Tag: Ishan Kishan

  • ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

    ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

    ಲಕ್ನೋ: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿರುದ್ಧ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಆರ್‌ಸಿಬಿ 3ನೇ ಸ್ಥಾನಕ್ಕೆ ಕುಸಿದಿದೆ. 12 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 17 ಅಂಕ ಗಳಿಸಿರುವ ಪಂಜಾಬ್‌ ಕಿಂಗ್ಸ್‌ 2ನೇ ಸ್ಥಾನಕ್ಕೆ ಜಿಗಿದಿದೆ.

    ಗೆಲುವಿಗೆ 232 ರನ್‌ಗಳ ಬೃಹತ್‌ ಗುರಿ ಪಡೆದಿದ್ದ ಆರ್‌ಸಿಬಿ ಆರಂಭದಿಂದಲೇ ಕೌಂಟರ್‌ ಅಟ್ಯಾಕ್‌ ಮಾಡಲು ಶುರು ಮಾಡಿತ್ತು. ವಿರಾಟ್‌ ಕೊಹ್ಲಿ-ಫಿಲ್‌ ಸಾಲ್ಟ್‌ (Virat Kohli-Phil Salt) ಅವರ ಆರಂಭಿಕ ಜೊತೆಯಾಟದಿಂದ 43 ಎಸೆತಗಳಲ್ಲಿ 80 ರನ್‌ ತಂಡಕ್ಕೆ ಸೇರ್ಪಡೆಯಾಯಿತು. ಈ ಬೆನ್ನಲ್ಲೇ ಮಯಾಂಕ್‌ ಅಗರ್ವಾಲ್‌ ಫಿಲ್‌ ಸಾಲ್ಟ್‌ ಜೋಡಿ 2ನೇ ವಿಕೆಟಿಗೆ 22 ಎಸೆತಗಳಲ್ಲಿ 40 ರನ್‌ ಕಲೆಹಾಕಿತ್ತು. 4ನೇ ವಿಕೆಟಿಗೆ ಜಿತೇಶ್‌ ಶರ್ಮಾ, ರಜತ್‌ ಪಾಟಿದಾರ್‌ ಜೋಡಿ 26 ಎಸೆತಗಳಲ್ಲಿ 44 ರನ್‌ ಕಲೆಹಾಕಿತ್ತು.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಒಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿದ್ದ ಹೊರತಾಗಿಯೂ ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಆರ್‌ಸಿಬಿ 14 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿತ್ತು. ಇದರಿಂದ ಗೆಲುವು ಸುಲಭ ಎಂದೇ ಭಾವಿಸಲಾಗಿತ್ತು. ಆದ್ರೆ 15-16ನೇ ಓವರ್‌ ದುಬಾರಿಯಾಯಿತು. 15ನೇ ಓವರ್‌ ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ ನಿತೀಶ್‌ ಕುಮಾರ್‌ ರೆಡ್ಡಿ ಕೇವಲ 4 ರನ್‌ ಬಿಟ್ಟುಕೊಟ್ಟರು. 16ನೇ ಓವರ್‌ನಲ್ಲಿ ಎಶಾನ್ ಮಾಲಿಂಗ 7 ರನ್‌ ಬಿಟ್ಟುಕೊಟ್ಟು 2 ಪ್ರಮುಖ ವಿಕೆಟ್‌ ಕಿತ್ತರು. ಮುಂದಿನ 17, 18ನೇ ಓವರ್‌ನಲ್ಲೂ ಆರ್‌ಸಿಬಿ ತಲಾ ಒಂದೊಂದು ಪ್ರಮುಖ ವಿಕೆಟ್‌ ಕಳೆದುಕೊಂಡಿತು. ಹೀಗಾಗಿ ಗೆಲುವಿನ ಓಟದಲ್ಲಿ ಮುನ್ನುಗ್ಗುತ್ತಿದ್ದ ಆರ್‌ಸಿಬಿ ಸೋಲಿನ ರುಚಿ ಕಂಡಿತು.

    ಆರ್‌ಸಿಬಿ ಪರ ಫಿಲ್‌ ಸಾಲ್ಟ್‌ 62 ರನ್‌ (32 ಎಸೆತ, 5 ಸಿಕ್ಸರ್‌, 4 ಬೌಂಡರಿ), ವಿರಾಟ್‌ ಕೊಹ್ಲಿ 43 ರನ್‌ (25 ಎಸೆತ, 1 ಸಿಕ್ಸರ್‌, 7 ಬೌಂಡರಿ), ರಜತ್‌ ಪಾಟಿದಾರ್‌ 18 ರನ್‌, ಜಿತೇಶ್‌ ಶರ್ಮಾ 24 ರನ್‌, ಮಯಾಂಕ್‌ ಅಗರ್ವಾಲ್‌ 11 ರನ್‌, ಟಿಮ್‌ ಡೇವಿಡ್‌ 1 ರನ್‌, ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌ ತಲಾ 3 ರನ್‌, ಕೃನಾಲ್‌ ಪಾಂಡ್ಯ 8 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತ್ತು. ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್ ಶರ್ಮಾ 17 ಎಸೆತಗಳಲ್ಲಿ 34 ರನ್ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್ ಹೆಡ್ ಕೂಡ 10 ಎಸೆತಗಳಲ್ಲಿ 17 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು.

    3ನೇ ವಿಕೆಟ್‌ಗೆ ಇಶಾನ್ ಕಿಶನ್ ಮತ್ತು ಕ್ಲಾಸೆನ್ ಜೋಡಿ 27 ಎಸೆತಗಳಲ್ಲಿ 48 ರನ್, 4ನೇ ವಿಕೆಟಿಗೆ ಕಿಶನ್-ಅನಿಕೇತ್ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಇಶಾನ್ ಕಿಶನ್ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಹೈದರಾಬಾದ್ ಪರ 195.83 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇಶಾನ್ ಕಿಶನ್ ಅಜೇಯ 94 ರನ್ (48 ಎಸೆತ, 5 ಸಿಕ್ಸರ್, 7 ಬೌಂಡರಿ) ಚಚ್ಚಿದ್ರೆ , ಅಭಿಷೇಕ್ ಶರ್ಮಾ 34 ರನ್, ಟ್ರಾವಿಸ್ ಹೆಡ್ 17 ರನ್, ಹೆನ್ರಿಕ್ ಕ್ಲಾಸೆನ್ 24 ರನ್, ಅನಿಕೇತ್ ವರ್ಮಾ 26 ರನ್, ಅಭಿನವ್ ಮನೋಹರ್ 12 ರನ್, ಪ್ಯಾಟ್ ಕಮ್ಮಿನ್ಸ್ ಅಜೇಯ 13 ರನ್ ಗಳಿಸಿದರು.

