Tag: iranna kadadi

  • ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

    ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

    ನವದೆಹಲಿ: ಅರ್ಹತೆ ಮತ್ತು ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರು, ನಕಲಿ ವೈದ್ಯರು (Fake Doctors) ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಜನರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಈರಣ್ಣ ಕಡಾಡಿ (Iranna Kadadi) ಒತ್ತಾಯಿಸಿದ್ದಾರೆ.

    ರಾಜ್ಯಸಭೆಯಲ್ಲಿ (Rajya Sabha) ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹೆಚ್ಚುತ್ತಿರುವ ನಕಲಿ ಚಿಕಿತ್ಸಾ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆದು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿದರು.

    ಶತಮಾನಗಳಿಂದ ಜನ ಸಾಮಾನ್ಯರು ವೈದ್ಯರಿಗೆ ದೇವರ ಸ್ಥಾನಮಾನ ನೀಡಿದ್ದಾರೆ. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿನ ಅತಿಯಾದ ವಾಣಿಜ್ಯೀಕರಣವು ಈ ವೃತ್ತಿಯ ಘನತೆಯನ್ನು ಅಪಾಯಕ್ಕೆ ಸಿಲುಕಿಸಿದೆ. ಮೊದಲು ವೈದ್ಯ ವೃತ್ತಿ ಸೇವೆಯಾಗಿತ್ತು. ಆದರೆ ಈಗ ಅದು ಲಾಭ-ಆಧಾರಿತ ಉದ್ಯಮವಾಗಿದೆ. ವೈದ್ಯಕೀಯ ಕಾಲೇಜುಗಳ ಹೆಚ್ಚಿನ ಶುಲ್ಕಗಳು, ಖಾಸಗಿ ಆಸ್ಪತ್ರೆಗಳ ಸಂಖ್ಯೆಯಲ್ಲಿನ ಹೆಚ್ಚಳ ಮತ್ತು ಆರೋಗ್ಯ ಸೇವೆಗಳ ಖಾಸಗೀಕರಣವು ಅದನ್ನು ಮಾರುಕಟ್ಟೆ ಆಧಾರಿತ ವ್ಯವಸ್ಥೆಯಾಗಿ ಪರಿವರ್ತನೆಗೊಂಡಿದೆ . ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

    ವಿಮಾ ಮೊತ್ತದ ಲಾಭ ಪಡೆಯಲು ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪಿತ್ತಕೋಶ ತೆಗೆಯುವಿಕೆ, ಆಂಜಿಯೋಪ್ಲ್ಯಾಸ್ಟಿ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಂತಹ ವಿಧಾನಗಳನ್ನು ಈಗ ಅನೇಕ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಅನೇಕ ಆಸ್ಪತ್ರೆಗಳಲ್ಲಿ, ವೈದ್ಯರ ಆದಾಯವು ಅವರು ಮಾಡುವ ಶಸ್ತ್ರಚಿಕಿತ್ಸೆಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ ಮತ್ತು ಅವರಿಗೆ ಗುರಿಗಳನ್ನು ನೀಡಲಾಗುತ್ತದೆ. ಇದರಿಂದಾಗಿ ರೋಗಿಗಳು ಅನಗತ್ಯ ಶಸ್ತ್ರಚಿಕಿತ್ಸೆಗಳಿಗೆ ತಳ್ಳಲ್ಪಡುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕದ್ದ ಖದೀಮರು – ಕಳ್ಳರ ಕರಾಮತ್ತಿನ ವಿಡಿಯೋ ಸೆರೆ

    ಕೇಂದ್ರ ಸರ್ಕಾರ ಬಡವರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಆಯುಷ್ಮಾನ್ ಭಾರತ್‌ನಂತಹ ಯೋಜನೆಗಳನ್ನು ಪ್ರಾರಂಭಿಸಿತು. ಆದರೆ ಈಗ ನಕಲಿ ಶಸ್ತ್ರಚಿಕಿತ್ಸೆಗಳ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ರೋಗಿಗಳ ಸುರಕ್ಷತೆ ಮತ್ತು ಸರ್ಕಾರಿ ಯೋಜನೆಗಳ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀರುತ್ತಿದೆ. ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವೈದ್ಯಕೀಯ ವೃತ್ತಿಯ ಘನತೆಯನ್ನು ಕಾಪಾಡಿಕೊಳ್ಳಲು ಸರ್ಕಾರಿ ಆರೋಗ್ಯ ಯೋಜನೆಗಳಲ್ಲಿ ವಂಚನೆಯನ್ನು ತಡೆಗಟ್ಟಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: 67 ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿ ನವೀಕರಿಸಿದ ಗೃಹ ಸಚಿವಾಲಯ

  • ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    – ಜೊತೆಗೆ ಅಂಚೆ ಚೀಟಿ ಬಿಡುಗಡೆಗೆ ಮನವಿ

    ನವದೆಹಲಿ: ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮ (Kitturu Rani Chennamma) ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ (Belagavi Airport) ರಾಣಿ ಚೆನ್ನಮ್ಮ ಹೆಸರಿಡಬೇಕು ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕಿತ್ತೂರು ಕರ್ನಾಟಕದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ (Delhi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗಲಿದೆ. ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ವೀರ ಮಹಿಳೆಯಾಗಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದರು. ಅವರ ತ್ಯಾಗ, ಬಲಿದಾನವನ್ನು ನಾವು ಮರೆಯಬಾರದು. ಇದಕ್ಕಾಗಿ ಅ.23ರಂದು ವಿಜಯೋತ್ಸವದ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದೇವೆ.ಇದನ್ನೂ ಓದಿ: ಹಾಸನ | ಆಹಾರ ಅರಸಿ ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವು

    ಈ ಬಾರಿ ಅ.23ಕ್ಕೆ 200 ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆ ವಿಶೇಷವಾಗಿ ಆಚರಿಸಲು ಚಿಂತನೆ ನಡೆಸಿದ್ದೇವೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನ ಹೆಸರಿಡಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿ ಅವರ ಮೂರ್ತಿ ಸ್ಥಾಪಿಸಬೇಕು. ಜೊತೆಗೆ ರಾಣಿ ಚೆನ್ನಮ್ಮನ ಒಂದು ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕದ ಜನಪ್ರತಿನಿಧಿಗಳು, ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.

    ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ (Sangolli Rayanna) ಹೆಸರನ್ನು ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣಕ್ಕೆ, ಜಗಜ್ಯೋತಿ ಬಸವಣ್ಣನ ಹೆಸರನ್ನು ವಿಜಯಪುರಕ್ಕೆ (Vijayapura), ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಶಿವಮೊಗ್ಗ (Shivamogga) ವಿಮಾನ ನಿಲ್ದಾಣಕ್ಕೆ ಇಡಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

    ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಕೈಗಾರಿಕೆ, ಶಿಕ್ಷಣ ಸಂಸ್ಥೆಗಳು, ಕೇಂದ್ರ ಸರ್ಕಾರದ ವಿವಿಧ ತರಬೇತಿ ಕೇಂದ್ರಗಳಿದ್ದು, ಆರ್ಥಿಕ ನಗರವಾಗಿ ಬೆಳೆಯುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಇನ್ನಷ್ಟು ಸಂಪರ್ಕ ಹೆಚ್ಚಿಸಬೇಕಿದೆ. ಹೀಗಾಗಿ ಇನ್ನು ಅನೇಕ ನಗರಗಳಿಗೆ ವಿಮಾನ ಸಂಪರ್ಕ ಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸುವ ಭರವಸೆ ನೀಡಿದೆ ಎಂದು ತಿಳಿಸಿದರು.ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

  • ಜಮ್ಮು-ಕಾಶ್ಮೀರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ: ಈರಣ್ಣ ಕಡಾಡಿ

