Tag: iran

  • ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

    ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

    – ದೇಶಾದ್ಯಂತ ಗೂಢಚಾರಿಣಿ ಫೋಟೋ ಪ್ರಕಟಿಸಿದ ಇರಾನ್‌
    – ಇಸ್ರೇಲ್‌ ದಾಳಿ ಬೆನ್ನಲ್ಲೇ ಇರಾನ್‌ನಿಂದ ಕಣ್ಮರೆ

    ಟೆಲ್‌ ಅವಿವ್‌: ಪುಟ್ಟ ದೇಶ ಇಸ್ರೇಲ್‌ (Israel) ಇರಾನ್‌ (Iran) ಮೇಲೆ ಇಷ್ಟೊಂದು ನಿಖರವಾಗಿ ದಾಳಿ ಮಾಡಿದರ ಹಿಂದೆ ಮೊಸಾದ್‌ (Mossad) ಮಹಿಳಾ ಗೂಢಚಾರಿಣಿ ಕೆಲಸ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಹೌದು. ಫ್ರಾನ್ಸ್‌ ಮೂಲದ ಕ್ಯಾಥರೀನ್ ಪೆರೆಜ್ ಶಕ್ಡಮ್ (Catherine Perez Shakdam) ಎಂಬಾಕೆ ಎರಡು ವರ್ಷದ ಹಿಂದೆ ಮೊಸಾದ್‌ನಿಂದ ತರಬೇತಿ ಪಡೆದು ರಹಸ್ಯವಾಗಿ ಇರಾನ್‌ ಪ್ರವೇಶಿಸಿದ್ದಳು. ನೋಡಲು ಸುಂದರವಾಗಿದ್ದ ಈಕೆ ಮೂಲತ: ಯಹೂದಿ. ಕ್ಯಾಥರೀನ್ ಶಿಯಾ ಇಸ್ಲಾಂಗೆ ಮತಾಂತರಗೊಂಡು ನಿಧಾನವಾಗಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬಗಳಿಗೆ ಹತ್ತಿರವಾಗಿದ್ದಳು.

    ನಾನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಇರಾನ್‌ ದೇಶದ ಆಡಳಿತದ ಬಗ್ಗೆ ಒಲವು ಹೊಂದಿದ್ದೇನೆ ಎಂದು ಹೇಳಿ ಇಸ್ಲಾ ಧರ್ಮ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಳು. ಮತಾಂತರಗೊಂಡ ಬಳಿಕ ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿದ್ದ ಈಕೆ ಸರ್ಕಾರಿ ಅಧಿಕಾರಿಗಳ ಪತ್ನಿಯರನ್ನು ಭೇಟಿಯಾಗಿ ಮಾತನಾಡಲು ಆರಂಭಿಸಿದ್ದಳು. ನಂತರದ ದಿನಗಳಲ್ಲಿ ಈಕೆ ಎಷ್ಟು ವಿಶ್ವಾಸ ಗಳಿಸಿದ್ದಳು ಎಂದರೆ ಸೇನಾ ನಾಯಕರ ಮನೆಗೆ ನಿಯಮಿತ ಹೋಗುವ ಮಟ್ಟಕ್ಕೆ ಆಪ್ತತೆ ಬೆಳೆದಿತ್ತು. ಇದನ್ನೂ ಓದಿ: ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಈಕೆಯ ಬರಹಗಳು ನಿಯಮಿತವಾಗಿ ಪ್ರೆಸ್ ಟಿವಿ, ಟೆಹ್ರಾನ್ ಟೈಮ್ಸ್ ಮತ್ತು ಖಮೇನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದವು. ಬರಹಗಾರ್ತಿ, ಪತ್ರಕರ್ತೆ ಮತ್ತು ಚಿಂತಕಿಯಾಗಿ ಪ್ರವೇಶಿಸಿದ್ದ ಕ್ಯಾಥರೀನ್ ಲೇಖನದ ಮೂಲಕ ಇರಾನಿನ ಸರ್ವೋಚ್ಚ ನಾಯಕ ಅಲಿ ಖಮೇನಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಳು.

    ಸೇನೆಯಲ್ಲಿರುವ ಉನ್ನತ ನಾಯಕರ ಮನೆಗೆ ಅಷ್ಟು ಸುಲಭವಾಗಿ ಯಾರನ್ನು ಬಿಡುವುದಿಲ್ಲ. ಆದರೆ ಬಿಗಿ ಭದ್ರತೆ ಕಲ್ಪಿಸಿದ್ದ ಈ ಮನೆಗೆ ಕ್ಯಾಥರೀನ್ ಬಹಳ ಸಲೀಸಾಗಿ ಹೋಗುತ್ತಿದ್ದಳು. ಮನೆಗೆ ಭೇಟಿ ನೀಡುವುದರ ಜೊತೆಗೆ ಆಕೆ ಉನ್ನತ ಕಮಾಂಡರ್‌ಗಳ ಬಗ್ಗೆ ಗುಪ್ತಚರ ಮಾಹಿತಿಯನ್ನು ಸದ್ದಿಲ್ಲದೆ ಸಂಗ್ರಹಿಸುತ್ತಿದ್ದಳು. ಸೇನಾ ನಾಯಕರ ಮನೆ ಮಾತ್ರವಲ್ಲ ಸಾಮಾನ್ಯವಾಗಿ ಯಾರಿಗೂ ಪ್ರವೇಶ ಇಲ್ಲದ ಅಥವಾ ಕಠಿಣ ಪರಿಶೀಲನೆಯ ನಂತರ ಪ್ರವೇಶಿಸಬಹುದಾಗಿದ್ದ ಖಾಸಗಿ ಸ್ಥಳಗಳಿಗೆ ಈಕೆ ಬಹಳ ಸಲೀಸಲಾಗಿ ತೆರಳುತ್ತಿದ್ದಳು. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ಇರಾನ್‌ ಏಜೆನ್ಸಿಗಳು ಸಂದರ್ಶಕರ ಫೋನ್‌ ಇತ್ಯಾದಿಗಳನ್ನು ಪರಿಶೀಲಿಸುತ್ತಿದ್ದರೂ ಕ್ಯಾಥರೀನ್ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ರಹಸ್ಯ ಮಾಹಿತಿಯನ್ನು ಸಂಗ್ರಹಿಸಿ ನೇರವಾಗಿ ಮೊಸಾದ್‌ಗೆ ಕಳುಹಿಸುತ್ತಿದ್ದಳು. ಕಳೆದ ಮೂರು ವಾರಗಳಲ್ಲಿ ಸೇನಾ ಮುಖ್ಯಸ್ಥರಿಂದ ಹಿಡಿದು ಐಆರ್‌ಜಿಸಿ ನಾಯಕರವರೆಗೆ 9 ಉನ್ನತ ಇರಾನಿನ ಮಿಲಿಟರಿ ಕಮಾಂಡರ್‌ಗಳನ್ನು ಇಸ್ರೇಲ್ ಕೊಂದು ಹಾಕಿದೆ. ಪ್ರತಿ ಬಾರಿಯೂ, ಇಸ್ರೇಲಿ ಜೆಟ್‌ಗಳು ಈ ಅಧಿಕಾರಿಗಳು ನೆಲೆಸಿದ್ದ  ನಿಖರವಾಗಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಮಾರಕ ದಾಳಿಗಳನ್ನು ನಡೆಸಿವೆ.

    ಈಕೆ ಕಳುಹಿಸಿದ ಮಾಹಿತಿ ಆಧಾರದಲ್ಲೇ ಇಸ್ರೇಲ್‌ ಕೆಲ ದಿನಗಳಿಂದ ಸೇನಾ ನಾಯಕರ ಮತ್ತು ವಿಜ್ಞಾನಿಗಳ ಮನೆ ಮೇಲೆ ನಿಖರ ದಾಳಿ ಮಾಡಿರಬಹುದು ಎಂದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

     
    ಈಗ ಎಲ್ಲಿದ್ದಾಳೆ?
    ಇಸ್ರೇಲ್‌ ದಾಳಿ ಆರಂಭಿಸುತ್ತಿದ್ದಂತೆ ಸೇನಾ ನಾಯಕರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು. ಸುರಕ್ಷಿತ ಸ್ಥಳಕ್ಕೆ ತೆರಳಿದ್ದರೂ ಇಸ್ರೇಲ್‌ ಆ ಜಾಗಕ್ಕೆ ನಿಖರವಾಗಿ ದಾಳಿ ಮಾಡಿ ಹತ್ಯೆ ಮಾಡುತ್ತಿತ್ತು.