    ಇನ್ನೂ ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್ 2 ವಿಕೆಟ್ ಕಿತ್ತರೆ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

  • ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

    ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

    ಲಕ್ನೋ: ಆರ್‌ಸಿಬಿ (Royal Challengers Bengaluru) ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆಟಗಾರ ಅಭಿಷೇಕ್‌ ಶರ್ಮಾ (Abhishek Sharma) ಎಂದಿನಂತೆ ಸ್ಫೋಟಕ ಪ್ರದರ್ಶನವನ್ನೇ ನೀಡಿದರು. ಈ ವೇಳೆ ಅಭಿ ಹೊಡೆದ ಸಿಕ್ಸ್‌ವೊಂದು ಪ್ರಮೋಷನ್‌ಗಾಗಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗೆ ಬಡಿದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

    ಆರಂಭಿಕನಾಗಿ ಕಣಕ್ಕಿಳಿದಿದ್ದ ಶರ್ಮಾ ಸಿಕ್ಸರ್‌, ಬೌಂಡರಿ ಬಾರಿಸಲು ಮುಂದಾಗಿದ್ದರು. 17 ಎಸೆತಗಳಲ್ಲಿ 34 ರನ್‌ ಸಿಡಿಸಿದರು. ಅಭಿಷೇಕ್ ಶರ್ಮಾ ಸಿಡಿಸಿದ ಒಂದು ಸಿಕ್ಸರ್ ಕ್ರೀಡಾಂಗಣದಲ್ಲಿ ನಿಲ್ಲಿಸಿದ್ದ ಟಾಟಾ ಕಾರಿನ ಗಾಜನ್ನು ಒಡೆದಿದೆ. ಇದರಿಂದ ಐಪಿಎಲ್‌ ಪ್ರಾಯೋಜಕ ಸಂಸ್ಥೆಗೆ 5 ಲಕ್ಷ ರೂ. ನಷ್ಟವಾಗಿದೆ. ಇದನ್ನೂ ಓದಿ: ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಇನ್ನಿಂಗ್ಸ್‌ನ 2ನೇ ಓವರ್‌ನಲ್ಲಿ ಆರ್‌ಸಿಬಿ ತಂಡದ ಇಂದಿನ ಪಂದ್ಯದ ನಾಯಕ ಜೀತೇಶ್ ಶರ್ಮಾ ಅವರು ಭುವನೇಶ್ವರ್ ಕುಮಾರ್ ಅವರನ್ನು ಬೌಲಿಂಗ್ ಮಾಡಲು ಕರೆತಂದಾಗ ಈ ಘಟನೆ ಸಂಭವಿಸಿತು.

    ಆ ಓವರ್‌ನ 5ನೇ ಎಸೆತದಲ್ಲಿ ಅಭಿಷೇಕ್ ಮಿಡ್‌ವಿಕೆಟ್ ಕಡೆಗೆ ಭರ್ಜರಿ ಸಿಕ್ಸರ್ ಬಾರಿಸಿದರು. ಚೆಂಡು ನೇರವಾಗಿ ಐಪಿಎಲ್ 2025 ಲೀಗ್‌ನ ಪ್ರಾಯೋಜಕರಾದ ಟಾಟಾ ಅವರ ಕಾರಿನ ಮೇಲೆ ಬಿದ್ದಿತು. ಇದರಿಂದಾಗಿ ಕಾರಿನ ಮುಂಭಾಗದ ಗಾಜು ಬಿರುಕು ಬಿಟ್ಟಿದೆ. ಇದನ್ನೂ ಓದಿ: ಮ್ಯಾಥ್ಯೂ ಫೋರ್ಡ್ ಸ್ಫೋಟಕ ಫಿಫ್ಟಿ – ಎಬಿಡಿ ವಿಶ್ವದಾಖಲೆ ಸರಿಗಟ್ಟಿದ ವಿಂಡೀಸ್‌ ಬ್ಯಾಟರ್

    5 ಲಕ್ಷ ರೂ. ದೇಣಿಗೆ ನೀಡಲಿದೆ
    ಐಪಿಎಲ್ 2025 ಪ್ರಾರಂಭವಾಗುವ ಮೊದಲು, ಪಂದ್ಯದ ಸಮಯದಲ್ಲಿ ಬ್ಯಾಟ್ಸ್‌ಮನ್ ಕಾರಿನ ಮೇಲೆ ನೇರವಾಗಿ ಶಾಟ್ ಹೊಡೆದರೆ ಹಣವನ್ನು ದೇಣಿಗೆ ನೀಡುವುದಾಗಿ ಟಾಟಾ ಘೋಷಿಸಿತ್ತು. ಒಂದು ವೇಳೆ ಚೆಂಡು ಕಾರಿಗೆ ತಗುಲಿದರೆ, ಟಾಟಾ ಸಂಸ್ಥೆಯು 5 ಲಕ್ಷ ರೂ. ಗಳನ್ನು ದೇಣಿಗೆ ನೀಡುತ್ತದೆ. ಈ ಮೊತ್ತವನ್ನು ಗ್ರಾಮೀಣ ಕ್ರಿಕೆಟ್ ಅಭಿವೃದ್ಧಿಗಾಗಿ ಟಾಟಾ ಕಾರ್ ದೇಣಿಗೆ ನೀಡಲಿದೆ.

    ಇನ್ನೂ ಆರ್‌ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಸಿಡಿಸಿದೆ.

  • ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಇಶಾನ್‌ ಕಿಶನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ

    ಲಕ್ನೋ: ಇಶಾನ್‌ ಕಿಶನ್‌ (Ishan Kishan) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಗಳಿಸಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ 232 ರನ್‌ಗಳ ಕಠಿಣ ಗುರಿ ನೀಡಿದೆ.

    ಲಕ್ನೋದ ಏಕನಾ ಕ್ರೀಡಾಂಗಣದಲ್ಲಿಂದು ಜಿತೇಶ್‌ ಶರ್ಮಾ (Jitesh Sharma) ನಾಯಕತ್ವದಲ್ಲಿ ಕಣಕ್ಕಿಳಿದ ಆರ್‌ಸಿಬಿ (RCB) ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಹೈದರಾಬಾದ್‌ ತಂಡಕ್ಕೆ ಬಿಟ್ಟುಕೊಟ್ಟಿತು.

    ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್‌ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್‌ ಶರ್ಮಾ 17 ಎಸೆತಗಳಲ್ಲಿ 34 ರನ್‌ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್‌ ಹೆಡ್‌ ಕೂಡ 10 ಎಸೆತಗಳಲ್ಲಿ 17 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

    3ನೇ ವಿಕೆಟ್‌ಗೆ ಇಶಾನ್‌ ಕಿಶನ್‌ ಮತ್ತು ಕ್ಲಾಸೆನ್‌ ಜೋಡಿ 27 ಎಸೆತಗಳಲ್ಲಿ 48 ರನ್‌, 4ನೇ ವಿಕೆಟಿಗೆ ಕಿಶನ್‌-ಅನಿಕೇತ್‌ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್‌ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್‌ ಕಮ್ಮಿನ್ಸ್‌ ಹಾಗೂ ಇಶಾನ್‌ ಕಿಶನ್‌ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್‌ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

    ಹೈದರಾಬಾದ್‌ ಪರ 195.83 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಇಶಾನ್‌ ಕಿಶನ್‌ ಅಜೇಯ 94 ರನ್‌ (48 ಎಸೆತ, 5 ಸಿಕ್ಸರ್‌, 7 ಬೌಂಡರಿ) ಚಚ್ಚಿದ್ರೆ ,‌ ಅಭಿಷೇಕ್‌ ಶರ್ಮಾ 34 ರನ್‌, ಟ್ರಾವಿಸ್‌ ಹೆಡ್‌ 17 ರನ್‌, ಹೆನ್ರಿಕ್‌ ಕ್ಲಾಸೆನ್‌ 24 ರನ್‌, ಅನಿಕೇತ್‌ ವರ್ಮಾ 26 ರನ್‌, ಅಭಿನವ್‌ ಮನೋಹರ್‌ 12 ರನ್‌, ಪ್ಯಾಟ್‌ ಕಮ್ಮಿನ್ಸ್‌ ಅಜೇಯ 13 ರನ್‌ ಗಳಿಸಿದರು. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಇನ್ನೂ ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್‌ 2 ವಿಕೆಟ್‌ ಕಿತ್ತರೆ, ಭುವನೇಶ್ವರ್‌ ಕುಮಾರ್‌, ಲುಂಗಿ ಎನ್‌ಗಿಡಿ, ಸುಯಶ್‌ ಶರ್ಮಾ, ಕೃನಾಲ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಫ್ಯಾಂಟಸಿ ಕ್ರಿಕೆಟ್‌ನಲ್ಲಿ ಗೆದ್ದ ಅಭಿಮಾನಿಗೆ ಲ್ಯಾಂಬೊರ್ಗಿನಿ ಕಾರು ಗಿಫ್ಟ್‌ ಕೊಟ್ಟ ರೋಹಿತ್‌ ಶರ್ಮಾ

  • ತವರಿನಲ್ಲಿ ಮತ್ತೆ ಸೋತ ಚೆನ್ನೈ – ಸನ್‌ ರೈಸರ್ಸ್‌ಗೆ ಚೆಪಾಕ್‌ನಲ್ಲಿ ಐತಿಹಾಸಿಕ ಜಯ!

