕ ಫೈನಲ್‌:
    ಪಂಜಾಬ್ ಐಪಿಎಲ್‌ನಲ್ಲಿಎರಡನೇ ಬಾರಿ ಫೈನಲ್‌ ಪ್ರವೇಶಿಸಿದೆ. 11 ವರ್ಷಗಳ ಹಿಂದೆ 2014 ರಲ್ಲಿ ಕೋಲ್ಕತ್ತಾ ವಿರುದ್ಧ ಫೈನಲ್‌ನಲ್ಲಿ ಸೋತು ಪಂಜಾಬ್‌ ರನ್ನರ್‌ ಅಪ್‌ ಅಗಿತ್ತು.

  • IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

    IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

    ಬೆಂಗಳೂರು: ಮಲ್ಲನ್‌ಪುರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ. ಈ ಗೆಲುವನ್ನು‌ ಆರ್‌ಸಿಬಿ ಫ್ಯಾನ್ಸ್ ನಗರದ ಹಲವೆಡೆ ಸಂಭ್ರಮಿಸುತ್ತಿದ್ದಾರೆ. ಓರಿಯಾನ್ ಮಾಲ್‌ನಲ್ಲಿ ಅಭಿಮಾನಿಗಳು ಆರ್‌ಸಿಬಿಗೆ ಜಯಘೋಷ ಕೂಗಿದ್ದಾರೆ. ಅಲ್ಲದೇ ಕುಣಿದು ಕುಪ್ಪಳಿಸಿದ್ದಾರೆ.

    ವಿಜಯನಗರದಲ್ಲಿ RCB ಅಭಿಮಾನಿಗಳು ರಸ್ತೆ ತಡೆದು ಸಂಭ್ರಮಾಚರಣೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ರಸ್ತೆ ಕ್ಲಿಯರ್ ಮಾಡಿಸುತ್ತಿದ್ದಾರೆ.

    ಪಂಜಾಬ್‌ ನೀಡಿದ 102 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಸಿಡಿಸಿ ಗೆಲುವು ಸಾಧಿಸಿತು. ಈ ಮೂಲಕ 4ನೇ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿದೆ.

    2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

    ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

    ಮುಲ್ಲಾನ್‌ಪುರ: ಐಪಿಎಲ್‌ (IPL 2025) ಲೀಗ್‌ ಹಂತದ ಎಲ್ಲಾ ಪಂದ್ಯಗಳು ಕೊನೆಗೊಂಡಿದ್ದು ಇಂದು ಚಂಡೀಗಢದ ಮುಲ್ಲಾನ್‌ಪುರದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಪಂಜಾಬ್‌ ಕಿಂಗ್ಸ್‌ (PBKS) ಮಧ್ಯೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯಗಳಿಸಿದವರು ನೇರವಾಗಿ ಫೈನಲ್‌ ಪ್ರವೇಶಿಸಿದರೆ ಸೋತವರು ಭಾನುವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ ಪಂದ್ಯವನ್ನು ಆಡಬೇಕಾಗುತ್ತದೆ.

    ಆರ್‌ಸಿಬಿ ಈ ಬಾರಿ ಲೀಗ್‌ 14 ಪಂದ್ಯಗಳ ಪೈಕಿ 9 ರಲ್ಲಿ ಗೆದ್ದಿದೆ. ಮಳೆಯಿಂದ ಬೆಂಗಳೂರಿನ ಪಂದ್ಯ ರದ್ದಾಗಿದ್ದರಿಂದ ಒಟ್ಟು 19 ಅಂಕ ಸಂಪಾದಿಸಿ 2ನೇ ಸ್ಥಾನ ಪಡೆದಿದೆ. ಪಂಜಾಬ್‌ ಸಮಾನ 19 ಅಂಕ ಪಡೆದರೂ ನೆಟ್‌ ರನ್‌ರೇಟ್‌ ಆಧಾರದಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಬಾರಿ ಮೂರನೇ ಬಾರಿ ಇತ್ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್‌ ಮುಖಾಮುಖಿಯಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಿವೆ.  ಇದನ್ನೂ ಓದಿ: IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

    ಆರ್‌ಸಿಬಿಗೆ ಗಾಯದ ಚಿಂತೆ:
    ಐಪಿಎಲ್ ಪುನಾರಂಭದ ಬಳಿಕ ಆರ್‌ಸಿಬಿಯಲ್ಲಿ ಗಾಯದ ಸಮಸ್ಯೆ ಹೆಚ್ಚಾಗಿದೆ. ವೇಗಿ ಜೋಶ್ ಹೇಜಲ್‌ವುಡ್ ಫಿಟ್ ಆಗಿದ್ದು, ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಟಿಮ್ ಡೇವಿಡ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಗೈರಾಗಲಿದ್ದಾರೆ ಎನ್ನಲಾಗುತ್ತಿದೆ. ನಾಯಕ ರಜತ್ ಪಾಟೀದಾರ್ ಗಾಯದ ಸಮಸ್ಯೆ ಜೊತೆಗೆ ಲಯದ ಸಮಸ್ಯೆ ಎದುರಿಸುತ್ತಿದ್ದಾರೆ.

