ಚಂಡೀಗಢ: ಪಂಜಾಬ್‌ನ ರೋಪರ್ ರೇಂಜ್‌ನಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಐಪಿಎಸ್ ಅಧಿಕಾರಿ ಮನೆಯಿಂದ 5 ಕೋಟಿ ರೂ. ನಗದು, ಮರ್ಸಿಡಿಸ್, ಆಡಿ ಕಾರು ವಶಕ್ಕೆ ಪಡೆದಿದ್ದಾರೆ.
8 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣ ತನಿಖೆ ವೇಳೆ ಸಿಬಿಐಗೆ ಶಾಕ್ ಎದುರಾಗಿದೆ. ಐಪಿಎಸ್ ಅಧಿಕಾರಿ ಮನೆಯಲ್ಲಿ 5 ಕೋಟಿ ರೂ. ನಗದು, ಐಷಾರಾಮಿ ವಾಹನಗಳು, ಆಭರಣಗಳು ಮತ್ತು ಉನ್ನತ ದರ್ಜೆಯ ವಾಚ್‌ಗಳು ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿದೆ.
2009 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಿಐಜಿ ಹರ್‌ಚರಣ್ ಸಿಂಗ್ ಭುಲ್ಲರ್ ಮತ್ತು ಅವರ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೃಷ್ಣ ಎಂಬ ವ್ಯಕ್ತಿಯನ್ನು ಬಂಧಿಸಲಾಯಿತು. ಸ್ಥಳೀಯ ಉದ್ಯಮಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಇತ್ಯರ್ಥಗೊಳಿಸಲು, ಹರ್‌ಚರಣ್ ಈ ಮಧ್ಯವರ್ತಿಯ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸಿಬಿಐ ತಿಳಿಸಿದೆ.
ಪಂಜಾಬ್‌ನ ಫತೇಘರ್ ಸಾಹಿಬ್‌ನಲ್ಲಿರುವ ಆಕಾಶ್ ಬಟ್ಟಾ ಎಂಬ ವ್ಯಾಪಾರಿ ಐದು ದಿನಗಳ ಹಿಂದೆ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಸಿಬಿಐ ಈ ಪ್ರಕರಣ ದಾಖಲಿಸಿತ್ತು. ಡಿಐಜಿ ಭುಲ್ಲರ್ ಅವರು ಆರಂಭಿಕ ಲಂಚವಾಗಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಪ್ರಕರಣ ಇತ್ಯರ್ಥಗೊಳಿಸಿದ ನಂತರ ಉಳಿದ ಹಣ ನೀಡದಿದ್ದರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದರೆಂದು ದೂರಲಾಗಿತ್ತು.
ಸಿಬಿಐನ ಎಫ್‌ಐಆರ್ ಪ್ರಕಾರ, ಭುಲ್ಲರ್ ತನ್ನ ಸಹಚರ ಕೃಷ್ಣ ಮೂಲಕ ಲಂಚಕ್ಕೆ ಒತ್ತಾಯಿಸಿದ್ದಾರೆ. ಕೃಷ್ಣ ಪದೇ ಪದೇ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.
– ಡಿಜಿಪಿ, ಎಸ್ಪಿ ವಿರುದ್ಧವೇ ಪೊಲೀಸರಿಗೆ ಪತ್ನಿ ದೂರು; ಸಿಎಂಗೆ ಪತ್ರ ಬರೆದು ನ್ಯಾಯಕ್ಕೆ ಮನವಿ
– ಒಂದಲ್ಲ 3 ಸೂಸೈಡ್ ನೋಟ್ ಬರೆದಿಟ್ಟಿದ್ದ ಐಪಿಎಸ್ ಅಧಿಕಾರಿ
ಚಂಡೀಗಢ: ಇದೇ ಅಕ್ಟೋಬರ್ 7 ರಂದು ಚಂಡೀಗಢದ (Chandigarh) ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಪತ್ನಿ ಹಿರಿಯ ಐಎಎಸ್ ಅಧಿಕಾರಿ (IPS officer) ಅಮ್ನೀತ್ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದಾರೆ.