    ಜಮ್ಮು-ಕಾಶ್ಮೀರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ: ಈರಣ್ಣ ಕಡಾಡಿ

    ಬೆಳಗಾವಿ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ. ನಮ್ಮ ಅಸ್ತಿತ್ವ ಇಲ್ಲದ ರಾಜ್ಯದಲ್ಲಿ ನಮಗೆ ಈ ಸಲ ಹೆಚ್ಚಿನ ಸ್ಥಾನಗಳು ಬಂದಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ (Iranna Kadadi) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಬಗ್ಗೆ ದೊಡ್ಡ ಪ್ರಮಾಣದ ಅಪಪ್ರಚಾರ ಇರುವ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಬೆಂಬಲ ಸಿಕ್ಕಿದೆ. ಬರುವ ದಿನಗಳಲ್ಲಿ ಪಕ್ಷವನ್ನು ಜಮ್ಮು-ಕಾಶ್ಮೀರದಲ್ಲಿ ಗಟ್ಟಿ ಮಾಡುತ್ತೇವೆ. ವಿರೋಧ ಪಕ್ಷವಾಗಿ ಆ ರಾಜ್ಯಕ್ಕೆ ಹೇಗೆ ನ್ಯಾಯ ಕೊಡಿಸಬೇಕೋ? ಕೊಡಿಸುತ್ತೇವೆ ಎಂದರು. ಇದನ್ನೂ ಓದಿ: ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸಿಪಿವೈ – ಪಕ್ಷೇತರ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ

    ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ (BJP) ಹಿನ್ನಡೆ ಆಗಲಿದೆ ಎಂದು ಸರ್ವೆ ವರದಿಗಳು ಹೇಳಿದ್ದವು. ಎರಡು ಸಲ ಅಧಿಕಾರ ನಡೆಸಿದ ಕಾರಣಕ್ಕೆ ಆಡಳಿತ ವಿರೋಧಿ ಅಲೆ ಇತ್ತು. ಆದರೆ ಹರಿಯಾಣ ಜನ ನಮ್ಮನ್ನು ಒಪ್ಪಿಕೊಂಡು, ಬಹುಮತ ಕೊಟ್ಟಿದ್ದಾರೆ. ಅಲ್ಲಿನ ಜನರಿಗೆ ನಾನು ಅಭಿನಂದಿಸುವೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರನ್ನು ಸೀಜ್ ಮಾಡಿದ ಪೊಲೀಸರು

    ಹರಿಯಾಣದ ಜನ ಕಾಂಗ್ರೆಸ್ (Congress) ಗ್ಯಾರಂಟಿ ನೋಡದೇ ಬಿಜೆಪಿಗೆ ಬಂಬಲಿಸಿರುವ ವಿಚಾರಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಹೇಗೆ ನಗೆಪಾಟಲಿಗೆ ಈಡಾಗಿದೆ ಎಂದು ಎಲ್ಲರಿಗೂ ಗೊತ್ತು. ಗ್ಯಾರಂಟಿ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಿಗುತ್ತಿಲ್ಲ. ಮಂತ್ರಿಗಳು ಗುದ್ದಲಿ ಪೂಜೆ ಮಾಡಿಲ್ಲ. ಆಡಳಿತ ವ್ಯವಸ್ಥೆ ಹಣಕಾಸಿನ ಕೊರತೆಯಿಂದ ಕುಸಿದು ಬಿದ್ದಿದೆ. ಜನರ ಎದುರು ಹೋಗಲು ಶಾಸಕರೇ ತಯಾರಿಲ್ಲ. ಗ್ಯಾರಂಟಿ ಮುಂದುವರೆಸಿದರೆ ಕಷ್ಟ ಇದೆ ಎಂದು ತಿಳಿಸಿದರು. ಇದನ್ನೂ ಓದಿ: Haryana Election Results| ಜಿಲೇಬಿ ಟ್ರೆಂಡ್‌ ಆಗಿದ್ದು ಯಾಕೆ?

  • ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

    ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

    ಬೆಳಗಾವಿ: ಗ್ರಾಮೀಣ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಧನಂಜಯ್ ಜಾಧವ್‌ಗೆ (Dhananjay Jadhav) ಕೈ ತಪ್ಪಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ (Iranna Kadadi) ಕಣ್ಣೀರು ಹಾಕಿದ್ದಾರೆ.