    ತವರಿನಲ್ಲಿ ಮತ್ತೆ ಸೋತ ಚೆನ್ನೈ – ಸನ್‌ ರೈಸರ್ಸ್‌ಗೆ ಚೆಪಾಕ್‌ನಲ್ಲಿ ಐತಿಹಾಸಿಕ ಜಯ!

    – ಸಿಎಸ್‌ಕೆ ಬಹುತೇಕ ಪ್ಲೇ ಆಫ್‌ನಿಂದ ಹೊರಕ್ಕೆ

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಮತ್ತೆ ಹೀನಾಯ ಸೋಲು ಕಂಡಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಬಹುತೇಕ ಈ ಆವೃತ್ತಿಯಲ್ಲಿ ಪ್ಲೇ ಆಫ್‌ ಪ್ರವೇಶಿಸುವ ಅವಕಾಶ ಕಳೆದುಕೊಂಡಿದೆ. ಆದ್ರೆ ಸನ್‌ ರೈಸರ್ಸ್‌ ಹೈದರಾಬಾದ್‌ ಇದೇ ಮೊದಲ ಬಾರಿಗೆ ಸಿಎಸ್‌ಕೆ ವಿರುದ್ಧ ಚೆಪಾಕ್‌ ಮೈದಾನದಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 19.5 ಓವರ್‌ಗಳಲ್ಲಿ 154 ರನ್‌ಗಳಿಗೆ ಆಲೌಟ್‌ ಆಯಿತು. 155 ರನ್‌ಗಳ ಸವಾಲಿನ ಮೊತ್ತ ಗುರಿ ಬೆನ್ನಟ್ಟಿದ ಸನ್‌ ರೈಸರ್ಸ್‌ ಹೈದರಾಬಾದ್‌‌ 18.4 ಓವರ್‌ಗಳಲ್ಲೇ ಗುರಿ ಪೂರೈಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿತ ಕಂಡಿತು.

    ಸಿಎಸ್‌ಕೆ ಪರ ದೇವಾಲ್‌ ಬ್ರೇವಿಸ್‌ ಸ್ಫೋಟಕ 42 ರನ್‌, ಆಯುಷ್‌ ಮಾತ್ರೆ 30 ರನ್‌, ಜಡೇಜಾ 21 ರನ್‌, ದೀಪಕ್‌ ಹೂಡ 22 ರನ್‌ ಹೊರತುಪಡಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ನೆಲಕಚ್ಚಿದರು.

    ಹೈದರಾಬಾದ್‌ ಪರ ಹರ್ಷಲ್‌ ಪಟೇಲ್‌ ಪ್ರಮುಖ 4 ವಿಕೆಟ್‌ ಕಿತ್ತರೆ, ಪ್ಯಾಟ್ ಕಮ್ಮಿನ್ಸ್‌, ಜಯದೇವ್‌ ಉನದ್ಕಟ್‌ 2 ವಿಕೆಟ್‌ ಹಾಗೂ ಶಮಿ, ಕಮಿಂಡು ಮೆಂಡೀಸ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇನ್ನೂ 155 ರನ್‌ಗಳ ಗುರಿ ಬೆನ್ನಟ್ಟಿದ ಹೈದರಾಬಾದ್‌ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಬಳಿಕ ಇಶಾನ್‌ ಕಿಶನ್‌ ತಾಳ್ಮೆಯ ಆಟ, ಕೊನೆಯಲ್ಲಿ ಕಮಿಂಡು ಮೆಂಡೀಸ್‌, ನಿತೀಶ್‌ ರೆಡ್ಡಿ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನಿಂದ ತಂಡಕ್ಕೆ ಗೆಲುವು ಒಲಿದು ಬಂದಿತು.

    ಹೈದರಾಬಾದ್‌ ಪರ ಟ್ರಾವಿಸ್‌ ಹೆಡ್‌ 19ರನ್‌, ಇಶಾನ್‌ ಕಿಶನ್‌ 44 ರನ್‌, ಅನಿಕೇತ್‌ 19 ರನ್‌, ಕಮಿಂಡು ಮೆಂಡೀಸ್‌ 32 ರನ್‌, ನಿತೀಶ್‌ ರೆಡ್ಡಿ 19ರನ್‌ ಗಳಿಸಿದ್ರೆ ವೈಡ್‌, ನೋಬಾಲ್‌, ಬೈಸ್‌ನಿಂದಲೇ 15 ರನ್‌ ತಂಡಕ್ಕೆ ಸೇರ್ಪಡೆ ಆಯ್ತು.

  • SRH Vs MI – ಇಶಾನ್ ಕಿಶನ್ ವಿವಾದಿತ `ಔಟ್’ – ಮ್ಯಾಚ್ ಫಿಕ್ಸಿಂಗ್ ಚರ್ಚೆ!

    SRH Vs MI – ಇಶಾನ್ ಕಿಶನ್ ವಿವಾದಿತ `ಔಟ್’ – ಮ್ಯಾಚ್ ಫಿಕ್ಸಿಂಗ್ ಚರ್ಚೆ!

    ಹೈದರಾಬಾದ್‌: ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಬುಧವಾರ ನಡೆದ ಪಂದ್ಯ ಫಿಕ್ಸ್ ಆಗಿತ್ತೇ? ಎಂಬ ಚರ್ಚೆ ಆರಂಭವಾಗಿದೆ.

    ಸನ್ ರೈಸರ್ಸ್ ತಂಡದ ಬ್ಯಾಟರ್ ಇಶಾನ್ ಕಿಶನ್ ಅವರು ಅಂಪೈರ್‌ ತೀರ್ಮಾನವನ್ನು ಪ್ರಶ್ನಿಸದೇ (Ishan Kishan Out Controversy) ಪೆವಿಲಿಯನ್‌ನತ್ತ ಯಾಕೆ ತೆರಳಿದರು ಎಂಬುದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಬ್ಯಾಟರ್, ಬೌಲರ್ ಮತ್ತು ಅಂಪೈರ್ ಗಳ ವರ್ತನೆ ನೋಡಿ ನೆಟ್ಟಿಗರು ಇದು ಮ್ಯಾಚ್ ಫಿಕ್ಸಿಂಗ್ ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. ಇದನ್ನೂ ಓದಿ: ರೋಹಿತ್‌, ಬೌಲ್ಟ್‌ ಆರ್ಭಟಕ್ಕೆ ʻಸನ್‌ʼ ಬರ್ನ್‌; 7 ವಿಕೆಟ್‌ಗಳ ಭರ್ಜರಿ ಜಯ, ಮೂರಕ್ಕೇರಿದ ಮುಂಬೈ, 4ನೇ ಸ್ಥಾನಕ್ಕೆ ಕುಸಿದ RCB

    ನಡೆದಿದ್ದೇನು?
    ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಟ್ರಾವಿಸ್ ಹೆಡ್ ಅವರು 2ನೇ ಓವರ್ ನ2ನೇ ಎಸೆತದಲ್ಲಿ ಡಕೌಟ್ ಆದರು. ಬಳಿಕ ಬಂದ ಇಶಾನ್ ಕಿಶನ್ ಅವರು ಕೇವಲ 1 ರನ್ ಗಳಿಸಿದ್ದರು, ಆಗ ವೇಗಿ ದೀಪಕ್ ಚಾಹರ್ ಎಸೆದ 3ನೇ ಓವರಿನ ಮೊದಲನೇ ಎಸೆತದಲ್ಲೇ ಔಟ್ ಆಗಿದ್ದೇನೆಂದು ತಾನಾಗಿಯೇ ಪೆವಿಲಿಯನ್‌ಗೆ ಮರಳಿದ್ದರು.