    ಇಸ್ರೇಲ್‌ ದಾಳಿಗೆ ಬೆಚ್ಚಿಬಿದ್ದ ಇರಾನ್‌ ಗುಪ್ತಚರ ಸಂಸ್ಥೆ ತನಿಖೆ ಆರಂಭಿಸಿತು. ತನಿಖೆ ಆರಂಭಿಸಿದಾಗ ಅಧಿಕಾರಿಗಳು ಕ್ಯಾಥರೀನ್ ಜೊತೆ ತೆಗೆಸಿದ್ದ ಫೋಟೋಗಳು ನಂತರ ಆಕೆ ನಿಯಮಿತವಾಗಿ ಮನೆಗೆ ಭೇಟಿ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಬಯಲಾಗುತ್ತಿದ್ದಂತೆ ಇರಾನ್‌ ಆಕೆಯ ಪತ್ತೆಗೆ ಬಲೆ ಬೀಸಿದೆ. ಆದರೆ ಅಷ್ಟು ಹೊತ್ತಿಗಾಗಲೇ ಆಕೆ ಇರಾನ್‌ನಿಂದ ಕಣ್ಮರೆಯಾಗಿದ್ದಳು.

    ಇರಾನ್‌ನ ಗುಪ್ತಚರ ಸಂಸ್ಥೆ ಈಕೆಯ ಪೋಸ್ಟರ್‌ಗಳು ಮತ್ತು ಫೋಟೋಗಳನ್ನು ದೇಶಾದ್ಯಂತ ಪ್ರಕಟಿಸಿ ಈಕೆಯ ಸುಳಿವು ನೀಡಬೇಕೆಂದು ಕೇಳಿಕೊಂಡಿದೆ. ಒಂದೋ ಆಕೆ ತನ್ನ ಗುರುತನ್ನು ಬದಲಾಯಿಸಿರಬೇಕು ಅಥವಾ ಬೇರೆ ದೇಶಕ್ಕೆ ತೆರಳಿರಬಹುದು ಎಂದು ವರದಿಯಾಗಿದೆ. ಇರಾನಿನ ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ಫೋಟೋಗಳು ಈಗ ವೈರಲ್‌ ಆಗಿದೆ.

  • ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಟೆಹ್ರಾನ್: ಇರಾನ್‌ (Iran) ಹಾಗೂ ಇಸ್ರೇಲ್‌ (Israel) ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಅಮೆರಿಕ (America) ಸಹ ಅಧಿಕೃತವಾಗಿ ಎಂಟ್ರಿಯಾಗಿ ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಹಲವು ರಾಷ್ಟ್ರಗಳು ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದಾಗಿವೆ ಎಂದು ವರದಿಯಾಗಿದೆ.

    ರಷ್ಯಾ (Russia) ಹಾಗೂ ಚೀನಾ, ಇರಾನ್‌ಗೆ ಬೆಂಬಲವನ್ನು ಘೋಷಿಸಿವೆ. ಇರಾನ್‌ನ ಅಣ್ವಸ್ತ್ರ ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯು ಖಂಡನಾರ್ಹ. ಇರಾನ್‌ಗೆ ಅಣ್ವಸ್ತ್ರ ಪೂರೈಸಲು ಹಲವು ದೇಶಗಳು ಮುಂದಾಗಿವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್‌ ಆಪ್ತ ಡಿಮಿಟ್ರಿ ಮೆಡ್ಡೆಡೆವ್ ಹೇಳಿದ್ದಾರೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ 

    ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ, ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಕಾನೂನುಗಳನ್ನು ಅಮೆರಿಕ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್‌ ಮೂರು ಪರಮಾಣು ಕೇಂದ್ರಗಳ ಮೇಲೆ ಶನಿವಾರ ಮಧ್ಯರಾತ್ರಿ ಅಮೆರಿಕ ಬಾಂಬ್‌ ದಾಳಿ (Bomb Attack) ನಡೆಸಿತ್ತು. 14,000 ಕೆಜಿ ತೂಕ ಹೊಂದಿರುವ ಹಾಗೂ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಎಂದು ಗುರುತಿಸಿಕೊಂಡಿರುವ ಬಿ-12 ಬಾಂಬರ್‌ ಬಳಸಿ ದಾಳಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅಮೆರಿಕಗೆ ಭೀಕರ ದಾಳಿ ಎದುರಿಸಲು ತಯಾರಾಗಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

  • ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್‌ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ

    ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್‌ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ

    ನವದೆಹಲಿ: ಇರಾನ್‌ನ (Iran) ಪರಮಾಣು ನೆಲೆಗಳ ಮೇಲೆ ಅಮೆರಿಕ (America) ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ (Narendra Modi), ಇರಾನ್ ಅಧ್ಯಕ್ಷ ಮಸೂದ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿದೆವು. ಈ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೇನೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಮನಗೊಳಿಸಿ ಆದಷ್ಟು ಬೇಗ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಸ್ಥಾಪಿಸುವಂತೆ ಸಲಹೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

    ಸುಮಾರು 45 ನಿಮಿಷಗಳ ಕಾಲ ಮಸೂದ್ ಪೆಜೆಶ್ಕಿಯಾನ್ ಮತ್ತು ಮೋದಿ ನಡುವೆ ಮಾತುಕತೆ ನಡೆಯಿತು. ಈ ವೇಳೆ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಭಾರತ ಸ್ನೇಹಿತ ಮತ್ತು ಪಾಲುದಾರ ಎಂದು ಪೆಜೆಶ್ಕಿಯಾನ್ ಬಣ್ಣಿಸಿದರು. ಅಲ್ಲದೇ ಭಾರತದ ನಿಲುವಿಗೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು.  ಇದನ್ನೂ ಓದಿ: ಹಾಸನ | ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

  • America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

    America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

    ಇಸ್ಲಾಮಾಬಾದ್‌: ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು 2026ರ ನೊಬೆಲ್ ಶಾಂತಿ ಪ್ರಶಸ್ತಿ (Nobel Peace Prize) ನಾಮ ನಿರ್ದೇಶನ ಮಾಡಿದ್ದ ಪಾಕಿಸ್ತಾನ (Pakistan) ಇದೀಗ ಇರಾನ್‌ ಅಣ್ವಸ್ತ್ರ ಕೇಂದ್ರಗಳ ಮೇಲಿನ ಅಮೆರಿಕ ದಾಳಿಯನ್ನು ಖಂಡಿಸಿದೆ.

    ಭಾನುವಾರ (ಇಂದು) ನಸುಕಿನ ಜಾವ ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಫಹಾನ್ ಪರಮಾಣು ಕೇಂದ್ರಗಳ ಮೇಲೆ ದಾಳಿ (America Strikes In Iran) ನಡೆಸಿತು. ಈ ದಾಳಿಯನ್ನ ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar), ಇಸ್ರೇಲ್‌ನ ಸರಣಿ ದಾಳಿಗಳ ನಂತರ ಇರಾನ್‌ ಪರಮಾಣು ಸೌಲಭ್ಯಗಳ ಮೇಲಿನ ಅಮೆರಿಕ ದಾಳಿಯನ್ನು ಪಾಕಿಸ್ತಾನ ಖಂಡಿಸುತ್ತದೆ. ಈ ಮೂಲಕ ಅಮೆರಿಕ ಅಂತಾರಾಷ್ಟ್ರೀಯ ಕಾನೂನು ಉಲ್ಲಂಘಿಸಿದೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಇದು ಇತರ ದೇಶಗಳ ಮೇಲೂ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

