Tag: Irfan Pathan

  • ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

    ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

    – 500 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಮಹಿ
    – ಹ್ಯಾಟ್ರಿಕ್‌ ಸಿಕ್ಸರ್‌ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್‌

    ಮುಂಬೈ: ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ಸೂಪರ್‌ ಸಂಡೆ ನಡೆದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಕಳಪೆ ಬೌಲಿಂಗ್‌ ಮಾಜಿ ಕ್ರಿಕೆಟಿಗರ ಬೇಸರಕ್ಕೆ ಕಾರಣವಾಗಿದೆ. ಕಳೆದ 2 ಪಂದ್ಯಗಳಲ್ಲಿ ಬೌಲಿಂಗ್‌ ಮಾಡದ ಪಾಂಡ್ಯ ಸಿಎಸ್‌ಕೆ ವಿರುದ್ಧ ಹೆಚ್ಚು ರನ್‌ ಹೊಡೆಸಿಕೊಂಡಿದ್ದು ಭಾರೀ ಟಿಕೆಗೆ ಗುರಿಯಾಗಿದ್ದಾರೆ. ಪಾಂಡ್ಯ ವಿರುದ್ಧ ಸುನೀಲ್‌ ಗವಾಸ್ಕರ್‌, ಇರ್ಫಾನ್‌ ಪಠಾಣ್‌ ಅವರಂತಹ ಮಾಜಿ ಕ್ರಿಕೆಟಿಗರು ಅಸಮಾಧಾನ ಹೊರಹಾಕಿದ್ದಾರೆ.

    ಮುಂಬೈ ತಂಡದ ಸೋಲಿನ ಬಳಿಕ ಪ್ರತಿಕ್ರಿಯೆ ನೀಡಿದ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌ (Sunil Gavaskar), ಹಾರ್ದಿಕ್‌ ಪಾಂಡ್ಯ ಅವರ ಬೌಲಿಂಗ್‌ ಕಳಪೆಯಾಗಿತ್ತು. ಅವರ ಬೌಲಿಂಗ್‌ ಸಹ ಅಷ್ಟೇನು ಪರಿಣಾಮ ಬೀರಲಿಲ್ಲ, ಸಾಮಾನ್ಯ ಬೌಲಿಂಗ್‌ ಆಗಿತ್ತು. ಬಹುಶಃ ನಾನು ದೀರ್ಘಕಾಲದ ನಂತರ ನೋಡಿದ ಅತ್ಯಂತ ಕೆಟ್ಟ ಬೌಲಿಂಗ್‌ ಇದಾಗಿತ್ತು. ಯಾವುದೇ ಬ್ಯಾಟರ್‌ಗಳು ಸಾಮಾನ್ಯವಾಗಿ ಸ್ಟ್ರೈಟ್‌ ಲೆಂತ್‌ ಬಾಲ್‌ ಹಾಗೂ ಲೆಗ್‌ಸೈಡ್‌ ಫುಲ್‌ಟಾಸ್‌ ಬಾಲ್‌ಗಳನ್ನ ಹುಡುಕುತ್ತಾರೆ. ಅಂತಹ ಅವಕಾಶಗಳು ಸಿಕ್ಕಾಗ ಸಿಕ್ಸರ್‌ ಬಾರಿಸುತ್ತಾರೆ. ಮಹಿ ಈ ಅವಕಾಶವನ್ನೂ ಸರಿಯಾಗಿ ಬಳಸಿಕೊಂಡರು, ಆದ್ರೆ ಪಾಂಡ್ಯ ಅವರ ಬೌಲಿಂಗ್‌ ನಿಯಂತ್ರಿಸುವಲ್ಲಿ ವಿಫಲವಾಗಿತ್ತು ಎಂದು ಟೀಕಿಸಿದ್ದಾರೆ.

    ಇನ್ನೂ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ (Irfan Pathan), ಕೊನೇ ಓವರ್‌ನಲ್ಲಿ ಕ್ಯಾಪ್ಟನ್‌ ಪಾಂಡ್ಯ ತಾವೇ ಬೌಲಿಂಗ್‌ಗೆ ಇಳಿದಿದ್ದು, ಆಕಾಶ್‌ ಮಧ್ವಾಲ್‌ ಅವರ ಬೌಲಿಂಗ್‌ ಮೇಲಿನ ನಂಬಿಕೆಯ ಕೊರತೆಯನ್ನು ತೋರಿಸಿದೆ. ಅಲ್ಲದೇ ಡೆತ್‌ ಓರವ್‌ ಬೌಲರ್‌ ಆಗಿ ಅವರ ಕೌಶಲ್ಯದ ಕೊರತೆಯನ್ನೂ ತೋರಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

    ಕೊನೇ ಓವರ್‌ ಥ್ರಿಲ್ಲರ್‌:
    ಮುಂಬೈ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಪರ ಕೊನೇ ಓವರ್‌ ರೋಚಕವಾಗಿತ್ತು. 19 ಓವರ್‌ಗಳಲ್ಲಿ ಸಿಎಸ್‌ಕೆ 180 ರನ್‌ಗಳನ್ನಷ್ಟೇ ಗಳಿಸಿತ್ತು. ಕೊನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಪಾಂಡ್ಯ ಒಂದು ಎಸೆತ ಪೂರೈಸುವಷ್ಟರಲ್ಲೇ 2 ವೈಡ್‌, 1 ಬೌಂಡರಿ ಚಚ್ಚಿಸಿಕೊಂಡು 6 ರನ್‌ ಬಿಟ್ಟುಕೊಟ್ಟಿದ್ದರು. 2ನೇ ಎಸೆತದಲ್ಲಿ ಡೇರಿಲ್‌ ಮಿಚೆಲ್‌ ಕ್ಯಾಚ್‌ ನೀಡಿ ಔಟಾದರು. ನಂತರ ಕ್ರೀಸ್‌ಗಿಳಿದ ಮಹಿ, ಪಾಂಡ್ಯ ಅವರ 3,4,5ನೇ ಎಸೆತಗಳನ್ನು ಸತತವಾಗಿ ಹ್ಯಾಟ್ರಿಕ್‌ ಸಿಕ್ಸರ್‌ಗಟ್ಟಿದರು, ಕೊನೇ ಎಸೆತದಲ್ಲಿ 2 ರನ್‌ ಬಾರಿಸಿದರು. ಇದರಿಂದ ಸಿಎಸ್‌ಕೆ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಕೊನೇ ಓವರ್‌ನಲ್ಲಿ 26 ರನ್‌ ಬಿಟ್ಟುಕೊಟ್ಟ ಪಾಂಡ್ಯ ತಾವು ಮಾಡಿದ 3 ಓವರ್‌ಗಳಲ್ಲಿ 2 ವಿಕೆಟ್‌ ಪಡೆದು 43 ರನ್‌ ಚಚ್ಚಿಸಿಕೊಂಡಿದ್ದರು.