    ಚಾಹರ್ ಎಸೆದ ಚೆಂಡು ಲೆಗ್ ಸೈಡ್ ನಲ್ಲಿ ಇಶಾನ್ ಕಿಶನ್ ಅವರ ತಲೆಯ ಸಮೀಪದಿಂದ ತೆರಳಿ ವಿಕೆಟ್ ಕೀಪರ್ ಕೈ ಸೇರಿತ್ತು. ಈ ವೇಳೆ, ನಾಯಕ ಹಾರ್ದಿಕ್ ಪಾಂಡ್ಯನನ್ನು ಹೊರತುಪಡಿಸಿದರೆ ಬೇರಾರೂ ಅಪೀಲ್ ಮಾಡಿರಲಿಲ್ಲ. ಬೌಲರ್ ಸಹ ಗೊಂದಲದಲ್ಲಿದ್ದರು. ಆದರೆ ಅಂಪೈರ್ ಮಾತ್ರ ಒವರ್‌ನ ಮೊದಲ ಬೌನ್ಸರ್ ಎಂದು ಭುಜದ ಮೇಲೆ ಕೈ ತೋರಿಸಿದವರು ತಕ್ಷಣವೇ ಬದಲಾಯಿಸಿ ತಲೆ ಮೇಲೆ ಕೈಯೆತ್ತಿ ಔಟ್ ಎಂದು ತೀರ್ಪು ನೀಡಿದ್ದು ಪ್ರೇಕ್ಷಕರ ಗೊಂದಲಕ್ಕೆ ಕಾರಣವಾಗಿತ್ತು. ಆಶ್ಚರ್ಯವೆಂದರೆ ಇಶಾನ್ ಕಿಶನ್ ಅವರಾಗಿಯೇ ಪೆವಿಲಿಯನ್ ನತ್ತ ಹೆಜ್ಜೆ ಹಾಕಲು ಶುರು ಮಾಡಿದ ಮೇಲೆ ಅಂಪೈರ್ ಔಟ್ ಎಂದು ತೀರ್ಪು ನೀಡಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಅಲ್ಟ್ರಾ ಎಡ್ಜ್ ಟೆಕ್ನಾಲಜಿಯಲ್ಲಿ ಅವರು ನಾಟೌಟ್ ಎಂಬುದು ಸಾಬೀತಾಗಿದೆ.

    ಇದೀಗ ಕೆಲವರು ಇದು ಮ್ಯಾಚ್ ಫಿಕ್ಸಿಂಗ್ ಎಂದು ಆರೋಪಿಸಿದ್ದಾರೆ. ಮತ್ತೆ ಕೆಲವರು ಇಶಾನ್ ಕಿಶನ್ ಅವರು ತಮ್ಮ ಹಿಂದಿನ ತಂಡವಾಗಿರುವ ಮುಂಬೈ ಇಂಡಿಯನ್ಸ್ ಋಣವನ್ನು ಈ ಮೂಲಕ ತೀರಿಸಿದ್ದಾರೆ ಎಂದು ಗೇಲಿ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್‌, ಪೋರೆಲ್‌ ಅಮೋಘ ಫಿಫ್ಟಿ – ಡೆಲ್ಲಿ ಕ್ಯಾಪಿಟಲ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

  • ಶೀಘ್ರದಲ್ಲೇ ಬಿಸಿಸಿಐ ಕೇಂದ್ರ ಗುತ್ತಿಗೆ – ಮತ್ತೆ ಶ್ರೇಯಸ್, ಇಶಾನ್ ಕಿಶನ್ ಕಂಬ್ಯಾಕ್?

    ಶೀಘ್ರದಲ್ಲೇ ಬಿಸಿಸಿಐ ಕೇಂದ್ರ ಗುತ್ತಿಗೆ – ಮತ್ತೆ ಶ್ರೇಯಸ್, ಇಶಾನ್ ಕಿಶನ್ ಕಂಬ್ಯಾಕ್?

    ಮುಂಬೈ: ಬಿಸಿಸಿಐ (BCCI) 2024-25ನೇ ಸಾಲಿನ ಕೇಂದ್ರ ಗುತ್ತಿಗೆಯನ್ನು ಸದ್ಯದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಈ ಹಿಂದೆ ಗುತ್ತಿಗೆಯಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ (Shreyas Iyer)  ಹಾಗೂ ಇಶಾನ್ ಕಿಶನ್ (Ishan Kishan) ಮತ್ತೆ ಮರಳುವ ಸಾಧ್ಯತೆಯಿದೆ.

    ಮಾ.29 ರಂದು ಗುವಾಹಟಿಯಲ್ಲಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ (Devajit Saikia) ಅವರು ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ (Ajit Agarkar) ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಇದನ್ನೂ ಓದಿ:ಇಂದು ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್ ಫೈಟ್‌ – ಚೆನ್ನೈ ಭದ್ರಕೋಟೆ ಛಿದ್ರ ಮಾಡಲು ಆರ್‌ಸಿಬಿ ಪ್ಲ್ಯಾನ್‌

    ಬಿಸಿಸಿಐ ಮೂರು ದಿನಗಳ ಹಿಂದೆಯಷ್ಟೇ ಭಾರತ ಮಹಿಳಾ ಆಟಗಾರರ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ. ಶೀಘ್ರದಲ್ಲೇ ಪುರುಷ ಕ್ರಿಕೆಟಿಗರ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಕಳೆದ ವರ್ಷ 2023-24 ಸಾಲಿನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಹೊರಗುಳಿದಿದ್ದರು.

    2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ಗೆದ್ದ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ಅವರ ರನ್‌ಗಳ ಕೊಡುಗೆ ಅಪಾರವಾಗಿತ್ತು. ಒಟ್ಟು 5 ಪಂದ್ಯಗಳಲ್ಲಿ 48.60 ರನ್‌ರೇಟ್‌ನಲ್ಲಿ 243 ರನ್ ಗಳಿಸಿದ್ದರು. ಹೀಗಾಗಿ ಶ್ರೇಯಸ್ ತಮ್ಮ ಗುತ್ತಿಗೆಯನ್ನು ಮರಳಿ ಪಡೆಯುವ ಸಾಧ್ಯತೆಯಿದೆ. ಇನ್ನೂ ಮಾ.22 ರಂದು ಪ್ರಾರಂಭವಾದ ಐಪಿಎಲ್ ಟೂರ್ನಿಯಲ್ಲಿ ಇಶಾನ್ ಕಿಶನ್ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಪರ ಆಡುತ್ತಿದ್ದು, ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ 47 ಎಸೆತಗಳಲ್ಲಿ ಅಜೇಯರಾಗಿ 106 ರನ್‌ಗಳಿಸಿದರು. ಆದರೆ ದೇಶೀಯ ಕ್ರಿಕೆಟ್ ಆಡದ ಹಿನ್ನೆಲೆಯಲ್ಲಿ ಗುತ್ತಿಗೆ ಕಳೆದುಕೊಂಡಿದ್ದ ಇಶಾನ್ ಕಿಶನ್ ಮರಳುತ್ತಾರಾ ಎನ್ನುವುದು ಇನ್ನೂ ಖಚಿತವಾಗಿಲ್ಲ.