    ಬೆಳಗಾವಿ ಗ್ರಾಮೀಣ ಮಂಡಳ ಬಿಜೆಪಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಧನಂಜಯ ಜಾಧವ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ. ಧನಂಜಯ ಜಾಧವ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ್‌ನ್ನು ಯಾರು ಕ್ಷಮಿಸಲ್ಲ : ಬಿಎಸ್‍ವೈ ವಾಗ್ದಾಳಿ

     

    ರಮೇಶ್ ಜಾರಕಿಹೊಳಿ (Ramesh Jarkiholi) ಆಪ್ತ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ನಾವು ದುಡ್ಡು ಸಂಗ್ರಹಿಸಿ ಧನಂಜಯ್ ಜಾಧವ್ ಪರ ಪ್ರಚಾರ ಮಾಡಿದ್ದೇವೆ. ಆದರೆ ಈಗಷ್ಟೇ ಪಕ್ಷಕ್ಕೆ ಬಂದ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ನೀಡಿದ್ದೀರಿ ಎಂದು ಕಾರ್ಯಕರ್ತರು ಕಣ್ಣೀರು ಹಾಕಿದ್ದಾರೆ. ಕಾರ್ಯಕರ್ತರು ಕಣ್ಣೀರಿಡುತ್ತಿದ್ದಂತೆ ಈರಣ್ಣಾ ಕಡಾಡಿ ಸಹ ಕಣ್ಣೀರು ಹಾಕಿದ್ದಾರೆ.

  • ಹಿಜಾಬ್ ಕಾಂಗ್ರೆಸ್ಸಿನ ಹಿಡನ್ ಅಜೆಂಡಾ: ಈರಣ್ಣ ಕಡಾಡಿ

    ಹಿಜಾಬ್ ಕಾಂಗ್ರೆಸ್ಸಿನ ಹಿಡನ್ ಅಜೆಂಡಾ: ಈರಣ್ಣ ಕಡಾಡಿ

    ಬೆಳಗಾವಿ: ಶಿಕ್ಷಣದ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವುದು ಹಿಜಬ್ ಕಾಂಗ್ರೆಸ್ಸಿನ ಹಿಡನ್ ಅಜೆಂಡಾವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ವಿವಾದ ಕಾಂಗ್ರೆಸ್ಸಿನ ಹಿಡನ್ ಅಜೆಂಡಾ ಆಗಿದೆ. ಶಾಲೆಗಳಲ್ಲಿ ಧರ್ಮದ ವಿಷಯಗಳನ್ನು ಬಿತ್ತಬಾರದು. ಕೋರ್ಟ್ ಕೂಡಾ ಅದಕ್ಕೆ ಪೂರಕವಾದ ನಿರ್ಣಯ ಕೈಗೊಂಡಿದೆ ಎಂದ ಅವರು, ಶಾಲಾ ಆವರಣದಲ್ಲಿ ರಾಜಕೀಯ ಮಾಡಲಾರದೆ, ಧರ್ಮದ ವಿಷಬೀಜ ಬಿತ್ತಲಾರದೆ, ಶೈಕ್ಷಣಿಕ ಕಲಿಕೆ ಅವಕಾಶ ಮಾಡಿಕೊಡಬೇಕು. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನು ಶಿಕ್ಷಣದ ಮೂಲಕ ಮಾಡಲು ಹೊರಟಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದೆ. ಇದನ್ನು ನಾವು ರಾಜಕೀಯವನ್ನು ಮೀರಿ ನಿಂತು ನೋಡಬೇಕು ಎಂದು ಅಭಿಪ್ರಾಯಪಟ್ಟರು.

    ಮಕ್ಕಳಿಗೆ ತಲೆಯಲ್ಲಿ ವಿಷಬೀಜ ಬಿತ್ತುವುದನ್ನು ಬಂದ್ ಮಾಡಬೇಕು. ಎಲ್ಲದಕ್ಕೂ ಆರ್‌ಎಸ್‌ಎಸ್ ತರುವುದು ಎಲ್ಲದಕ್ಕೂ ಬಿಜೆಪಿ ತರುವುದು ಒಳ್ಳೆಯದಲ್ಲ. ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಇದ್ದನ್ನು ಮಾಡಿದ್ದಾರೆ. ಇದೊಂದು ಟೂಲ್ ಕಿಟ್ ಈ ವಿಚಾರವು ಮಾಧ್ಯಮದಲ್ಲಿ ಬಹಿರಂಗವಾಗಿದೆ.

