Tag: IPL

  • ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

    ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ಭಾನುವಾರ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ (Mahela Jayawardene) ಅವರನ್ನು ಮುಖ್ಯ ಕೋಚ್ ಆಗಿ ಮರುನೇಮಕ ಮಾಡಿದೆ.

    47 ವರ್ಷ ವಯಸ್ಸಿನ ಜಯವರ್ಧನೆ ಈ ಹಿಂದೆ 2017-2022 ರವರೆಗೆ ಇದೇ ತಂಡಕ್ಕೆ ಕೋಚ್‌ ಆಗಿದ್ದರು. ಈ ಅವಧಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ಮೂರು IPL ಟ್ರೋಫಿಗಳನ್ನು ಗೆದ್ದಿದೆ. 2022 ರಲ್ಲಿ ಜಯವರ್ಧನೆ ಅವರನ್ನು ಮುಖ್ಯ ತರಬೇತುದಾರನ ಸ್ಥಾನದಿಂದ MI ಫ್ರಾಂಚೈಸ್‌ಗಾಗಿ ಗ್ಲೋಬಲ್ ಹೆಡ್ ಆಫ್ ಕ್ರಿಕೆಟ್‌ಗೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಮಹೇಲಾ ಅವರು ಮುಂಬೈ ಇಂಡಿಯನ್ಸ್‌ನ ಮುಖ್ಯ ಕೋಚ್ ಆಗಿ ಮರಳಿ ಬಂದಿರುವುದಕ್ಕೆ ನಾವು ರೋಮಾಂಚನಗೊಂಡಿದ್ದೇವೆ. ನಮ್ಮ ಜಾಗತಿಕ ತಂಡಗಳು ತಮ್ಮ ಪರಿಸರ ವ್ಯವಸ್ಥೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಂಡಿದ್ದರಿಂದ, ಅವರನ್ನು MI ಗೆ ಮರಳಿ ಕರೆತರುವ ಅವಕಾಶ ಸಿಕ್ಕಿದೆ. ಅವರ ನಾಯಕತ್ವ, ಜ್ಞಾನ ಮತ್ತು ಆಟದ ಮೇಲಿನ ಉತ್ಸಾಹವು ಯಾವಾಗಲೂ MI ಗೆ ಪ್ರಯೋಜನವನ್ನು ನೀಡುತ್ತದೆ ಎಂದು ಫ್ರಾಂಚೈಸಿ ಮಾಲೀಕ ಆಕಾಶ್ ಅಂಬಾನಿ ಪ್ರತಿಕ್ರಿಯಿಸಿದ್ದಾರೆ.

    ಕಳೆದೆರಡು ಋತುಗಳಲ್ಲಿ ಜಯವರ್ಧನೆ ಅನುಪಸ್ಥಿತಿಯಲ್ಲಿ ಪಾತ್ರ ವಹಿಸಿದ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್ ಅವರ ಸೇವೆಗಳನ್ನು ಇದೇ ವೇಳೆ ಅಂಬಾನಿ ಶ್ಲಾಘಿಸಿದ್ದಾರೆ. ಕಳೆದ ಎರಡು ಋತುಗಳಲ್ಲಿ ಮಾರ್ಕ್ ಬೌಚರ್ ಅವರು ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಪರಿಣತಿ ಮತ್ತು ಸಮರ್ಪಣೆಯು ಪ್ರಮುಖವಾಗಿತ್ತು. ಈಗ MI ಕುಟುಂಬದ ಅವಿಭಾಜ್ಯ ಸದಸ್ಯರಾಗಿದ್ದಾರೆ ಎಂದು ಆಕಾಶ್‌ ಅಂಬಾನಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

    ಮುಂಬೈ ಇಂಡಿಯನ್ಸ್‌, ಐಪಿಎಲ್‌ 2023 ರಲ್ಲಿ ಪ್ಲೇಆಫ್‌ಗೆ ತಲುಪಿತ್ತು. 2024 ರ ಋತುವಿನಲ್ಲಿ ಬೌಚರ್ ಕೋಚ್‌ ಆಗಿದ್ದಾಗ, 10 ನೇ ಸ್ಥಾನಕ್ಕೆ ಕುಸಿದಿತ್ತು. ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. 2013 ರಿಂದ 2023 ರವರೆಗೆ MI ಅನ್ನು ಮುನ್ನಡೆಸಿದ್ದ ರೋಹಿತ್‌ ಶರ್ಮಾ, ತಂಡಕ್ಕೆ ಐದು ಟ್ರೋಫಿಗಳನ್ನು ತಂದುಕೊಟ್ಟಿದ್ದರು.