    ರೋಹಿತ್, ಜಡ್ಡು, ಕೊಹ್ಲಿ ಎ+ ಗ್ರೇಡ್‌ನಿಂದ ಔಟ್?
    ಇನ್ನೂ ಭಾರತ ಏಕದಿನ ಮತ್ತು ಟೆಸ್ಟ್ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಹಾಗೂ ಜಡೇಜಾ ಮೂವರು ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಬಿಸಿಸಿಐ ನಿಯಮಗಳ ಪ್ರಕಾರ ಟಿ20, ಟೆಸ್ಟ್, ಏಕದಿನ ಮೂರೂ ಮಾದರಿಯಲ್ಲಿ ಆಡುವ ಕ್ರಿಕೆಟಿಗ ಎ+ ದರ್ಜೆಯಲ್ಲಿರುತ್ತಾರೆ. ಯಾವುದೇ ಒಂದು ಮಾದರಿಯಲ್ಲಿರದಿದ್ದರೂ ಪ್ರಮುಖ ಕ್ರಿಕೆಟಿಗರಾಗಿದ್ದರೂ ಎ ದರ್ಜೆಗೆ ಇಳಿಯುತ್ತಾರೆ. ಈ ಹಿನ್ನೆಲೆ ಕೇಂದ್ರ ಗುತ್ತಿಗೆಯಲ್ಲಿ ಅತ್ಯುನ್ನತ ಎ+ ದರ್ಜೆಯಲ್ಲಿ ಉಳಿದುಕೊಳ್ಳುತ್ತಾರಾ ಎಂದು ಕೂತುಹಲಕ್ಕೆ ಕಾರಣವಾಗಿದೆ. ಜೊತೆಗೆ ಬಿಸಿಸಿಐ ಮೂಲವೊಂದು ಮೂವರನ್ನು ಜಸ್ಪ್ರೀತ್ ಬುಮ್ರಾ ಜೊತೆಗೆ ಅತ್ಯುನ್ನತ ದರ್ಜೆಯಲ್ಲಿ ಉಳಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದು, ಇಂಗ್ಲೆಂಡ್ (England) ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಭಾರತವನ್ನು ರೋಹಿತ್ ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ.

    ಕಳೆದ ಅಕ್ಟೋಬರ್‌ನಲ್ಲಿ ಭಾರತ ತಂಡಕ್ಕೆ ಯಶಸ್ವಿಯಾಗಿ ಮರಳಿದ್ದ ಹಾಗೂ ಕೇವಲ ಮೂರು ಪಂದ್ಯಗಳಲ್ಲಿ ಒಂಬತ್ತು ವಿಕೆಟ್ ಪಡೆದು 2025ರ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆಲ್ಲುವಲ್ಲಿ ಅದ್ಭುತ ಪಾತ್ರ ವಹಿಸಿದ್ದ “ಮಿಸ್ಟರಿ ಸ್ಪಿನ್ನರ್” ವರುಣ್ ಚಕ್ರವರ್ತಿ (Varun Chakravarthy)  ತಮ್ಮ ಚೊಚ್ಚಲ ಬಿಸಿಸಿಐ ಒಪ್ಪಂದವನ್ನು ಪಡೆಯಲು ಸಜ್ಜಾಗಿದ್ದಾರೆ.ಇದನ್ನೂ ಓದಿ:ಪೂರನ್‌ ಬೆಂಕಿ ಆಟಕ್ಕೆ ಸನ್‌ರೈಸರ್ಸ್‌ ಬರ್ನ್‌ – ಲಕ್ನೋಗೆ 5 ವಿಕೆಟ್‌ಗಳ ಜಯ

  • BCCIನಿಂದ ನಿರ್ಲಕ್ಷ್ಯಕ್ಕೀಡಾಗಿದ್ದ ಇಶಾನ್‌ ಕಿಶನ್‌ನಿಂದ ಬೌಂಡರಿ, ಸಿಕ್ಸರ್‌ ಸುರಿಮಳೆ – SRH ಪರ 45 ಬಾಲ್‌ಗೆ ಸೆಂಚುರಿ

    BCCIನಿಂದ ನಿರ್ಲಕ್ಷ್ಯಕ್ಕೀಡಾಗಿದ್ದ ಇಶಾನ್‌ ಕಿಶನ್‌ನಿಂದ ಬೌಂಡರಿ, ಸಿಕ್ಸರ್‌ ಸುರಿಮಳೆ – SRH ಪರ 45 ಬಾಲ್‌ಗೆ ಸೆಂಚುರಿ

    ಹೈದರಾಬಾದ್: ಭಾನುವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಐಪಿಎಲ್‌ 2025ರ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಪರ ಶತಕ ಸಿಡಿಸಿ ಇಶಾನ್‌ ಕಿಶನ್‌ ಮಿಂಚಿದ್ದಾರೆ. 2025ರ ಐಪಿಎಲ್‌ ಟೂರ್ನಿಯಲ್ಲಿ ಇದು ಮೊದಲ ಶತಕ. ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಕಿಶನ್‌ ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾರೆ.

    ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ 47 ಎಸೆತಗಳಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್‌ಗಳೊಂದಿಗೆ ಅಜೇಯ 106 ರನ್‌ ಗಳಿಸಿದ್ದು ವಿಶೇಷವಾಗಿತ್ತು. ಮೆಗಾ ಹರಾಜಿನಲ್ಲಿ 11.25 ಕೋಟಿ ರೂ.ಗೆ ಖರೀದಿಸಿದ ನಂತರ ಎಸ್‌ಆರ್‌ಹೆಚ್‌ ಪರ ಕಿಶನ್‌ ಆಡಿದ ಮೊದಲ ಪಂದ್ಯ ಇದು. ತಮ್ಮ ಫಸ್ಟ್‌ ಮ್ಯಾಚ್‌ನಲ್ಲೇ ಅಬ್ಬರಿಸಿದ್ದಾರೆ.

    ಸ್ವಲ್ಪ ಉದಾಸೀನ ಮನೋಭಾವದ ಕಿಶನ್‌ಗೆ ಬುದ್ದಿ ಕಲಿಸಲೆಂದು ಆಗಿನ ಟೀಂ ಇಂಡಿಯಾದ ಕೋಚ್‌ ಆಗಿದ್ದ ರಾಹುಲ್‌ ದ್ರಾವಿಡ್‌, ಒಂದಷ್ಟು ದೇಶೀಯ ಪಂದ್ಯಗಳನ್ನು ಆಡಿ ಬರುವಂತೆ ಹೇಳಿದ್ದರು. ಆದರೆ, ಕಿಶನ್‌ ಅದಕ್ಕೂ ತಲೆ ಕೆಡಿಸಿಕೊಳ್ಳಲಿಲ್ಲ. ಪರಿಣಾಮವಾಗಿ 2024ರಲ್ಲಿ ಬಿಸಿಸಿಐ ವಾರ್ಷಿಕ ಒಪ್ಪಂದದ ಪಟ್ಟಿಯಿಂದಲೂ ಕಿಶನ್‌ ಅವರನ್ನು ಹೊರಗಿಡಲಾಯಿತು.