    ಕಳೆದ ಬಾರಿ ಶ್ರೇಯಸ್‌ ಅಯ್ಯರ್‌ ನೇತೃತ್ವದಲ್ಲಿ ಕೋಲ್ಕತ್ತಾ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಈ ಬಾರಿಯೂ ಶ್ರೇಯಸ್‌ ಅಯ್ಯರ್‌ ತಂಡವನ್ನು ಪ್ಲೇ ಆಫ್‌ವರೆಗೆ ತಲುಪಿಸಿದ್ದಾರೆ. ತಂಡ ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದು ತವರಿನಲ್ಲಿ ಆರ್‌ಸಿಬಿಯನ್ನು ಮಣಿಸುವ ಲೆಕ್ಕಾಚಾರದಲ್ಲಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಈ ಬಾರಿಯ ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ (Virat Kohli) ಒಟ್ಟು 602 ರನ್‌ ಹೊಡೆದು ಅತಿ ಹೆಚ್ಚು ರನ್‌ ಹೊಡೆದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದರೆ 514 ರನ್‌ ಹೊಡೆದಿರುವ ಶ್ರೇಯಸ್‌ ಅಯ್ಯರ್‌ (Shreyas Iyer) 10ನೇ ಸ್ಥಾನ ಪಡೆದಿದ್ದಾರೆ. 499 ರನ್‌ ಹೊಡೆದಿರುವ ಪ್ರಭುಸಿಮ್ರಾನ್‌ ಸಿಂಗ್‌ 11ನೇ ಸ್ಥಾನ ಪಡೆದಿದ್ದಾರೆ.

    ಬೌಲಿಂಗ್‌ನಲ್ಲಿ 10 ಪಂದ್ಯಗಳಿಂದ 18 ವಿಕೆಟ್‌ ಪಡೆದ ಜೋಶ್ ಹೇಜಲ್‌ವುಡ್ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದರೆ ಪಂಜಾಬ್‌ ಕಿಂಗ್ಸ್‌ನ ಅರ್ಶ್‌ದೀಪ್‌ ಸಿಂಗ್‌ 14 ಪಂದ್ಯಗಳಿಂದ 18 ವಿಕೆಟ್‌ ಪಡೆದು 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    ಟ್ರೋಫಿ ಸಿಕ್ಕಿಲ್ಲ
    ಆರ್‌ಸಿಬಿ ಮತ್ತು ಪಂಜಾಬ್‌ ಇಲ್ಲಿಯವರೆಗೆ ಟ್ರೋಫಿಯನ್ನು ಗೆದ್ದಿಲ್ಲ. ಆದರೆ ಇಲ್ಲಿಯವರೆಗೆ ಎರಡೂ ತಂಡಗಳು ಫೈನಲ್‌ ಪ್ರವೇಶಿಸಿವೆ. ಆರ್‌ಸಿಬಿ 2009, 2011, 2016 ರಲ್ಲಿ ಫೈನಲ್‌ ಪ್ರವೇಶಿಸಿದರೆ ಪಂಜಾಬ್‌ 2014 ರಲ್ಲಿ ಫೈನಲ್‌ ಪ್ರವೇಶಿಸಿತ್ತು.

  • ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ಲಕ್ನೋ: ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿ ತಂಡವನ್ನು ಕ್ವಾಲಿಫೈಯರ್‌ಗೆ ತೆಗೆದುಕೊಂಡ ಹೋದ ನಾಯಕ ಜಿತೇಶ್‌ ಶರ್ಮಾ (Jitesh Sharma) ಆರ್‌ಸಿಬಿಯಲ್ಲಿರುವ (RCB) ಅಣ್ಣನ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

    ಆರ್‌ಸಿಬಿಯಲ್ಲಿರುವ ಅಣ್ಣ ಯಾರೂ ಅಲ್ಲ. ದಿನೇಶ್‌ ಕಾರ್ತಿಕ್‌ (Dinesh Karthik) ಅವರನ್ನೇ ಜಿತೇಶ್‌ ಶರ್ಮಾ ಅಣ್ಣ ಎಂದು ಸಂಬೋಧಿಸಿ ಗೌರವ ನೀಡಿದ್ದಾರೆ.

    ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಜಿತೇಶ್‌ ಶರ್ಮಾ ಅವರನ್ನು ಮುರಳಿ ಕಾರ್ತಿಕ್‌ ಮಾತನಾಡಿಸಿದರು. ಈ ವೇಳೆ, ವಿರಾಟ್ ಕೊಹ್ಲಿ ಔಟಾದಾಗ ನಾನು ಈ ಬಾರಿ ಆಟ ಆಡಲೇಬೇಕು ಎಂದು ನಿರ್ಧರಿಸಿದೆ. ನನ್ನ ಬಳಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ ಎಂದು ನನ್ನ ಗುರು, ಮಾರ್ಗದರ್ಶಕ ಡಿಕೆ ಅಣ್ಣ ಹೇಳಿ ಹುರಿದುಂಬಿಸಿದರು. ಅದರಂತೆ ನಾನು ನನ್ನ ಆಟವಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

     

     

    ನನಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ನಾನು ಆ ರೀತಿಯ ಆಡಿ ಪಂದ್ಯವನ್ನು ಗೆಲ್ಲಿಸಿದ್ದೇನೆ ಎಂದು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    ಎಲ್ಲಾ ಹೊರೆ ನನ್ನ ಮೇಲಿರುವುದರಿಂದ ನನಗೆ ಒತ್ತಡ ಇತ್ತು. ಆದರೆ ನನ್ನೊಂದಿಗೆ ವಿರಾಟ್, ಕೃನಾಲ್, ಭುವಿ ಇದ್ದಾರೆ.  ನಾವು ಚೆನ್ನಾಗಿ ಆಡಲು ಪ್ರಯತ್ನಿಸುತ್ತೇವೆ. ಮುಂದಿನ ಪಂದ್ಯದಲ್ಲೂ ಇದೇ ರೀತಿಯ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

    ಲಕ್ನೋ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 11.2 ಓವರ್‌ಗಳಲ್ಲಿ 123 ರನ್‌ಗಳಿಸಿದ್ದಾಗ 54 ರನ್‌(30 ಎಸೆತ, 10 ಬೌಂಡರಿ) ಹೊಡೆದಿದ್ದ ಕೊಹ್ಲಿ ಔಟಾಗಿದ್ದರು.  ನಂತರ ಮುರಿಯದ 5ನೇ ವಿಕೆಟಿಗೆ ಮಯಾಂಕ್‌ ಅಗರ್‌ವಾಲ್‌ ಮತ್ತು ಜಿತೇಶ್‌ ಶರ್ಮಾ 45 ಎಸೆತಗಳಲ್ಲಿ 107 ರನ್‌ ಜೊತೆಯಾಟವಾಡಿ ಪಂದ್ಯವನ್ನು ಗೆಲ್ಲಿಸಿದ್ದಾರೆ.

    107 ರನ್‌ಗಳ ಜೊತೆಯಾಟದಲ್ಲಿ ಮಯಾಂಕ್‌ 12 ಎಸೆತಗಳಲ್ಲಿ 20 ರನ್‌ ಹೊಡೆದರೆ ಜಿತೇಶ್‌ ಶರ್ಮಾ 85(33 ಎಸೆತ, 8 ಬೌಂಡರಿ, 6 ಸಿಕ್ಸ್‌) ಹೊಡೆಯುವ ಮೂಲಕ ಗೆಲುವಿನ ದಡ ಸೇರಿಸಿದರು.

  • ಟಾಪ್‌-2ಗೆ ಫೈಟ್‌ | ಮಳೆಯಿಂದ ರದ್ದಾದ್ರೆ ಕ್ವಾಲಿಫೈಯರ್-1 ಆರ್‌ಸಿಬಿ ಎಂಟ್ರಿ!

    ಟಾಪ್‌-2ಗೆ ಫೈಟ್‌ | ಮಳೆಯಿಂದ ರದ್ದಾದ್ರೆ ಕ್ವಾಲಿಫೈಯರ್-1 ಆರ್‌ಸಿಬಿ ಎಂಟ್ರಿ!

    ಲಕ್ನೋ: ಇಂದು ಲಕ್ನೋ (Lucknow Super Giants) ವಿರುದ್ಧದ ಪಂದ್ಯ ಗೆದ್ದರೆ ಆರ್‌ಸಿಬಿ (RCB) ಕ್ವಾಲಿಫೈಯರ್-1ಕ್ಕೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಮಳೆಯಿಂದ ರದ್ದಾದರೆ ಆರ್‌ಸಿಬಿ ರನ್‌ ರೇಟ್‌ ಆಧಾರದದಲ್ಲಿ ಅಗ್ರ-2 ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದೆ.

