Tag: iran

  • 5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    ಟೆಹ್ರಾನ್: ಕಳೆದ ವರ್ಷ ನವೆಂಬರ್‌ನಿಂದ ಇರಾನ್‌ನಲ್ಲಿ (Iran) ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು. ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು (Students) ವಿಷಪ್ರಾಶನಕ್ಕೊಳಗಾಗಿ (Poisoning) ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ.

    ಇರಾನ್‌ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ವರದಿಗಳ ಪ್ರಕಾರ, ಇರಾನ್‌ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

    ಖುಜೆಸ್ತಾನ್, ಪಶ್ಚಿಮ ಅಜೆರ್ಬೈಜಾನ್, ಫಾರ್ಸ್, ಕೆರ್ಮಾನ್ಶಾ, ಖೊರಾಸನ್ ಹಾಗೂ ಅಲ್ಬೋರ್ಜ್ ಪ್ರದೇಶಗಳಲ್ಲಿ ಹಲವರ ಬಂಧನವಾಗಿದೆ. ನವೆಂಬರ್‌ನಲ್ಲಿ ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಮಹ್ಸಾ ಅಮಿನಿ ಎಂಬ ಯುವತಿ ಬಂಧನವಾಗಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಳು. ಈ ಸಾವಿನ ಬಳಿಕ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದು, ಹಲವರು ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿದೆ.

    ಕಳೆದ ವರ್ಷ ನವೆಂಬರ್ ಅಂತ್ಯದ ವೇಳೆಗೆ ಇರಾನ್‌ನ ಶಿಯಾ ಮುಸ್ಲಿಂ ನಗರವಾದ ಕೋಮ್‌ನಲ್ಲಿ ಮೊದಲ ಬಾರಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಘಟನೆ ವರದಿಯಾಗಿತ್ತು. ಪ್ರಾರಂಭದಲ್ಲಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ, ಇದು ಆಕಸ್ಮಿಕ ಎಂದು ಹೇಳಲಾಯಿತಾದರೂ ಬಳಿಕ ಇಂತಹುದೇ ಘಟನೆ ದೇಶದೆಲ್ಲೆಡೆ ವರದಿಯಾಗುತ್ತಲೇ ಹೋಯಿತು. ಇದರಿಂದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ತಡೆಯಲು ಈ ಕೃತ್ಯ ಮಾಡಲಾಗುತ್ತಿದೆ ಎಂಬುದು ಬಯಲಿಗೆ ಬಂದಿತು. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ಇರಾನ್‌ನ 31 ಪ್ರಾಂತ್ಯಗಳ ಪೈಕಿ 25 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಪ್ರಕರಣ ವರದಿಯಾಗಿದೆ. ಸುಮಾರು 230 ಶಾಲೆಗಳಲ್ಲಿ 5,000 ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಷ ಸೇವಿಸಿದ ವಿದ್ಯಾರ್ಥಿನಿಯರಲ್ಲಿ ಯಾರೂ ಇಲ್ಲಿಯವರೆಗೆ ಸಾವನ್ನಪ್ಪಿಲ್ಲ. ಆದರೆ ಅವರಲ್ಲಿ ಉಸಿರಾಟದ ತೊಂದರೆ, ವಾಕರಿಕೆ, ತಲೆತಿರುಗುವಿಕೆಗಳಂತಹ ಸಮಸ್ಯೆಗಳು ಕಂಡುಬಂದಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

  • PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ರಾನ್‌ನಲ್ಲಿ (Iran) ಪುರುಷ ಪ್ರಧಾನ ನಿಯಮಗಳ ವಿರುದ್ಧ ಮಹಿಳೆಯರ (Women) ಅಸಮಾಧಾನದ ಕಟ್ಟೆ ಒಡೆದಿದೆ. ಹಿಜಬ್‌ (Hijab) ಧರಿಸಿಲ್ಲ ಎಂಬ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿಗೆ ಸುಂದರ ಯುವತಿ ಬಲಿಯಾಗಿದ್ದು, ಈ ದೇಶದ ಪ್ರತಿ ಮಹಿಳೆಯ ಒಡಲಲ್ಲಿ ಕಿಚ್ಚು ಹೊತ್ತಿಸಿತು. ಆಗ ಸಾವಿರಾರು ಮಹಿಳೆಯರು ಬೀದಿಗಿಳಿದು ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ದನಿಯೆತ್ತಿದರು. ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿತು. ಮಹಿಳೆಯರ ಆಕ್ರೋಶಕ್ಕೆ ಅಲ್ಲಿನ ಆಡಳಿತ ವ್ಯವಸ್ಥೆಯೇ ಒಂದು ಕ್ಷಣ ನಡುಗಿ ಹೋಯಿತು. ಇದರ ನಡುವೆಯೇ ಮಹಿಳೆಯರ ಹೋರಾಟ ಹತ್ತಿಕ್ಕಲು ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಯಿತು. ಇತ್ತ ಹೋರಾಟ ತೀವ್ರಗೊಂಡಿದ್ದರೆ ಅತ್ತ ಅದನ್ನು ಹತ್ತಿಕ್ಕುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದವು. ಹೆಣ್ಣುಮಕ್ಕಳು ಶಿಕ್ಷಿತರಾದರೆ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾರೆಂಬ ಆತಂಕ ಇರಾನ್‌ನ ಆಡಳಿತ ವ್ಯವಸ್ಥೆಗೆ ಆತಂಕ ಮೂಡಿಸಿತು. ಹೀಗಾಗಿ ಅವರನ್ನು ಶಿಕ್ಷಣ ವಂಚಿತರನ್ನಾಗಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಅಂತಹ ಘನಘೋರ ಕುಕೃತ್ಯದ ಸನ್ನಿವೇಶಕ್ಕೆ ಇರಾನ್‌ ಸಾಕ್ಷಿಯಾಗಿದೆ.

    ಹಿಜಬ್ ವಿರೋಧಿಸಿ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದ ಬಳಿಕ ಇದೀಗ ದೇಶದಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಹೆಣ್ಣುಮಕ್ಕಳು ವಿದ್ಯಾಭ್ಯಾಸ (Education) ಮಾಡಬಾರದು ಎಂಬ ಕಾರಣಕ್ಕೆ ಕೆಲ ಕಿಡಿಗೇಡಿಗಳು ನೂರಾರು ವಿದ್ಯಾರ್ಥಿನಿಯರಿಗೆ ವಿಷಪ್ರಾಶನ (Poisoning) ಮಾಡಿರುವುದು ಈಚೆಗೆ ವರದಿಯಾಗಿ ಸದ್ದು ಮಾಡಿತ್ತು. ಇರಾನ್‌ನಲ್ಲಿ ಹೆಣ್ಣುಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಏಕೆ ನಡೆಯುತ್ತಿದೆ? ಇದೆಲ್ಲ ಏಕೆ ನಡೆಯುತ್ತಿದೆ? ಇದಕ್ಕೆ ಮೂಲ ಕಾರಣವೇನು ಎಂಬೆಲ್ಲ ಪ್ರಶ್ನೆಗಳು ಕಾಡದೇ ಇರದು.