    ಇಂದು ಎಸ್‌ಆರ್‌ಹೆಚ್‌ ಪರ ಕೀಪರ್‌ ಬ್ಯಾಟರ್‌ ನೀಡಿದ ಪ್ರದರ್ಶನವು ಬಿಸಿಸಿಐ ಟಕ್ಕರ್‌ ಕೊಟ್ಟಂತಿದೆ. ಉತ್ತಮ ಫಾರ್ಮ್‌ನಲ್ಲಿದ್ದಾಗಲೇ ಆಟಗಾರರನ್ನು ಬಿಸಿಸಿಐ ಹೊರಗಿಟ್ಟಿತ್ತು. ಐಪಿಎಲ್‌ ಇತಿಹಾಸದಲ್ಲೇ ಇದು ಎರಡನೇ ಅತಿ ಹೆಚ್ಚು ರನ್‌ ಗಳಿಕೆಯಾಗಿದೆ. ಈ ಹಿಂದೆ ಆರ್‌ಸಿಬಿ ವಿರುದ್ಧ ಕೇವಲ 3 ವಿಕೆಟ್‌ ನಷ್ಟಕ್ಕೆ ಹೈದರಾಬಾದ್‌ 287 ರನ್‌ ಬಾರಿಸಿತ್ತು.

  • ಕೊನೆಯ ಪಂದ್ಯ ಗೆದ್ದರೂ ಲಕ್ನೋಗಿಲ್ಲ ಪ್ಲೇಆಫ್‌ ಅವಕಾಶ

    ಕೊನೆಯ ಪಂದ್ಯ ಗೆದ್ದರೂ ಲಕ್ನೋಗಿಲ್ಲ ಪ್ಲೇಆಫ್‌ ಅವಕಾಶ

    ಮುಂಬೈ: ವಾಂಖೇಡೆ ಮೈದಾನದಲ್ಲಿ ಶುಕ್ರವಾರ ನಡೆದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 18 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯವನ್ನು ಗೆದ್ದರೂ ನೆಟ್‌ ರನ್‌ ರೆಟ್‌ (Net Run Rate) ಕಡಿಮೆ ಇರುವ ಕಾರಣ ಲಕ್ನೋಗೆ ಪ್ಲೇಆಫ್‌ ಪ್ರವೇಶಿಸುವ ಅವಕಾಶ ತಪ್ಪಿದೆ.

    ಮೊದಲು ಬ್ಯಾಟ್‌ ಮಾಡಿದ ಲಕ್ನೋ 6 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

     

     

    ಮುಂಬೈ ಪರ ರೋಹಿತ್‌ ಶರ್ಮಾ 68 ರನ್‌ (38 ಎಸೆತ, 10 ಬೌಂಡರಿ, 3 ಸಿಕ್ಸರ್‌) ಕೊನೆಯಲ್ಲಿ ನಮನ್‌ ಧಿರ್‌ ಔಟಾಗದೇ 62 ರನ್‌(28 ಎಸೆತ, 4 ಬೌಂಡರಿ, 5 ಸಿಕ್ಸರ್‌) ಹೊಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 6 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿತ್ತು. ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನಿಕೋಲಸ್‌ ಪೂರನ್‌ ಹಾಗೂ ಕೆ.ಎಲ್‌ ರಾಹುಲ್‌ ಬ್ಯಾಟಿಂಗ್‌ ಬಲ ತುಂಬಿದರು.

     

     

     

    ನಿಕೋಲಸ್‌ ಪೂರನ್‌ ಕೇವಲ 29 ಎಸೆತಗಳಲ್ಲಿ 75 ರನ್‌ (8 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಇದರೊಂದಿಗೆ ಸುಧಾರಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕೆ.ಎಲ್‌ ರಾಹುಲ್‌ 41 ಎಸೆತಗಳಲ್ಲಿ 55 ರನ್‌ (3 ಸಿಕ್ಸರ್‌, 3 ಬೌಂಡರಿ) ಬಾರಿಸಿದರು. 4ನೇ ವಿಕೆಟ್‌ಗೆ ಸ್ಫೋಟಕ ಪ್ರದರ್ಶನ ನೀಡಿದ ಈ ಜೋಡಿ 44 ಎಸೆತಗಳಲ್ಲಿ ಬರೋಬ್ಬರಿ 109 ರನ್‌ಗಳ ಜೊತೆಯಾಟ ನೀಡಿತ್ತು.

    ಇದರೊಂದಿಗೆ ಮಾರ್ಕಸ್‌ ಸ್ಟೋಯ್ನಿಸ್‌ 28 ರನ್‌, ದೀಪಕ್‌ ಹೂಡ 11 ರನ್‌, ಆಯುಷ್‌ ಬದೋನಿ 22 ರನ್‌ ಹಾಗೂ ಕೃನಾಲ್‌ ಪಾಂಡ್ಯ 12 ರನ್‌ಗಳ ಕೊಡುಗೆ ನೀಡಿದ ಪರಿಣಾಮ ಲಕ್ನೋ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

     

     

     

    ಲಕ್ನೀ ಸೂಪರ್‌ ಜೈಂಟ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ನುವಾನ್ ತುಷಾರ ಹಾಗೂ ಪಿಯೂಷ್‌ ಚಾವ್ಲಾ ತಲಾ 3 ವಿಕೆಟ್‌ ಕಿತ್ತರು. ಚೆನ್ನೈ ತಂಡ 14 ಅಂಕ ಗಳಿಸಿದ್ದರೆ ಆರ್‌ಸಿಬಿ 12 ಅಂಕ ಗಳಿಸಿದೆ. ಹೀಗಿದ್ದರೂ ಈ ಎರಡು ತಂಡಗಳ ರನ್‌ ರೇಟ್‌ ಲಕ್ನೋ ಮತ್ತು ಡೆಲ್ಲಿ ತಂಡಕ್ಕಿಂತ ಉತ್ತಮವಾಗಿದೆ.

    ಪ್ಲೇ ಆಫ್‌ ಅವಕಾಶ ಯಾಕಿಲ್ಲ?
    ಈಗಾಗಲೇ ಕೋಲ್ಕತ್ತಾ 19 ಅಂಕ, ರಾಜಸ್ಥಾನ 16, ಹೈದರಾಬಾದ್‌ 15 ಅಂಕ ಗಳಿಸಿ ಈಗಾಗಲೇ ಪ್ಲೇ ಆಫ್‌ ಪ್ರವೇಶಿಸಿದೆ. ಶನಿವಾರ ಬೆಂಗಳೂರಿನಲ್ಲಿ ನಡೆಯುವ ಪಂದ್ಯದಲ್ಲಿ ಚೆನ್ನೈ (Chennai) ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಆರ್‌ಸಿಬಿಗೂ (RCB) ಪ್ಲೇ ಆಫ್‌ಗೆ ಹೋಗುವ ಅವಕಾಶವಿದೆ. ಆರ್‌ಸಿಬಿ 18 ರನ್‌ನಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಂತೆ ಗೆದ್ದರೆ ಮಾತ್ರ ಪ್ಲೇ ಆಫ್‌ ಪ್ರವೇಶಿಸಲಿದೆ.

     

  • ಅಯ್ಯರ್‌, ಕಿಶನ್‌ ಕಾಂಟ್ರವರ್ಸಿ; ಸೋಶಿಯಲ್‌ ಮೀಡಿಯಾದಲ್ಲೂ ಟ್ರೆಂಡ್‌ – ಬಿಸಿಸಿಐ ಪರ ಪಾಕ್‌ ಮಾಜಿ ಕ್ರಿಕೆಟಿಗ ಬ್ಯಾಟಿಂಗ್‌

    ಅಯ್ಯರ್‌, ಕಿಶನ್‌ ಕಾಂಟ್ರವರ್ಸಿ; ಸೋಶಿಯಲ್‌ ಮೀಡಿಯಾದಲ್ಲೂ ಟ್ರೆಂಡ್‌ – ಬಿಸಿಸಿಐ ಪರ ಪಾಕ್‌ ಮಾಜಿ ಕ್ರಿಕೆಟಿಗ ಬ್ಯಾಟಿಂಗ್‌

    – ಆಟಗಾರರನ್ನ ಶಿಕ್ಷಿಸಲು ಇಂತಹ ಕ್ರಮದ ಅಗತ್ಯವಿದೆ – ಕಮ್ರಾನ್‌ ಅಕ್ಮಲ್‌

    ಇಸ್ಲಾಮಾಬಾದ್‌: ಸದ್ಯ ಕ್ರಿಕೆಟ್‌ ಲೋಕದಲ್ಲಿ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ (hreyas Iyer And Ishan Kishan) ಸುದ್ದಿಯಲ್ಲಿದ್ದಾರೆ. ಬಿಸಿಸಿಐ ಇತ್ತೀಚೆಗೆ ಪ್ರಕಟಿಸಿದ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಇಶಾನ್‌ ಕಿಶನ್‌ ಹಾಗೂ ಶ್ರೇಯಸ್‌ ಅಯ್ಯರ್‌ ಅವರಿಗೆ ಗೇಟ್‌ಪಾಸ್ ‌ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗುತ್ತಿಗೆ ಪಟ್ಟಿ ಪ್ರಕಟಿಸಿದ ನಂತರ ಬಿಸಿಸಿಐ ತೆಗೆದುಕೊಂಡ ನಿರ್ಧಾರದ ಬಗ್ಗೆ ಪರ ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿವೆ.

    ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ (Kamran Akmal) ಬಿಸಿಸಿಐ ಬೆಂಬಲಿಸಿ ಮಾತನಾಡಿದ್ದಾರೆ. ಪಾಕಿಸ್ತಾನದ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಕ್ರಿಕೆಟ್‌ ಮಂಡಳಿ ಆದೇಶಗಳನ್ನು ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಆಟಗಾರರನ್ನು ಶಿಕ್ಷಿಸಲು ಇಂತಹ ಕ್ರಮದ ಅಗತ್ಯವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್‌ ನಾಯಕತ್ವಕ್ಕೆ ಮೆಚ್ಚುಗೆ

    ಇಶಾನ್‌ ಕಿಶನ್‌ ಮತ್ತು ಅಯ್ಯರ್‌ ಅವರನ್ನು ಕೇಂದ್ರ ಒಪ್ಪಂದದಿಂದ ಬಿಸಿಸಿಐ (BCCI) ಕೈಬಿಟ್ಟ ನಿರ್ಧಾರ ಸರಿಯಾಗಿದೆ. ಯಾವೊಬ್ಬ ಆಟಗಾರನೂ ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಲು ಕಾರಣವಾದ ಆಟಕ್ಕೆ ಬೆಲೆ ಕೊಡದೇ ಇದ್ದರೆ, ಅದು ಇತರರಿಗೆ ಏನು ಸಂದೇಶ ನೀಡುತ್ತದೆ ಹೇಳಿ? ಮುಂದೆ ಆಗುವ ದೊಡ್ಡ ಹಾನಿಯನ್ನು ತಡೆಯಲು ಬಿಸಿಸಿಐ ಈಗಲೇ ಕ್ರಮ ತೆಗೆದುಕೊಂಡಿದ್ದು ಉತ್ತಮ. ಇಲ್ಲದಿದ್ದರೆ ಭವಿಷ್ಯದ ಆಟಗಾರರೂ ಈ ರೀತಿ ಮಾಡೋದಕ್ಕೆ ಹಿಂದೆ-ಮುಂದೆ ಯೋಚಿಸಲ್ಲ. ದೇಶಕ್ಕಾಗಿ ಆಡುವ ಆಟಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.

    ರಣಜಿಯಲ್ಲೂ ಅಯ್ಯರ್‌ ಫ್ಲಾಪ್‌ ‌ಪ್ರದರ್ಶನ:
    ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ತಂಡದಿಂದ ಹೊರಗುಳಿದ ಶ್ರೇಯಸ್‌ ಅಯ್ಯರ್‌ ಸದ್ಯ ತಮಿಳುನಾಡು ವಿರುದ್ಧ ನಡೆಯುತ್ತಿರುವ ರಣಜಿ ಕ್ವಾರ್ಟರ್‌ಫೈನಲ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಅಯ್ಯರ್‌ ಫ್ಲಾಪ್‌ ಪ್ರದರ್ಶನ ನೀಡಿದ್ದಾರೆ. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಯ್ಯರ್‌ ಕೇವಲ 8 ಎಸೆತಗಳಲ್ಲಿ 3 ರನ್‌ ಗಳಿಸಿ ಔಟಾಗಿದ್ದಾರೆ. ಇದನ್ನೂ ಓದಿ: PublicTV Explainer: ಬಿಸಿಸಿಐ ಕೇಂದ್ರ ಗುತ್ತಿಗೆ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಸಿಸಿಐ ಪರ ಕಪಿಲ್‌ ದೇವ್‌ ಬ್ಯಾಟಿಂಗ್:
    ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಕೂಡ ಕೇಂದ್ರಗುತ್ತಿಗೆ ವಿಚಾರದಲ್ಲಿ ಬಿಸಿಸಿಐ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೆಲೆಯೂರಿದ ನಂತರ ಆಟಗಾರರು ದೇಶಿ ಕ್ರಿಕೆಟ್‌ನಿಂದ ಹೊರಬರುತ್ತಿರುವುದು ನನಗೆ ಬೇಸರ ತಂದಿದೆ. ಕೆಲವು ಆಟಗಾರರು ನರಳಿದರೆ ನರಳಲಿ, ಆದರೆ ದೇಶಕ್ಕಿಂತ ಯಾವುದೂ ಮುಖ್ಯವಾಗಬಾರದು. ದೇಶಿ ಕ್ರಿಕೆಟ್‌ನ ಪ್ರಾಮುಖ್ಯತೆಯನ್ನು ಕಾಪಾಡಿಕೊಳ್ಳಲು ಬಿಸಿಸಿಐನ ಈ ಹೆಜ್ಜೆ ಅಗತ್ಯ ಎಂದು ಬಣ್ಣಿಸಿದ್ದಾರೆ.

    ಬಿಸಿಸಿಐ ಕಾಂಟ್ರ್ಯಾಕ್ಟ್ ಕಳೆದುಕೊಂಡ ಅಯ್ಯರ್-ಕಿಶನ್‌:
    ರಾಷ್ಟ್ರೀಯ ತಂಡದಲ್ಲಿ ಇಲ್ಲದಿದ್ದರೂ ಇಶಾನ್ ಕಿಶನ್ ರಣಜಿ ಟ್ರೋಫಿಯಿಂದ ಹೊರಗುಳಿದಿದ್ದಾರೆ ಮತ್ತು ಅವರ ತವರು ತಂಡ ಜಾರ್ಖಂಡ್‌ ಪರ ಆಡಲು ಮನಸು ಮಾಡಲಿಲ್ಲ. ರಣಜಿ ಟ್ರೋಫಿಯಲ್ಲಿ ಆಡುವ ಬದಲು ಇಶಾನ್, ಮಾರ್ಚ್ 22 ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ತಯಾರಿ ಆರಂಭಿಸಿದ್ದರು. ಇಶಾನ್ ಕಿಶನ್ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಇಶಾನ್ ಕಿಶನ್ ಅವರ ಈ ಧೋರಣೆಯಿಂದಾಗಿ ಕೇಂದ್ರ ಒಪ್ಪಂದದಿಂದ ಅವರನ್ನು ಹೊರ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಔಟ್‌ ಮಾಡುವ ಭರದಲ್ಲಿ ಇಶಾನ್‌ ಕಿಶನ್‌ ಯಡವಟ್ಟು – ಎಂಸಿಸಿ ಕಾನೂನು 27.3.1 & 27.3.2 ಹೇಳೋದೇನು?

    ಔಟ್‌ ಮಾಡುವ ಭರದಲ್ಲಿ ಇಶಾನ್‌ ಕಿಶನ್‌ ಯಡವಟ್ಟು – ಎಂಸಿಸಿ ಕಾನೂನು 27.3.1 & 27.3.2 ಹೇಳೋದೇನು?

