Tag: Islamabad

  • ಇಮ್ರಾನ್ ಖಾನ್ ಅರೆಸ್ಟ್ ಮಾಡಲು ಮನೆಗೆ ಹೋದ ಪೊಲೀಸರು – ಎಷ್ಟು ಹುಡುಕಿದ್ರೂ ಪತ್ತೆಯಾಗ್ಲಿಲ್ಲ ಪಾಕ್ ಮಾಜಿ ಪಿಎಂ

    ಇಮ್ರಾನ್ ಖಾನ್ ಅರೆಸ್ಟ್ ಮಾಡಲು ಮನೆಗೆ ಹೋದ ಪೊಲೀಸರು – ಎಷ್ಟು ಹುಡುಕಿದ್ರೂ ಪತ್ತೆಯಾಗ್ಲಿಲ್ಲ ಪಾಕ್ ಮಾಜಿ ಪಿಎಂ

    ಇಸ್ಲಾಮಾಬಾದ್: ತೋಶಾಖಾನ (ರಾಜ್ಯ ಉಡುಗೊರೆ ಭಂಡಾರ) ಪ್ರಕರಣದಡಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಬಂಧಿಸಲು ಅವರ ಮನೆಗೆ ಪೊಲೀಸರು ಹೋಗಿ ಪೇಚಿಗೆ ಸಿಲುಕಿದ್ದಾರೆ. ಮನೆಯಲ್ಲಿ ಎಷ್ಟು ಹುಡುಕಿದರೂ ಇಮ್ರಾನ್ ಖಾನ್ ಸಿಗದೇ ಇರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಪಾಕ್ ಮಾಜಿ ಪ್ರಧಾನಿ ಬಂಧನದ ಹೈಡ್ರಾಮಾ ಭಾನುವಾರ ನಡೆಯಿತು.

     

    ಇಸ್ಲಾಮಾಬಾದ್ (Islamabad) ಪೊಲೀಸರು ಇಮ್ರಾನ್ ಖಾನ್ ಅವರನ್ನು ಬಂಧಿಸಲು ಅವರ ಮನೆಗೆ ತೆರಳಿದ ಸಂದರ್ಭ ಅನೇಕ ಪ್ರತಿಭಟನಾಕಾರರು ಅವರನ್ನು ತಡೆದರು. ಇಮ್ರಾನ್ ಖಾನ್ ಅವರನ್ನು ಬಂಧಿಸಿದರೆ ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಇಮ್ರಾನ್ ಖಾನ್ ಅವರು ಗಾಯಗೊಂಡ ಕಾರಣ ತೋಶಾಖಾನ (Toshakhana) ವಿಚಾರಣೆಗೆ ಹಾಜರಾಗಿರಲಿಲ್ಲ. ವಿಚಾರಣೆಗೆ ಗೈರಾದ ಕಾರಣ ಸೆಷನ್ಸ್ ನ್ಯಾಯಾಲದ ನ್ಯಾಯಾಧೀಶರು ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದರು. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿ ಗಂಗವ್ವಗೆ ಮನೆ ಕಟ್ಟಲು ಸಹಾಯ ಮಾಡಿದ ನಟ ನಾಗಾರ್ಜುನ

    ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಲುವಾಗಿ ಎಸ್‌ಪಿ (SP) ಅವರ ಕೊಠಡಿಗೆ ತೆರಳಿದಾಗ ಅವರು ಅಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇಮ್ರಾನ್ ಖಾನ್, ತೋಶಾಖಾನ ಪ್ರಕರಣದಲ್ಲಿ ಸಾರ್ವಜನಿಕ ವಿಚಾರಣೆಗಾಗಿ ತಮ್ಮ ಕಾರ್ಯಕರ್ತರ ತಂಡವು ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆಯಲಿದೆ. ನನ್ನ ವಿರುದ್ಧ ಇರುವ ಕೇಸ್‌ಗಳೆಲ್ಲವೂ ಸುಳ್ಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂಸೆಗೆ ಪ್ರಚೋದನೆ – ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