    ಹುಚ್ಚೆದ್ದು ಕುಣಿದ ಮಹಿ ಫ್ಯಾನ್ಸ್‌:
    ಕೊನೇ 4 ಎಸೆತಗಳನ್ನ ಎದುರಿಸಿದರೂ 500 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಧೋನಿ ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅಂತಿಮ ಓವರ್‌ನಲ್ಲಿ ಕಣಕ್ಕಿಳಿದರೂ ಕೇವಲ 4 ಎಸೆತಗಳಲ್ಲೇ 20 ರನ್‌ ಚಚ್ಚಿದರು. ಅಂತಿಮವಾಗಿ ಸಿಎಸ್‌ಕೆ ಮುಂಬೈ ವಿರುದ್ಧ 20 ರನ್‌ಗಳ ಜಯ ಸಾಧಿಸಿತು.

  • ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    – ಒಬ್ಬರಾದ್ರೂ ವಿಕೆಟ್‌ ತೆಗೆಯೋರಿಲ್ಲ – ಆರ್‌ಸಿಬಿ ಹೇಗೆ ತಾನೆ ಗೆಲ್ಲುತ್ತೆ? – ಇರ್ಫಾನ್‌ ಪಠಾಣ್‌ ಗರಂ

    ಜೈಪುರ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RR vs RCB) ತಂಡದ ಸೋಲು ಕ್ರಿಕೆಟ್‌ ಲೋಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ತಂಡದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ ವಿರಾಟ್‌ ಕೊಹ್ಲಿ (Virat Kohli), ಪ್ರಮುಖ ವಿಕೆಟ್‌ ಕೀಳುವಲ್ಲಿ ವಿಫಲರಾದ ಬೌಲರ್‌ಗಳು ಹಾಗೂ ಕೈಗೊಟ್ಟ ಗ್ಲೆನ್‌ ಮಾಕ್ಸ್‌ವೆಲ್‌ ವಿರುದ್ಧ ಹಿರಿಯ ಕ್ರಿಕೆಟಿಗರು ಹರಿಹಾಯ್ದಿದ್ದಾರೆ.

    ಆರ್‌ಸಿಬಿ ಸೋಲಿನ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ವಿರಾಟ್‌ ಕೊಹ್ಲಿ, ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಇನ್ನೂ 20 ರನ್‌ ಹೆಚ್ಚುವರಿ ಗಳಿಸಬೇಕಿತ್ತು. ವಿರಾಟ್‌ ಕೊಹ್ಲಿ ಇನ್ನಿಂಗ್ಸ್‌ ಚೆನ್ನಾಗಿತ್ತು. ಆದ್ರೆ ಅವರೊಂದಿಗೆ ಸಾಥ್‌ ನೀಡಬೇಕಿದ್ದ ಮ್ಯಾಕ್ಸ್‌ವೆಲ್‌, ಕ್ಯಾಮರೂನ್‌ ಗ್ರೀನ್‌ ಸರಿಯಾಗಿ ಬ್ಯಾಟಿಂಗ್‌ ಮಾಡಲಿಲ್ಲ. ಮಹಿಪಾಲ್‌ ಲೊಮ್ರೋರ್‌ ಸಹ ತಂಡದಲ್ಲಿ ಇಲ್ಲದೇ ಇದ್ದದ್ದು ದೊಡ್ಡ ನಷ್ಟವಾಯಿತು. ವಿರಾಟ್‌ ಕೊಹ್ಲಿ 39 ಬಾಲ್‌ಗೆ 50 ರನ್‌ ಗಳಿಸಿದಾಗ, ಅವರ ಸ್ಟ್ರೈಕ್‌ ರೇಟ್‌ 200ರ ಗಡಿ ದಾಟಬೇಕಿತ್ತು. ಆದ್ರೆ ಇತರ ಬ್ಯಾಟರ್‌ಗಳು ಸಾಥ್‌ ನೀಡದ ಪರಿಣಾಮ ಸಂಪೂರ್ಣ ಒತ್ತಡ ಕೊಹ್ಲಿ ಮೇಲೆ ಇತ್ತು ಎಂದು ಹೇಳಿದ್ದಾರೆ.

    ಕೊಹ್ಲಿ ಒಳ್ಳೆ ಫಾರ್ಮ್‌ನಲ್ಲಿದ್ದಾರೆ, ಕೊನೇವರೆಗೂ ಕ್ರೀಸ್‌ನಲ್ಲಿ ಉಳಿಯೋದು ಅವರ ಪಾತ್ರ. ಆದ್ರೆ ಅಷ್ಟೊಂದು ಹಣಕ್ಕೆ ಆಯ್ಕೆಯಾದ ಇತರ ಬ್ಯಾಟರ್‌ಗಳು ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಬೇಕು. ಮ್ಯಾಕ್ಸ್‌ವೆಲ್‌ (Glenn maxwell) ತರ ಆದ್ರೆ ಯಾರು ಏನ್‌ ಮಾಡೋದಕ್ಕೆ ಆಗುತ್ತೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಬಟ್ಲರ್‌ ಬೊಂಬಾಟ್‌ ಶತಕ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ; ಆರ್‌ಸಿಬಿಗೆ ಹೀನಾಯ ಸೋಲು!