    ಹೌದು. ಈಗಾಗಲೇ ಪ್ಲೇ ಆಫ್‌ಗೆ 4 ತಂಡಗಳು ಪ್ರವೇಶ ಪಡೆದರೂ ಅಗ್ರ-2 ಸ್ಥಾನಕ್ಕೆ ನಡೆಯುತ್ತಿರುವ ಪೈಪೋಟಿ ಇನ್ನೂ ಕಡಿಮೆಯಾಗಿಲ್ಲ. 14 ಪಂದ್ಯಗಳಿಂದ 19 ಅಂಕ ಪಡೆದಿರುವ ಪಂಜಾಬ್‌ (Punjab Kings) ಈಗಾಗಲೇ ಕ್ವಾಲಿಫೈಯರ್‌-1ಗೆ ಅರ್ಹತೆ ಪಡೆದಿದೆ.

    ಕ್ವಾಲಿಫೈಯರ್‌ ಅರ್ಹತೆ ಪಡೆಯುವ ಎರಡನೇ ತಂಡಕ್ಕೆ ಆರ್‌ಸಿಬಿ ಮತ್ತು ಗುಜರಾತ್‌ ಮಧ್ಯೆ ಪ್ರಬಲ ಸ್ಪರ್ಧೆ ನಡೆಯುತ್ತಿದೆ. ಗುಜರಾತ್‌ (Gujarat Giants) ಸತತ 2 ಪಂದ್ಯಗಳನ್ನು ಸೋತರೆ ಆರ್‌ಸಿಬಿ ಹೈದರಾಬಾದ್‌ ವಿರುದ್ಧ ಸೋತಿದೆ. ಇದನ್ನೂ ಓದಿ: ಟೆಸ್ಟ್‌ ನಿವೃತ್ತಿ ಬಳಿಕ ಟೆಂಪಲ್‌ ರನ್‌; ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ವಿರುಷ್ಕಾ ದಂಪತಿ ಭೇಟಿ

    ಅಂಕಪಟ್ಟಿಯಲ್ಲಿ ಗುಜರಾತ್‌ 18 ಅಂಕ ಪಡೆದರೆ ಆರ್‌ಸಿಬಿ 17 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿದ್ದ ಗುಜರಾತ್ ಟೈಟಾನ್ಸ್‌ನ ಸತತ 2 ಪಂದ್ಯಗಳನ್ನು ಸೋತ ಕಾರಣ ಆರ್‌ಸಿಬಿಗೆ ಅಗ್ರ-2 ಸ್ಥಾನಕ್ಕೇರುವ ಸುವರ್ಣಾವಕಾಶ ಒದಗಿಬಂದಿದೆ. ಒಂದು ವೇಳೆ ಲಕ್ನೋ ವಿರುದ್ಧ ಆರ್‌ಸಿಬಿ ಸೋತರೆ ಮುಂಬೈ ವಿರುದ್ಧ ಎಲಿಮಿನೇಟರ್‌ ಪಂದ್ಯವನ್ನು ಆಡಬೇಕಾಗುತ್ತದೆ.

    ರದ್ದಾದ್ದರೂ ಟಾಪ್‌-2
    ಆರ್‌ಸಿಬಿ ಉತ್ತಮ ರನ್‌ರೇಟ್‌ನಿಂದ ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಬಹುದು. ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೂ, ಆರ್‌ಸಿಬಿಗೆ ನೆಟ್ ರನ್‌ರೇಟ್ ಆಧಾರದಲ್ಲಿ ಅಗ್ರ-2ರಲ್ಲಿ ಸ್ಥಾನ ಪಡೆಯಲಿದೆ.

    ಗುಜರಾತ್‌ 18 ಅಂಕದ ಜೊತೆಗೆ 0.254 ನೆಟ್ ರನ್‌ರೇಟ್ ಇದೆ. ಆರ್‌ಸಿಬಿ ಈಗ 17 ಅಂಕದ ಜೊತೆಗೆ 0.255 ರನ್‌ ರೇಟ್‌ ಹೊಂದಿದೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ 1 ಅಂಕ ಲಭಿಸಿದಾಗ ಆರ್‌ಸಿಬಿ ಅಂಕ 18 ಆಗುತ್ತದೆ. ಗುಜರಾತ್‌ಗೆ ಹೋಲಿಸಿದಾಗ 0.001 ರನ್‌ರೇಟ್‌ ಹೆಚ್ಚಿದೆ. ಅಂಕಗಳು ಸಮನಾದರೆ ನೆಟ್ ರನ್‌ರೇಟ್‌ನಲ್ಲಿ ಆರ್‌ಸಿಬಿ ಅಗ್ರ -2 ಸ್ಥಾನ ಪಡೆಯಲಿದೆ.

  • ಹೈದರಾಬಾದ್‌ಗೆ 6 ವಿಕೆಟ್‌ಗಳ ಅಮೋಘ ಜಯ – ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದ ಲಕ್ನೋ!