    ಹೆಣ್ಣುಮಕ್ಕಳಿಗೆ ವಿಷವಿಕ್ಕಿದ್ರಾ ದುರುಳರು?
    ಕೆಲ ದಿನಗಳ ಹಿಂದೆ ಇಸ್ಲಾಮಿಕ್ ರಾಷ್ಟ್ರದ ಶಾಲೆಯೊಂದರಲ್ಲಿ ನೂರಾರು ವಿದ್ಯಾರ್ಥಿನಿಯರಿಗೆ ವಿಷವುಣಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಗೆ ಇರಾನ್‌ನ ಉಪ ಆರೋಗ್ಯ ಸಚಿವ ಯುನೆಸ್ ಪನಾಹಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೆಲ ಕಿಡಿಗೇಡಿಗಳು ಹೆಣ್ಣುಮಕ್ಕಳ ಶಿಕ್ಷಣವನ್ನು ಸ್ಥಗಿತಗೊಳಿಸುವ ಉದ್ದೇಶದಿಂತ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಹೆಣ್ಣುಮಕ್ಕಳಿಗೆ ವಿಷ ನೀಡಿರುವಂತಹ ಪ್ರಕರಣ ಇರಾನ್‌ನಲ್ಲಿ ಇದೇ ಮೊದಲ ಬಾರಿಗೆ ನಡೆದಿಲ್ಲ. ಕಳೆದ ವರ್ಷ ನವೆಂಬರ್‌ನಿಂದ ಇಂತಹ ಆಪಾದಿತ ಘಟನೆಗಳು ವರದಿಯಾಗುತ್ತಲೇ ಇದೆ. 2022ರ ನವೆಂಬರ್‌ನಿಂದ ಇರಾನ್‌ನಾದ್ಯಂತ ಸುಮಾರು 700 ವಿದ್ಯಾರ್ಥಿಗಳು ವಿಷಪ್ರಾಶನ ಮಾಡಲಾಗಿದೆ ಎನ್ನಲಾಗಿದೆ.

    ನವೆಂಬರ್ 30 ರಂದು ಮೊದಲ ಘಟನೆ ಕೋಮ್ ನಗರದ ನೂರ್ ತಾಂತ್ರಿಕ ಶಾಲೆಯಲ್ಲಿ ವರದಿಯಾಗಿತ್ತು. ಅಂದು 18 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಫೆಬ್ರವರಿ ತಿಂಗಳಲ್ಲಿ ಬೊರುಜೆರ್ಡ್ ನಗರದ 4 ಶಾಲೆಗಳಲ್ಲಿ 194 ವಿದ್ಯಾರ್ಥಿನಿಯರಿಗೆ ವಿಷವುಣಿಸಲಾಗಿತ್ತು. ರಾಜಧಾನಿ ಟೆಹ್ರಾನ್ ಬಳಿಯ ಪಾರ್ಡಿಸ್‌ನಲ್ಲಿರುವ ಖಯ್ಯಾನ್ ಬಾಲಕಿಯರ ಶಾಲೆಯಲ್ಲಿ 37 ವಿದ್ಯಾರ್ಥಿಗಳು ವಿಷಪ್ರಾಶನಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.

    ವಿಷಪ್ರಾಶನಕ್ಕೆ ನೂರಾರು ವಿದ್ಯಾರ್ಥಿನಿಯರು ಒಳಗಾಗಿದ್ದರೂ ಇಲ್ಲಿಯವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ವಿಷ ಅಲ್ಪ ಪ್ರಮಾಣದಲ್ಲಿ ಹಾನಿ ಮಾಡುವಂತದ್ದಾಗಿದೆ. ಆದರೆ ವಿಷ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ಉಸಿರಾಟದ ತೊಂದರೆ, ವಾಕರಿಕೆ, ತೆಲೆ ತಿರುಗುವಿಕೆ, ಆಯಾಸದಿಂದ ಬಳಲಿದ್ದಾರೆಂದು ವರದಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಪೋಷಕರು, ಹೋರಾಟಗಾರರ ಆಕ್ರೋಶ
    ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು, ಹೋರಾಟಗಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೇಶಾದ್ಯಂತ ಸಂತ್ರಸ್ತರ ಪೋಷಕರು ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಎಲ್ಲಾ ಅವಾಂತರಗಳಿಗೂ ಅಧಿಕಾರಿಗಳು ಉತ್ತರ ನೀಡಬೇಕೆಂದು ಪೋಷಕರು ಪಟ್ಟು ಹಿಡಿದಿದ್ದಾರೆ.