8 ಪುಟಗಳ ಆತ್ಮಹತ್ಯೆ ಟಿಪ್ಪಣಿ ಮತ್ತು ಔಪಚಾರಿಕ ದೂರಿನ ಹೊರತಾಗಿಯೂ ಯಾವುದೇ ಎಫ್‌ಐಆರ್ (FIR) ದಾಖಲಿಸಲಾಗಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹರಿಯಾಣ ಪೊಲೀಸ್ (Haryana Police) ಮತ್ತು ಆಡಳಿತದ ಪ್ರಭಾವಿ ಉನ್ನತ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಅವರು ಚಂಡೀಗಢ ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವುದೇ ಯಾವುದೇ ಕ್ರಮ ಕೈಗೊಳ್ಳದಿರಲು ಕಾರಣ. ಈ ಉನ್ನತ ಹುದ್ದೆಯಲ್ಲಿರುವ, ಪ್ರಭಾವಿ ಅಧಿಕಾರಿಗಳು ನನ್ನ ಮತ್ತು ನನ್ನ ಕುಟುಂಬದ ಮೇಲೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಾರೆ ಮತ್ತು ಬೇರೆ ರೀತಿಯಲ್ಲಿ ನನ್ನನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ತಾವು ಜಪಾನ್ನಿಂದ ಮರಳಿದ ತಕ್ಷಣ ಪತಿಯ ಲ್ಯಾಪ್ಟಾಪ್ ಬ್ಯಾಗ್ನಲ್ಲಿ ಡೆತ್‌ನೋಟ್‌ನ 2ನೇ ಪ್ರತಿ ಸಿಕ್ಕಿದೆ. ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹಿನ್ನೆಲೆಯಲ್ಲಿ ಜಾತಿ ತಾರತಮ್ಯಕ್ಕೆ ಒಳಗಾಗಿದ್ದರು. ರೋಹ್ಟಕ್ ಎಸ್ಪಿ ನರೇಂದ್ರ ಬಿಜರ್ನಿಯಾ, ಡಿಜಿಪಿ ಕಪೂರ್ ಅವರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಅರ್ಬನ್ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸುಳ್ಳು ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಪತಿ ಹೆಚ್ಚು ಒತ್ತಡಕ್ಕೆ ಒಳಗಾಗಿದ್ದರು. ಈ ವಿಷಯವನ್ನು ಡಿಜಿಪಿ ಮತ್ತು ಎಸ್ಪಿ ಜೊತೆ ಚರ್ಚಿಸಲು ಪತಿ ಮಾಡಿದ ಪ್ರಯತ್ನಗಳು ವಿಫಲವಾದ ಕಾರಣ ಅವರು ಈ ರೀತಿಯ ನಿರ್ಧಾರ ತೆಗೆದುಕೊಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೆಷಲ್ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲಾ, ಬಾಲಕೋಟ್ ತಿರಮಿಸು ತಿಂದ ಭಾರತೀಯ ವಾಯುಸೇನೆ
ಅಮ್ನಿತ್ ತಮ್ಮ ಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರು ಮತ್ತು ಅವರ ಆತ್ಮಹತ್ಯೆ ಪತ್ರ ಮತ್ತು ಉಯಿಲು ಪತ್ರವನ್ನು ಸ್ವೀಕರಿಸಿದ ನಂತರ ಅವರಿಗೆ 15 ಬಾರಿ ಕರೆ ಮಾಡಿರುವುದಾಗಿ ಹೇಳಿದರು. ಅವರ ಕರೆಗಳಿಗೆ ಉತ್ತರಿಸದ ಹಿನ್ನಲೆ ತಮ್ಮ ಚಿಕ್ಕ ಮಗಳಿಗೆ ವಿಚಾರಿಸಲು ಕರೆ ಮಾಡಲಾಯಿತು, ಅವರು ಮನೆಗೆ ಧಾವಿಸಿದಾಗ, ನೆಲಮಾಳಿಗೆಯಲ್ಲಿ ರೆಕ್ಲೈನರ್ ಮೇಲೆ ತನ್ನ ಪತಿಯ ನಿರ್ಜೀವ ದೇಹವು ಕಂಡುಬಂದಿತು ಎಂದು ವಿವರಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಧಿಕಾರಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ತನಿಖೆಯ ಮೇಲೆ ಹಸ್ತಕ್ಷೇಪ, ಸಾಕ್ಷ್ಯಾಧಾರಗಳ ತಿರುಚುವಿಕೆ ಅಥವಾ ಪ್ರಭಾವ ತಡೆಯಲು ಆರೋಪಿತರನ್ನು ಅಮಾನತುಗೊಳಿಸುವಂತೆಯೂ ಅವರು ಕೋರಿದ್ದಾರೆ.
ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ (Maharashtra DCM) ಅಜಿತ್ ಪವಾರ್ (Ajit Pawar) ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ.
ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ (Solapur) ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ
ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್‌ಗೆ ಕರೆ ಮಾಡಿ ಎಂದು ಹೇಳಿದ್ದಾರೆ.
Maharashtra Deputy Chief Minister and Nationalist Congress Party (NCP) leader Ajit Pawar has landed in a controversy after a video of him purportedly pressuring a woman IPS officer to halt action against illegal soil excavation in a village in Solapur went viral on social media.… pic.twitter.com/N9yNUTebSH
– ವೃತ್ತಿ ಜೀವನದ ಆರಂಭದಲ್ಲೇ ಇದೆಂಥಾ ವಿಧಿಯಾಟ?
– ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದ ಹರ್ಷಬರ್ದನ್
ಹಾಸನ: ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಸಾವಿಗೀಡಾದ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಹೌದು. ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ 26 ವರ್ಷದ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯುವ ಐಪಿಎಸ್ ಅಧಿಕಾರಿಯನ್ನು (IPS Officer) ಉಳಿಸಿಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳು ಶತಾಯಗತಾಯ ಹೋರಾಟ ನಡೆಸಿದರು ವಿಧಿ ಮೇಲಾಟ ನಡೆಸಿದೆ.
ಸಾವು ಎಲ್ಲಿ ಹೇಗೆ ಬರುತ್ತೆ? ಅಂತ ಒಂದು ಸಣ್ಣ ಸುಳಿವು ಆ ಯಮರಾಯ ಕೊಡಲ್ಲ. ಧೊಪ್ಪನೇ ಅಂತ ಜವರಾಯ ಎದುರುಗಡೆ ಬಂದು ಬಿಡ್ತಾನೆ. ಈ ಫೋಟೋದಲ್ಲಿರುವವರ ಹೆಸರು ಹರ್ಷಬರ್ದನ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ. ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ 25 ವರ್ಷದ ಹರ್ಷಬರ್ಧನ್ ಜೀವನದಲ್ಲಿ ವಿಧಿಯಾಟ ಕ್ರೂರ ನರ್ತನವಾಡಿದ್ದಾನೆ.
ಹಾಸನನದ ಕಿತ್ತಾನೆ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಯುವ ಅಧಿಕಾರಿ ಹರ್ಷಬರ್ದನ್ ದುರಂತ ಅಂತ್ಯ ಕಂಡಿದ್ದಾರೆ. ಅವಘಾತದಲ್ಲಿ ತಲೆ ತೀವ್ರವಾಗಿ ಗಾಯಗೊಂಡ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ದನ್ ಅಸುನೀಗಿದ್ದಾರೆ.
ಹರ್ಷಬರ್ಧನ್ ನಿನ್ನೆಯಷ್ಟೇ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಟ್ರೇನಿಂಗ್ ಮುಗಿಸಿದ್ದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇವತ್ತು ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಡಿವೈಎಸ್‌ಪಿಯಾಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡು ಹಾಸನಕ್ಕೆ ಜೀಪ್‌ನಲ್ಲಿ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ.