    ಆರ್‌ಸಿಬಿ ವಿರುದ್ಧ ಪಠಾಣ್‌ ಗರಂ:
    ಇಬ್ಬರು ಬ್ಯಾಟರ್‌ಗಳು (ಸಂಜು ಸ್ಯಾಮ್ಸನ್‌, ಜೋಸ್‌ ಬಟ್ಲರ್‌) 170+ ಸ್ಟ್ರೈಕ್ ರೇಟ್‌ನೊಂದಿಗೆ ಆಡುತ್ತಿದ್ದಾರೆ. ಇನ್ನೊಂದು ತುದಿಯಲ್ಲಿ ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲ. ಆರ್‌ಸಿಬಿ ಬೌಲರ್‌ಗಳ ಮೊರೆ ಹೋಗಲಿಲ್ಲ. ಹೀಗಿರುವಾಗ ನೀವು ಹೇಗೆ ಗೆಲ್ಲುತ್ತೀರಿ? ಎಂದು ತಿವಿದಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ – ಪಾಕಿಸ್ತಾನ ತಂಡಕ್ಕೆ ಸೇನೆಯಿಂದ ತರಬೇತಿ!

    ಮಹಿಪಾಲ್‌ ಲೋಮ್ರೋರ್‌ ದೇಶೀಯ ಕ್ರಿಕೆಟ್‌ನಲ್ಲಿ ಈ ಪಿಚ್‌ನಲ್ಲಿ ಆಡುತ್ತಾರೆ. ಆರ್‌ಸಿಬಿ ತಂಡದಲ್ಲಿ ತಮ್ಮ ಫಾರ್ಮ್‌ ಸಾಬೀತು ಮಾಡಿದ್ದಾರೆ. ಆದ್ರೆ ಅವರು ಪ್ಲೇಯಿಂಗ್‌-11 ಭಾಗವಾಗಿರಲಿಲ್ಲ. ಆದ್ದರಿಂದ ಫ್ರಾಂಚೈಸಿಯಲ್ಲಿ ಭಾರತೀಯ ಕೋಚ್‌ಗಳು ಇದ್ದರೆ, ಇಂತಹ ಮೂಲಭೂತ ತಪ್ಪುಗಳು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಜೋಸ್‌ ಬಟ್ಲರ್‌ ಅವರ ಶತಕವನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಶನಿವಾರ ಸವಾಯ್‌ ಮಾನ್ಸಿಂಗ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 10 ಓವರ್‌ಗಳಲ್ಲಿ 183 ರನ್‌ ಗಳಿಸಿತ್ತು. ರಾಜಸ್ಥಾನ್‌ ರಾಯಲ್ಸ್‌ 19.1 ಓವರ್‌ಗಳಲ್ಲೇ 189 ರನ್‌ ಗಳಿಸಿ ಗೆಲುವು ಸಾಧಿಸಿತ್ತು. ಹೌದು. ಆರ್‌ಸಿಬಿ ಪರ ಏಕಾಂಗಿ ಹೋರಾಟ ನಡೆಸಿದ್ದ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದರೆ, ಒಟ್ಟಾರೆ 72 ಎಸೆತಗಳಿಂದ 12 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 113 ರನ್ ದಾಖಲಿಸಿದರು.

    ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಸಿಡಿಸಿದ ಪ್ಲೇಯರ್ಸ್‌:
    * ವಿರಾಟ್ ಕೊಹ್ಲಿ: 67 ಎಸೆತಗಳು Vs ರಾಜಸ್ಥಾನ್ ರಾಯಲ್ಸ್, 2024
    * ಮನೀಶ್ ಪಾಂಡೆ: 67 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2009
    * ಸಚಿನ್ ತೆಂಡೂಲ್ಕರ್: 66 ಎಸೆತಗಳು Vs ವಿರುದ್ಧ ಕೊಚ್ಚಿ ಟಸ್ಕರ್ಸ್ ಕೇರಳ, 2011
    * ಡೇವಿಡ್ ವಾರ್ನರ್: 66 ಎಸೆತಗಳು Vs ಕೆಕೆಆರ್‌, 2010
    * ಜೋಸ್ ಬಟ್ಲರ್: 66 ಎಸೆತಗಳು Vs ಮುಂಬೈ ಇಂಡಿಯನ್ಸ್‌, 2022
    * ಕೆವಿನ್ ಪೀಟರ್ಸನ್: 64 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2012

  • ರೋಹಿತ್ ಶರ್ಮಾ ಈ ತಪ್ಪನ್ನು ಮಾಡ್ತಾರೆ: ಇರ್ಫಾನ್ ಪಠಾಣ್

    ರೋಹಿತ್ ಶರ್ಮಾ ಈ ತಪ್ಪನ್ನು ಮಾಡ್ತಾರೆ: ಇರ್ಫಾನ್ ಪಠಾಣ್

    ರಾಯ್‌ಪುರ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ (India) 2-0 ಅಂತರದಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದೆ. 2ನೇ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India) ಎದುರಾಳಿ ತಂಡವನ್ನ ಅತ್ಯಲ್ಪ ಮೊತ್ತಕ್ಕೆ ಕಟ್ಟಿಹಾಕಿತು.