    ಏನಿದು ತೋಶಾಖಾನ ಪ್ರಕರಣ?
    ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರವಧಿಯಲ್ಲಿ ದುಬಾರಿ ಮೌಲ್ಯದ ನೆಕ್ಲೆಸ್ ಉಡುಗೊರೆಯಾಗಿ ಬಂದಿತ್ತು. ಆದರೆ ಅವರು ಅದನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡದೇ ವ್ಯಾಪಾರಿಯೊಬ್ಬರಿಗೆ 18 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ತನಿಖೆ ನಡೆಸುತ್ತಿದೆ. ಖಾನ್ ಉಡುಗೊರೆಯಾಗಿ ಪಡೆದ ನೆಕ್ಲೆಸ್ ಅನ್ನು ತೋಶಾಖಾನಾಕ್ಕೆ (ರಾಜ್ಯ ಉಡುಗೊರೆ ಭಂಡಾರ) ಕಳುಹಿಸಿಲ್ಲ. ಆದರೆ ಮಾಜಿ ವಿಶೇಷ ಸಹಾಯಕ ಜುಲ್ಫಿಕರ್ ಬುಖಾರಿಗೆ ನೀಡಿದ್ದರು. ಜುಲ್ಪಿಕರ್ ಅದನ್ನು ಲಾಹೋರ್‌ನ (Lahore) ಆಭರಣ ವ್ಯಾಪಾರಿಗೆ 18 ಕೋಟಿ ರೂ.ಗೆ ಮಾರಾಟ ಮಾಡಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ತಮಿಳಿನ ಈ ಹೀರೋಗೆ 100 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡ್ತಾರೆ ಕಮಲ್ ಹಾಸನ್

  • ಕಗ್ಗತ್ತಲಲ್ಲಿ ಪಾಕಿಸ್ತಾನ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ- ಲಕ್ಷಾಂತರ ಜನರಿಗೆ ತೊಂದರೆ

    ಕಗ್ಗತ್ತಲಲ್ಲಿ ಪಾಕಿಸ್ತಾನ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ- ಲಕ್ಷಾಂತರ ಜನರಿಗೆ ತೊಂದರೆ

    ಇಸ್ಲಾಮಾಬಾದ್: ರಾಷ್ಟ್ರೀಯ ಗ್ರಿಡ್‌ನಲ್ಲಿ `ಕಡಿಮೆ ಆವರ್ತನ’ದಿಂದಾಗಿ ಪಾಕಿಸ್ತಾನವು ಸೋಮವಾರ ರಾಷ್ಟ್ರೀಯ ವಿದ್ಯುತ್ ಕಡಿತ (Pakistan Power Crisis) ಅನುಭವಿಸಿದೆ. ಇದರಿಂದ ಲಕ್ಷಾಂತರ ಜನರು ವಿದ್ಯುತ್ ಇಲ್ಲದೇ ಪರದಾಡಿದ್ದಾರೆ ಎಂದು ಪಾಕಿಸ್ತಾನ ಇಂಧನ ಸಚಿವಾಲಯ ತಿಳಿಸಿದೆ.

    ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ (Islamabad) ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲಿ ವಿದ್ಯುತ್ ಕಡಿತವು ಭಾರೀ ಪರಿಣಾಮ ಬೀರಿದೆ. ವಿದ್ಯುತ್ ಅನ್ನು ಸಂಪೂರ್ಣವಾಗಿ ಪುನಃಸ್ಥಾಪಿಸಲು 12 ಗಂಟೆಗಳವರೆಗೆ ತೆಗೆದುಕೊಳ್ಳಬಹುದು ಎಂದು ಪಾಕಿಸ್ತಾನದ ವಿದ್ಯುತ್ ಸಚಿವರು ಹೇಳಿದ್ದಾರೆ. ಇದನ್ನೂ ಓದಿ: `ಖಲಿಸ್ತಾನ್ ಜಿಂದಾಬಾದ್’ ಘೋಷಣೆ ಬರೆದು ಇಸ್ಕಾನ್ ದೇವಾಲಯದ ಗೋಡೆ ವಿರೂಪ