ಹಾಸನದ ಕಿತ್ತಾನೆ ಬಳಿ ಸಂಜೆ 4.30ರ ವೇಳೆಗೆ ಜೀಪ್‌ನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಜೀಪ್ ಮೂರು ಸುತ್ತು ಉರುಳಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷಬರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು ತೀವ್ರ ರಕ್ತಸ್ರಾವ ಆಗಿದೆ. ಚಾಲಕ ಮಂಜೇಗೌಡ ಎಂಬುವರಿಗೂ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ರಕ್ತಸ್ರಾವವಾಗಿ ಬಿದ್ದಿದ್ದ ಅಧಿಕಾರಿ ಮತ್ತು ಚಾಲಕನನ್ನು 108 ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.
ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ, ಹರ್ಷಬರ್ಧನ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲಿಲ್ಲ. ಬದಲಾಗಿ ಕ್ಷಣಕ್ಷಣಕ್ಕೂ ಆರೋಗ್ಯ ಹದಗೆಡುತ್ತಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಚಿಂತನೆ ಮಾಡಿ ಆಂಬ್ಯುಲೆನ್ಸ್ ಸಹ ಕರೆಸಲಾಗಿತ್ತು. ಏನೆಲ್ಲ ಪ್ರಯತ್ನ ಮಾಡಿದರೂ ವಿಧಿಯಾಟದ ಮುಂದೆ ಏನೂ ನಡೀಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಹರ್ಷಬರ್ದನ್ ಪ್ರಾಣಪಕ್ಷಿ ಹಾರಿಹೋಗಿದೆ.
ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್:
ಅಂದ್ಹಾಗೆ ಐಎಎಸ್, ಐಪಿಎಸ್ ಆಗಬೇಕೆನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಯುಪಿಎಸ್‌ಸಿ ಪಾಸಾಗೊದು ಅಷ್ಟೊಂದು ಸುಲಭವಲ್ಲ. ಅದಕ್ಕೆ ತಕ್ಕಂತೆ ಗುರಿ ಇರಬೇಕು. ಛಲ ಬೇಕು. ಹರ್ಷಬರ್ದನ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಹಗಲು ರಾತ್ರಿ ಎನ್ನದೇ ಓದಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು. ಮೂಲತಃ ಬಿಹಾರದ ಹರ್ಷಬರ್ದನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದಲ್ಲಿ ಎಂಜಿನಿಯರಿಂಗ್ ಪದವಿ ಪಡೆದು 2022-23ರ ಐಪಿಎಸ್ ಬ್ಯಾಚ್‌ನಲ್ಲಿ 153ನೇ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿದ್ದರು. ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನವೆಂಬರ್ 4ರಿಂದ ಪೊಲೀಸ್ ತರಬೇತಿ ಶುರುವಾಗಿ ಟ್ರೇನಿಂಗ್ ಮುಗಿಸಿ ಇವತ್ತು ಡಿವೈಎಸ್‌ಪಿಯಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಯಮನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಇತ್ತ ಮಗನ ಸಾವಿನಿಂದ ಪೋಷಕರಿಗೆ ಬರಸಿಡಿಲು ಬಡಿದಂತಾಗಿದೆ. ದೊಡ್ಡ ಅಧಿಕಾರಿಯಾಗಿ ಹೆಸರು ಮಾಡಬೇಕೆನ್ನುವ ಕನಸು ಕಂಡು ಅದೇ ದಾರಿಯಲ್ಲಿದ್ದ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ.
ಪ್ರತಾಪ್ ರೆಡ್ಡಿ ಅವರು ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿವೃತ್ತಿಗೂ 2 ತಿಂಗಳ ಮುಂಚೆಯೇ ಇಲಾಖೆಯಿಂದ ಬಿಡುಗಡೆ ಮಾಡುವಂತೆ ಕೋರಿ ಪತ್ರ ಬರೆದಿದ್ದರು.