    ಈ ಪಂದ್ಯದಲ್ಲಿ 50 ಎಸೆತ ಎದುರಿಸಿದ ನಾಯಕ ರೋಹಿತ್ ಶರ್ಮಾ (Rohit Sharma) 51 ರನ್ ಗಳಿಸಿ ಔಟಾದರು. ಎಲ್‌ಬಿಡಬ್ಲ್ಯೂ (LBW) ಆದ ನಂತರ ಅವಕಾಶವಿದ್ದರೂ ಡಿಆರ್‌ಎಸ್ (DRS) ತೆಗೆದುಕೊಳ್ಳದೇ ಕ್ರೀಸ್ ಬಿಟ್ಟು ಹೊರನಡೆದರು. ಈ ಕುರಿತು ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ (Irfan Pathan) ಮಾತನಾಡಿದ್ದಾರೆ. ಇದನ್ನೂ ಓದಿ: 120 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್? – 6 ತಂಡಗಳ ಟೂರ್ನಿಗೆ ಐಸಿಸಿ ಪ್ರಸ್ತಾಪ

    `ರೋಹಿತ್ ಶರ್ಮಾ (Rohit Sharma) ಈ ಒಂದು ತಪ್ಪನ್ನ ಮಾಡ್ತಾರೆ. ಬಾಲ್ ಅವರ ಪ್ಯಾಡ್‌ಗೇ ಬಡಿದು ಎಲ್‌ಬಿಡಬ್ಲ್ಯೂ ಆದಾಗ ಅವರಿಗೆ ಡಿಆರ್‌ಎಸ್ ತೆಗೆದುಕೊಳ್ಳುವ ಅವಕಾಶವಿತ್ತು. ಆದರೂ ತೆಗೆದುಕೊಳ್ಳಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 48 ವರ್ಷಗಳ ಕನಸು ಮತ್ತೆ ಭಗ್ನ – ನ್ಯೂಜಿಲೆಂಡ್‌ ವಿರುದ್ಧ ಸೋತು ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದ ಭಾರತ

    ರೋಹಿತ್ ಶರ್ಮಾ ಈಗ ಫುಲ್ ಫಾರ್ಮ್‌ನಲ್ಲಿದ್ದಾರೆ. ಆಫ್ ಸೈಡ್ ಮತ್ತು ಲೆಗ್ ಸೈಡ್‌ನಲ್ಲಿ ಅವರ ಅದ್ಭುತ ಶಾಟ್‌ಗಳನ್ನ ನಾವು ನೋಡಿದ್ದೇವೆ. ಟಾರ್ಚ್ ಲೈಟ್ ಬೆಳಕಿನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ. ಆದರೂ ರೋಹಿತ್ ಅವರು ಯಾವುದೇ ಒತ್ತಡವಿಲ್ಲದೇ ಮೈಲಿಗಲ್ಲು ಸಾಧಿಸಿದರು ಎಂದು ಪಠಾಣ್ ಶ್ಲಾಘಿಸಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಮಾರಕ ಬೌಲಿಂಗ್ ದಾಳಿ, ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಎದುರಾಳಿ ತಂಡವನ್ನು 2ನೇ ಪಂದ್ಯದಲ್ಲಿ 108ಕ್ಕೆ ಆಲೌಟ್ ಮಾಡಿತು. 109 ರನ್‌ಗಳ ಗುರಿ ಬೆನ್ನತ್ತಿ 20.1 ಓವರ್‌ಗಳಲ್ಲೇ 111 ರನ್ ಚಚ್ಚಿ ಗೆಲುವಿನ ನಗೆ ಬೀರಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಅಮಿತ್ ಮಿಶ್ರಾ ಅವರ ನಡುವೆ ನೆನ್ನೆಯಿಂದಲೂ ಟ್ವೀಟ್ ವಾರ್ ನಡೆಯುತ್ತಿದ್ದು, ಇಂದೂ ಸಹ ಟಾಪ್ ಟ್ರೆಂಡಿಗ್ ಟ್ವೀಟ್ ಆಗಿದೆ.

    ನೆನ್ನೆ ಅಮಿತ್ ಮಿಶ್ರಾ ಅವರು ಮಾಡಿದ್ದ ಟ್ವೀಟ್‌ಗೆ ಮತ್ತೆ ತಿರುಗೇಟು ನೀಡಿರುವ ಇರ್ಫಾನ್ ಪಠಾಣ್ ತಮ್ಮ ಟ್ವೀಟ್‌ನಲ್ಲಿ, ನಾನು ಭಾರತದ ಸಂವಿಧಾನವನ್ನು ಯಾವಾಗಲೂ ಅನುಸರಿಸುತ್ತೇನೆ. ನಮ್ಮ ಸುಂದರ ದೇಶದ ಪ್ರತಿಯೊಬ್ಬ ನಾಗರಿಕನೂ ಇದನ್ನು ಅನುಸರಿಸಬೇಕು ಎಂದು ಒತ್ತಾಯಿಸುತ್ತೇನೆ. ದಯವಿಟ್ಟು ಓದಿ ಮತ್ತೆ ಓದಿ… ಎಂದು ಹೇಳಿದ್ದಾರೆ. ಇದರೊಂದಿಗೆ ಭಾರತ ಸಂವಿಧಾನದ ಪೀಠಿಕೆಯ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    amit mishra irfan pathan

    ಟ್ವೀಟ್ ವಾರ್‌ನ ಅಸಲಿ ಗುಟ್ಟೇನು?: ಭಾರತದ ವೇಗದ ಬೌಲರ್ ಆಗಿದ್ದ ಇರ್ಫಾನ್ ಪಠಾಣ್ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ…..’ ಎಂದು ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‌ಗೆ ಟಾಂಗ್ ಕೊಡುವಂತೆ ಮಾಜಿ ಬಲಗೈ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ. ನಮ್ಮ ಸಂವಿಧಾನವೇ ನಮ್ಮ ಮೊದಲ ಗ್ರಂಥ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ’ ಎಂದು ಬರೆದಿದ್ದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್ ಪಠಾಣ್ ಸರಿಯಾದ ಟ್ವೀಟ್ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಅಮಿತ್ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ. ಭಾರತದಲ್ಲಿ ಸಂವಿಧಾನವೇ ಮೊದಲಾಗಬೇಕೆ ಹೊರತು, ಧರ್ಮ ಗ್ರಂಥವಲ್ಲ. ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್ ಬೌಲ್ಡ್ ಆಗಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.

  • ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    ನವದೆಹಲಿ: ಭಾರತದ ಮಾಜಿ ಬೌಲರ್‌ಗಳಾದ ಇರ್ಫಾನ್‌ ಪಠಾಣ್‌ ಮತ್ತು ಅಮಿತ್‌ ಮಿಶ್ರಾ ಅವರು ಭಾರತದ ಬಗ್ಗೆ ಮಾಡಿದ ಟ್ವೀಟ್‌ಗಳು ಈಗ ಟ್ರೆಂಡಿಂಗ್‌ ಆಗಿದೆ.

    ಇಂದು ಬೆಳಗ್ಗೆ 5:13ಕ್ಕೆ ಮಾಜಿ ವೇಗದ ಬೌಲರ್‌ ಇರ್ಫಾನ್‌ ಪಠಾಣ್‌ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ….. ಎಂದು ಬರೆದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

    ಈ ಟ್ವೀಟ್‌ಗೆ ತಿರುಗೇಟು ಎಂಬಂತೆ ಮಾಜಿ ಬಲಗೈ ಲೆಗ್‌ ಸ್ಪಿನ್ನರ್‌ ಅಮಿತ್‌ ಮಿಶ್ರಾ, ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ…ನಮ್ಮ ಸಂವಿಧಾನವೇ ನಮ್ಮ ಮೊದಲ ಪುಸ್ತಕ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ ಎಂದು ಬರೆದು ತಿರುಗೇಟು ನೀಡಿದ್ದಾರೆ.

    ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆ ಆಗುತ್ತಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್‌ ಪಠಾಣ್‌ ಸರಿಯಾದ ಟ್ವೀಟ್‌ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಇನ್ನು ಕೆಲವರು ಅಮಿತ್‌ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ.ಭಾರತದಲ್ಲಿ ಸಂವಿಧಾನ ಪುಸ್ತಕವೇ ಮೊದಲು ಹೊರತು ಧರ್ಮ ಗ್ರಂಥವಲ್ಲ.  ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್‌ ಬೌಲ್ಡ್‌ ಆಗಿದ್ದಾರೆ ಎಂದು ಟ್ರೋಲ್‌ ಮಾಡುತ್ತಿದ್ದಾರೆ.

  • ಪತ್ನಿಯ ಬ್ಲರ್ ಫೋಟೋ ಟ್ರೋಲ್ – ಇರ್ಫಾನ್ ಪಠಾಣ್ ಕಿಡಿ

    ಪತ್ನಿಯ ಬ್ಲರ್ ಫೋಟೋ ಟ್ರೋಲ್ – ಇರ್ಫಾನ್ ಪಠಾಣ್ ಕಿಡಿ

    – ನಾನು ಆಕೆಯ ಜೊತೆಗಾರನೇ ಹೊರತು ಮಾಲೀಕನಲ್ಲ

    ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಪತ್ನಿಯ ಬ್ಲರ್ ಫೋಟೋ ಟ್ರೋಲ್ ಮಾಡಿದವರಿಗೆ ಖಡಕ್ ತಿರುಗೇಟು ನೀಡಿದ್ದಾರೆ. ನಾನು ಆಕೆಯ ಜೀವನ ಸಂಗಾತಿಯೇ ಹೊರತು ಮಾಲೀಕನಲ್ಲ ಎಂದು ಟ್ರೋಲ್ ಗಳಿಗೆ ಟಕ್ಕರ್ ನೀಡಿದ್ದಾರೆ.

    ಇರ್ಫಾನ್ ಪಠಾಣ್ ಫ್ಯಾಮಿಲಿ ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಎಲ್ಲ ಫೋಟೋಗಳಲ್ಲಿ ಇರ್ಫಾನ್ ಪತ್ನಿ ಸಫ್ ಬುರ್ಖಾ ಧರಿಸಿರುತ್ತಾರೆ ಅಥವಾ ಕೈಗಳಿಂದ ಮುಖ ಮುಚ್ಚಿಕೊಂಡಿರುತ್ತಾರೆ. ಆದ್ರೆ ಪುತ್ರ ಇಮ್ರಾನ್ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ಫೋಟೋದಲ್ಲಿ ಸಫಾ ಅವರ ಮುಖವನ್ನ ಬ್ಲರ್ ಮಾಡಲಾಗಿದೆ. ಬ್ಲರ್ ಆಗಿರುವ ಫೋಟೋ ಕಂಡ ನೆಟ್ಟಿಗರು ಟ್ರೋಲ್ ಮಾಡಲಾರಂಭಿಸಿದ್ದರು.

    ಟ್ರೋಲ್ ಕುರಿತು ಪ್ರತಿಕ್ರಿಯಿಸಿರುವ ಇರ್ಫಾನ್, ಈ ಫೋಟೋವನ್ನ ನನ್ನ ಕ್ವೀನ್ (ಪತ್ನಿ) ಪುತ್ರನ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಪತ್ನಿಯೇ ತಮ್ಮ ಫೋಟೋ ಬ್ಲರ್ ಮಾಡಿ ಶೇರ್ ಮಾಡಿದ್ದಾರೆ. ನಾನು ಅವರ ಜೀವನ ಸಂಗಾತಿಯೇ ಹೊರತು, ಮಾಲೀಕನಲ್ಲ ಎಂದು ಬರೆದು ಅವಳ ಜೀವನ, ಅವಳ ಆಯ್ಕೆ ಎಂದು ಹ್ಯಾಶ್ ಟ್ಯಾಗ್ ಸಹ ಬಳಸಿದ್ದಾರೆ.