    ವಿಷಪ್ರಾಶನಕ್ಕೆ ಕಾರಣವೇನು?
    ಇರಾನ್‌ನಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಲು ಕಾರಣವೇನು ಎಂಬುದಕ್ಕೆ ನಿರ್ದಿಷ್ಟವಾದ ಉತ್ತರವಿಲ್ಲ. ಕೆಲವರು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ದೂರವಿರಿಸಲು ಈ ರೀತಿಯ ಕಿಡಿಗೇಡಿತನದ ಕೆಲಸ ಮಾಡುತ್ತಿದ್ದಾರೆ ಎಂಬುದು ಕೆಲವರ ಮಾತು. ಹೆಣ್ಣುಮಕ್ಕಳ ಪೋಷಕರನ್ನು ಭಯಭೀತಗೊಳಿಸಲು ಹಾಗೂ ತಮ್ಮ ಮಕ್ಕಳನ್ನು ಶಾಲೆಗೆ ಹೋಗದಂತೆ ತಡೆಯಲು ಹೀಗೆ ಮಾಡಲಾಗುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇನ್ನೂ ಕೆಲವರ ಅಭಿಪ್ರಾಯವೇನೆಂದರೆ, ಕಳೆದ ವರ್ಷ ಹಿಜಬ್ ಧರಿಸಿಲ್ಲ ಎಂದು ನೈತಿಕ ಪೊಲೀಸ್‌ಗಿರಿಗೆ ಯುವತಿಯೊಬ್ಬಳು ಬಲಿಯಾಗಿದ್ದಳು. ಹಿಜಬ್ ಅನ್ನು ವಿರೋಧಿಸಿದ್ದ ಯುವತಿ ಮಹ್ಸಾ ಆಮಿನಿ ಸಾವಿನ ಬಳಿಕ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು. ಯುವತಿ ಪರವಾಗಿ ಹಾಗೂ ಹಿಜಬ್ ವಿರೋಧಿಸಿ ನಡೆಸಲಾದ ಹಿಂಸಾಚಾರದಲ್ಲಿ ನೂರಾರು ಜನರ ಸಾವೂ ಸಂಭವಿಸಿತ್ತು. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಸರ್ಕಾರ ಹೇಳೋದೇನು?
    ವಿಷಪ್ರಾಶನದ ಪ್ರಕರಣಗಳು ಬೆಳಕಿಗೆ ಬಂದ ಸಂದರ್ಭದಲ್ಲಿ, ಈ ಘಟನೆಗಳು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿಲ್ಲ ಎಂದು ಸರ್ಕಾರ ತಿಳಿಸಿತ್ತು. ಶಾಲೆಗಳಲ್ಲಿ ಚಳಿಗಾಲದ ವೇಳೆ ವಾತಾವರಣವನ್ನು ಬೆಚ್ಚಗಿಡಲು ನೈಸರ್ಗಿಕ ಅನಿಲ ಬಿಸಿ ಮಾಡಲಾಗುತ್ತದೆ. ಇದರ ಕಾರ್ಬನ್ ಮಾನಾಕ್ಸೈಡ್ ವಿದ್ಯಾರ್ಥಿನಿಯರ ಮೇಲೆ ಪರಿಣಾಮ ಬೀರಿದೆ ಎಂದು ಆಪಾದನೆಯಿಂದ ಜಾರಿಕೊಳ್ಳುವ ಹೇಳಿಕೆಯನ್ನು ಸರ್ಕಾರ ನೀಡಿತ್ತು. ದೇಶದ ಶಿಕ್ಷಣ ಸಚಿವರೂ ಆರೋಪಗಳನ್ನು ವದಂತಿ ಎಂದು ತಳ್ಳಿ ಹಾಕಿದ್ದರು.

    ಉಪ ಆರೋಗ್ಯ ಸಚಿವರು ಹೇಳ್ತಿರೋದೇನು?
    ವಿಷ ಸೇವನೆಯ ಘಟನೆಗಳು ದೇಶದ ಹಲವೆಡೆ ವರದಿಯಾಗುತ್ತಿದ್ದಂತೆ ಇದು ಆಕಸ್ಮಿಕವಲ್ಲ ಎಂಬ ಅನುಮಾನ ಹೆಚ್ಚಾಗಿತ್ತು. ಬಳಿಕ ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ತನಿಖೆಗೆ ಆದೇಶಿಸಿದ್ದು, ಉದ್ದೇಶಪೂರ್ವಕವಾಗಿಯೇ ಇಂತಹ ಅಪರಾಧಗಳನ್ನು ಮಾಡುತ್ತಿರುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಘಟನೆ ಬಗ್ಗೆ ಗುಪ್ತಚರ ಸಚಿವಾಲಯವೂ ತನಿಖೆ ನಡೆಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ಘಟನೆಯನ್ನು ಉದ್ದೇಶಪೂರ್ವಕ ಕೃತ್ಯ ಎಂದು ಇರಾನ್‌ನ ಉಪ ಆರೋಗ್ಯ ಸಚಿವ ಯುನೆಸ್ ಪನಾಹಿ ಹೇಳಿದ್ದು, ಇದನ್ನು ಅಧಿಕೃತವಾಗಿ ದೃಢಪಡಿಸಲಾಗಿದೆ. ಕೋಮ್ ಶಾಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥರಾದ ಬಳಿಕ ಬಾಲಕಿಯರ ಶಾಲೆಯನ್ನು ಮುಚ್ಚಬೇಕೆಂದು ಕೆಲವರು ಆಗ್ರಹಿಸಿರುವುದು ತಿಳಿದುಬಂದಿದೆ. ಆದರೆ ಇಲ್ಲಿಯವರೆಗೆ ಘಟನೆಗೆ ಸಂಬಂಧಿಸಿದಂತೆ ಯಾವ ಆರೋಪಿಗಳನ್ನೂ ಬಂಧಿಸಲಾಗಿಲ್ಲ.

    ಏನಿದು ಹಿಜಬ್‌ ವಿರೋಧಿ ಹೋರಾಟ?
    ಮಹ್ಸಾ ಅಮಿನಿ ಯುವತಿ ಹಿಜಬ್‌ ಧರಿಸಿಲ್ಲ ಎಂಬ ಕಳೆದ ವರ್ಷ ಕಾರಣಕ್ಕೆ ಆಕೆಯನ್ನು ಬಂಧಿಸಲಾಗಿತ್ತು. ನೈತಿಕ ಪೊಲೀಸ್‌ಗಿರಿಗೆ ಆಕೆ ಬಲಿಯಾಗಿದ್ದಳು. ಸಾವಿನ ಸುದ್ದಿ ಬಹಿರಂಗವಾಗುತ್ತಿದ್ದಂತೆ ಇರಾನ್‌ನಲ್ಲಿ ಸಾವಿರಾರು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು. ಯುವತಿ ಸಾವಿನ ಬಳಿಕ ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 14,000 ಮಂದಿಯನ್ನು ಆಗ ಬಂಧಿಸಲಾಗಿತ್ತು. ಅವರಲ್ಲಿ ಸಾವಿರಾರು ಪುರುಷರು, ಮಹಿಳೆಯರು, ಮಕ್ಕಳೂ ಸೇರಿದ್ದರು. ಮಾತ್ರವಲ್ಲದೇ ಹಿಜಬ್ ವಿರೋಧಿ ಪ್ರತಿಭಟನೆಯನ್ನು ಬೆಂಬಲಿಸಿ ಹಲವರು ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಂಡು, ನಡುರಸ್ತೆಯಲ್ಲೇ ಹಿಜಬ್‌ ಸುಟ್ಟು ಆಕ್ರೋಶ ಹೊರಹಾಕಿದ್ದರು. ಈ ಎಲ್ಲಾ ಘಟನೆ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಗೂ ಹೆಣ್ಣುಮಕ್ಕಳನ್ನು ನಿಯಂತ್ರಣದಲ್ಲಿರಿಸುವ ಸಲುವಾಗಿ ವಿಷವುಣಿಸುವಂತಹ ಕೃತ್ಯ ನಡೆಸಲಾಗುತ್ತಿದೆ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

    (2014ರಲ್ಲಿ ಇರಾನ್‌ನ ಇಸ್ಫಹಾನ್ ನಗರದಲ್ಲಿ ಮಹಿಳೆಯರ ಮೇಲೆ ಸರಣಿ ಆಸಿಡ್ ದಾಳಿ ನಡೆದಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ಇಸ್ಲಾಮಿಕ್ ಮಾನದಂಡಗಳಿಗೆ ಅನುಗುಣವಾಗಿ ಬಟ್ಟೆ, ಹಿಜಬ್ ಅನ್ನು ಧರಿಸಿರಲಿಲ್ಲ ಎಂಬುದು ಕಂಡುಬಂದಿದೆ.)