  • ರಾಜಸ್ಥಾನದಲ್ಲಿ ಎರಡನೇ ಇನ್ನಿಂಗ್ಸ್‌ – ರಾಯಲ್ಸ್‌ ಕೋಚ್‌ ಆಗಿ ದ್ರಾವಿಡ್‌ ನೇಮಕ

    ರಾಜಸ್ಥಾನದಲ್ಲಿ ಎರಡನೇ ಇನ್ನಿಂಗ್ಸ್‌ – ರಾಯಲ್ಸ್‌ ಕೋಚ್‌ ಆಗಿ ದ್ರಾವಿಡ್‌ ನೇಮಕ

    ಬೆಂಗಳೂರು: ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡಕ್ಕೆ ರಾಹುಲ್‌ ದ್ರಾವಿಡ್‌ (Rahul Dravid) ಮರಳಿದ್ದಾರೆ. ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ನಿಜವಾಗಿದ್ದು ರಾಜಸ್ಥಾನ ರಾಯಲ್ಸ್‌ ತಂಡದ ಮುಖ್ಯ ಕೋಚ್‌ (Head Coach) ಆಗಿ ದ್ರಾವಿಡ್‌ ನೇಮಕವಾಗಿದ್ದಾರೆ.

    ರಾಹುಲ್‌ ದ್ರಾವಿಡ್‌  ಹಲವು ವರ್ಷಗಳ ಒಪ್ಪಂದಕ್ಕೆ ದ್ರಾವಿಡ್ ಸಹಿ ಹಾಕಿದ್ದಾರೆ ಎಂದು ರಾಜಸ್ಥಾನ ರಾಯಲ್ಸ್‌ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಆರ್‌ ಆರ್‌, ಭಾರತದ ದಂತಕಥೆ ವಿಶ್ವಕಪ್ ವಿಜೇತ ಕೋಚ್ ರಾಹುಲ್ ದ್ರಾವಿಡ್ ರಾಜಸ್ಥಾನ ರಾಯಲ್ಸ್‌ಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.

    ಬೆಂಗಳೂರಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲುಶ್ ಮೆಕ್‌ಕ್ರಂ ಅವರಿಂದ ದ್ರಾವಿಡ್‌ ಪಿಂಕ್‌ ಜೆರ್ಸಿ ಸ್ವೀಕರಿಸಿದ್ದಾರೆ.

    ಆರ್‌ಆರ್‌ ತಂಡವನ್ನು ಸೇರಿದ ನಂತರ ಮಾತನಾಡಿದ ದ್ರಾವಿಡ್‌, ವಿಶ್ವಕಪ್ ಬಳಿಕ ಮತ್ತೊಂದು ಸವಾಲು ಸ್ವೀಕರಿಸಲು ಇದು ಸರಿಯಾದ ಸಮಯ ಎಂದು ನನಗೆ ಅನಿಸುತ್ತದೆ. ಈ ಸವಾಲು ಸ್ವೀಕಾರಕ್ಕೆ ರಾಜಸ್ಥಾನ ರಾಯಲ್ಸ್ ಸೂಕ್ತ ತಂಡ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ (Team India) ವಿಶ್ವಕಪ್‌ ಗೆಲ್ಲುವುದರೊಂದಿಗೆ ದ್ರಾವಿಡ್‌ ಅವರ ಕೋಚ್‌ ಅವಧಿಯೂ ಅಂತ್ಯವಾಗಿತ್ತು. ಸದ್ಯ ದ್ರಾವಿಡ್‌ ಕಿರು ವಿರಾಮದಲ್ಲಿದ್ದು ಹಲವು ಐಪಿಎಲ್‌ (IPL) ತಂಡಗಳು ದ್ರಾವಿಡ್‌ ಅವರನ್ನು ಸಂಪರ್ಕಿಸಿದ್ದವು.


    ದ್ರಾವಿಡ್ 2011 ಮತ್ತು 2013ರ ಅವಧಿಯಲ್ಲಿ ರಾಯಲ್ಸ್‌ ಪರ ಆಡಿದ್ದ ದ್ರಾವಿಡ್‌ 2014ರಲ್ಲಿ ತಂಡದ ಮೆಂಟರ್‌ ಆಗಿ ಆಯ್ಕೆ ಆಗಿದ್ದರು. ನಂತರ ಭಾರತ A ಮತ್ತು U-19 ತಂಡಗಳಿಗೆ ತರಬೇತುದಾರರಾಗಿ ದ್ರಾವಿಡ್‌ ಆಯ್ಕೆಯಾಗಿದ್ದರು. ರವಿಶಾಸ್ತ್ರಿ ಅವಧಿ ಅಂತ್ಯವಾದ ನಂತರ 2021ರಲ್ಲಿ ದ್ರಾವಿಡ್‌ ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ನೇಮಕವಾಗಿದ್ದರು.