    ಪಾಕಿಸ್ತಾನದ ವಿದ್ಯುಚ್ಛಕ್ತಿ ವಿತರಣಾ ವ್ಯವಸ್ಥೆಯು ಸಂಕೀರ್ಣ ಮತ್ತು ಸೂಕ್ಷ್ಮ ಜಾಲವಾಗಿದೆ. ಗ್ರಿಡ್‌ನ ಒಂದು ವಿಭಾಗದಲ್ಲಿನ ಸಮಸ್ಯೆಯು ದೇಶದಾದ್ಯಂತ ಕ್ಯಾಸ್ಕೇಡಿಂಗ್ ಸ್ಥಗಿತಗಳಿಗೆ ಕಾರಣವಾಗಬಹುದು. ದೇಶದ ದಕ್ಷಿಣ ಭಾಗದಲ್ಲಿ ಜಮ್‌ಶೊರೊ ಮತ್ತು ದಾದು ನಗರಗಳ ನಡುವೆ ಆವರ್ತನ ಬದಲಾವಣೆ ವರದಿಯಾಗಿದೆ. ಎಲ್ಲ ವ್ಯವಸ್ಥೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಇದು ದೊಡ್ಡ ಬಿಕ್ಕಟ್ಟಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾ ಶೂಟೌಟ್ ಪ್ರಕರಣ- ದಾಳಿ ನಡೆಸಿದ ವ್ಯಕ್ತಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    ಚಳಿಗಾಲದಲ್ಲಿ, ವಿದ್ಯುತ್ ಬೇಡಿಕೆಯು ರಾಷ್ಟ್ರೀಯ ಕಡಿಮೆಯಾಗುವುದರಿಂದ ಮತ್ತು ಆರ್ಥಿಕ ಕ್ರಮವಾಗಿ, ನಾವು ರಾತ್ರಿಯಲ್ಲಿ ನಮ್ಮ ವಿದ್ಯುತ್ ಉತ್ಪಾದನಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಮುಚ್ಚುತ್ತೇವೆ. ಸೋಮವಾರ ಬೆಳಗ್ಗೆ ಸಿಸ್ಟಮ್‌ಗಳನ್ನು ಆನ್ ಮಾಡಿದಾಗ, ದೇಶದ ದಕ್ಷಿಣದಲ್ಲಿ ದಾದು ಮತ್ತು ಜಮ್‌ಶೋರೊ ನಡುವೆ ಆವರ್ತನ ವ್ಯತ್ಯಾಸ ಮತ್ತು ವೋಲ್ಟೇಜ್ ಏರಿಳಿತ ಗಮನಿಸಲಾಗಿದೆ ಎಂದು ವಿದ್ಯುತ್ ಸಚಿವ ಖುರ್ರುಮ್ ದಸ್ತಗಿರ್ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

    ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಪ್ರಾಂತ್ಯದ ಹಲವೆಡೆ ಸ್ಫೋಟ ನಡೆಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

    ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ರಸ್ತೆಯ ಮೇಲೆ ಎಸೆಯಲಾಗಿದೆ. ಅದರಲ್ಲಿ ಒಂದು ಸ್ಫೋಟಗೊಂಡಿದೆ. ಮತ್ತೊಂದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದು ಕ್ವೆಟ್ಟಾ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂಧನ ಟ್ಯಾಂಕರ್ ಭೀಕರ ಸ್ಫೋಟ – 10 ಸಾವು, 40 ಮಂದಿಗೆ ಗಾಯ

    PAK

    ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಅಬ್ದುಲ್ ಖುಡೂಸ್ ಬಿಜೆಂಜೊ ಅವರು ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಪಾಕಿಸ್ತಾನ ವಿವಿಧ ಭಯೋತ್ಪಾದಕ ದಾಳಿಗಳನ್ನು ಎದುರಿಸಿದೆ.

    ಬಲೂಚಿಸ್ತಾನದ ಚಮನ್ ನಗರದ ಆಫ್ಘನ್ ಗಡಿ ಹಲವಾರು ಘರ್ಷಣೆಗಳಿಗೆ ಸಾಕ್ಷಿಯಾಗಿದೆ ಎಂದು ಪಾಕಿಸ್ತಾನಿ ಪತ್ರಿಕೆ ವರದಿ ಮಾಡಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ನೆರೆಯ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ತಾಲಿಬಾನ್‌ನೊಂದಿಗೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಮೈತ್ರಿ ಮಾಡಿಕೊಂಡಿದೆ. ನವೆಂಬರ್‌ನಲ್ಲಿ ಪಾಕಿಸ್ತಾನ ಸರ್ಕಾರದೊಂದಿಗೆ ಅಫ್ಘಾನ್ ತಾಲಿಬಾನ್ ಮಧ್ಯಸ್ಥಿಕೆಯ ಕದನ ವಿರಾಮದ ಅಂತ್ಯವನ್ನು ಘೋಷಿಸಿದಾಗಿನಿಂದ ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಯು ದಾಳಿಗಳನ್ನು ಹೆಚ್ಚಿಸಿದೆ. ಇದನ್ನೂ ಓದಿ: ರಣಭೀಕರ ಹಿಮ ಸುನಾಮಿಗೆ ತತ್ತರಿಸಿದ ಅಮೆರಿಕ – ಕುದಿಯುವ ನೀರು ಕ್ಷಣ ಮಾತ್ರದಲ್ಲಿ ಐಸ್ ಆಗ್ತಿದೆ

    Live Tv
    [brid partner=56869869 player=32851 video=960834 autoplay=true]