  • ಇರಾನ್‌ನಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯಲು ವಿಷಪ್ರಾಶನ – ಸಚಿವರ ಆರೋಪದ ಬಳಿಕ ಭುಗಿಲೆದ್ದ ವಿವಾದ

    ಇರಾನ್‌ನಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯಲು ವಿಷಪ್ರಾಶನ – ಸಚಿವರ ಆರೋಪದ ಬಳಿಕ ಭುಗಿಲೆದ್ದ ವಿವಾದ

    ಟೆಹ್ರಾನ್: ಹಿಜಬ್ ವಿರೋಧಿಸಿ ವ್ಯಾಪಕ ಪ್ರತಿಭಟನೆಗಳಿಂದ (Hijab Protest) ತತ್ತರಿಸಿಹೋಗಿರುವ ಇರಾನ್ (Iran) ದೇಶದಲ್ಲಿ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ.

    ಹೆಣ್ಣುಮಕ್ಕಳ ಶಿಕ್ಷಣ (Girls Education) ಸ್ಥಗಿತಗೊಳಿಸುವ ಉದ್ದೇಶದಿಂದ ಪವಿತ್ರ ನಗರವಾದ ಕೋಮ್‌ನಲ್ಲಿ (Qom City) ಕೆಲ ಕಿಡಿಗೇಡಿಗಳು ಶಾಲಾ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ

    2022ರ ನವೆಂಬರ್ ಅಂತ್ಯದ ವೇಳೆಗೆ ಟೆಹ್ರಾನ್‌ನ ದಕ್ಷಿಣದ ಕೋಮ್‌ನಲ್ಲಿ ಶಾಲಾ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಮಕ್ಕಳ ಉಸಿರಾಟದಲ್ಲಿ ವಿಷಕಾರಿ ಅಂಶ ಇರುವುದು ಪತ್ತೆಯಾಗಿದ್ದು, ಈಗ ಆರೋಗ್ಯ ಸಚಿವ ಯುನೆಸ್ ಪನಾಹಿ, ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

    ಕೋಮ್ ನಗರದ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಿಸಿರುವುದು ಕಂಡುಬಂದನಂತರ ಎಲ್ಲಾ ಶಾಲೆಗಳನ್ನು ಮುಚ್ಚಬೇಕೆಂಬ ಒತ್ತಾಯ ಕೇಳಿಬಂದಿದೆ. ಅದರಲ್ಲೂ ಬಾಲಕಿಯರ ಶಾಲೆಗಳನ್ನು ಮುಚ್ಚಲೇಬೇಕೆಂದು ಕೆಲವರು ಪಟ್ಟುಹಿಡಿದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

    ಈ ಬಗ್ಗೆ ತನಿಖೆ ಆರಂಭಗೊಂಡಿದ್ದರೂ ಇಲ್ಲಿಯವರೆಗೆ ಯಾರೊಬ್ಬರ ಬಂಧನವಾಗಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಾವಿರಾರು ಮೈಲಿ ದೂರವಿದ್ದರೂ ಸಿಗುತ್ತೆ ನೈಜ ಮುತ್ತಿನ ಗಮ್ಮತ್ತು – ಏನಿದು ಕಿಸ್ಸಿಂಗ್ ಡಿವೈಸ್ ಕರಾಮತ್ತು?

    ಇದೇ ಫೆಬ್ರವರಿ 14ರಂದು ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಗಳ ಪೋಷಕರು ರಾಜ್ಯಪಾಲರ ಮನೆ ಹೊರಗೆ ಜಮಾಯಿಸಿ ಅಧಿಕಾರಿಗಳಿಂದ ವಿವರಣೆ ಕೊಡುವಂತೆ ಆಗ್ರಹಿಸಿದ್ದರು. ಇದಾದ ಮರುದಿನ ಸರ್ಕಾರದ ವಕ್ತಾರ ಅಲಿ ಬಹದೋರಿ ಜಹ್ರೋಮಿ, ಗುಪ್ತಚರ ಮತ್ತು ಶಿಕ್ಷಣ ಸಚಿವಾಲಯಗಳು ವಿಷ ಪ್ರಾಶನದ ಕಾರಣವನ್ನು ಪತ್ತೆಮಾಡಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದರು.

    ಈ ಸಂಬಂಧ ಕಳೆದ ವಾರ, ಪ್ರಾಸಿಕ್ಯೂಟರ್ ಜನರಲ್ ಮೊಹಮ್ಮದ್ ಜಾಫರ್ ಮೊಂಟಜೆರಿ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.

  • ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

    ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

    ತೆಹ್ರಾನ್: ಇರಾನ್‌ನಲ್ಲಿ (Iran) ಸಂಭವಿಸಿದ ಪ್ರಬಲ ಭೂಕಂಪಕ್ಕೆ (Iran Earthquake) ಏಳು ಮಂದಿ ಮೃತಪಟ್ಟಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 9:44 ಕ್ಕೆ ಇರಾನ್-ಟರ್ಕಿ ಗಡಿಯ ಸಮೀಪವಿರುವ ಖೋಯ್ ನಗರದಲ್ಲಿ ಭೂಕಂಪ ಸಂಭವಿಸಿದೆ.

    ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆಯ ಭೂಕಂಪವಾಗಿದೆ ಎನ್ನಲಾಗಿದೆ. ಕಂಪನಗಳು ಸಾಕಷ್ಟು ಪ್ರಬಲವಾಗಿವೆ ಎಂದು ವರದಿಯಾಗಿದೆ. ಇರಾನ್‌ನ ಪಶ್ಚಿಮ ಅಜೆರ್ಬೈಜಾನ್ ಪ್ರಾಂತ್ಯದ ಹಲವು ಪ್ರದೇಶಗಳಲ್ಲೂ ಭೂಕಂಪದ ಅನುಭವವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ 7 ಮಂದಿ ಬಲಿ, 10 ಮಂದಿಗೆ ಗಾಯ

    2022 ರಲ್ಲಿ, ದಕ್ಷಿಣ ಇರಾನ್‌ನಲ್ಲಿ 6.3 ತೀವ್ರತೆಯ ಭೂಕಂಪವಾಗಿತ್ತು. ಈ ವೇಳೆ ಕನಿಷ್ಠ ಐದು ಜನರು ಸಾವನ್ನಪ್ಪಿ, 44 ಮಂದಿ ಗಾಯಗೊಂಡಿದ್ದರು. 2003 ರಲ್ಲಿ, ಇತಿಹಾಸದಲ್ಲೇ ಭೀಕರ ಎಂಬಂತೆ 6.6 ತೀವ್ರತೆಯ ಭೂಕಂಪವು 26,000 ಜನರನ್ನು ಬಲಿ ಪಡೆದಿತ್ತು. 2017 ರಲ್ಲಿ ಪಶ್ಚಿಮ ಇರಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

    ಇದರ ನಡುವೆ ಇರಾನ್‌ನ ಕೇಂದ್ರ ನಗರವಾದ ಇಸ್ಫಹಾನ್‌ನಲ್ಲಿರುವ ಮಿಲಿಟರಿ ಸ್ಥಾವರದಲ್ಲೂ ಸಹ ದೊಡ್ಡ ಸ್ಫೋಟ ಸಂಭವಿಸಿದೆ. ಇದು ವಿಫಲ ಡ್ರೋನ್ ದಾಳಿ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಜಬ್ ಧರಿಸದ್ದಕ್ಕೆ ಇರಾನ್‍ನಲ್ಲಿ ಮಳೆ ಬಂದಿಲ್ಲ: ಇರಾನ್‍ನ ಧಾರ್ಮಿಕ ಮುಖಂಡ 

    ಹಿಜಬ್ ಧರಿಸದ್ದಕ್ಕೆ ಇರಾನ್‍ನಲ್ಲಿ ಮಳೆ ಬಂದಿಲ್ಲ: ಇರಾನ್‍ನ ಧಾರ್ಮಿಕ ಮುಖಂಡ 

    ತೆಹ್ರಾನ್: ಕೆಲ ಮಹಿಳೆಯರು ಹಿಜಬ್ (Hijab) ಧರಿಸದ ಕಾರಣ ಇರಾನ್‍ನಲ್ಲಿ (Iran) ಕಾಲ ಕಾಲಕ್ಕೆ ಮಳೆ ಆಗುತ್ತಿಲ್ಲವೆಂದು ಇರಾನ್‍ನ ಧಾರ್ಮಿಕ ಮುಖಂಡ ಮಹ್ಮದ್ ಮೆಹದಿ ಹುಸ್ಸೇನಿ ಹಮೆದಾನಿ ಹೇಳಿಕೆ ನೀಡಿದ್ದಾರೆ.

    ಸಮಾಜದಲ್ಲಿ ಹಿಜಬ್ ಆಚರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹಿಜಬ್ ತೆಗೆದು ಮಹಿಳೆಯರಿಗೆ (Woman) ಸೇವೆ ಸಲ್ಲಿಸುವ ಅಂಗಡಿಗಳು ಮತ್ತು ಮಾಲ್‌ಗಳಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.

    ಈಗ ಇರಾನ್ ಸುಪ್ರೀಂ ಲೀಡರ್ ಖಮೇನಿಗೆ ಅತ್ಯಂತ ಆಪ್ತ. ಮಹ್ಮದ್ ಮಹೆದಿ ಹೇಳಿಕೆ ಪ್ರಸ್ತಾಪಿಸಿ ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ. ಹಿಜಬ್‍ಗೂ ಮಳೆಗೂ ಏನ್ ಸಂಬಂಧ ಅಂತಾ ಪ್ರಶ್ನೆ ಮಾಡ್ತಿದ್ದಾರೆ. ಇರಾನ್‍ನಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ಇನ್ನಷ್ಟು ತೀವ್ರ ಸ್ವರೂಪ ಪಡೆಯುತ್ತಿವೆ. ಇದನ್ನೂ ಓದಿ: ಭರವಸೆ ಕೊಟ್ಟವರೆಲ್ಲ ಕೈ ಎತ್ತಿದ್ರು – ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಅಳಲು

    ಘಟನೆಯೇನು?: ಕಳೆದ ವರ್ಷ ಸೆಪ್ಟೆಂಬರ್ 16 ರಂದು, 22 ವಯಸ್ಸಿನ ಮಹ್ಸಾ ಅಮಿನಿ ಹಿಜಬ್ ಧರಿಸದೇ ಇದ್ದಿದ್ದಕ್ಕೆ ಟೆಹ್ರಾನ್‍ನಲ್ಲಿ ಬಂಧನಕ್ಕೊಳಗಾಗಿ ನೈತಿಕ ಪೊಲೀಸ್‍ಗಿರಿಗೆ ಬಲಿಯಾಗಿದ್ದರು. ನಂತರ ಇರಾನ್‍ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮಹಿಳೆಯರು ಹಿಜಬ್ ಸುಟ್ಟು, ತಲೆಗೂದಲು ಕತ್ತರಿಸಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: 2ನೇ ಮದುವೆಯಾದ ದಾವೂದ್ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾರ್‌ನಲ್ಲಿದ್ರೂ ಹಿಜಬ್‌ ಧರಿಸಬೇಕು – ಇರಾನ್‌ನಲ್ಲಿ ಮಹಿಳೆಯರಿಗೆ ಪೊಲೀಸರ ಕಟ್ಟೆಚ್ಚರ