    ಶೇನ್ ವಾರ್ನ್ ನೇತೃತ್ವದಲ್ಲಿ 2008ರ ಟೂರ್ನಿಮೆಂಟ್‌ನ ಉದ್ಘಾಟನಾ ಆವೃತ್ತಿಯಲ್ಲಿ ಪ್ರಶಸ್ತಿ ಜಯಿಸಿದ ನಂತರ ರಾಜಸ್ಥಾನ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ. 2022 ರಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ತಂಡ ಫೈನಲ್‌ ಪ್ರವೇಶಿಸಿತ್ತು. ಆದರೆ ಗುಜರಾತ್‌ ವಿರುದ್ಧ ಸೋತು ರನ್ನರ್‌ ಅಪ್‌ ಸ್ಥಾನ ಪಡೆದುಕೊಂಡಿತ್ತು.

     

  • ಲಕ್ನೋದಲ್ಲೇ ರಾಹುಲ್‌ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ

    ಲಕ್ನೋದಲ್ಲೇ ರಾಹುಲ್‌ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ

    ನವದೆಹಲಿ: ನಾಯಕ, ವಿಕೆಟ್ ಕೀಪರ್ ಕೆ.ಎಲ್ ರಾಹುಲ್ (KL Rahul) ಅವರನ್ನು ಲಕ್ನೋ ತಂಡದಲ್ಲಿಯೇ (Lucknow Super Giants) ಉಳಿಸಿಕೊಳ್ಳಲು ತಂಡದ ಮಾಲೀಕ ಸಂಜಯ್ ಗೋಯಂಕ್ ಮಾತುಕತೆ ನಡೆಸಿದ್ದಾರೆ.

    ಅಲಿಪುರ್‌ನ ತಮ್ಮ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ ಅವರು ರಾಹುಲ್ ಅವರನ್ನು ಲಕ್ನೋ ತಂಡದಲ್ಲಿಯೇ ಮುಂದುವರೆಯುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ಬಾರಿಯ ಐಪಿಎಲ್‌ನಲ್ಲಿ ಹೈದರಾಬಾದ್ ಮತ್ತು ಲಕ್ನೋ ವಿರುದ್ಧದ ಪಂದ್ಯದಲ್ಲಿ ಲಕ್ನೋ ತಂಡವು 10 ವಿಕೆಟ್‌ನಿಂದ ಹಿನಾಯವಾಗಿ ಸೋತಿತ್ತು. ಇದರಿಂದ ಸಿಟ್ಟಿಗೆದ್ದ ಲಕ್ನೋ ತಂಡದ ಮಾಲಿಕ ಗೋಯೆಂಕಾ ಡಗೌಟ್‌ಗೆ ಬಂದು ಸಾರ್ವಜನಿಕವಾಗಿಯೇ ನಾಯಕ ಕೆ.ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ತುಂಬಾ ಚರ್ಚೆಗೆ ಕಾರಣವಾಗಿತ್ತು. ಮಾಲೀಕರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಾರ್ವಜನಿಕರು, ಎಲ್ಲರ ಮುಂದೆಯೇ ಅವರು ಹೀಗೆ ಮಾಡಬಾರದಾಗಿತ್ತು. ರಾಹುಲ್‌ಗೆ ಲಕ್ನೋ ತಂಡದಲ್ಲಿ ಅವಮಾನವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಇದೀಗ ಲಕ್ನೋ ತಂಡದ ಮಾಲೀಕ ಸಂಜಯ್ ಗೋಯೆಂಕ್ ಅವರು ಕೆ.ಎಲ್ ರಾಹುಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಅವರನ್ನು ಲಕ್ನೋ ತಂಡದಲ್ಲಿಯೇ ಮುಂದುವರೆಯಲು ಕೇಳಿಕೊಂಡಿದ್ದು ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟು – ಹೆಲ್ಮೆಟ್‌ನಲ್ಲಿ ಸಿಕ್ಸ್‌ ಹೊಡೆದ ಬ್ರಾಥ್‌ವೈಟ್!