  • ಪಾಕ್ ರಾಜಧಾನಿಯಲ್ಲಿ ಆತ್ಮಹತ್ಯಾ ಸ್ಫೋಟ – ಪೊಲೀಸ್ ಸಾವು, ಹಲವರಿಗೆ ಗಾಯ

    ಪಾಕ್ ರಾಜಧಾನಿಯಲ್ಲಿ ಆತ್ಮಹತ್ಯಾ ಸ್ಫೋಟ – ಪೊಲೀಸ್ ಸಾವು, ಹಲವರಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ರಾಜಧಾನಿ ಇಸ್ಲಾಮಾಬಾದ್‌ನಲ್ಲಿ (Islamabad) ಶುಕ್ರವಾರ ಆತ್ಮಹತ್ಯಾ ಸ್ಫೋಟ (Suicide Bombing) ನಡೆಸಲಾಗಿದ್ದು, ಭೀಕರ ಘಟನೆಯಲ್ಲಿ ಒಬ್ಬ ಪೊಲೀಸ್ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

    ಇಸ್ಲಾಮಾಬಾದ್‌ನ ಐ-10/4 ಸೆಕ್ಟರ್ ಬಳಿ ಸ್ಫೋಟ ಉಂಟಾಗಿದೆ. ಘಟನೆಯ ಬಳಿಕ ಸ್ಥಳಕ್ಕೆ ವಿಶೇಷ ಭಯೋತ್ಪಾದನಾ ನಿಗ್ರಹ ಪಡೆ ಧಾವಿಸಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದೂರದರ್ಶನಗಳ ದೃಶ್ಯಾವಳಿಗಳಲ್ಲಿ ಛಿದ್ರಗೊಂಡಿರುವ ವಾಹನವೊಂದು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ತೋರಿಸಿದೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಘಟನೆಯಲ್ಲಿ ಸಾವನ್ನಪ್ಪಿರುವ ಅಧಿಕಾರಿಯನ್ನು ಹೆಡ್ ಕಾನ್ಸ್ಟೇಬಲ್ ಆದಿಲ್ ಹುಸೇನ್ ಎಂದು ಗುರುತಿಸಿದ್ದಾರೆ. ವರದಿಗಳ ಪ್ರಕಾರ ಇಂದು ಬೆಳಗ್ಗೆ 10:15ರ ವೇಳೆಗೆ ಒಬ್ಬ ಮಹಿಳೆ ಹಾಗೂ ಪುರುಷ ಪ್ರಯಾಣಿಸುತ್ತಿದ್ದ ವಾಹನವನ್ನು ಪೊಲೀಸರು ಗುರುತಿಸಿದ್ದಾರೆ. ಅನುಮಾನಾಸ್ಪದವಾಗಿ ಕಂಡ ವಾಹನವನ್ನು ಅಧಿಕಾರಿಗಳು ತಪಾಸಣೆ ನಡೆಸಲು ಮುಂದಾದಾಗ ದಂಪತಿ ವಾಹನದಿಂದ ಹೊರಬಂದಿದ್ದಾರೆ. ಬಳಿಕ ಪುರುಷ ಯಾವುದೋ ನೆಪ ಹೇಳಿ ಮತ್ತೆ ಕಾರಿನೊಳಗೆ ಹೋಗಿದ್ದು, ಈ ವೇಳೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಕೊರೊನಾ ಆತಂಕ, ಖಾಸಗಿ ಆಸ್ಪತ್ರೆಗಳು ಆ್ಯಕ್ಟಿವ್ – ಕಳೆದ ಬಾರಿಯ ಬಿಲ್ ಕ್ಲಿಯರ್ ಮಾಡಲು ಸರ್ಕಾರಕ್ಕೆ ಮನವಿ

    ಸ್ಫೋಟ ಉಂಟಾದಾಗ ಪಕ್ಕದಲ್ಲಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ. ಸುತ್ತಮುತ್ತಲಿದ್ದ ನಾಲ್ವರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ಸೊಹೈಲ್ ಜಾಫರ್ ಚಟ್ತಾ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದಲ್ಲಿ ಕಂದಕಕ್ಕೆ ಬಿದ್ದ ಮಿನಿಬಸ್‌ – 11 ಮಕ್ಕಳು ಸೇರಿ 21 ಮಂದಿ ಸಾವು