    2016ರಲ್ಲಿ ಇರ್ಫಾನ್ ಮತ್ತು ಸಫಾ ಮೆಕ್ಕಾದಲ್ಲಿ ಮದುವೆಯಾಗಿದ್ದರು. ಸಫಾ ಅವರ ತಂದೆ ಮಿರ್ಜಾ ಫಾರೂಖ್ ಸೌದಿ ಅರೇಬಿಯಾದ ಉದ್ಯಮಿಯಾಗಿದ್ದು, ಸಫಾ ತಮ್ಮ ಬಾಲ್ಯವನ್ನ ದುಬೈನಲ್ಲಿ ಕಳೆದಿದ್ದಾರೆ. ಸಫಾ ಈಸ್ಟ್ ಏಷ್ಯಾದ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು.

  • ಚರ್ಚೆಗೆ ಕಾರಣವಾಯ್ತು ಧೋನಿ ವಯಸ್ಸಿನ ಕುರಿತ ಇರ್ಫಾನ್ ಪಠಾಣ್ ಕಾಮೆಂಟ್

    ಚರ್ಚೆಗೆ ಕಾರಣವಾಯ್ತು ಧೋನಿ ವಯಸ್ಸಿನ ಕುರಿತ ಇರ್ಫಾನ್ ಪಠಾಣ್ ಕಾಮೆಂಟ್

    ಮುಂಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಧೋನಿ ಹೆಚ್ಚು ಅನುಭವ ಹೊಂದಿರುವ ಆಟಗಾರನಾಗಿದ್ದು, 39ನೇ ವಯಸ್ಸಿನಲ್ಲೂ ಭರ್ಜರಿಯಾಗಿ ರನ್ ಓಡುವ ಮೂಲಕ ತಮ್ಮ ಫಿಟ್ನೆಸ್ ಸಾಬೀತು ಪಡಿಸುತ್ತಿದ್ದಾರೆ. ಇದರ ನಡುವೆಯೇ ಟೀಂ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್ ಮಾಡಿರುವ ಒಂದು ಟ್ವೀಟ್ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ.

    ಕಳೆದ ಪಂದ್ಯದಲ್ಲಿ ಧೋನಿ 36 ಎಸೆತಗಳಲ್ಲಿ 4 ಬೌಂಡರಿ, ಸಿಕ್ಸರ್ ನೆರವಿನಿಂದ 47 ರನ್ ಗಳಿಸಿದ್ದರು. ಧೋನಿ ಕ್ರಿಸ್‍ನಲ್ಲಿದ್ದರೂ ಚೆನ್ನೈ ತಂಡ 7 ರನ್ ಅಂತರದಲ್ಲಿ ಸೋಲುಂಡಿತ್ತು. ಇದಾದ ಬಳಿಕ ಧೋನಿ ವಯಸ್ಸಿನ ಕುರಿತು ಚರ್ಚೆ ಜೋರಾಗಿತ್ತು. ಈ ನಡುವೆ ಟ್ವೀಟ್ ಮಾಡಿರುವ ಇರ್ಫಾನ್ ಪಠಾಣ್, ಕೆಲವರಿಗೆ ವಯಸ್ಸು ಕೇವಲ ನಂಬರ್ ಅಷ್ಟೇ. ಆದರೆ ಮತ್ತೊಬ್ಬರಿಗೆ ತಂಡದಿಂದ ತೆಗೆದು ಹಾಕಲು ಕಾರಣವಾಗುತ್ತದೆ ಎಂದು ಧೋನಿ ಹೆಸರನ್ನು ಪ್ರಸ್ತಾಪ ಮಾಡದೇ ಪರೋಕ್ಷವಾಗಿ ಕಾಮೆಂಟ್ ಮಾಡಿದ್ದಾರೆ.

    ಸದ್ಯ ಇರ್ಫಾನ್ ಮಾಡಿರುವ ಕಾಮೆಂಟ್ ಟಾಕ್ ಆಫ್ ದಿ ಟೌನ್ ಆಗಿ ಮಾರ್ಪಾಡಾಗಿದ್ದು, ಹಲವರು ಪರ-ವಿರೋಧ ಪ್ರತಿಕ್ರಿಯೆಗಳನ್ನು ನೀಡಿ ರೀ ಟ್ವೀಟ್ ಮಾಡುತ್ತಿದ್ದಾರೆ. ಟೀಂ ಇಂಡಿಯಾ ತಂಡದಲ್ಲಿ ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ಯುವರಾಜ್ ಸಿಂಗ್, ಯೂಸಫ್ ಪಠಾಣ್, ಇರ್ಫಾನ್ ಪಠಾಣ್ ಸೇರಿದಂತೆ ಹಲವು ಆಟಗಾರನನ್ನು ವಯಸ್ಸಿನ ಕಾರಣದಿಂದಲೇ ಕೈಬಿಡಲಾಗಿತ್ತು. ಹಲವು ಆಟಗಾರರಿಗೆ ವಿದಾಯ ಪಂದ್ಯ ಆಡಲು ಸಹ ಅವಕಾಶ ನೀಡದೆ ಕ್ರಿಕೆಟ್‍ನಿಂದ ದೂರ ಮಾಡಲಾಗಿತ್ತು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಐಪಿಎಲ್ 2020ರ ಆವೃತ್ತಿಯಲ್ಲಿ ಹೈದರಾಬಾದ್ ವಿರುದ್ಧ ಸೋಲುಂಡ ಚೆನ್ನ ತಂಡ 6 ವರ್ಷಗಳ ಬಳಿಕ ಸಸತವಾಗಿ ಮೂರು ಪಂದ್ಯಗಳನ್ನು ಸೋಲುಂಡ ಕೆಟ್ಟ ದಾಖಲೆ ಬರೆದಿದೆ. ಟೂರ್ನಿಯ ಅಂಕಪಟ್ಟಿಯಲ್ಲಿ 2 ಅಂಕಗಳೊಂದಿಗೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಚೆನ್ನೈ ವಿರುದ್ಧ ಗೆಲುವು ಪಡೆದ ಹೈದರಾಬಾದ್ ತಂಡ 4 ಅಂಕಗಳೊಂದಿಗೆ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ.