    ಇತ್ತೀಚೆಗೆ ಸೋಶಿಯಲ್ ಮಿಡಿಯಾ ದುರುಪಯೋಗ ಆಗುತ್ತಿದೆ. ಇದರ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಕಾಂಗ್ರೆಸ್ ಈ ರೀತಿ ಕೀಳು ರಾಜಕೀಯ ಮಾಡಬಾರದು. ಯಾವ ಕೆಲಸ ಆಗಿಲ್ಲ ಅದನ್ನು ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಸಭೆಯಲ್ಲಿ ಚರ್ಚೆ ಮಾಡಲು ಅವಕಾಶ ಇದೆ. ಅದನ್ನು ಬಿಟ್ಟು ಈ ರೀತಿ ಶಿಕ್ಷಣ ಕ್ಷೇತ್ರವನ್ನು ಕೆಡಿಸುವ ಕೆಲಸ ಆಗಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

    ಆ ಮಕ್ಕಳು ಈ ಶಾಲಾ ಆವರಣದಲ್ಲಿ ಯಾವ ರೀತಿ ಇರಬೇಕಿತ್ತೋ ಅವರು ಹಾಗಿಲ್ಲ. ಆದರೂ ಆ ಮಕ್ಕಳಿಗೆ ಶಿಕ್ಷಣ ಕೊಡುತ್ತೇವೆ ಎಂದು ಶಾಲೆ ಪ್ರಾಂಶುಪಾಲರು ಹೇಳಿದ್ದಾರೆ. ಅದನ್ನು ಎಲ್ಲಾ ವಿದ್ಯಾರ್ಥಿಗಳು ಪಾಲಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ: ಬೊಮ್ಮಾಯಿ

  • ಹನಿ ನೀರಾವರಿ ಸಬ್ಸಿಡಿಗೆ ರಾಜ್ಯದ ಪಾಲನ್ನ ನೀಡಿ – ಸಿಎಂಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮನವಿ

    ಹನಿ ನೀರಾವರಿ ಸಬ್ಸಿಡಿಗೆ ರಾಜ್ಯದ ಪಾಲನ್ನ ನೀಡಿ – ಸಿಎಂಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮನವಿ

    ಬೆಂಗಳೂರು: ಹನಿ ನೀರಾವರಿ ಸಬ್ಸಿಡಿ ಮುಂದುವರಿಸಲು ಮುಖ್ಯಮಂತ್ರಿಗಳನ್ನು ಕೋರಿದ್ದು, ಇದಕ್ಕೆ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಅಂತಾ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಈ ಹಿಂದಿನಂತೆ ಶೇ 90ರಷ್ಟು ಸಬ್ಸಿಡಿ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ರೈತರಿಗೆ ನೀಡುವ ಶೂನ್ಯ ಬಡ್ಡಿದರದ ಸಾಲವನ್ನು ಪ್ರತಿಯೊಬ್ಬ ಅರ್ಹ ರೈತರಿಗೂ ನೀಡಲು ಮನವಿ ಮಾಡಿದ್ದಾಗಿ ಕೋರಲಾಗಿದೆ. ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್‍ಗಳನ್ನು ಬೇಗನೆ ಪಾವತಿಸಲು ಸೂಚಿಸುವಂತೆ ಕೋರಿದ್ದೇವೆ ಎಂದರು.

    ರೈತರ ಉತ್ಪನ್ನಗಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸಕಾಲದಲ್ಲಿ ತೆರೆಯುವಂತೆ ವಿನಂತಿಸಲಾಗಿದೆ ಎಂದು ವಿವರಿಸಿದರು. ಅಲ್ಲದೆ ಸಾಮಾಜಿಕ, ವೈದ್ಯಕೀಯ ಮತ್ತು ಆರ್ಥಿಕ ಸುರಕ್ಷೆಗೆ ನಮ್ಮ ಪಕ್ಷ ಗಣನೀಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಸಾಮಾಜಿಕ ಜಾಗೃತಿ ಮೂಡಿಸುವುದು, ಲಸಿಕೆ ಸಂಬಂಧ, ಮನೆಮದ್ದು, ವ್ಯಾಯಾಮ ಜಾಗೃತಿ ಮೂಡಿಸಲಾಗುತ್ತಿದೆ. ಆರ್ಥಿಕ ಸುರಕ್ಷೆಗಾಗಿಯೂ ಕೆಲಸ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಜನರನ್ನು ನಾವು ಕಳೆದುಕೊಂಡಿದ್ದೇವೆ. ಜನರಿಗೆ ನೆರವಾಗಲು ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಕುರಿತು (ಎರಡು ಲಕ್ಷ ವಿಮೆ), ಪ್ರಧಾನಮಂತ್ರಿ ಸುರಕ್ಷಾ ವಿಮೆ ಯೋಜನೆ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