ಲಕ್ನೋ: ಸಾಮಾನ್ಯ ನಾಗರಿಕ ವೇಷ ಧರಿಸಿ ಉತ್ತರ ಪ್ರದೇಶದ (Uttar Pradesh) ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರೀಕ್ಷಿಸಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
जनपदीय पुलिस के रिस्पांस टाइम व सतर्कता को चेक करने हेतु पुलिस अधीक्षक औरैया @ipsCharuNigam ने स्वयं की पहचान छुपाते हुए सुनसान रोड पर तमंचे के बल पर बाइक सवार अज्ञात व्यक्तियों द्वारा झूठी लूट की सूचना कंट्रोल रूम व डायल112 पर दी गयी जिसमे जनपदीय पुलिस की कार्यवाही संतोषजनक रही। pic.twitter.com/I4n3yJoUHP
ಸುಲಿಗೆಗೆ ಒಳಗಾದ ಸಂತ್ರಸ್ತೆ ರೀತಿ ನಟಿಸಿದ ಚಾರು ನಿಗಮ್ ಅವರು, 112ಗೆ ಕರೆ ಮಾಡಿ ನನ್ನ ಹೆಸರು ಸರಿತಾ ಚೌಹಾಣ್, ದರೋಡೆಕೋರರರು ನನ್ನನ್ನು ಹಿಂಬಾಲಿಸಿಕೊಂಡು ಬಂದು ದರೋಡೆ ಮಾಡಿದ್ದಾರೆ. ಎಲ್ಲಿದ್ದರೂ ಐದು ನಿಮಿಷದಲ್ಲಿ ಬಂದು ಸಹಾಯ ಮಾಡುವಂತೆ ಮನವಿ ಮಾಡಿದರು. ಕೂಡಲೇ ಕರೆಗೆ ಸ್ಪಂದಿಸಿ ಮೂವರು ಪೊಲೀಸರು ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು. ಮತ್ತು ಘಟನೆ ಸಂಬಂಧ ಮಹಿಳೆಯನ್ನು ವಿಚಾರಣೆ ನಡೆಸಿದರು. ಆದರೆ ಆ ಮಹಿಳೆ ತಮ್ಮ ಬಾಸ್ ಎಂಬುವುದು ಪೊಲೀಸರಿಗೆ ತಿಳಿದಿರಲಿಲ್ಲ. ಸುಮಾರು ಒಂದು ಗಂಟೆಗಳ ಕಾಲ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ ನಂತರ ಸಂತ್ರಸ್ತ ಮಹಿಳೆ, ತಾವು ಹಿರಿಯ ಅಧಿಕಾರಿ ಎಂಬ ಸತ್ಯ ತಿಳಿದು ಸ್ಥಳೀಯ ಪೊಲೀಸರ ತಂಡ ಶಾಕ್ ಆಗಿದ್ದಾರೆ.
ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಲು ಬಂದಿದ್ದ ಚಾರು ನಿಗಮ್ ಅವರು, ಅವರ ಚಲನವಲನ, ಸಮಯಪ್ರಜ್ಞೆಯನ್ನು ನೋಡಿ ಸಮಾಧಾನರಾಗಿದ್ದಾರೆ. ಈ ವೀಡಿಯೋವನ್ನು ಔರೈಯಾ ಪೊಲೀಸರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ನಿರ್ಜನ ರಸ್ತೆಯಲ್ಲಿ ಚಾರು ನಿಗಮ್ ಫೋನ್‍ನಲ್ಲಿ ಮಾತನಾಡುತ್ತಿರುವ ಫೋಟೋ ಹಾಗೂ ವೀಡಿಯೋವನ್ನು ಕಾಣಬಹುದಾಗಿದೆ.