    ಪಾಕಿಸ್ತಾನದಲ್ಲಿ ಕಂದಕಕ್ಕೆ ಬಿದ್ದ ಮಿನಿಬಸ್‌ – 11 ಮಕ್ಕಳು ಸೇರಿ 21 ಮಂದಿ ಸಾವು

    ಇಸ್ಲಾಮಾಬಾದ್‌: ದಕ್ಷಿಣ ಪಾಕಿಸ್ತಾನದಲ್ಲಿ (Pakistan) ಆಳವಾದ ಕಂದಕಕ್ಕೆ ಮಿನಿಬಸ್ ಬಿದ್ದು, 11 ಮಕ್ಕಳು ಸೇರಿದಂತೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

    ಪ್ರವಾಹದಿಂದ ಕೊಚ್ಚಿಹೋದ ರಸ್ತೆಯಲ್ಲಿ ನೀರು ತುಂಬಿದ ಹಳ್ಳಕ್ಕೆ ಬಸ್‌ ಬಿದ್ದಿದೆ. ಅಪಘಾತದಲ್ಲಿ ಮೃತಪಟ್ಟ ಮಕ್ಕಳು 2ರಿಂದ 8 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಖಾದಿಮ್ ಹುಸೇನ್ ತಿಳಿಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಪತನ – ಮೆಕ್ಸಿಕನ್ ರಾಜ್ಯದ ಭದ್ರತಾ ಮುಖ್ಯಸ್ಥ ಸೇರಿ ಐವರ ಸಾವು

    ಡ್ರೈವರ್‌ಗೆ ರಸ್ತೆಯ ಡೈವರ್ಶನ್ ಚಿಹ್ನೆಯನ್ನು ನೋಡಲಾಗಿಲ್ಲ. ಆದ್ದರಿಂದ ವ್ಯಾನ್ ಸೆಹ್ವಾನ್ ಷರೀಫ್ ಪಟ್ಟಣದ ಬಳಿ 25 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಅಪಘಾತದಲ್ಲಿ 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹುಸೇನ್‌ ಮಾಹಿತಿ ನೀಡಿದ್ದಾರೆ.

    ಪಾಕಿಸ್ತಾನವು ಈ ವರ್ಷ ದಾಖಲೆಯ ಮಾನ್ಸೂನ್ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಮೂರನೇ ಒಂದು ಭಾಗ ನೀರಿನಲ್ಲಿ ಮುಳುಗಿತ್ತು. 8 ಮಿಲಿಯನ್ ಜನರನ್ನು ಸ್ಥಳಾಂತರಿಸಲಾಗಿತ್ತು. ಮೂಲಸೌಕರ್ಯ ಕೊರತೆ ದೇಶವನ್ನು ಮತ್ತಷ್ಟು ಕಂಗೆಡಿಸಿದೆ. ಇದನ್ನೂ ಓದಿ: ಗಾಜಾದ ನಿರಾಶ್ರಿತರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 7 ಮಕ್ಕಳು ಸೇರಿ 21 ಸಾವು

    ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ, 2018 ರಲ್ಲಿ ಪಾಕಿಸ್ತಾನದ ರಸ್ತೆಗಳಲ್ಲಿ 27,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌

    ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌

    ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ.

    ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್‌ ಖಾನ್ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದೆ. ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.

    ಆ.20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ, ದೇಶದ್ರೋಹದ ಆರೋಪದ ಮೇಲೆ ತನ್ನ ಸಹಾಯಕ ಶಹಬಾಜ್ ಗಿಲ್‌ರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ದಾಳಿ -ಚೀನಾ ಪ್ರಜೆ ಬಲಿ

    Live Tv
    [brid partner=56869869 player=32851 video=960834 autoplay=true]

  • ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

    ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

    ಇಸ್ಲಾಮಾಬಾದ್: ಪಾಕಿಸ್ತಾನದ(Pakistan) ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್(PTI) ಮುಖ್ಯಸ್ಥ ಇಮ್ರಾನ್ ಖಾನ್(Imran Khan) ಅವರು ಶನಿವಾರ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ(Airplane) ತಾಂತ್ರಿಕ ದೋಷ ಉಂಟಾಗಿ ತುರ್ತು ಭೂಸ್ಪರ್ಶ(Emergency Landing) ಮಾಡಿರುವುದಾಗಿ ವರದಿಯಾಗಿದೆ.