    ರೈತ ಮೋರ್ಚಾವು ರಾಜ್ಯದಲ್ಲಿ ವಿವಿಧ ಮೋರ್ಚಾಗಳ ಸಹಯೋಗದಲ್ಲಿ 11 ಲಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ. ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ- ಜನ್ಮದಿನದ ನಡುವಿನ ಅವಧಿಯಲ್ಲಿ ಈ ಕಾರ್ಯ ನೆರವೇರಲಿದೆ ಎಂದರು. ಕೇಂದ್ರ ಸರ್ಕಾರವು ಡಿಎಪಿ ಗೊಬ್ಬರದ ದರ ಏರದಂತೆ ತಡೆಯಲು ಹೆಚ್ಚುವರಿ ಸಬ್ಸಿಡಿ ನೀಡಿದ್ದು, ಈ ಮೂಲಕ 1,200 ರೂಪಾಯಿ ದರದಲ್ಲಿ ಒಂದು ಬ್ಯಾಗ್ ಡಿಎಪಿ ಲಭಿಸುವಂತೆ ಮಾಡಿದೆ. ನ್ಯಾನೋ ಯೂರಿಯಾ ಬಿಡುಗಡೆ ಮಾಡಿದೆ. ಕಡಿಮೆ ಖರ್ಚಿನಲ್ಲಿ ಇದು ಲಭಿಸಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

    ಕೃಷಿ ಡಿಪ್ಲೊಮಾ, ಕೃಷಿ ಬಿಎಸ್ಸಿ, ಸಮಾನ ಪದವಿ ಕೋರ್ಸ್ ಗಳ ಪ್ರವೇಶದಲ್ಲಿ ಕೃಷಿಕರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲು ಪ್ರಮಾಣವನ್ನು ಶೇ 40ರಿಂದ ಶೇ 50ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರ ನಿನ್ನೆ ನಿರ್ಧರಿಸಿದೆ. ಇದೊಂದು ಮಹತ್ವದ ಕ್ರಮವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಕೃಷಿಕರ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಹೇಳಿದರು. ಇದೇ ವೇಳೆ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನೆ, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

  • ಸಚಿವ ಬಿಸಿ ಪಾಟೀಲ್ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ

    ಸಚಿವ ಬಿಸಿ ಪಾಟೀಲ್ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ

    ಬೆಳಗಾವಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ ಭುಗಿಲೆದ್ದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಹೇಳಿಕೆಯನ್ನು ಬಿ.ಸಿ.ಪಾಟೀಲ್ ಹಿಂಪಡೆಯಬೇಕು ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಈರಣ್ಣಾ ಕಡಾಡಿ ಆಗ್ರಹಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸ್ವಾಭಿಮಾನಿಗಳು, ಎಂದಿಗೂ ರೈತರು ಹೇಡಿಗಳಾಗಿಲ್ಲ. ಮಾತಿನ ಭರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿರಬಹುದು. ಕೃಷಿ ಸಚಿವರಿಗೆ ತಮ್ಮ ಹೇಳಿಕೆ ವಾಪಸ್ ಪಡೆಯಲು ಮನವಿ ಮಾಡುತ್ತೇವೆ ಎಂದರು.

    ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಅರ್ಥದಲ್ಲಿ ಹೇಳಲು ಹೋಗಿ ಅಪಾರ್ಥ ಸೃಷ್ಟಿಯಾಗಿದೆ. ಕೃಷಿ ನಂಬಿದ ರೈತ ಸ್ವಾಭಿಮಾನಿ, ಯಾರ ಬಳಿಯೂ ಕೈಯೊಡ್ಡಿ ಬದುಕಲ್ಲ. ಇನ್ನೊಬ್ಬರಿಗೆ ಅನ್ನ ಕೊಟ್ಟು ತಾನು ಸಹ ಬದುಕಿದಂತಹ ಸ್ವಾಭಿಮಾನಿ. ರೈತರು ಯಾವತ್ತೂ ಹೇಡಿಗಳು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಕೃಷಿ ಸಚಿವರು ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಕಳಕಳಿ ಇಟ್ಟುಕೊಂಡು ಹೇಳಲು ಹೋಗಿದ್ದಾರೆ. ಈ ವೇಳೆ ಎಡವಟ್ಟಿನ ಮಾತನ್ನಾಡಿದ್ದಾರೆ ಎನಿಸುತ್ತದೆ.

    ಬಿಸಿ ಪಾಟೀಲ್ ಹೇಳಿದ್ದೇನು?
    ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ್ದ ಬಿಸಿ ಪಾಟೀಲ್, ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದಿದ್ದರು.

    ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು ಆತ್ಮಹತ್ಯೆಗೆ ಶರಣಾಗಬಾರದು. ಸಾವಯವ ಗೊಬ್ಬರ ಬಳಸಿ, ಸಮಗ್ರ ಕೃಷಿ ಪದ್ಧತಿಯಡಿ ಕೆಲಸ ಮಾಡಿದರೆ ಉತ್ತಮ ಲಾಭ ಸಾಧ್ಯ. ಇಸ್ರೇಲ್ ಮಾದರಿಯಲ್ಲ ಕೋಲಾರ ಮಾದರಿಯಲ್ಲಿ ಕೃಷಿ ಮಾಡುವುದನ್ನು ರಾಜ್ಯಕ್ಕೆ ಹೇಳಿ ಕೊಡವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದರು.

  • ಪ್ರಮಾಣ ವಚನ ಸ್ವೀಕರಿಸಿದ ಖರ್ಗೆ, ಗಸ್ತಿ, ಕಡಾಡಿ – ಎಚ್‍ಡಿಡಿ ಗೈರು

    ಪ್ರಮಾಣ ವಚನ ಸ್ವೀಕರಿಸಿದ ಖರ್ಗೆ, ಗಸ್ತಿ, ಕಡಾಡಿ – ಎಚ್‍ಡಿಡಿ ಗೈರು

    ನವದೆಹಲಿ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಾಲ್ವರು ಸಂಸದರ ಪೈಕಿ ಇಂದು ಮೂವರು ಪ್ರಮಾಣ ವಚನ ಸ್ವೀಕರಿಸಿದರು.

    ರಾಜ್ಯಸಭೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಶೋಕ್ ಗಸ್ತಿ, ಈರಣ್ಣ ಕಡಾಡಿ ಸೇರಿದಂತೆ ಇಪ್ಪತ್ತು ರಾಜ್ಯಗಳಿಂದ ಆಯ್ಕೆಯಾಗಿದ್ದ 61 ಸದಸ್ಯರ ಪೈಕಿ 41 ಸಂಸದರು ಪ್ರಮಾಣವಚನ ಸ್ವೀಕರಿಸಿದರು.

    ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿದಂತೆ ಉಳಿದ ಸದಸ್ಯರು ಕೊರೊನಾ ಹಾಗೂ ಇನ್ನಿತರ ಕಾರಣಗಳಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಪ್ರಮಾಣ ವಚನದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಧಿವೇಶನದಲ್ಲಿ ಆರ್ಥಿಕತೆ, ಕೊರೊನಾ ಮತ್ತು ಗಡಿ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಈರಣ್ಣ ಕಡಾಡಿಗೆ ರಾಜ್ಯಸಭಾ ಟಿಕೆಟ್ – ಬಿಜೆಪಿ ತಂತ್ರಗಾರಿಕೆ ಏನು?

    ಅಶೋಕ್ ಗಸ್ತಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದವನಾಗಿದ್ದು ಆ ಭಾಗದ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ ಎಂದರು. ಈರಣ್ಣ ಕಡಾಡಿಯವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸೇತುವೆಯಂತೆ ಕೆಲಸ ಮಾಡ್ತೀನಿ ಎಂದು ತಿಳಿಸಿದರು.