    ಕಾರ್‌ನಲ್ಲಿದ್ರೂ ಹಿಜಬ್‌ ಧರಿಸಬೇಕು – ಇರಾನ್‌ನಲ್ಲಿ ಮಹಿಳೆಯರಿಗೆ ಪೊಲೀಸರ ಕಟ್ಟೆಚ್ಚರ

    ತೆಹ್ರಾನ್: ಮಹ್ಸಾ ಅಮಿನಿಯ (Mahsa Amini) ಸಾವಿನ ನಂತರ ಇರಾನ್‌ನಲ್ಲಿ (Iran) ಹಿಜಬ್‌ (Hijab) ವಿರುದ್ಧ ಪ್ರತಿಭಟನೆ ಭುಗಿಲೆದ್ದಿದೆ. ಇದರ ನಡುವೆಯೇ, ಕಾರುಗಳಲ್ಲಿಯೂ ಕಡ್ಡಾಯವಾಗಿ ಹಿಜಾಬ್‌ ಧರಿಸಬೇಕು ಎಂದು ಇರಾನ್ ಪೊಲೀಸರು ಮಹಿಳೆಯರಿಗೆ ಮತ್ತೆ ಕಟ್ಟೆಚ್ಚರ ನೀಡಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್ 16 ರಂದು, 22 ವಯಸ್ಸಿನ ಮಹ್ಸಾ ಅಮಿನಿ ಹಿಜಬ್‌ ಧರಿಸದೇ ಇದ್ದಿದ್ದಕ್ಕೆ ಟೆಹ್ರಾನ್‌ನಲ್ಲಿ ಬಂಧನಕ್ಕೊಳಗಾಗಿ ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿದ್ದರು. ನಂತರ ಇರಾನ್‌ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮಹಿಳೆಯರು ಹಿಜಬ್‌ ಸುಟ್ಟು, ತಲೆಗೂದಲು ಕತ್ತರಿಸಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಮಹಿಳೆಯರು ಕಾರ್‌ಗಳಲ್ಲಿ ಹಿಜಬ್‌ ತೆಗೆಯುತ್ತಾರೆ ಎಂಬುದನ್ನು ಮನಗಂಡು 2020ರಲ್ಲೇ ʼನಜೀರ್-‌1ʼ ಎಂಬ ಕಾರ್ಯಕ್ರಮವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಎಚ್ಚರಿಕೆ ನೀಡುವಂತೆ ಮತ್ತೆ ಕಾರ್ಯಕ್ರಮವನ್ನು ದೇಶಾದ್ಯಂತ ಪರಿಚಯಿಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

    “ನಿಮ್ಮ ವಾಹನದಲ್ಲಿ ಹಿಜಬ್ ತೆಗೆಯುವುದನ್ನು ಗಮನಿಸಲಾಗಿದೆ. ಸಮಾಜದ ನಿಯಮಗಳನ್ನು ಗೌರವಿಸುವುದು ಮತ್ತು ಈ ಕ್ರಮ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಅವಶ್ಯಕ ಎಂದು ಪೊಲೀಸರು ಸಂದೇಶ ರವಾನಿಸಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಇರಾನ್‌ನ ನೈತಿಕ ಪೊಲೀಸರು ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಅನುಷ್ಠಾನವನ್ನು ಪರಿಶೀಲಿಸಲು ಸಾರ್ವಜನಿಕ ಪ್ರದೇಶಗಳಿಗೆ ಭೇಟಿ ನೀಡುವಂತೆ ಆದೇಶ ಹೊರಡಿಸಲಾಗಿದೆ. ಆದರೆ ಪ್ರತಿಭಟನೆಯ ನಡುವೆ ಮಹಿಳೆಯರು ಹಿಜಬ್ ಇಲ್ಲದೆ ಓಡಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ವಿವಾದ – ಫಿಫಾ ವಿಶ್ವಕಪ್‍ನಲ್ಲಿ ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್

    ಹಿಜಬ್ ವಿವಾದ – ಫಿಫಾ ವಿಶ್ವಕಪ್‍ನಲ್ಲಿ ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್

    ಕತಾರ್: ಅರಬ್ಬರ ನಾಡಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ (FIFA World Cup) ಫುಟ್‍ಬಾಲ್ (FootBall) ಟೂರ್ನಿ ವಿವಾದಗಳಿಂದ ಸದ್ದು ಮಾಡುತ್ತಿದೆ. ಇದೀಗ ಇರಾನ್ (Iran) ತಂಡ ತಮ್ಮ ದೇಶದ ರಾಷ್ಟ್ರಗೀತೆಯನ್ನು (National Anthem) ಹಾಡಲು ನಿರಾಕರಿಸಿ ಹೊಸ ವಿವಾದ ಹುಟ್ಟು ಹಾಕಿದೆ.

    ಫಿಫಾ ವಿಶ್ವಕಪ್ ಕತಾರ್‌ನಲ್ಲಿ (Qatar) ಬಹಳ ಅದ್ಧೂರಿಯಾಗಿ ಆರಂಭ ಕಂಡಿದೆ. ಫುಟ್‍ಬಾಲ್ ಪಂದ್ಯದ ನಡುವೆ ಆನ್‍ಫೀಲ್ಡ್‌ನಲ್ಲಿ ಕಿತ್ತಾಟ ಸಾಮಾನ್ಯ ಆದರೆ ಕತಾರ್‌ನಲ್ಲಿ ಆನ್‍ಫೀಲ್ಡ್ ಮತ್ತು ಆಫ್‍ದೀಫೀಲ್ಡ್‌ನಲ್ಲಿ ಕೆಲ ವಿವಾದ ಹೆಚ್ಚು ಪ್ರಚಾರ ಕಂಡಿದೆ. ಇದೀಗ ಈ ವಿವಾದಕ್ಕೆ ಹೊಸ ಸೇರ್ಪಡೆ ಎಂಬಂತೆ ಇಂಗ್ಲೆಂಡ್ (England) ಹಾಗೂ ಇರಾನ್ ನಡುವಿನ ಪಂದ್ಯಕ್ಕೂ ಮೊದಲು ರಾಷ್ಟ್ರಗೀತೆ ವಿವಾದ ಹುಟ್ಟಿಕೊಂಡಿದೆ. ಇರಾನ್ ಆಟಗಾರರು ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ್ದಾರೆ. ಫುಟ್‍ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಎರಡೂ ತಂಡಗಳ ರಾಷ್ಟ್ರಗೀತೆ ಹಾಡಿಸುವುದು ನಿಯಮ. ಆದರೆ ಇರಾನ್ ಆಟಗಾರರು ತಮ್ಮ ದೇಶದ ರಾಷ್ಟ್ರಗೀತೆ ಹಾಡದೇ ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್