    ಮುಂದುವರಿದು.. ಅಮಾಯಕರ ಜೀವಗಳನ್ನು ರಕ್ಷಿಸುವ, ಸಾರ್ವಜನಿಕ ಆಸ್ತಿ ರಕ್ಷಿಸುವ ಉದ್ದೇಶದಿಂದ ಈ ಸಂಘರ್ಷವನ್ನು ತಕ್ಷಣವೇ ಅಮೆರಿಕ ಕೊನೆಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಎಲ್ಲಾ ಪಕ್ಷಗಳು ಅಂತಾರಾಷ್ಟ್ರೀಯ ಕಾನೂನುಗಳನ್ನು ಪಾಲನೆ ಮಾಡಬೇಕು. ವಿಶ್ವಸಂಸ್ಥೆಯ ನಿಯಮಗಳನ್ನು (UN Charter) ಪಾಲಿಸಬೇಕು. ರಾಜತಾಂತ್ರಿಕ ಮಾರ್ಗವಾಗಿ ಈ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಇರಾನ್‌ (Iran) ಮತ್ತು ಪಾಕಿಸ್ತಾನ ಇಸ್ಲಾಮಿಕ್‌ ರಾಷ್ಟ್ರಗಳಾಗಿದ್ದು, ಎರಡೂ ದೇಶಗಳಲ್ಲಿ ಶಿಯಾ ಮುಸ್ಲಿಮರ ಪ್ರಾಬಲ್ಯವೇ ಹೆಚ್ಚಾಗಿದೆ. ಅಲ್ಲದೇ ಉಭಯ ರಾಷ್ಟ್ರಗಳು ಗಡಿ ಹಂಚಿಕೊಂಡಿರುವುದರಿಂದ ನಿಖಟ ಸಂಪರ್ಕ ಹೊಂದಿವೆ. ಇದನ್ನೂ ಓದಿ: ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

    ಅಣ್ವಸ್ತ್ರ ಕೇಂದ್ರಗಳ ಮೇಲೆ ಬಾಂಬ್ ದಾಳಿ
    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಯಶಸ್ವಿ ಬಾಂಬ್ ದಾಳಿ ನಡೆಸಿದೆ. ಅಮೆರಿಕವು 6 ಶಕ್ತಿಶಾಲಿ Northrop B-2 Spirit ಯುದ್ಧವಿಮಾನ ಬಳಸಿಕೊಂಡು ಡಜನ್‌ಗಟ್ಟಲೇ ಜಿಬಿಯು -57 ಎ/ಬಿ ಬೃಹತ್ ಆರ್ಡ್‌ನೆನ್ಸ್ ಪೆನೆಟ್ರೇಟರ್ (MOP) ಬಾಂಬ್‌ಗಳನ್ನ ಬಳಸಿ ದಾಳಿ ನಡೆಸಿದೆ. ಇದನ್ನ ʻಬಂಕರ್‌ ಬಸ್ಟರ್‌ʼ ಎಂದೂ ಕರೆಯಲಾಗುತ್ತದೆ. ಈ ʻಬಂಕರ್‌ ಬಸ್ಟರ್‌ʼ ಇರಾನ್‌ ರಾಜಧಾನಿ ಟೆಹ್ರಾನ್‌ನಿಂದ 100 ಕಿಮೀ ದೂರದಲ್ಲಿರುವ ಫೋರ್ಡೋ ಘಟಕದ ಮೇಲೆ ದಾಳಿ ಮಾಡಿದ್ರೆ, ಜಲಾಂತರ್ಗಾಮಿ ನೌಕೆಗಳಿಂದ ಹಾರಿಸಲಾದ 30 ಟೊಮಾಹಾಕ್ ಕ್ಷಿಪಣಿಗಳು (ಕ್ರೂಸ್‌ ಕ್ಷಿಪಣಿ) ಉಳಿದ 2 ಅಣು ಕೇಂದ್ರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿವೆ.

    ದಾಳಿ ಬಳಿಕ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ನಮ್ಮ ಹಲವು ಗುರಿಗಳು ಇನ್ನೂ ಉಳಿದಿವೆ. ಶಾಂತಿ ಪಾಲಿಸದಿದ್ದರೆ ಮತ್ತೆ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಿದ್ದಾರೆ. ಇದನ್ನೂ ಓದಿ: America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

    ದಾಳಿ ಬಳಿಕ ನಮ್ಮ ಎಲ್ಲ ಯುದ್ಧ ವಿಮಾನಗಳು ಇರಾನ್ ವಾಯುಪ್ರದೇಶದಿಂದ ಸುರಕ್ಷಿತವಾಗಿ ಹೊರಗೆ ಬಂದಿವೆ. ಪ್ರಾಥಮಿಕ ಅಣು ಕೇಂದ್ರವಾದ ಫೋರ್ಡೊ ಮೇಲೆ ಪೂರ್ಣ ಪ್ರಮಾಣದ ಪೇಲೋಡ್ ಹೊಂದಿದ ಬಾಂಬ್ ದಾಳಿ ನಡೆಸಲಾಗಿದೆ. ಕಾರ್ಯವನ್ನು ಯಶಸ್ವಿಗೊಳಿಸಿದ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಜಗತ್ತಿನ ಬೇರೆ ಯಾವುದೇ ಸೈನ್ಯಕ್ಕೆ ಇಂತಹ ಕಾರ್ಯಾಚರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿ ಕೊನೆಗೆ ʻಇದು ಶಾಂತಿಯ ಸಮಯ’ ಎಂದಿದ್ದಾರೆ.

  • ಅಮೆರಿಕದ ಮೇಲೆ ಇರಾನ್‌ ಪ್ರತಿದಾಳಿ ಮಾಡೇ ಮಾಡುತ್ತೆ: ಕರ್ನಲ್ ವೆಂಕಟೇಶ್ ನಾಯ್ಕ್

    ಅಮೆರಿಕದ ಮೇಲೆ ಇರಾನ್‌ ಪ್ರತಿದಾಳಿ ಮಾಡೇ ಮಾಡುತ್ತೆ: ಕರ್ನಲ್ ವೆಂಕಟೇಶ್ ನಾಯ್ಕ್

    – 3ನೇ ಮಹಾಯುದ್ಧ ಆಗದಿದ್ರೂ ದೊಡ್ಡ ಆರ್ಥಿಕ ಹೊಡೆತ ಬೀಳುತ್ತೆ

    ಬೆಂಗಳೂರು: ಇರಾನ್ ಮೇಲೆ ಅಮೆರಿಕ (America) ದಾಳಿ ಮಾಡಿದ್ದು ಮೂರು ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ. ಇಸ್ರೇಲ್ (Israel) ಪರವಾಗಿ ಅಮೆರಿಕ ನಿಂತಿರೋದು ಸಹಜವಾಗಿಯೇ ಇರಾನ್ ಬಲವನ್ನ ಕುಗ್ಗಿಸುವ ಪ್ರಯತ್ನವಾಗಿದೆ.‌ ಇದಕ್ಕೆ ಇರಾನ್ (Iran) ಭೀಕರ ಪ್ರತಿದಾಳಿ ಮಾಡೇ ಮಾಡುತ್ತದೆ ಎಂದು ಕರ್ನಲ್ ವೆಂಕಟೇಶ್ ನಾಯ್ಕ್ (Colonel Venkatesh Nayak) ಅಭಿಪ್ರಾಯಪಟ್ಟಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆ ಅವರು ಮಾತನಾಡಿದರು. ಈ ವೇಳೆ, ಇರಾನ್ ಪರವಾಗಿ ರಷ್ಯಾ ಮತ್ತು ಚೀನಾ ನೇರವಾಗಿ ಇಲ್ಲದಿದ್ದರೂ ಪರೋಕ್ಷವಾಗಿ ನಿಲ್ಲುವ ಸಾಧ್ಯತೆ ಇದೆ.‌ ಮೂರನೇ ಮಹಾ ಯುದ್ಧವಾಗುವ ಸಾಧ್ಯತೆ ಇಲ್ಲದಿದ್ದರೂ, ಜಾಗತೀಕ ಮಟ್ಟದಲ್ಲಿ ಆರ್ಥಿಕ ಹೊಡೆತವನ್ನ ಕೂಡ ಎದುರಿಸಬೇಕಾಗುತ್ತದೆ. ಭಾರತಕ್ಕೂ ಯುದ್ಧದ ಪರಿಣಾಮ ತಟ್ಟಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇರಾನ್‌ಗೆ ಅಮೆರಿಕ ದಾಳಿ ಮಾಡುವ ಶಂಕೆ ಮೊದಲೇ ಇತ್ತು. ಇದರಿಂದಾಗಿ ಯುರೇನಿಯಂನ್ನು ಅದು ಈಗಾಗಲೇ ಸಂಗ್ರಹಿಸಿಟ್ಟಿದೆ. ಇನ್ನೂ ಅಮೆರಿಕದ ದಾಳಿಯಿಂದ ಇರಾನ್‌ನ ಪರಮಾಣು ಘಟಕಗಳಿಗೆ ಹಾನಿಯಾಗಿದೆಯೇ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಸ್ವಲ್ಪ ದಿನ ಕಾದು ನೋಡಬೇಕಿದೆ ಎಂದಿದ್ದಾರೆ.