    ಇಮ್ರಾನ್ ಖಾನ್ ಇದ್ದ ವಿಮಾನ ಟೇಕ್ ಆಫ್ ಆದ ತಕ್ಷಣವೇ ತಾಂತ್ರಿಕ ದೋಷವನ್ನು ಅನುಭವಿಸಿ ಇಸ್ಲಾಮಾಬಾದ್‌ಗೆ ವಾಪಸ್ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಪಿಟಿಐ ನಾಯಕ ಅಜರ್ ಮಶ್ವಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ

    ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪಂಜಾಬ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ವಿಮಾನದಲ್ಲಿ ಹೊರಟಿದ್ದರು. ಆದರೆ ವಿಮಾನ ಹಾರಾಟ ಪ್ರಾರಂಭಿಸುತ್ತಿದ್ದಂತೆಯೇ ಅದರಲ್ಲಿ ಕೆಲವು ತಾಂತ್ರಿಕ ದೋಷ ಕಂಡುಬಂದಿದೆ ಎನ್ನಲಾಗಿದೆ. ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದರಿಂದ ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ 7.6 ತೀವ್ರತೆಯ ಭೂಕಂಪ- ಸುನಾಮಿ ಎಚ್ಚರಿಕೆ

    ವಿಮಾನ ತುರ್ತು ಭೂಸ್ಪರ್ಶ ಮಾಡಿದ ಬಳಿಕ ಇಮ್ರಾನ್ ಖಾನ್ ಅವರು ರಸ್ತೆಯ ಮೂಲಕ ಪಂಜಾಬ್‌ಗೆ ತೆರಳಿದರು ಎಂದು ಮಶ್ವಾನಿ ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಇಸ್ಲಾಮಾಬಾದ್‌ನಲ್ಲಿ ಇಮ್ರಾನ್ ಖಾನ್ ಅವರ ಭದ್ರತಾ ಬೆಂಗಾವಲು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದಾಗಿ ವರದಿಯಾಗಿತ್ತು. ಸದ್ಯ ಘಟನೆಯಲ್ಲಿ ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಹಮ್ಜಾ ಶಹಬಾಜ್ ಅವರ ಆಯ್ಕೆಯನ್ನು ಖಂಡಿಸಿ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಹ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪರ್ವೇಜ್ ಇಲಾಹಿ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ನಾಯಕ ಹಮ್ಜಾ ಶಹಬಾಜ್ ಅವರು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್-ಕ್ವಾಡ್ (PML-Q) ಮತಗಳನ್ನು ಪಂಜಾಬ್ ವಿಧಾನಸಭೆ ಉಪ ಸಭಾಪತಿ ತಿರಸ್ಕರಿಸಿದ ಬಳಿಕ ಅವರು ಜಯ ಸಾಧಿಸಿದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ

    ಪಿಟಿಐ ಮತ್ತು ಪಿಎಂಎಲ್-ಕ್ಯೂ ಜಂಟಿ ಅಭ್ಯರ್ಥಿ ಪರ್ವೈಜ್ ಇಲಾಹಿ 186 ಮತಗಳನ್ನು ಪಡೆದರೆ, ಹಮ್ಜಾ ಶಹಬಾಜ್ 179 ಮತಗಳನ್ನು ಪಡೆದಿದ್ದರು. ಆದರೆ ಪಿಎಂಎಲ್-ಕ್ಯೂನ 10 ಮತಗಳನ್ನು ಡೆಪ್ಯುಟಿ ಸ್ಪೀಕರ್ ದೋಸ್ತ್ ಮುಹಮ್ಮದ್ ಮಜಾರಿ ಅವರು ತಿರಸ್ಕರಿಸಿದ್ದರಿಂದಾಗಿ ಪರ್ವೈಜ್ ಇಲಾಹಿ ಅವರು 176 ಮತಗಳನ್ನು ತೆಗೆದುಕೊಂಡರು. ಇದರಿಂದಾಗಿ ಇಲಾಹಿಗೆ ಸೋಲುಂಟಾಯಿತು.

    ಸಾಂರ್ಭಿಕ ಚಿತ್ರ

    ಸಿಎಂ ಆಗಿ ಮರು ಆಯ್ಕೆಯಾದ ಬಳಿಕ ಮಾತನಾಡಿದ ಹಮ್ಜಾ ಶಹಬಾಜ್, `ಕೆಲವರು ಆಯ್ಕೆ ವಿರುದ್ಧ ಈಗ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಆದರೆ ಸಂಸತ್ತಿಗೆ ನೈತಿಕತೆಯ ಅಧಿಕಾರವಿದೆ. ಪ್ರಜಾಪ್ರಭುತ್ವವು ನೈತಿಕತೆಯ ಮೇಲೆ ಆಧಾರಿತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ

    ಸಿಎಂ ಆಯ್ಕೆ ಕುರಿತು ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪಂಜಾಬ್ ಮುಖ್ಯಮಂತ್ರಿ ಚುನಾವಣೆಯ ಬೆಳವಣಿಗೆಯನ್ನು ಕುದುರೆ ವ್ಯಾಪಾರಕ್ಕೆ ಹೋಲಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಾಯಕ ಆಸಿಫ್ ಜರ್ದಾರಿ ವಿರುದ್ಧ ಕಿಡಿಕಾರಿದ್ದಾರೆ. ದೇಶದ ದೊಡ್ಡ ಡಕಾಯಿತ ಆಸಿಫ್ ಜರ್ದಾರಿ 30 ವರ್ಷಗಳಿಂದ ದೇಶವನ್ನು ದರೋಡೆ ಮಾಡುತ್ತಿದ್ದಾನೆ ದೂರಿದ್ದಾರೆ.