    ಆರ್‌ಸಿಬಿ ತಂಡ ಸೇರ್ತಾರಾ?
    ಈ ಹಿಂದೆಯ ಸಂದರ್ಶನವೊಂದರಲ್ಲಿ ಕೆಎಲ್ ರಾಹುಲ್ ಆರ್‌ಸಿಬಿ (RCB) ತಂಡದ ಪರವಾಗಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಕನ್ನಡಿಗರು ಮತ್ತು ಕ್ರಿಕೆಟ್ ಅಭಿಮಾನಿಗಳು ರಾಹುಲ್ ಅವರಿಗೆ ಲಕ್ನೋ ತಂಡದಲ್ಲಿ ಅವಮಾನವಾಗುತ್ತಿದೆ. ಹಾಗಾಗಿ ಅವರು ಆರ್‌ಸಿಬಿ ಪರವಾಗಿ ಆಟವಾಡಬೇಕು ಎಂದು ಕೋರಿಕೊಂಡಿದ್ದರು. ಆರ್‌ಸಿಬಿ ಫ್ರಾಂಚೈಸಿ ಕೂಡ ರಾಹುಲ್ ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇಲ್ಲಿಯವರೆಗೆ ರಾಹುಲ್ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ರಾಹುಲ್‌ರ ಮುಂದಿನ ನಡೆ ಕುತೂಹಲ ಮೂಡಿಸಿದೆ.

     

  • ಐಪಿಎಲ್‌ನಲ್ಲಿ ತನ್ನ ನೆಚ್ಚಿನ ಪ್ರತಿಸ್ಪರ್ಧಿ ತಂಡವನ್ನು ರಿವೀಲ್ ಮಾಡಿದ ಕೊಹ್ಲಿ

    ಐಪಿಎಲ್‌ನಲ್ಲಿ ತನ್ನ ನೆಚ್ಚಿನ ಪ್ರತಿಸ್ಪರ್ಧಿ ತಂಡವನ್ನು ರಿವೀಲ್ ಮಾಡಿದ ಕೊಹ್ಲಿ

    ಮುಂಬೈ: ಭಾರತದ (India) ಸ್ಟಾರ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್‌ನಲ್ಲಿ ತಮ್ಮ ನೆಚ್ಚಿನ ಪ್ರತಿಸ್ಪರ್ಧಿ ತಂಡ ಯಾವುದು ಎಂಬುವುದರ ಕುರಿತು ಇತ್ತೀಚಿಗೆ ಮಾತನಾಡಿದ್ದಾರೆ.

    ಇತ್ತೀಚಿಗೆ ಒಂದು ಸಂದರ್ಶನದಲ್ಲಿ ಮಾತನಾಡಿದ ಅವರು, 5 ಬಾರಿ ಐಪಿಎಲ್ ಟ್ರೋಫಿ ಗೆದ್ದ ತಂಡ ಮುಂಬೈ ಇಂಡಿಯನ್ಸ್ (Mumbai Indians) ಹಾಗೂ 3 ಬಾರಿ ಗೆದ್ದ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (Kolkatta Knight Riders) ತಂಡಗಳ ನಡುವೆ ನಿಮ್ಮ ನೆಚ್ಚಿನ ಪ್ರತಿಸ್ಪರ್ಧಿ ಯಾವುದು ಎಂದು ಕೇಳಿದಕ್ಕೆ ಪ್ರತಿಕ್ರಿಯಿಸಿ, ನನಗೆ ಕೆಕೆಆರ್ (KKR)  ನೆಚ್ಚಿನ ಪ್ರತಿಸ್ಪರ್ಧಿ ತಂಡ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

    ಕಳೆದ ಭಾನುವಾರವಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) 16 ವರ್ಷಗಳನ್ನು ಪೂರೈಸಿದ ಕೊಹ್ಲಿಗೆ ಬಿಸಿಸಿಐ (BCCI)  ಕಾರ್ಯದಶಿ ಜಯ್ ಶಾ (Jay Shah) 16 ವರ್ಷದ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ 19 ವರ್ಷದ ಯುವಕ. ಇಂದು 16 ವರ್ಷಗಳನ್ನು ಪೂರೈಸಿದ್ದಾರೆ. ಇದು ನಿಜವಾದ ವೃತ್ತಿಜೀವನದ ಆರಂಭ ಹಾಗೂ ಪೂರೈಸಿದ ರಾಜನಿಗೆ ಅಭಿನಂದನೆಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಶುಭ ಹಾರೈಸಿದ್ದರು.

    ಭಾರತದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ 2008ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಶಕ್ತಿಶಾಲಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಭಾರತ ತಂಡವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಜೊತೆಗೆ ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ.ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್

    ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್  (Sachin Tendulkar) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಕೊಹ್ಲಿ 2008ರಲ್ಲಿ ಆರ್‌ಸಿಬಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ಬೇರೆ ತಂಡಕ್ಕೆ ಹೋಗದೇ ನಿರಂತರವಾಗಿ ಆರ್‌ಸಿಬಿ (RCB) ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

  • ಫ್ಯಾನ್ಸ್‌ಗೆ ಶಾಕ್ ಕೊಟ್ಟ ಆರ್‌ಸಿಬಿ – ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಔಟ್?

    ಫ್ಯಾನ್ಸ್‌ಗೆ ಶಾಕ್ ಕೊಟ್ಟ ಆರ್‌ಸಿಬಿ – ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಔಟ್?

    ಬೆಂಗಳೂರು: ಐಪಿಎಲ್ (IPL) ಮೆಗಾ ಹರಾಜಿಗೂ ಮುನ್ನವೇ ಆರ್‌ಸಿಬಿ ಇಬ್ಬರು ವಿದೇಶಿ ಆಟಗಾರರನ್ನು ಕೈ ಬಿಡುವ ಸಾಧ್ಯತೆಯಿದೆ. ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಿದ್ದು, ಆರ್‌ಸಿಬಿ (RCB) ಫ್ಯಾನ್ಸ್‌ಗೆ ಆಘಾತ ನೀಡಿದೆ.

    ಕಳೆದ ಐಪಿಎಲ್‍ನಲ್ಲಿ ಫಾಫ್ ಬ್ಯಾಟಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಮ್ಯಾಕ್ಸ್‌ವೆಲ್ ನಿರೀಕ್ಷೆಯ ಪ್ರಕಾರ ಪ್ರದರ್ಶನ ನೀಡಿರಲಿಲ್ಲ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಭಾರಿ ವಿಫಲರಾದರು. ಆದರೂ ತಂಡದ ಯಶಸ್ಸಿನಲ್ಲಿ ಇಬ್ಬರೂ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು.

    ಇಬ್ಬರು ಆಟಗಾರರ ಕೈಬಿಟ್ಟ ಬಳಿಕ ತಂಡಕ್ಕೆ ಕೆ.ಎಲ್ ರಾಹುಲ್ ಸೇರ್ಪಡೆಯಾಗಬಹುದು ಎಂದು ವರದಿ ಪ್ರಕಟವಾಗಿದ್ದರೂ ಹರಾಜು ನಡೆಯುವ ವೇಳೆ ಅಧಿಕೃತವಾಗಿ ತಿಳಿದು ಬರಲಿದೆ.

    ಆರ್‌ಸಿಬಿಯು ಕ್ಯಾಮರೂನ್ ಗ್ರೀನ್ ಮತ್ತು ವಿಲ್ ಜ್ಯಾಕ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಆರ್‌ಸಿಬಿ ಬಿಡುಗಡೆ ಮಾಡಿದರೆ ಬೇರೆ ತಂಡಗಳು ಇವರನ್ನು ಖರೀದಿಸುವ ಸಾಧ್ಯತೆ ಕಡಿಮೆಯಿದೆ.

    ಡು ಪ್ಲೆಸಿಸ್‍ಗೆ ಈಗಾಗಲೇ 40 ವರ್ಷವಾಗಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಹೆಚ್ಚು ವಯಸ್ಸು ಆಗದೇ ಇದ್ದರೂ ಎರಡು ತಿಂಗಳಲ್ಲಿ 36 ವರ್ಷ ಪೂರೈಸಲಿದ್ದಾರೆ. ಅವರು ಕ್ರಿಕೆಟ್‍ನಲ್ಲಿ ಉತ್ತಮ ಕೌಶಲ್ಯಗಳ ಹೊರತಾಗಿಯೂ ಸಾಕಷ್ಟು ಋತುಗಳಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ಈ ಇಬ್ಬರೂ ಆಟಗಾರರ ವೃತ್ತಿ ಜೀವನ ಅಂತ್ಯವಾಗುವ ಸಾಧ್ಯತೆ ಇದೆ.

