ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು (Israel Airstrikes) ಮುಂದುವರಿಸಿದೆ. ಗುರುವಾರ ಗಾಜಾದಲ್ಲಿ (Gaza Strip) ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಲವು ಮನೆಗಳು ಹಾಗೂ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಹಮಾಸ್ ನಾಯಕರೂ ಹತ್ಯೆಗೀಡಾಗಿದ್ದಾರೆ. ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮೂರು ದಿನಗಳ ಅಂತರದಲ್ಲಿ ಇಸ್ರೇಲ್ ನಡೆಸಿದ 2ನೇ ವಾಯುದಾಳಿ ಇದಾಗಿದೆ. ಇದನ್ನೂ ಓದಿ: ಇಸ್ರೇಲ್ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು
ಕಳೆದ ಎರಡು ದಿನಗಳ ಹಿಂದೆಯಷ್ಟೇ ಭೀಕರ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಗಾಜಾದಲ್ಲಿ 400ಕ್ಕೂ ಅಧಿಕ ಮಂದಿಯನ್ನ ಹತ್ಯೆ ಮಾಡಿತ್ತು. ಗಾಜಾ ಪಟ್ಟಿಯಲ್ಲಿದ್ದ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್ ದಾಳಿಗೆ ಬಲಿಯಾಗಿದ್ದ. ಇದನ್ನೂ ಓದಿ: ಹಮಾಸ್ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್, ಶೀಘ್ರವೇ ಗಡೀಪಾರು
ನವದೆಹಲಿ: ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ. ಇಂದು ಮುಂಜಾನೆ ಇಸ್ರೇಲ್ ಸೇನೆಯು (Israeli military) ಗಾಜಾದ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ (Israel AirStrikes) ಕನಿಷ್ಠ 330 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಳ್ಳಂ ಬೆಳಗ್ಗೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್, ಉತ್ತರ ಗಾಜಾ, ಗಾಜಾ ನಗರ ಮತ್ತು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯ ದೇರ್ ಅಲ್-ಬಲಾಹ್, ಖಾನ್ ಯೂನಿಸ್ ಮತ್ತು ರಫಾ ಸೇರಿದಂತೆ ಅನೇಕ ಸ್ಥಳಗಳನ್ನು ಧ್ವಂಸಗೊಳಿಸಿದೆ. ಭೀಕರ ವಾಯುದಾಳಿಯಲ್ಲಿ ಮೃತಪಟ್ಟವರ ಪೈಕಿ ಪ್ಯಾಲೆಸ್ತೀನಿನ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೆಚ್ಚಿನವರು ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಹೇಳಿದೆ.
In accordance with the political echelon, the IDF and ISA are currently conducting extensive strikes on terror targets belonging to the Hamas terrorist organization in the Gaza Strip. pic.twitter.com/mYZ1WBPVPG
ಮೊದಲೇ ಎಚ್ಚರಿಕೆ ನೀಡಿದ್ದ ಇಸ್ರೇಲ್”
ದಾಳಿ ನಡೆಸುವುದಕ್ಕೂ ಮುನ್ನವೇ ಇಸ್ರೇಲ್ ಎಚ್ಚರಿಸುವ ಕೆಲಸ ಮಾಡಿತ್ತು. ತನ್ನ ಎಕ್ಸ್ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಇಸ್ರೇಲ್ ಸೇನೆ, ಜಾಪಟ್ಟಿಯಲ್ಲಿರುವ ಹಮಾಸ್ ಭಯೋತ್ಪಾದಕ ಸಂಘಟನೆ ಸೇರಿದ ನೆಲೆಗಳ ಮೇಲೆ ಇಸ್ರೇಲ್ ಸೇನೆ ವ್ಯಾಪಕ ದಾಳಿ ನಡೆಸುತ್ತಿದೆ. ಹೀಗಾಗಿ ಗಾಜಾದ ನೆರೆಯ ಶಾಲೆಗಳನ್ನು ಮುಚ್ಚುವಂತೆ ಆದೇಶಿಸುತ್ತಿದೆ ಎಂದು ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ
ಟ್ರಂಪ್ ಎಚ್ಚರಿಕೆ:
ಇಸ್ರೇಲ್ ದಾಳಿ ವಿಚಾರ ತಿಳಿಯುತ್ತಿದ್ದಂತೆ ಅಮೆರಿಕದ ಶ್ವೇತಭವನ ಪ್ರತಿಕ್ರಿಯಿಸಿದೆ. ಜೊತೆಗೆ ಹಮಾಸ್ ಮತ್ತು ಇರಾನ್ ಬೆಂಬಲಿತ ಹೌತಿ ಬಂಡುಕೋರರು ಸೇರಿದಂತೆ ಇತರ ಭಯೋತ್ಪಾದಕ ಗುಂಪುಗಳು ಬೆಲೆ ತೆರಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.