    ಬೇರೆ ಯಾವುದೇ ಸಮಾಜದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗಾಗಿ ಇಂದು ರಾತ್ರಿ ಪಂಜಾಬ್ ಅಸೆಂಬ್ಲಿ ಬೆಳವಣಿಗೆಗಳ ವಿರುದ್ಧ ಶಾಂತಿಯುತ ಪ್ರತಿಭಟನೆ ದಾಖಲಿಸಲು ನಾನು ರಾಷ್ಟ್ರಕ್ಕೆ ಮನವಿ ಮಾಡುತ್ತೇನೆ ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ

    ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಣ ಮಾಡಿ ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಿ ಬಳಿಕ ಆಕೆಯನ್ನು ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಿಸಲಾಗಿದೆ ಎಂದು ವರದಿಯಾಗಿದೆ.

    ಸಂತ್ರಸ್ತ ಹಿಂದೂ ಯುವತಿ ಕರೀನಾಳನ್ನು ಮತಾಂತರಗೊಳಿಸಿ ಖಲಿಲ್ ರೆಹಮಾನ್ ಜೊನೊ ಎಂಬ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲಾಗಿದೆ. ಖಲಿಲ್ ಪಾಕಿಸ್ತಾನದ ಮೀರ್ ಮೊಹಮ್ಮದ್ ಜೊನೊ ಹಳ್ಳಿಯ ನಿವಾಸಿ. ಈತ ಖಾಜಿ ಅಹ್ಮದ್ ನಗರದ ಉನ್ನರ್ ಮುಹಲ್ಲಾದಿಂದ ಯುವತಿಯನ್ನು ಅಪಹರಿಸಿ ಮತಾಂತರಗೊಳಿಸಿ, ಬಳಿಕ ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

    ಯುವತಿ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಸೆಕ್ಷನ್ 365-ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ ಖಲೀಲ್ ಹಾಗೂ ಅವನ ತಂದೆ ಅಸ್ಗರ್ ಜೋನೋ ಇಬ್ಬರನ್ನೂ ಬಂಧಿಸಲಾಗಿದೆ. ಈ ಘಟನೆಗೆ ದೇಶದ ವಿವಿಧ ಮಾನವ ಹಕ್ಕು ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಹಿಂದೂಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಈ ಕುರಿತು ಮಾತನಾಡಿರುವ ಹಿಂದೂ ಪಂಚಾಯತ್ ನಾಯಕ ಮನೋಮಾಲ್, ಹಿಂದೂ ಯುವತಿಗೆ ಪ್ರಾಣ ಬೆದರಿಕೆಯೊಡ್ಡಿ ಬಲವಂತದಿಂದ ಮತಾಂತರ ಮಾಡಲಾಗಿದೆ. ಪಾಕಿಸ್ತಾನದಲ್ಲಿ ಹಿಂದೂ ಸಮುದಾಯ ಆತಂಕದಲ್ಲಿದ್ದು, ಇತ್ತೀಚಿನ ದಿನಗಳಲ್ಲಿ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಈ ವರ್ಷದ ಆರಂಭದಲ್ಲಿಯೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ತನ್ನ ಮನೆಯಲ್ಲೇ ಹಿಂದೂ ಯುವತಿ ಪೂಜಾ ಕುಮಾರಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆಮಾಡಿದ್ದನು ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶೆಹಬಾಜ್ ಷರೀಫ್, ಇಮ್ರಾನ್ ಖಾನ್‍ಗಿಂತ ಪತ್ನಿಯರೇ ಹೆಚ್ಚು ಶ್ರೀಮಂತರು

    ಶೆಹಬಾಜ್ ಷರೀಫ್, ಇಮ್ರಾನ್ ಖಾನ್‍ಗಿಂತ ಪತ್ನಿಯರೇ ಹೆಚ್ಚು ಶ್ರೀಮಂತರು

    ಇಸ್ಲಾಮಾಬಾದ್: ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಇಮ್ರಾನ್ ಖಾನ್ ಅವರ ಪತ್ನಿಯರು ತಮ್ಮ ಪತಿಗಿಂತ ಶ್ರೀಮಂತರಾಗಿದ್ದಾರೆ.