  • ಮಾರ್ನೆ ಮಾರ್ಕೆಲ್ ಈಗ ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌

    ಮಾರ್ನೆ ಮಾರ್ಕೆಲ್ ಈಗ ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌

    ನವದೆಹಲಿ: ದಕ್ಷಿಣ ಆಫ್ರಿಕಾದ (South Africa) ಮಾಜಿ ಕ್ರಿಕೆಟಿಗ, ವೇಗಿ ಬೌಲರ್ ಮಾರ್ನೆ ಮಾರ್ಕೆಲ್ (Morne Morkel) ಭಾರತ ಕ್ರಿಕೆಟ್ ತಂಡಕ್ಕೆ (Team India) ಬೌಲಿಂಗ್ ಕೋಚ್ (Bowling Coach) ಆಗಿ ನೇಮಕವಾಗಿದ್ದಾರೆ.

    ಈ ಹಿಂದೆ ಮಾರ್ಕೆಲ್ ಅವರು 2023ರ ಏಕದಿನ ವಿಶ್ವಕಪ್ ಸಮಯದಲ್ಲಿ ಪಾಕಿಸ್ತಾನದ ಕ್ರಿಕೆಟ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಐಪಿಎಲ್‌ನಲ್ಲಿ (IPL) ಕೋಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಡೆರ್‌ಡೇವಿಲ್ಸ್ ತಂಡಗಳಲ್ಲಿ ಆಟವಾಡಿದ್ದರು. ಇದನ್ನೂ ಓದಿ: ವಿನೇಶ್‌ ಫೋಗಟ್‌ ʼಬೆಳ್ಳಿʼ ತೀರ್ಪು ಆ.16ಕ್ಕೆ ಮುಂದೂಡಿಕೆ

    ಭಾರತ ತಂಡದ ಹೊಸ ಕೋಚ್ ಆಗಿರುವ ಗೌತಮ್ ಗಂಭೀರ್ (Gautam Gambhir) ಸಲಹೆಯ ಮೇರೆಗೆ ಮಾರ್ಕೆಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಲಕ್ನೋ ತಂಡದಲ್ಲಿ ಗೌತಮ್ ಗಂಭೀರ್ ಮತ್ತು ಮಾರ್ಕೆಲ್ ಜೊತೆಯಾಗಿ ಕೆಲಸ ಮಾಡಿದ್ದರು.

    39 ವರ್ಷದ ಮಾರ್ಕೆಲ್ ದಕ್ಷಿಣ ಆಫ್ರಿಕಾ ಪರವಾಗಿ 86 ಟೆಸ್ಟ್, 117 ಏಕದಿನ, 44 ಟಿ20 ಪಂದ್ಯಗಳನ್ನಾಡಿ ಒಟ್ಟು 544 ವಿಕೆಟ್‌ಗಳು ಪಡೆದಿದ್ದಾರೆ.

     

  • IPL: ರಾಜಸ್ಥಾನ್ ರಾಯಲ್ಸ್ ಕೋಚ್ ಆಗ್ತಾರಾ ರಾಹುಲ್ ದ್ರಾವಿಡ್!

    IPL: ರಾಜಸ್ಥಾನ್ ರಾಯಲ್ಸ್ ಕೋಚ್ ಆಗ್ತಾರಾ ರಾಹುಲ್ ದ್ರಾವಿಡ್!

    ನವದೆಹಲಿ: ಟೀಂ ಇಂಡಿಯಾ ಕೋಚ್ ಸ್ಥಾನ ತೊರೆದಿರುವ ರಾಹುಲ್ ದ್ರಾವಿಡ್ (Rahul Dravid) ರಾಜಸ್ಥಾನ ರಾಯಲ್ಸ್ ಐಪಿಎಲ್ (IPL) ಟೀಂ ಹೆಡ್ ಕೋಚ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ಆಂಗ್ಲ ದೈನಿಕ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

    ರಾಜಸ್ಥಾನ ರಾಯಲ್ಸ್ (Rajasthan Royals) ತಂಡದ ಮುಖ್ಯಸ್ಥರು ಹಾಗೂ ರಾಹುಲ್ ದ್ರಾವಿಡ್ ಜೊತೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಹೇಳಿಕೆ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    51 ವರ್ಷದ ರಾಹುಲ್ ದ್ರಾವಿಡ್ ಕೆಕೆಆರ್ ತಂಡದಲ್ಲಿ ಗೌತಂ ಗಂಭೀರ್ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ದ್ರಾವಿಡ್ ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೇರ್ಪಡೆಯಾಗುವ ಸಾಧ್ಯತೆಯೇ ಅಧಿಕ ಎನ್ನಲಾಗಿದೆ. 2013, 2014 ಮತ್ತು 2015ರಲ್ಲೂ ದ್ರಾವಿಡ್ ಅವರು ರಾಜಸ್ಥಾನ ತಂಡದ ಭಾಗವಾಗಿದ್ದರು.