ಟೆಹ್ರಾನ್: ಕಳೆದ ಅಕ್ಟೋಬರ್ 1ರಂದು 180 ಕ್ಷಿಪಣಿಗಳನ್ನು ಹಾರಿಸಿ ದಾಳಿ ನಡೆಸಿದ್ದ ಇರಾನ್ ವಿರುದ್ಧ ಇಸ್ರೇಲ್ ಕೊನೆಗೂ ಪ್ರತೀಕಾರದ ದಾಳಿ ನಡೆಸಿದೆ. ಶನಿವಾರ (ಅ.26) ಬೆಳಗ್ಗೆ ಸುಮಾರು 200 ಕ್ಷಿಪಣಿಗಳ ಮಳೆ ಸುರಿಸಿ ಇರಾನ್ ಮೇಲೆ ದಾಳಿ (Israel Airstrikes) ನಡೆಸಿದೆ. ಈ ಬೆನ್ನಲ್ಲೇ ಇರಾನ್‌ನ (Iran) ಸುಪ್ರೀಂ ಲೀಡರ್ ಮತ್ತೆ ಯುದ್ಧದ ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್ ದಾಳಿ ಕುರಿತು ಭಾನುವಾರ ಮಾತನಾಡಿರುವ ದೇಶದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಮತ್ತೆ ಇಸ್ರೇಲ್ ಮೇಲೆ ಯುದ್ಧ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಶಕ್ತಿಯನ್ನು ಇಸ್ರೇಲ್‌ಗೆ ಹೇಗೆ ಪ್ರದರ್ಶಿಸಬೇಕು ಎಂಬುದನ್ನು ಇರಾನ್ ಅಧಿಕಾರಿಗಳು ನಿರ್ಧರಿಸಬೇಕು. ಇಸ್ರೇಲ್ (Israel) ಮಾಡಿದ ದುಷ್ಟತನವನ್ನು ಕ್ಷಮಿಸಲೇಬಾರದು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್‌ನ ಮಿಲಿಟರಿ ಸ್ಥಳಗಳ ಮೇಲೆ ಇಸ್ರೇಲ್ ಏರ್‌ಸ್ಟ್ರೈಕ್
ಏನಾಗಿತ್ತು?
ಇಸ್ರೇಲ್ ಶನಿವಾರ ಬೆಳಗ್ಗೆ ಇರಾನ್‌ನ 20 ಆಯಕಟ್ಟಿನ ಪ್ರದೇಶಗಳ ಮೇಳೆ ನೂರು ಯುದ್ಧ ವಿಮಾನಗಳ ಮೂಲಕ 200 ಕ್ಷಿಪಣಿಗಳನ್ನ ಹಾರಿಸಿ, ಭೀಕರ ದಾಳಿ ನಡೆಸಿತ್ತು. ಅಮೆರಿಕ ನಿರ್ಮಿತ ಎಫ್-35, ಎಫ್-151, ಎಫ್-26ಐ ಯುದ್ಧ ವಿಮಾನ ಬಳಸಿ, ಇರಾನ್ ಸಮೀಪವೇ ಬಂದು ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇರಾನ್‌ನ ನಾಲ್ವರು ಯೋಧರು ಬಲಿಯಾದರು. ಅಲ್ಲದೇ ಇರಾನ್‌ನ ಸೇನಾ ನೆಲೆಗಳು, ಕ್ಷಿಪಣಿ ಉತ್ಪಾದನಾ ಘಟಕಗಳು ಧ್ವಂಸವಾದವು. ಈ ಬೆನ್ನಲ್ಲೇ ಇಸ್ರೇಲ್ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಗುಡುಗಿತ್ತು.