    ಹೈದರಾಬಾದ್‌ಗೆ 6 ವಿಕೆಟ್‌ಗಳ ಅಮೋಘ ಜಯ – ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದ ಲಕ್ನೋ!

    ಲಕ್ನೋ: ಅಭಿಷೇಕ್‌ ಶರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ 200+ ರನ್‌ ಚೇಸಿಂಗ್‌ ಮಾಡಿ ಐತಿಹಾಸಿಕ ಗೆಲುವು ದಾಖಲಿಸಿದೆ. ಇನ್ನೂ ಕಳಪೆ ಬೌಲಿಂಗ್‌ ಪ್ರದರ್ಶನದಿಂದಾಗಿ ಸೋಲು ಕಂಡ ಲಕ್ನೋ ಸೂಪರ್‌ ಜೈಂಟ್ಸ್‌ 18ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್‌ರೇಸ್‌ನಿಂದಲೇ ಹೊರಬಿದ್ದಿದೆ.

    ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. 206 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್‌ 18.2 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 2೦6 ರನ್‌ ಗಳಿಸಿ ಗೆಲುವು ಸಾಧಿಸಿತು.‌

    ಸನ್‌ ರೈಸರ್ಸ್ ಪರ ಅಭಿಷೇಕ್‌ ಶರ್ಮಾ 20 ಎಸೆತಗಳಲ್ಲಿ 6 ಸಿಕ್ಸರ್‌, 4 ಬೌಂಡರಿ ನೆರವಿಂದ 59 ರನ್‌, ಇಶನ್‌ ಕಿಶನ್‌ 28 ಎಸೆತಗಳಲ್ಲಿ 35 ರನ್, ಹೆನ್ರಿಕ್ ಕ್ಲಾಸೆನ್ 28 ಎಸೆತಗಳಲ್ಲಿ 47 ರನ್‌ ಗಳಿಸಿ ತಂಡಕ್ಕೆ ಕೊಡುಗೆ ಕೊಟ್ಟರು. ಕಮಿಂಡು ಮೆಂಡಿಸ್ 21 ಎಸೆತಗಳಲ್ಲಿ 32 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಅಥರ್ವ 13 ರನ್‌, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ತಲಾ 5 ರನ್‌ ಗಳಿಸಿ ತಂಡದ ಗೆಲುವಿಗೆ ಸಹಕರಿಸಿದರು. ‌

    ಲಕ್ನೋ ಪರ ದಿಗ್ವೇಶ್ ರಾಠಿ 2 ವಿಕೆಟ್‌, ವಿಲ್ ಒ’ರೂರ್ಕ್ 1 ವಿಕೆಟ್‌, ಶಾರ್ದೂಲ್ ಠಾಕೂರ್ 1 ವಿಕೆಟ್‌ ಕಬಳಿಸಿದರು. ಅಭಿಷೇಕ್ ಶರ್ಮಾ ಔಟಾಗಿ ತೆರಳುವಾಗ ದಿಗ್ವೇಶ್ ರಾಠಿ ಸನ್ನೆ ಮಾಡಿದ್ದು ಇಬ್ಬರ ನಡುವೆ ವಾಗ್ವಾದ ನಡೆಯಿತು.



    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಲಕ್ನೋ, ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ 39 ಎಸೆತಗಳಲ್ಲಿ 65 ರನ್, ಹಾಗೂ ಏಡನ್ ಮಾಕ್ರಂ 38 ಎಸೆತಗಳಲ್ಲಿ 61 ರನ್ ಗಳಿಸಿ, ಮೊದಲ ವಿಕೆಟ್‌ಗೆ 115 ರನ್‌ಗಳ ಜೊತೆಯಾಟ ಆಡುವ ಮೂಲಕ ಬೃಹತ್‌ ಮೊತ್ತ ಕಲೆಹಾಕಿ ಕೊಟ್ಟರು. ಹರ್ಷ್ ದುಬೆಯವರು ಮಾರ್ಷ್ ವಿಕೆಟ್ ಪಡೆಯುವ ಮೂಲಕ ಈ ಜೊತೆಯಾಟಕ್ಕೆ ಕೊನೆ ಹಾಡಿದರು. ಇನ್ನೂ ನಾಯಕ ರಿಷಬ್ ಪಂತ್ ಕೇವಲ 7(6 ಎಸೆತ) ರನ್‌ ಗಳಿಸಿ ಈಶಾನ್ ಮಾಲಿಂಗಗೆ ವಿಕೆಟ್ ಒಪ್ಪಿಸಿ, ಈ ಸೀಜನ್‌ನಲ್ಲಿಯೂ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದರು. ಇನ್ನಿಂಗ್ಸ್‌ನ ಕೊನೆಯಲ್ಲಿ ನಿಕೋಲಸ್ ಪೂರೆನ್ 26ಎಸೆತಗಳಲ್ಲಿ 45 ರನ್ ಗಳಿಸಿ ಸಮಯೋಚಿತ ಆಟವಾಡುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