    ಗುವಾಹಟಿ: ಕಳೆದೆರಡು ದಿನಗಳ ಹಿಂದೆ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ (Australia), ಟೀಂ ಇಂಡಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 1-2 ಗೆದ್ದು ಸರಣಿ ಕನಸು ಜೀವಂತವಾಗಿಸಿಕೊಂಡಿತು.

    ಪಂದ್ಯದ ವೇಳೆ ಇಶಾನ್‌ ಕಿಶನ್‌ (Ishan Kishan) ಮಾಡಿದ ಅದೊಂದು ಯಡವಟ್ಟು ಟೀಂ ಇಂಡಿಯಾ (Team India) ಸೋಲಿಗೆ ಕಾರಣವಾಯಿತು ಎಂಬ ವಾದಗಳು ಕೇಳಿಬರುತ್ತಿವೆ. 19ನೇ ಓವರ್‌ನ 4ನೇ ಎಸೆತದಲ್ಲಿ ಮ್ಯಾಥ್ಯೂವೇಡ್‌ ಸ್ಟಂಪ್‌ ಔಟ್‌ಗೆ ತುತ್ತಾದರೂ ಆ ಎಸೆತವನ್ನು ನೋಬಾಲ್‌ ಎಂದು ಘೋಷಿಸಲಾಯಿತು. ಇದಕ್ಕೆ ಕಾರಣವೇನು ಅಂಬುದರ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದರು. ಈ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಎಂಸಿಸಿ ಕಾನೂನು 27.3.1 & 27.3.2 ಏನು ಹೇಳುತ್ತೆ?
    ಮೇರಿಲ್ಬೋನ್ ಕ್ರಿಕೆಟ್ ಕ್ಲಬ್ (MCC) ಕಾನೂನು 27.3.1 ಪ್ರಕಾರ, ಕ್ರೀಸ್‌ನಲ್ಲಿರುವ ಸ್ಟ್ರೈಕರ್‌ ಚೆಂಡನ್ನು ಎದುರಿಸಲು ಬಂದಾಗ ಆತ ಬಾಲನ್ನು ತಾಗಿಸುವವರೆಗೆ ಅಥವಾ ಚೆಂಡು ಆತನನ್ನು ಹಾದುಹೋಗುವವರೆಗೆ ಸಂಪೂರ್ಣವಾಗಿ ಕೀಪರ್‌ ವಿಕೆಟ್‌ಗಳಿಂದ ಹಿಂಭಾಗ ಇರಬೇಕು. ಇಂದು ವೇಳೆ ಚೆಂಡು ಬ್ಯಾಟ್ಸ್‌ಮ್ಯಾನ್‌ನನ್ನ ಹಾದುಹೋಗುವ ಮುನ್ನವೇ ಕೀಪರ್‌ ವಿಕೆಟ್‌ ಮುಂದೆ ಬಂದು ಬಾಲ್‌ ಹಿಡಿದರೆ ಅದು ಉಲ್ಲಂಘನೆಯಾಗುತ್ತದೆ. ಆಗ 27.3.2 ಕಾನೂನಿನ ಪ್ರಕಾರ ಟಿವಿ ಅಂಪೈರ್‌ (3ನೇ ಅಂಪೈರ್‌) ಅದನ್ನು ನೋಬಾಲ್‌ ಎಂದು ತೀರ್ಮಾನಿಸಬಹುದು. ಇದನ್ನೂ ಓದಿ: ಕೊನೆಯ ಓವರ್‌ನಲ್ಲಿ 23 ರನ್‌, ಮ್ಯಾಕ್ಸಿ ಸ್ಫೋಟಕ ಶತಕ – ರನ್‌ ಮಳೆಯಲ್ಲಿ ಗೆದ್ದ ಆಸ್ಟ್ರೇಲಿಯಾ

    ಇಶಾಕ್‌ ಕಿಶನ್‌ ನಿಯಮ ಉಲ್ಲಂಘನೆ ಮಾಡಿದ್ದರಿಂದ ಆಸೀಸ್‌ಗೆ ಗೆಲುವಿನ ಹಾದಿಯೂ ಸುಲಭವಾಯಿತು. ಕೊನೆಯ 12 ಎಸೆತಗಳಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 43 ರನ್‌ ಬೇಕಿತ್ತು. 19ನೇ ಓವರ್‌ನಲ್ಲಿ ಅಕ್ಷರ್‌ ಪಟೇಲ್‌ ಎಸೆದ ಮೊದಲ ಮೂರು ಎಸೆತಗಳಲ್ಲಿ 4,2,4 ರನ್‌ ಬಂದಿತ್ತು. ಆದ್ರೆ 4ನೇ ಎಸೆತದಲ್ಲಿ ಮ್ಯಾಥ್ಯೂವೇಡ್‌ (Matthew Wade) ಸ್ಟಂಪ್‌ ಔಟ್‌ ಆದರು. ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ ಸ್ಟಂಪ್‌ ಔಟ್‌ ಮಾಡಿದ್ದರು. ಆದ್ರೆ ಕಿಶನ್‌ ಅವರ ಕೈಗವಸುಗಳು ಸ್ಟಂಪ್ಸ್‌ (ವಿಕೆಟ್‌) ಮುಂದೆ ಬಂದಿದ್ದರಿಂದ 4ನೇ ಎಸೆತವನ್ನು ನೋಬಾಲ್‌ ಎಂದು ಘೋಷಿಸಲಾಯಿತು. ನಂತರ ಫ್ರಿ ಹಿಟ್‌ ಎಸೆತವನ್ನು ವೇಡ್‌ ಸಿಕ್ಸರ್‌ಗೆ ಅಟ್ಟಿದ್ದರು. ನಂತರ ವೇಡ್ ಸಿಂಗಲ್‌ ರನ್‌ ತೆಗೆದರೆ ಕೊನೆಯ ಎಸೆತವನ್ನು ಇಶನ್‌ ಕಿಶನ್‌ ಹಿಡಿಯದ ಕಾರಣ ಬೈ ಮೂಲಕ 4 ರನ್‌ ಆಸೀಸ್‌ ಖಾತೆಗೆ ಸೇರಿತು. ಕೊನೆಯ ಓವರ್‌ನಲ್ಲಿ ಪ್ರಸಿದ್ಧ್‌ ಕೃಷ್ಣ ಎಸೆದ ಕೊನೆಯ ಓವರ್‌ನಲ್ಲಿ 21 ರನ್‌ ಚಚ್ಚಿಸಿಕೊಂಡಿದ್ದರಿಂದ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.

    2019ರಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜ್‌ಕೋಟ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ರಿಷಬ್‌ ಪಂತ್‌ ಸಹ ಇದೇ ಯಡವಟ್ಟು ಮಾಡಿದ್ದರು. ಲಿಟ್ಟನ್‌ ದಾಸ್‌ ಸಂಪೂರ್ಣ ಕ್ರೀಸ್‌ನಿಂದ ಹೊರಗಿದ್ದರು. ಆದ್ರೆ ರಿಷಬ್‌ ಪಂತ್‌ ಔಟ್‌ ಮಾಡುವ ಬರದಲ್ಲಿ ತಮ್ಮ ಕೈಯನ್ನು ವಿಕೆಟ್‌ ಮುಂದೆ ತಂದಿದ್ದರು. ಆದ್ದರಿಂದ ಅದನ್ನು ನೋಬಾಲ್‌ ಎಂದು ಘೋಷಿಸಲಾಗಿತ್ತು. ಇದನ್ನೂ ಓದಿ: ಆಸೀಸ್‌ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಗಾಯಕ್‌ವಾಡ್‌