    ಇರಾನ್‌ ಮಿಸೈಲ್‌ ತುಂಬಾ ಶಕ್ತಿಶಾಲಿಯಾಗಿವೆ. ಮುಂದಿನ ದಿನಗಳಲ್ಲಿ ಅಮೆರಿಕ ಯುದ್ಧ ನೌಕೆಗಳು ಹಾಗೂ ಏರ್‌ ಬೇಸ್‌ ಮೇಲೆ ದಾಳಿ ನಡೆಸಲಿದೆ. ಆ ದಾಳಿ ಇದಕ್ಕಿಂತಲೂ ಭೀಕರವಾಗಿರಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

    ಭಾರತಕ್ಕೆ ಇರಾನ್‌ ಹಾಗೂ ಇಸ್ರೇಲ್‌ ಎರಡೂ ಮಿತ್ರ ದೇಶಗಳು. ನಮ್ಮ ದೇಶದ ವಿದೇಶಾಂಗ ನೀತಿ ಗೊಂದಲವಾಗಿದೆ. ಸ್ವಲ್ಪ ವೀಕ್‌ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಹಿಂದೆ ಭಾರತ ಪ್ಯಾಲೆಸ್ತಿನ್ ಪರವಾಗಿತ್ತು. ಇರಾನ್‌ ನಮಗೆ ಎಷ್ಟೋ ಸಹಾಯ ಮಾಡಿದೆ. ಆರ್ಥಿಕ ದೃಷ್ಟಿಯಿಂದ ತೈಲ ಹಾಗೂ ಗ್ಯಾಸ್‌ ನೋಡಬೇಕು. 50-60 ವರ್ಷದ ಸಂಬಂಧ ನೋಡಬೇಕು. ಇದು ಸರ್ಕಾರಕ್ಕೆ ಬಿಟ್ಟಿರೋ ವಿಚಾರ ಎಂದಿದ್ದಾರೆ.

    ಮುಂಬೈ ದಾಳಿ ಆದಾಗ ಕಸಬ್‌ನನ್ನು ಉಗ್ರ ಎಂದು ಇಸ್ರೇಲ್‌ ಘೋಷಿಸಿರಲಿಲ್ಲ. ಹೌತಿ, ಹಮಾಸ್‌ನವರಿಗೆ ಮಾತ್ರ ಉಗ್ರರು ಎಂಬ ಪಟ್ಟ ಕೊಟ್ಟಿದ್ದಾರೆ. ಹಫೀಸ್‌ ಸೈಯ್ಯದ್‌ ವಿಚಾರದಲ್ಲಿ ಅಮೆರಿಕ ಸಹ ಹಾಗೆ, ಅವರ ಮನಸ್ಸಿಗೆ ಯಾರು ಬರ್ತಾರೆ ಅವರು ಮಾತ್ರ ಉಗ್ರರು ಅಂತ ಕರಿತಾರೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

  • America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

    America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

    – ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ್ರೆ ಭಾರತಕ್ಕೂ ನಷ್ಟ

    ವಾಷಿಂಗ್ಟನ್‌/ಟೆಹ್ರಾನ್‌: ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷಕ್ಕೆ ಈಗ ಅಮೆರಿಕ ಎಂಟ್ರಿ (America Strikes In Iran) ಆಗಿರುವುದು ಜಾಗತಿಕ ಉದ್ವಿಗ್ನತೆ ಹೆಚ್ಚಿಸಿದೆ. ಇರಾನ್‌ ಮೇಲೆ ಅಮೆರಿಕ ವಾಯುದಾಳಿ ಬಳಿಕ ಷೇರು ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

    ಅಮೆರಿಕ ಮಧ್ಯಪ್ರವೇಶದಿಂದಾಗಿ ಕಚ್ಚಾ ತೈಲ ಬೆಲೆಯು (Crude oil Price) ಸುಮಾರು 120 ಡಾಲರ್‌ಗಳಿಗೆ (10,389 ರೂ.) ಏರಿಕೆಯಾಗುವ ಸಾಧ್ಯತೆಯಿದೆ. ಜೊತೆಗೆ ಚಿನ್ನದ ಬೆಲೆಯೂ ಏರಿಕೆಯಾಗಬಹುದು. ಸೋಮವಾರ (ಜೂ.23) ಎಂದು ಷೇರು ಮಾರುಕಟ್ಟೆ ತೆರೆದ ಬಳಿಕ ವಾರದ ಮೊದಲ ವಹಿವಾಟಿನಲ್ಲಿ ಇದರ ಪರಿಣಾಮ ಕಂಡುಬರುತ್ತದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    1 ಬ್ಯಾರಲ್‌ 120 ಡಾಲರ್‌ಗೆ ಏರಿಕೆ ಸಾಧ್ಯತೆ
    ಇರಾನ್‌ ಮೇಲಿನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಜಾಗತಿಕ ಉದ್ವಿಗ್ನತೆ ಹೆಚ್ಚಾಗಿದೆ. ಇದು ಅನೇಕ ದೇಶಗಳಲ್ಲಿ ಹಣದುಬ್ಬರ ಉಂಟುಮಾಡುವ ಸಾಧ್ಯತೆಯನ್ನು ತಂದೊಡ್ಡಿದೆ. ಕಳೆದ ಕೆಲ ವಾರಗಳಲ್ಲಿ ಬ್ರೆಂಟ್‌ ಕಚ್ಚಾ ತೈಲ ಬೆಲೆ 18% ಏರಿಕೆಯಾಗಿ 79 ಡಾಲರ್‌ಗಳಿಗೆ ವಹಿವಾಟು ಆಗುತ್ತಿತ್ತು. ಸದ್ಯ ಬ್ರೆಂಟ್‌ ಕಚ್ಚಾ ತೈಲ 1 ಬ್ಯಾರಲ್‌ಗೆ 77.01 ಡಾಲರ್‌ನಷ್ಟಿದೆ (6,667 ರೂ.). ಅದೇ ವೇಳೆ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ 73.84 ಡಾಲರ್‌ನಂತೆ (6,393 ರೂ.) ವಹಿವಾಟು ನಡೆಯುತ್ತಿದೆ. ಆದ್ರೆ ಹೆಚ್ಚಿರುವ ಉದ್ವಿಗ್ನತೆಯಿಂದ ಏಕಾಏಕಿ 120-130 ಡಾಲರ್‌ಗಳಿಗೆ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

    Hormuz Strait

    ತೈಲ ಬೆಲೆ ಏರಿಕೆಗೆ ಕಾರಣ ಏನು?
    ತನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನ (Hormuz Strait) ಮುಚ್ಚುವಂತೆ ಖಮೇನಿಯ ಪ್ರತಿನಿಧಿ ಹೊಸೈನ್ ಶರಿಯತ್‌ಮದಾರಿ ಪಟ್ಟುಹಿಡಿದಿದ್ದಾರೆ. ಹಾರ್ಮುಜ್‌ ಜಲಸಂಧಿ ಪ್ರಮುಖ ತೈಲ ಸಾಗಾಣಿಕೆ ಮಾರ್ಗವಾಗಿರುವುದರಿಂದ ಬಂದ್‌ ಮಾಡಿದ್ರೆ ಭಾರೀ ನಷ್ಟ ಅನುಭವಿಸಬೇಕಾಗುತ್ತೆ ಎಂದು ಹಡಗು ವಿಮಾ ಕಂಪನಿಗಳು ಹೇಳಿವೆ. ಇದರಿಂಧ ಕಚ್ಚಾ ತೈಲ ಬೆಲೆ ಏರಿಕೆಯಾಗಲಿದೆ. ಕೆಲ ಹಡಗು ಕಂಪನಿಗಳು ಈಗಾಗಲೇ ಪರ್ಯಾಯ ಮಾರ್ಗ ಹುಡುಕಲು ಶುರು ಮಾಡಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