    2015ರ ಬಳಿಕ ಬಿಸಿಸಿಐ ಜೊತೆ ಕೈಜೋಡಿಸಿದ್ದ ದ್ರಾವಿಡ್ ಅಂಡರ್ 19 ಹಾಗೂ ಇಂಡಿಯಾ ಎ ಟೀಂ ಕೋಚ್ ಆಗಿದ್ದರು. ಬಳಿಕ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾದರು. 2021ರ ಅಕ್ಟೋಬರ್ ತಿಂಗಳಿನಿಂದ ಅವರು ಟೀಂ ಇಂಡಿಯಾ ಹೆಡ್ ಕೋಚ್ ಆಗಿದ್ದರು. ಇದನ್ನೂ ಓದಿ: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

    ರಾಹುಲ್ ದ್ರಾವಿಡ್ ಕೋಚ್ ಆದರೆ 2021ರಿಂದ ರಾಯಲ್ಸ್ ತಂಡದ ನಿರ್ದೇಶಕರಾಗಿರುವ ಕುಮಾರ ಸಂಗಕ್ಕಾರ ತಂಡದ ಜೊತೆಯಲ್ಲೇ ಉಳಿಯುತ್ತಾರಾ ಇಲ್ಲವೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

  • ಎರಡು ಮಹತ್ವದ ಜವಾಬ್ದಾರಿ – ಆರ್‌ಸಿಬಿಗೆ ದಿನೇಶ್‌ ಕಾರ್ತಿಕ್‌ ರಿಎಂಟ್ರಿ

    ಎರಡು ಮಹತ್ವದ ಜವಾಬ್ದಾರಿ – ಆರ್‌ಸಿಬಿಗೆ ದಿನೇಶ್‌ ಕಾರ್ತಿಕ್‌ ರಿಎಂಟ್ರಿ

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ (Batting Coach) ಮತ್ತು ಮೆಂಟರ್ (Mentor) ಆಗಿ ದಿನೇಶ್‌ ಕಾರ್ತಿಕ್‌ (Dinesh Karthik) ಆಯ್ಕೆಯಾಗಿದ್ದಾರೆ.

    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ನಂತರ ದಿನೇಶ್‌ ಕಾರ್ತಿಕ್‌ ಹೊಸ ಜವಾಬ್ದಾರಿಯೊಂದಿಗೆ ಆರ್‌ಸಿಬಿಗೆ ರಿಎಂಟ್ರಿಯಾಗಿದ್ದಾರೆ.

    ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್‌ಸಿಬಿ ಮರಳಿದ್ದಾರೆ. ಡಿಕೆ ಆರ್‌ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್‌ಸಿಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

    ವಿಕೆಟ್‌ಕೀಪರ್ ಬ್ಯಾಟರ್ ಆಗಿರುವ ದಿನೇಶ್‌ ಕಾರ್ತಿಕ್‌ ಐಪಿಎಲ್‌ನಲ್ಲಿ (IPL) 257 ಪಂದ್ಯಗಳನ್ನು ಆಡಿದ್ದಾರೆ. 26.32 ಸರಾಸರಿಯಲ್ಲಿ 22 ಅರ್ಧಶತಕಗಳೊಂದಿಗೆ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ಆರ್‌ಸಿಬಿ ಹೊರತಾಗಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದರು.

     

    ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಿದ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್‌ಗೆ ನಿವೃತ್ತಿ ಹೇಳಿದ್ದರು.

    ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. 2019 ರಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದ ಇವರು 97 ರನ್‌(50 ಎಸೆತ,7 ಬೌಂಡರಿ, 9 ಸಿಕ್ಸ್‌ ) ಸಿಡಿಸಿದ್ದರು. ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್ ಅಯ್ಯರ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್ ಅಯ್ಯರ್

    ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ (IPL) ಅದ್ಭುತ ಪ್ರದರ್ಶನ ತೋರುವ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ವೆಂಕಟೇಶ್ ಅಯ್ಯರ್ (Venkatesh Iyer), ಇದೀಗ ಜೀವನದ ಹೊಸ ಇನಿಂಗ್ಸ್ ಆರಂಭಿಸಿದ್ದು, ಬಹುಕಾಲದ ಗೆಳತಿ ಶೃತಿ ರಘುನಾಥನ್ (Shruti Raghunathan) ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ವೆಂಕಟೇಶ್ ಅಯ್ಯರ್ ಹಾಗೂ ಶೃತಿಯವರ ಎಂಗೇಜ್‍ಮೆಂಟ್ 2023ರ ನ.21ರಂದು ನೆರವೇರಿತ್ತು. ಇದೀಗ ಅವರ ಮದುವೆ ನೆರವೇರಿದ್ದು, ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: T20 World Cup: ಸ್ಕಾಟ್‌ಲೆಂಡ್‌ ಬಳಿಕ ಐರ್ಲೆಂಡ್‌ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌!