  • ಟೀಂ ಇಂಡಿಯಾ Vs ಸೆಂಡಾಫ್ ಲಭಿಸದ ಮಾಜಿ ಕ್ರಿಕೆಟಿಗರ ನಡ್ವೆ ಮ್ಯಾಚ್: ಇರ್ಫಾನ್ ಪಠಾಣ್

    ಟೀಂ ಇಂಡಿಯಾ Vs ಸೆಂಡಾಫ್ ಲಭಿಸದ ಮಾಜಿ ಕ್ರಿಕೆಟಿಗರ ನಡ್ವೆ ಮ್ಯಾಚ್: ಇರ್ಫಾನ್ ಪಠಾಣ್

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ ಏಕಾಏಕಿ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಹಲವು ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಎಂಎಸ್ ಧೋನಿಗೆ ವಿದಾಯ ಪಂದ್ಯ ನಡೆಸಿಲ್ಲ ಎಂಬ ಚರ್ಚೆ ಜೋರಾಗಿತ್ತು. ಇದರ ನಡುವೆಯೇ ಇರ್ಫಾನ್ ಪಠಾಣ್ ಅಭಿಮಾನಿಗಳ ಬೇಸರವನ್ನು ದೂರ ಮಾಡಲು ಸಲಹೆಯೊಂದನ್ನು ಮುಂದಿಟ್ಟಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಇರ್ಫಾನ್ ಟೀಂ ಇಂಡಿಯಾ ಆಟಗಾರರು ವರ್ಸಸ್ ಮಾಜಿ ಆಟಗಾರರು ನಡುವೆ ಪಂದ್ಯ ನಡೆಸಲು ಸಲಹೆ ನೀಡಿದ್ದಾರೆ. ಕಳೆದ ಒಂದು ದಶಕದ ಅವಧಿಯಲ್ಲಿ 11 ಮಂದಿ ಕ್ರಿಕೆಟಿಗರು ವಿದಾಯದ ಪಂದ್ಯ ಲಭಿಸದೆ ನಿವೃತ್ತಿಯಾಗಿದ್ದಾರೆ. ಕಳೆದ ವರ್ಷ ಯುವರಾಜ್ ಸಿಂಗ್ ನಿವೃತ್ತಿ ಘೋಷಿಸಿದ್ದರು. ಅದಕ್ಕೂ ಮುನ್ನ ಗೌತಮ್ ಗಂಭೀರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ 11 ಮಂದಿ ವಿದಾಯ ಪಂದ್ಯ ಲಭಿಸಲಿಲ್ಲ ಎಂದು ಇರ್ಫಾನ್ ಫಠಾಣ್ ಅಭಿಪ್ರಾಯಪಟ್ಟಿದ್ದು, ಈ ಆಟಗಾರರಿಗೆ ವಿದಾಯ ಪಂದ್ಯ ಏರ್ಪಡಿಸಬೇಕಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

    ಇರ್ಫಾನ್ ಪಠಾಣ್ ನೀಡಿರುವ ಪಟ್ಟಿಯಲ್ಲಿ 2013ರಲ್ಲಿ ನಿವೃತ್ತಿ ಘೋಷಣೆ ಮಾಡಿದ್ದ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಥಾನ ನೀಡಿಲ್ಲ. ಸಚಿನ್ ನಿವೃತ್ತಿ ವೇಳೆ ಬಿಸಿಸಿಐ ಸುಮಾರು ಕೋಟಿ ರೂ. ಖರ್ಚು ಮಾಡಿ ವಿದಾಯ ಪಂದ್ಯ ಏರ್ಪಡಿಸಿತ್ತು.

    ಇರ್ಫಾನ್ ಪಠಾಣ್ ಪ್ರಕಟಿಸಿದ ತಂಡ: ಗೌತಮ್ ಗಂಭೀರ್, ವಿರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಯುವರಾಜ್ ಸಿಂಗ್, ಸುರೇಶ್ ರೈನಾ, ಧೋನಿ, ಇರ್ಫಾನ್ ಪಠಾಣ್, ಅಜಿತ್ ಅಗರ್ಕರ್, ಜಹೀರ್ ಖಾನ್, ಪ್ರಗ್ಯಾನ್ ಓಜಾ.

  • ಏನಾಗ್ತಿದೆ, ಒಬ್ಬರ ಹಿಂದೆ ಮತ್ತೊಬ್ಬರು ಹೋಗ್ತಿದ್ದಾರೆ- ಸುಶಾಂತ್ ನಿಧನಕ್ಕೆ ವೀರು ಸಂತಾಪ

    ಏನಾಗ್ತಿದೆ, ಒಬ್ಬರ ಹಿಂದೆ ಮತ್ತೊಬ್ಬರು ಹೋಗ್ತಿದ್ದಾರೆ- ಸುಶಾಂತ್ ನಿಧನಕ್ಕೆ ವೀರು ಸಂತಾಪ

    ನವದೆಹಲಿ: ಬಾಲಿವುಡ್ ಪ್ರತಿಭಾವಂತ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವೀರೆಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್, ಇಫ್ರಾನ್ ಪಠಾಣ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

    ವೀರೆಂದ್ರ ಸೆಹ್ವಾಗ್ ಟ್ವೀಟ್ ಮಾಡಿ, ಜೀವನ ತುಂಬಾ ಚಿಕ್ಕದಾಗುತ್ತಿದೆ. ಏನಾಗುತ್ತಿದೆ ಎನ್ನುವುದೇ ಅರ್ಥವಾಗುತ್ತಿಲ್ಲ. ಒಬ್ಬರ ಹಿಂದೆ ಮತ್ತೊಬ್ಬರು ಸಾಗುತ್ತಲೇ ಇದ್ದಾರೆ. ಸುಶಾಂತ್ ಸಿಂಗ್ ಒಳ್ಳೆಯ ವ್ಯಕ್ತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಚಿನ್ ತೆಂಡೂಲ್ಕರ್, ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಗಿದೆ. ಅವರು ಯುವ ಮತ್ತು ಪ್ರತಿಭಾವಂತ ನಟ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನೋವವನ್ನು ಭರಿಸುವ ಶಕ್ತಿ ಸಿಗಲಿ. ಸುಶಾಂತ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.

    ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಇಫ್ರಾನ್ ಪಠಾಣ್ ಟ್ವೀಟ್ ಮಾಡಿ, ಸುಶಾಂತ್ ಸಿಂಗ್ ರಾಜ್‍ಪುತ್ ಅವರ ಆತ್ಮಹತ್ಯೆಯ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ ಮತ್ತು ದುಃಖವಾಗಿದೆ. ಸುಶಾಂತ್ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಇತ್ತೀಚೆಗೆ ತಾಜ್ ಹೋಟೆಲ್ ಜಿಮ್‍ನಲ್ಲಿ ಕೊನೆಯದಾಗಿ ಸುಶಾಂತ್ ಜೊತೆಗೆ ಮಾತನಾಡಿದ್ದೆ. ಕೇದಾರನಾಥದಲ್ಲಿ ಅವರ ಕೆಲಸಕ್ಕಾಗಿ ನಾನು ಅವರನ್ನು ಹೊಗಳಿದ್ದೆ. ಆಗ ಅವರು ಪ್ರೀತಿಯ ಸಹೋದರ  ‘ಚಿಚೋರ್’ ಸಿನಿಮಾವನ್ನು ನೋಡಿ (ಭಾಯ್ ಪ್ಲೀಸ್ ಡು ವಾಚ್ ಚಿಚೋರ್) ನೀವು ಅದನ್ನು ಇಷ್ಟಪಡುತ್ತೀರಿ ಎಂದಿದ್ದರು ಎಂದು ಇಫ್ರಾನ್ ಪಠಾಣ್ ನೆನಿದ್ದಾರೆ.

    ಇದೇ ವರ್ಷ ಮಾರ್ಚ್ ನಲ್ಲಿ ಖ್ಯಾತ ಹಾಸ್ಯ ನಟ ಸಂತಾನಂ ಸ್ನೇಹಿತ ನಟ, ವೈದ್ಯ ಸೇತುರಾಮನ್ (36) ಹೃದಯಾಘಾತದಿಂದ ಮೃತಪಟ್ಟಿದ್ದರು. ಬಾಲಿವುಡ್‍ನ ಹೆಮ್ಮೆಯ ನಟ ಇರ್ಫಾನ್ ಖಾನ್ (53) ಬೆನ್ನಲ್ಲೇ ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ (36) ಸಾವನ್ನಪ್ಪಿದ್ದರು. ಈಗ ಸುಶಾಂತ್ ಸಿಂಗ್ ಕೇವಲ 34 ವರ್ಷ ಮೃತಪಟ್ಟಿರುವುದು ಸಿನಿಮಾ ರಂಗಕ್ಕೆ ಆಘಾತವನ್ನುಂಟು ಮಾಡಿದೆ.

  • ನಿಜಕ್ಕೂ ನನಗೆ ಶಾಕ್ ಆಗಿದೆ – ಸುಶಾಂತ್ ಸಾವಿಗೆ ಇರ್ಫಾನ್ ಪಠಾಣ್ ಕಂಬನಿ

    ನಿಜಕ್ಕೂ ನನಗೆ ಶಾಕ್ ಆಗಿದೆ – ಸುಶಾಂತ್ ಸಾವಿಗೆ ಇರ್ಫಾನ್ ಪಠಾಣ್ ಕಂಬನಿ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಸುದ್ದಿ ಕೇಳಿ ನನಗೆ ಶಾಕ್ ಆಗಿದೆ ಎಂದು ಟೀಂ ಇಂಡಿಯಾ ಆಲ್‍ರೌಂಡರ್ ಇರ್ಫಾನ್ ಪಠಾಣ್ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ.

    ಇರ್ಫಾನ್ ಪಠಾಣ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಬಗ್ಗೆ ಕೇಳಿ ನನಗೆ ತುಂಬಾ ಶಾಕ್ ಆಗಿದೆ. ಜೊತೆಗೆ ತುಂಬಾ ನೋವಾಗುತ್ತಿದೆ” ಎಂದು ಸುಶಾಂತ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿ, “ನಾನು ಅವರೊಂದಿಗೆ ತಾಜ್ ಹೋಟೆಲ್ ಜಿಮ್‍ನಲ್ಲಿ ಕೊನೆಯದಾಗಿ ಚಾಟ್ ಮಾಡಿದ್ದೆ. ಆಗ ಕೇದಾರನಾಥದಲ್ಲಿ ಅವರು ಮಾಡಿದ ಕೆಲಸಕ್ಕೆ ನಾನು ಅವರನ್ನು ಹೊಗಳಿದ್ದೆ. ಆಗ ಅವರು ‘ಭಾಯ್ ದಯವಿಟ್ಟು ಚಿಚೋರ್ ನೋಡಿ, ನೀವು ಇಷ್ಟಪಡುತ್ತೀರಿ ಎಂದು ಹೇಳಿದ್ದರು” ಎಂದು ಕೊನೆಯ ಬಾರಿ ಸುಶಾಂತ್ ಜೊತೆ ಚಾಟ್ ಮಾಡಿದ್ದ ಬಗ್ಗೆ ಹೇಳಿಕೊಂಡಿದ್ದಾರೆ.

    ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.