    ಜೆಪಿ ಮಾರ್ಗನ್, ಸಿಟಿ ಮತ್ತು ಡಾಯ್ಚ ಬ್ಯಾಂಕ್ ಅಂದಾಜಿನ ಪ್ರಕಾರ ಕಚ್ಚಾ ತೈಲ ಬೆಲೆ 120 ರಿಂದ 130 ಡಾಲರ್‌ಗಳಿಗೆ ಅಂದ್ರೆ ಅಂದಾಜು 10,389 ರೂ. ನಿಂದ 11,255 ರೂ. ವರೆಗೆ ಏರಿಕೆಯಾಗಲಿದೆ. ಇದನ್ನೂ ಓದಿ: ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    Hormuz Strait 2

    ಭಾರತಕ್ಕೆ ಏನು ನಷ್ಟ?
    ಭಾರತದ 80% ರಷ್ಟು ಕಚ್ಚಾ ತೈಲ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಜ್‌ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು. ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಒಂದು ವೇಳೆ ಜಲಸಂಧಿ ಬಂದ್‌ ಆದ್ರೆ ಭಾರತದ ಮೇಲೂ ಆರ್ಥಿಕ ಪರಿಣಾಮ ಬೀರಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ. ಇದನ್ನೂ ಓದಿ: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

  • ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

    ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

    – ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಬಳಿಕ ಎಚ್ಚರಿಕೆ

    ವಾಷಿಂಗ್ಟನ್: ಈಗಲಾದರೂ ಇರಾನ್ ಶಾಂತಿ ಸ್ಥಾಪಿಸಲಿ, ಇಲ್ಲವಾದರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಭಾನುವಾರ ನಸುಕಿನಲ್ಲಿ ಇರಾನ್ (Iran) ಮೇಲೆ ಅಮೆರಿಕ (America) ನಡೆಸಿದ ವೈಮಾನಿಕ ದಾಳಿ (Air Strike) ಬಳಿಕ ಶ್ವೇತಭವನದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಇರಾನ್ ಮೇಲಿನ ವೈಮಾನಿಕ ದಾಳಿ ಯಶಸ್ವಿಯಾಗಿದೆ. ಈಗಲಾದರೂ ಇರಾನ್. ಇಸ್ರೇಲ್ ಜೊತೆಗಿನ ಯುದ್ಧಕ್ಕೆ ವಿರಾಮ ಘೋಷಿಸಿ, ಶಾಂತಿ ಸ್ಥಾಪಿಸಲಿ. ಇಲ್ಲವಾದರೆ ಭವಿಷ್ಯದಲ್ಲಿ ಭಾರೀ ಪ್ರಮಾಣದ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: Pahalgam Attack | ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

    ಶನಿವಾರ ರಾತ್ರಿ ವೈಮಾನಿಕ ದಾಳಿ ಮೂಲಕ ಇರಾನ್‌ನ ಪರಮಾಣು ಸ್ಥಾವರಗಳು ಹಾಗೂ ಪರಮಾಣು ಬಾಂಬ್‌ಗಳನ್ನು ತಯಾರಿಕೆಯನ್ನು ನಿಲ್ಲಿಸುವುದು ನಮ್ಮ ಮೂಲ ಉದ್ದೇಶವಾಗಿತ್ತು ಹಾಗೂ ಈ ಮೂಲಕ ಇಸ್ರೇಲ್‌ಗೆ ಯುದ್ಧ ಬೆದರಿಕೆ ಹಾಕುತ್ತಿರುವ ಇರಾನ್ ಅನ್ನು ಬುಡಸಮೇತ ಅಲುಗಾಡಿಸುವುದು ಮುಖ್ಯ ಗುರಿಯಾಗಿತ್ತು. ಈ ವೈಮಾನಿಕ ದಾಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ನೀಡಿದ ಸಹಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

    ದಾಳಿಯಲ್ಲಿ ಇರಾನ್‌ನ ಪ್ರಮುಖ ಪರಮಾಣು ಸ್ಥಾವರಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ದಾಳಿ ನಡೆಸಿ, ಅವುಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಈ ವೇಳೆ ಫೋರ್ಡೊನಲ್ಲಿದ್ದ 30,000 ಪೌಂಡ್‌ನ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಧ್ವಂಸಮಾಡಲಾಗಿದೆ. ಈ ಮೂಲಕ ವೈಮಾನಿಕ ದಾಳಿ ಭರ್ಜರಿ ಯಶಸ್ಸನ್ನು ಕಂಡಿದೆ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ. ಇದರಿಂದಾಗಿ ಇಸ್ರೇಲ್‌ಗಿದ್ದ ಒಂದು ದೊಡ್ಡ ಅಪಾಯವನ್ನು ತಪ್ಪಿಸಿದ್ದೇವೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

    ಕಳೆದ 40 ವರ್ಷಗಳಿಂದ ಇರಾನ್ ಇಸ್ರೇಲ್ ಹಾಗೂ ಅಮೆರಿಕಕ್ಕೆ ಸಾವಿನ ಬೆದರಿಕೆ ಹಾಕುತ್ತಲೇ ಬಂದಿದೆ. ಜನರಲ್ ಖಾಸಿಮ್ ಸೊಲೈಮಾನಿ ಸೇರಿ ಈಗಾಗಲೇ ಎಷ್ಟೋ ಜನರನ್ನು ಬಲಿ ತೆಗೆದುಕೊಂಡಿದ್ದಾರೆ. ಇದೇ ಮುಂದುವರಿಯಲು ಬಿಡುವುದಿಲ್ಲ ಎಂದು ಹೇಳಿದರು.

    ಈ ಮೊದಲೇ ಡೊನಾಲ್ಡ್ ಟ್ರಂಪ್ ಶಾಶ್ವತ ಯುದ್ಧ ಬೇಡ ಎಂದಿದ್ದರು. ಆದರೆ ಈದೀಗ ಇರಾನ್ ಮತ್ತು ಇಸ್ರೇಲ್ ಮಧ್ಯೆ ಅಮೆರಿಕ ಪ್ರವೇಶಿರುವುದು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಸಾಧ್ಯತೆಯಿದೆ.

    ಶ್ವೇತಭನದ ಪರಿಸ್ಥಿತಿ ಹೇಗಿತ್ತು?
    ಇರಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಸಂದರ್ಭದಲ್ಲಿ ಶ್ವೇತಭವನದ ಪರಿಸ್ಥಿತಿ ಹೇಗಿತ್ತು ಅನ್ನೋದರ ಒಂದಿಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಕಂಡುಬಂದಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಶ್ವೇತಭವನದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ದಾಳಿಯ ಪ್ರತಿ ಕ್ಷಣದ ಮಾಹಿತಿಯನ್ನು ಹೇಗೆ ಕಲೆಹಾಕುತ್ತಿದ್ದರು. ಇದಕ್ಕೆ ದುಗುಡ ಏನಿತ್ತು? ಇದಕ್ಕೆ ಟ್ರಂಪ್ ಅವರ ಪ್ರತಿಕ್ರಿಯೆ ಹೇಗಿತ್ತು ಎಂಬೆಲ್ಲ ಚಿತ್ರಣವನ್ನು ಈ ಫೋಟೋಗಳು ಕಟ್ಟಿಕೊಟ್ಟಿವೆ.ಇದನ್ನೂ ಓದಿ: ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

  • ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

    ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

    – ಬಹ್ರೇನ್‌ನ ಯುಎಸ್ ನೌಕಾಪಡೆಯ ಮೇಲೆ ಕ್ಷಿಪಣಿ ದಾಳಿಗೆ ಪ್ಲ್ಯಾನ್‌
    – ಹಾರ್ಮುಜ್ ಜಲಸಂಧಿ ಮುಚ್ಚಲು ತ್ವರಿತ ಕ್ರಮಕ್ಕೆ ಮುಂದಾದ ಇರಾನ್‌

    ಟೆಹ್ರಾನ್‌: ಇರಾನ್‌ನ ಮೂರು ಪರಮಾಣು ಕೇಂದ್ರಗಳ (Nuclear Facility) ಮೇಲೆ ಅಮೆರಿಕ ಬಾಂಬ್‌ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅಮೆರಿಕಾಗೆ ಕಟು ಎಚ್ಚರಿಕೆ ನೀಡಿದ್ದಾರೆ.