ಪರೀಕ್ಷೆ ನಡೆಸಲು ಸರಿಯಾದ ಸ್ಥಳವನ್ನು ಹುಡುಕುತ್ತಿರುವ ಅಧಿಕಾರಿ ಬೈಕ್‍ನಲ್ಲಿ ಸವಾರಿ ಮಾಡುತ್ತಿರುವ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ವೀಡಿಯೋಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬಿಹಾರವನ್ನು ಪಾಕಿಸ್ತಾನ ಮಾಡಬೇಡಿ – ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಗರಂ
Live Tv
[brid partner=56869869 player=32851 video=960834 autoplay=true]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಐಪಿಎಸ್ ಅಧಿಕಾರಿ (IPS officer) ಲೋಹಿಯಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್ ಅಹ್ಮದ್ (Yasir Ahmed) ಪೊಲೀಸರು ಬಂಧಿಸಿದ್ದಾರೆ. ಯಾಸಿರ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಕತ್ತು ಸೀಳಿ ಐಪಿಎಸ್ ಅಧಿಕಾರಿ ಹತ್ಯೆ
ಕೊಲೆಯ ನಂತರ ಯಾಸಿರ್ ಪರಾರಿಯಾಗಿದ್ದ. ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಯಾಸಿರ್ ಅಹ್ಮದ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.
ಹತ್ಯೆಗೂ ಮುನ್ನ ಅಧಿಕಾರಿ ಲೋಹಿಯಾ ಅವರು ತಮ್ಮ ಕಾಲಿಗೆ ಎಣ್ಣೆಯನ್ನು ಹಚ್ಚುತ್ತಿದ್ದರು. ನಂತರ ಒಡೆದ ಬಾಟಲ್‌ನಿಂದ ಅವರ ಕತ್ತನ್ನು ಸೀಳಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಶಂಕಿತ ಆರೋಪಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯಾಸಿರ್ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುವ ಡೈರಿ ಸೇರಿದಂತೆ ಕೆಲವು ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ʼಆತ್ಮೀಯ ಸಾವೇ.. ನನ್ನ ಜೀವನದಲ್ಲಿ ಬಾʼ ಎಂದು ಒಂದು ಟಿಪ್ಪಣಿ ಬರೆಯಲಾಗಿದೆ. ʼಕ್ಷಮಿಸಿ, ನಾನು ಕೆಟ್ಟ ದಿನ, ವಾರ, ತಿಂಗಳು, ವರ್ಷ, ಜೀವನವನ್ನು ಹೊಂದಿದ್ದೇನೆʼ ಎಂದು ಡೈರಿಯಲ್ಲಿ ಬರೆದಿದೆ.
ನನ್ನ ಜೀವನವನ್ನು ದ್ವೇಷಿಸುತ್ತೇನೆ. ಜೀವನವು ಕೇವಲ ದುಃಖ ಎಂದು ಬರೆಯಲಾಗಿದೆ. ಅಲ್ಲದೇ ಫೋನ್ ಬ್ಯಾಟರಿಯ ರೇಖಾಚಿತ್ರವನ್ನು ಬಿಡಿಸಿ ಅದರಲ್ಲಿ, ಪ್ರೀತಿ 0%, ಉದ್ವೇಗ 90%, ದುಃಖ 99% , ಹುಸಿನಗು 100% ಎಂದಿದೆ.