    ಇರಾನ್‍ನಲ್ಲಿ ನಡೆಯುತ್ತಿರುವ ಹಿಜಬ್ (Hijab) ವಿರುದ್ಧ ಪ್ರತಿಭಟನೆ ಬೆಂಬಲಿಸಿ ಇರಾನ್ ಫುಟ್‍ಬಾಲ್ ತಂಡ ಈ ನಿರ್ಧಾರ ತೆಗೆದುಕೊಂಡಿದೆ. ತಮ್ಮ ದೇಶದ ರಾಷ್ಟ್ರಗೀತೆಯನ್ನು ಹಾಡದೇ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಇರಾನ್ ಫುಟ್‍ಬಾಲ್ ತಂಡದ ನಾಯಕ ಅಲಿರೆಜಾ ಜಹಾನ್‍ಬಕ್ಷ್, ನಾವು ರಾಷ್ಟ್ರಗೀತೆ ಹಾಡದಿರಲು ನಿರ್ಧರಿಸಿದ್ದೇವೆ. ಇರಾನ್‍ನಲ್ಲಿ ನಡೆಯತ್ತಿರುವ ಹಿಜಬ್ ವಿರುದ್ಧದ ಪ್ರತಿಭಟನೆ ಬೆಂಬಲಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ ಸೆ.16 ರಂದು ಮಹ್ಸಾ ಅಮಿನಿ ಅವರನ್ನು ಬಂಧಿಸಲಾಗಿತ್ತು. ನಂತರ ಆಕೆ ಸಾವಿಗೀಡಾದಳು. ಇರಾನ್‍ನ ನೈತಿಕ ಪೊಲೀಸ್‍ಗಿರಿಗೆ ಯುವತಿ ಬಲಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂತು. ಇದರ ಬೆನ್ನಲ್ಲೇ ಯುವತಿ ಸಾವು ಹಾಗೂ ಹಿಜಬ್ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತೀವ್ರ ಸ್ವರೂಪ ಪಡೆದಿದ್ದು, ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ಕಳಚಿದ ವೀಡಿಯೋ ಪೋಸ್ಟ್ – ಇರಾನಿ ನಟಿ ಅರೆಸ್ಟ್

    ಹಿಜಬ್ ಕಳಚಿದ ವೀಡಿಯೋ ಪೋಸ್ಟ್ – ಇರಾನಿ ನಟಿ ಅರೆಸ್ಟ್

    ಟೆಹ್ರಾನ್: ಹಿಜಬ್ ವಿರುದ್ಧ ಇರಾನ್ (Iran) ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದೆ. ಈ ನಡುವೆ ನಟಿಯೊಬ್ಬರು ಸಾರ್ವಜನಿಕವಾಗಿ ಹಿಜಬ್ (Hijab) ಅನ್ನು ತೆಗೆದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಕುರ್ದಿಶ್ ಮೂಲದ 22 ವರ್ಷದ ಇರಾನಿಯನ್ ಅಮಿನಿ (Mahsa Amini), ಸೆಪ್ಟೆಂಬರ್ 16ರಂದು ಮೃತಪಟ್ಟಿದ್ದಳು. ತಮ್ಮನ ಜೊತೆ ಟೆಹರಾನ್ (Tehran) ಪಟ್ಟಣದಲ್ಲಿ ತೆರಳುವಾಗ ಮಹಿಳೆಯರಿಗೆ ಇರುವ ಇಸ್ಲಾಮಿಕ್ ವಸ್ತ್ರ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿ ಆಕೆಯನ್ನು ನೈತಿಕ ಪೊಲೀಸರು ಬಂಧಿಸಿದ್ದರು. ಇದಾಗಿ ಮೂರು ದಿನಗಳ ಬಳಿಕ ಆಕೆ ಮೃತಪಟ್ಟಿದ್ದಳು. ಈ ವಿರುದ್ಧ ಇರಾನ್‍ನಲ್ಲಿ ಕಳೆದೆರಡು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಗಳಿಂದ ಕ್ಲೆರಿಕಲ್ ಆಡಳಿತ ಅಲುಗಾಡುತ್ತಿದೆ.

     

    View this post on Instagram

     

    A post shared by Hengameh Ghaziani (@hengamehghaziani)

    ಇದೀಗ ಹಿಜಬ್ ಗಲಭೆಗೆ ಪ್ರಚೋದನೆ ಮತ್ತು ಬೆಂಬಲ ನೀಡಿ, ಮಾಧ್ಯಮದೊಂದಿಗೆ ಸಂವಹನ ನಡೆಸಿದ್ದಕ್ಕಾಗಿ 52 ವರ್ಷದ ನಟಿ ಹೆಂಗಮೆಹ್ ಘಜಿಯಾನಿ (Hengameh Ghaziani) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೊದಲೇ ನ್ಯಾಯಾಂಗ ತನಿಖೆಗೆ ಹಾಜರಾಗುವಂತೆ ತನಗೆ ಸಮನ್ಸ್ ಕಳುಹಿಸಲಾಗಿದ್ದು, ಕಡ್ಡಾಯವಾಗಿ ಹಿಜಬ್ ಕಳಚಿರುವ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಿಂದ ತೆಗೆದುಹಾಕುವಂತೆ ಸೂಚಿಸಲಾಗಿದೆ ಎಂದು ನಟಿ ತಿಳಿಸಿದ್ದರು. ಇದನ್ನೂ ಓದಿ: ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಶಾಪಿಂಗ್ ಸ್ಟ್ರೀಟ್‍ನಲ್ಲಿ ಚಿತ್ರೀಕರಿಸಲಾದ ಈ ವೀಡಿಯೋದಲ್ಲಿ, ಘಜಿಯಾನಿ ಅವರು ಮಾತನಾಡದೇ ಕ್ಯಾಮೆರಾ ಮುಂದೆ ನಿಂತು ಹಿಂದೆ ತಿರುಗಿ ಕೂದಲನ್ನು ಗಂಟು ಹಾಕುವುದನ್ನು ಕಾಣಬಹುದಾಗಿದೆ. ಈ ವೀಡಿಯೋ ಜೊತೆಗೆ ಬಹುಶಃ ಇದು ನನ್ನ ಕೊನೆಯ ಪೋಸ್ಟ್ ಆಗಿರಬಹುದು. “ಈ ಕ್ಷಣದಿಂದ, ನನಗೆ ಯಾವಾಗ ಏನಾಗುತ್ತೊ ಗೊತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಾನು ಇರಾನ್ ಜನರೊಂದಿಗೆ ಇರುತ್ತೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಟೆಹ್ರಾನ್: ಇರಾನ್‍ನ (Iran) ಮೆಟ್ರೋ ನಿಲ್ದಾಣದಲ್ಲಿ (Metro Station) ಇರಾನ್ ಭದ್ರತಾ ಪಡೆಗಳು ಹಿಜಬ್ ವಿರೋಧಿ ಪ್ರತಿಭಟನಾಕಾರರ (Anti Hijab Protest) ಮೇಲೆ ಗುಂಡಿನ ದಾಳಿ ನಡೆಸಿದೆ.