    ಅಮೆರಿಕನ್ನರು (Americans) ಹಿಂದೆಂದಿಗಿಂತಲೂ ಭೀಕರ ಹಾಗೂ ಹೆಚ್ಚಿನ ಹಾನಿ ಉಂಟುಮಾಡಬಲ್ಲ ದಾಳಿಯನ್ನು ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ದನಿಗೂಡಿಸಿರುವ ಖಮೇನಿಯ ಪ್ರತಿನಿಧಿ ಹೊಸೈನ್ ಶರಿಯತ್‌ಮದಾರಿ, ಒಂದೂ ಕ್ಷಣವೂ ತಡಮಾಡದೇ ಪ್ರತೀಕಾರದ ದಾಳಿ ನಡೆಸಲು ಸೂಚನೆ ನೀಡುವಂತೆ ಒತ್ತಾಯಿಸಿದ್ದಾರೆ.

    ಈಗ ಯಾವುದೇ ವಿಳಂಬವಿಲ್ಲದೇ ಕಾರ್ಯನಿರ್ವಹಿಸುವ ಸರದಿ ನಮ್ಮದಾಗಿದೆ. ಮೊದಲ ಹೆಜ್ಜೆಯಾಗಿ ನಾವು ಬಹ್ರೇನ್‌ನಲ್ಲಿರುವ (Bahrain) ಯುಎಸ್ ನೌಕಾಪಡೆಯ ಮೇಲೆ ಕ್ಷಿಪಣಿ ದಾಳಿ ಮಾಡಬೇಕು. ಅದೇ ಸಮಯಕ್ಕೆ ಅಮೆರಿಕನ್‌, ಬ್ರಿಟಿಷ್, ಜರ್ಮನ್ ಮತ್ತು ಫ್ರೆಂಚ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿ (Strait of Hormuz) ಮುಚ್ಚಬೇಕು. ನಿರ್ಣಾಯಕ ಮಿಲಿಟರಿ ಕ್ರಮ ಕೈಗೊಳ್ಳಬೇಕು ಎಂದು ಖಮೇನಿ ಅವರಿಗೆ ಪ್ರತಿನಿಧಿ ಸಲಹೆ ನೀಡಿದ್ದಾರೆ.

    ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ
    ಅಮೆರಿಕದ ದಾಳಿಯನ್ನು ಖಚಿತಪಡಿಸಿರುವ ಇರಾನ್‌ನ ಪರಮಾಣು ಇಂಧನ ಸಂಸ್ಥೆ, ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯ ಕ್ರೂರ ಕೃತ್ಯ ಎಂದು ಹೇಳಿದೆ. ನಮ್ಮ ಫೋರ್ಡೊ, ನಟಾಂಜ್ ಮತ್ತು ಎಸ್ಫಹಾನ್ ಪರಮಾಣು ಕೇಂದ್ರಗಳ ಮೇಲೆ ಶತ್ರುದೇಶ ದಾಳಿ ನಡೆಸಿದ್ದು, ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳಿಕೊಂಡಿದೆ. ಅಲ್ಲದೇ ಈ ದಾಳಿಯನ್ನು ಬಲವಾಗಿ ಖಂಡಿಸುವಂತೆ ಇರಾನ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ. ಜೊತೆಗೆ ತನ್ನ ಪರಮಾಣು ಅಭಿವೃದ್ಧಿ ಕಾರ್ಯಕ್ರಮ ನಿಲ್ಲಿಸಲು ಸಾಧ್ಯವಿಲ್ಲವೆಂದೂ ಹೇಳಿದೆ.

    ಶಾಂತಿ ಮಾತುಕತೆಗೆ ವಿಶ್ವಸಂಸ್ಥೆ ಮನವಿ
    ಅಮೆರಿಕ ಭೀಕರ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಶಾಂತಿ ಮಾತುಕತೆಗೆ ವಿಶ್ವಸಂಸ್ಥೆ (UN) ಮನವಿ ಮಾಡಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಇರಾನ್ ಮೇಲೆ ಅಮೆರಿಕ ತೆಗೆದುಕೊಂಡ ಮಿಲಿಟರಿ ಕ್ರಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ, ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ನೇರ ಬೆದರಿಕೆಯೂ ಆಗಿದೆ. ಎಲ್ಲ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಬೇಕು. ಈ ಬಿಕ್ಕಟ್ಟಿಗೆ ಯಾವುದೇ ಪರಿಹಾರವಿಲ್ಲ. ಶಾಂತಿ ಮಾತುಕತೆಯ ಮೂಲಕ ಮಾತ್ರ ಬಗೆಹರಿಸಲು ಸಾಧ್ಯ ಎಂದು ಗುಟೆರಸ್ ಹೇಳಿದ್ದಾರೆ.

    ಶಾಂತಿ ಪಾಲಿಸದಿದ್ದರೆ ಹುಷಾರ್‌
    ಇನ್ನೂ ಫೋರ್ಡೊ, ನಟಾಂಜ್ ಮತ್ತು ಎಸ್ಫಹಾನ್ ಪರಮಾಣು ಕೇಂದ್ರಗಳ ಮೇಲಿನ ದಾಳಿಯನ್ನುದ್ದೇಶಿಸಿ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ (donald trump) ಮಾತನಾಡಿದ್ದಾರೆ. ಇದು ಮುಂದುವರಿಯಲು ಸಾಧ್ಯವಿಲ್ಲ. ಕಳೆದ 8 ದಿನಗಳಲ್ಲಿ ನಡೆದ ದಾಳಿಗಿಂತ ಇದು ಭೀಕರವಾಗಿದೆ. ನಮ್ಮ ಇನ್ನೂ ಹಲವು ಗುರಿಗಳು ಉಳಿದಿವೆ. ಆದ್ರೆ ನೆನಪಿಟ್ಟುಕೊಳ್ಳಿ ಇನ್ನೂ ಹಲವು ಗುರಿಗಳು ಉಳಿದಿವೆ. ಇಸ್ರೇಲ್ ಜೊತೆಗಿನ ಸಂಘರ್ಷ ಕೊನೆಗೊಳಿಸದಿದ್ದರೆ, ಇಸ್ರೇಲ್ ಮೇಲೆ ನಿಖರ ದಾಳಿ ನಡೆಸಬೇಕಾಗುತ್ತದೆ ಎಂದು ಟ್ರಂಪ್ ನೇರ ಎಚ್ಚರಿಕೆ ನೀಡಿದ್ದಾರೆ.

    ದಾಳಿ ಮಾಡುವುದು ನಮ್ಮ ಉದ್ದೇಶವಲ್ಲ. ಪರಮಾಣು ಪುಷ್ಟೀಕರಣ ಸಾಮರ್ಥ್ಯ ನಿಲ್ಲಿಸುವುದು ಹಾಗೂ ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರದಿಂದ ಪರಮಾಣು ಬೆದರಿಕೆಗಳನ್ನು ಕುಗ್ಗಿಸುವುದಷ್ಟೇ ಈ ದಾಳಿಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

    ಅಣ್ವಸ್ತ್ರ ಕೇಂದ್ರಗಳ ಮೇಲೆ ಬಾಂಬ್ ದಾಳಿ
    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಯಶಸ್ವಿ ಬಾಂಬ್ ದಾಳಿ ನಡೆಸಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಅಲ್ಲದೇ ನಮ್ಮ ಹಲವು ಗುರಿಗಳು ಇನ್ನೂ ಉಳಿದಿವೆ. ಶಾಂತಿ ಸಾಧಿಸದಿದ್ದರೆ ಮತ್ತೆ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಎಲ್ಲ ವಿಮಾನಗಳು ಇರಾನ್ ವಾಯುಪ್ರದೇಶದಿಂದ ಸುರಕ್ಷಿತವಾಗಿ ಹೊರಗೆ ಬಂದಿವೆ. ಪ್ರಾಥಮಿಕ ಅಣು ಕೇಂದ್ರವಾದ ಫೋರ್ಡೊ ಮೇಲೆ ಪೂರ್ಣ ಪ್ರಮಾಣದ ಪೇಲೋಡ್ ಹೊಂದಿದ ಬಾಂಬ್ ದಾಳಿ ನಡೆಸಲಾಗಿದೆ. ಕಾರ್ಯವನ್ನು ಯಶಸ್ವಿಗೊಳಿಸಿದ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಜಗತ್ತಿನ ಬೇರೆ ಯಾವುದೇ ಸೈನ್ಯಕ್ಕೆ ಇಂತಹ ಕಾರ್ಯಾಚರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿ ಕೊನೆಗೆ ?ಇದು ಶಾಂತಿಯ ಸಮಯ’ ಎಂದಿದ್ದಾರೆ.

  • ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ವಾಷಿಂಗ್ಟನ್‌/ಟೆಹ್ರಾನ್‌: ಕಳೆದ 8 ದಿನಗಳಿಂದ ನಡೆಯುತ್ತಿದ್ದ ಇರಾನ್‌-ಇಸ್ರೇಲ್‌ ಸಂಘರ್ಷಕ್ಕೆ (Iran Israel) ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್‌ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ (Bomb Attack) ನಡೆಸಿದೆ. 14,000 ಕೆಜಿ ತೂಕ ಹೊಂದಿರುವ ಹಾಗೂ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಎಂದು ಗುರುತಿಸಿಕೊಂಡಿರುವ ಬಿ-12 ಬಾಂಬರ್‌ ಬಳಸಿ ಅಮೆರಿಕ ದಾಳಿ ನಡೆಸಿದೆ.

    northrop b 2 spirit stealth bomber 1

    ವರದಿಗಳ ಪ್ರಕಾರ, ಅಮೆರಿಕವು 6 ಶಕ್ತಿಶಾಲಿ Northrop B-2 Spirit ಯುದ್ಧವಿಮಾನ ಬಳಸಿಕೊಂಡು ಡಜನ್‌ಗಟ್ಟಲೇ ಜಿಬಿಯು -57 ಎ/ಬಿ ಬೃಹತ್ ಆರ್ಡ್‌ನೆನ್ಸ್ ಪೆನೆಟ್ರೇಟರ್ (MOP) ಬಾಂಬ್‌ಗಳನ್ನ ಬಳಸಿ ದಾಳಿ ನಡೆಸಿದೆ. ಇದನ್ನ ʻಬಂಕರ್‌ ಬಸ್ಟರ್‌ʼ ಎಂದೂ ಕರೆಯಲಾಗುತ್ತದೆ. ಈ ʻಬಂಕರ್‌ ಬಸ್ಟರ್‌ʼ ಇರಾನ್‌ ರಾಜಧಾನಿ ಟೆಹ್ರಾನ್‌ನಿಂದ 100 ಕಿಮೀ ದೂರದಲ್ಲಿರುವ ಫೋರ್ಡೋ ಘಟಕದ ಮೇಲೆ ದಾಳಿ ಮಾಡಿದ್ರೆ, ಜಲಾಂತರ್ಗಾಮಿ ನೌಕೆಗಳಿಂದ ಹಾರಿಸಲಾದ 30 ಟೊಮಾಹಾಕ್ ಕ್ಷಿಪಣಿಗಳು ಉಳಿದ 2 ಅಣು ಕೇಂದ್ರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿವೆ. ನೆಲ ಮಾಳಿಗೆಯಲ್ಲಿ ನಿರ್ಮಿಸಿದ್ದ ಅಣು ಕೇಂದ್ರವನ್ನು ಧ್ವಂಸಗೊಳಿಸಿದ ಅಮೆರಿಕದ ಬಾಂಬರ್‌ ಎಷ್ಟು ಪವರ್‌ ಫುಲ್‌ ಅಂತ ತಿಳಿಯಬೇಕಾದ್ರೆ ಮುಂದೆ ಓದಿ…

    northrop b 2 spirit stealth bomber 2

    ಇರಾನ್‌ನ ಫೋರ್ಡೋ ಪರಮಾಣು ಘಟಕವನ್ನ ಬೆಟ್ಟದ ಮೇಲೆ ಸ್ಥಾಪನೆ ಮಾಡಲಾಗಿದೆ. ಫೋರ್ಡೊ ಅತ್ಯಂತ ರಹಸ್ಯ ಮತ್ತು ಬಿಗಿ ಭದ್ರತೆಯ ಸೌಲಭ್ಯವಾಗಿದ್ದು 2009 ರಲ್ಲಿ ಈ ವಿಚಾರ ಸಾರ್ವಜನಿಕವಾಗಿ ಬೆಳಕಿಗೆ ಬಂದಿತ್ತು. ಇರಾನ್‌ನ ಪವಿತ್ರ ನಗರವಾದ ಕೋಮ್‌ಗೆ ಹತ್ತಿರದಲ್ಲಿ ನಿರ್ಮಾಣವಾಗಿರುವ ಈ ಘಟಕದ ನಿಜವಾದ ಗಾತ್ರ ಮತ್ತು ಒಳಗಡೆ ಯಾವೆಲ್ಲ ಸಂಶೋಧನೆಗಳು ನಡೆಯುತ್ತಿದೆ ಎನ್ನುವುದು ಇಂದಿಗೂ ಕುತೂಹಲವಾಗಿಯೇ ಉಳಿದುಕೊಂಡಿದೆ. ಹೀಗಿದ್ದರೂ ಇಸ್ರೇಲಿ ಗುಪ್ತಚರ ಸಂಸ್ಥೆ ಮೊಸಾದ್‌ ಕೆಲ ವರ್ಷಗಳ ಹಿಂದೆ ಕದ್ದ ಇರಾನಿನ ದಾಖಲೆಗಳಿಂದ ಕೆಲವು ವಿವರಗಳು ಬಹಿರಂಗವಾಗಿದೆ. ಇದನ್ನೂ ಓದಿ: 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

    Fordo Nuclear Facility

    ಫೋರ್ಡೋ ಅಣು ಕೇಂದ್ರ ಎಷ್ಟು ಸೇಫ್‌?
    ಫೋರ್ಡೋ ಘಟಕದ ಮುಖ್ಯ ಸಭಾಂಗಣವು ನೆಲದಡಿಯಲ್ಲಿ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿದೆ. ಇಷ್ಟು ಅಡಿ ಆಳದಲ್ಲಿರುವ ಈ ಘಟಕವನ್ನು ಇಸ್ರೇಲ್ ಹೊಂದಿರುವ ಯಾವುದೇ ವೈಮಾನಿಕ ಬಾಂಬ್‌ನಿಂದ ಧ್ವಂಸ ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ವಿಶ್ವದಲ್ಲೇ ಅತಿಹೆಚ್ಚು ಪವರ್‌ಫುಲ್‌ ಆಗಿರುವ ಸ್ವದೇಶಿ ನಿರ್ಮಿತ GBU-57A/B Massive Ordinance Penetrator ಬಾಂಬ್‌ನಿಂದ ಅಮೆರಿಕ ದಾಳಿ ನಡೆಸಿದೆ.  ಇದನ್ನೂ ಓದಿ: ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

    bunker buster bomb GBU 57AB Massive Ordinance Penetrator 3

    ಬಾಂಬರ್‌ನ ವಿಶೇಷತೆ ಏನು?
    2011 ರಿಂದ ಈ ಬಾಂಬ್‌ ಅಮೆರಿಕ ವಾಯುಸೇನೆಯ ಬತ್ತಳಿಕೆಯಲ್ಲಿದೆ. 6.2 ಮೀಟರ್‌ ಉದ್ದದ ಈ ಬಾಂಬ್‌ 13,608 ಕೆಜಿ ತೂಕವನ್ನು ಹೊಂದಿದೆ. ಈ ಬಾಂಬ್‌ ಅನ್ನು ʻಬಂಕರ್‌ ಬಸ್ಟರ್‌ʼ ಬಾಂಬ್‌ ಎಂದೇ ಕರೆಯಲಾಗುತ್ತದೆ. ಅಂದಾಜು ಸುಮಾರು 200 ಮೀಟರ್‌ ಆಳದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯವನ್ನು ಈ ಬಾಂಬ್‌ ಹೊಂದಿದೆ. 2007 ರಲ್ಲಿ ಈ ಬಾಂಬ್‌ ಪ್ರಯೋಗ ನಡೆದು 2011 ರಲ್ಲಿ 16 ಬಂಕರ್‌ ಬಾಂಬ್‌ ಅಮೆರಿಕ ವಾಯುಸೇನೆಗೆ ಸೇರ್ಪಡೆಯಾಗಿತ್ತು.