Live Tv
[brid partner=56869869 player=32851 video=960834 autoplay=true]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1992ರ ಬ್ಯಾಚ್‌ನ ಐಪಿಎಸ್ (IPS officer) ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ
ಅವರನ್ನು ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ: ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆ ಏರಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಶಶಿಕುಮಾರ್ ಅವರು ಕೋತಿರಾಜನ ಮಾದರಿಯಲ್ಲಿ ಕಲ್ಲಿನ ಗೋಡೆ ಏರಿ ಗಮನ ಸೆಳೆದರು. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಇವರು ಕೋತಿರಾಜ್ ಸಲಹೆಯೊಂದಿಗೆ ಕೋಟೆ ಏರಿದ್ದಾರೆ. ಇದನ್ನೂ ಓದಿ:ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ- 16 ಮಂದಿ ಸಾವು
ಇದೀಗ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಹಾಕಿಕೊಂಡಿದ್ದಾರೆ. ಇದನ್ನೂ ಓದಿ:41,652 ಮಂದಿಗೆ ಲಸಿಕೆ – 767 ಡಿಸ್ಚಾರ್ಜ್
ಜೈಪುರ: ಏರ್‌ಪೋರ್ಟ್ ಚೆಕ್ಕಿಂಗ್ ವೇಳೆ ಐಪಿಎಸ್ ಅಧಿಕಾರಿಯ ಸೂಟ್‍ಕೇಸ್ ತುಂಬಾ ಹಸಿರು ಬಟಾಣಿ ಪತ್ತೆಯಾಗಿವೆ. ಈ ಫೋಟೋವನ್ನು ಸ್ವತಃ ಐಪಿಎಸ್ ಅಧಿಕಾರಿಯೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಒಡಿಶಾ ಹಿರಿಯ ಐಪಿಎಸ್ ಅಧಿಕಾರಿ ಅರುಣ ಬೋತ್ರಾ ಅವರ ಬ್ಯಾಗ್‌ನ್ನು ಏರ್‌ಪೋರ್ಟ್‌ನಲ್ಲಿ ತಪಾಸಣೆ ಮಾಡಲಾಗಿದೆ. ಈ ವೇಳೆ ಜೈಪುರದ ಏರ್‌ಪೋರ್ಟ್‌ನಲ್ಲಿ ಐಪಿಎಸ್ ಅಧಿಕಾರಿಯ ಸೂಟ್‍ಕೇಸ್ ತುಂಬಾ ಹಸಿರು ಬಟಾಣಿ ಸಿಕ್ಕಿದೆ.
ಟ್ವೀಟ್‍ನಲ್ಲಿ ಏನಿದೆ?: ಏರ್‌ಪೋರ್ಟ್ ಸೆಕ್ಯೂರಿಟಿ ಅಧಿಕಾರಿಗಳನ್ನು ನನ್ನ ಸೂಟ್‍ಕೇಸನ್ನು ತೆರೆಯಲು ಹೇಳಿದ್ದಾರೆ ಎಂದು ಅರುಣ ಭೊತ್ರಾ ಫೋಟೋವನ್ನು ಶೇರ್ ಮಾಡಿ ಟ್ವೀಟ್ ಮಾಡಿದ್ದಾರೆ.
ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದ್ದು, ಹಲವು ಐಪಿಎಸ್ ಅಧಿಕಾರಿಗಳು ತಮ್ಮದೇ ಪ್ರತಿಕ್ರಿಯೇ ನೀಡಿ ಟ್ವೀಟ್ ಮಾಡುತ್ತಿದ್ದಾರೆ. ಅಧಿಕಾರಿಯ ಸೂಟ್‍ಕೇಸ್‍ನಲ್ಲಿ 40ಕೆಜಿ ಹಸಿ ಹಸಿರು ಬಟಾಣಿ ಪತ್ತೆಯಾಗಿದೆ. ಆದರೆ ನಿಜವಾಗಲೂ ಏರ್‌ಪೋರ್ಟ್‌ನಲ್ಲಿ ಇಂತಹ ಘಟನೆ ನಡೆದಿದೆಯಾ ಅಥವಾ ಅಧಿಕಾರಿ ಹಾಸ್ಯ ಮಾಡಲು ಇಂತಹ ಟ್ವೀಟ್ ಮಾಡಿದ್ದಾರೆ ಎಂಬುವುದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್
ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರೋ ಐಫ್‍ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಹಸಿರು ಬಟಾಣಿ ಕಳ್ಳ ಸಾಗಣೆ ಪ್ರಕರಣಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.