    ಸನ್‌ ರೈಸರ್ಸ್‌ ಪರ ಹರ್ಷಲ್ ಪಟೇಲ್ 1 ವಿಕೆಟ್‌, ಹರ್ಷ್ ದುಬೆ 1 ವಿಕೆಟ್‌, ಹಾಗೂ ನಿತೀಶ್ ಕುಮಾರ್ ರೆಡ್ಡಿ ತಲಾ 1, ಮಾಲಿಂಗ 2 ವಿಕೆಟ್ ಪಡೆದು ಮಿಂಚಿದರು.

  • ಐಪಿಎಲ್‌ ಪ್ಲೇಆಫ್‌ – 4ನೇ ಸ್ಥಾನಕ್ಕೆ 3 ತಂಡಗಳ ಮಧ್ಯೆ ರೇಸ್‌

    ಐಪಿಎಲ್‌ ಪ್ಲೇಆಫ್‌ – 4ನೇ ಸ್ಥಾನಕ್ಕೆ 3 ತಂಡಗಳ ಮಧ್ಯೆ ರೇಸ್‌

    ನವದೆಹಲಿ: ಐಪಿಎಲ್‌ (IPL) ಪ್ಲೇ ಆಫ್‌ನ (Playoffs) 4ನೇ ಸ್ಥಾನಕ್ಕಾಗಿ ಈಗ ಮೂರು ತಂಡಗಳ ಮಧ್ಯೆ ಪೈಪೋಟಿ ಆರಂಭವಾಗಿದೆ.

    ಡೆಲ್ಲಿ (DC) ವಿರುದ್ಧ ಗುಜರಾತ್‌ ಜೈಂಟ್ಸ್‌ ಜಯಗಳಿಸುವುದರೊಂದಿಗೆ ಗುಜರಾತ್‌ ಟೈಟಾನ್ಸ್‌, ಆರ್‌ಸಿಬಿ ಮತ್ತು ಪಂಜಾಬ್‌ ಕಿಂಗ್ಸ್‌ ಪ್ಲೇ ಆಫ್‌ ಪ್ರವೇಶಿಸಿದೆ. ಈಗ ಮುಂಬೈ ಇಂಡಿಯನ್ಸ್‌ (Mumbai Indians), ಲಕ್ನೋ (Lucknow Super Giants) ಮತ್ತು ಡೆಲ್ಲಿ ಮಧ್ಯೆ 4ನೇ ಸ್ಥಾನಕ್ಕಾಗಿ ಸ್ಪರ್ಧೆ ಆರಂಭವಾಗಿದೆ.

    ಲಕ್ನೋ ಮೂರು ಪಂದ್ಯ ಗೆದ್ದರೆ 16 ಅಂಕ ತಲುಪಬಹುದಾಗಿದೆ. ಮುಂಬೈ ಎರಡು ಪಂದ್ಯ ಗೆದ್ದರೆ 18 ಅಂಕ ಸಂಪಾದಿಸಿದರೆ ಡೆಲ್ಲಿ ಎರಡು ಪಂದ್ಯ ಗೆದ್ದರೆ 17 ಅಂಕ ಪಡೆಯಲಿದೆ. ಆದರೆ ಇಲ್ಲಿ ಮುಂಬೈ ಮತ್ತು ಡೆಲ್ಲಿ ಮಧ್ಯೆ ಒಂದು ಪಂದ್ಯ ನಡೆಯಲಿದೆ. ಇದನ್ನೂ ಓದಿ: RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

    ಮುಂಬೈ ವಿರುದ್ಧ ಡೆಲ್ಲಿ ಸೋತರೆ, ಡೆಲ್ಲಿ ಹೊರಬೀಳಲಿದೆ. ಮುಂಬೈ ಸೋತರೆ, ಆಗ ಪಂಜಾಬ್ ವಿರುದ್ಧ ಕೊನೆಯ ಪಂದ್ಯದಲ್ಲಿ ಗೆಲ್ಲಬೇಕು. ಜೊತೆಗೆ ಡೆಲ್ಲಿ ತನ್ನ ಕೊನೆ ಪಂದ್ಯದಲ್ಲಿ ಪಂಜಾಬ್‌ಗೆ ಶರಣಾಗಿ, ಲಕ್ನೋ 3 ರಲ್ಲಿ 1 ಪಂದ್ಯ ಸೋಲಬೇಕು. ಸದ್ಯ 10 ಅಂಕ ಪಡೆದಿರುವ ಲಕ್ನೋ ಮೂರಕ್ಕೆ ಮೂರೂ ಪಂದ್ಯ ಗೆಲ್ಲಬೇಕಾಗುತ್ತದೆ. ಇದನ್ನೂ ಓದಿ: ಪಾಕಿಗೆ ಶಾಕ್‌ – ಏಷ್ಯಾಕಪ್‌ನಿಂದ ಹಿಂದೆ ಸರಿದ ಭಾರತ!