    ಜಿಪಿಎಸ್‌ ಆಧಾರಿತ ಈ ಬಾಂಬ್‌ ವಿನ್ಯಾಸವನ್ನು ಬೋಯಿಂಗ್‌ ಕಂಪನಿ ಮಾಡಿದ್ದು ಅಮೆರಿಕ ವಾಯುಸೇನೆ ಈ ಉತ್ಪಾದನೆ ಮಾಡಿದೆ. ಅಮೆರಿಕದ ವಾಯುಪಡೆಯ ಬಳಿ ಇರುವ ಅತ್ಯಂತ ಶಕ್ತಿಶಾಲಿ ಪರಮಾಣು ರಹಿತ ಬಾಂಬ್ ಎಂದೇ ಇದನ್ನು ಕರೆಯಲಾಗುತ್ತದೆ. ಇದನ್ನೂ ಓದಿ: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

    bunker buster bomb GBU 57AB Massive Ordinance Penetrator 2

    ಈ ಬಾಂಬ್‌ ಅನ್ನು ಹಾಕಬೇಕಾದರೆ ಅಮರಿಕದ ಬಳಿ ಇರುವ ಶಕ್ತಿಶಾಲಿ Northrop B-2 Spirit ಯುದ್ಧವಿಮಾನದಿಂದ ಮಾತ್ರ ಸಾಧ್ಯ. ಬಾವಲಿಯಂತೆ ಕಾಣುವ ಈ ವಿಮಾನಕ್ಕೆ ಒಂದು ಬಾರಿ ಇಂಧನ ತುಂಬಿಸಿದರೆ 11 ಸಾವಿರ ಕಿಮೀ ದೂರ ಕ್ರಮಿಸಬಲ್ಲದು. ಅಲ್ಲದೇ ನಿರಂತರವಾಗಿ 44 ಗಂಟೆಗಳ ಕಾಲ ಹಾರುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನವು ದೀರ್ಘಾವಧಿಯ ಕಾರ್ಯಾಚರಣೆ ನಡೆಸುವುದರಿಂದ ಶೌಚಾಲಯ, ಹಾಸಿಗೆ ಜೊತೆಗೆ ಮೈಕ್ರೋವೇವ್ ಹೊಂದಿದೆ. ಇಬ್ಬರು ಪೈಲಟ್‌ ಪೈಕಿ ಒಬ್ಬರು ವಿಶ್ರಾಂತಿ ಪಡೆದರೆ ಇನ್ನೊಬ್ಬರು ವಿಮಾನವನ್ನು ಹಾರಿಸುತ್ತಿರುತ್ತಾರೆ. ಇದರಿಂದಾಗಿ ಕಾರ್ಯಾಚರಣೆಯು ಅಡಚಣೆಯಿಲ್ಲದೆ ಮುಂದುವರಿಯುತ್ತದೆ.

    2001 ರಲ್ಲಿ ಐದು ಬಿ-2 ವಿಮಾನಗಳು ಅಫ್ಘಾನಿಸ್ತಾನದ ಮೇಲೆ ನಿರಂತರ 44 ಗಂಟೆಗಳ ಕಾರ್ಯಾಚರಣೆ ನಡೆಸಿತ್ತು. ಇದು ಇತಿಹಾಸದಲ್ಲಿ ಅತಿ ಉದ್ದದ ವಾಯು ಯುದ್ಧ ಕಾರ್ಯಾಚರಣೆ ಎಂಬ ಹೆಸರನ್ನು ಪಡೆದಿದೆ. ಇದನ್ನೂ ಓದಿ: ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

    bunker buster bomb GBU 57AB Massive Ordinance Penetrator 1

    ಸದ್ಯ ಅಮೆರಿಕ ವಾಯುಸೇನೆ 19 ಬಿ-2 ಬಾಂಬರ್‌ ಯುದ್ಧ ವಿಮಾನಗಳನ್ನು ಹೊಂದಿದೆ. B-2 ಏಕಕಾಲದಲ್ಲಿ ಎರಡು MOP ಬಾಂಬ್‌ಗಳನ್ನು ಮಾತ್ರ ಸಾಗಿಸಬಲ್ಲದು. ಹೀಗಾಗಿ ಅಮೆರಿಕ ಈ ಬಾಂಬ್‌ ಹಾಕುವ ಮೂಲಕ ಇರಾನಿಗೆ ತಕ್ಕ ಪಾಠ ಕಲಿಸುವ ಸಂದೇಶ ಕೊಟ್ಟಿದೆ.

  • ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

    ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

    ಬೆಂಗಳೂರು: ಯುದ್ಧ ಪೀಡಿತ ಇರಾನ್‌ನಿಂದ (Iran) 11 ಕನ್ನಡಿಗರನ್ನು ಆಪರೇಷನ್ ಸಿಂಧು (Operation Sindhu) ಕಾರ್ಯಾಚರಣೆ ಮೂಲಕ ವಾಪಸ್ ಕರೆದುಕೊಂಡು ಬರಲಾಗಿದೆ.

    ಶನಿವಾರ ಮಧ್ಯರಾತ್ರಿ ಟೆಹ್ರಾನ್ ನಿಂದ ದೆಹಲಿಗೆ 11 ಕನ್ನಡಿಗರು ಆಗಮಿಸಿದ್ದಾರೆ. ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ವಿದ್ಯಾರ್ಥಿಗಳು ಇಂದು ಬೆಂಗಳೂರಿಗೆ (Bengaluru) ತಲುಪಲಿದ್ದಾರೆ. ವಿದ್ಯಾರ್ಥಿಗಳ ವಿಮಾನ ಪ್ರಯಾಣದ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸಲಿದೆ. ಇದನ್ನೂ ಓದಿ: ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

    ಜೂ.19ರಂದು ಇರಾನ್‍ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದರು. ವಿದ್ಯಾರ್ಥಿಗಳು ಇರಾನ್‍ನಿಂದ ಅರ್ಮೇನಿಯಾದ ಮೂಲಕ ಭಾರತಕ್ಕೆ ಬಂದಿದ್ದರು. ಅದರಲ್ಲಿ ಉತ್ತರ ಭಾರತದ ಹಲವು ರಾಜ್ಯಗಳ ವಿದ್ಯಾರ್ಥಿಗಳು ದೆಹಲಿಗೆ ಬಂದಿಳಿದಿದ್ದರು. ಅದೇ ದಿನ ಐದು ಮಂದಿ ಕನ್ನಡಿಗರು ಸಹ ವಾಪಸ್‌ ಆಗಿದ್ದರು.

    ಸಂಘರ್ಷದಿಂದ ಇಸ್ರೇಲ್‍ನಲ್ಲಿ ಸಿಲುಕಿದ್ದ 18 ಕನ್ನಡಿಗರು ಜೂ.19ರಂದು ಬೆಂಗಳೂರಿಗೆ ಆಗಮಿಸಲಿದ್ದರು. ಬಿ-ಪ್ಯಾಕ್ ಸದಸ್ಯರ ಕನ್ನಡಿಗರ ತಂಡ ಅಧ್ಯಯನ ಪ್ರವಾಸಕ್ಕೆ ಹೋಗಿತ್ತು. ಇಸ್ರೇಲ್‍ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ಹಿನ್ನೆಲೆ ಅಲ್ಲೇ ಉಳಿದಿದ್ದರು. ಈಗಾಗಲೇ ಈ ತಂಡ ಕರ್ನಾಟಕಕ್ಕೆ ವಾಪಸ್‌ ಆಗಿದೆ.

    ಇರಾನ್‌ – ಇಸ್ರೇಲ್‌ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಇಸ್ರೇಲ್‌ ಪರ ಅಮೆರಿಕ ಅಧಿಕೃತವಾಗಿ ಯುದ್ಧಕ್ಕೆ ಧುಮುಕಿದ್ದು, ಇರಾನ್‌ನ ಮೂರು ಪರಮಾಣು ಕೇಂದ್ರಗಳ (Nuclear Sites) ಮೇಲೆ ಅಮೆರಿಕ ಯಶಸ್ವಿಯಾಗಿ ದಾಳಿ ನಡೆಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