    ಪಾಕಿಸ್ತಾನದ ಚುನಾವಣಾ ಆಯೋಗಕ್ಕೆ 2020ರ ಜೂನ್ 30ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷಕ್ಕೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಶೆಹಬಾಜ್ ಷರೀಫ್ ಮತ್ತು ಇಮ್ರಾನ್ ಖಾನ್ ಅವರ ಪತ್ನಿಯರು ತಮ್ಮ ಪತಿಗಿಂತ ಶ್ರೀಮಂತರು ಎಂಬುದು ತಿಳಿದುಬಂದಿದೆ.

    ಪ್ರಕಟಣೆ ವಿವರದಲ್ಲಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಿಕೆಆರ್ 2,00,000 (75,182 ರೂಪಾಯಿ) ಮೌಲ್ಯದ ನಾಲ್ಕು ಮೇಕೆಗಳನ್ನು ಹೊಂದಿದ್ದಾರೆ. ಅವರು ಆರು ಚಿರ ಮತ್ತು ಪಿತ್ರಾರ್ಜಿತ ಆಸ್ತಿಯನ್ನು ಹೊಂದಿದ್ದಾರೆ. ಇಮ್ರಾನ್ ಖಾನ್ ಅವರು ದೇಶದ ಹೊರಗೆ ಯಾವುದೇ ರೀತಿಯ ವಾಹನ ಅಥವಾ ಆಸ್ತಿಯನ್ನು ಹೊಂದಿಲ್ಲ. ಅವರು ಯಾವುದೇ ಹೂಡಿಕೆಯನ್ನು ಮಾಡಿಲ್ಲ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್‍ಗೆ ಹೋಗಿದ್ದ ಇಬ್ಬರು US ಪ್ರಜೆಗಳು ನಾಪತ್ತೆ 

    ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಅಧ್ಯಕ್ಷನಾಗಿರುವ ಇಮ್ರಾನ್ ಅವರು ಪಾಕಿಸ್ತಾನಿ ವಿದೇಶಿ ಕರೆನ್ಸಿ ಖಾತೆಗಳಲ್ಲಿ 3,29,196 ಡಾಲರ್ (2.57 ಕೋಟಿ ರೂ.) ಮತ್ತು 518-ಪೌಂಡ್ ಸ್ಟರ್ಲಿಂಗ್ (49,116 ರೂ.) ಹೊರತುಪಡಿಸಿ, ಬ್ಯಾಂಕ್ ಖಾತೆಗಳಲ್ಲಿ 2.25 ಕೋಟಿ ರೂ.ಗಿಂತಲೂ ಹೆಚ್ಚು ಹಣ ಹೊಂದಿದ್ದಾರೆ. ಆದರೆ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ನಿವ್ವಳ ಮೌಲ್ಯವು ಪಿಕೆಆರ್ 142.11 ಮಿಲಿಯನ್ (1,108 ಕೋಟಿ ರೂ.) ಆಗಿದೆ. ಆಕೆ ನಾಲ್ಕು ಆಸ್ತಿಗಳನ್ನು ಹೊಂದಿದ್ದಾರೆ.

    ಪ್ರಧಾನಿ ಶೆಹಬಾಜ್ ಷರೀಫ್ ಅವರ ಮೊದಲ ಪತ್ನಿ ನುಸ್ರತ್ ಶೆಹಬಾಜ್ ಕೂಡ ತಮ್ಮ ಪತಿಗಿಂತ ಶ್ರೀಮಂತರಾಗಿದ್ದಾರೆ. ಅವರು ಪಿಕೆಆರ್ 230.29 ಮಿಲಿಯನ್ (1,795 ಕೋಟಿ ರೂ.) ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ. ಲಾಹೋರ್ ಮತ್ತು ಹಜಾರಾ ವಿಭಾಗಗಳಲ್ಲಿ ಒಂಬತ್ತು ಕೃಷಿ ಆಸ್ತಿ ಮತ್ತು ತಲಾ ಒಂದು ಮನೆ ಹೊಂದಿದ್ದಾರೆ. ಅವರು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದ್ದಾರೆ. ಆಕೆಯ ಪತಿ ಪಿಕೆಆರ್ 104.21 ಮಿಲಿಯನ್ (812 ಕೋಟಿ ರೂ.) ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ.

    Live Tv