    ಈಗಾಗಲೇ ಪ್ಲೇ-ಆಫ್‌ಗೇರಿರುವ 3 ತಂಡ ಗಳ ನಡುವೆ ಮೊದಲ 2 ಸ್ಥಾನಕ್ಕೆ ಪೈಪೋಟಿ ಇದೆ. ಅಗ್ರ-2ರಲ್ಲಿ ಸ್ಥಾನ ಪಡೆಯುವ ತಂಡಗಳು ಕ್ವಾಲಿಫೈಯರ್-1ನಲ್ಲಿ ಆಡಲಿದ್ದು, ಆ ಪಂದ್ಯ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಕ್ವಾಲಿಫಯರ್‌ನಲ್ಲಿ ಸೋತ ತಂಡಕ್ಕೂ ಎಲಿಮಿನೇಟರ್‌ ಪಂದ್ಯವಿದೆ.

  • RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

    RCB, ಗುಜರಾತ್‌, ಪಂಜಾಬ್‌ ಪ್ಲೇ-ಆಫ್‌ಗೆ ಎಂಟ್ರಿ – ಡೆಲ್ಲಿ ವಿರುದ್ಧ ನೋ ಲಾಸ್‌ನಲ್ಲಿ ಟೈಟಾನ್ಸ್‌ ಪಾಸ್‌

    ನವದೆಹಲಿ: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಗುಜರಾತ್‌ ಟೈಟಾನ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿವೆ. ಇಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮೂರು ತಂಡಗಳು ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್‌ 12ರಲ್ಲಿ 9 ಪಂದ್ಯ ಗೆದ್ದು 18 ಅಂಕ, ಆರ್‌ಸಿಬಿ ಹಾಗೂ ಪಂಜಾಬ್‌ 12ರಲ್ಲಿ ತಲಾ 8 ಪಂದ್ಯ ಗೆದ್ದು 17 ಅಂಕಗಳೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿವೆ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 10ನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ರೆ, ಗುಜರಾತ್‌ ಟೈಟಾನ್ಸ್‌ 3ನೇ ಬಾರಿಗೆ ಹಾಗೂ ಪಂಜಾಬ್‌ ಕಿಂಗ್ಸ್‌ 11 ವರ್ಷಗಳ ಬಳಿಕ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

    2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಗುಜರಾತ್‌ ಟೈಟಾನ್ಸ್‌ ಆರಂಭಿಕ 2 ಆವೃತ್ತಿಗಳಲ್ಲಿ ಆವೃತ್ತಿಗಳಲ್ಲೂ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಆದ್ರೆ 2024ರ ಆವೃತ್ತಿಯಲ್ಲಿ ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಟೈಟಾನ್ಸ್‌ ಪಡೆ ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತ್ತು. ಇನ್ನೂ 2014ರಲ್ಲಿ ಕೊನೆಯ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ್ದ ಪಂಜಾಬ್‌ ಕಿಂಗ್ಸ್‌ ಇದೀಗ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.

    ಡೆಲ್ಲಿ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಒಂದೂ ವಿಕೆಟ್‌ ಕಳೆದುಕೊಳ್ಳದೇ 19 ಓವರ್‌ಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ತಂಡದ ಪರ ಸಾಯಿ ಸುದರ್ಶನ್‌ 4 ಸಿಕ್ಸರ್‌ , 12 ಬೌಂಡರಿ ಸಿಡಿಸಿ 108 ರನ್‌, ಶುಭಮನ್‌ಗಿಲ್‌ 7 ಸಿಕ್ಸರ್‌ 3 ಬೌಂಡರಿ ನೆರವಿಂದ 93 ರನ್‌ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ಕೆ.ಎಲ್. ರಾಹುಲ್ ಆಕರ್ಷಕ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಕಲೆ ಹಾಕಿತು. ಆರಂಭದಿಂದಲೂ ಅಬ್ಬರದ ಆಟ ಆಡಿದ ಕೆ.ಎಲ್. ರಾಹುಲ್ 65 ಎಸೆತಗಳಲ್ಲಿ 4 ಸಿಕ್ಸರ್‌ 14 ಬೌಂಡರಿ ನೆರವಿನಿಂದ 112 ಚಚ್ಚಿ ಮಿಂಚಿದರು.

    ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಿರೀಕ್ಷೆ ತಲೆಕೆಳಗಾಗುವಂತೆ ಮಾಡಿದ್ದ ಕೆ.ಎಲ್ ರಾಹುಲ್. ಕೊನೆವರೆಗೂ ಅವರನ್ನು ಔಟ್ ಮಾಡಲು ಗುಜರಾತ್ ತಂಡದ ಶ್ರಮ ವ್ಯರ್ಥವಾಯಿತು. ತಂಡದ ಪರ ಅಭಿಷೇಕ್ ಪೋರೆಲ್ 30, ಅಕ್ಷರ್ ಪಟೇಲ್ 25 ರನ್ ಬಾರಿಸಿ ನಿರ್ಗಮಿಸಿದರು. ಟ್ರಿಸ್ಟನ್‌ ಸ್ಟಬ್ಸ್‌ 25 ರನ್‌ಗಳ ಕೊಡುಗೆ ನೀಡಿದರು. ಡುಪ್ಲೆಸಿಸ್ 5 ರನ್‌ಗಳಿಸಿ ಬೇಗ ನಿರ್ಗಮಿಸಿದರು.

    ಗುಜರಾತ್‌ ಪರ ಅರ್ಷದ್ ಖಾನ್, ಪ್ರಸಿದ್ಧ್ ಕೃಷ್ಣ, ರಶೀದ್ ಖಾನ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

  • ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

    ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR)  ಪಂದ್ಯ 5 ಓವರ್‌ಗಳ ಆಟಕ್ಕೆ ಸೀಮಿತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು, ಬೆಂಗಳೂರಿನಲ್ಲಿ (Bengaluru) ಭಾರೀ ಮಳೆಯಾಗುತ್ತಿದ್ದು ಪಂದ್ಯ ಇನ್ನೂ ಆರಂಭವಾಗಿಲ್ಲ. ಒಂದು ವೇಳೆ ಮಳೆ ಮುಂದುವರಿದರೆ ಓವರ್‌ ಕಡಿತವಾಗುತ್ತದೆ.

    ರಾತ್ರಿ 8:45ಕ್ಕೆ ಪಂದ್ಯ ಆರಂಭವಾದರೆ ಓವರ್‌ನಲ್ಲಿ ಕಡಿತವಾಗುವುದಿಲ್ಲ. ನಂತರ ಪಂದ್ಯ ನಡೆದರೆ ಓವರ್‌ ಕಡಿತವಾಗುತ್ತದೆ. ರಾತ್ರಿ 10:56ರ ವರೆಗೆ ಪಂದ್ಯ ನಡೆಸಲು ಅವಕಾಶವಿದ್ದು ಕನಿಷ್ಠ 5 ಓವರ್‌ ಆದರೂ ಆಡಿಸಬಹುದು.

    ರಾತ್ರಿ 10:50 ರ ನಂತರವೂ ಮಳೆ ಸುರಿದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ಸಮಾನವಾಗಿ ಒಂದೊಂದು ಅಂಕ ನೀಡಲಾಗುತ್ತದೆ. ಹೀಗಾಗಿ ಆರ್‌ಸಿಬಿ 12 ಪಂದ್ಯಗಳಿಂದ 17 ಅಂಕ ಪಡೆದರೆ ಕೆಕೆಆರ್‌ 13 ಪಂದ್ಯವಾಡಿ 12 ಅಂಕ ಪಡೆಯುತ್ತದೆ. ಈ ಮೂಲಕ ಕೆಕೆಆರ್‌ ಟೂರ್ನಿಯಿಂದ ನಿರ್ಗಮಿಸುತ್ತದೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದು. ಉದಾಹರಣೆಗೆ 1 ಗಂಟೆ ಭಾರೀ ಮಳೆ ಸುರಿದರೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

  • ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

    ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) ವಿರುದ್ಧದ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಿದೆ.

    ಸಂಜೆ ಬೆಂಗಳೂರಿನಲ್ಲಿ ಜೋರಾಗಿ ಮಳೆ ಆರಂಭವಾಗಿದೆ. ಹೀಗಾಗಿ ಮಳೆ ನಿಂತರಷ್ಟೇ ಪಂದ್ಯ ಆರಂಭವಾಗಲಿದೆ. ಹವಾಮಾನ ಇಲಾಖೆ ಇಂದು ಸಂಜೆ ಜೋರಾಗಿ ಮಳೆ ಸುರಿಯಲಿದೆ ಎಂದು ಮೊದಲೇ ಮುನ್ಸೂಚನೆ ನೀಡಿತ್ತು.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದು. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೂ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು.

    ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.