ಬಳಿಕ ಇರಾನ್ ವಿರುದ್ಧ ಇಸ್ರೇಲ್ ಸೇನಾ ಕಾರ್ಯಚರಣೆ ಬಗ್ಗೆ ಇಸ್ರೇಲ್ ಸೇನಾ ಮುಖ್ಯಸ್ಥ ಹರ್ಜಿ ಹಲೇವಿ ಮಾಹಿತಿ ನೀಡಿದ್ದರು. ಇಸ್ರೇಲ್ ಮೂರು ಹಂತದ ದಾಳಿ ನಡೆಸಿದೆ. ಈ ದಾಳಿಯ ಬಳಿಕ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಅಂತ್ಯವಾಗಿದೆ. ನಾವು ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದ್ದೇವೆ. ಇಸ್ರೇಲ್ ಮೇಲಿನ ತಕ್ಷಣದ ಬೆದರಿಕೆಗಳನ್ನು ತಡೆಯುವುದು ನಮ್ಮ ಉದ್ದೇಶವಾಗಿತ್ತು. ಇದನ್ನೂ ಓದಿ: ಎಡಪಂಥೀಯರ ವಿಕಿಪೀಡಿಯಗೆ ದೇಣಿಗೆ ನೀಡಬೇಡಿ: ಮಸ್ಕ್ ಕರೆ
ನವದೆಹಲಿ: ಇರಾನ್ (Iran) ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ (Israel) ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ (Air Strike) ಮೂಲಕ ಇರಾನ್‌ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್ ನಡೆಸಿದೆ. ಇಸ್ರೇಲ್ ದಾಳಿಯಿಂದ ಇರಾನ್‌ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ.
ಅ.1 ರಂದು ಇರಾನ್ ಕ್ಷಿಪಣಿ ದಾಳಿ ನಡೆಸಿದಾಗ ಪ್ರತಿಕ್ರಿಯೆ ನೀಡುವುದಾಗಿ ಇಸ್ರೇಲ್ ಹೇಳಿತ್ತು. ಅದಕ್ಕೆ ಪೂರಕವಾಗಿ ಈ ಕಾರ್ಯಚರಣೆ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್‌ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ. ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ ಶಮನಕ್ಕೆ ಮೊದಲ ಹೆಜ್ಜೆ; ಸೇನಾಪಡೆಗಳ ವಾಪಸ್ ಪ್ರಕ್ರಿಯೆ ಶುರು
ಟೆಹ್ರಾನ್‌ನಲ್ಲಿ ಮತ್ತು ಕರಾಜ್ ನಗರ ಸೇರಿದಂತೆ ಹತ್ತಿರದ ಮಿಲಿಟರಿ ನೆಲೆಗಳಲ್ಲಿ ಹಲವಾರು ಸ್ಫೋಟಗಳು ಸಂಭವಿಸಿವೆ. ರಾತ್ರಿ 2 ಗಂಟೆಯ ನಂತರ ದಾಳಿಗಳು ಪ್ರಾರಂಭವಾದವು. ಮೂರು ಅಲೆಗಳ ದಾಳಿಯನ್ನು ನಡೆಸಲಾಯಿತು ಎಂದಾದರೂ ಸ್ಥಳೀಯ ನಿವಾಸಿಗಳ ಪ್ರಕಾರ ಮೊದಲ ಸುತ್ತಿನಲ್ಲಿ ಕನಿಷ್ಠ ಏಳು ಸ್ಫೋಟಗಳು ಕೇಳಿಬಂದವು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಇರಾನ್‌ನ ಪರಮಾಣು ಕೇಂದ್ರಗಳು ಮತ್ತು ತೈಲ ಘಟಕಗಳನ್ನು ಇಸ್ರೇಲ್ ಗುರಿಯಾಗಿಸಬಹುದು ಎಂದು ಹೇಳಲಾಗಿತ್ತು. ಆದರೆ ಈ ಪ್ರದೇಶಗಳನ್ನು ಇಸ್ರೇಲ್ ಗುರಿಯಾಗಿಸಿಲ್ಲ. ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆಯು ಇಸ್ರೇಲ್‌ನ ಆಕ್ರಮಣವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದೆ. ಜೊತೆಗೆ ಕೆಲವು ಸ್ಥಳಗಳ ಮೇಲಿನ ದಾಳಿಯನ್ನು ಪ್ರತಿಬಂಧಿಸಿದೆ. ಇಸ್ರೇಲ್ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಅದರ ಅನುಪಾತದ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಇರಾನ್ ಹೇಳಿದೆ. ಇದನ್ನೂ ಓದಿ: ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ – ಭಾರತೀಯ ಹೈಕಮೀಷನರ್ ಸಂಜಯ್ ವರ್ಮಾ
ಮುಂದಿನ ಸೂಚನೆ ಬರುವವರೆಗೂ ಇರಾನ್ ಎಲ್ಲಾ ಮಾರ್ಗಗಳಲ್ಲಿನ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇಸ್ರೇಲ್ ತನ್ನ ವಾಯುಪ್ರದೇಶವನ್ನು ನಾಗರಿಕ ವಿಮಾನಯಾನಕ್ಕೆ ಸಂಪೂರ್ಣವಾಗಿ ಮುಚ್ಚುವುದಾಗಿ ಘೋಷಿಸಿದೆ. ಪ್ರಾದೇಶಿಕ ಉದ್ವಿಗ್ನತೆಯಿಂದಾಗಿ ಮುಂದಿನ ಸೂಚನೆ ಬರುವವರೆಗೆ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಇರಾಕ್‌ನ ಸಾರಿಗೆ ಸಚಿವಾಲಯ ತಿಳಿಸಿದೆ.
ಇರಾನ್ ವಿರುದ್ಧ ಇಸ್ರೇಲ್ ಸೇನಾ ಕಾರ್ಯಚರಣೆ ಬಗ್ಗೆ ಇಸ್ರೇಲ್ ಸೇನಾ ಮುಖ್ಯಸ್ಥ ಹರ್ಜಿ ಹಲೇವಿ ಮಾಹಿತಿ ನೀಡಿದ್ದಾರೆ. ಇಸ್ರೇಲ್ ಮೂರು ಹಂತದ ದಾಳಿ ನಡೆಸಿದೆ. ಈ ದಾಳಿಯ ಬಳಿಕ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಅಂತ್ಯವಾಗಿದೆ. ನಾವು ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದ್ದೇವೆ. ಇಸ್ರೇಲ್ ಮೇಲಿನ ತಕ್ಷಣದ ಬೆದರಿಕೆಗಳನ್ನು ತಡೆಯುವುದು ನಮ್ಮ ಉದ್ದೇಶವಾಗಿತ್ತು. ಇದನ್ನೂ ಓದಿ: ಕೆನಡಾ | ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ನಾಲ್ವರು ಭಾರತೀಯರು ಸಾವು
ಇರಾನ್ ಕ್ಷಿಪಣಿ ದಾಳಿಗೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಇರಾನ್‌ನಲ್ಲಿನ ಆಡಳಿತವು ಹೊಸ ದಾಳಿ ಪ್ರಾರಂಭಿಸುವ ತಪ್ಪನ್ನು ಮಾಡಿದರೆ, ನಮ್ಮ ಸಂದೇಶವು ಸ್ಪಷ್ಟವಾಗಿದೆ. ಇಸ್ರೇಲ್ ಅನ್ನು ಬೆದರಿಸಲು ಪ್ರಯತ್ನಿಸುವವರೆಲ್ಲರೂ ಭಾರೀ ದಂಡ ಪಾವತಿಸಬೇಕಾಗುತ್ತದೆ. ಇಸ್ರೇಲ್ ತನ್ನ ಜನರನ್ನು ರಕ್ಷಿಸಲು ನಾವು ಅಪರಾಧ ಮತ್ತು ರಕ್ಷಣೆಗೆ ಸಿದ್ಧರಾಗಿದ್ದೇವೆ. ದಾಳಿ ಅಂತ್ಯಗೊಳಿಸುವುದರ ಜೊತೆಗೆ ಪ್ರತಿ ದಾಳಿ ಮಾಡದಂತೆ ಎಚ್ಚರಿಕೆ ನೀಡಿದ ಇಸ್ರೇಲ್ ಸೇನಾ ಮುಖ್ಯಸ್ಥ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.