    ಮಹ್ಸಾ ಅಮಿನಿಯ ( Mahsa Amini ) ಸಾವನ್ನು ವಿರೋಧಿಸಿ ಇರಾನ್‍ನಲ್ಲಿ ಇದೀಗ 3 ತಿಂಗಳಿಗೆ ತಲುಪಿದೆ. ಇರಾನ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ಪ್ರತಿಭಟನಾಕಾರರು ಮೆಟ್ರೋ ನಿಲ್ದಾಣಗಳಲ್ಲಿ ಹಿಜಬ್‍ಗೆ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಗುಂಡು ಹಾರಿಸಿದಾಗ ಜನರು ಅಲ್ಲಿಂದ ಓಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲದೇ ರೈಲಿನೊಳಗೆ ಅಧಿಕಾರಿಗಳು ಮಹಿಳೆಯರನ್ನು ಲಾಠಿಗಳಿಂದ ಹೊಡೆದಿದ್ದಾರೆ. ಘಟನೆ ವೇಳೆ ಅನೇಕ ಜನರು ಬಿದ್ದು, ತುಳಿತಕ್ಕೊಳಗಾಗಿದ್ದಾರೆ.

    ಈಗಾಗಲೇ ಇರಾನ್ ದೇಶಲ್ಲಿ ಹಿಜಬ್ ಅನ್ನು ವಿರೋಧಿಸಿ ನಿರಂತರವಾಗಿ ಅಶಾಂತಿ ಮುಂದುವರಿದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಿರುವ ಆರೋಪದಲ್ಲಿ ಕೆಲವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಕ್ಲೆರಿಕಲ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿರುವವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮೊದಲ ಬಾರಿಗೆ ಮರಣದಂಡನೆ ವಿಧಿಸಿದೆ. ಇದನ್ನೂ ಓದಿ: ಹನುಮಂತನ ಫೋಟೋ, ದೇವಾಲಯ ಆಕಾರದ ಕೇಕ್ ಕತ್ತರಿಸಿ ಕೈ ನಾಯಕನ ಬರ್ತ್‍ಡೇ ಸೆಲೆಬ್ರೇಷನ್

    ಇರಾನ್ ರಾಜಧಾನಿ ಟೆಹರಾನ್ ನಲ್ಲಿ ತಲೆಗೆ ಹಿಜಬ್ ಸರಿಯಾಗಿ ಧರಿಸದೇ ಇದ್ದಿದ್ದಕ್ಕೆ ಮಹ್ಸಾ ಅಮಿನಿಯನ್ನು ನೈತಿಕ ಪೊಲೀಸರು ಬಂಧಿಸಿದ್ದರು. ಪೊಲೀಸ್ ಬಂಧನದ ವೇಳೆ ಮಹ್ಸಾ ಸಾವನ್ನಪ್ಪಿದ್ದಳು. ಈಕೆಗೆ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇರಾನ್ ಸರ್ಕಾರದ ವಿರುದ್ಧ ಮಹಿಳೆಯರು, ಮಕ್ಕಳು ಬೀದಿಗೆ ಇಳಿದು ಹೋರಾಟ ಆರಂಭಿಸಿ ಮೂರು ತಿಂಗಳೂ ಕಳೆದಿವೆ. ಇದನ್ನೂ ಓದಿ: ವೈಟ್‍ಫೀಲ್ಡ್ ಮೆಟ್ರೋ ಸಂಚಾರ – ವೋಲ್ವೋ ಬಸ್ ಸಂಚಾರಕ್ಕೆ ಹೊಡೆತ

    Live Tv
    [brid partner=56869869 player=32851 video=960834 autoplay=true]

  • ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ- ಮೊದಲ ಮರಣದಂಡನೆ ಶಿಕ್ಷೆ

    ಟೆಹ್ರಾನ್: ಹಿಜಬ್ ವಿರೋಧಿ ಭಾರೀ ಪ್ರತಿಭಟನೆ (Anti Hijab Protest) ನಡೆಯುತ್ತಿರುವ ಇರಾನ್‌ನಲ್ಲಿ (Iran) ಮೊದಲ ಬಾರಿಗೆ ಆರೋಪಿಗೆ ಮರಣದಂಡನೆ ಶಿಕ್ಷೆ (Death Sentence) ವಿಧಿಸಲಾಗಿದೆ.

    ದೇಶಲ್ಲಿ ಹಿಜಬ್ ಅನ್ನು ವಿರೋಧಿಸಿ ನಿರಂತರವಾಗಿ ಅಶಾಂತಿ ಮುಂದುವರಿದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಿರುವ ಆರೋಪದಲ್ಲಿ ಕೆಲವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಕ್ಲೆರಿಕಲ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿರುವವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮೊದಲ ಬಾರಿಗೆ ಮರಣದಂಡನೆ ವಿಧಿಸಿದೆ.

    ಪ್ರತಿಭಟನೆಯಲ್ಲಿ ತೊಡಗಿದ ವ್ಯಕ್ತಿಯೊಬ್ಬರು ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಇನ್ನೂ 5 ಜನರಿಗೆ ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪದ ಮೇಲೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು!

    ಈ ತೀರ್ಪುಗಳನ್ನು ಕ್ರಾಂತಿಕಾರಿ ನ್ಯಾಯಾಲಯದ ಪ್ರತ್ಯೇಕ ಶಾಖೆಗಳು ನೀಡಿವೆ. ಆದರೆ ವಿಚಾರಣೆಯಲ್ಲಿರುವ ಪ್ರತಿಭಟನಾಕಾರರ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ. ಅವರು ಈ ನಿರ್ಧಾರಗಳನ್ನು ಮೇಲ್ಮನವಿಗೆ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

    ಇರಾನ್‌ನಲ್ಲಿ ಕ್ಲೆರಿಕಲ್ ಆಡಳಿತವನ್ನು ವಿರೋಧಿಸುವವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವುದಕ್ಕೆ ಹೆಸರುವಾಸಿಯಾಗಿದೆ. 1979ರಲ್ಲಿ ಇಸ್ಲಾಮಿಕ್ ಕ್ರಾಂತಿಯಾದ ಬಳಿಕ ನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿರುವ ನೂರಾರು ಜನರನ್ನು ಬಂಧಿಸಲಾಗಿದೆ. ಅವರಿಗೆ ಸಾರ್ವಜನಿಕವಾಗಿ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ

    Live Tv
    [brid partner=56869869 player=32851 video=960834 autoplay=true]