    ವೆಂಕಟೇಶ್ ಅಯ್ಯರ್ 15 ಪಂದ್ಯಗಳನ್ನಾಡಿ 4 ಅರ್ಧಶತಕ ಸಹಿತ 370 ರನ್ ಸಿಡಿಸುವ ಮೂಲಕ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಸನ್‍ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

    ಟೀಂ ಇಂಡಿಯಾ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 60 ರನ್‌ಗಳ ಭರ್ಜರಿ ಜಯ

  • ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ಚೆನ್ನೈ: ಅತ್ಯುತ್ತಮ ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ನಿಂದಾಗಿ ಎರಡನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ 36 ರನ್‌ಗಳಿಂದ ಜಯ ಸಾಧಿಸಿದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ಮೂರನೇ ಬಾರಿ ಐಪಿಎಲ್‌ ಫೈನಲ್‌ (IPL Final) ಪ್ರವೇಶಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 9 ವಿಕೆಟ್‌ ನಷ್ಟಕ್ಕೆ 175 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 139 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತು.

    ರಾಜಸ್ಥಾನ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 42 ರನ್(‌ 21 ಎಸೆತ, 4 ಬೌಂಡರಿ, 3 ಸಿಕ್ಸರ್‌) ಧ್ರುವ್‌ ಜುರೇಲ್‌ ಔಟಾಗದೇ 56 ರನ್‌ (35 ಎಸೆತ, 7 ಬೌಂಡರಿ, 2 ಸಿಕ್ಸರ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಶಹಬಾಜ್ ಅಹಮದ್ 3 ವಿಕೆಟ್‌, ಅಭಿಷೇಕ್‌ ಶರ್ಮಾ 2 ವಿಕೆಟ್‌ ಪಡೆದರು.

    ಹೈದರಾಬಾದ್‌ ಪರ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ 5 ಎಸೆತಗಳಲ್ಲಿ 12 ರನ್‌ ಸಿಡಿಸಿ ಔಟಾದರು. ಟ್ರಾವಿಸ್‌ ಹೆಡ್‌ 34 ರನ್‌(28 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದರೆ ರಾಹುಲ್‌ ತ್ರಿಪಾಠಿ 37 ರನ್‌(15 ಎಸೆತ, 5 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು. ವಿಕೆಟ್‌ ಉರುಳುತ್ತಿದ್ದರೂ ಹೆನ್ರಿಕ್ ಕ್ಲಾಸೆನ್ ಅವರು ಗಟ್ಟಿಯಾಗಿ ನಿಂತು 50 ರನ್‌ (34 ಎಸೆತ, 4 ಸಿಕ್ಸರ್)‌ ಸಿಡಿಸಿ ವಿಕೆಟ್‌ ಒಪ್ಪಿಸಿದರು.

    ಚೆನ್ನೈ ಸ್ಟೇಡಿಯಂನಲ್ಲಿ ಮೇ 26 ಭಾನುವಾರ ಫೈನಲ್‌ ಪಂದ್ಯ ನಡೆಯಲಿದ್ದು ಇಂದು ಜಯಗಳಿಸಿದ ಹೈದರಾಬಾದ್‌ ಮತ್ತು ಕೋಲ್ಕತ್ತಾ ಕಪ್‌ಗಾಗಿ ಹೋರಾಟ ನಡೆಸಲಿವೆ.

    ಮೊದಲ ಕ್ವಾಲಿಫೈಯರ್‌ನಲ್ಲಿ ಕೋಲ್ಕತ್ತಾ (Kolkata Knight Riders) ಮತ್ತು ಹೈದರಾಬಾದ್‌ ಸೆಣಸಾಡಿದ್ದವು. ಈ ಪಂದ್ಯವನ್ನು ಕೋಲ್ಕತ್ತಾ 8 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಹೈದರಾಬಾದ್‌ 159 ರನ್‌ಗಳಿಗೆ ಆಲೌಟ್‌ ಆಗಿತ್ತು. ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆದು ಫೈನಲ್‌ ಪ್ರವೇಶಿಸಿತ್ತು.